Author: News Desk Benkiyabale

ತುಮಕೂರು ಕಾಂಗ್ರೆಸ್ ದೇಶವನ್ನು ಪಾಕಿಸ್ತಾನ, ಬಾಂಗ್ಲ ಎಂದು ದೇಶವನ್ನು ವಿಭಜಿಸಿ ಕೋಟ್ಯಾಂತರ ಜನರ ಹತ್ಯಾಕಾಂಡದ ನೆತ್ತರನ್ನು ಹರಿಸಿ, ಇದೀಗ ಭಾರತ್ ಜೋಡೋ ಯಾತ್ರೆ ಮಾಡುತ್ತಿರುವುದು ಹಾಸ್ಯಾಸ್ಪದ ಎಂದು ಬಿಜೆಪಿ ಜಿಲ್ಲಾ ಘಟಕ ಪ್ರಧಾನ ಕಾರ್ಯದರ್ಶಿ ಹೆಚ್.ಟಿ.ಭೈರಪ್ಪ ತೀವ್ರವಾಗಿ ಲೇವಡಿ ಮಾಡಿ ವಂಗ್ಯವಾಡಿದ್ದಾರೆ. ಇವರು ನಗರದ ಬಿಜೆಎಸ್ ವೃತ್ತದಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕವು ಕಾಂಗ್ರೆಸ್‍ನ ಭಾರತ್ ಜೋಡೋ ಯಾತ್ರೆ ವಿರುದ್ಧ ನಡೆಸಿದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ನೆಹರು ನೇತೃತ್ವದ ಕಾಂಗ್ರೆಸ್ ದೇಶವನ್ನು ಒಡೆದರು. ನಂತರ ಇಂದಿರಾಗಾಂಧಿ ಕರಾಳ ತುರ್ತುಪರಿಸ್ಥಿತಿ ಹೇರಿ, ದೇಶ ಭಕ್ತರನ್ನು ಸೆರೆವಾಸ ಅನುಭವಿಸುವಂತೆ ಮಾಡಿದರು. ಸುಮಾರು 60 ವರ್ಷಗಳ ಕಾಲ ದೇಶವನ್ನು ಆಳಿದ ಕಾಂಗ್ರೆಸ್ ಜನಪರ ಯೋಜನೆ-ಅಭಿವೃದ್ಧಿ ಹೆಸರಿನಲ್ಲಿ ಲಕ್ಷಾಂತರ ಕೋಟಿ ರೂಗಳ ಹಣ ಲೂಟಿ ಮಾಡಿದ್ದಾರೆ ಎಂದರಲ್ಲದೆ, ದೇಶದ ಅಲ್ಪಸಂಖ್ಯಾತರ ತುಷ್ಟಿಕರಣಕ್ಕೆ ಸಹಕರಿಸಿ ದೇಶದಲ್ಲಿ ನೆಮ್ಮದಿ-ಶಾಂತಿ-ಅಸೂಯೆ-ಮತ್ಸರ-ಸಮಾಜ ದ್ರೋಹಿ ಚಟುವಟಿಕೆ ಮಾಡುವವರಿಗೆ ಪ್ರೋತ್ಸಾಹಿಸುತ್ತಾ ದೇಶದ ಏಕತೆ-ಅಖಂಡತೆ-ಸಮಗ್ರತೆಗೆ ಧಕ್ಕೆ ತರುವವರಿಗೆ ಪ್ರೋತ್ಸಾಹಿಸುತ್ತಿದ್ದಾರೆ ಎಂದರು. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಟ ನಡೆಸಿದ…

