Author: News Desk Benkiyabale

ತುಮಕೂರು ಮಾಜಿ ಮುಖ್ಯಮಂತ್ರಿ ಎಚ್‍ಡಿ ಕುಮಾರ ಸ್ವಾಮಿಯವರ ಹುಟ್ಟು ಹಬ್ಬದ ಕಾರ್ಯಕ್ರಮದ ನಂತರ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಗೋವಿಂದ ರಾಜು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿಯ ಹುಟ್ಟುಹಬ್ಬದ ಕಾರ್ಯಕ್ರಮ ಜಿಲ್ಲಾ ಜಾತ್ಯತೀತ ಜನತಾ ದಳದ ಕಛೇರಿಯಲ್ಲಿ ಔಪಚಾರಿಕವಾಗಿ ನೇರವೇರಿತು. ಆ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ್ಯ ಸಿ.ಆರ್ ಆಂಜಿನಪ್ಪ ಸೇರಿಂದತೆ ಉಪಮೇಯರ್ ನರಸಿಂಹಮೂರ್ತಿ ಮತ್ತು ನರಸೇಗೌಡ ಸೇರಿದಂತೆ ಹಲವು ಮುಖಂಡರು ಭಾಗಿ ಆಗಿದ್ದರು. ಆದರೆ ಜಿಲ್ಲಾ ಜೆಡಿಎಸ್ ಕಛೇರಿಯಲ್ಲಿ ನಡೆದ ಕಾರ್ಯಕ್ರಮಕ್ಕೂ ನಮಗೂ ಯಾವುದೆ ರೀತಿಯ ಸಂಭದವಿಲ್ಲದಂತೆ ವರ್ತಿಸಿದ ಗೋವಿಂದರಾಜು ನಡೆ ವಿಭಿನ್ನವಾಗಿತ್ತು. ದಾನ ಪ್ಯಾಲೇಸ್ ಸಮೀಪ ಅಲ್ಪಸಂಖ್ಯಾತ ಮುಂಖಂಡರೊಂದಿಗೆ ಪ್ರತ್ಯೇಕ ಹುಟ್ಟು ಹಬ್ಬದ ಕಾರ್ಯಕ್ರಮ ಆಯೋಜಿಸಿದ್ದು , ಆದರಲ್ಲಿ ಭಾಗವಹಿಸಲು ಗೋವಿಂದರಾಜುರವರು ಜಿಲ್ಲಾಧ್ಯಕ್ಷರನ್ನು ಮತ್ತು ಜೋತೆಲಿ ಒಬ್ಬರನ್ನು ಮಾತ್ರ ಕರೆದುಕೊಂಡು ಹೋಗಿದ್ದು ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿತ್ತು. ಜಿಲ್ಲಾ ಕಛೇರಿಯಲ್ಲಿ ಇದ್ದ ಕಾರ್ಯಕರ್ತರು ಮುಖಂಡರು ಗೋವಿಂದರಾಜುಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು ಯಾರ ಅಗತ್ಯವು ನನಗಿಲ್ಲ ಎಂಬ ಮೌನದ ಉತ್ತರ ಕಾರ್ಯಕರ್ತರಿಗೆ ಮತ್ತು…

