ತುಮಕೂರು : ನಗರದ ಎಂಪ್ರೆಸ್ ಸರ್ಕಾರಿ ಮಹಿಳಾ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಯುಕ್ತ ಕೌಶಲ್ಯ ತರಬೇತಿ ಕೇಂದ್ರದ ವತಿಯಿಂದ ಆಯ್ಕೆಯಾದ ಕಾಲೇಜಿನ ಮಕ್ಕಳಿಂದ ಕೌಶಲ್ಯಗಳ ಸಂಭ್ರಮ ಕಾರ್ಯಕ್ರಮ ನಡೆಯಿತು. ಪಿಡಿಒಗಳ ಸಂಘದ ಅಧ್ಯಕ್ಷರೂ ಆಗಿರುವ ನಾಗರಾಜು ಮಾತನಾಡಿ, ಇಡೀ ವಿಶ್ವದಲ್ಲಿ ಅತೀ ಹೆಚ್ಚು ಯುವ ಸಂಪತ್ತನ್ನು ಹೊಂದಿರುವ ದೇಶ ನಮ್ಮದು ನೀವು ನಮ್ಮ ದೇಶದ ಸಂಪತ್ತು. ಭಾರತ ಮುಂದುವರಿದ ದೇಶವಾಗಲು ನಿಮ್ಮ ಶಕ್ತಿ ಅಗತ್ಯವಿದೆ ಎಂದು ಮಕ್ಕಳನ್ನು ಹುರಿದುಂಬಿಸಿದರು. ಅವರ ಶೈಕ್ಷಣಿಕ ಜೀವನದ ಏಳುಬೀಳುಗಳನ್ನು ಹೇಳುತ್ತಾ ಜೊತೆಗೆ ಗ್ರಾಮಪಂಚಾಯ್ತಿಯ ಹುಟ್ಟು, ಬೆಳವಣಿಗೆ ಮತ್ತು ಅದರ ಸದ್ಬಳಕೆಯ ಬಗ್ಗೆ ಸಂಕ್ಷೀಪ್ತವಾಗಿ ವಿವರಿಸುತ್ತಾ ಹೇಳಿದರು. ಮಕ್ಕಳು ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಡವಾಗಲು ಸಾತ್ವಿಕ ಆಹಾರಗಳಾದ ಸಿರಿಧಾನ್ಯಗಳನ್ನು ಮತ್ತು ಸೊಪ್ಪು ತರಕಾರಿಗಳನ್ನು ಸೇವಿಸಬೇಕು ಎಂದು ಮಾರ್ಗದರ್ಶನ ನೀಡಿದರು. ದೈಹಿಕವಾಗಿ ಸದೃಡರಾಗಲು ಪ್ರತೀದಿನ ಬೆಳಗಿನಜಾವ ಅರ್ಧ ಗಂಟೆಯಾದರೂ ನೆಡೆದಾಡುವ ಅಭ್ಯಾಸ ರೂಡಿಸಿಕೊಳ್ಳಬೇಕು ಎಂದು ಹೇಳಿದರು. ಮುಂದುವರೆದು ಈಗಿನ ಮಕ್ಕಳು ಮಾನಸಿಕವಾಗಿ ಮತ್ತು ವಿದ್ಯಾರ್ಥಿಗಳೊಂದಿಗೆ ಮುಕ್ತ ಸಂವಾದ…
Author: News Desk Benkiyabale
ತುಮಕೂರು : ಮನೆಕೆಲಸಗಾರರ ಸಂಘ (ಸಿಐಟಿಯು) ಜಾಖರ್ಂಡ್‍ನ ಬಿಜೆಪಿ ನಾಯಕಿ ಸೀಮಾ ಪಾತ್ರಾಗೆ ಕಠಿಣ ಶಿಕ್ಷೆಯನ್ನು ನೀಡಬೇಕೆಂದು ಕರೆ ನೀಡಿದೆ, ಆಕೆಯನ್ನು ಪೆÇಲೀಸರು ರಕ್ಷಿಸುವ ಮೊದಲು ಹಲವಾರು ವರ್ಷಗಳಿಂದ ತನ್ನ ಮನೆಗೆಲಸದವರಿಗೆ ಚಿತ್ರಹಿಂಸೆ ನೀಡಿದ್ದಾರೆ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ, ರಾಷ್ಟ್ರೀಯ ಎಸ್‍ಸಿ-ಎಸ್‍ಟಿ ಆಯೋಗ ಮತ್ತು ರಾಷ್ಟ್ರೀಯ ಮಹಿಳಾ ಆಯೋಗವು ಈ ವಿಷಯವನ್ನು ಸ್ವಯಂಪ್ರೇರಿತವಾಗಿ ಅರಿತುಕೊಳ್ಳಬೇಕು ಮತ್ತು ಬುಡಕಟ್ಟು ಮನೆಕೆಲಸಗಾರ್ತಿ ಸುನೀತಾ ಅವರಿಗೆ ಅತ್ಯುನ್ನತ ಆದೇಶದ ನ್ಯಾಯ ಸಿಗುವಂತೆ ನೋಡಿಕೊಳ್ಳಬೇಕು ಎಂದು ಸಿಐಟಿಯು ಒತ್ತಾಯಿಸುತ್ತದೆ. ಆಕೆಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡಬೇಕು ಮತ್ತು ಸಾಧ್ಯವಾದಷ್ಟು ಹೆಚ್ಚಿನ ಪರಿಹಾರವನ್ನು ನೀಡಬೇಕು. ಆಕೆಗೆ ಪುನರ್ವಸತಿ ಕಲ್ಪಿಸಲು ಕ್ರಮಕೈಗೊಳ್ಳಬೇಕು. ಸುನೀತಾಗೆ ನಡೆದ ಅಮಾನವೀಯ ವರ್ತನೆಯ ಬಗ್ಗೆ ಆಘಾತಕಾರಿ ವಿವರಗಳು ಹೊರಬಿದ್ದಿವೆ. ಪತ್ರಾ ಅವರು ಬಿಜೆಪಿ ಮಹಿಳಾ ಮೋರ್ಚಾದ ರಾಷ್ಟ್ರೀಯ ಸಮಿತಿಯ ಸದಸ್ಯರಾಗಿದ್ದಾರೆ ಮತ್ತು ಬೇಟಿ ಬಚಾವೋ ಬೇಟಿ ಪಢಾವೋ ಅಭಿಯಾನದ ರಾಜ್ಯ ಸಂಚಾಲಕರಾಗಿದ್ದಾರೆ ಎಂಬ ಅಂಶವು ಮಹಿಳೆಯರ ಹಕ್ಕುಗಳಿಗೆ ಬಿಜೆಪಿಯು ಯಾವ ತುಟಿ ಸೇವೆಯನ್ನು ನೀಡುತ್ತದೆ…
ಕೊರಟಗೆರೆ : ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಜೆಟ್ಟಿಅಗ್ರಹಾರ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ಅಪಘಾತವಾಗಿ ವೃದ್ದೆಯ ಕಾಲು ಮುರಿದಿದೆ. ಜೆಟ್ಟಿಅಗ್ರಹಾರ ಗ್ರಾಮದ ದಾಸಪ್ಪನ ಪತ್ನಿ ಗಿರಿಯಮ್ಮ(65)ವರ್ಷದ ವೃದ್ಧೆಗೆ ದ್ವಿಚಕ್ರ ವಾಹನ ಹರಿದು ವೃದ್ದೆಯ ಎರಡು ಕಾಲುಗಳು ಮುರಿದು ತುಮಕೂರಿನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ . ಕೇಶಿಪ್ ವಿರುದ್ದ ಸ್ಥಳೀಯರಿಂದ ಪ್ರತಿಭಟನೆ: ಜೆಟ್ಟಿಅಗ್ರಹಾರ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ತಿಂಗಳಿಗೆ ನೂರಾರು ಅಪಘಾತ ಆಗುತ್ತಿವೆ. ಅಪಘಾತವಾದಾಗ ಮಾತ್ರ ಪೆÇಲೀಸರು ಬರುತ್ತಾರೆ. ಅಪಘಾತದಲ್ಲಿ ಸತ್ತವರ ಕುಟುಂಬದ ನೋವು ಕೇಳೋರು ಯಾರು ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರು. ಶಿಲ್ಪ ನಾಗರಾಜು ಸ್ಥಳೀಯರು ಮಾತನಾಡಿ ಎಷ್ಟು ಬಾರಿ ಮನವಿ ಮಾಡಿದರೂ ನಮ್ಮ ಗ್ರಾಮದ ಮುಖ್ಯ ರಸ್ತೆಯಲ್ಲಿ ಆಗುತ್ತಿರುವ ಅಪಘಾತಗಳನ್ನು ತಡೆಯಲು ಅಧಿಕಾರಿಗಳಿಂದ ಸಾಧ್ಯವಾಗುತ್ತಿಲ್ಲ ಪ್ರತಿನಿತ್ಯ ಒಂದಲ್ಲ ಒಂದು ಅಪಘಾತಗಳು ನಡೆಯುತ್ತಲೇ ಇವೆ ಈ ಸಂಬಂಧ ಪಟ್ಟಂತೆ ಅಧಿಕಾರಿಗಳಿಗೆ ಮನವಿ ಮಾಡಿದ್ದೆವು ಆದರೆ ಇದುವರೆಗೂ ಯಾವುದೇ ಕ್ರಮ ಜರುಗಿಸಲಿಲ್ಲ ಆದ್ದರಿಂದ ಎಂದು ಸ್ಥಳೀಯ ನಾವೆಲ್ಲರೂ ಸೇರಿ ರಸ್ತೆ ತಡೆದು ಪ್ರತಿಭಟನೆ…