Read More

ತುಮಕೂರು ರೋಟರಿ ತುಮಕೂರು ವತಿಯಿಂದ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ವೈದ್ಯರು, ಕ್ರೀಡಾಪಟುಗಳು ಹಾಗೂ ಶಿಕ್ಷಣ ತಜ್ಞರು ಆದ ಡಾ.ಜಯರಾಮರಾವ್ ಹಾಗೂ ಕಸಾಪ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ಅವರುಗಳನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ನಗರದ ಬಿ.ಹೆಚ್.ರಸ್ತೆಯ ಸಿದ್ದಗಂಗಾ ಶಾಲಾ ಆವರಣದಲ್ಲಿರುವ ರೋಟರಿ ಬಾಲಭವನದಲ್ಲಿ ನಡೆದ ದಸರಾ ಸಂಭ್ರಮ ಹಾಗೂ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ 95 ವರ್ಷ ವಯೋಮಾನದ ಡಾ.ಜಯರಾಮರಾವ್ ಅವರನ್ನು ಸನ್ಮಾನಿಸಿ ಮಾತನಾಡಿದ ರೋಟರಿ ಅಧ್ಯಕ್ಷ ಮಲ್ಲಸಂದ್ರ ಶಿವಣ್ಣ ಅವರು, ಸೇವೆಯನ್ನೇ ತತ್ವವಾಗಿಸಿಕೊಂಡಿರುವ ರೋಟರಿ ಸಂಸ್ಥೆ, ಸಮಾಜಕ್ಕಾಗಿ ತನ್ನನ್ನು ತಾನು ಅರ್ಪಿಸಿಕೊಂಡಿರುವ ವ್ಯಕ್ತಿಗಳನ್ನು ಗುರುತಿಸಿ,ಅವರನ್ನು ಸನ್ಮಾನಿಸುವ ಮೂಲಕ ಇತರರು ಅವರ ದಾರಿಯಲ್ಲಿ ನಡೆಯುವಂತೆ ಪ್ರೇರೆಪಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ವೈದ್ಯರಾಗಿ ಹತ್ತಾರು ವರ್ಷಗಳ ಕಾಲ ಸೇವೆ ಸಲ್ಲಿಸಿದ ಡಾ.ಜಯರಾಮರಾವ್,ಕ್ರೀಡಾಪಟುಗಳಾಗಿ ಹಲವಾರು ದಾಖಲೆಗಳನ್ನು ಮಾಡಿದ್ದಾರೆ.ಹಾಗೆಯೇ ವಿದ್ಯಾನೀಕೇತನ ಎಂಬ ಶಿಕ್ಷಣ ಸಂಸ್ಥೆಯನ್ನು ತೆರೆದು, ಲಕ್ಷಾಂತರ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ,ಅವರ ಬಾಳಿನಲ್ಲಿ ಬೆಳಕು ಮೂಡಿಸಿದ್ದಾರೆ. ನೇರ ಮತ್ತು ನಿಷ್ಠೂರ ನುಡಿಯ ವ್ಯಕ್ತಿತ್ವ ಹೊಂದಿರುವ ಶ್ರೀಯುತರು…

Read More

ತುಮಕೂರು ತುಮಕೂರು ಸ್ಮಾರ್ಟ್‍ಸಿಟಿಯು ನಗರದ ವಾಯುಮಾಲಿನ್ಯ ನಿಯಂತ್ರಣ ಮಾಡಲು ಎಲೇಕ್ಟ್ರಿಕಲ್ ಬೈಕ್ ಮತ್ತು ವಿನೂತನ ತಂತ್ರಜ್ಞಾನವುಳ್ಳ ಯಾಣ ಬೈಸಿಕಲ್‍ನ್ನು ಹೊರತಂದಿದೆ. ಸುಲಭವಾಗಿ ಮೋಬೈಲ್ ಅಪ್ಲಿಕೇಶನ್‍ನಲ್ಲಿ ಪಾವತಿ ಮಾಡುವ ಮೂಲಕ ಉಪಯೋಗಿಸಬಹುದು ಎಂದು ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್‍ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಬಿ.ಟಿ. ರಂಗಸ್ವಾಮಿ ತಿಳಿಸಿದರು. ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ತುಮಕೂರು ಸ್ಮಾರ್ಟ್ ಸಿಟಿಲಿಮಿಟೆಡ್ ಹಾಗೂ ಶ್ರೀ ಸಿದ್ಧಾರ್ಥ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಇವರ ಸಹಯೋಗದಲ್ಲಿ ‘ಆನ್‍ಸ್ಟ್ರೀಟ್ ಸೈಕ್ಲಿಂಗ್-ಎಲೇಕ್ಟ್ರೀಕಲ್ ಬೈಕ್’ ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಸೈಕಲ್‍ಗಳು ಇಂಗಾಲದ-ಡೈ-ಆಕ್ಸೈಡ್ ಮುಕ್ತ ವಾಹನವಾಗಿದೆ. ಜಿಪಿಎಸ್ ಅಳವಡಿಸಿರುವುದರಿಂದ ವಾಹನ ಇರುವಿಕೆಯನ್ನು ಗುರುತಿಸಬಹುದಾಗಿದೆ. ಸ್ಮಾರ್ಟ್‍ಸಿಟಿ ಮಿಷನ್ ಅಡಿಯಲ್ಲಿ ಅನುμÁ್ಠನಗೊಳಿಸುತ್ತಿರುವ ಮತ್ತೊಂದು ಪ್ರಮುಖ ಯೋಜನೆಯಾಗಿದೆ ಎಂದು ಅವರು ವಿವರಿಸಿದರು. ಶ್ರೀ ಸಿದ್ಧಾರ್ಥ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಎಸ್.ರವಿಪ್ರಕಾಶ್ ಮಾತನಾಡಿ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಸಮಂಜಸವಾದ ಬೆಲೆಯಲ್ಲಿ ಬೈಸಿಕಲ್‍ಗಳನ್ನು ಲಭ್ಯವಾಗುವಂತೆ ಸ್ಮಾರ್ಟ್ ಯೋಜನೆಯಲ್ಲಿ ಅವಕಾಶ ಮಾಡಿದ್ದಾರೆ. ನಗರದಾದ್ಯಂತ ವಿವಿಧ…

