Author: News Desk Benkiyabale

ತುಮಕೂರು ವಿಕಲಚೇತನರು ಯಾರೂ ಕೂಡ ತಮ್ಮ ದ್ಯೆಹಿಕ ಸ್ಥಿತಿ ಬಗ್ಗೆ ಚಿಂತಿತರಾಗದೆ, ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಕೌಶಲ್ಯಯುತರಾಗಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಕರೆ ನೀಡಿದರು. ನಗರದ ಬಾಲಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮತ್ತಿತರ ಸ್ವಯಂ ಸೇವಾ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಇಂದು ಏರ್ಪಡಿಸಿದ್ದ “ವಿಶ್ವ ವಿಕಲಚೇತನರ ದಿನಾಚರಣೆ-2022” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿಕಲಚೇತನರು ಘನತೆ-ಗೌರವದಿಂದ ನೆಮ್ಮದಿಯಾಗಿ ಜೀವಿಸಲು ಸರ್ಕಾರವು ವಿವಿಧ ಯೋಜನೆಗಳನ್ನು ಜಾರಿಗೆ ತಂದಿದೆ, ಪ್ರತಿಯೊಬ್ಬರೂ ತಮ್ಮ ಹಕ್ಕುಗಳು ಹಾಗೂ ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಅರಿವು ಹೊಂದಿರಬೇಕು. ವಿಕಲತೆ ಶರೀರಕ್ಕೆ ಹೊರತು ಮನಸ್ಸಿಗಲ್ಲ, ವಿಕಲಚೇತನರಲ್ಲಿ ವಿಶೇಷ ಶಕ್ತಿ ಇದ್ದು, ಜನ್ಮತ ಆಥವಾ ಇನ್ನಾವುದೋ ಕಾರಣಗಳಿಂದ ವಿಕಲರಾದವರು, ಆ ಬಗ್ಗೆ ಪಶ್ಚಾತ್ತಾಪ ಪಡದೇ ಸಮಸ್ಯೆಯನ್ನು ಎದುರಿಸಿ ಬದುಕನ್ನು ರೂಪಿಸಿಕೊಳ್ಳಬೇಕು, ಜೀವನದ…

