Author: News Desk Benkiyabale

ಪಾವಗಡ ಅತಿವೃಷ್ಟಿ ಮತ್ತು ಅನಾವೃಷ್ಟಿಗೆ ಈ ಗಡಿ ಪ್ರದೇಶ ನಿರಂತರವಾಗಿ ತುತ್ತಾಗುತ್ತಿದ್ದು ಈ ಬಾರಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ರೈತರು ತಮ್ಮ ಜಮೀನಿನಲ್ಲಿ ಇಟ್ಟ ಫಸಲು ಕೈಗೆ ಬಾರದೆ ಮಣ್ಣಲ್ಲೇ ಕೊಳೆತು ಮಣ್ಣಾಗಿ ಹೋಗುವ ಸ್ಥಿತಿ ನಿರ್ಮಾಣಗೊಂಡಿರುವುದರಿಂದ ಸರ್ಕಾರ ತಕ್ಷಣ ರೈತರ ನೆರವಿಗೆ ಬರಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಘಟಕದ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ. ತಾಲ್ಲೂಕಿನ ಕಸಬಾ ಹೋಬಳಿಯ ಕನ್ನಮೇಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ವೀರ್ಲಗೊಂದಿ ಗ್ರಾಮದ ಸರ್ವೆ ನಂಬರ್ 5 / 2 ಹಾಗೂ 7/1 ರ ಸುಮಾರು 7 ಎಕರೆ ಜಮೀನಿನಲ್ಲಿ ಚೌಡಮ್ಮ ಎಂಬ ರೈತ ಮಹಿಳೆ ತಮ್ಮ ಜಮೀನಿನಲ್ಲಿ ಬೆಳೆದ ಶೇಂಗಾ ಬೆಳೆಯು ಕಟಾವು ಮಾಡಿದ ನಂತರ ನಿರಂತರವಾಗಿ ಸುರಿದ ಮಳೆಯಿಂದಾಗಿ ತಮ್ಮ ಜಮೀನಿನಲ್ಲಿಯೇ ಕೊಳೆತು ಹೋಗುವ ಸ್ಥಿತಿಯಲ್ಲಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಘಟಕದ…

Read More

ಪಾವಗಡ ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಾಲೂಕಿನ ಬಹುತೇಕ ಕೆರೆಗಳು ತುಂಬಿ ಹರಿಯುತ್ತಿವೆ. ಕೆಲವು ಗ್ರಾಮಗಳಲ್ಲಿ ಮನೆಗಳಿಗೆ ನೀರು ನುಗ್ಗಿ ನೂರಾರು ಜನರು ಸಂಕಷ್ಟಕ್ಕೊಳಗಾದರೆ ಇನ್ನೂ ಕೆಲವು ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿತವಾಗಿರುವುದರಿಂದ ಜನಜೀವನ ಅಸ್ತವ್ಯಗೊಂಡಿದೆ. ತಾಲ್ಲೂಕು ಕೇಂದ್ರದಿಂದ ಶಿರಾ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯು ಕಿಲಾರ್ಲಹಳ್ಳಿ ಬಳಿ ರಸ್ತೆಯ ಮೇಲೆ ಸುಮಾರು ಮೂರರಿಂದ ನಾಲ್ಕು ಅಡಿ ನೀರು ಹರಿಯುತ್ತಿದ್ದು ಮತ್ತು ಗುಂಡಿಗಳಿಂದ ಕೂಡಿರುವುದರಿಂದ ರಸ್ತೆ ದಾಟಲು ವಾಹನ ಸವಾರರು ಹರ ಸಾಹಸ ಪಡುವಂತಾಗಿದೆ. ಇಲ್ಲಿ ಸೇತುವೆ ಇಲ್ಲದೆ ಇರುವುದೇ ಈ ಅವಾಂತರಕ್ಕೆ ಕಾರಣವಾಗಿದ್ದು , ಅನ್ಯಮಾರ್ಗವಿಲ್ಲದೆ ವಾಹನ ಸವಾರರು ತಮ್ಮ ಪ್ರಾಣವನ್ನು ಕೈಯಲ್ಲಿ ಹಿಡಿದುಕೊಂಡು ಇಲ್ಲೇ ಚಲಿಸುವ ಸ್ಥಿತಿ ನಿರ್ಮಾಣವಾಗಿದೆ. ಕನ್ನಮೆಡಿ, ಕೊತ್ತೂರು , ಹರಿಹರಪುರ ಹಾಗೂ ಸಿಕೆಪುರ ಗ್ರಾಮಗಳ ಕೆರೆಗಳು ತುಂಬಿ ಹರಿಯುತ್ತಿರುವುದರಿಂದ ಎಲ್ಲಾ ಕೆರೆಗಳ ನೀರು ಇದೇ ರಸ್ತೆ ಮೇಲೆ ಹೋಗುವುದರಿಂದ ಈ ರಸ್ತೆ ಮಾರ್ಗ ತುಂಬಾ ಅಪಾಯ ಸ್ಥಿತಿಯಲ್ಲಿದೆ. ಸುಮಾರು ಒಂದು…