Read More

ತುಮಕೂರು ವಿವಾದಗಳನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಲೋಕ್ ಅದಾಲತ್ ಒಂದು ಉತ್ತಮ ಅವಕಾಶವಾಗಿದ್ದು, ಜಿಲ್ಲೆಯ ಕಕ್ಷಿದಾರರು ಇದರ ಸದುಪಯೋಗ ಪಡೆದು, ಪ್ರಕರಣಗಳಿಂದ ಶಾಶ್ವತವಾಗಿ ಪರಿಹಾರ ಕಂಡುಕೊಳ್ಳಬೇಕು ಹಾಗೂ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಲೋಕ ಅದಾಲತ್ ಮೂಲಕ ಪರಿಹರಿಸಿಕೊಳ್ಳಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಗೀತಾ ಕೆ.ಬಿ. ಅವರು ತಿಳಿಸಿದರು. ನಗರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯ ಉದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ನವೆಂಬರ್ 12ರಂದು ತುಮಕೂರು ಜಿಲ್ಲೆಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಜನತಾ ನ್ಯಾಯಾಲಯದ ಲೋಕ ಅದಾಲತ್ ಆಯೋಜಿಸಲಾಗಿದೆ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಗಳು ಮತ್ತು ಖಾಯಂ ಜನತಾ ನ್ಯಾಯಾಲಯಗಳಲ್ಲಿ ಅಂದು ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದ್ದು, ಕಕ್ಷಿದಾರರು ರಾಜಿ ಅಥವಾ ಸಂಧಾನದ ಮೂಲಕ ತಮ್ಮ…

Read More

ಬೆಂಗಳೂರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಬೊಮ್ಮಾಯಿ ಸರ್ಕಾರ ಉತ್ತಮ ಕೊಡುಗೆಯನ್ನು ನೀಡಿದ್ದು, ಎಸ್‍ಸಿ, ಎಸ್‍ಟಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ಶುಕ್ರವಾರ ನಡೆದ ಸರ್ವಪಕ್ಷ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.ಇಂದು ಸರ್ವಪಕ್ಷ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಎಸ್‍ಸಿ, ಎಸ್‍ಟಿಗೆ ಸೇರಿದವರಿಗೆ ಹೆಚ್ಚಿನ ಅವಕಾಶ ನೀಡಲು ಅನುಕೂಲವಾಗುವಂತೆ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲಾಗುವುದು ಎಂದು ತಿಳಿಸಿದರು. ಎಸ್‍ಸಿ ವರ್ಗದ ಮೀಸಲಾತಿಯನ್ನು ಹಾಲಿ ಅಸ್ತಿತ್ವದಲ್ಲಿರುವ ಶೇ. 15ರಿಂದ ಶೇ. 17ಕ್ಕೆ ಹಾಗೂ ಎಸ್?ಟಿ ಮೀಸಲಾತಿಯನ್ನು ಹಾಲಿ ಅಸ್ತಿತ್ವದಲ್ಲಿರುವ ಶೇ. 3ರಿಂದ 7ಕ್ಕೆ ಹೆಚ್ಚಳ ಮಾಡಲಾಗುವುದು. ಸರ್ವಪಕ್ಷ ಸಭೆಯ ನಿರ್ಣಯವನ್ನು ಸಚಿವ ಸಂಪುಟದಲ್ಲಿ ಇರಿಸಿ ಅಂಗೀಕಾರ ಪಡೆದುಕೊಂಡ ನಂತರ ಸರ್ಕಾರಿ ಆದೇಶ ಹೊರಡಿಸಲಾಗುವುದು. ಮೀಸಲಾತಿ ಪ್ರಮಾಣ ಹೆಚ್ಚಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಬೊಮ್ಮಾಯಿ ಹೇಳಿದರು. ಜಾತಿಗಳ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡುವ ಬಗ್ಗೆ ಸಂವಿಧಾನವು ಪ್ರಸ್ತಾಪಿಸಿದೆ. ಅದರ ಆಶಯದಂತೆ ಮೀಸಲಾತಿ ಪ್ರಮಾಣ ಹೆಚ್ಚಿಸಬೇಕು ಎಂಬುದು ನಮ್ಮ ನಿರ್ಧಾರ. ಎಸ್‍ಸಿ,…

