ತುರುವೇಕೆರೆ ತುರುವೇಕೆರೆ ಕ್ಷೇತ್ರದಲ್ಲಿ ಯಾವುದೇ ಮಣ್ಣು ತುಂಬಿದ ರಸ್ತೆಗಳು ಇರುವುದಿಲ್ಲ ಈಗಾಗಲೇ ಸರ್ಕಾರದಿಂದ ಬಂದಂತಹ ಅನುದಾನವನ್ನು ಬಳಸಿಕೊಂಡು ಹೆಚ್ಚು ಒತ್ತು ನೀಡಿರುವುದಾಗಿ ತುರುವೇಕೆರೆ ಕ್ಷೇತ್ರದ ಶಾಸಕ ಮಸಾಲೆ ಜಯರಾಂ ತಿಳಿಸಿದರು. ಗುಬ್ಬಿ ತಾಲೂಕು ತುರುವೇಕೆರೆ ಕ್ಷೇತ್ರದ ಕಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 2ಕೋಟಿ ಎಂಭತ್ತು ಲಕ್ಷದಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು ಕಲ್ಲೂರು ಗ್ರಾಮ ಪಂಚಾಯತ್‍ಗೆ ಬರುವ ಎಲ್ಲಾ ಗ್ರಾಮಗಳಲ್ಲಿ ಬಾಕ್ಸ್ ಚರಂಡಿ ಹಾಗು ಕಾಂಕ್ರಿಟ್ ರಸ್ತೆ ನಿರ್ಮಾಣ ಮಾಡಲಾಗಿದ್ದು, ಯಾವುದೇ ಕಾಮಗಾರಿಗಳು ಬಾಕಿ ಇರುವುದಿಲ್ಲ ಎಂದ ಅವರು ನಾನು ಚುನಾವಣೆಗೆ ಮುನ್ನ ಕೊಟ್ಟ ಮಾತಿನಂತೆ ತಾಲ್ಲೂಕಿನ ಕೆರೆಗಳನ್ನು ತುಂಬಿಸಿದ್ದು ರಸ್ತೆಗಳನ್ನು ಆಧುನೀಕರಣಗೊಳಿಸಿದ್ದು ಇದರಿಂದ ಮುಂದಿನ ದಿನಗಳಲ್ಲಿ ನನ್ನ ಗೆಲುವಿಗೆ ಮತದಾರರು ಶ್ರಮಿಸುತ್ತಾರೆ ಎಂದು ತಿಳಿಸಿದರು. ನೇಕಾರರಿಗೆ ಈಗಾಗಲೇ ಸರ್ಕಾರವು 5000 ರೂ.ಗಳನ್ನು ಸಹಾಯಧನವಾಗಿ ಘೋಷಿಸಿದ್ದು ಈ ಬಗ್ಗೆ ಅಧಿವೇಶನದಲ್ಲಿ ಚರ್ಚಿಸುತ್ತೇನೆ. ಕೊಬ್ಬರಿ ಹಾಗೂ ಅಡಿಕೆ ಬೆಲೆಗಳ ಬೆಂಬಲಬೆಲೆ ನೀಡಲು ಸರ್ಕಾರದ ಮೇಲೆ ಒತ್ತಡ ತರುತ್ತೇನೆ.…
Author: News Desk Benkiyabale
ತುಮಕೂರು ಆರೋಗ್ಯ ಕ್ಷೇತ್ರವನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ ಸಲುವಾಗಿ ಮತ್ತು ದೇಶದ ಪ್ರತಿಯೊಬ್ಬ ಪ್ರಜೆಗೂ ಸಕಾಲದಲ್ಲಿ ಸೂಕ್ತ ಚಿಕಿತ್ಸಾ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ‘ಆಯುಷ್ಮಾನ್ ಭಾರತ್ ಆರೋಗ್ಯ ಅಕೌಂಟ್’ (ಅಭಾ) ಯೋಜನೆಯಡಿ ದೇಶದ ಯಾವುದೇ ನೋಂದಾಯಿತ ಆಸ್ಪತ್ರೆಗಳಲ್ಲಿ ವಾರ್ಷಿಕ 5 ಲಕ್ಷಗಳವರೆಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಂಜುನಾಥ್ ಅವರು ತಿಳಿಸಿದರು. ಅವರಿಂದು ಆರೋಗ್ಯ ಇಲಾಖೆ ವತಿಯಿಂದ ಪತ್ರಿಕಾ ಭವನದಲ್ಲಿಂದು ಏರ್ಪಡಿಸಲಾಗಿದ್ದ ಆಭಾ ಕಾರ್ಡ್ ನೋಂದಣಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಾ, ದೇಶಾದ್ಯಂತ ನೋಂದಾಯಿತ ಆಸ್ಪತ್ರೆಗಳಲ್ಲಿ ಯಾವುದೇ ಶುಲ್ಕವಿಲ್ಲದೆ ಬಿಪಿಎಲ್ ಕಾರ್ಡುದಾರರು ಈ ಸೌಲಭ್ಯ ಪಡೆದುಕೊಳ್ಳಬಹುದು, ರೋಗಿಯ ಸಂಪೂರ್ಣ ಚಿಕಿತ್ಸಾ ವಿವರಗಳು ಅಭಾ ನಂಬರ್‍ನಿಂದ ತಿಳಿದುಬರಲಿದೆ ಎಂದರು. ಬಿಪಿಎಲ್ ಕಾರ್ಡುದಾರರಿಗೆ 5 ಲಕ್ಷದವರೆಗೆ ಉಚಿತ ಸೇವೆ ಮತ್ತು ಎಪಿಎಲ್ ಕಾರ್ಡುದಾರರಿಗೆ ಚಿಕಿತ್ಸಾ ವೆಚ್ಚದಲ್ಲಿ 30ರಷ್ಟು ರಿಯಾಯಿತಿ ಮೂಲಕ ಒಟ್ಟು ವಾರ್ಷಿಕ 1.5 ಲಕ್ಷದವರೆಗೆ ಚಿಕಿತ್ಸೆ ನೀಡಲಿದ್ದು, ಆಧಾರ್ ಕಾರ್ಡ್ ಪ್ರತಿ, ಆಧಾರ್‍ಗೆ ನೋಂದಣಿಯಾಗಿರುವ ನಂಬರಿನ ಮೊಬೈಲ್ ಅಥವಾ…
ತುಮಕೂರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ: ಕೆ. ಸುಧಾಕರ್ ರವರು ನಗರ ಹಾಗೂ ಪಟ್ಟಣ ಪ್ರದೇಶದ ಬಡ ದುರ್ಬಲ ವರ್ಗದ ಜನರಿಗೆ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ‘ನಮ್ಮ ಕ್ಲಿನಿಕ್’ಗಳನ್ನು ರಾಜ್ಯದಾದ್ಯಂತ ಆರಂಭಿಸುವ ಮೂಲಕ ಆರೋಗ್ಯ ಕ್ಷೇತ್ರದಲ್ಲಿ ಅಮೂಲಾಗ್ರ ಸುಧಾರಣೆಗೆ ಕಾರಣವಾಗಿದ್ದಾರೆ ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಹೇಳಿದರು. ಜಿಲ್ಲಾಡಳಿತ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ನಗರದ ಮೇಳೆಕೋಟೆ ಮುಖ್ಯರಸ್ತೆ ಹಾಗೂ ಮರಳೂರು ದಿಣ್ಣೆ ಮುಖ್ಯ ರಸ್ತೆಯಲ್ಲಿ ಆಯೋಜಿಸಿದ್ದ ‘ನಮ್ಮ ಕ್ಲಿನಿಕ್’ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಜ್ಯದಲ್ಲಿನ ನಗರ ಸ್ಥಳೀಯ ಸಂಸ್ಥೆಗಳ ಮೂಲಕ ಆರೋಗ್ಯ ಕ್ಷೇತ್ರವನ್ನು ತಳಮಟ್ಟದಿಂದ ಬಲಪಡಿಸುವ ಮತ್ತು ಸುಧಾರಣೆ ತರುವ ದೃಷ್ಠಿಯಿಂದ ಆರೋಗ್ಯ ಕ್ಷೇತ್ರಕ್ಕಾಗಿ ನೀಡುವ ಅನುದಾನವನ್ನು ಆರ್ಥಿಕ ವರ್ಷ 2021-22 ರಿಂದ 2025-26ನೇ ಸಾಲಿನವರೆಗೆ ಐದು ವರ್ಷಗಳ ಅವಧಿಗೆ ಹಂಚಿಕೆ ಮಾಡಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, 2022-23ನೇ ಸಾಲಿನ…