Read More

ಪಾವಗಡ ಪೆÇೀಷಕರು ಮಕ್ಕಳ ಮೇಲೆ ಒತ್ತಡ ಹೇರುವುದು ತಮ್ಮ ಮಕ್ಕಳ ಭವಿಷ್ಯ ರೂಪಿಸಲು ಹೊರತು ಯಾವುದೇ ತಾರತಮ್ಯಕಲ್ಲ ಅಧ್ಯಕ್ಷರು ತಾಲೂಕು ಕಾನೂನು ಸೇವಾ ಸಮಿತಿ ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶರು ಎಂ ಎಸ್ ಹರಿಣಿ ಹೇಳಿದರು. ಪಾವಗಡ ತಾಲೂಕು ಕಾನೂನು ಸೇವಾ ಸಮಿತಿ ಪಾವಗಡ ವಕೀಲರ ಸಂಘ ಮತ್ತು ಮಾನವ ಹಕ್ಕುಗಳ ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆ ಹಾಗೂ ಶ್ರೀಶೈಲ ಇಂಟನ್ರ್ಯಾಷನಲ್ ಸ್ಕೂಲ್ ಇವರ ಸಂಯುಕ್ತ ಆಶ್ರಯದಲ್ಲಿ 75 ಅಮೃತ ಮಹೋತ್ಸವ ಕಾರ್ಯಕ್ರಮ ಮತ್ತು ಮಾನಸಿಕ ಆರೋಗ್ಯ ಹಾಗೂ ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಪೆÇೀಷಕರು ಮಕ್ಕಳ ಮೇಲೆ ಒತ್ತಡ ಹಾಕುವ ಮೂಲಕ ಪದೇ ಪದೇ ಓದುವ ಹಾಗೂ ತಮ್ಮ ನಡತೆಯಗಳ ಬಗ್ಗೆ ಒತ್ತಡ ಹೇರುವುದು ಅದು ನಿಮ್ಮ ಮಕ್ಕಳ ಭವಿಷ್ಯಕ್ಕೆ ಪೂರಕವಾಗಲೆಂಬುದು ಉದ್ದೇಶ ಹೊರೆತು ಬೇರೆ ಯಾವುದೇ ತರಹದ ಉದ್ದೇಶ ಅವರದಾಗಿರುವುದಿಲ್ಲ. ಹಾಗಾಗಿ ಮಕ್ಕಳು ತಮ್ಮ ಪೆÇೀಷಕರ ಮಾತುಗಳನ್ನು ಕೇಳಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು…

Read More

ಗುಬ್ಬಿ ಸಾಮಾನ್ಯ ಸಭೆಯಲ್ಲಿ ಸದಸ್ಯರಿಗೆ ಸರ್ಕಾರದ ಕಾರ್ಯಕ್ರಮ ಬಗ್ಗೆ ಬಿಡಿಯಾಗಿ ವಿವರಿಸುವ ಬದಲು ಎಲ್ಲಾ ಪಪಂ ಸದಸ್ಯರಿಗೆ ಅಜೆಂಡಾ ಜೊತೆಯಲ್ಲೇ ಸರ್ಕಾರದ ಆದೇಶ, ಸುತ್ತೋಲೆಯ ಪ್ರತಿಯನ್ನು ಕಳುಹಿಸಿಕೊಡಿ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಉಪಾಧ್ಯಕ್ಷೆ ಮಹಾಲಕ್ಷ್ಮೀ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಅಭಿವೃದ್ದಿ ಕೆಲಸದಲ್ಲಿ ಅಧಿಕಾರಿಗಳು ಮತ್ತು ಜನ ಪ್ರತಿನಿಧಿಗಳ ಸಹಭಾಗಿತ್ವ ಉತ್ತಮವಾಗಿರಬೇಕು. ಸಭೆಯಲ್ಲಿ ಬರೀ ಒಬ್ಬರಿಗೊಬ್ಬರು ದೂಷಿಸುವ ಬದಲು ಅಧಿಕಾರಿಗಳು ಪ್ರತಿ ಸದಸ್ಯರ ವಾರ್ಡ್ ಗಳ ಸಮಸ್ಯೆ ಅಳಿಸಿ ಹಾಗೆಯೇ ಸರ್ಕಾರದ ಕಾರ್ಯಕ್ರಮ ಅನುಷ್ಠಾನಕ್ಕೆ ಪ್ರಾಮಾಣಿಕವಾಗಿ ದುಡಿಯಿರಿ ಎಂದು ಸಲಹೆ ನೀಡಿದರು. ಅಭಿವೃದ್ದಿ ಕೆಲಸ ವಿಚಾರದಲ್ಲಿ ತಾರತಮ್ಯ ನಡೆಯುತ್ತಿದೆ. ಒಂದೊಂದು ವಾರ್ಡ್ ನಲ್ಲಿ ಒಂದು ಬಗೆಯ ಕೆಲಸ ನಡೆದಿದೆ. ಪಕ್ಷಾತೀತ ನಿಲುವು ಅಭಿವೃದ್ದಿ ವಿಚಾರದಲ್ಲಿ ಕಾಣಬೇಕು ಎಂದು ಕೆಲ ಸದಸ್ಯರು ಆಗ್ರಹಿಸಿದರು. ಕೋವಿಡ್ ನಂತರದಲ್ಲಿ ಪಟ್ಟಣ ಅಭಿವೃಧ್ದಿ ಕೆಲಸಗಳು ಚುರುಕುಗೊಳಿಸುವ ಅವಶ್ಯವಿದೆ. ವಿಶೇಷ ಅನುದಾನ ನಗರೋತ್ಥಾನ ಯೋಜನೆಯಡಿ ಬಂದ 14 ಕೋಟಿ…