Read More

ತುಮಕೂರು ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘ ನಿಶ್ಚಿತ ಪಿಂಚಣಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ನಗರದ ಸಿದ್ಧಗಂಗಾ ಮಠದಿಂದ ಬೆಂಗಳೂರಿಗೆ ಫ್ರೀಡಂ ಪಾರ್ಕ್ ವರೆಗೆ ಪಾದಯಾತ್ರೆ ಆರಂಭಿಸಿತು. ಸಿದ್ದಗಂಗಾ ಮಠದಲ್ಲಿ ನೂರಾರು ಸಂಖ್ಯೆಯಲ್ಲಿ ಅನುದಾನಿತ ಶಾಲಾ-ಕಾಲೇಜುಗಳ ನೌಕರರು ಜಮಾಯಿಸಿ ನಿಶ್ಚಿತ ಪಿಂಚಣಿ ನೀಡುವಂತೆ ಸರ್ಕಾರವನ್ನು ಒತ್ತಾಯಿಸುವ ಘೋಷಣೆಗಳನ್ನು ಕೂಗುತ್ತಾ ಪಾದಯಾತ್ರೆ ಕೈಗೊಂಡರು. ಸಂಘದ ರಾಜ್ಯಾಧ್ಯಕ್ಷ ಜಿ. ಹನುಮಂತಪ್ಪ ಮಾತನಾಡಿ, 01-04-2006 ನಂತರ ನೇಮಕಗೊಂಡ ಅನುದಾನಿತ ನೌಕರರಿಗೆ ಎನ್.ಪಿ.ಎಸ್. ಯೋಜನೆಯ ಆಡಳಿತ ಮಂಡಳಿಯ ವಂತಿಗೆಯನ್ನು ಸರ್ಕಾರವೇ ಭರಿಸುವ ಜತೆಗೆ ಕಾಲ್ಪನಿಕ ವೇತನ ಜಾರಿಗೊಳಿಸಬೇಕು. 01-04-2006ಕ್ಕೂ ಮೊದಲು ನೇಮಕವಾಗಿ ನಂತರ ಅನುದಾನಕ್ಕೊಳಪಟ್ಟ ನೌಕರರ ಅನುದಾನರಹಿತ ಅವಧಿ ಸೇವೆ ಪರಿಗಣಿಸಿ “ಹಳೆಯ ನಿಶ್ಚಿತ ಪಿಂಚಣಿ ಸೌಲಭ್ಯ” ನೀಡಬೇಕು ಹಾಗೂ ಸರ್ಕಾರಿ ನೌಕರರಿಗೆ ನೀಡುತ್ತಿರುವ ಜ್ಯೋತಿ ಸಂಜೀವಿನಿ ಮತ್ತಿತರ ವೈದ್ಯಕೀಯ ಸೌಲಭ್ಯಗಳನ್ನು ತಾರತಮ್ಯ ಇಲ್ಲದೆ ಅನುದಾನಿತ ನೌಕರರಿಗೂ ನೀಡಬೇಕು ಎಂದು ಆಗ್ರಹಿಸಿದರು. ರಾಜ್ಯದ ಅನುದಾನಿತ ವಿದ್ಯಾಸಂಸ್ಥೆಗಳಲ್ಲಿ 01-04-2006ರ ನಂತರ ನೇಮಕ…

