ತುಮಕೂರು ಸರಕಾರ ಹಂತ ಹಂತವಾಗಿ ಗ್ರಾಮ ಲೆಕ್ಕಾಧಿಕಾರಿಗಳ ಬೇಡಿಕೆಗಳನ್ನು ಈಡೇರಿಸುತ್ತಾ ಬಂದಿದೆ. ಅಲ್ಲದೆ ಇದುವರೆಗೂ ಇದ್ದ ಗ್ರಾಮ ಲೆಕ್ಕಾಧಿಕಾರಿಯ ಬದಲಾಗಿದೆ ಗ್ರಾಮ ಆಡಳಿತ ಅಧಿಕಾರಿ ಎಂಬ ಪದನಾಮ ನೀಡಲಾಗಿದೆ. ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಜನಸ್ನೇಹಿಯಾಗಿ ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕೆಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ನಗರದ ಗಾಜಿನಮನೆಯಲ್ಲಿ ಕರ್ನಾಟಕ ರಾಜ್ಯ ಗ್ರಾಮಲೆಕ್ಕಾಧಿಕಾರಿಗಳ ಕೇಂದ್ರ ಸಂಘ ಹಾಗೂ ತುಮಕೂರು ಜಿಲ್ಲಾ ಘಟಕ ಆಯೋಜಿಸಿದ್ದ ಕನ್ನಡ ರಾಜೋತ್ಸವ,2023ನೇ ವರ್ಷದ ಕ್ಯಾಲೆಂಡರ್ ಬಿಡುಗಡೆ,ವಿಚಾರಸಂಕಿರಣ ಹಾಗೂ ರಾಜ್ಯ ಸಂಘದ ಸರ್ವ ಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡುತಿದ್ದ ಅವರು,ನೀವು ನೀಡುವ ಸೇವೆಯಿಂದ ಜನರ ಬಾಯಲ್ಲಿ ಸರಕಾರ ಒಳ್ಳೆಯ ಕೆಲಸ ಮಾಡಿದೆ ಎಂಬ ಹೆಸರು ಬರುವಂತಾಗಬೇಕು.ಆಗ ನಿಮ್ಮ ಪದನಾಮ ಬದಲಾಗಿದ್ದಕ್ಕೂ ಸಾರ್ಥಕವಾಗುತ್ತದೆ ಎಂದರು. ನಮ್ಮ ಸರಕಾರ ಅನೇಕ ಜನರ ಪರ ಯೋಜನಗಳನ್ನು ರೂಪಿಸುತ್ತಾ ಬಂದಿದೆ.ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ,72 ಗಂಟೆಗಳಲ್ಲಿ ಪಿಂಚಿಣಿ ಸೌಲಭ್ಯ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ.ಇವುಗಳು ಸಮರ್ಪಕವಾಗಿ ಜನರ ಬಾಗಿಲಿಗೆ…
Author: News Desk Benkiyabale
ಗುಬ್ಬಿ ಮಾನವೂ ಇಲ್ಲ ಮೌಲ್ಯವೂ ಇಲ್ಲದ ತಾಲ್ಲೂಕಿನ ಶಾಸಕ ಎಸ್.ಆರ್.ಶ್ರೀನಿವಾಸ್ ಕಾಂಗ್ರೆಸ್ ಪಕ್ಷಕ್ಕೆ ಅವಶ್ಯಕತೆ ಇಲ್ಲ ಎಂದು ವಕೀಲ ಹಾಗೂ ಕಾಂಗ್ರೆಸ್ ಪಕ್ಷದ ಆಕಾಂಕ್ಷಿ ಪ್ರಸನ್ನಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದ ಕಾಂಗ್ರೆಸ್ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು 12000 ಗೂಡುಗಳಲ್ಲಿರುವ ವ್ಯಕ್ತಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿ ಎಂದ ಸವಾಲು ಎಸೆದ ಅವರು ದ್ವಂದ್ವ ನಿಲುವಿನಿಂದ ಮುಖಂಡರುಗಳನ್ನು ದಾರಿತಪ್ಪಿಸುತ್ತಿದ್ದಾರೆ. ಅವರ ಭಾಷೆಯಲ್ಲಿ ಹೇಳುವುದಾರೆ ಅಪ್ಪನಿಗೆ ಹುಟ್ಟಿದವರು ಗಂಡಸು ಎಂದು ಮುಂಬರುವ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಲಿ ಎಂದು ನೇರ ಸವಾಲು ಹಾಕಿದ ಅವರು ಗುಬ್ಬಿ ತಾಲ್ಲೂಕಿನಲ್ಲಿ ಯಾವುದೇ ಗುರುತಿಸಿಕೊಳ್ಳುವಂತಹ ಕೆಲಸ ನಿರ್ವಹಿಸಿದ್ದಾರೆಯೇ ಕೇವಲ ಪತ್ರಿಕೆಗಳಲ್ಲಿ ಹಾಗೂ ಶಂಕುಸ್ಥಾಪನೆಯ ಭಾವಚಿತ್ರಗಳನ್ನು ಹಾಕಿ ಮತದಾರರ ಕಣ್ಣಿಗೆ ಮಣ್ಣೆರೆಚುತ್ತಿದ್ದಾರೆ. 10 ಮುಖವುಳ್ಳ ರಾಜಕಾರಣಿ ಇದ್ದರೆ ಅದು ಕೇವಲ ಗುಬ್ಬಿಯ ಶಾಸಕ ಎಂದು ಕಿಡಿಕಾರಿದರು. ತಾಲ್ಲೂಕಿನಾದ್ಯಂತ ಭೂಹಗರಣ ನಡೆದಿದ್ದು ತಮಗೆ ಬೇಕಾದಂತಹ ವ್ಯಕ್ತಿಗಳಿಗೆ ಜಮೀನನ್ನು ನೀಡಿ ನಾನು ತುಂಬಾ ಕೈತೊಳೆದಿದ್ದೇನೆ ಎಂಬುದಕ್ಕೆ ದೂರನ್ನು ದಾಖಲಿಸಿ ಸಮಾಜದಲ್ಲಿ ನಾನು ಒಬ್ಬ…
ತುಮಕೂರು ಇಲ್ಲಿನ ಹಿರೇಮಠದ ವತಿಯಿಂದ ಬೆಂಗಳೂರು-ತುಮಕೂರು ರಸ್ತೆಯ ಹಳೆನಿಜಗಲ್ ಸಮೀಪದ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಾಲಯದ ಬಳಿ ಎರಡೂವರೆ ಎಕರೆ ಜಾಗದಲ್ಲಿ ನಿರ್ಮಾಣಗೊಂಡಿರುವ ತಪೆÇೀವನದ ಉದ್ಘಾಟನಾ ಕಾರ್ಯಕ್ರಮ ಡಿ. 12 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಹಿರೇಮಠಾಧ್ಯಕ್ಷ ಡಾ. ಶ್ರೀ ಶಿವಾನಂದ ಶಿವಾಚಾರ್ಯ ಮಹಾಸ್ವಾಮೀಜಿ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಳೇನಿಜಗಲ್‍ನ ಭಕ್ತರು ಮತ್ತು ರೈತರಿಂದ ಖರೀದಿಸಿದ 2.20 ಎಕರೆ ಜಾಗದಲ್ಲಿ ಸಿದ್ದಗಂಗಾ ಮಠದ ಹಿರಿಯ ಶ್ರೀಗಳಾದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರು ಭೂಮಿ ಪೂಜೆ ನೆರವೇರಿಸಿದ್ದರು. 2016 ರಿಂದ ತಪೆÇೀವನ ನಿರ್ಮಾಣ ಕಾರ್ಯ ನಡೆದು ಇದೀಗ ಪೂರ್ಣಗೊಂಡಿದ್ದು, ಡಿ. 