ಬೆಂಗಳೂರು ನಾಡಪ್ರಭು ಕೆಂಪೇಗೌಡರ ಕಲ್ಪನೆಯಂತೆ ಬೆಂಗಳೂರಿನ ಅಭಿವೃದ್ಧಿಗೆ ಬದ್ಧ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದರು. ನಗರದಲ್ಲಿ ಇಂದು ಬೆಂಗಳೂರಿನ ನಿರ್ಮಾರ್ತೃ ಕೆಂಪೇಗೌಡರ 108 ಅಡಿ ಎತ್ತರದ ‘ಪ್ರಗತಿಯ ಪ್ರತಿಮೆ’ ಅನಾವರಣ ಮತ್ತು ಅಂತರರಾಷ್ಟ್ರೀಯ ವಿಮಾನನಿಲ್ದಾಣದ ಟರ್ಮಿನಲ್ 2 ಉದ್ಘಾಟನೆ ನೆರವೇರಿಸಿದ ಬಳಿಕ ಮಾತನಾಡಿದ ಅವರು, ಕೆಂಪೇಗೌಡರ ದೂರದೃಷ್ಟಿ ಅತ್ಯದ್ಭುತವಾಗಿತ್ತು. ವ್ಯಾಪಾರದ ವ್ಯವಸ್ಥೆ ಬದಲಾಗಿದೆ. ನಾಡಪ್ರಭು ಕೆಂಪೇಗೌಡರ ಕೊಡುಗೆ ದೊಡ್ಡದು. ಗವಿ ಗಂಗಾಧರೇಶ್ವರ ಮಂದಿರ, ಬಸವನಗುಡಿಯ ಮಂದಿರ ಸೇರಿ ಬೆಂಗಳೂರಿನ ಸಾಂಸ್ಕøತಿಕತೆಯನ್ನು ಬಿಂಬಿಸುತ್ತದೆ ಎಂದು ತಿಳಿಸಿದರು. ಬೆಂಗಳೂರು ಅಂತರರಾಷ್ಟ್ರೀಯ ನಗರವಾಗಿದೆ. ಆಧುನಿಕ ಮೂಲಸೌಕರ್ಯದ ಮೂಲಕ ನಗರವನ್ನು ಸಜ್ಜುಗೊಳಿಸಬೇಕಿದೆ ಎಂದು ಅವರು ತಿಳಿಸಿದರು. ಸಂಚಾರದ ವಿವಿಧ ಮಾಧ್ಯಮಗಳು ಒಂದಕ್ಕೊಂದು ಪೂರಕವಾಗಿರಬೇಕು. ಅದನ್ನು ಅನುಷ್ಠಾನಕ್ಕೆ ತರುತ್ತಿದ್ದೇವೆ. ಭಾರತದ ವಿಕಾಸಕ್ಕೆ ಗರಿಷ್ಠ ಪ್ರಯತ್ನ ನಡೆಸಿದ್ದೇವೆ. ಇದಕ್ಕೆ ಕರ್ನಾಟಕದ ಡಬಲ್ ಎಂಜಿನ್ ಸರಕಾರವು ತನ್ನದೇ ಆದ ಕೊಡುಗೆ ನೀಡಿದೆ ಎಂದರು. ಕರ್ನಾಟಕದಲ್ಲಿ 8 ಲಕ್ಷ ಮನೆ ನಿರ್ಮಿಸಿ ಕೊಟ್ಟಿದ್ದೇವೆ. ಜಲಜೀವನ್ ಮಿಷನ್ ಅಡಿ ಕರ್ನಾಟಕದಲ್ಲಿ 30…
Author: News Desk Benkiyabale
ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಕಲ್ಪನೆಯಂತೆ ಬೆಂಗಳೂರಿನ ಅಭಿವೃದ್ಧಿಗೆ ಬದ್ಧ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದರು. ನಗರದಲ್ಲಿ ಇಂದು ಬೆಂಗಳೂರಿನ ನಿರ್ಮಾರ್ತೃ ಕೆಂಪೇಗೌಡರ 108 ಅಡಿ ಎತ್ತರದ ‘ಪ್ರಗತಿಯ ಪ್ರತಿಮೆ’ ಅನಾವರಣ ಮತ್ತು ಅಂತರರಾಷ್ಟ್ರೀಯ ವಿಮಾನನಿಲ್ದಾಣದ ಟರ್ಮಿನಲ್ 2 ಉದ್ಘಾಟನೆ ನೆರವೇರಿಸಿದ ಬಳಿಕ ಮಾತನಾಡಿದ ಅವರು, ಕೆಂಪೇಗೌಡರ ದೂರದೃಷ್ಟಿ ಅತ್ಯದ್ಭುತವಾಗಿತ್ತು. ವ್ಯಾಪಾರದ ವ್ಯವಸ್ಥೆ ಬದಲಾಗಿದೆ. ನಾಡಪ್ರಭು ಕೆಂಪೇಗೌಡರ ಕೊಡುಗೆ ದೊಡ್ಡದು. ಗವಿ ಗಂಗಾಧರೇಶ್ವರ ಮಂದಿರ, ಬಸವನಗುಡಿಯ ಮಂದಿರ ಸೇರಿ ಬೆಂಗಳೂರಿನ ಸಾಂಸ್ಕøತಿಕತೆಯನ್ನು ಬಿಂಬಿಸುತ್ತದೆ ಎಂದು ತಿಳಿಸಿದರು. ಈ ನಡುವೆ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ದೇವೇಗೌಡರನ್ನು ಆಹ್ವಾನ ಮಾಡದೇ ಇರುವುದಕ್ಕೆ ಜೆಡಿಎಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ಬಗ್ಗೆ ಟ್ವಿಟ್ ಮಾಡಿದೆ. ಟ್ವಿಟ್‌ನಲ್ಲಿ ಇರೋದು ಏನು? ನಾಡಪ್ರಭುಗಳ ಪ್ರತಿಮೆ ಸ್ಥಾಪನೆಯ ಕಾಮಗಾರಿಗೆ ಅಡಿಗಲ್ಲು ಹಾಕುವ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿಗಳನ್ನು ಆಹ್ವಾನಿಸಿದ ಬಿಜೆಪಿ ಸರಕಾರ, ಅದೇ ಪ್ರಧಾನಿಗಳಿಂದ ಪ್ರತಿಮೆ ಲೋಕಾರ್ಪಣೆ ಮಾಡಿಸುವ ಸಮಾರಂಭಕ್ಕೆ ಅವರನ್ನು ಆಹ್ವಾನ ಮಾಡಲಿಲ್ಲ, ಯಾಕೆ? ಕೆಂಪೇಗೌಡರು ಆಸ್ತಿಯಲ್ಲ, ಕೆಲ…
ತುಮಕೂರು ಅತ್ಯಂತ ಹಿಂದುಳಿದಿರುವ ನೇಕಾರರ ಸಮುದಾಯಗಳಲ್ಲಿ ಜಾಗೃತಿ ಮೂಡಿಸಿ,ಅವರಿಗೆ ಸರಕಾರದ ಸವಲತ್ತುಗಳು ದೊರೆಯುವಂತೆ ಮಾಡುವ ಉದ್ದೇಶದಿಂದ ಎಲ್ಲಾ ನೇಕಾರರ ಸಮುದಾಯಗಳನ್ನು ಒಂದು ಸೂರಿನಡಿ ತರುವ ಉದ್ದೇಶದಿಂದ ನವೆಂಬರ್ 13ರಂದು ತುಮಕೂರು ಜಿಲ್ಲಾ ನೇಕಾರರ ಒಕ್ಕೂಟದಿಂದ ನೇಕಾರರ ಸಮಾವೇಶ ಹಾಗೂ ಪ್ರತಿಭಾಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ಜಿಲ್ಲಾಧ್ಯಕ್ಷ ಧನಿಯಕುಮಾರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ಜಿಲ್ಲೆಯಲ್ಲಿ ಸುಮಾರು 60 ಸಾವಿರ ಜನರ ಸಂಖ್ಯೆಯನ್ನು ಹೊಂದಿರುವ, ರಾಜ್ಯದಲ್ಲಿ ಸುಮಾರು 45-50 ಲಕ್ಷ ಜನಸಂಖ್ಯೆಯನ್ನು ಹೊಂದಿರುವ ನೇಕಾರರ ಸಮುದಾಯಗಳು ಅರ್ಥಿಕವಾಗಿ, ಸಾಮಾಜಿಕವಾಗಿ,ಶೈಕ್ಷಣಿಕವಾಗಿ,ರಾಜಕೀಯವಾಗಿ ಸಾಕಷ್ಟು ಹಿಂದುಳಿದಿವೆ.