Read More

ತುಮಕೂರು ಗೂಳೂರು ಹೋಬಳಿಯ ಹೊನ್ನುಡಿಕೆ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ವೆಂಕಟೇಶ್ ಎನ್ ಆರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹೊನ್ನುಡಿಕೆ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 17 ಗ್ರಾಮ ಪಂಚಾಯಿತಿ ಸದಸ್ಯರಲ್ಲಿ 11 ಬಿಜೆಪಿ ಸದಸ್ಯರು ಮತ್ತು ಜೆಡಿಎಸ್ ನ 6 ಸದಸ್ಯರಿದ್ದು, ಬಿಜೆಪಿ ಬೆಂಬಲಿತ ಸದಸ್ಯರಿಂದ ಹೊನ್ನುಡಿಕೆ ಗ್ರಾಮ ಪಂಚಾಯಿತಿಯ ಅಧ್ಯಕ್ಷನಾಗಿ ಎಸ್ಸಿ ಸಮುದಾಯದ ವೆಂಕಟೇಶ್ ಅವರನ್ನ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಈಗಾಗಲೇ ಅಧ್ಯಕ್ಷರಾಗಿ ರಾಜೀನಾಮೆ ನೀಡಿದ ಶ್ರೀಮತಿ ಉಮಾದೇವಿ ಶ್ರೀನಿವಾಸ್ ಅವರಿಂದ ತೆರವಾದ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾದ ವೆಂಕಟೇಶ್ ಎನ್ ಆರ್ ಅವರು ಮಾತನಾಡಿ ನಾನು ಅಧ್ಯಕ್ಷನಾಗಲು ಕಾರಣರಾದ ಗ್ರಾಮಾಂತರ ಮಾಜಿ ಶಾಸಕ ಶ್ರೀ ಬಿ ಸುರೇಶ್ ಗೌಡರವರಿಗೆ ಧನ್ಯವಾದಗಳುನ್ನು ಅರ್ಪಿಸಿದರು. ಅಧ್ಯಕ್ಷನಾಗಲು ಸಹಕರಿಸಿದ ಜಿಲ್ಲಾ ಪಂಚಾಯಿತಿ ಮುಖಂಡರಾದ ಸಿದ್ದೇಗೌಡ, ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರಿಗೆ ತುಂಬು ಹೃದಯದ ಧನ್ಯವಾದಗಳು ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ನೀಡುವ ಮೂಲಕ ಅಭಿವೃದ್ಧಿಪಡಿಸುವ ಇಂಗಿತವನ್ನು ವ್ಯಕ್ತಪಡಿಸಿದರು.…

Read More

ತುಮಕೂರು ಸ್ವಯಂ ಉದ್ಯೋಗ ಕೈಗೊಳ್ಳುವ ಮೂಲಕ ಸ್ವಾವಲಂಬಿ ಜೀವನ ನಡೆಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ. ವಿದ್ಯಾ ಕುಮಾರಿ ಅವರು ಕೌಶಲ್ಯ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಕರೆ ನೀಡಿದರು. ನಗರದ ಎ.ಟಿ.ಡಿ.ಸಿ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯಾಭಿವೃದ್ಧಿ ಕಛೇರಿ ಮತ್ತು ಎ.ಟಿ.ಡಿ.ಸಿ ಕೌಶಲ್ಯ ತರಬೇತಿ ಕೇಂದ್ರದ ಸಹಯೋಗದಲ್ಲಿಂದು ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಕಾರ್ಯಕ್ರಮದ ಸಂಕಲ್ಪ ಯೋಜನೆಯಡಿ ಕೌಶಲ್ಯ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಟೂಲ್‍ಕಿಟ್ ವಿತರಣಾ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಸರ್ಕಾರ ಮತ್ತು ಬಹುರಾಷ್ಟ್ರೀಯ ಕಂಪನಿಗಳಲ್ಲಿ ಎಲ್ಲರಿಗೂ ನೌಕರಿ ದೊರೆಯುವುದು ಸುಲಭವಲ್ಲ. ಸರ್ಕಾರಿ ಉದ್ಯೋಗ ದೊರೆಯಬೇಕೆಂದರೆ ನಿಗಧಿಪಡಿಸಿದ ವಿದ್ಯಾಭ್ಯಾಸ ಹೊಂದಿರಬೇಕು. ವಿದ್ಯಾಭ್ಯಾಸ ಇಲ್ಲದಿರುವವರಿಗೆ ಇಂತಹ ಕೌಶಲ್ಯ ತರಬೇತಿ ಪ್ರಯೋಜಕಾರಿಯಾಗಿದೆ. ಕೌಶಲ್ಯ ತರಬೇತಿ ಪಡೆದವರು ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸದೃಢರಾಗಬೇಕು ಎಂದು ತಿಳಿಸಿದರು. ತರಬೇತಿ ಪಡೆದವರು ಗಾರ್ಮೆಂಟ್ಸ್ ಉದ್ಯೋಗ ಹಾಗೂ ಸ್ವಯಂ ಉದ್ಯೋಗವನ್ನು ಹೊಂದಬಹುದಾಗಿದೆ. ಇತ್ತೀಚಿನ ದಿನಗಳಲ್ಲಿ…