12 ರಂದು ಉದ್ಘಾಟನೆಯಾಗುತ್ತಿದೆ ಎಂದರು. ತಪೆÇೀವನದ ಉದ್ಘಾಟನಾ ಸಮಾರಂಭದ ದಿವ್ಯ ಸಾನ್ನಿಧ್ಯವನ್ನು ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಶ್ರೀ ಶಾಂತಲಿಂಗಶ್ವೇರ ವಿರಕ್ತ ಮಠದ ಶ್ರೀ ಜಡೆಯ ಶಾಂತಲಿಂಗ ಮಹಾಸ್ವಾಮೀಜಿ ಹಾಗೂ ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ…
ತುಮಕೂರು ತುಮಕೂರು ವಿನಾಕಾರಣ ಪದೇಪದೇ ಕನ್ನಡಿಗರ ಮೇಲೆ ದಬ್ಬಳಿಕೆ ನಡೆಸುತ್ತಾ ಗಡಿ ವಿವಾದವನ್ನು ಕೆದುಕುತ್ತಿರುವ ಎಂಇಎಸ್ ಸಂಘಟನೆಯನ್ನು ವಿರುದ್ಧ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡ ಬಣದಿಂದ ನಗರದ ಹೊರಪೇಟೆಯ ಗುಂಚಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಮಂಜುನಾಥ್ ಗೌಡ ನೇತೃತ್ವದಲ್ಲಿ ಸೇರಿದ ನೂರಾರು ಮಂದಿ ಕರವೇ ಕಾರ್ಯಕರ್ತರು ಗಡಿ ಭಾಗದಲ್ಲಿ ಕನ್ನಡಿಗರ ಮೇಲೆ ದಬ್ಬಾಳಿಕೆ ನಡೆಸುತ್ತಿರುವ ಎಂಇಎಸ್ ಪುಂಡರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಹಾಗೂ ಎಂಇಎಸ್ ಸಂಘಟನೆಯನ್ನು ನಿμÉೀಧಿಸಬೇಕೆಂದು ಆಗ್ರಹಿಸಿ ಎಂಇಎಸ್ ಮುಖಂಡರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧ್ಯಕ್ಷ ಮಂಜುನಾಥ ಗೌಡ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರದ ಒತ್ತಡದಿಂದಲೇ ಕೇಂದ್ರ ಸರ್ಕಾರ ರಚಿಸಿದ ಮೆಹರ್ ಚಂದ್ ಮಹಾಜನ್ ಏಕ ಸದಸ್ಯ ಆಯೋಗ ಬೆಳಗಾವಿ ಕರ್ನಾಟಕಕ್ಕೆ ಸೇರಬೇಕೆಂದು ತೀರ್ಪು ನೀಡಿದೆ ಆದರೂ…
ತುಮಕೂರು: ಮೆದುಳು ಜ್ವರದ ವ್ಯಾಕ್ಸಿನ್ ಪಡೆದು 10 ಮಕ್ಕಳು ಅಸ್ವಸ್ಥಗೊಂಡಿರುವಂತಹ ಘಟನೆ ಜಿಲ್ಲೆಯ ತಿಪಟೂರು ತಾಲ್ಲೂಕಿನ ಎರಡು ಶಾಲೆಗಳಲ್ಲಿ ಪ್ರತ್ಯೇಕ ನಡೆದಿದೆ. ತಿಪಟೂರು ತಾಲ್ಲೂಕಿನ ಗುರುಗದಹಳ್ಳಿ ಸರ್ಕಾರಿ ಪ್ರೌಡಶಾಲೆಯಲ್ಲಿ 8 ವಿದ್ಯಾರ್ಥಿಗಳು ಹಾಗೂ ಅದೇ ತಾಲ್ಲೂಕಿನ ನಗರದ ಸರ್ಕಾರಿ ಬಾಲಕೀಯರ ಪ್ರೌಡಶಾಲೆಯ ಇಬ್ಬರು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಸದ್ಯ ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ತಿಪಟೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಎರಡೂ ಶಾಲೆಗಳಲ್ಲಿ ಮೆದುಳು ಜ್ವರದ ಜೆಇ ವ್ಯಾಕ್ಸಿನ್ನನ್ನು ವಿದ್ಯಾರ್ಥಿಗಳು ಪಡೆದುಕೊಂಡಿದ್ದರು. ಬಳಿಕ ತಲೆ ಸುತ್ತು ಬಂದು ಅಸ್ವಸ್ಥಗೊಂಡಿದ್ದಾರೆ. ಆಸ್ಪತ್ರೆಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸದ್ಯ ಯಾವುದೇ ತೊಂದರೆ ಇಲ್ಲಾ ಎಂದು ವೈದ್ಯರು ಸ್ಪಷ್ಟನೆ ನೀಡಿದ್ದಾರೆ. ಜೆಇ ಮೆದುಳು ಜ್ವರ ತಡೆಯಲು ಕೇಂದ್ರ ಸರ್ಕಾರದಿಂದ ಉಚಿತ ಲಸಿಕೆ: ಡಾ. ಕೆ. ಸುಧಾಕರ್ ಮಕ್ಕಳಲ್ಲಿ ನರ ದೌರ್ಬಲ್ಯ, ಬುದ್ಧಿ ಮಾಂದ್ಯತೆ ಸೇರಿದಂತೆ ಶಾಶ್ವತ ಅಂಗವಿಕಲತೆಯನ್ನು ಜೆಇ ಮೆದುಳು ಜ್ವರ ಉಂಟು ಮಾಡುತ್ತದೆ. ಹಾಗಾಗಿ ಈ ಜೆಇ (ಜೆನವ್ಯಾಕ್ ಜೆಇ) ಮೆದುಳು…
ಕೋಲಾರ ಶಿಕ್ಷಕರನ್ನು ಗುರು ಬ್ರಹ್ಮ ಗುರು ವಿಷ್ಣು ಗುರು ದೇವೋ ಮಹೇಶ್ವರ ಎಂದು ಪೂಜಿಸುವ ನಾಡು ನಮ್ಮದು ಆದ್ರೆ ಇಲ್ಲೊಬ್ಬರು ಈ ಶಿಕ್ಷಕರ ವೃತ್ತಿಗೆ ಕಳಂಕ ತರುವ ಕೆಲಸ ಮಾಡಿದ್ದಾರೆ. ಪಾಠ ಮಾಡು ಅಂದ್ರೆ ವಿದ್ಯಾರ್ಥಿನಿ ಜೊತೆಗೆ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿ ಬಂದಿದೆ. ಶಿಕ್ಷಕ ಪ್ರಕಾಶ್ಎಂಬಾತ ವಿದ್ಯಾರ್ಥಿನಿಯರ ಮೈ ಮುಟ್ಟಿ ಮಾತಾಡಿಸಿ ಅನುಚಿತವಾಗಿ ವರ್ತಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ ಕೋಲಾರ ತಾಲ್ಲೂಕು ನರಸಾಪುರದ ಕರ್ನಾಟಕ ಪಬ್ಲಿಕ್ ಶಾಲೆಯ ಕನ್ನಡ ಶಿಕ್ಷಕ ಪ್ರಕಾಶ್, ವಿದ್ಯಾರ್ಥಿನಿಯರ ಮೈ ಮುಟ್ಟಿ ಮಾತನಾಡುವುದು ಅಶ್ಲೀಲವಾಗಿ ವರ್ತನೆ ಮಾಡುತ್ತಿದ್ದಾರೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ. ವಿದ್ಯಾರ್ಥಿನಿಗೆ ಹನಿಮೂನ್ ಹೇಗಿರುತ್ತೆ?