Read More

ಕೊರಟಗೆರೆ ಬಿಜೆಪಿ ಮುಖಂಡ ಕೆ.ಎಂ.ಮುನಿಯಪ್ಪ ಕೊರಟಗೆರೆ ಕ್ಷೇತ್ರದಲ್ಲಿ ಕಳೆದ 4ವರ್ಷದಿಂದ ಜನಸೇವೆ ಮಾಡಿದ್ದಾರೆ. ಕೆ.ಎಂ.ಮುನಿಯಪ್ಪ ಪರವಾಗಿ ನನ್ನ ಬೆಂಬಲ ಇದ್ದೇ ಇರುತ್ತದೆ.. ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ತಳಮಟ್ಟದಿಂದ ಸಂಘಟನೆಗೆ ಮುಂದಾಗಿ ಕೊರಟಗೆರೆಯಲ್ಲಿ ಬಿಜೆಪಿ ಪಕ್ಷದ ಗೆಲುವಿಗೆ ಶ್ರಮಿಸಬೇಕಿದೆ ಎಂದು ಬೆಂಗಳೂರು ಗ್ರಾಮಾಂತರ ಮಾಜಿ ಜಿಪಂ ಅಧ್ಯಕ್ಷ ಜಿ.ಮರೀಸ್ವಾಮಿ ಮನವಿ ಮಾಡಿದರು. ಕೊರಟಗೆರೆ ಪಟ್ಟಣದ ಮಾರುತಿ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಮುಖಂಡ ಕೆ.ಎಂ.ಮುನಿಯಪ್ಪ ಮತ್ತು ಟಿ.ಡಿ.ತಿಮ್ಮಜ್ಜ ನೇತೃತ್ವದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಬಿಜೆಪಿ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಕೋರೊನಾ ರೋಗ ಹರಡಿದಾಗ ಕೊರಟಗೆರೆ ಕ್ಷೇತ್ರದ ಜನರಿಗೆ ಬಿಜೆಪಿ ಮುಖಂಡ ಕೆ.ಎಂ.ಮುನಿಯಪ್ಪ 30ಸಾವಿರ ಆಹಾರದ ಕಿಟ್ ಮತ್ತು ವೈದ್ಯಕೀಯ ನೇರವು ನೀಡಿದ್ದಾರೆ. ಕೊರಟಗೆರೆ ಕ್ಷೇತ್ರದ ಜನರಿಂದ ಮುನಿಯಪ್ಪನಿಗೆ ಪ್ರೀತಿ ಮತ್ತು ವಾತ್ಸಲ್ಯ ದೊರೆತಿದೆ. ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆ-ಸಾಧನೆಗಳನ್ನು ಗ್ರಾಮೀಣ ಜನರಿಗೆ ತಲುಪಿಸುವ ಕೆಲಸವನ್ನು ಬಿಜೆಪಿ ಕಾರ್ಯಕರ್ತರು ಮಾಡಬೇಕಿದೆ ಎಂದು ತಿಳಿಸಿದರು. ಕೊರಟಗೆರೆ ಕ್ಷೇತ್ರದ ಬಿಜೆಪಿ ಪಕ್ಷದ ಆಕಾಂಕ್ಷಿ ಅಭ್ಯರ್ಥಿ ಕೆ.ಎಂ.ಮುನಿಯಪ್ಪ…

