ತುಮಕೂರು ಧ್ಯಾನಕ್ಕೆ ಏಕಾಗ್ರತೆ ಅತಿಮುಖ್ಯ. ಧ್ಯಾನವೆಂಬುದು ಮನುಷ್ಯನಿಗೆ ಮನಃಶಾಂತಿ ಮತ್ತು ಸಂತೋಷವನ್ನು ನೀಡುತ್ತದೆ. ಧ್ಯಾನಕ್ಕೆ ಕುಳಿತಾಗ ಮನುಷ್ಯನ ದೇಹ ಮತ್ತು ಮನಸ್ಸು ಒಂದೇ ರೀತಿಯಲ್ಲಿ ಇರಬೇಕು ಎಂದು ತುಮಕೂರು ವಿವಿಯ ಕುಲಪತಿಗಳಾದ ಪ್ರೊ. ಎಂ. ವೆಂಕಟೇಶ್ವರಲು ಅಭಿಪ್ರಾಯಪಟ್ಟರು. ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗ ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶ (ಐಕ್ಯುಎಸಿ), ಬೈಲುಕುಪ್ಪೆಯ ಸೆರಾ ಜೆ ಮೊನಾಸ್ಟಿಕ್ ವಿವಿ ಸಹಯೋಗದಲ್ಲಿ ಧ್ಯಾನದ ಪರಿಚಯ ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಮಂಗಳವಾರ ಆಯೋಜಿಸಿದ್ದವು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತುಮಕೂರು ವಿವಿ ಕುಲಪತಿ ಪ್ರೊ. ವೆಂಕಟೇಶ್ವರಲು, ಸೆರಾ ಜೆ ಮೊನಾಸ್ಟಿಕ್ ವಿಶ್ವವಿದ್ಯಾನಿಲಯದಲ್ಲಿರುವ ಸಾಂಸ್ಕøತಿಕ ಚಟುವಟಿಕೆಗಳನ್ನು ಪ್ರತಿಯೊಂದು ವಿಶ್ವವಿದ್ಯಾನಿಲಯವೂ ಅಳವಡಿಸಿಕೊಳ್ಳಬೇಕಿದೆ. ಪ್ರತಿಯೊಬ್ಬರಿಗೂ ಸಮಯಪಾಲನೆ, ಶಿಸ್ತು ಎಂಬುದು ಅತಿಮುಖ್ಯ ಎಂದು ತಿಳಿಸಿದರು. ಸೆರಾ ಜೆ ಮೊನಾಸ್ಟಿಕ್ ವಿಶ್ವವಿದ್ಯಾನಿಲಯದ ಅಬೋಟ್ ಘೆಶೆ ತಾಶಿ ಸೆತರ್ ಅವರು ಮಾತನಾಡಿ, ಧ್ಯಾನವೆಂಬುದು ನಮ್ಮ ಭಾರತದ ಪುರಾತನ ಮನಃಶಾಸ್ತ್ರವಾಗಿದ್ದು, ಅದನ್ನು ಈ ಕಾಲಕ್ಕೆ ಅಳವಡಿಸಿಕೊಳ್ಳಬೇಕಿದೆ. ಧ್ಯಾನ ಸಂಸ್ಕøತಿಯನ್ನು ಹೆಚ್ಚಿಸುತ್ತದೆ. ಹಾಗೆಯೇ ಜ್ಯಾತ್ಯತೀತ…
Author: News Desk Benkiyabale
ತುಮಕೂರು ಅನಗತ್ಯ ಒತ್ತಡ ನಿಯಂತ್ರಣ, ಆಹಾರ ಕ್ರಮ ಬದಲಾವಣೆ, ನಿಯಮಿತ ವ್ಯಾಯಾಮದಿಂದ ಮಧುಮೇಹ ನಿಯಂತ್ರಣ ಮತ್ತು ತಡೆ ಸಾಧ್ಯ ಎಂದು ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಫಿಜಿಯೋಲಜಿ ವಿಭಾಗದ ಸಹಪ್ರಾಧ್ಯಾಪಕ ಹಾಗೂ ಜೀವನ ಸಂಜೆ ವೃದ್ಧಾಶ್ರಮದ ಅಧ್ಯಕ್ಷ ಡಾ.