Read More

ತುಮಕೂರು ಸ್ವಯಂ ರಕ್ಷಣೆಯ ಕಲೆಯಾಗಿರುವ ಕರಾಟೆ ಕ್ರೀಡೆಯಲ್ಲಿ ನಮ್ಮ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಲು ಕ್ರೀಡಾ ಪ್ರೋತ್ಸಾಹಕರ ಅಗತ್ಯವಿದೆ ಎಂದು ಕರ್ನಾಟಕ ರಾಜ್ಯ ಕರಾಟೆ ಅಸೋಸಿಯೇಷನ್ ಅಧ್ಯಕ್ಷ ಚಂಗಪ್ಪ ತಿಳಿಸಿದ್ದಾರೆ. ನಗರದ ತುಮಕೂರು ವಿವಿಯ ಡಾ.ಶ್ರೀಶಿವಕುಮಾರಸ್ವಾಮೀಜಿ ಸಭಾಂಗಣದಲ್ಲಿ ಲಯನ್ಸ್ ಮಾರ್ಷಲ್ ಆರ್ಟ್ ಅಸೋಸಿಯೇಷನ್ ವತಿಯಿಂದ ಹಮ್ಮಿಕೊಂಡಿದ್ದ 6ನೇ ರಾಷ್ಟ್ರೀಯ ಮುಕ್ತ ಅಹ್ವಾನಿತ ಕರಾಟೆ ಚಾಂಪಿಯನ್ ಶಿಫ್-2022 ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡುತಿದ್ದ ಅವರು,ತುಮಕೂರು ಕರಾಟೆ ಅಸೋಸಿಯೇಷನ್ ಅಧ್ಯಕ್ಷರು ಆಗಿರುವ ಸಿ.ಜಿ.ಪ್ರಕಾಶ್ ಅವರು ನಿರಂತರವಾಗಿ ಹಲವು ವರ್ಷಗಳಿಂದ ಇಂತಹ ಟೂರ್ನಿಗಳನ್ನು ನಡೆಸಿಕೊಂಡು ಬರುತಿದ್ದಾರೆ. ಇಂತಹವರಿಗೆ ಕ್ರೀಡಾಭಿಮಾನಿಗಳು ಪ್ರೋತ್ಸಾಹ ನೀಡಿದರೆ ಇನ್ನೂ ಹೆಚ್ಚಿನ ಕ್ರೀಡಾಕೂಟಗಳನ್ನು ಆಯೋಜಿಸ ಬಹುದಾಗಿದೆ ಎಂದರು. ಕ್ರೀಡಾ ಪ್ರೋತ್ಸಾಹಕ ಮತ್ತು ಕನ್ನಡ ಸೇನೆ ಜಿಲ್ಲಾಧ್ಯಕ್ಷ ಧನಿಯಕುಮಾರ್ ಮಾತನಾಡಿ,ಲಯನ್ಸ್ ಮಾರ್ಷಲ್ ಆರ್ಟ್ ಕರಾಟೆ ಅಸೋಸಿಯೇಷನ್‍ನ ಪ್ರಕಾಶ್ ನಿರಂತರವಾಗಿ ತುಮಕೂರು ನಗರದಲ್ಲಿ ರಾಷ್ಟ್ರಮಟ್ಟದ ಕರಾಟೆ ಟೂರ್ನಮೆಂಟ್ ಆಯೋಜಿಸುತ್ತಾ ಬಂದಿದ್ದಾರೆ.ಇವರ ಬಳಿ ಸುಮಾರು 3500-4000 ವಿದ್ಯಾರ್ಥಿಗಳು ಕರಾಟೆ ಕಲೆ ಕಲಿಯುತಿದ್ದಾರೆ. ಇತ್ತೀಚಿನ ದಿನಗಳಲ್ಲಿ…

Read More

ತುಮಕೂರು ಕಲ್ಪತರುನಾಡಿನ ವಿವಿಧೆಡೆ ಮುಂಜಾನೆಯಿಂದಲೇ ಆಂಜನೇಯಸ್ವಾಮಿ ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿಸುವ ಮೂಲಕ ಹನುಮ ಜಯಂತಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ನಗರದ ಇತಿಹಾಸ ಪ್ರಸಿದ್ಧ ಕೋಟೆ ಆಂಜನೇಯಸ್ವಾಮಿ ದೇವಾಲಯ, ಶೆಟ್ಟಿಹಳ್ಳಿ ಆಂಜನೇಯಸ್ವಾಮಿ ದೇವಾಲಯ, ಶೆಟ್ಟಿಹಳ್ಳಿ ಗೇಟ್‍ನಲ್ಲಿರುವ ಅಭಯ ಆಂಜನೇಯ ಸ್ವಾಮಿ ದೇವಾಲಯ, ಬಿ.ಹೆಚ್. ರಸ್ತೆಯ ಆರ್‍ಟಿಓ ಕಚೇರಿ ಮುಂಭಾಗದಲ್ಲಿರುವ ವರಪ್ರಸಾದ ವೀರಾಂಜನೇಯ ಸ್ವಾಮಿ ದೇಗುಲ, ಬಟವಾಡಿ ಸಮೀಪದ ಭಕ್ತಾಂಜನೇಯಸ್ವಾಮಿ ದೇವಾಲಯ, ವಿದ್ಯಾನಗರದ ಪುಟ್ಟಾಂಜನೇಯ ಸ್ವಾಮಿ ದೇವಸ್ಥಾನ, ಹನುಂತಪುರದ ಬಯಲಾಂಜನೇಯಸ್ವಾಮಿ ದೇವಾಲಯ, ಬನಶಂಕರಿಯ ಮಾರುತಿ ದೇವಾಲಯ, ಮೆಳೇಕೋಟೆಯ ಅಭಯ ಆಂಜನೇಯಸ್ವಾಮಿ ದೇವಾಲಯ ಸೇರಿದಂತೆ ಜಿಲ್ಲೆಯ ವಿವಿಧೆಡೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳೊಂದಿಗೆ ಹನುಮ ನಾಮ ಸ್ಮರಣೆ, ವೇದ ಘೋಷಗಳು, ಭಜನೆಗಳು ಮೊಳಗಿದವು. ಹನುಮ ಜಯಂತಿ ಪ್ರಯುಕ್ತ ಕೋಟೆ ಶ್ರೀಆಂಜನೇಯ ಸ್ವಾಮಿ ವೃತ್ತ, ಟೌನ್ ಹಾಲ್ ವೃತ್ತ ಸೇರಿದಂತೆ ಜಿಲ್ಲೆಯಾದ್ಯಂತ ಪಟ್ಟಣಗಳು, ಹೋಬಳಿ ಕೇಂದ್ರಗಳು ಕೇಸರಿ ಧ್ವಜಗಳಿಂದ ಕಂಗೊಳಿಸುತ್ತಿದ್ದು, ಕೋಟೆ ಶ್ರೀ ಆಂಜನೇಯಸ್ವಾಮಿ ಯುವಕರ ಬಳಗ ಹನುಮ ಜಯಂತಿ…