ಅಲ್ಲದೇ 10ನೇ ತರಗತಿ ವಿದ್ಯಾರ್ಥಿನಿಗೆ ಹನಿಮೂನ್ ಹೇಗಿರುತ್ತೆ ಎಂದು ಪ್ರಶ್ನೆ ಕೇಳಿದ್ದಾನೆ ಎಂದು ಆರೋಪಿಸಲಾಗಿದ್ದು, ಕೂಡಲೇ ಶಿಕ್ಷಕನನ್ನು ಅಮಾನತು ಮಾಡಬೇಕೆಂದು ವಿದ್ಯಾರ್ಥಿಗಳ ಪೋಷಕರು ಆಗ್ರಹಿಸಿದ್ದಾರೆ.ಸಾಂದರ್ಭಿಕ ಚಿತ್ರವಿದ್ಯಾರ್ಥಿನಿ ಪೋಷಕರಿಂದ ದೂರುಕನ್ನಡ ಶಿಕ್ಷಕ ಪ್ರಕಾಶ್ ವಿರುದ್ದ ವಿದ್ಯಾರ್ಥಿನಿ ಪೋಷಕರು ದೂರು ನೀಡಿದ್ದಾರೆ. ವಿಷಯ ತಿಳಿದು ತಕ್ಷಣ…
ಚಿಕ್ಕನಾಯಕನಹಳ್ಳಿ ಸಾಮಾಜಿಕ ನ್ಯಾಯಕ್ಕಾಗಿ ಅಂಬೇಡ್ಕರ್ ಅನುಯಾಯಿಗಳು ಹೋರಾಟ ಮಾಡುತ್ತಾ ಬರುತ್ತಿದ್ದಾರೆ ಅವರಿಂದ ಪ್ರೇರಿತನಾಗಿ ನಾನು ಕೂಡ ದೇವಾಲಯ ಪ್ರವೇಶಕ್ಕೆ ಹಾಗೂ ನೀರು ಮುಟ್ಟುವ ಚಳುವಳಿಯಗೆ ಅವರ ಹಾದಿಯನ್ನೇ ಹಿಡಿಯ ಬೇಕಾಗಿತ್ತು ಎಂದು ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಹಾಗೂ ದಲಿತ ಸಂಘಟನೆಯ ಜಿಲ್ಲಾ ಸಂಚಾಲಕ ಕುಂದುರ್ನಳ್ಳಿ ತಿಮ್ಮಯ್ಯ ಹೇಳಿದರು. ಅವರು ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಸಂವಿಧಾನ ಶಿಲ್ಪಿ ಬಿ ಆರ್ ಅಂಬೇಡ್ಕರ್ ಅವರ ಮಹಾಪರಿ ನಿರ್ವಾಣ ದಿನದ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಾ ನನ್ನ ಊರಿನಲ್ಲಿಯೂ ಸಹ ನೀರು ಮುಟ್ಟುವಾಗಿರಲಿಲ್ಲ ದೇವಾಲಯ ಪ್ರವೇಶಕ್ಕೆ ಆಹ್ವಾನವಿರಲಿಲ್ಲ ಗೋಕಟ್ಟೆಯನ್ನು ಮುಟ್ಟುವಂತಿರಲಿಲ್ಲ ಎಂದು ಹೇಳುತ್ತಾ ಅಂಬೇಡ್ಕರ್ ಅವರ ಜೀವನ ಚರಿತ್ರೆಯಿಂದ ಪ್ರೇರಿತನಾಗಿ ನಾನು ಕೂಡ ಸ್ವಾಭಿಮಾನಿ ಬದುಕಿಗಾಗಿ ಆತ್ಮ ಗೌರವ ಉಳಿಸಿಕೊಳ್ಳಲು ದೇವಾಲಯ ಪ್ರವೇಶ ಹಾಗೂ ನೀರು ಮುಟ್ಟುವ ಚಳುವಳಿಗೆ ಹೋರಾಟ ಮಾಡಿದೆ ಅದಕ್ಕಾಗಿ ಸವರ್ಣಿಯರಿಂದ ನನ್ನ ಗ್ರಾಮದಲ್ಲಿ ಪೆÇಲೀಸ್ ಠಾಣೆ ಕೂಡ ನಿರ್ಮಾಣವಾಗಿತ್ತು ಆ ಸಂದರ್ಭದಲ್ಲಿ ಅಲ್ಲದೇ ನನ್ನ ಕೊಲೆಗೆ ಸುಪಾರಿ ಕೊಟ್ಟಂತ ದಿನ…
