ತುರುವೇಕೆರೆ: ಸಾರ್ವಜನಿಕರು ನೀಡಿದ ದೂರುಗಳ ಪರಿಶೀಲನೆಗಾಗಿ ಜಿಲ್ಲಾ ಲೋಕಾ ಯುಕ್ತ ಇನ್ಸ್ ಪೆಕ್ಟರ್ ಶಿವರುದ್ರಪ್ಪ ಮೇಟಿಯವರು ಇಲ್ಲಿನ ಪಟ್ಟಣ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲಾ ಲೋಕಾಯುಕ್ತರಿಗೆ ಬಂದಿದ್ದ ದೂರು ಗಳ ಬಗ್ಗೆ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಯಾವ ರೀತಿಯ ಕ್ರಮಗಳನ್ನು ತೆಗೆದುಕೊಂ ಡಿದ್ದಾರೆಂದು ಪರಿವೀಕ್ಷಣೆ ಮಾಡಿದರು.ಈ ವೇಳೆ ಪಟ್ಟಣದ ದೇವೇಗೌಡ ಬಡಾವಣೆಯಲ್ಲಿ ಪಟ್ಟಣ ಪಂಚಾಯಿತಿಯ ಸಿಬ್ಬಂದಿಯೇ ತಮಗೆ ನೀಡಲಾಗಿದ್ದ ನಿವೇಶನದ ಬದಲಿಗೆ ಹೊಂದಿ ಕೊಂಡAತಿರುವ ಪಂಚಾಯಿತಿಯ ನಿವೇಶನದಲ್ಲಿ ಅಕ್ರಮವಾಗಿ ಮನೆ ಕಟ್ಟಿದ್ದಾರೆ ಎಂದು ರಂಗ ಸ್ವಾಮಿ ಎಂಬುವವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಲೋಕಾಯುಕ್ತದಿಂದ ಈ ಕುರಿತು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿತ್ತು. ಆದಾಗ್ಯೂ ಸಹ ಪಟ್ಟಣ ಪಂಚಾಯಿತಿಯ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂ ಡಿಲ್ಲವೆಂದು ಪುನಃ ರಂಗಸ್ವಾಮಿ ಉಪ ಲೋಕಾ ಯುಕ್ತರಿಗೇ ದೂರು ಸಲ್ಲಿಸಿದ್ದರು. ಈ ದೂರಿನನ್ವಯ ಇನ್ಸ್ ಪೆಕ್ಟರ್ ಶಿವರುದ್ರಪ್ಪ ಮೇಟಿ ತಮ್ಮ ಸಿಬ್ಬಂದಿ ಸಹಿತ ಪಟ್ಟಣ ಪಂಚಾಯಿತಿಗೆ ಭೇಟಿ ನೀಡಿ ಮುಖ್ಯಾದಿಕಾರಿಗಳ ಜೊತೆ ಚರ್ಚೆ…
Author: News Desk Benkiyabale
ತುಮಕೂರು: ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಮತ್ತು ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿಯ ವತಿಯಿಂದ ಬುಧವಾರ ಜಿಲ್ಲಾ ಕೇಂದ್ರ ಕಚೇರಿಯಲ್ಲಿ ಸಂವಿಧಾನಶಿಲ್ಪಿ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಅವರ ಧರ್ಮಪತ್ನಿಯಾದ ಲೇಟ್ ರಮಾಬಾಯಿ ಅವರ ಪರಿನಿಬ್ಬಾಣ ದಿವಸ್ ಆಚರಣೆಯನ್ನು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವುದರ ಮೂಲಕ ಹಮ್ಮಿಕೊಳ್ಳಲಾಗಿತ್ತು. ರಮಾಬಾಯಿರವರ ಪರಿನಿಬ್ಬಾಣ ದಿವಸ್ ಕುರಿತು ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಮತ್ತು ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷರಾದ ಎನ್.ಕೆ.ನಿಧಿಕುಮಾರ್ರವರು ಮಾತನಾಡುತ್ತಾ ರಮಾಬಾಯಿರವರು ವಿಧಿವಶರಾದ ಐದು ವರ್ಷಗಳ ತರುವಾಯ ಡಾ. ಬಿ.ಆರ್.ಅಂಬೇಡ್ಕರರು ‘ದಿ ಪಾರ್ಟಿಷನ್ ಆಫ್ ಇಂಡಿಯಾ’ ಎಂಬ ವಿದ್ವತ್ ಪೂರ್ಣ ಗ್ರಂಥವನ್ನು ಬರೆದು ಅದನ್ನು ಅವರ ಪತ್ನಿ ರಮಾಬಾಯಿ ಅವರಿಗೆ ಸಮರ್ಪಿಸಿದರು, ಈ ಕೃತಿಯು ೧೯ನೇ ಶತಮಾನದಲ್ಲಿ ಪತ್ನಿಯೊಬ್ಬರಿಗೆ ಸಮರ್ಪಣೆ ಮಾಡಿದ ಮೊಟ್ಟ ಮೊದಲ ಕೃತಿ ಎನ್ನಲಾಗಿದೆ. ಅಂಬೇಡ್ಕರ್ರವರಿAದ ರಚಿತವಾದ ಆ ಕೃತಿಯನ್ನು ರಮಾಬಾಯಿ ಅವರಿಗೆ ಸಮರ್ಪಿಸುವ ಸಲುವಾಗಿ ನಾಲ್ಕು ಸಾಲುಗಳನ್ನು ಬರೆಯುತ್ತಾ ‘ಆಕೆಯ…
ಪಾವಗಡ: ಪ್ರತಿಯೊಬ್ಬ ವ್ಯಕ್ತಿಗೆ ದಿನಕ್ಕೆ ೫೫೦ ಲೀಟರ್ ಅಷ್ಟು ಆಮ್ಲಜನಕ ಬೇಕು ಎಂದು ಡೌನ್ ಟೆಂಪ್ ಫೌಂಡೇಷನ್ ನ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಯಾತೀಷ್ ಎನ್.ಎಸ್ ತಿಳಿಸಿದರು. ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಸಮಾಜಕಾರ್ಯ ಮತ್ತು ಅಧ್ಯಯನ ಕೇಂದ್ರ, ಡೌನ್ ಟೆಂಪ್ ಫೌಂಡಷನ್ ಸಹಯೋಗದಲ್ಲಿ ಬುಧವಾರ ಪಾವಗಡ ನಗರದ ಮರಗಳ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಪ್ರತಿಯೊಬ್ಬ ವ್ಯಕ್ತಿಗೆ ಒಂದು ದಿನಕ್ಕೆ ೫೫೦ ಲೀಟರಿನಷ್ಟು ಆಮ್ಲಜನಕ ಬೇಕು, ಒಂದು ಮರ ಒಂದು ದಿನಕ್ಕೆ ೨೨೦ ಲೀಟರಿನಷ್ಟು ಆಮ್ಲಜನಕವನ್ನು ಉತ್ಪದಿಸುತ್ತವೆ. ಒಬ್ಬ ವ್ಯಕ್ತಿಗೆ ಕನಿಷ್ಠ ೨ ಮರಗಳಾದರೂ ಬೇಕು, ಆದರೆ ನಗರೀಕರಣ ಮತ್ತು ಬೇರೆ ಉದ್ದೇಶಗಳಿಗಾಗಿ ಮರಗಳನ್ನು ಕಡಿಯಲಾಗುತ್ತಿದ್ದು ಪರಿಸರದಲ್ಲಿ ಅಸಮತೋಲನ ನಿರ್ಮಾಣವಾಗಿದೆ, ಆದ ಕಾರಣ ಮರಗಳ ಗಣತಿ ಮತ್ತು ಅವುಗಳ ಆಮ್ಲಜನಕ ಉತ್ಪಾದನೆಯ ವರದಿಯು ಜನಸಂಖ್ಯೆಗೆ ಅನುಗುಣವಾದ ಸಮತೋಲನವನ್ನು ಕಾಪಾಡಲು ಸಹಕಾರಿಯಾಗಲಿದೆ ಎಂದರು. ಶಿಬಿರಾರ್ಥಿಗಳಿಗೆ ಮರಗಳ ಗಣತಿಯನ್ನು ಹೇಗೆ ಮಾಡಬೇಕು ಎಂಬ ತರಬೇತಿಯನ್ನು ನೀಡಲಾಯಿತು ಮತ್ತು ಶಿಬಿರಾರ್ಥಿಗಳು ವಿವಿಧ ಬಗೆಯ…