ಗಿರೀಶ್ ಬಾಬು ತಿಳಿಸಿದರು. ತುಮಕೂರು ವಿಶ್ವವಿದ್ಯಾನಿಲಯದ ಯುವ ರೆಡ್ ಕ್ರಾಸ್ ಘಟಕ ಮತ್ತು ಶ್ರೀದೇವಿ ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆ ಸಹಯೋಗದೊಂದಿಗೆ ಇತ್ತೀಚೆಗೆ ಆಯೋಜಿಸಿದ್ದ “ಸಕ್ಕರೆ ಕಾಯಿಲೆ-ಒಂದು ಇಣುಕು” ಉಪನ್ಯಾಸ ಮಾಲಿಕೆ ಹಾಗೂ ತುಮಕೂರು ವಿವಿಯ ಸ್ನಾತಕೋತ್ತರ ಹಾಗೂ ಘಟಕ ಕಾಲೇಜುಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಆಯೋಜಿಸಲಾಗಿದ್ದ ಆರೋಗ್ಯ ತಪಾಸಣಾ ಶಿಬಿರದಲ್ಲಿ ಉಪನ್ಯಾಸ ನೀಡುತ್ತಾ, ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಶ್ರೀದೇವಿ ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಯ ಓಬಿಜಿ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ.ಸೌಮ್ಯ ಅವರು ಸಹ “ಗರ್ಭಾವಸ್ಥೆಯಲ್ಲಿ ಮಧುಮೇಹ” ವಿಷಯವಾಗಿ ಉಪನ್ಯಾಸ ನೀಡಿ, ಗರ್ಭವಸ್ಥೆಯಲ್ಲಿ ಮಹಿಳೆಯರು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸವಿಸ್ತಾರವಾಗಿ ವಿಶ್ಲೇಷಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತುಮಕೂರು…
ತುಮಕೂರು ಹದಿನೆಂಟರಿಂದ ಅರವತ್ತು ವರ್ಷದೊಳಗಿರುವವರಿಗೆ ಸೆಪ್ಟೆಂಬರ್ 30, 2022ರವರೆಗೆ ಉಚಿತ ಕೋವಿಡ್ ಮುನ್ನೆಚ್ಚರಿಕೆ ಲಸಿಕೆಯನ್ನು ನೀಡಲಾಗುತ್ತಿದ್ದು, ಸಾರ್ವಜನಿಕರು ಈ ಅವಧಿಯೊಳಗಾಗಿ ತಮ್ಮ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರ/ಕೋವಿಡ್ ಲಸಿಕಾ ಕೇಂದ್ರಗಳಲ್ಲಿ ತಪ್ಪದೆ ಮುನ್ನೆಚ್ಚರಿಕೆ ಲಸಿಕೆ ಹಾಕಿಸಿಕೊಳ್ಳುವಂತೆ ಅಧಿಕಾರಿಗಳು ತಮ್ಮ ಆಡಳಿತ ವ್ಯಾಪ್ತಿಯಲ್ಲಿ ವ್ಯಾಪಕ ಪ್ರಚಾರ ಮಾಡುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದರು. ತಮ್ಮ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿಂದು ನಡೆದ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಜಿಲ್ಲಾ/ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಮಾತನಾಡಿದ ಅವರು, ಆರೋಗ್ಯ ಇಲಾಖೆ ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ 75 ದಿನಗಳ ಮುಂಜಾಗ್ರತಾ ಲಸಿಕಾ ಮೇಳ ಆಯೋಜಿಸಿದ್ದು, ಆಯಾ ತಾಲ್ಲೂಕು ತಹಶೀಲ್ದಾರ್‍ಗಳು, ಆರೋಗ್ಯಾಧಿಕಾರಿಗಳು, ಪಿಡಿಓಗಳು, ಗ್ರಾಮ ಸಹಾಯಕರು ಉಚಿತ ಮುನ್ನೆಚ್ಚರಿಕೆ ಡೋಸ್ ಕುರಿತಂತೆ ಸಾರ್ವಜನಿಕರಲ್ಲಿ ವ್ಯಾಪಕ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು. ಆಯುμÁ್ಮನ್ ಭಾರತ್ ಹೆಲ್ತ್ ಅಕೌಂಟ್(ಆಭಾ) ಕಾರ್ಡ್ ಮೂಲಕ ನಾಗರೀಕರು ಉಚಿತ ಆರೋಗ್ಯ ಸೇವೆಗಳನ್ನು ಪಡೆಯಲು ಅನುಕೂಲವಾಗುವಂತೆ ಕಾರ್ಡ್ ವಿತರಣೆ ವೇಗ ಪಡೆದುಕೊಳ್ಳಬೇಕು. ಒಂದು ವಾರದೊಳಗೆ…
ತುಮಕೂರು ಜಿಲ್ಲಾ ಪಂಚಾಯತಿ ವತಿಯಿಂದ ಜಿಲ್ಲೆಯಲ್ಲಿ ಸೆಪ್ಟಂಬರ್ 15 ರಿಂದ ಅಕ್ಟೋಬರ್ 2ರವರೆಗೆ ಹಮ್ಮಿಕೊಂಡಿರುವ “ಸ್ವಚ್ಛತಾ ಹೀ ಸೇವಾ ಆಂದೋಲನ” ಕಾರ್ಯಕ್ರಮದ ರೂಪುರೇμÉಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮಪಂಚಾಯತಿ ಅಧ್ಯಕ್ಷರು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಈ ಸಂಧರ್ಭದಲ್ಲಿ ತುಮಕೂರು ಜಿ.ಪಂ.ಸಭಾಂಗಣದಲ್ಲಿ ಹಾಜರಿದ್ದ ಖಆPಖ ಅಧಿಕಾರಿ, ಸಿಬ್ಬಂದಿ ನೌಕರರುಗಳಿಗೆ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ: ಕೆ. ವಿದ್ಯಾಕುಮಾರಿ ಪ್ರತಿಜ್ಞಾವಿಧಿ ಬೋಧಿಸುವ ಮೂಲಕ ಆಂದೋಲನ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಜಿಲ್ಲೆಯ ಎಲ್ಲಾ ಗ್ರಾ.ಪಂ.ಗಳಲ್ಲಿ ಸ್ವಚ್ಛತಾ ಶ್ರಮದಾನ ಶಿಬಿರಗಳನ್ನು ಆಯೋಜಿಸುವ ಮೂಲಕ ಸಾರ್ವಜನಿಕರಿಗೆ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಕರೆ ನೀಡಿದರು.