Read More

ಕೊರಟಗೆರೆ ಬಯಲುಸೀಮೆ ಕ್ಷೇತ್ರಗಳಾದ ಕೊರಟಗೆರೆ, ಮಧುಗಿರಿ ಮತ್ತು ಪಾವಗಡ ಕ್ಷೇತ್ರಗಳು ಅಭಿವೃದ್ದಿ ವಂಚಿತವಾಗಿ ಹೀನಾಯ ಪರಿಸ್ಥಿತಿಗೆ ತಲುಪಿವೆ. ನಾನು ಅಧಿಕಾರಕ್ಕೆ ಬಂದರೆ ಬಯಲುಸೀಮೆ ಗಡಿಜಿಲ್ಲೆಗಳ ಅಭಿವೃದ್ದಿಗೆ ಪ್ರತಿವರ್ಷ 1ಸಾವಿರ ಕೋಟಿ ಅನುಧಾನ ಮೀಸಲು ಇಡುತ್ತೇನೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು. ಕೊರಟಗೆರೆ ವಿಧಾನಸಭಾ ಕ್ಷೇತ್ರದ ಚನ್ನರಾಯನದುರ್ಗ ಹೋಬಳಿ ತೋವಿನಕೆರೆ ಗ್ರಾಪಂ ಕೇಂದ್ರಸ್ಥಾನದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಪಂಚರತ್ನ ಯೋಜನೆಯ ರಥಯಾತ್ರೆ, ರೈತರ ಜೊತೆ ಸಂವಾದ ಮತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮದ ನಂತರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಕರ್ನಾಟಕ ರಾಜ್ಯ ರಾಜಧಾನಿಯಿಂದ ಗಡಿಜಿಲ್ಲೆಯ 3ಕ್ಷೇತ್ರಗಳು ಕೇವಲ 70ಕೀಮೀ ಅಂತರದಲ್ಲಿವೆ. ಅಭಿವೃದ್ದಿ ಕಾಣದೇ ಗ್ರಾಮೀಣ ಪ್ರದೇಶಗಳು ತುಂಬಾ ಹಿಂದುಳಿದಿವೆ. ಗಡಿ ಗ್ರಾಮಗಳ ಬಡಜನರ ನೋವು ಆಲಿಸುವ ನಾಯಕರು ನಮಗೆ ಅವಶ್ಯಕತೆ ಇದೆ. ಕೊರಟಗೆರೆಯ ಪ್ರವಾಸದ ವೇಳೆ ವಿದ್ಯಾರ್ಥಿನಿಯಿಂದ ನನಗೇ ಜ್ಞಾನೋದಯ ಆಗಿದೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೇ ಗಡಿಭಾಗದ ನಾಲ್ಕೈದು ಜಿಲ್ಲೆಗಳಿಗೆ ಪ್ರತಿವರ್ಷ 1ಸಾವಿರ ಕೋಟಿ ಅನುಧಾನ ಬಿಡುಗಡೆ ಮಾಡುತ್ತೇನೆ ಎಂದರು. ಗೊಲ್ಲರಹಟ್ಟಿಯ ಹೆಣ್ಣುಮಗುವಿನ…