ಕೊರಟಗೆರೆ: ರಾಜ್ಯ ಸರ್ಕಾರ ಪೌರ ಕಾರ್ಮಿಕರಿಗೆ ಸೇವಾ ಭದ್ರತೆ ಒದಗಿಸುವಲ್ಲಿ ಮಲತಾಯಿ ದೋರಣೆ ಮಾಡುತ್ತಿದೆ ಎಂದು ಕೊರಟಗೆರೆ ಪಟ್ಟಣ ಪಂಚಾಯಿತಿ ಪೌರ ಕಾರ್ಮಿಕ ಮತ್ತು ನೀರು ಸರಬರಾಜು ನೌಕರರ ಸಂಘವು ದಿನನಿತ್ಯ ಸೇವೆಗಳನ್ನು ಸ್ಥಗಿತಗೊಳಿಸಿ ಬೇಡಿಕೆ ಈಡೇರಿಕೆಗಾಗಿ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡು ತಹಶೀಲ್ದಾರ್ಗೆ ಮತ್ತು ಪ.ಪಂ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ರಾಜ್ಯಾಧ್ಯಕ್ಷ ಕೆ.ಪ್ರಭಾಕರ್ ಕರೆಗೆ ಇಲ್ಲಿನ ಪ.ಪಂ ಪೌರ ನೌಕರರು ಕರ್ತವ್ಯಕ್ಕೆ ಗೈರಾಗಿ ದಿನನಿತ್ಯ ಕೆಲಸವನ್ನು ಸ್ಥಗಿತಗೊಳಿಸಿ ಸಂವಿಧಾನ ಶಿಲ್ಪಿ ಡಾ.ಬಿಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ (ಮೇ.೨೭)ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದು, ಪ.ಪಂ ಅಧಿಕಾರಿ ವರ್ಗ ಕಚೇರಿಗೆ ಬೀಗ ಹಾಕಿ ಮುಷ್ಕರದಲ್ಲಿ ಪಾಲ್ಗೊಂಡು ಬೆಂಬಲ ಸೂಚಿಸಿ ಪೌರ ನೌಕರರ ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ. ಪೌರ ನೌಕರರ ಸಂಘದ ಅಧ್ಯಕ್ಷ ಎನ್.ನರಸಿಂಹ ಮಾತನಾಡಿ, ರಾಜ್ಯಾದ್ಯಂತ ಪೌರ ಕಾರ್ಮಿಕರು ತಮ್ಮ ಹಕ್ಕಿಗಾಗಿ ಮುಷ್ಕರ ಕೈಗೊಂಡಿದ್ದಾರೆ. ರಾಜ್ಯಾಧ್ಯಕ್ಷರ ಕರೆಗೆ ಎಲ್ಲಾ ಪೌರ ನೌಕರರು ತಮ್ಮ…
ಚಿಕ್ಕನಾಯಕನಹಳ್ಳಿ: ಗುಣಮಟ್ಟದ ಆಹಾರ ವಸತಿ ವ್ಯವಸ್ಥೆ ಸೇರಿದಂತೆ ವಿದ್ಯಾರ್ಥಿಗಳಿಗೆ ಇರುವಂತಹ ಸೌಲಭ್ಯಗಳ ಬಗ್ಗೆ ಶಾಸಕ ಸಿ.ಬಿ.ಸುರೇಶ್ ಬಾಬು ವಿದ್ಯಾರ್ಥಿನಿಯಕ್ಕೆ ಬೇಟಿ ನೀಡಿ ಪರಿಶಿಲನೆ ನಡೆಸಿದರು. ಪಟ್ಟಣದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಕೆಯ ಮೇಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಸೋಮವಾರ ಸಂಜೆ ದಿಡೀರ್ ಬೇಟಿ ನೀಡಿದ ಅವರು ಅಡುಗೆ ಕೋಣೆ , ಲೈಬ್ರೆರಿ ಸೇರಿದಂತೆ ವಿದ್ಯಾರ್ಥಿನಿಲಯವನ್ನು ವೀಕ್ಷಿಸಿದರು ಈ ಸಂದರ್ಭ ದಲ್ಲಿ ಮಾತನಾಡಿದ ಅವರು ಸರ್ಕಾರ ಬಡವರಿಗಾಗಿ ವಸತಿ ಶಾಲೆಗಳನ್ನು ತೆರೆಯುತ್ತಿದ್ದು ಅದರಲ್ಲಿ ಸೀಟ್ ಸಿಗದೇ ಇರುವಂತಹವರು ವಿದ್ಯಾರ್ಥಿನಿಲಯಗಳಲ್ಲಿದ್ದು ಕೊಂಡು ಶಿಕ್ಷಣ ಪಡೆಯುವಂತೆ ಮಾಡಿದೆ ಅದ್ದರಿಂದ ಇಂತಹ ವಿದ್ಯಾರ್ಥಿನಿಲುಯಗಳಲ್ಲಿ ಗುಣಮಟ್ಟದ ಊಟ ಹಾಗೂ ವಸತಿಯನ್ನು ಮಕ್ಕಳು ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಹಾಗು ಹಾಸ್ಟೇಲ್ ನಲ್ಲಿದ್ದು ಕೊಂಡು ಓದುವಂತಹ ವಿದ್ಯಾರ್ಥಿಗಳ ಪಲಿತಾಂಶವು ಹೆಚ್ಚು ಬರಬೇಕು ಇದರತ್ತ ಗಮನಹರಿಸಬೇಕು ಎಂದಅವರು ಸಮಯವನ್ನು ಹಾಳು ಮಾಡದೇ ಪೋಷಕರ ಕನಸನ್ನು ನನಸು ಮಾಡುವಂತಹ ಉತ್ತಮವಾದ ಭವಿಷ್ಯವನ್ನು ಅದ್ಯಯನ ಮಾಡುವ ಮೂಲಕ ರೂಪಿಸಿಕೊಳ್ಳಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಹಾಸ್ಟೇಲ್ ಗೆ…
ತುಮಕೂರು: ಸರ್ಕಾರದ ವಿವಿಧ ಯೋಜನೆಗಳಡಿ ನೀಡಲಾಗುವ ಸೌಲಭ್ಯಗಳನ್ನು ಪಡೆಯಲು ಫಲಾನುಭವಿಗಳು ಮಧ್ಯವರ್ತಿಗಳನ್ನು ಸಂಪರ್ಕಿಸದೆ ನೇರವಾಗಿ ಸಂಬAಧಿಸಿದ ಕಚೇರಿಯನ್ನು ಸಂಪರ್ಕಿಸಬೇಕೆAದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಫಲಾನುಭವಿಗಳಿಗೆ ಕಿವಿ ಮಾತು ಹೇಳಿದರು. ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ಕಾಡುಗೊಲ್ಲ ಸಮುದಾಯದ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಫಲಾನುಭವಿಗಳ ಆಯ್ಕೆ ಸಮಿತಿ ಸಭೆ ನಡೆಸಿ ಅವರು ಮಾತನಾಡಿದರು. ನಿಗಮದಿಂದ ೨೦೨೪-೨೫ನೇ ಸಾಲಿಗಾಗಿ ಅರ್ಹ ಫಲಾನುಭವಿಗಳಿಗೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ, ಸ್ವಯಂ ಉದ್ಯೋಗ ಸಾಲ / ಸಹಾಯಧನ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಅರಿವು ಶೈಕ್ಷಣಿಕ ನೇರ ಸಾಲ ಯೋಜನೆಯಡಿ ಸಾಲ ಸೌಲಭ್ಯ ನೀಡಲಾಗುವುದು. ಸಾಲ ಸೌಲಭ್ಯ ಕೋರಿ ಒಟ್ಟು ೮೧೦ ಅರ್ಜಿಗಳು ಸ್ವೀಕೃತವಾಗಿದ್ದು, ಈ ಪೈಕಿ ವಿವಿಧ ಕಾರಣಗಳಿಂದ ೪೨ ಅರ್ಜಿಗಳು ತಿರಸ್ಕೃತಗೊಂಡಿವೆ. ಉಳಿದ ೭೬೮ ಫಲಾನುಭವಿಗಳು ಯೋಜನೆಗಳ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ ಎಂದು ತಿಳಿಸಿದರು. ಯೋಜನೆಗೆ ಅರ್ಹತೆ ಪಡೆದ ಫಲಾನುಭವಿಗಳು ಜೂನ್…
ತುಮಕೂರು: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇಂದಿರಾ ಕ್ಯಾಂಟೀನ್ನಲ್ಲಿ ಪ್ರಸ್ತುತ ನೂತನವಾಗಿ ಮೆನು ಸಿದ್ಧಪಡಿಸಲಾಗಿದ್ದು, ಈ ಮೆನುವಿನಂತೆ ಬೆಳಗಿನ ಉಪಹಾರದಲ್ಲಿ ರೈಸ್ಬಾತ್, ಚಿತ್ರಾನ್ನ, ಉಪ್ಪಿಟ್ಟು, ಕೇಸರಿಬಾತ್, ಇಡ್ಲಿ-ಸಾಂಬಾರ್-ಚಟ್ನಿ; ಮಧ್ಯಾಹ್ನದ ಊಟಕ್ಕೆ ಮುದ್ದೆ, ಅನ್ನ, ಸಾಂಬಾರ್, ಮೊಸರನ್ನ, ಚಪಾತಿ ಹಾಗೂ ರಾತ್ರಿ ಊಟಕ್ಕೆ ರೈಸ್ಬಾತ್ ಮತ್ತು ಮೊಸರನ್ನ ನೀಡಲಾಗುವುದು ಎಂದು ಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜ ತಿಳಿಸಿದ್ದಾರೆ. ತುಮಕೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಈಗಾಗಲೇ ಕಾರ್ಯ ನಿರ್ವಹಿಸುತ್ತಿರುವ ೪ ಇಂದಿರಾ ಕ್ಯಾಂಟೀನ್ಗಳೊAದಿಗೆ ಹೊಸದಾಗಿ ತುಮಕೂರು ಜಿಲ್ಲಾಸ್ಪತ್ರೆ ಮತ್ತು ಎಪಿಎಂಸಿ ಮಾರುಕಟ್ಟೆ ಬಳಿ ೨ ಇಂದಿರಾ ಕ್ಯಾಂಟೀನ್ಗಳನ್ನು ಕಾರ್ಯಾರಂಭಗೊಳಿಸಲಾಗಿದೆ. ಪ್ರತಿ ದಿನ ಜಿಲ್ಲಾಸ್ಪತ್ರೆಗೆ ಭೇಟಿ ನೀಡುವ ರೋಗಿಗಳು ಹಾಗೂ ಮಾರುಕಟ್ಟೆಗೆ ಆಗಮಿಸುವ ರೈತರು, ಗ್ರಾಹಕರು ಹಾಗೂ ವರ್ತಕರ ಅನುಕೂಲಕ್ಕಾಗಿ ಹೊಸದಾಗಿ ೨ ಇಂದಿರಾ ಕ್ಯಾಂಟೀನ್ಗಳನ್ನು ಪ್ರಾರಂಭಿಸಲಾಗಿದ್ದು, ಮೇ ೧೭ರಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ಉದ್ಘಾಟಿಸಿದ್ದಾರೆ. ಸಾಮಾಜಿಕ, ಆರ್ಥಿಕ ಪರಿಸ್ಥಿತಿಗಳಿಂದಾಗಿ ಬಡಜನರು ಅವರ ಸಮತೋಲಿತ ಹಾಗೂ ಪೌಷ್ಠಿಕ ಆಹಾರದಿಂದ…