ತುಮಕೂರು ಬಿಲ್ಲವ,ನಾಮಧಾರಿ,ಈಡಿಗ ಹೀಗೆ ಹಲವು ಹೆಸರುಗಳಿಂದ ಕರೆಯಲ್ಪಡುವ ಈಡಿಗ ಸಮುದಾಯದಲ್ಲಿ ಸಂಕಷ್ಟಗಳ ನಡುವೆಯೂ ಸಾಧನೆ ಮಾಡಿದ ಅನೇಕ ಸಾಧಕರಿದ್ದಾರೆ. ಹಾಗಾಗಿ ನಮ್ಮದು ಹಿಂದುಳಿದ ಸಮಾಜ ಎಂಬ ಕೀಳಿರಿಮೆಯನ್ನು ನಾವೆಲ್ಲರೂ ಮರೆತು, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಮುಂದುವರೆಯಲು ಪ್ರಯತ್ನಿಸಬೇಕಿದೆ ಎಂದು ಶಾಸಕ ಕುಮಾರ್ ಬಂಗಾರಪ್ಪ ತಿಳಿಸಿದ್ದಾರೆ. ನಗರದ ಡಾ.ಗುಬ್ಬಿವೀರಣ್ಣ ಕಲಾಕ್ಷೇತ್ರದಲ್ಲಿ ತುಮಕೂರು ಜಿಲ್ಲಾ ಆರ್ಯ ಈಡಿಗರ ಸಂಘ(ರಿ),ಜೆ.ಪಿ.ನಾರಾಯಣಸ್ವಾಮಿ ಪ್ರತಿಷ್ಠಾನ(ರಿ),ಜಗದ್ಗುರು ಶ್ರೀನಾರಾಯಣಗುರು ಸಮಾಜಟ್ರಸ್ಟ್(ರಿ),ಹಾಗೂ ಬ್ರಹ್ಮಶ್ರೀನಾರಾಯಣಗುರು ಜಿಲ್ಲಾ ಜಯತೋತ್ಸವ ಸಮಿತಿ ಆಯೋಜಿಸಿದ್ದ ಜಗದ್ಗುರು ಬ್ರಹ್ಮಶ್ರೀ ನಾರಾಯಣಗುರುಗಳ 168ನೇ ಜಯಂತೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತಿದ್ದ ಅವರು,ನಾವು ಮಾಡುವ ಕೆಲಸದಲ್ಲಿ ಯಶಸ್ಸು ಸಿಕ್ಕಾಗ ಸಮಾಜದ ಕಡೆಗೂ ಗಮನಹರಿಸುವ ಕೆಲಸವನ್ನು ಮಾಡಬೇಕಿದೆ ಎಂದರು. ಒಂದು ಸಮಾಜ ಬೆಳವಣಿಗೆ ಹೊಂದಬೇಕಾದರೆ,ಕೆಲ ಸಮುದಾಯಗಳ ಸಹಕಾರವೂ ಇರುತ್ತದೆ.ಅದರಲ್ಲಿಯೂ ತಳ ಸಮುದಾಯಗಳ ಬೆಳವಣಿಗೆಯಲ್ಲಿ,ಇತರೆ ಸಮುದಾಯಗಳ ಪಾತ್ರವನ್ನು ನಾವು ಕಡೆಗಣಿಸುವಂತಿಲ್ಲ.ಕಲಾವಿದರಾಗಿ ಡಾ.ರಾಜ್‍ಕುಮಾರ್,ಪುನಿತ್ ರಾಜಕುಮಾರ್,ರಾಜಕಾರಣಿಗಳಾಗಿ ಬಂಗಾರಪ್ಪ,ಆರ್.ಎಲ್.ಜಾಲಪ್ಪ,ಕಾಗೋಡುತಿಮ್ಮಪ್ಪ ಸೇರಿದಂತೆ ನಮ್ಮ ಸಮುದಾಯದ ಹಲವರು ತಮ್ಮ ಜಾತಿ,ಭಾಷೆ ಎಲ್ಲವನ್ನು ಮೀರಿ ಬೆಳೆದವರು. ಅತಿ ಚಿಕ್ಕವಯಸ್ಸಿನಲ್ಲಿಯೇ ಅಪ್ಪು ಮಾಡಿದ ಸಾಧನೆ ನಾವ್ಯಾರು ಮರೆಯುವಂತಿಲ್ಲ.ಕುಲಕಸುಬಿಗೆ ಅಂಟಿಕೊಂಡಿದ್ದ…