ರಾಜಕೀಯ ಸ್ಥಾನಮಾನವೆಂಬುದು ಮರೀಚಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ 2023ರ ಚುನಾವಣೆಯಲ್ಲಿ ರಾಜ್ಯದ 224 ಕ್ಷೇತ್ರಗಳಲ್ಲಿ ಕನಿಷ್ಠ 5 ಕ್ಷೇತ್ರಗಳಲ್ಲಿ ಈ ಸಮುದಾಯ ಗಳಿಗೆ ಎಲಾ ರಾಜಕೀಯ ಪಕ್ಷಗಳು ಟಿಕೇಟ್ ನೀಡಿ ಸ್ಪರ್ಧೆಗೆ ಅವಕಾಶ ಕಲ್ಪಿಸಬೇಕು.ಹಾಗೆಯೇ ಶಿಕ್ಷಣದಲ್ಲಿ ಸಮುದಾಯದ ಅಭಿವೃದ್ದಿಗೆ ಹೆಚ್ಚಿನ ಹಾಸ್ಟಲ್ ತೆರೆದು ಅವಕಾಶ ಕಲ್ಪಿಸಬೇಕೆಂಬುದು ನಮ್ಮ ಆಶಯವಾಗಿದೆ. ಈ ನಿಟ್ಟಿನಲ್ಲಿ ಸರಕಾರದ ಮೇಲೆ ಒತ್ತಡ ತರಲು ಈ ಸಮಾವೇಶ ಆಯೋಜಿಸಲಾಗಿದೆ…
ತುಮಕೂರು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ (ರಿ) ಸಿ.ಐ.ಟಿ.ಯು. ತುಮಕೂರು ಜಿಲ್ಲಾ ಸಮಿತಿ ಹಾಗು ಭಾರತ ವಿಧ್ಯಾರ್ಥಿ ಫೆಡರೇಷನ್ ನೇತೃತ್ವದಲ್ಲಿ ಗುರುವಾರ ತುಮಕೂರು ಜಿಲ್ಲಾ ಕಾರ್ಮಿಕರ ಕಛೇರಿ ಎದುರು ಪ್ರತಿಭಟನೆ ನಡೆಸಲಾಯಿತು . ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿವತಿಯಿಂದ 2021-22ನೇ ಶೈಕ್ಷಣಿಕ ಸಾಲಿನಲ್ಲಿ ಮಂಡಳಿಗೆ ನಿಜವಾದ ಕಟ್ಟಡಕಾರ್ಮಿಕರು ಅರ್ಜಿಸಲ್ಲಿಸಿದವರಿಗೆ ಹಣಬಂದಿಲ್ಲ ಆದರೆ ಕಾರ್ಮಿಕರಲ್ಲದ ಮಕ್ಕಳಿಗೆ ಹಣ ಬಂದಿರುವುದು ಕಾರ್ಮಿಕ ಸಚಿವರ ದೊಡ್ಡ ಸಾದನೆಯಾಗಿದೆ ಎಸ್.ಎಸ್.ಪೋರ್ಟಲ್ ತಂತ್ರಾಂಶದಲ್ಲಿ ಆರ್ಜಿ ಹಾಕುವುದರಿಂದ ಪಾರದರ್ಶಕ ಇರುವುದಿಲ್ಲ ಸೇವಾಸಿಂಧುವಿನಲ್ಲಿ ಆಗಿರುವ ಸಣ್ಣ ಪುಟ್ಟ ದೋಷಗಳನ್ನು ಸರಿಪಡಿಸಿ ಮುಂದುವರಿಯಬೇಕೆಂದು ಕಟ್ಟಡ ಕಾರ್ಮಿಕ ಸಂಘಟನೆಗಳ ರಾಜ್ಯ ಸಮನ್ವಯ ಸಮಿತಿ ಮನವಿನೀಡಿ ಒತ್ತಾಯಿಸಿದರು. ಅಂದಿನ ಮಂಡಳಿಯ ಮುಖ್ಯಕಾರ್ಯ ನಿರ್ವಹಣಾಧಿಕಾರಿಗಳು ಹಟಕ್ಕೆಬಿದ್ದು ಜಾರಿಮಾಡಿದ್ದರಿಂದ ದೊಡ್ಡ ಹಗರಣ ನಡೆದಿದೆ. 