ತುಮಕೂರು ದೇಶ ವಿದೇಶ ಸೇರಿದಂತೆ ನಾಡಿನಲ್ಲಿ ಸಂವಿಧಾನ ಶಿಲ್ಪಿ ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನಾಚರಣೆಯನ್ನು ಆಚರಣೆ ಮಾಡುತ್ತಿದ್ದು ಇಡೀ ಭಾರತ ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನದ ಅಡಿಯಲ್ಲಿ ಬದುಕುತ್ತಿದ್ದು ಅಂಬೇಡ್ಕರ್ ಅವರು ಡಿಸೆಂಬರ್ 6.ರಂದು ದೇಹ ತ್ಯಜಿಸಿ ಹೋದ ಕಾರಣಕ್ಕಾಗಿ ಪರಿನಿರ್ವಣ ದಿನಾಚರಣೆಯನ್ನು ಆಚರಿಸುತ್ತಿದ್ದು ಇಂತಹ ಪುಣ್ಯಪುರುಷ ನಾಡಿಗೆ ಕೊಟ್ಟ ಕೊಡುಗೆ ಅಪಾರವಾದದ್ದು ಮತ್ತು ಅವಿಸ್ಮರಣೀಯವಾದದ್ದು ಎಂದು ತುಮಕೂರು ಉಪವಿಭಾಗಾಧಿಕಾರಿ ಅಜಯ್ ಅವರು ತಿಳಿಸಿದರು. ಅಂಬೇಡ್ಕರ್ ಅವರ ಪುಣ್ಯ ಸ್ಮರಣೆಯ ಪ್ರಯುಕ್ತ ಸ್ವಾಭಿಮಾನಿ ದಲಿತ ಸಂಘರ್ಷ ಸಮಿತಿಯು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಆಯೋಜನೆ ಮಾಡಲಾಗಿದ್ದ ದಿನಾಚರಣೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ರಸ್ತೆಗೆ ಅಂಬೇಡ್ಕರ್ ಅವರ ಹೆಸರು ನಾಮಕರಣ ಮಾಡಿ ಬೃಹದಕಾರದ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಪರಿನಿರ್ವಾಣ ದಿನಾಚರಣೆ ಆಚರಿಸಿ ನಂತರ ಮಾತನಾಡಿದರು. ತುಮಕೂರು ಬೆಳಗಾವಿಯ ನಂತರ ಎರಡನೆಯ ದೊಡ್ಡ ಜಿಲ್ಲೆಯಾಗಿದ್ದು ಇಂತಹ ಜಿಲ್ಲೆಯಲ್ಲಿ ಅದು ಡಿಸಿ ಕಚೇರಿಯ ಮುಂದೆ ಅಥವಾ ಬೇರೆ ಕಡೆಗಳಲ್ಲಿ…
ತುಮಕೂರು ನಗರದ ಟೌನ್‍ಹಾಲ್ ವೃತ್ತದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರಕಟವಾದ ಗುಜರಾತ್ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ, ಸಂಭ್ರಮಿಸಿದರು. ಈ ವೇಳೆ ಮಾತನಾಡಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಶಂಕರ್ ಹೆಬ್ಬಾಕ,ಪ್ರಧಾನಿ ನರೇಂದ್ರಮೋದಿ ಅವರ ನೇತೃತ್ವದಲ್ಲಿ ಗುಜರಾತ್ ಚುನಾವಣೆಯಲ್ಲಿ ಬಿಜೆಪಿ ಅತ್ಯಂತ ಅಧಿಕ ಸ್ಥಾನಗಳಲ್ಲಿ ಜಯಗಳಿಸಿದ್ದಾರೆ. ಗುಜರಾತ್ ಜನತೆ ಬಿಜೆಪಿ ಪಕ್ಷದ ಆಡಳಿತದ ಮೇಲೆ ನಂಬಿಕೆ ಇಟ್ಟು ಮತ ಕೊಟ್ಟು ಮತ್ತೊಮ್ಮೆ ಅಧಿಕಾರ ನೀಡಿದ್ದಕ್ಕಾಗಿ ಗುಜರಾತ್‍ನ ಎಲ್ಲಾ ಜನತೆಗೆ ತುಮಕೂರು ಜಿಲ್ಲಾ ಬಿಜೆಪಿ ವತಿಯಿಂದ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು. ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷ ಅಂಬಿಕ ಹುಲಿನಾಯ್ಕರ್ ಮಾತನಾಡಿ,ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಅಧಿಕ ಸ್ಥಾನಗಳಲ್ಲಿ ಬಿಜೆಪಿ ಗೆದ್ದು,ಅಧಿಕಾರದಲ್ಲಿ ಮುಂದುವರೆಯುವಂತೆ ಮಾಡಿರುವುದಕ್ಕೆ ಗುಜರಾತ್ ಜನತೆಗೆ ಅಭಿನಂದನೆ ಸಲ್ಲಿಸುತ್ತೇನೆ.ಗುಜರಾತನಲ್ಲಿ ಈ ಬಾರಿ ಅತಿ ಹೆಚ್ಚು ಮಹಿಳೆಯರು ಗೆಲುವು ಸಾಧಿಸಿದ್ದಾರೆ. ಇದು ಬಿಜೆಪಿಯಲ್ಲಿ ಮಹಿಳೆಯರಿಗೆ ಸಂದಿರುವ ಗೌರವ.ಇದಕ್ಕಾಗಿ ಪ್ರಧಾನಿ ನರೇಂದ್ರಮೋದಿ…
ತುಮಕೂರು ಆನಾರೋಗ್ಯಕ್ಕೆ ತುತ್ತಾಗಿ ಚೇತರಿಸಿಕೊಳ್ಳುತ್ತಿರುವ ಜೆಡಿಎಸ್ ಪಕ್ಷದ ಹಿರಿಯ ಮುಖಂಡ ನರಸೇಗೌಡ ಅವರ ನಿವಾಸಕ್ಕೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ತುಮಕೂರು ನಗರದ ಜಯನಗರ ಪೂರ್ವದಲ್ಲಿರುವ ಜೆಡಿಎಸ್ ಪಕ್ಷದ ಮಾಜಿ ನಗರಾಧ್ಯಕ್ಷ ಹಾಗೂ ಒಕ್ಕಲಿಗ ಮುಖಂಡ ನರಸೇಗೌಡ ಅವರ ಮನೆಗೆ ಪಕ್ಷದ ಹಿರಿಯ ಮುಖಂಡರೊಂದಿಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಹೆಚ್.ಡಿ.ಕುಮಾರ ಸ್ವಾಮಿ, ಶೀಘ್ರ ಗುಣಮುಖರಾಗುವಂತೆ ಕೋರಿದರು. ಈ ವೇಳೆ ನರಸೇಗೌಡರ ಕುಟುಂಬದವರು ಮತ್ತು ಬೆಂಬಲಿಗರ ಮನವಿಯನ್ನು ಆಲಸಿದ ಹೆಚ್.ಡಿ.ಕುಮಾರಸ್ವಾಮಿ,ನಮ್ಮ ಸರಕಾರ ಅಧಿಕಾರಕ್ಕೆ ಬಂದರೆ ನರಸೇಗೌಡರಿಗೆ ಯಾವುದಾದರೂ ನಿಗಮ ಅಥವಾ ಮಂಡಳಿಯ ಅಧ್ಯಕ್ಷರನ್ನಾಗಿ ಮಾಡುವುದಾಗಿ ಭರವಸೆ ನೀಡಿದರು.ಕಳೆದ 20ಕ್ಕು ಹೆಚ್ಚು ವರ್ಷಗಳಿಂದಲೂ ನರಸೇಗೌಡರು ಪಕ್ಷಕ್ಕಾಗಿ ದುಡಿದಿದ್ದಾರೆ. ಅವರ ಸೇವೆಯನ್ನು ನಾವು ಕಡೆಗಣಿಸುತ್ತಿಲ್ಲ.ಆದರೆ ಕಳೆದ ಎರಡು ಚುನಾವಣೆಯಲ್ಲಿ ಅತ್ಯಂತ ಕಡಿಮೆ ಅಂತರದಲ್ಲಿ ಸೋಲು ಕಂಡಿರುವ ಎನ್.ಗೋವಿಂದರಾಜು ಅವರಿಗೆ ಮತ್ತೊಮ್ಮೆ ಅವಕಾಶ ಕಲ್ಪಿಸಿಕೊಡಬೇಕೆಂಬ ಒಂದೇ ಉದ್ದೇಶದಿಂದ ಅವರಿಗೆ ಈ ಬಾರಿ ಟಿಕೇಟ್ ನೀಡಲಾಗುತ್ತಿದೆ.ನಮ್ಮ ಪಕ್ಷಕ್ಕೆ ಅಧಿಕಾರಕ್ಕೆ ಬರಲಿದೆ.ಈ ಬಾರಿ…