Read More

ತುಮಕೂರು ನಗರ ಭೂ ಸಾರಿಗೆ ನಿರ್ದೇಶನಾಲಯ(ಆUಐಖಿ)ವು ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್, ಕರ್ನಾಟಕ ಬೈಸಿಕಲ್ ಡೀಲರ್ಸ್ ಅಸೋಸಿಯೇಷನ್ ಹಾಗೂ ಬೈಸಿಕಲ್ ವಲ್ರ್ಡ್ ಅಸೋಸಿ ಯೇಷನ್ ಸಹಯೋಗದಲ್ಲಿ ಅಕ್ಟೋಬರ್ 16ರಂದು ನಗರದಲ್ಲಿ ‘ಸೈಕಲ್ ದಿನ’ ಆಚರಣೆ ಕಾರ್ಯಕ್ರಮವನ್ನು ಆಯೋಜಿಸಿದೆ ಎಂದು ಸ್ಮಾರ್ಟ್ ಸಿಟಿ ಲಿಮಿಟೆಡ್‍ನ ವ್ಯವಸ್ಥಾಪಕ ನಿರ್ದೇಶಕ ಬಿ.ಟಿ.ರಂಗಸ್ವಾಮಿ ತಿಳಿಸಿದ್ದಾರೆ. ನಗರದಲ್ಲಿ ಸೈಕಲ್ ಸವಾರಿಯನ್ನು ಉತ್ತೇಜಿಸಲು, ಸಾರ್ವಜನಿಕರು ಸೈಕಲ್ ಸವಾರರೊಂದಿಗೆ ಸಂವಹನ ನಡೆಸಲು, ಸ್ಪರ್ಧೆ ಮತ್ತು ಆಟಗಳಲ್ಲಿ ಭಾಗವಹಿಸಲು ವೇದಿಕೆಯನ್ನು ಒದಗಿಸಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ವಾಹನ ಸಂಚಾರ ನಿರ್ಬಂಧ: ದಿನಾಚರಣೆ ಪ್ರಯುಕ್ತ ಅಕ್ಟೋಬರ್ 16ರ ಬೆಳಿಗ್ಗೆ 6 ರಿಂದ 11 ಗಂಟೆಯವರೆಗೆ ಕೋಡಿ ಬಸವೇಶ್ವರ ವೃತ್ತದಿಂದ ಕರಿ ಬಸವೇಶ್ವರ ರಸ್ತೆಯವರೆಗೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಈ ಅವಧಿಯಲ್ಲಿ ಸೈಕಲ್ ಸವಾರಿ ತರಬೇತಿ, ಚಿಣ್ಣರಿಗಾಗಿ ಸೈಕಲ್ ರೇಸ್, ಸ್ಲೋ ಸೈಕಲ್ ರೇಸ್, ಕಲ್ಚರಲ್ ಗೇಮ್ಸ್, ಇ-ಚಲನ್‍ಗಳ ಪಾವತಿ, ಪ್ಯಾನಿಕ್ ಬಟನ್ ಬಳಕೆ ಇತ್ಯಾದಿ ಚಟುವಟಿಕೆಗಳನ್ನು ನಡೆಸಲಾಗುವುದು. ಅಲ್ಲದೆ ಮಕ್ಕಳಿಗಾಗಿ ಉಚಿತ ಆರೋಗ್ಯ ತಪಾಸಣಾ…