ತುಮಕೂರು: ಜಿಲ್ಲೆಯ ಬರೊಬ್ಬರಿ ೭೪ ರೌಡಿಶೀಟರ್ ಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಸನ್ನಡತೆ ಆಧಾರದ ಮೇಲೆ ರೌಡಿಶೀಟರ್ ಕ್ಲೋಸ್ ಮಾಡಲಾಗಿದೆ. ತುಮಕೂರು ಎಸ್ ಪಿ ಕಚೇರಿ ಬಳಿಯಿರುವ ಡಿಆರ್ ಗ್ರೌಂಡ್ ನಲ್ಲಿ ರೌಡಿಶೀಟರ್ ಸಭೆ ಕರೆದು, ೭೪ ರೌಡಿಶೀಟರ್ ಗಳನ್ನ ರೌಡಿಶೀಟರ್ ಪಟ್ಟಿಯಿಂದ ಬಿಡುಗಡೆ ಮಾಡಲಾಗಿದೆ. ಸಭೆ ಬಳಿಕ ಮಾತನಾಡಿದ ತುಮಕೂರು ಎಸ್ ಪಿ ಅಶೋಕ್ ಕೆ.ವಿ. ತುಮಕೂರು ಜಿಲ್ಲೆಯಲ್ಲಿ ಒಟ್ಟು ೯೦೧ ಜನ ರೌಡಿಶೀಟರ್ ಗಳಿದ್ದಾರೆ. ಅವರನ್ನ ಪರಿಶೀಲನೆ ಮಾಡಿದಾಗ ಕೆಲ ರೌಡಿಶೀಟರ್ ಗಳು ಕಳೆದ ೧೦ ವರ್ಷಗಳಿಂದ ಯಾವುದೇ ಕೇಸ್ ಗಳಲ್ಲಿ ಭಾಗಿಯಾಗಿರಲಿಲ್ಲ. ಜೊತೆಗೆ ಅವರ ಮೇಲಿದ್ದ ಕೇಸ್ ಗಳು ಕೋರ್ಟ್ ನಲ್ಲಿ ಖುಲಾಸೆಯಾಗಿದ್ದು, ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗದೇ ತಮ್ಮ ಪಾಡಿಗೆ ಕೆಲಸ ಮಾಡಿಕೊಂಡಿದ್ರು. ಅಂತವರ ಬಗ್ಗೆ ರಿಪೊರ್ಟ್ ಪಡೆದು ಅವರ ಮೇಲಿದ್ದ ರೌಡಿಶೀಟರ್ ಕ್ಲೋಸ್ ಮಾಡಲಾಗಿದೆ ಎಂದು ತಿಳಿಸಿದರು. ಇವತ್ತು ಒಟ್ಟು ೭೪ ಜನ ರೌಡಿಶೀಟರ್ ಗಳನ್ನ ರೌಡಿ ಪಟ್ಟಿಯಿಂದ ಮುಕ್ತಾಯ ಮಾಡಲು ತೀರ್ಮಾನ…
ತುಮಕೂರು: ಜಿಲ್ಲೆಯಲ್ಲಿ ಕಾರ್ಖಾನೆ, ಗ್ಯಾರೇಜ್, ಅಂಗಡಿಗಳಲ್ಲಿ ಅನಿರೀಕ್ಷಿತ ತಪಾಸಣೆ ಕೈಗೊಂಡು ಬಾಲಕಾರ್ಮಿಕರಿದ್ದಲ್ಲಿ ಪತ್ತೆ ಹಚ್ಚುವ ಕಾರ್ಯವನ್ನು ಇನ್ನಷ್ಟು ಚುರುಕುಗೊಳಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಿಕ ಸಭಾಂಗಣದಲ್ಲಿ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಕಾರ್ಯಕಾರಿ ಸಮಿತಿ ಹಾಗೂ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ೨೦೨೪-೨೫ನೇ ಸಾಲಿನಲ್ಲಿ ಕಾರ್ಮಿಕ ಇಲಾಖೆ ಅಧಿಕಾರಿಗಳ ತಂಡ ೩೯೭ ತಪಾಸಣೆಗಳನ್ನು ಮಾತ್ರ ಕೈಗೊಂಡಿದ್ದು, ಕೇವಲ ೧೧ ಬಾಲಕಾರ್ಮಿಕರನ್ನು ಪತ್ತೆ ಹಚ್ಚಲಾಗಿದೆ. ಮುಂದಿನ ೧೦ ದಿನಗಳಲ್ಲಿ ಎಲ್ಲಾ ಕಾರ್ಮಿಕ ನಿರೀಕ್ಷ ಕರು ತಮ್ಮ ವ್ಯಾಪ್ತಿಯ ಇಟ್ಟಿಗೆ ಕಾರ್ಖಾನೆ, ಹೆಂಚಿನ ಕಾರ್ಖಾನೆ, ಮಾರಾಟ ಮಳಿಗೆ, ತೆಂಗಿನ ಕಾಯಿ ಸಗಟು ವ್ಯಾಪಾರ ಸ್ಥಳ, ಗ್ಯಾರೇಜ್, ಮತ್ತಿತರ ಸ್ಥಳಗಳಿ ಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಬೇಕು. ಈ ಸ್ಥಳಗಳಲ್ಲಿ ಬಾಲ ಕಾರ್ಮಿಕರು ಕಂಡು ಬಂದಲ್ಲಿ ಮುಖ್ಯವಾಹಿನಿಗೆ ತರುವ ಕೆಲಸ ಮಾಡಬೇಕೆಂದು ನಿರ್ದೇಶನ ನೀಡಿದರು. ಎಲ್ಲಾ ತಾಲ್ಲೂಕುಗಳಲ್ಲಿ ಶಿಕ್ಷಣ ಹಾಗೂ…
ಚಿಕ್ಕನಾಯಕನಹಳ್ಳಿ: ಶಿಕ್ಷಣದಿಂದ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾದ್ಯ ಇಂತಹ ಸಮಾಜವನ್ನು ಕಟ್ಟುವ ವ್ಯಕ್ತಿಯನ್ನು ನಿರ್ಮಾಣ ಮಾಡುವ ಶಕ್ತಿ ಶಿಕ್ಷಕರಲ್ಲಿ ಮಾತ್ರಅದ್ದರಿಂದ ಶಿಕ್ಷಕರ ಜವಾಬ್ದಾರಿ ಹೆಚ್ಚು ಇಂತಹ ಶಿಕ್ಷಣವನ್ನು ಕೇವಲ ಶೈಕ್ಷಣಿಕವಾಗಲ್ಲದೆ ಶೈಕ್ಷಣೇತರವಾದ ಶಿಸ್ತು, ಸಂಯಮ, ಏಕಾಗ್ರತೆ, ಸಂಸ್ಕಾರ, ಸಂಸ್ಕೃತಿಯನ್ನು ಅವರಲ್ಲಿ ಬೆಳೆಸುವ ಮೂಲಕ ಮುಂದೆ ಉತ್ತಮ ಪಲಿತಾಂಶವನ್ನು ನಿರೀಕ್ಷಿಸಬಹುದು ಎಂದು ಶಾಸಕ ಸಿ.ಬಿ.ಸುರೇಶ್ ಬಾಬು ತಿಳಿಸಿದರು. ಪಟ್ಟಣದ ತೀನಂಶ್ರೀ ಭವನದಲ್ಲಿ ಸೋಮವಾರ ೨೦೨೫-೨೬ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಹಾಗೂ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು ನಾನು ನಮ್ಮ ಕ್ಷೇತ್ರವನ್ನು ಶೈಕ್ಷಣಿಕವಾಗಿ ಅಭಿವೃದ್ದಿ ಮಾಡಬೇಕೆಂಬ ಉದ್ದೇಶದಿಂದ ಚುನಾವಣೆಯ ನಂತರ ಮೊದಲು ಶಿಕ್ಷಕರ ಸಭೆ ಕರೆದು ಪ್ರತಿ ಶಾಲೆಗೆ ಮೂಲಭೂತವಾಗಿ ಯಾವ ಕೆಲಸಗಳು ಅಗಬೇಕು ಹಾಗೂ ಶಿಕ್ಷಕರ ಸಮಸ್ಯೆ ಎನು ಎಂಬುದರ ಬಗ್ಗೆ ಚರ್ಚಿಸಿ ೫೪ಕೋಟಿ ಅಂದಾಜು ಪಟ್ಟಿಯನ್ನು ತಯಾರಿಸಿದ್ದು ಅದಾದನಂತರ ನಮ್ಮ ತಾಲ್ಲೂಕಿಗೆ ಗಣಿಬಾದಿತ ಪ್ರದೇಶಾಭಿವೃದ್ದಿ ಯೋಜನೆಯಡಿಯಲ್ಲಿ ೫೩ಕೋಟಿ ಮಂಜೂರಾಗಿದ್ದು ಅದರ ಜೊತೆ ನಮ್ಮ…