ತುಮಕೂರು ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಇದೇ 23ರಿಂದ ಎರಡು ದಿನಗಳ ಕಾಲ ಎಸ್.ಎಸ್.ಐ.ಟಿ ಕಾಲೇಜು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಹಾಗೂ ಜಿಲ್ಲಾ ಘಟಕದ ಅಧ್ಯಕ್ಷ ಎನ್ ನರಸಿಂಹರಾಜು ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕ ಹಾಗೂ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಯೋಗದಲ್ಲಿ ಪ್ರಸಕ್ತ ಸಾಲಿನ ರಾಜ್ಯ ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಡಿ.23, 24 ರಂದು ಎರಡು ದಿನಗಳ ಕಾಲ ವ್ಯವಸ್ಥಿತ ಹಾಗೂ ಅಚ್ಚುಕಟ್ಟಾಗಿ ನಡೆಯಲಿವೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಮಾನಾಂತರ ವೇದಿಕೆಗಳಲ್ಲಿ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳು ನಡೆಯಲಿವೆ, ಡಿಸೆಂಬರ್ 23ರ ಬೆಳಗ್ಗೆ ಎಸ್.ಎಸ್.ಐ.ಟಿ ಕಾಲೇಜು ಕ್ರೀಡಾಂಗಣದಲ್ಲಿ ಪಂದ್ಯಾವಳಿ ಉದ್ಘಾಟನೆಗೊಂಡು 24ರ ಸಂಜೆ ಸಮಾರೋಪ ಜರುಗಲಿದೆ ಹಾಗೂ ಎರಡು…
ತುಮಕೂರು ಕಲ್ಪತರುನಾಡು ತುಮಕೂರು ನಗರದಲ್ಲಿ ಎರಡು ದಿನಗಳ ಕಾಲ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಳ್ಳಲಾಗಿರುವ ಅಕ್ಷರ ನುಡಿ ಜಾತ್ರೆಗೆ ವಿದ್ಯುಕ್ತ ಚಾಲನೆ ದೊರೆಯಿತು. ನಗರದಲ್ಲಿ ಕನ್ನಡದ ಸಾಹಿತ್ಯ ತೇರು ಎಳೆಯಲು ನಡೆದಿರುವ 14ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ರಾಷ್ಟ್ರಧ್ವಜಾರೋಹಣ, ನಾಡಧ್ವಜಾರೋಹಣ ಹಾಗೂ ಕಸಾಪ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಲಾಯಿತು. ನಗರದ ಟೌನ್‍ಹಾಲ್ ವೃತ್ತದಲ್ಲಿರುವ ಮಹಾನಗರ ಪಾಲಿಕೆ ಆವರಣದಲ್ಲಿ 14ನೇ ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಎಂ.ವಿ. ನಾಗರಾಜರಾವ್ ಅವರನ್ನು ಶಾಸಕ ಜ್ಯೋತಿಗಣೇಶ್ ಹಾಗೂ ಜಿಲ್ಲಾ ಕಸಾಪ ಅಧ್ಯಕ್ಷರಾದ ಕೆ.ಎಸ್. ಸಿದ್ದಲಿಂಗಪ್ಪ ಅವರು ಆತ್ಮೀಯವಾಗಿ ಬರ ಮಾಡಿಕೊಂಡರು. ಸಮ್ಮೇಳನಾಧ್ಯಕ್ಷರಾದ ಎಂ.ವಿ. ನಾಗರಾಜರಾವ್ ಅವರನ್ನು ಜಿಲ್ಲಾ ಕಸಾಪ ವತಿಯಿಂದ ಅದ್ದೂರಿಯಾಗಿ ಸ್ವಾಗತಿಸಿ ಬೆಳ್ಳಿರಥದಲ್ಲಿ ಕೂರಿಸಲಾಯಿತು. ನಂತರ ಶಾಸಕ ಜ್ಯೋತಿಗಣೇಶ್ ಅವರು ಕನ್ನಡದ ಬಾವುಟ ತೋರಿಸುವ ಮೂಲಕ ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಚಾಲನೆ ನೀಡಿದರು. ಟೌನ್‍ಹಾಲ್ ವೃತ್ತದಿಂದ ಆರಂಭವಾದ ಸಮ್ಮೇಳನಾಧ್ಯಕ್ಷರ ಮೆರವಣಿಗೆಯಲ್ಲಿ ಕನ್ನಡ ಸಾಹಿತ್ಯ, ಪರಂಪರೆ, ಗ್ರಾಮೀಣ ಸೊಗಡನ್ನು ಬಿಂಬಿಸುವ ಜಾನಪದ…
ಕೊರಟಗೆರೆ ಕೊರಟಗೆರೆ ತಾಲ್ಲೂಕಿನ ತೋವಿನಕೆರೆ ಗ್ರಾಮದ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಪಾಠಶಾಲೆ ಶತಮಾನದ ಅಂಚಿನಲ್ಲಿರುವ ಶಾಲೆ 1932ರಲ್ಲಿ ಇಲ್ಲಿ ಪ್ರಾಥಮಿಕ ಶಾಲೆ ನಿರ್ಮಾಣವಾಗಿ 92 ವರ್ಷ ಕಳೆದರೂ ಒಂದು ಪ್ರೌಢಶಾಲೆ ನಿರ್ಮಿಸಲು ಸಾಧ್ಯವಾಗಿಲ್ಲ. ಈ ಶಾಲೆಯಲ್ಲಿ ಓದಿ ಕಲಿತ ನೂರಾರು ವಿಧ್ಯಾರ್ಥಿಗಳು ಉನ್ನತ ಮಟ್ಟದ ಹುದ್ದೆಗಳನ್ನು ಅಲಂಕಾರಿಸಿದ್ದಾರೆ, ಇಂದಿಗೂ ಈ ಶಾಲೆಯಿಂದ ಬೆಳೆಯುತ್ತಿರುವ ಮಕ್ಕಳು ಉನ್ನತ್ತ ಮಟ್ಟದ ಹುದ್ದೆ ಅಲಂಕಾರಿಸಲಿದ್ದಾರೆ ಇಲ್ಲಿಯವರೆವಿಗೂ ಈ ಶಾಲೆಗೆ ಪ್ರೌಢಶಾಲೆ ಇಲ್ಲ ಎಂಬುದು ದುರ್ದೈವದ ಸಂಗತಿ. 1ರಿಂದ 8ನೇ ತರಗತಿ ಓದಿದ ನಂತರದ ವಿದ್ಯಾಭ್ಯಾಸಕ್ಕೆ ಪ್ರೌಢಶಾಲೆ ಇಲ್ಲದೆ ವಿದ್ಯಾರ್ಥಿಗಳು ಅನಿವಾರ್ಯವಾಗಿ ಖಾಸಗೀ ಶಾಲೆ ಸೇರುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ವಿಧ್ಯಾರ್ಥಿಗಳು ತನ್ನ ಮುಂದಿನ ವಿಧ್ಯಾಭ್ಯಾಸಕ್ಕೆ ಖಾಸಗಿ ಶಾಲೆ ಅವಲಂಬಿಸಬೇಕಾಗಿದೆ, ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳು ಶಾಸಗಿಶಾಲೆಯಲ್ಲಿ ಓದಲು ಸಾಧ್ಯವಿಲ್ಲ, ಖಾಸಗಿ ಶಾಲೆಯಲ್ಲಿ ಡೋನೇಷನ್, ಫೀಜ್, ಇನ್ನು ಇತರೆ ಹಣ ಕಟ್ಟಲು ಸಾಧ್ಯವಿಲ್ಲ. ಏಕೆಂದರೆ ಅ ಮಕ್ಕಳು ರೈತ ಮಕ್ಕಳು, ಮಧ್ಯಮ ವರ್ಗಕ್ಕಿಂತ ಕೆಳಮಟ್ಟದ ಕುಟುಂಬದ ಮಕ್ಕಳು.…
ತುಮಕೂರು ಕ್ಯಾಂಟರ್ ಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ಗುಬ್ಬಿ ತಾಲ್ಲೂಕಿನ ಕೊಂಡ್ಲಿ ಕ್ರಾಸ್ ಬಳಿ ನಡೆದಿದೆ. ಮೃತಪಟ್ಟವರನ್ನು ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ನಡುವಿನಹಳ್ಳಿ ಗ್ರಾಮದ ನಾರಾಯಣಪ್ಪ (50), ಪತ್ನಿ ನಾಗರತ್ನ (45), ಮಗ ಸಾಗರ್ (21) ಮತ್ತು ಸಂಬಂಧಿ ರಾಮಣ್ಣ ಎಂದು ಗುರುತಿಸಲಾಗಿದೆ. ಈ ನಾಲ್ಕು ಮಂದಿ ಚಿಕ್ಕನಾಯಕನಹಳ್ಳಿ ತಾಲ್ಲೂಕು ನಡುವಿನಹಳ್ಳಿ ಗ್ರಾಮದಿಂದ ಬೆಂಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದರು. ಮಾರ್ಗಮಧ್ಯೆ ಗುಬ್ಬಿ ತಾಲ್ಲೂಕಿನ ಕೊಂಡ್ಲಿಕ್ರಾಸ್ ಬಳಿ ತುಮಕೂರಿನಿಂದ ಕೆ.ಬಿ.ಕ್ರಾಸ್ ಕಡೆಗೆ ಹೋಗುತ್ತಿದ್ದ ಕ್ಯಾಂಟರ್ ಲಾರಿ ಕಾರಿಗೆ ಮುಖಾಮುಖಿಯಾಗಿ ಅಪ್ಪಳಿಸಿದ್ದರಿಂದ ಮೂವರು ಸ್ಥಳದಲ್ಲೇ ಅಸುನೀಗಿದ್ದು, ನಾಗರತ್ನ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಗಾಯಾಳು ನಾಗರತ್ನ ಅವರನ್ನು ತುಮಕೂರು ಜಿಲ್ಲಾಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ. ಕ್ಯಾಂಟರ್ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನೆಯ ಸುದ್ದಿ ತಿಳಿದ ಕೂಡಲೇ ಗುಬ್ಬಿ ಪೆÇಲೀಸರು ಸ್ಥಳಕ್ಕೆ ಧಾವಿಸಿ ನಜ್ಜುಗುಜ್ಜಾಗಿದ್ದ ಕಾರಿನಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹೊರ ತೆಗೆದು ಆಸ್ಪತ್ರೆಗೆ ಸಾಗಿಸುವಲ್ಲಿ…