Read More

ತುಮಕೂರು ಜೆ.ಇ. ಲಸಿಕಾ ಅಭಿಯಾನ-2022 ಅಂಗವಾಗಿ ಜಿಲ್ಲೆಯಲ್ಲಿ 5,23,544 ಮಕ್ಕಳಿಗೆ ಜೆ.ಇ. ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಕೇಶವ ರಾಜ್ ಜಿ. ತಿಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ‘ಮೆದುಳು ಜ್ವರ ಲಸಿಕಾ ಅಭಿಯಾನ-2022’ ಕುರಿತು ಪತ್ರಿಕಾ ಹಾಗೂ ದೃಶ್ಯ ಮಾಧ್ಯಮದವರಿಗೆ ಏರ್ಪಡಿಸಿದ್ದ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜಿಲ್ಲೆಯಾದ್ಯಂತ ಮೆದುಳು ಜ್ವರ (ಜೆ.ಇ) ಲಸಿಕಾ ಅಭಿಯಾನವನ್ನು ಹಮ್ಮಿಕೊಂಡಿದ್ದು, ಮಕ್ಕಳಲ್ಲಿ ಜಿ.ಇ ಜ್ವರವನ್ನು ತಡೆಗಟ್ಟುವ ಉದ್ದೇಶದಿಂದ ಡಿಸೆಂಬರ್ 5 ರಿಂದ ಮೂರು ವಾರಗಳ ಕಾಲ ಜಿಲ್ಲೆಯ ಎಲ್ಲಾ ಶಾಲೆಯ ಮಕ್ಕಳಿಗೆ, ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ, ಅಂಗನವಾಡಿ ಮಕ್ಕಳು, ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳು, ಇತರೆ ವಲಸೆ ಪ್ರದೇಶಗಳಲ್ಲಿನ ಮಕ್ಕಳು ಹಾಗೂ ಶಾಲೆಯಿಂದ ಹೊರಗುಳಿದ 1 ರಿಂದ 15 ವರ್ಷದೊಳಗಿನ ಎಲ್ಲಾ ಮಕ್ಕಳನ್ನು ಗುರುತಿಸಿ ಅವರಿಗೆ ಜಪಾನೀಸ್ ಎನ್‍ಸೆಫಲೈಟಿಸ್ (ಜೆಇ) ಮೆದುಳು ಜ್ವರ ಲಸಿಕೆ ನೀಡಲಾಗುತ್ತದೆ ಅರ್ಹ ಮಕ್ಕಳಿಗೆ ಜೆ.ಇ. ಲಸಿಕೆ…