2022-23ನೇ ಸಾಲಿನ ಶೈಕ್ಷಣಿಕ ಧನಸಹಾಯ ಪಡೆಯಲು ಅರ್ಜಿ ಹಾಕಲು ಸಹ ಅವಕಾಶ ನೀಡದೆ ಕಾರ್ಮಿಕರಿಗೆ ವಂಚನೆ ಯಾಗಿರುವುದನ್ನು ಖಂಡಿಸಿ ಪರಿಹಾಕೆ ಇಂದು ರಾಜ್ಯದಾದ್ಯಂತ ಜಂಟಿ ಹೋರಾಟ ರೂಪಿಸಲಾಗಿತ್ತು. ಹೋರಾಟವನ್ನು…
ತಿಪಟೂರು ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ಮುನ್ನುಗುತ್ತಿರುವ ಭಾರತ್ ಜೋಡೋ ಯಾತ್ರೆಗೆ ಬೆಂಬಲ ಸೂಚಿಸಿ ಆಯೋಜಿಸಿದ್ದ ನವಜಾಗರಣ ಕಲಾಕೃತಿ ಪ್ರದರ್ಶನಕ್ಕೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಚಾಲನೆ ನೀಡಿ, ಮೆಚ್ಚುಗೆ ಸೂಚಿಸಿದರು. ಬೆಂಗಳೂರಿನ ಕರ್ನಾಟಕ ಚಿತ್ರಕಲಾ ಪರಿಷತ್‍ನಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಕ್ಯಾನ್ವಾಸ್ ಹಾಳೆಯ ಮೇಲೆ ಸಹಿ ಮಾಡುವ ಮೂಲಕ ಪ್ರದರ್ಶನಕ್ಕೆ ಚಾಲನೆ ನೀಡಿದ ಡಿಕೆಶಿ, ಕಾರ್ಯಕ್ರಮದ ಪ್ರಾಯೋಜಕತ್ವ ವಹಿಸಿರುವ ತಿಪಟೂರಿನ ಕಾಂಗ್ರೆಸ್ ಮುಖಂಡ ಟೂಡಾ ಶಶಿಧರ್ ಬೆನ್ನುತಟ್ಟಿದರು. ದೇಶದಲ್ಲಿ ಸಾಮರಸ್ಯ ಸಂಪ್ರದಾಯವನ್ನು ಪುನರುಜ್ಜೀವನಗೊಳಿಸುವ ಅಭಿಯಾನ ಅಂಗವಾಗಿ ನಡೆಯುವ ಭಾರತ್ ಜೋಡೋ ಯಾತ್ರೆಯನ್ನು ಒಗ್ಗಟ್ಟಿನಿಂದ ಬೆಂಬಲಿಸಿರುವ ರಾಜ್ಯದ ಸುಪ್ರಸಿದ್ಧ ಕಲಾವಿದರ ಕಲಾಕೃತಿಗಳು ಪ್ರದರ್ಶನದಲ್ಲಿರುವುದು ವಿಶೇಷ ಎನ್ನಿಸಿದೆ. `ದಿ ರೆನೈಸನ್ಸ್’ ವರ್ಣಚಿತ್ರ ಮತ್ತು ಪೆÇೀಟೋಗ್ರಫಿಮೂಲಕ ಬೆಂಬಲಿಸಿ ವರ್ಣರಂಜಿತವಾಗಿಸುತ್ತಿರವ ನವಜಾಗರಣ ಕಲಾಕೃತಿ ಪ್ರದರ್ಶನದ ಉದ್ಘಾಟನಾ ಸಮಾರಂಭದಲ್ಲಿ ಸಿಕೆಪಿ ಅಧ್ಯಕ್ಷ ಬಿ.ಎಲ್.ಶಂಕರ್, ನಿವೃತ್ತ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್, ಮುಖಂಡರಾಡ ಡಾ.ಧ್ವಾಕರನಾಥ್, ದೊಡ್ಡಿಪಾಳ್ಯ ನರಸಿಂಹಮೂರ್ತಿ ಮತ್ತಿತರರು ಇದ್ದರು.