Read More

ತುಮಕೂರು ಜಿಲ್ಲೆಯ ಎಲ್ಲಾ ಅಂಗಡಿ ಮುಂಗಟ್ಟುಗಳು, ಕಾರ್ಖಾನೆಗಳು, ಕಂಪನಿಗಳು ಅಕ್ಟೋಬರ್ ಅಂತ್ಯದೊಳಗಾಗಿ ಕನ್ನಡದಲ್ಲಿ ನಾಮಫಲಕಗಳನ್ನು ಕಡ್ಡಾಯವಾಗಿ ಅಳವಡಿಸಿರಬೇಕು.ತಪ್ಪಿದಲ್ಲಿ ಪರವಾನಗಿ ರದ್ದುಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಸೂಚಿಸಿದರು. ತಮ್ಮ ಕಚೇರಿಯ ನ್ಯಾಯಾಲಯದ ಸಭಾಂಗಣದಲ್ಲಿಂದು ಕನ್ನಡ ರಾಜ್ಯೋತ್ಸವ ಸಮಿತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಕಚೇರಿಗಳು, ಕಂಪನಿಗಳು, ಕಾರ್ಖಾನೆಗಳು, ಸೇರಿದಂತೆ ಎಲ್ಲೆಡೆ ಕನ್ನಡದಲ್ಲಿ ನಾಮಫಲಕ ಅಳವಡಿಸಬೇಕು. ಈ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಿ.ಎಂ. ರವಿಕುಮಾರ್ ಹಾಗೂ ಪಾಲಿಕೆ ಆಯುಕ್ತೆ ಆರ್ ರೇಣುಕಾ ಅವರಿಗೆ ಸಮನ್ವಯದಿಂದ ಕೆಲಸ ನಿರ್ವಹಿಸುವಂತೆ ತಿಳಿಸಿದರು. ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತದಿಂದ ಸಡಗರದಿಂದ ಕನ್ನಡ ರಾಜ್ಯೋತ್ಸವ ಆಚರಿಸಲಾಗುವುದು. ಈ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕೆಲಸ ನಿರ್ವಹಿಸಬೇಕು ಎಂದು ಹಾಜರಾಗಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಅವರು ನಿರ್ದೇಶಿಸಿದರು. ನವೆಂಬರ್ 1ರಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಿಂದ ಕನ್ನಡಾಂಬೆ ದೇವಿಯ ಪ್ರತಿಮೆಯನ್ನು ಅಲಂಕೃತ ಬೆಳ್ಳಿರಥದ…

Read More

ತುಮಕೂರು ಮಾನಸಿಕ ರೋಗಿಗಳ ಆರೋಗ್ಯ ಮತ್ತು ಯೋಗಕ್ಷೇಮ ನೋಡದೇ ಬೀದಿಯಲ್ಲಿ ಬಿಡುವುದು ಶಿಕ್ಷಾರ್ಹ ಅಪರಾಧವೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸ ತಿಳಿಸಿದರು. ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸ್ನೇಹ ಮನೋವಿಕಾಸ ಕೇಂದ್ರ, ಅಚರ್ಡ್ ಮದ್ಯವರ್ಜನ ಮತ್ತು ಸಮಗ್ರ ಪುನರ್ವಸತಿ ಕೇಂದ್ರದ ಸಂಯುಕ್ತಾಶ್ರಯದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಸಪ್ತಾಹದ ಅಂಗವಾಗಿ ಏರ್ಪಡಿಸಿದ್ದ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಮಾನಸಿಕ ರೋಗಿಗಳಿಗೆ ಸಮಾಜದಲ್ಲಿ ಬದುಕಲು ಅವಕಾಶ ನೀಡಬೇಕು. ಅವರನ್ನು ನಿರ್ಲಕ್ಷಕ್ಕೊಳಪಡಿಸಿದರೆ ಕಾನೂನಿನಡಿ 1ಲಕ್ಷ ರೂ. ದಂಡ, 1 ವರ್ಷ ಜೈಲು ಶಿಕ್ಷೆಗೆ ಅವಕಾಶವಿದೆ. ಮಾನಸಿಕ ರೋಗಿಗಳಿಗೆ ಚಿಕಿತ್ಸೆ ಕೊಡಿಸಲು ಕಷ್ಟವಾದಲ್ಲಿ ನ್ಯಾಯಧೀಶರಿಗೆ ಅಥವಾ ಜಿಲ್ಲಾ ಆರೋಗ್ಯ ಇಲಾಖೆಯ ತಜ್ಞರ ಗಮನಕ್ಕೆ ತಂದರೆ ಅವರನ್ನು ನಿಮ್ಹಾನ್ಸ್ ಸೇರಿದಂತೆ ಮಾನಸಿಕ ಚಿಕಿತ್ಸಾ ಕೇಂದ್ರಗಳಿಗೆ ದಾಖಲಿಸಲಾಗುವುದು ಎಂದು…