Read More

ತುಮಕೂರು ಸಂಸ್ಕಾರದ ಚೌಕಟ್ಟಿನಲ್ಲಿ ಪ್ರತಿಭೆಯನ್ನು ಪೋಷಿಸಬೇಕು ಎಂದು ಕುವೆಂಪು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಪ್ರೊ. ಪ್ರಶಾಂತ ನಾಯಕ್ ತಿಳಿಸಿದರು. ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಶುಕ್ರವಾರ ಆರಂಭವಾದ ಎರಡು ದಿನಗಳ ಕಲ್ಪತರು ಉತ್ಸವದಲ್ಲಿ ಪ್ರಧಾನ ಭಾಷಣ ಮಾಡಿದ ಅವರು, ಸಂಸ್ಕಾರವಿಲ್ಲದ ಪ್ರತಿಭೆಗೆ ಮೌಲ್ಯವಿಲ್ಲ. ಬೌದ್ಧಿಕತೆಯಿಲ್ಲದ ಸೌಂದರ್ಯಕ್ಕೆ ಬೆಲೆಯಿಲ್ಲ ಎಂದರು. ಬದುಕಿನಲ್ಲಿ ಮನುಷ್ಯ ಸಂಬಂಧಗಳು ತುಂಬ ಮುಖ್ಯ. ಅವುಗಳನ್ನು ಉಳಿಸಿ ಬೆಳೆಸುತ್ತಾ ದೇಶದ ಸಂಸ್ಕøತಿಯನ್ನು ಎತ್ತಿಹಿಡಿಯಬೇಕು. ಭಾರತದ ಯುವ ಪ್ರತಿಭೆಗಳನ್ನು ಪೆÇ್ರೀತ್ಸಾಹಿಸುವಂತೆ ನಮ್ಮ ನಾಗರಿಕರನ್ನು ಉತ್ತೇಜಿಸಬೇಕು. ಯುವಕರೇ ಈ ದೇಶದ ಭವಿಷ್ಯ ಎಂದರು. ಮಕ್ಕಳಲ್ಲಿ ಕೇವಲ ಅಂಕಗಳ ವ್ಯಾಮೋಹವನ್ನು ಹೆಚ್ಚಿಸದೆ ಕುವೆಂಪು ಅವರನ್ನು ವಿಶ್ವಮಾನವರನ್ನಾಗಿಸುವತ್ತ ಬೌದ್ಧಿಕವಾಗಿ ಸಶಕ್ತಗೊಳಿಸಬೇಕು. ಅದಕ್ಕೆ ಕಲ್ಪತರು ಉತ್ಸವದಂತಹ ಕಾರ್ಯಕ್ರಮಗಳು ವೇದಿಕೆಯಾಗಲಿ ಎಂದು ಆಶಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಚಿತ್ರನಟಿ ಹರ್ಷಿಕಾ ಪೂಣಚ್ಚ ಅವರು ಕಲಾಪೆÇೀಷಕರು ಹೆಚ್ಚಿರುವ ತುಮಕೂರು ನನಗೆ ತುಂಬಾ ಪ್ರಿಯವಾದ ಸ್ಥಳ ಎಂದರು. ವಿದ್ಯಾರ್ಥಿಗಳು ಗುರುಗಳನ್ನು ಮನಸಾರೆ ಗೌರವಿಸಬೇಕು. ಅದು ಇಡೀ ಬದುಕಿನ ಯಶಸ್ಸಿಗೆ ದಾರಿದೀಪವಾಗುತ್ತದೆ. ನಾನು ವಿದ್ಯಾರ್ಥಿನಿಯಾಗಿದ್ದಾಗ ಗುರುಗಳು ಪೆÇ್ರೀತ್ಸಾಹ ನೀಡಿದ್ದರಿಂದಲೇ…