ತುಮಕೂರು ತುಮಕೂರು ಜಿಲ್ಲಾ ಅರ್ಥಶಾಸ್ತ್ರ ಅಧ್ಯಯನ ಕೇಂದ್ರದ ವತಿಯಿಂದ ಶ್ರೀ ಸಿದ್ಧಗಂಗಾ ಕಲಾ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಶ್ರೀ ಶ್ರೀ ಶ್ರೀ ಶಿವಕುಮಾರಸ್ವಾಮಿಗಳ ಸಭಾಂಗಣದಲ್ಲಿ ಪ್ರೊ. ಕೆ.ಸಿ ಶಿವನಂಜಯ್ಯನವರ ನೆನಪಿನ ವಿಶೇಷ ಉಪನ್ಯಾಸ ಪ್ರತಿಭಾ ಪುರಸ್ಕಾರ ಮತ್ತು ನಿವೃತ್ತರಿಗೆ ಸನ್ಮಾನ ಸಮಾರಂಭದಲ್ಲಿ ಅರ್ಥಶಾಸ್ತ್ರ ವಿಷಯದಲ್ಲಿ 100 ಕ್ಕೆ 100 ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಉದ್ಘಾಟನೆಯನ್ನು ತುಮಕೂರು ಪ.ಪೂ. ಶಿಕ್ಷಣ ಇಲಾಖೆ, ಉಪನಿರ್ದೇಶಕರಾದ ಗಂಗಾಧರ್ ಉದ್ಘಾಟಿಸಿದರು. ತುಮಕೂರು ವಿಶ್ವವಿದ್ಯಾನಿಲಯ, ಮಾನ್ಯ ಕುಲಸಚಿವರಾದ ಪ್ರೊ. ಕೆ. ಶಿವಚಿತ್ತಪ್ಪನವರು ಭಾರತದ ಆರ್ಥಿಕತೆಯ ಮೇಲೆ ಕರೋನಾ ವೈರಸ್ ಪರಿಣಾಮದ ವಿಷಯದ ಬಗ್ಗೆ ಉಪನ್ಯಾಸ ನಡೆಸಿಕೊಟ್ಟರು. ತುಮಕೂರು ಅರ್ಥಶಾಸ್ತ್ರ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಎಂ. ರಾಜಯ್ಯನವರು ಅಧ್ಯಕ್ಷತೆ ವಹಿಸಿದ್ದರು. ತುಮಕೂರು ಶ್ರೀ ಸಿದ್ಧಗಂಗಾ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯರಾದ ಡಾ. ವೀರಭದ್ರಸ್ವಾಮಿ, ಅರ್ಥಶಾಸ್ತ್ರ ಅಧ್ಯಯನ ಕೇಂದ್ರದ ಗೌರವಾಧ್ಯಕ್ಷರಾದ ಎಸ್. ಕುಮಾರಸ್ವಾಮಿ, ಅರ್ಥಶಾಸ್ತ್ರ ಅಧ್ಯಯನ ಕೇಂದ್ರದ ಉಪಾಧ್ಯಕ್ಷರಾದ ಎಸ್. ಷಣ್ಮುಖ, ಪ್ರಾಚಾರ್ಯರಾದ…
ತುಮಕೂರು ವಿಶ್ವಕರ್ಮ ಯಜ್ಞ ಮಹೋತ್ಸವ ಸಮಿತಿ, ಚಿನ್ನ ಬೆಳ್ಳಿ ಕೆಲಸಗಾರರ ಸಂಘ ಹಾಗೂ ಜಿಲ್ಲಾ ವಿಶ್ವಕರ್ಮ ಸೇವಾ ಸಮಿತಿ ಆಶ್ರಯದಲ್ಲಿ ವಿಶ್ವಕರ್ಮ ಜಯಂತಿ ಅಂಗವಾಗಿ ಶುಕ್ರವಾರ ಸಂಜೆಯಿಂದ ಯಜ್ಞಮಹೋತ್ಸವ, ರಥೋತ್ಸವ ಅದ್ದೂರಿಯಾಗಿ ನೆರವೇರಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‍ಕುಮಾರ್ ಶಹಾಪುರವಾಡ್ ಗಾಯತ್ರಿ, ವಿಶ್ವಕರ್ಮ, ಕಾಳಿಕಾಂಬ ಉತ್ಸವದ ಮೆರವಣಿಗೆ ಚಾಲನೆ ನೀಡಿ ಮಾತನಾಡಿ ವಿಶ್ವಕರ್ಮ ಸಮುದಾಯ ತುಮಕೂರು ಜಿಲ್ಲೆಯಲ್ಲಿ ಸೌಹಾರ್ಧಯುತವಾಗಿ ಬಾಳ್ವೆ ನಡೆಸುತ್ತಿದ್ದು, ವಿಶ್ವಕರ್ಮರ ಕಲೆ ವಾಸ್ತುಶಿಲ್ಪ ಜಗದ್ವಿಖ್ಯಾತಿಗೊಳಿಸಿದೆ ಎಂದು ಹೇಳಿ ಶುಭ ಹಾರೈಸಿದರು. ಜಿಲ್ಲಾಡಳಿತದ ವತಿಯಿಂದ ಆಚರಣೆ ಜಿಲ್ಲಾಡಳಿತ, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಆಶ್ರಯದಲ್ಲಿ ಗುಬ್ಬಿವೀರಣ್ಣ ಕಲಾಕ್ಷೇತ್ರದಲ್ಲಿ ನಡೆದ ವಿಶ್ವಕರ್ಮ ಜಯಂತಿಯಲ್ಲಿ ಸಂಸದ ಜಿ.ಎಸ್.ಬಸವರಾಜು ಅವರು ಪುಷ್ಪಾರ್ಚನೆ ನೆರವೇರಿಸಿ ಭಾರತದ ಕಲೆಪರಂಪರೆಗೆ ವಿಶ್ವಮಟ್ಟದಲ್ಲಿ ಹಿರಿಮೆ ತಂದ ವಿಶ್ವಕರ್ಮ ಸಮುದಾಯ ಒಗ್ಗಟ್ಟನ್ನು ಸಾಧಿಸಬೇಕಿದೆ. ಹಿಂದೆ ಪುರಸಭೆ ಅಧ್ಯಕ್ಷರಾಗಿದ್ದ ಎಸ್.ವಿ.ಆಚಾರ್‍ರಂತಹ ಮೇರು ವ್ಯಕ್ತಿತ್ವದವರು ಸಮಾಜದಲ್ಲಿ ಪ್ರಜ್ವಲಿಸಬೇಕಿದೆ ಎಂದರು. ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ ಮಾತನಾಡಿ ವಿಶ್ವಕರ್ಮ ಜನಾಂಗ ಸುಸಂಸ್ಕøತರು, ಸೌಮ್ಯ ಸ್ವಭಾವದವರು…
ಗುಬ್ಬಿ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರುಗಳು ನಮ್ಮ ಪಕ್ಷದಲ್ಲಿ ಒಡಕಿದೆ ಎಂಬುದನ್ನು ಎಲ್ಲಿಯೂ ಹೇಳಬಾರದು. ಸರಿಪಡಿಸಲು ನಾವಿದ್ದೇವೆ ಎಂದು ಡಾ.ಜಿ.ಪರಮೇಶ್ವರ್‍ರವರು ಕಾರ್ಯಕರ್ತರಿಗೆ ಎಚ್ಚರಿಸಿದರು. ಭಾರತ್ ಜೋಡೋ ಕಾರ್ಯಕ್ರಮಕ್ಕೆ ಬರುತ್ತಿರುವ ರಾಹುಲ್‍ಗಾಂಧಿಯವರು ಯಾವ ಯಾವ ಸ್ಥಳದಲ್ಲಿ ತಂಗಬೇಕು ಹಾಗೂ ಯಾವ ಸ್ಥಳದಲ್ಲಿ ಕಾರ್ಯಕ್ರಮ ಮಾಡಬೇಕೆಂಬುದನ್ನು ಪರಿಶೀಲನೆ ಮಾಡಿ ನಿಟ್ಟೂರು ಹೋಬಳಿಯ ಪುರ ಗ್ರಾಮದ ಕಲ್ಲೇಶ್ವರ ಸ್ವಾಮಿ ದೇವಾಲಯದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷವು 75 ವರ್ಷಗಳಿಂದ ಪ್ರಜಾಪ್ರಭುತ್ವವನ್ನು ನಡೆಸಿಕೊಂಡು ಬರುತ್ತಿದ್ದು, ಪ್ರಭುತ್ವಕ್ಕೆ ಧಕ್ಕೆಯಾದಾಗ ಕಾಂಗ್ರೆಸ್ ಪಕ್ಷದ ಯಾವುದೇ ನಾಯಕರುಗಳಾಗಲೀ ಸಹಿಸುವುದಿಲ್ಲ ಆದ್ದರಿಂದ ರಾಹುಲ್‍ಗಾಂಧಿಯವರು ಸುಮಾರು 3500 ಕಿ.