ತುಮಕೂರು ಕನ್ನಡ ನಾಡಿಗೆ ಕನ್ನಡವೇ ಬೇಕು ಎಂದು ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನ ಅಧ್ಯಕ್ಷರಾದ ಪ್ರೊ. ಕೆ.ಎಸ್ ಸಿದ್ಧಲಿಂಗಪ್ಪನವರು ಅಭಿಪ್ರಾಯಪಟ್ಟರು. ನಗರದ ಶ್ರೀ ಸಿದ್ದಾರ್ಥ ಪ್ರಥಮ ದರ್ಜೆ ಕಾಲೇಜು, ಐಕ್ಯೂಎಸಿ ವಿಭಾಗ ಮತ್ತು ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಶಿಕ್ಷಣ ಶಿಲ್ಪಿ ಡಾ.ಎಚ್.ಎಂ.ಗಂಗಾಧರಯ್ಯ ಸ್ಮಾರಕ ಉಪನ್ಯಾಸ ಮಾಲಿಕೆ-7ರಲ್ಲಿ ಕನ್ನಡ ರಾಜ್ಯೋತ್ಸವ ಅಂಗವಾಗಿ ಕನ್ನಡ ನಾಡು ನುಡಿ ವಿಚಾರಗಳು ಉಪನ್ಯಾಸ ಮಾಲಿಕೆಯನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಸುಮಾರು 2500 ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯು ಕಾಲಾಂತರ ಬದಲಾಗುತ್ತ ಬಂದಿದೆ. ಇಂದಿನ ದಿನಗಳಲ್ಲಿ ಭಾಷೆಯು ತನ್ನ ಮೌಲ್ಯವನ್ನು ಕಳೆದುಕೊಳ್ಳುತ್ತಿದೆ. ವೈಜ್ಞಾನಿಕ ತಳಹದಿ ಇರುವ ಕನ್ನಡ ಭಾಷೆಯನ್ನು ಜನರು ಪ್ರಯೋಗಾತ್ಮಕವಾಗಿ ಬಳಸಬೇಕು. ವಿಷಯ ಅರ್ಥವಾಗುವಂತೆ ಹಾಗೂ ಭಾವನೆಗಳನ್ನು ವ್ಯಕ್ತಪಡಿಸುವ ಸಂವಹನ ಮಾಧ್ಯಮವೇ ಭಾಷೆ. ಈ ಭಾಷೆಗೆ ತನ್ನದೇ ಆದ ಮಹತ್ವವಿದೆ ಎಂದು ತಿಳಿಸಿದರು. ಪ್ರಾಂಶುಪಾಲರಾದ ಡಾ.ವಿಜಯ ಭಾಸ್ಕರ್ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಭಾಷೆ ಎನ್ನುವುದು ಕೇವಲ…
ತುಮಕೂರು ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2023ರ ಸಂಬಂಧ ತುಮಕೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳ ಎಲ್ಲಾ ಮತಗಟ್ಟೆಗಳಲ್ಲಿ ಕರಡು ಮತದಾರರ ಪಟ್ಟಿಗಳನ್ನು ಸಾರ್ವಜನಿಕರ ಮಾಹಿತಿಗಾಗಿ ಪ್ರಚುರಪಡಿಸಲಾಗಿದೆ. ವೇಳಾಪಟ್ಟಿಯನ್ವಯ ಸಾರ್ವಜನಿಕರ ಮಾಹಿತಿಗಾಗಿ ಈಗಾಗಲೇ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತಗಟ್ಟೆಗಳಲ್ಲಿ ಕರಡು ಮತದಾರರ ಪಟ್ಟಿಯನ್ನು ಪ್ರಚುರಪಡಿಸಲಾಗಿದ್ದು, ಡಿಸೆಂಬರ್ 8ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲಾಗುವುದು. ಈ ಅವಧಿಯಲ್ಲಿ ಬಿ.ಎಲ್.ಓ.ಗಳು ಮನೆ-ಮನೆಗೆ ಭೇಟಿ ನೀಡಿ ಅರ್ಹ ಮತದಾರರಿಂದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಹೆಸರನ್ನು ತೆಗೆದು ಹಾಕುವ ಅಥವಾ ವರ್ಗಾವಣೆ ಮಾಡುವ ಬಗ್ಗೆ ಅಗತ್ಯ ದಾಖಲೆಗಳೊಂದಿಗೆ ಆನ್‍ಲೈನ್ ಮೂಲಕ ಅರ್ಜಿ ಪಡೆಯಲಿದ್ದಾರೆ. ನಂತರ 2023ರ ಜನವರಿ 5ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು. ಕರಡು ಮತದಾರರ ಪಟ್ಟಿಯಲ್ಲಿ 10,82,752 ಪುರುಷರು, 10,79,769 ಮಹಿಳೆಯರು, 92 ಇತರರು ಸೇರಿದಂತೆ ಒಟ್ಟು 21,62,613 ಮತದಾರರಿದ್ದು, ಸೇವಾ ಮತದಾರರ ಪಟ್ಟಿಯಲ್ಲಿ 749 ಪುರುಷರು, 40 ಮಹಿಳೆಯರು ಸೇರಿದಂತೆ ಒಟ್ಟು 789 ಮತದಾರರಿರುತ್ತಾರೆ. ಅಲ್ಲದೆ, ಜಿಲ್ಲೆಯಲ್ಲಿ 26,856…
ತುಮಕೂರು ಮತದಾನ ಪ್ರಕ್ರಿಯೆಯಲ್ಲಿ ಯುವ ಸಮೂಹದ ಪಾತ್ರ ಅಪಾರವಾದುದು ಎಂದು ತುಮಕೂರು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಡಾ. ಕೆ.ವಿದ್ಯಾಕುಮಾರಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ತುಮಕೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸ್ವೀಪ್ ಸಮಿತಿ ಇವುಗಳ ಸಂಯುಕ್ತಾಶ್ರಯದಲ್ಲಿ ಕಾಲೇಜಿನ ವಿಶ್ವ ಮಾನವ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮತದಾರರ ಜಾಗೃತಿ ಕ್ಲಬ್ನ ಸದಸ್ಯರುಗಳು ಹಾಗೂ ಕ್ಯಾಂಪಸ್ ಅಂಬಾಸಿಡರ್ ಗಳಿಗೆ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2023 ಕುರಿತು ಗುರುವಾರ ಪ್ರಕಟವಾಗಲಿರುವ ಮತದಾರರ ಪಟ್ಟಿ ಕುರಿತ ಜಾಗೃತಿ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು. 18 ವರ್ಷ ಪೂರೈಸಿದ ಪ್ರತಿಯೊಬ್ಬ ಪ್ರಜೆಯೂ ತಪ್ಪದೇ ಮತದಾರರ ಪಟ್ಟಿಯಲ್ಲಿ ಹೆಸರನ್ನು ಸೇರ್ಪಡೆ ಮಾಡಿಕೊಳ್ಳಬೇಕು. ನಮ್ಮ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರೂ ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕು. ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರ್ಪಡೆ ಮಾಡಿಕೊಳ್ಳಲು ಹಾಗೂ ಮರಣಹೊಂದಿದ ವ್ಯಕ್ತಿಗಳ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲು ಪ್ರತಿಯೊಬ್ಬರೂ ಶ್ರಮ…
ಗುಬ್ಬಿ ಗುಬ್ಬಿಯ ಗೋಸಲ ಶ್ರೀ ಚನ್ನಬಸವೇಶ್ವರರವರಿಗೆ ನಾಡಿನಾದ್ಯಂತ ಭಕ್ತ ವೃಂದವಿದ್ದು, ಕಾರ್ತಿಕ ಮಾಸದ ದೀಪೋತ್ಸವ ಹಾಗೂ ರಾತ್ರಿಯಲ್ಲಿ ನಡೆಯುವ ಹೂವಿ£ Àವಾಹನವು ಇತಿಹಾಸ ಪ್ರಸಿದ್ಧವಾಗಿದ್ದು, ಈ ಹೂವಿನ ವಾಹನಕ್ಕೆ ಪಟ್ಟಣದ ಹಾಗೂ ಸುತ್ತಮುತ್ತಲಿನ 18 ಕೋಮಿನ ಜನಾಂಗವು ಭಕ್ತವೃಂದವಾಗಿದ್ದು, ಇಲ್ಲಿನ ಕಾರ್ಯನಿರ್ವಹಣಾಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿರುವ ಅಧಿಕಾರಿ ಮನಸ್ಸೋ ಇಚ್ಛೆ ನಡೆದುಕೊಂಡು 18 ಕೋಮಿನ ಯಜಮಾನರುಗಳಿಗೆ ಅವಮಾನ ಮಾಡಿರುವುದು ಎಷ್ಟು ಸಮಂಜಸ…? ಪ್ರತಿ ಹೂವಿನವಾಹನ ನಡೆಸುವ ಹಿಂದಿನ ದಿನಗಳಲ್ಲಿ 18 ಕೋಮಿನ ಯಜಮಾನರುಗಳನ್ನು ಕರೆದು ಕಾರ್ಯಕ್ರಮವನ್ನು ರೂಪಿಸಲಾಗುತ್ತಿತ್ತು. ಈ ಬಾರಿ ಯಾವುದೇ ಪೂರ್ವಭಾವಿ ಸಭೆ ನಡೆಸದೆ ಈಗಾಗಲೇ ಕರಪತ್ರವನ್ನು ಮುದ್ರಿಸಿ ಹಂಚುತ್ತಿರುವುದು ಯಜಮಾನರುಗಳ ಕಿಡಿಗಣ್ಣಿಗೆ ಕಾರಣವಾಗಿದೆ. ಕೇವಲ ಮುಜರಾಯಿ ಇಲಾಖೆಯ ದೇವಸ್ಥಾನ ಎಂದು ಇಲ್ಲಿನ ಭಕ್ತರು ಯಾವತ್ತೂ ತಿಳಿದಿಲ್ಲ. ಹೂವಿನ ವಾಹನಕ್ಕೆ ಬಟ್ಟೆ ಕಟ್ಟುವುದರಿಂದ ಹಿಡಿದು ಹೂವಿನ ಅಲಂಕಾರ ಹಾಗೂ ಹೂವಿನ ಪಲ್ಲಕ್ಕಿಯನ್ನು ಮೆರಸುವವರು ಅಧಿಕಾರಿಗಳೇ… ಅಥವಾ ಯಜಮಾನರುಗಳೇ… ಎಂಬ ಪ್ರಶ್ನೆ ಭಕ್ತರಲ್ಲಿ ಕಾಡುತ್ತಿದೆ. ಪ್ರತಿ ವರ್ಷವೂ ಶ್ರೀ ಚನ್ನಬಸವೇಶ್ವರ ಸ್ವಾಮಿ ದೇವಸ್ಥಾನದಿಂದ…
ತುಮಕೂರು ಸ್ವಯಂ ಉದ್ಯೋಗ ಕೈಗೊಳ್ಳುವ ನಿಟ್ಟಿನಲ್ಲಿ ನೀಡುತ್ತಿರುವ ತರಬೇತಿ ಪ್ರಯೋಜನವನ್ನು ಪಡೆಯಬೇಕೆಂದು ಜಿಲ್ಲಾ ಕಾರಾಗೃಹದ ಅಧೀಕ್ಷಕಿ ಎಂ. ಶಾಂತಮ್ಮ ಕಾರಾಗೃಹ ಬಂದಿಗಳಿಗೆ ಕರೆ ನೀಡಿದರು. ಜಿಲ್ಲಾ ಕಾರಾಗೃಹದಲ್ಲಿ ಬಂದಿಗಳಿಗಾಗಿ ಹಮ್ಮಿಕೊಂಡಿದ್ದ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಕಾರ್ಯಾಗಾರದಲ್ಲಿ ಎಸ್‍ಬಿಐ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಬಂದಿಗಳಿಗೆ ಜೇನು ಸಾಕಾಣಿಕೆ, ಮೊಬೈಲ್ ರಿಪೇರಿ, ಎಲೆಕ್ಟ್ರಿಕಲ್ ರಿಪೇರಿ ಸೇರಿದಂತೆ ವಿವಿಧ ತರಬೇತಿಗಳನ್ನು ನೀಡಲಾಗುತ್ತಿದ್ದು, ತರಬೇತಿ ಪಡೆದವರಿಗೆ ಪ್ರಮಾಣ ಪತ್ರ ನೀಡಲಾಗುವುದು. ಕಾರಾಗೃಹದಿಂದ ಬಿಡುಗಡೆಯಾದ ನಂತರ ಬಂದಿಗಳು ಪ್ರಮಾಣಪತ್ರಗಳನ್ನು ತೋರಿಸಿದಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಲು ಬ್ಯಾಂಕ್‍ಗಳಿಂದ ಸಾಲ ದೊರೆಯಲಿದೆ ಎಂದು ತಿಳಿಸಿದರು. ಎಸ್‍ಬಿಐ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕ ಎಸ್. ಅರುಣ್ ಕುಮಾರ್ ಮಾತನಾಡಿ ಸ್ವಯಂ ಉದ್ಯೋಗ ಕಲ್ಪಿಸುವುದು ನಮ್ಮ ಸಂಸ್ಥೆಯ ಉದ್ದೇಶ. ಕಲಿಕೆ ನಿರಂತರವಾಗಿರಬೇಕು. ಆಸಕ್ತಿವಹಿಸಿ ಕಲಿತು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಮಾರ್ಗದರ್ಶನ ನೀಡಿದರು. ಎಸ್‍ಬಿಐ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ರಾಜಶೇಖರ್…