Read More

ತುಮಕೂರು ಬಿಜೆಪಿಯ ಸಂಘಟನಾತ್ಮಕ ದೃಷ್ಠಿಯಿಂದ ರಾಜ್ಯದಲ್ಲಿ ರಚನೆಯಾಗಿರುವ 24 ಪ್ರಕೋಷ್ಠಗಳ ರಾಜ್ಯ ಮಟ್ಟದಲ್ಲಿ 25000 ಕಾರ್ಯಕರ್ತರ ಶಕ್ತಿ ಸಂಗಮ ಸಮಾವೇಶ ಇದೇ 18ರ ಭಾನುವಾರ ಬೆಂಗಳೂರಿನ ಅರಮನೆ ಮೈದಾನ ಗಾಯತ್ರಿ ವಿಹಾರದಲ್ಲಿ ನಡೆಯಲಿದೆ ಎಂದು ಬಿಜೆಪಿ ತುಮಕೂರು ಜಿಲ್ಲಾಧ್ಯಕ್ಷ ಹೆಚ್.ಎಸ್.ರವಿಶಂಕರ್ ಹೆಬ್ಬಾಕ ತಿಳಿಸಿದರು. ಬಿಜೆಪಿ ಕಾರ್ಯಾಲಯದಲ್ಲಿಂದು ನಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡುತ್ತಾ, ಬಿಜೆಪಿ ಇಡೀ ದೇಶದಲ್ಲಿ ಕರ್ನಾಟಕದಲ್ಲಿ ಪ್ರಥಮ ಬಾರಿಗೆ ರಚನೆಯಾಗಿರುವ ಸಮಾಜದ ವಿವಿಧ ಕ್ಷೇತ್ರಗಳಲ್ಲಿನ ಸಮಾಜಮುಖಿ ಚಿಂತಕರಿಗೆ ವೇದಿಕೆಯನ್ನು ಒದಗಿಸುವ ಕಾರ್ಯಪದ್ದತಿಯನ್ನು ಅಳವಡಿಸಿಕೊಂಡು ಧ್ಯೇಯ ಪಥ ಹಾಗೂ ಕಾರ್ಯಪಥದ ಚಿಂತನೆ ನೀಡಿ ದೇಶ ಕಟ್ಟುವ ಕಾಯಕದಲ್ಲಿ ಜೋಡಿಸಿಕೊಂಡು ಕೊಂಡೊಯ್ಯವ ದೃಷ್ಠಿಕೋನದಿಂದ ರಾಜ್ಯದಲ್ಲಿ 24 ಪ್ರಕೋಷ್ಠಗಳಾದ ಪ್ರಶಿಕ್ಷಣ ಪ್ರಕೋಷ್ಠ, ಸಹಕಾರ ಪ್ರಕೋಷ್ಠ, ಅಸಂಘಟಿತ ಕಾರ್ಮಿಕ ಪ್ರಕೋಷ,್ಠ ಕಲೆ ಮತ್ತು ಸಾಂಸ್ಕøತಿಕ ಪ್ರಕೋಷ್ಠ, ವ್ಯಾಪಾರಿ ಪ್ರಕೋಷ್ಠ, ಕಾನೂನು ಪ್ರಕೋಷ್ಠ, ಪ್ರಬುದ್ಧರ ಪ್ರಕೋಷ್ಠ, ವೃತ್ತಿಪರರ ಪ್ರಕೋಷ್ಠ, ವೈದ್ಯಕೀಯ ಪ್ರಕೋಷ್ಠ, ಕೈಗಾರಿಕ ಪ್ರಕೋಷ್ಠ, ಪಂಚಾಯತ್‍ರಾಜ್ ಗ್ರಾಮೀಣ ಪ್ರಕೋಷ್ಠ, ಫಲಾನುಭವಿ ಪ್ರಕೋಷ್ಠ, ಶಿಕ್ಷಕರ ಪ್ರಕೋಷ್ಠ, ಹಾಲು ಉತ್ಪಾದಕರ…

Read More

ತುಮಕೂರು : ನಗರದ ಎಂ.ಜಿ.ರಸ್ತೆಯ ಅಂಬೇಡ್ಕರ್ ಭವನದಲ್ಲಿ ದಲಿತ ಸಮುದಾಯದ ಮುಖಂಡರು ಆಯೋಜಿಸಿದ್ದ ಒಳಮೀಸಲಾತಿ ಕುರಿತು ಸಭೆಯಲ್ಲಿ ಭಾಗವಹಿಸಿ ಮಾತನಾಡಿ ಅವರು,ಸರಕಾರ ಒಳಮೀಸಲಾತಿ ಕುರಿತಂತೆ ಉಪಸಮಿತಿ ರಚಿಸುವ ಮೂಲಕ ದಲಿತರ ಕಣೋರೆಸುವ ತಂತ್ರಗಾರಿಕೆ ಅನುಸರಿಸುತ್ತಿದೆ.ಈಗಾಗಲೇ ಇಂತಹ ಹಲವಾರು ತಂತ್ರಗಾರಿಕೆಯಿಂದ ದಲಿತರು ಸಾಕಷ್ಟು ಅವಕಾಶಗಳನ್ನು ಕಳೆದುಕೊಂಡು,ಅಸ್ಥಿತ್ವಕ್ಕೆ ಧಕ್ಕೆ ತಂದುಕೊಂಡಿದ್ದಾರೆ.ಹಾಗಾಗಿ ಈ ಸಾಲಿನ ಚಳಿಗಾಲದ ಅಧಿವೇಶದಲ್ಲಿ ಒಳಮೀಸಲಾತಿ ಕುರಿತಂತೆ ಒಂದು ಸ್ಪಷ್ಟ ನಿರ್ಧಾರವನ್ನು ತೆಗೆದುಕೊಂಡು, ಕಳೆದ 12 ವರ್ಷಗಳಿಂದ ಕೊಳೆಯುತ್ತಾ ಬಿದ್ದಿರುವ ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿಯನ್ನು ಸದನದಲ್ಲಿ ಚರ್ಚಿಸಿ, ಜಾರಿಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕೆಂಬುದು ನಮ್ಮೆಲ್ಲಾ ಹೋರಾಟಗಾರರ ಆಗ್ರಹವಾಗಿದೆ ಎಂದರು. ಅಖಿಲ ಭಾರತ ಡಾ.ಅಂಬೇಡ್ಕರ್ ಪ್ರಚಾರ ಸಮಿತಿ ಅಧ್ಯಕ್ಷ ಎನ್.ಕೆ.ನಿಧಿಕುಮಾರ್ ಮಾತನಾಡಿ,ಒಳಮೀಸಲಾತಿ ಎಂಬುದು ಪರಿಶಿಷ್ಟ ಜಾತಿಯಲ್ಲಿಯೇ ಇರುವ 101 ಜಾತಿಗಳ ನಡುವಿನ ಸಾಮಾಜಿಕ ನ್ಯಾಯದ ಹೋರಾಟವಾಗಿದೆ.ಈ ಹಿಂದೆ ಹೋರಾಟಗಳು ನಡೆದಾಗ,ಹೊಲೆಯರು,ಮಾದಿಗರು ಹಾಗೂ ಇತರೆ ಜಾತಿಗಳು ಒಗ್ಗೂಡದಿರುವುದನ್ನೇ ನೆಪ ಮಾಡಿ ಕೊಂಡು ಜಾರಿಗೆ ಹಿಂದೇಟು ಹಾಕಲಾಗಿತ್ತು. ಈಗ ಪರಿಶಿಷ್ಟ ಜಾತಿಯ ಎಲ್ಲಾ ಸಮುದಾಯಗಳು ಒಗ್ಗೂಡಿ ಇದರ…