ಮೀ ಕಾಲ್ನಡಿಗೆ ಜಾಥಾವನ್ನು ಹಮ್ಮಿಕೊಂಡು ಆಯಾ ತಾಲ್ಲೂಕಿನ ಕಾರ್ಯಕರ್ತರಲ್ಲಿ ಹುರಿದುಂಬಿಸಲು ಹಾಗೂ ಭಾರತ ಐಕ್ಯತೆಯನ್ನು ಸಾರಲು ಈ ಭಾರತ್ ಜೋಡೋ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ ಎಂದು ತಿಳಿಸಿದ ಅವರು ಅಗತ್ಯ ವಸ್ತುಗಳ ಬೆಲೆಯೆರಿಕೆಯಿಂದಾಗಿ ಜನರ ಜೀವನ ಅಸ್ತವ್ಯಸ್ತವಾಗಿದ್ದು ಜಿಎಸ್‍ಟಿ ತೆರಿಗೆ ನೆಪದಲ್ಲಿ ಕೇಂದ್ರ ಸರ್ಕಾರವು ಹಾಲಿಗೂ ಸಹ ಜಿಎಸ್‍ಟಿಯನ್ನು ವಿಧಿಸಿರುವುದು ಎಷ್ಟು ಸಮಂಜಸ ಎಂದು…
ತುಮಕೂರು ದಕ್ಷಿಣ ಕನ್ನಡ ಮಿತ್ರ ವೃಂದ (ರಿ) ತುಮಕೂರು ಇವರ ವತಿಯಿಂದ ಎಂ.ಜಿ.ರಸ್ತೆಯ ಶ್ರೀಕೃಷ್ಣ ಮಿನಿಹಾಲ್ ನಲ್ಲಿ ಸದಸ್ಯರು ಮಕ್ಕಳಿಂದ ಶ್ರೀ ಕೃಷ್ಣಾ ರಾಧೆ ವೇಷಭೂಷಣ ಸ್ಪರ್ಧೆ, ಪ್ರತಿಭಾ ಪುರಸ್ಕಾರ ಹಾಗೂ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ತುಂಬಾ ಅದ್ದೂರಿಯಾಗಿ ನಡೆಯಿತು. ಈ ಶುಭ ಸಂದರ್ಭದ ಸಂಸ್ಕೃತಿಕ ಕಾರ್ಯಕ್ರಮದ ಸಭೆಯ ಉದ್ಘಾಟನೆಗೆ ಆಗಮಿಸಿದ ಬಿ. ಜೋತಿ ಗಣೇಶ್ ರವರು ಹಾಗೂ ಮುಖ್ಯ ಅತಿಥಿಗಳಾಗಿ ಆಗಮಿಸಿದ ಚಿದಾನಂದರವರು ಸ್ಪೂರ್ತಿ ಡೆವಲಪರ್ಸ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕರಾದ ದಯಾಶೀಲರವರು ದಕ್ಷಿಣ ಕನ್ನಡ ಮಿತ್ರ ವೃಂದದ ಅಧ್ಯಕ್ಷರಾದ ಶ್ರೀಯುತ ಅಮರನಾಥ ಶೆಟ್ಟಿ ಕೆಂಜೂರು ಮನೆರವರು, ಕಾರ್ಯದರ್ಶಿಯವರಾದ ವೆಂಕಟೇಶ್ ಕಾರಂತ್, ಉಪಾಧ್ಯಕ್ಷರಾದ ಸುಧೀರ್ ಹೆಗ್ಡೆ, ಸಂಘಟನಾ ಕಾರ್ಯದರ್ಶಿಯರಾದ ಜಯ ಪೂಜಾರಿ, ಖಜಾಂಚಿ ಅವರದ ಭಾಸ್ಕರ್ ಅಡಿಗ ರವರು ಹಾಗೂ ಎಲ್ಲಾ ನಿರ್ದೇಶಕರು ಹಾಜರಿದ್ದರು. ಪ್ರತಿಭಾ ಪುರಸ್ಕಾರವಾಗಿ ಸುಮಾರು 20 ಜನರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ರಾಧಾಕೃಷ್ಣ ವೇಷಭೂಷಣ ಸ್ಪರ್ಧೆಯಲ್ಲಿ ಭಾಗವಹಿಸಿದ ಸುಮಾರು 30 ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಗಿತ್ತು.…