Read More

ತುಮಕೂರು ಪ್ರಯೋಗದಾಟಗಳ ರಂಗಕೇಂದ್ರ ನಾಟಕಮನೆ ತುಮಕೂರು ರಂಗತಂಡವು 2022ನೇ ಅಕ್ಟೋಬರ್ 08ನೇ ಶನಿವಾರದಂದು ಸಂಜೆ 6:30 ಗಂಟೆಗೆ ಅಮಾನಿಕೆರೆ ಮುಂಭಾಗದ ಕನ್ನಡ ಭವನದಲ್ಲಿ ಕೃಷ್ಣ-ಸಂಧಾನ ಎಂಬ ಹಾಸ್ಯ ನಾಟಕ ಪ್ರದರ್ಶನವನ್ನು ಹಮ್ಮಿಕೊಂಡಿದೆ. ನಾಟಕಮನೆ ಕಲಾವಿದರು ಅಭಿನಯಿಸುವ ಕೃಷ್ಣ ಸಂಧಾನ ನಾಟಕವನ್ನು ಆಡಿಸುವ ಪ್ರಸಂಗದಲ್ಲಿ ಉಂಟಾಗಬಹುದಾದ ಔಚಿತ್ಯ ಚಿತ್ರಣ ಈ ನಾಟಕದ ವಸ್ತುವಾಗಿದೆ. ಗ್ರಾಮಾಂತರ ಪ್ರದೇಶದಿಂದ ಬಂದಿರುವ ನಾಟಕಕಾರರು ಅನೇಕ ಗ್ರಾಮಗಳಲ್ಲಿ ನಡೆದಿರುವ ನಾಟಕಗಳ ತಾಲೀಮನ್ನು ಕೂಲಂಕಷವಾಗಿ ಗಮನಿಸಿ ಸಹಜ, ಸುಂದರವಾಗಿ ಈ ನಾಟಕವನ್ನು ರಚಿಸಿದ್ದಾರೆ. ನಾಟಕ ಪ್ರದರ್ಶನಕ್ಕೆ ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನ ಅಧ್ಯಕ್ಷರಾದ ಶ್ರೀ ಕೆ.ಎಸ್.ಸಿದ್ದಲಿಂಗಪ್ಪ ಚಾಲನೆ ನೀಡಲಿದ್ದಾರೆ. ರಂಗನಿರ್ದೇಶಕ ಮೆಳೇಹಳ್ಳಿ ದೇವರಾಜು, ಮೂಡಲಪಾಯ ಯಕ್ಷಗಾನ ಕಲಾವಿದರಾದ ಎಮ್.ಪಿ.ಪುಟ್ಟಸ್ವಾಮಯ್ಯ, ರಂಗನಿರ್ದೇಶಕ ನವೀನ್ ಭೂಮಿ, ಉಪನ್ಯಾಸಕರಾದ ಶ್ರೀ ನಾಗರಾಜರಾವ್ ರವರುಗಳು ಉಪಸ್ಥಿತರಿರುವರು. ಉಚಿತ ಪ್ರವೇಶವಿರುವ ಕೃಷ್ಣ ಸಂಧಾನ ಹಾಸ್ಯ ನಾಟಕ ಪ್ರದರ್ಶನಕ್ಕೆ ಕಲಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ನಾಟಕವನ್ನು ಯಶಸ್ವಿಗೊಳಿಸುವಂತೆ ರಂಗ ಸಂಘಟಕ ನಾಟಕಮನೆ ಮಹಾಲಿಂಗು ಮನವಿ ಮಾಡಿದ್ದಾರೆ.