Read More

ತುಮಕೂರು ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ತುಮಕೂರು ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ರೈತ ಸಂಘದ ಕಾರ್ಯಕರ್ತರು ರಾಜ್ಯದಲ್ಲಿ ರೈತರು ಬೆಳೆದಿರುವ ಬೆಳೆಗಳಿಗೆ ಸಮರ್ಪಕ ರೀತಿಯಾದ ಬೆಂಬಲ ಬೆಲೆ ದೊರೆಯುತ್ತಿಲ್ಲ ಹಾಗೂ ಸರ್ಕಾರ ರೈತರ ಹಿತ ಕಾಪಾಡುವವರಿಗೆ ಫಲವಾಗಿದೆ ಎಂದು ಆರೋಪಿಸಿ ಘೋಷಣೆಗಳನ್ನು ಕೂಗಿದರು. ಈ ವೇಳೆ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷ ಜಯಶ್ರೀ ರಾಜ್ಯ ಸರ್ಕಾರ ಪ್ರಸ್ತುತ ಪ್ರಾರಂಭವಾಗಲಿರುವ ಚಳಿಗಾಲದ ಅಧಿವೇಶನದಲ್ಲಿ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು 2018ನೇ ಸಾಲಿನಿಂದ 22ರ ವರೆಗೆ ಮುಂಗಾರಿನ ಹಂಗಾಮಿನ ಬೆಳೆ ನಾಶಕ್ಕೆ ಸಂಬಂಧಿಸಿದಂತೆ ಪರಿಹಾರ ನೀಡುವುದು ಹಾಗೂ ರಾಷ್ಟ್ರೀಕೃತ ಮತ್ತು ಸಹಕಾರಿ ಬ್ಯಾಂಕುಗಳಲ್ಲಿನ ರೈತರ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕೆಂದು ಆಗ್ರಹಿಸಿದರು ರೈತರ ಪಂಪ್ಸೆಟ್ಗಳಿಗೆ ಮೀಟರ್ ಅಳವಡಿಸುವ ಹಾಗೂ ಇನ್ನಿತರೆ ಯೋಜನೆಗಳನ್ನು ಸರ್ಕಾರ ಕೂಡಲೇ…