Read More

ತುಮಕೂರು ವಿದ್ಯಾರ್ಥಿಗಳು ಬದಲಾಗುತ್ತಿರುವ ತಂತ್ರಜ್ಞಾನ ಮತ್ತು ಮಾರುಕಟ್ಟೆಯ ಅಗತ್ಯತೆಗೆ ಹೊಂದಿಕೊಳ್ಳುವ ನಿಟ್ಟಿನಲ್ಲಿ ಚಾಣಾಕ್ಷತೆಯನ್ನು ತೋರಬೇಕಿದೆ ಎಂದು ಮಹಿಂದ್ರಾ ಮತ್ತು ಮಹಿಂದ್ರಾ ರೀಸರ್ಚ್ ವ್ಯಾಲಿಯ ಉಪಾಧ್ಯಕ್ಷ ಡಾ.ಶಂಕರ್ ವೇಣುಗೋಪಾಲ್ ಹೇಳಿದ್ದಾರೆ. ನಗರದ ಸಿದ್ದಗಂಗಾ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶನಿವಾರ ಆಯೋಜಿಸಿದ್ದ 13ನೇ ವರ್ಷದ ಪದವಿ ಪ್ರಧಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, ಸೃಜನಶೀಲ ಮೆದುಳಿಗೆ ನಿಯಂತ್ರಣವನ್ನು ನೀಡಿ, ಊಹೆಗಳಿಗೆ ಸವಾಲೊಡ್ಡಿ ಎಂದು ಹೇಳಿದರು. ವಿದ್ಯಾರ್ಥಿಗಳು ವಿಭಿನ್ನ ಆಲೋಚನೆಗಳಿಗೆ ಸಾಕಷ್ಟು ಸಮಯವನ್ನು ನೀಡಿ ಮುನ್ನಡೆಯಬೇಕಿದೆ.ಆರಂಭಿಕ ನಿಬರ್ಂಧಗಳನ್ನು ಗುರುತಿಸಿ, ಸರಿಯಾದ ದಿಕ್ಕಿನಲ್ಲಿ ಕಲ್ಪನೆಯನ್ನು ರೂಪಿಸಲು ಪರಿಪಕ್ವ ಜ್ಞಾನವನ್ನು ಬಳಸಿ.ನಾವೀನ್ಯತೆಯೆಂಬುದು ಒಳನೋಟವುಳ್ಳ ಮೌಲ್ಯವನ್ನು ಸೃಷ್ಟಿಸುತ್ತದೆ ಮತ್ತು ನಿಮ್ಮ ಆಲೋಚನೆಗಳನ್ನು ಯಶಸ್ವಿಯಾಗಿ ಮಾರುಕಟ್ಟೆಗೆ ತರುತ್ತದೆ ಎಂದು ಇಂಜಿನಿಯರಿಂಗ್ ಪದವಿಧರರಿಗೆ ಸಲಹೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಸಿದ್ದಗಂಗಾ ಮಠಾಧ್ಯಕ್ಷ ಶ್ರೀ ಸಿದ್ದಲಿಂಗಸ್ವಾಮೀಜಿ ಮಾತನಾಡಿ,ಸಿದ್ದಗಂಗಾ ಶಿಕ್ಷಣ ಸಂಸ್ಥೆಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ದೇಶದ ಸರಾಸರಿಗಿಂತಲೂ ಹೆಚ್ಚು ಅಂದರೆ ಶೇ39ರಷ್ಟು ಹೆಣ್ಣು ಮಕ್ಕಳು ಕಲಿಯುವ ಮೂಲಕ 12ನೇ ಶತಮಾನದ ಬಸವಣ್ಣನವರ ಅನುಭವ ಮಂಟಪದ…