Read More

ತುಮಕೂರು ಉಪಗ್ರಹ ಉಡಾವಣೆ ಮಾಡಲು ಎಲ್ಲಾ ವಿಭಾಗದ ಇಂಜಿನಿಯರ್‍ಗಳ ಅವಶ್ಯಕತೆಯಿದೆ ಎಂದು ಇಸ್ರೋ ವಿಜ್ಞಾನಿ ಡಾ.ಡಿ. ವೆಂಕಟರಮಣ ತಿಳಿಸಿದರು. ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಐಇಇಇ ವಿದ್ಯಾರ್ಥಿ ವಿಭಾಗದಿಂದ ಆಯೋಜಿಸಿದ್ದ ಐಇಇಇ ದಿನಾಚರಣೆಯಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಲಿಕಾ ಹಂತದಲ್ಲೇ ಪ್ರಾಯೋಗಿಕ ತಿಳಿವಳಿಕೆ ನೀಡಲು ಇಸ್ರೋ ಸ್ಪೇಸ್ ಆನ್ ವ್ಹೀಲ್ಸ್‍ನ್ನು ಪರಿಚಯಿಸಿದೆ. ಯಾವುದೇ ಕ್ಷೇತ್ರದಲ್ಲಿ ಅಲ್ಪ ಸ್ವಲ್ಪ ತಪ್ಪುಗಳಾದರೆ ತಿದ್ದಿಕೊಳ್ಳಲು ಅವಕಾಶವಿರಹುದು ಆದರೆ ಬಾಹ್ಯಾಕಾಶ ಮತ್ತು ಉಪಗ್ರಹ ಉಡಾವಣೆಯಲ್ಲಿ ಶೇ.100ರಷ್ಟು ಎಲ್ಲವನ್ನೂ ಸರಿಯಾಗಿಯೇ ನಿಭಾಯಿಸಬೇಕು ಎಂದರು. ಸ್ಪೇಸ್ ಆನ್ ವ್ಹೀಲ್ಸ್ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬಾಹ್ಯಾಕಾಶ ಮತ್ತು ಉಪಗ್ರಹ ಉಡಾವಣೆ ಕುರಿತು ಪ್ರಾಯೋಗಿಕ ಮಾಹಿತಿ ಒದಗಿಸುತ್ತದೆ. ಹಾಗಾಗಿ ನಗರದ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸ್ಪೇಸ್ ಆನ್ ವ್ಹೀಲ್ಸ್‍ನ್ನು ನಗರದಲ್ಲಿ ಪರಿಚಯಿಸಲಾಗಿದೆ ಎಂದು ಅವರು ತಿಳಿಸಿದರು. ಸಾಹೇ ರಿಜಿಸ್ಟ್ರಾರ್ ಮತ್ತು ಐಇಇಇ ವಿದ್ಯಾರ್ಥಿ ವಿಭಾಗದ ಸಮಾಲೋಚಕರಾದ ಡಾಎಂ.ಝೆಡ್‍ಕುರಿಯನ್ ಮಾತನಾಡಿ, ಐಇಇಇ ವಿಭಾಗದಿಂದ ಐಇಇಇ ದಿನಾಚರಣೆ ಆಚರಿಸಲಾಗುತ್ತಿದೆ. ಇಸ್ರೋ ಸಹಯೋಗದೊಂದಿಗೆ…

Read More