Read More

ತುಮಕೂರು : ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಗರ್ಭಿಣಿಯರು ಹಾಗೂ ಬಾಣಂತಿ ಯರಿಗೆ ಕೆಲಸದ ಪ್ರಮಾಣದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಲಾಗಿದ್ದು, ಗ್ರಾಮೀಣ ಪ್ರದೇಶದ ಮಹಿಳೆಯರು ಈ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ.ಕೆ.ವಿದ್ಯಾಕುಮಾರಿ ಅವರು ಮನವಿ ಮಾಡಿದ್ದಾರೆ. ಈಗಾಗಲೇ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ವಿಶೇಷ ಚೇತನರು ಹಾಗೂ ಹಿರಿಯ ನಾಗರೀಕರಿಗೆ ಒಂದು ದಿನದ ಕೆಲಸದ ಪ್ರಮಾಣದಲ್ಲಿ ಶೇ.50 ರಷ್ಟು ರಿಯಾಯಿತಿ ಇದ್ದು, ಪ್ರಸ್ತುತ ನರೇಗಾ ಯೋಜನೆಯಡಿ ಮಹಿಳೆಯರ ಭಾಗವಹಿಸುವಿಕೆ ಪ್ರಮಾಣವು ಶೇ.51ರಷ್ಟು ಇರುತ್ತದೆ. ಮಹಿಳಾ ಭಾಗವಹಿಸುವಿಕೆ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ಹಾಗೂ ಮಹಿಳೆಯರು ನರೇಗಾ ಕಾಮಗಾರಿಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವ ಸಲುವಾಗಿ ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಕೆಲಸದ ಪ್ರಮಾಣದಲ್ಲಿ ರಿಯಾಯಿತಿ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ನರೇಗಾ ಯೋಜನೆಯ ಕಾಮಗಾರಿಗಳಲ್ಲಿ ಗರ್ಭಿಣಿಯರು ಮತ್ತು ಬಾಣಂತಿಯರು ಸಾಕಷ್ಟು ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದು, ಅವರುಗಳ ದೈಹಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರವು ಕೆಲಸದ ಪ್ರಮಾಣದಲ್ಲಿ ರಿಯಾಯಿತಿ ನೀಡುತ್ತಿದೆ ಎಂದರು.

Read More

ಶ್ರೀರಂಗಪಟ್ಟಣ ವಿದ್ಯೆ, ಸನ್ನಡತೆ, ಸನ್ಮಾರ್ಗವನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಡಬೇಕಾದ ಶಿಕ್ಷಕನೇ ಕಾಮುಕನ ರೀತಿ ವರ್ತಿಸಿದರೆ ಬೇಲಿಯೇ ಎದ್ದು ಹೊಲ ಮೇಯ್ದ ಪರಿಸ್ಥಿತಿ. ಶಿಕ್ಷಕನ ವರ್ತನೆಗೆ ರೊಚ್ಚಿಗೆದ್ದ ವಿದ್ಯಾರ್ಥಿನಿಯರು ಕೋಲು, ದೊಣ್ಣೆ ಹಿಡಿದುಕೊಂಡು ಮನಸಾರೆ ಥಳಿಸಿದ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಟ್ಟೇರಿ ಗ್ರಾಮದಲ್ಲಿನ ವಸತಿ ನಿಲಯದಲ್ಲಿ ನಡೆದಿದೆ. ಮುಖ್ಯ ಶಿಕ್ಷಕನಿಗೆ ವಿದ್ಯಾರ್ಥಿನಿಯರು ಕೈಯಲ್ಲಿ ದೊಣ್ಣೆ ಹಿಡಿದು ಮನಸೋ ಇಚ್ಛೆ ಥಳಿಸಿದ ವಿಡಿಯೊ ವೈರಲ್ ಆಗಿದೆ.ಚಿನ್ಮಯಾನಂದ ಮೂರ್ತಿ ಥಳಿತಕ್ಕೊಳಾದ ಮುಖ್ಯ ಶಿಕ್ಷಕ. ನಿನ್ನೆ ತಡರಾತ್ರಿ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತಸಿದ್ದರಿಂದ ತಕ್ಷಣವೇ ಎಚ್ಚೆತ್ತ ವಿದ್ಯಾರ್ಥಿನಿಯರು ಸಹಪಾಠಿಗಳಿಗೆ ಮಾಹಿತಿ ನೀಡಿ ನಂತರ ಕೈಯಲ್ಲಿ ಕೋಲು ದೊಣ್ಣೆ ಹಿಡಿದು ಕಾಮುಕ ಶಿಕ್ಷನ ಮೇಲೆ ದಾಳಿ ನಡೆಸಿದ್ದಾರೆ. ಕೆ.ಆರ್.ಎಸ್ ಠಾಣಾ ಪೆÇಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಪೆÇಲೀಸರು ಶಿಕ್ಷಕನನ್ನು ಬಂಧಿಸಿದ್ದಾರೆ.

Read More

ಸಿರಾ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ನಾಲ್ಕು ಮಂದಿ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ದೊಡ್ಡಆಲದ ಮರದ ಬಳಿ ರಾಷ್ಟ್ರೀಯ ಹೆದ್ದಾರಿ-48 ರಲ್ಲಿ ಇಂದು ಸಂಜೆ ನಡೆದಿದೆ. ಮೃತರೆಲ್ಲರೂ ಬೆಂಗಳೂರಿನ ನಿವಾಸಿಗಳು ಎಂದು ತಿಳಿದು ಬಂದಿದೆ. ಸಿಂಧನೂರಿನಲ್ಲಿ ನಡೆದ ಸ್ನೇಹಿತನ ಮದುವೆಗೆ ಬೆಂಗಳೂರಿನಿಂದ ಕಾರಿನಲ್ಲಿ ಇವರುಗಳು ತೆರಳಿದ್ದರು. ಇಂದು ಮದುವೆ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ಸಾಗುತ್ತಿದ್ದರು. ಮಾರ್ಗಮಧ್ಯೆ ದೊಡ್ಡಆಲದ ಮರದ ಬಳಿ ಕಾರು ವೇಗವಾಗಿ ಚಲಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದಿದೆ. ಈ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟರು, ಮತ್ತಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಉಳಿದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಕಾರು ಅತಿ ವೇಗವಾಗಿ ಚಲಿಸಿ ಚಾಲಕನ ನಿಯಂತ್ರಣ ತಪ್ಪಿರುವುದೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಮದುವೆ ಮುಗಿಸಿಕೊಂಡು ಬರುತ್ತಿದ್ದ ಕಾರಿನಲ್ಲಿ 6 ಜನ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಘಟನೆಯ…

Read More

ತುಮಕೂರು ಬಿಜೆಪಿ ಹಿರಿಯ ಮುಖಂಡರು ಹಾಗೂ ಕೇಂದ್ರ ಇಂಧನ ಮತ್ತು ಭಾರಿ ಉದ್ದಿಮೆಗಳ ಸಹಾಯಕ ರಾಜ್ಯ ದರ್ಜೆ ಸಚಿವರಾದ ಕೃಷ್ಣನ್ ಪಾಲ್ ಗುಲ್ಜಾರ್‍ರವರು ಕುಣಿಗಲ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕ್ರಮಗಳಲ್ಲಿ ಇದೇ ಡಿಸೆಂಬರ್ 17ರ ಶನಿವಾರದಂದು ಪ್ರವಾಸ ಮಾಡಲಿದ್ದಾರೆಂದು ವಕ್ತಾರ ಕೆ.ಪಿ.ಮಹೇಶ ತಿಳಿಸಿದ್ದಾರೆ. ಅವರ ಪ್ರವಾಸದ ಅವಧಿಯಲ್ಲಿ ಬೆಳಿಗ್ಗೆ 10ಕ್ಕೆ ಯಡಿಯೂರು ಶ್ರೀಕ್ಷೇತ್ರ ಯಡಿಯೂರು ಸಿದ್ಧಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ, ಕುಣಿಗಲ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೀರಗೊಂಡನಹಳ್ಳಿಯ ಎಸ್.ಸಿ. ಕಾಲೋನಿಯ ಬಿಜೆಪಿ ಶಕ್ತಿ ಕೇಂದ್ರದ ಕಾರ್ಯಕರ್ತ ಹನುಮಯ್ಯ (ಸಣ್ಣ ಪಾಪ) ರವರ ಮನೆಯಲ್ಲಿ ಬೆಳಗ್ಗಿನ ಉಪಹಾರ ಮಾಡಲಿದ್ದಾರೆ, ಬೆಳಿಗ್ಗೆ 11 ಘಂಟೆಗೆ ಕುಣಿಗಲ್‍ನ ಬಿ.ಎಂ.ರಸ್ತೆಯ ಎಸ್.ಎಸ್. ಪಾರ್ಟಿ ಹಾಲ್‍ನಲ್ಲಿ ಬಿಜೆಪಿ ಜಿಲ್ಲಾ ಹಾಗೂ ಮಂಡಲದ ಪರಿವಾರದ ಹಿರಿಯ ಕಾರ್ಯಕರ್ತರು, ಪ್ರಮುಖರು, ಎಲ್ಲಾ ಮೋರ್ಚಾಗಳು ಮತ್ತು ಮಾಧ್ಯಮ, ಸಾಮಾಜಿಕ ಜಾಲತಾಣದ ಕಾರ್ಯಕರ್ತರೊಂದಿಗೆ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಪತ್ರಿಕಾಗೋಷ್ಠಿಯು ಸ್ಟಡ್ ಫಾರಂನಲ್ಲಿ ಮಾಧ್ಯಮ ಮಿತ್ರರೊಂದಿಗೆ ನಡೆಸಿದ ನಂತರ, ಮಧ್ಯಾಹ್ನ 1 ಘಂಟೆಗೆ…