Read More

ತುಮಕೂರು ಕೊರಟಗೆರೆ ಕ್ಷೇತ್ರದಲ್ಲಿ ಪಂಚರತ್ನ ಯಾತ್ರೆ ಯಶಸ್ವಿಯನ್ನು ಕಂಡಿತು. ಮಧುಗಿರಿ, ಕೊರಟಗೆರೆ ಕ್ಷೇತ್ರದಲ್ಲಿ ಜನತಾದಳ ಭದ್ರಕೋಟೆಯಾಗಿ ಜನ ಆಶೀರ್ವಾದ ಮಾಡಿದ್ದಾರೆ. ಕೆಲ ಕಾರಣಾಂತರಗಳಲ್ಲಿ ಸೋಲುಂಟಾಗಿದೆ. ಅದು ಕೊರಟಗೆರೆ ಮತದಾರರ ಸೋಲಲ್ಲ. ಅದು ಬೇರೆ ರೀತಿ ಇದೆ, ಅದರ ಹಿನ್ನೆಲೆ ನನಗೆ ಗೊತ್ತು. ಕಳೆದ ಬಾರಿಯ ಲೋಪ ಸರಿಪಡಿಸುವುದಕ್ಕೆ ಕ್ರಮ ತೆಗೆದುಕೊಂಡಿದ್ದೇವೆ. ಸುಧಾಕರ್ ಲಾಲ್ ಜನತೆ ಆಶೀರ್ವಾದದಿಂದ ಗೆಲ್ತಾರೆ ಎಂದು ಎಚ್‍ಡಿ ಕುಮಾರಸ್ವಾಮಿ ನುಡಿದರು. ಕಾಂಗ್ರೆಸ್‍ನಲ್ಲಿ ದಲಿತ ಸಿಎಂ ಕೂಗು ವಿಚಾರ. ಸಿಎಂ ಅನ್ನು ಯಾರು ಮಾಡ್ತಾರೆ, ಎಲ್ಲಿಂದ ಮಾಡ್ತಾರೆ, ಅವರು ಪಾರ್ಟಿ ಅಧ್ಯಕ್ಷರಿದ್ದಾಗಲೇ ಮಾಡಲಿಲ್ಲ. ಪಾರ್ಟಿ ಅಧ್ಯಕ್ಷರಾಗಿ ಪಕ್ಷನ್ನು ಅಧಿಕಾರಕ್ಕೆ ತರಲು ಹೊರಟಾಗ, ಅವರನ್ನು ಜೆಡಿಎಸ್ ನವ್ರು ಸೋಲಿಸಿದ್ರಾ ? ಕಾಂಗ್ರೆಸ್ ನವರೇ ಸೋಲಿಸಿದ್ರು ಅಂತ ಅವರೇ ಹೇಳ್ತಾರೆ. ಅವರು ಏನ್ ಮಾಡ್ತಾರೆ ಅಂತ ನನಗೆ ಗೊತ್ತಿಲ್ಲ. ಸುಧಾಕರ್ ಲಾಲ್ ಅವರು ಅತ್ಯಂತ ಸಭ್ಯ, ಜನತೆ ಜೊತೆಗೆ ಬೆರೆತು ಕೆಲಸ ಮಾಡ್ತಾರೆ. ಉತ್ತಮವಾದ ಹೆಸರಿಟ್ಟಿ ಕೊಂಡಿರುವ ಅಭ್ಯರ್ಥಿ ಎಂದರು. ಅವರನ್ನು ಗೆಲ್ಲಿಸಬೇಕೆಂದು…

Read More

ತುಮಕೂರು ಪ್ರತಿಯೊಬ್ಬರೂ ಬದುಕಿನಲ್ಲಿ ಉನ್ನತ ಸ್ಥಾನಮಾನ ಗಳಿಸಲು ಶಿಕ್ಷಣ ಅತಿ ಮುಖ್ಯ ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪೆÇ್ರ. ಎಂ. ವೆಂಕಟೇಶ್ವರಲು ತಿಳಿಸಿದರು. ನಗರದ ಹೊರವಲಯದಲ್ಲಿರುವ ಪೆÇೀದಾರ್ ಅಂತಾರಾಷ್ಟ್ರೀಯ ಶಾಲೆಯಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಶಾಲಾ ಹಂತದಲ್ಲೇ ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಿಗೂ ಒತ್ತು ನೀಡಬೇಕು. ಆಗ ಮಾತ್ರ ಪರಿಪೂರ್ಣ ಶಿಕ್ಷಣವಂತರಾಗಲು ಸಾಧ್ಯ ಎಂದರು. ಶಾಲೆಗಳಲ್ಲಿ ಮಕ್ಕಳಿಗೆ ಶಿಸ್ತು, ಸಂಯಮ ಕಲಿಸಬೇಕು. ಆಗ ಮಾತ್ರ ಉನ್ನತ ವ್ಯಾಸಂಗ ಮಾಡುವಾಗಲೂ ವಿದ್ಯಾರ್ಥಿಗಳು ಶಿಸ್ತು, ಪರಿಶ್ರಮದ ಅಧ್ಯಯನ ಮಾಡಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಪೆÇೀದಾರ್ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶಿಸ್ತಿನ ಜತೆಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಪೆÇ್ರೀತ್ಸಾಹ ನೀಡುತ್ತಿರುವುದು ಶ್ಲಾಘನೀಯ ಎಂದರು. ಗೌರವ ಅತಿಥಿಗಳಾಗಿ ಪಾಲ್ಗೊಂಡಿದ್ದ ಅಪರ ಜಿಲ್ಲಾಧಿಕಾರಿ ಕೆ. ಚನ್ನಬಸಪ್ಪ ಮಾತನಾಡಿ, ಶಾಲಾ ವಾರ್ಷಿಕೋತ್ಸವಗಳು ಮಕ್ಕಳಲ್ಲಿ ಸಾಂಸ್ಕೃತಿಕ, ಕ್ರೀಡಾ ಸ್ಫೂರ್ತಿ ಹೆಚ್ಚಿಸಲು ಸಹಕಾರಿ. ಹಾಗಾಗಿ ಶಾಲಾ ಹಂತದಲ್ಲಿ ವಿದ್ಯಾರ್ಥಿಗಳು ಪಾಠ ಪ್ರವಚನದ ಜತೆಗೆ ಕ್ರೀಡೆ,…