ತುಮಕೂರು ಅಖಿಲ ಕರ್ನಾಟಕ ವೀರಶೈವ ಪುರೋಹಿತ ಮಹಾಸಭಾ(ರಿ) ತುಮಕೂರು ಜಿಲ್ಲಾ ಘಟಕದ ಉದ್ಘಾಟನೆ, ಶ್ರೀವೀರಭದ್ರಸ್ವಾಮಿ ಜಯಂತೋತ್ಸವ ಕಾರ್ಯಕ್ರಮ ಸೆಪ್ಟಂಬರ್ 20ರ ಮಂಗಳವಾರ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಜರುಗಲಿದೆ ಎಂದು ಅಖಿಲ ಕರ್ನಾಟಕ ವೀರಶೈವ ಪುರೋಹಿತ ಮಹಾಸಭಾ(ರಿ)ದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಸ್.ವೀರಪ್ಪದೇವರು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ಸೆಪ್ಟಂಬರ್ 20ರ ಮಂಗಳವಾರ ಬೆಳಗ್ಗೆ 8 ಗಂಟೆ ನಗರದ ಟೌನ್‍ಹಾಲ್ ವೃತ್ತದಿಂದ ಶ್ರೀವೀರಭದ್ರಸ್ವಾಮಿ ಅವರ ಮೂರ್ತಿಯನ್ನು ಬೆಳ್ಳಿ ಸಾರೋಟಿನಲ್ಲಿ ಇಟ್ಟು, ಅಶೋಕ ರಸ್ತೆ,ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ರಸ್ತೆ ಮೂಲಕ ಜೆ.ಸಿ.ರಸ್ತೆಯಲ್ಲಿರುವ ವೀರಶೈವ ಕಲ್ಯಾಣ ಮಂಟದವರೆಗೆ ಮೆರವಣಿಗೆ ನಡೆಸಲಾಗುವುದು ಎಂದರು. ಸೆಪ್ಟಂಬರ್ 20ರ ಮಂಗಳವಾರ ಬೆಳಗ್ಗೆ 10:30ಕ್ಕೆ ನಡೆಯುವ ಅಖಿಲ ಕರ್ನಾಟಕ ವೀರಶೈವ ಪುರೋಹಿತ ಮಹಾಸಭಾ(ರಿ) ಇದರ ತುಮಕೂರು ಜಿಲ್ಲಾ ಘಟಕದ ಉದ್ಘಾಟನಾ ಕಾರ್ಯಕ್ರಮ ಜರುಗಲಿದ್ದು, ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀಸಿದ್ದಗಂಗ ಮಠದ ಶ್ರೀಸಿದ್ದಲಿಂಗಮಹಾಸ್ವಾಮೀಜಿ,ಯಡಿಯೂರಿನ ಶ್ರೀರೇಣುಕ ಶಿವಾಚಾರ್ಯ ಮಹಾಸ್ವಾಮೀಜಿ, ಹಿರೇಮಠದ ಡಾ.ಶ್ರೀಶಿವಾನಂದಶಿವಾಚಾರ್ಯಸ್ವಾಮೀಜಿ,ದೊಡ್ಡಗುಣಿಯ ಶ್ರೀರೇವಣ್ಣಸಿದ್ದೇಶ್ವರ ಶಿವಾಚಾರ್ಯಸ್ವಾಮೀಜಿ, ಸಿದ್ದರಬೆಟ್ಟದ ಶ್ರೀವೀರಭದ್ರಶಿವಾಚಾರ್ಯಸ್ವಾಮೀಜಿ,ಹಾಗೂ ತೆವಡೇಹಳ್ಳಿಯ ಶ್ರೀಚನ್ನಬಸವೇಶ್ವರ ಮಹಾಸ್ವಾಮೀಜಿ ವಹಿಸುವರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು…