Read More

ತುಮಕೂರು ವಾಣಿಜ್ಯಶಾಸ್ತ್ರದ ವಿದ್ಯಾರ್ಥಿಗಳು ಭಾರತೀಯ ಸಂಸ್ಕøತಿಯೊಂದಿಗೆ ಇತಿಹಾಸವನ್ನು ಅರಿತುಕೊಳ್ಳಬೇಕು ಎಂದು ತುಮಕೂರು ವಿವಿಯ ಪರೀಕ್ಷಾಂಗ ಕುಲಸಚಿವ ಪ್ರೊ. ನಿರ್ಮಲ್ ರಾಜು ಅಭಿಪ್ರಾಯಪಟ್ಟರು. ತುಮಕೂರು ವಿಶ್ವವಿದ್ಯಾನಿಲಯದ ವಾಣಿಜ್ಯಶಾಸ್ತ್ರ ವಿಭಾಗ ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ವಾಣಿಜ್ಯ ಮತ್ತು ನಿರ್ವಹಣಾ ಶಿಕ್ಷಕರ ಕಲ್ಯಾಣ ವೇದಿಕೆಯ ಸಹಯೋಗದಲ್ಲಿ ಸರ್. ಎಂ. ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಒಂದು ದಿನದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳ ಹಿತಾಸಕ್ತಿಯ ಉದ್ದೇಶದಿಂದ ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ಪಠ್ಯಕ್ರಮಗಳನ್ನು ಜೋಡಿಸಿ ಬೋಧಿಸುವುದು ಅಧ್ಯಾಪಕರ ಕರ್ತವ್ಯ. ಅಧ್ಯಾಪಕರು, ಅತಿಥಿ ಉಪನ್ಯಾಸಕರು ಅಧ್ಯಾಪನ ವೃತ್ತಿಯನ್ನು ತಪಸ್ಸಿನಿಂದ ಸ್ವೀಕರಿಸಿ ಹೆಚ್ಚಿನ ಕಲಿಕೆಗೆ ಮುಂದಾಗಬೇಕು ಎಂದು ತಿಳಿಸಿದರು. ವಿವಿಯ ವಾಣಿಜ್ಯಶಾಸ್ತ್ರದ ಡೀನ್ ಪ್ರೊ. ಬಿ. ಶೇಖರ್ ಮಾತನಾಡಿ, ಭಾರತದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸುವಲ್ಲಿ ಕರ್ನಾಟಕ ರಾಜ್ಯ ಮೊದಲ ಸ್ಥಾನದಲ್ಲಿದೆ. ತುಮಕೂರು ವಿಶ್ವವಿದ್ಯಾನಿಲಯ ಈ ಎನ್‍ಇಪಿಯನ್ನು ಅಳವಡಿಸಿಕೊಂಡು ಯಶಸ್ವಿಯಾಗಿದೆ. ಪ್ರತಿಯೊಬ್ಬ ನಾಗರೀಕನಿಗೂ ಶಿಕ್ಷಣ ಪಡೆಯುವ ಹಕ್ಕಿದೆ. ಶಿಕ್ಷಣ ಎಂಬುದು ಒಂದು ಅಸ್ತ್ರ. ಆ ಅಸ್ತ್ರದಿಂದ…

Read More