Read More

ತುಮಕೂರು ಅಂಗನವಾಡಿ ಕೇಂದ್ರಗಳಲ್ಲಿಯೇ ಪೂರ್ವ ಪ್ರಾಥಮಿಕ ಶಿಕ್ಷಣ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ವಿವಿಧ ತಾಲ್ಲೂಕುಗಳಿಂದ ಆಗಮಿಸಿದ್ದ ಅಂಗನವಾಡಿ ನೌಕರರನ್ನು ಉದ್ದೇಶಿಸಿ ಮಾತನಾಡಿದ ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಕಮಲಮ್ಮ ಅವರು, ಸುಪ್ರೀಂ ಕೋರ್ಟ್ ಅಂಗನವಾಡಿ ನೌಕರರು ಗ್ರಾಚ್ಯುಟಿ ಪಡೆಯಲು ಅರ್ಹರು’ ಎಂಬ ಐತಿಹಾಸಿಕ ತೀರ್ಪು ನೀಡಿದೆ. ಇದರ ಪ್ರಕಾರ ರಾಜ್ಯದಾದ್ಯಂತ ಸಾವಿರಾರು ನಿವೃತ್ತಿ ನೌಕರರು ಅರ್ಜಿಯನ್ನು ಸ್ವತಃ ಹಾಗೂ ಅಂಚೆ ಮುಖಾಂತರ ಸಲ್ಲಿಸಿದರೆ ಅಧಿಕಾರಿಗಳು ನಿರಾಕರಿಸಿದ್ದಾರೆ ಎಂದರು. ಹಲವಾರು ನೌಕರರಿಗೆ ನೇಮಕಾತಿ & ನಿವೃತ್ತಿಯ ಆದೇಶಗಳನ್ನು ನೀಡಿಲ್ಲ, ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಬೇಕಾದ ದಾಖಲಾತಿಗಳನ್ನು ಹೊಂದಿಸಿ ಕೊಳ್ಳಲು ಬಿಡದ ಇಲಾಖೆಯ ವ್ಯವಸ್ಥೆಯನ್ನು ಸರಿಪಡಿಸಬೇಕು.ಗ್ರಾಚ್ಯುಟಿಗೆ ಸಲ್ಲಿಸಿರುವ ಅರ್ಜಿದಾರರಿಗೆ ಕೂಡಲೇ ಪರಿಹಾರ ನೀಡಲು “ರಾಜ್ಯ ಸಚಿವ ಸಂಪುಟ” ಆದೇಶಿಸ ಬೇಕು ಎಂದು ಒತ್ತಾಯಿಸಿದರು. ಅಂಗನವಾಡಿ ನೌಕರರು ಹಾಗೂ ಸಹಾಯಕರನ್ನು ಯೋಜನೇತರ ಕೆಲಸಗಳಿಗೆ ಬಳಸಿಕೊಳ್ಳುತ್ತಿದ್ದು, ಸ್ಕೌಟ್ಸ್ ಗೈಡ್ಸ್…

Read More