Read More

ತುಮಕೂರು ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬೆಂಗಳೂರಿಗೆ ಅನುದಾನಿತ ನೌಕರರ ಬೃಹತ್ ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದು, ಈ ಪಾದಯಾತ್ರೆ ಅ. 7 ರಂದು ನಗರದ ಸಿದ್ಧಗಂಗಾ ಮಠದಿಂದ ಆರಂಭವಾಗಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಹನುಮೇಶ್ ಆರ್. ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಜಿಲ್ಲಾಧ್ಯಕ್ಷ ಧರ್ಮೇಂದ್ರ ಪ್ರಸಾದ್ ಜೆ. ತಿಳಿಸಿದ್ದಾರೆ. ರಾಜ್ಯದ ಅನುದಾನಿತ ವಿದ್ಯಾಸಂಸ್ಥೆಗಳಲ್ಲಿ ದಿನಾಂಕ:01-04-2006ರ ನಂತರ ನೇಮಕ ಹೊಂದಿ ವೇತನ ಪಡೆಯುತ್ತಿರುವ ಹಾಗೂ ಮೊದಲೇ ನೇಮಕಗೊಂಡು ನಂತರ ಅನುದಾನಕ್ಕೊಳಪಟ್ಟು ವೇತನ ಪಡೆಯುತ್ತಿರುವ ನೌಕರರಿಗೆ ಯಾವುದೇ ವಿಧದ ಪಿಂಚಣಿ ಸೌಲಭ್ಯ (ಎನ್.ಪಿ.ಎಸ್‍ಅಥವಾ ಓ.ಪಿ.ಎಸ್) ಎರಡೂ ಇರುವುದಿಲ್ಲ. ಪಿಂಚಣಿ ಸೌಲಭ್ಯ ದೊರೆಯದೆ ಈಗಾಗಲೇ ಸುಮಾರು 3000ಕ್ಕೂ ಹೆಚ್ಚು ನೌಕರರು ಕೊನೆಯ ತಿಂಗಳ ಸಂಬಳ ಮಾತ್ರ ಪಡೆದು ಬರಿಗೈಯಲ್ಲಿ ನಿವೃತ್ತಿಯಾಗಿದ್ದಾರೆ. ಅನೇಕರು ಸೇವೆಯಲ್ಲಿರುವಾಗಲೇ ಅಕಾಲಿಕವಾಗಿ ಮರಣ ಹೊಂದಿದ್ದಾರೆ, ಇವರ ಕುಟುಂಬಗಳಿಗೆ ಯಾವುದೇ ಆರ್ಥಿಕ ಸೌಲಭ್ಯ ದೊರೆತಿಲ್ಲ ಎಂದು ತಿಳಿಸಿದ್ದಾರೆ. ನೌಕರರು ವೇತನಾನುದಾನಕ್ಕೆ ಒಳಪಡುವುದಕ್ಕೂ ಪೂರ್ವದ ಸೇವೆಯನ್ನು, ಸೇವೆಗೆ…

Read More

ತುಮಕೂರು ಶಾಂತಿ, ಅಹಿಂಸೆಯ ಹರಿಕಾರರಾದ ಗಾಂಧೀಜಿಯವರ ಜೀವನವೇ ಒಂದು ಸಂದೇಶವಾಗಿದೆ ಎಂದು ಕಾನೂನು ಸೇವೆಗಳ ಪ್ರಾಧಿಕಾರದ ಗೌರವ ಕಾರ್ಯದರ್ಶಿ ಹಾಗೂ ನ್ಯಾಯಾಧೀಶರಾದ ನೂರುನ್ನೀಸಾ ಹೇಳಿದರು. ಇಲ್ಲಿನ ಅಶೋಕ ನಗರದ ನಾಗರಿಕ ಹಿತರಕ್ಷಣಾ ಸಮಿತಿ, ರೋಟರಿ ತುಮಕೂರು ಸೆಂಟ್ರಲ್, ಇನ್ನರ್ ವ್ಹೀಲ್ ಕ್ಲಬ್, ಸಿದ್ದಗಂಗಾ ವೈದ್ಯಕೀಯ ವಿದ್ಯಾಲಯ, ವಿನಾಯಕ ದಂತ ಚಿಕಿತ್ಸಾಲಯ, ಅಶ್ವಿನಿ ಆಯುರ್ವೇದ ಆಸ್ಪತ್ರೆ, ಚರಕ ಆಯುರ್ವೇದ ಪಂಚಕರ್ಮ ಚಿಕಿತ್ಸಾಲಯ, ಸಂವೃದ್ದಿ ನೇತ್ರಾಲಯ ಮತ್ತು ಚರ್ಮಾಲಯ ಇವರ ಸಂಯುಕ್ತ ಆಶ್ರಯದಲ್ಲಿ ಗಾಂಧಿ ಜಯಂತಿ ಪ್ರಯುಕ್ತ 26ನೇ ವಾರ್ಡಿನ ಚಂದ್ರಶೇಖರ್ ಆಜಾದ್ ಪಾರ್ಕ್‍ನಲ್ಲಿ ಏರ್ಪಡಿಸಿದ್ದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗಾಂಧೀಜಿಯವರ ಹೆಸರು ಭಾರತೀಯರ ಮನಸ್ಸಿನಲ್ಲಿ ಅಷ್ಟೇ ಅಲ್ಲದೆ ವಿಶ್ವದಲ್ಲಿ ಇರುವ ಅನೇಕ ಜನರ ಮನಸ್ಸಿನಲ್ಲಿ ಅಚ್ಚಳಿಯದಂತೆ ಉಳಿದಿದೆ ಎಂದು ಅವರು ಹೇಳಿದರು. ಹಿರಿಯ ನಾಗರಿಕರಿಗಾಗಿ ಸಮಗ್ರ ಕಾರ್ಯಕ್ರಮ, ರಾಷ್ಟ್ರೀಯ ವಯೋಶ್ರೀ ಯೋಜನೆ, ಇಂದಿರಾಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ಪಿಂಚಣಿ ಯೋಜನೆ ಮತ್ತು ವಯೋಶ್ರೇಷ್ಠ ಸಮ್ಮಾನ್ ಸೇರಿದಂತೆ ಹಿರಿಯ…