ತುಮಕೂರು ನಗರದ ಗಾಜಿನ ಮನೆ ಆವರಣದಲ್ಲಿ ಡಿಸೆಂಬರ್ 15 ಮತ್ತು 16ರಂದು 14ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ತಿಳಿಸಿದರು. ಇಂದು ನಗರದ ಕನ್ನಡ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಡಳಿತ, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ಸಮ್ಮೇಳನ ನಡೆಯುತ್ತದೆ. ಸಾಹಿತಿ ಎಂ.ವಿ. ನಾಗರಾಜರಾವ್ ಸಮ್ಮೇಳನಾಧ್ಯಕ್ಷತೆ ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಉಪವಿಭಾಗಾಧಿಕಾರಿ ಅಜಯ್ ಡಿ.15ರಂದು ಬೆಳಿಗ್ಗೆ 7.30ಕ್ಕೆ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದಾರೆ. ಬೆ.8.30ಕ್ಕೆ ಸಮ್ಮೇಳನಾಧ್ಯಕ್ಷರನ್ನು ವೇದಿಕೆಗೆ ಬರಮಾಡಿಕೊಳ್ಳಲಾಗುವುದು. ಸಾಹಿತಿ ಡಾ. ಹಂ.ಪ. ನಾಗರಾಜಯ್ಯ ಉದ್ಘಾಟನಾ ಸಮಾರಂಭವನ್ನು ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕøತ ಟಿ.ಎಸ್.ನಾಗಾಭರಣ್ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ, ಪ್ರಮುಖ ವೇದಿಕೆಗೆ ಡಾ. ಶ್ರೀ ಶ್ರೀ ಶಿವಕುಮಾರ ಮಹಾ ಸ್ವಾಮೀಜಿ ಹೆಸರಿಡಲಾಗಿದೆ. ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ರಾಹುಲ್ ಕುಮಾರ್ ಶಹಾಪುರವಾಡ್ ಪುಸ್ತಕ ಮಳಿಗೆ ಉದ್ಘಾಟಿಸಲಿದ್ದಾರೆ. ಗೃಹ ಸಚಿವರಾದ ಆರಗ ಜ್ಞಾನೇಂದ್ರ…
ತುಮಕೂರು ನಗರದ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ವಿರುದ್ಧ ಹಣ ಕೊಟ್ಟು ಹೆಣ್ಣು ಮಕ್ಕಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ವರ್ತಿಸುತಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ವರಿಷ್ಠಾಧಿಕಾರಿಗಳಿಗೆ ಬಿಜೆಪಿ ನಗರ ಘಟಕ ದೂರು ನೀಡಿದೆ. ತುಮಕೂರು ವಿಧಾನ ಸಭಾ ಕ್ಷೇತ್ರದ ವಾರ್ಡ್‍ಗಳಿಂದ ತನ್ನ ಅನುಯಾಯಿಗಳಾದ ರೌಡಿಶೀಟರ್‍ಗಳನ್ನ ಮುಂದಿಟ್ಟುಕೊಂಡು ಪ್ರತೀ ದಿನ 5-10 ಬಸ್‍ಗಳಲ್ಲಿ ವಾರ್ಡ್‍ವಾರು ಬಡಕುಟುಂಬದ ಅಮಾಯಕ ಮುಗ್ದ ಹೆಣ್ಣು ಮಕ್ಕಳನ್ನ ಹಣದ ಅಮಿಷವೊಡ್ಡಿ ಬಸ್ ಗಳಲ್ಲಿ ಕೂರಿಸಿಕೊಂಡು ಎತ್ತೆನಹಳ್ಳಿ ಮಾರಮ್ಮನ ದೇವಸ್ಥಾನ ಮತ್ತು ಮಧುಗಿರಿಯ ದಂಡಿನ ಮಾರಮ್ಮನ ದೇವಸ್ಥಾನ ಹಾಗೂ ಇತರೆ ಕಡೆಗಳಲ್ಲಿ ಕರೆತಂದು ಪ್ರತಿವ್ಯಕ್ತಿಗೆ 1 ಸಾವಿರದಂತೆ ಹಣ ನೀಡುತಿದ್ದು, ಹಣ ನೀಡುವ ಸಂದರ್ಭದಲ್ಲಿ ಜೆಡಿಎಸ್ ಅಭ್ಯರ್ಥಿ ಎನ್ ಗೊವಿಂದರಾಜುರವರಿಗೆ ಮತ ನೀಡುತ್ತೇನೆ ಎಂದು ಬಲವಂತವಾಗಿ ಪ್ರಮಾಣ ಮಾಡಿಸಿಕೊಂಡು ಹಣ ನೀಡುತಿದ್ದಾರೆ. ಗರ್ಭಿಣಿ ಸ್ತ್ರೀಯರಿಗೆ ದೇವಸ್ಥಾನದ ಎದುರು ತನ್ನೊಡಲ ಹಸು ಗೂಸಿನ ಮೇಲೆ ಕೈಯಿಟ್ಟು ಹಾಣೆ ಪ್ರಮಾಣ ಮಾಡಿಸುತ್ತಿರುವುದು ದುರಂತ. ಈ ರೀತಿ ಆಣೆ ಪ್ರಮಾಣದ ಬಗ್ಗೆ ಬಿಜೆಪಿ…
ಡಾ. ಯೋಗೇಶ್ ಎ. ಉಪನ್ಯಾಸಕರು, ಸ.ಪ.ಪೂ.ಕಾಲೇಜು ಕಣಕುಪ್ಪೆ ತುಮಕೂರು ಜಿಲ್ಲಾ ಹದಿನಾಲ್ಕನೇ ಕನ್ನಡ ಸಾಹಿತ್ಯ ಸಮ್ಮೇಳನದ ಬರದ ಸಿದ್ದತೆ. ತುಮಕೂರು ಕನ್ನಡ ಸಾಹಿತ್ಯ ಪರಿಷತ್ತು ಕಳೆದ ಒಂದು ವರ್ಷದಿಂದಲೂ ಹಲವು ಕ್ರಿಯಾಶೀಲ, ಸೃಜನಾತ್ಮಕವಾದ ಸಾಹಿತ್ಯದ ಚಟುವಟಿಕೆಗಳನ್ನು ನಡೆಸಿಕೊಂಡು ಬರುತಿದ್ದು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿಯೂ ಸರಣಿಯೋಪಾದಿಯಲ್ಲಿ ತಾಲ್ಲೂಕು ಸಮ್ಮೇಳನಗಳನ್ನು ನಡೆಸುವಲ್ಲಿ ಯಶಸ್ವಿಯಾಗಿದೆ. ಅದರಂತೆ ಜಿಲ್ಲಾ ಸಮ್ಮೇಳನ ಡಿಸೆಂಬರ್ 15 ಮತ್ತು 16 ರಂದು ಎರಡು ದಿನಗಳ ಕಾಲ ನಡೆಯುತಿದ್ದು ಹಿಂದೆಂದೂ ಕಾಣದ ರೀತಿಯಲ್ಲಿ ಸಮರೋಪಾದಿಯಲ್ಲಿ ಅಗತ್ಯ ಪೂರಕ ತಯಾರಿ ನಡೆಯುತ್ತಿದೆ. ಆ ನಿಟ್ಟಿನಲ್ಲಿ ಹಾವೇರಿಯಲ್ಲಿ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೂ ಮೊದಲು ಜಿಲ್ಲೆಯಲ್ಲಿ ಸಾಹಿತ್ಯ ಸಮ್ಮೇಳನ ನಿಗದಿಯಾಗಿದ್ದು ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧÀ?ಯಕ್ಷರ ಮುಂದಾಳತ್ವದಲ್ಲಿ ನುಡಿ ಹಬ್ಬಕ್ಕೆ ಬೇಕಾದ ಸಿದ್ದತೆಗಳು ಭರಪೂರವಾಗಿ ನಡೆಯುತ್ತಿವೆ. ಸಾಹಿತ್ಯ ಸಮ್ಮೇಳನದ ದಿನಾಂಕ ನಿಗದಿಯಾದ ಒಂದೂವರೆ ತಿಂಗಳಿನಿಂದಲೂ ಸುಮಾರು ಪರಿಷತ್ತಿನಲ್ಲಿ ಸುಮಾರು ಹತ್ತು-ಹನ್ನೆರಡು ಸರಣಿ ಸಭೆಗಳನ್ನು ನಡೆಸಿ ಜಿಲ್ಲೆಯ ಎಲ್ಲಾ ಸಾಹಿತ್ಯಾಸಕ್ತರನ್ನು ಸೇರಿಸಿಕೊಂಡು ಸುಮಾರು ಹದಿನಾಲ್ಕು…