Read More

ತುಮಕೂರು ತುಮಕೂರು ಜಿಲ್ಲಾ ದಸರಾ ಸಮಿತಿಯಿಂದ ದಸರಾ ಉತ್ಸವಕ್ಕೆ ಅವಧೂತ ಶ್ರೀವಿನಯ ಗುರೂಜೀ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ಅವಧೂತ ಶ್ರೀವಿನಯ ಗುರೂಜಿ ಅಶೀರ್ವಚನ ನೀಡುತ್ತಾ, ಭಾಷಣದಿಂದ ಭಾರತ ಬದಲಾಗಲ್ಲ. ಹಳ್ಳಿಗಳು ಬದಲಾಗ ಬೇಕು. ಮನುಷ್ಯರ ನಡುವೆ ಮಾನವೀಯತೆ ರೂಢಿಸುತ್ತದೆ.ನಿಮ್ಮ ತಪ್ಪುಗಳನ್ನು ತಿಳಿದುಕೊಳ್ಳುವುದೇ ನಿಜವಾದ ಅಧ್ಯಾತ್ಮ. ಪ್ರತಿ ಸ್ತ್ರೀಯಲ್ಲೂ ದೇವಿಯನ್ನು ನೋಡುವ ಸಂಸ್ಕøತಿ ನಮ್ಮದು. ಹಾಗಾಗಿ ಪ್ರತಿಯೊಬ್ಬ ಮಹಿಳೆಯನ್ನು ಗೌರವಿಸಿ ಎಂದು ಹೇಳಿದರು. ದಸರಾ ಉತ್ಸವದಲ್ಲಿ ವಿಶೇಷ ಉಪನ್ಯಾಸ ನೀಡಿದ ರಾಜ್ಯ ಪರಿಸರ ಸಂಯೋಜಕ ಜೈರಾಮ್ ಬೋಳ್ಳಾಜೆ, ಭಾರತೀಯ ಚಿಂತನೆ ಯಾರನ್ನು ದ್ವೇಷಿಸುವುದಿಲ್ಲ. ಬದಲಾಗಿ ಪ್ರಿತಿಸುತ್ತದೆ.ವಸುದೈವ ಕುಟುಂಬಕಂ ಎಂಬುದು ನಮ್ಮ ಆಶಯ. ತ್ಯಾಗ ಮತ್ತು ಸೇವೆ ಭಾರತದ ಆಶಯ ಇದನ್ನು ಪುನರ್ ಸ್ಥಾಪಿಸುವ ಆಶಯವಿದೆ ಎಂದರು. ಶಮಿಪೂಜೆ ನೆರವೇರಿಸಿದ ತಹಶೀಲ್ದಾರ್ ಜಿ.ವಿ.ಮೋಹನ್ ಕುಮಾರ್, ಬನ್ನಿ ವಿಜಯದ ಸಂಕೇತವಾಗಿದೆ.ತುಮಕೂರು ಸರ್ವ ಜನಾಂಗದ ಶಾಂತಿಯ ತೋಟ.ಇಂತಹ ನಾಡಿನಲ್ಲಿ ನಾವೆಲ್ಲರೂ ಸುಖಃ ಶಾಂತಿಯಿಂದ ಬಾಳುತ್ತಿದ್ದೇವೆ. ಕೆಟ್ಟದರ ಧಮನದ ಸಂಕೇತವಾದ ವಿಜಯ ದಶಮಿ ಇಡೀ ನಾಡಿಗೆ…

Read More