ತುಮಕೂರು : ಶಿಂಷಾ ಜಲಾನಯನ ಪ್ರದೇಶದಲ್ಲಿ ಆಗಸ್ಟ್ 26ರಿಂದ ಸುರಿಯುತ್ತಿರುವ ಭಾರಿ ಮಳೆಗೆ ಜಲಾಶಯದ ಒಳಹರಿವು ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಮಾರ್ಕೋನಹಳ್ಳಿ ಜಲಾಶಯದಿಂದ ಹೆಚ್ಚುವರಿ ನೀರನ್ನು ಹೊರಬಿಡುವ ಕಾರಣ ಅಣೆಕಟ್ಟೆ ಕೆಳಭಾಗದ ಮತ್ತು ನದಿ ಪಾತ್ರದ ಸುತ್ತಮುತ್ತಲಿನ ಹಳ್ಳಿಗಳ ಸಾರ್ವಜನಿಕರು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳುವಂತೆ ಹೇಮಾವತಿ ನಾಲಾವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಪ್ರಸ್ತುತ ಮಾರ್ಕೋನಹಳ್ಳಿ ಜಲಾಶಯಕ್ಕೆ ಬರುವ ಒಳಹರಿವಿನ ಪ್ರಮಾಣಕ್ಕೆ ಅನುಗುಣವಾಗಿ ಶಿಂಷಾ ನದಿಗೆ ಹೆಚ್ಚುವರಿ ನೀರನ್ನು ಹೊರ ಬಿಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಅಣೆಕಟ್ಟೆಯ ಕೆಳಭಾಗದ ಹಾಗೂ ನದಿ ಪಾತ್ರದ ಪ್ರದೇಶದಲ್ಲಿ ಬರುವ ಹಳ್ಳಿಗಳಾದ ಮಾರ್ಕೋನಹಳ್ಳಿ, ಹನುಮಾಪುರ, ಕೆಟಿ ಪಾಳ್ಯ, ಬೆಟ್ಟಹಳ್ಳಿ, ಪಡುವಗೆರೆ ಕೊಡವತ್ತಿ, ಕೀಲಾರ, ಅಂಚಿಪುರ, ದೊಡ್ಡಕಲ್ಲಹಳ್ಳಿ, ಚಂದನಹಳ್ಳಿ, ಯಡವಾಣಿ, ಕಗ್ಗಲಾಪುರ ಶಾನುಭೋಗನಹಳ್ಳಿ, ವಳಗೆರೆಪುರ, ಕಾಡಶೆಟ್ಟಿಹಳ್ಳಿ ಹಾಗೂ ಇತರೆ ಎಲ್ಲಾ ಹಳ್ಳಿಗಳ ಸಾರ್ವಜನಿಕರು ಮತ್ತು ಜಾನುವಾರು ಹಾಗೂ ಆಸ್ತಿ-ಪಾಸ್ತಿ ವಗೈರೆಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಿಕೊಳ್ಳುವಂತೆ ಎಡೆಯೂರು ಕಾವೇರಿ ನೀರಾವರಿ ನಿಗಮ ನಿಯಮಿತ ಹೇಮಾವತಿ ನಾಲಾ…
ತುಮಕೂರು : ಮಕ್ಕಳ ಭಿಕ್ಷಾಟನೆ ಒಂದು ಸಾಮಾಜಿಕ ಪಿಡುಗಾಗಿದ್ದು, ಇದನ್ನು ನಿಗ್ರಹಿಸದೆ ಹೋದರೆ ಮುಂದೆ ಮತ್ತಷ್ಟು ಸಾಮಾಜಿಕ ಗಂಭೀರ ಪರಿಣಾಮ ಉಂಟಾಗಲಿದೆ. ಈ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳು ಸಮನ್ವಯತೆಯಿಂದ ಕಾರ್ಯಾಚರಣೆಗೆ ಇಳಿದು ಮಕ್ಕಳ ಭಿಕ್ಷಾಟನೆಯನ್ನು ನಿಯಂತ್ರಿಸಬೇಕಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಅಧಿಕಾರಿ ವರ್ಗಕ್ಕೆ ಕರೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವರ ಸಂಯುಕ್ತಾಶ್ರಯದಲ್ಲಿ ಮಹಿಳಾ ಇಲಾಖೆಯ ಸಭಾಂಗಣದಲ್ಲಿ ಆಯೋಜಿಸಿದ್ದ ಮಕ್ಕಳ ಭಿಕ್ಷಾಟನೆ ತಡೆ: ಉಸ್ತುವಾರಿ ತಂಡದ ಸದಸ್ಯರುಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳ ಭಿಕ್ಷಾಟನೆಯನ್ನು ತಡೆಯುವುದು ಒಂದು ಇಲಾಖೆಯ ಜವಾಬ್ದಾರಿಯಲ್ಲ. ಇದಕ್ಕೆ ಸಾಮೂಹಿಕ ಹೊಣೆಗಾರಿಕೆ ಇದೆ. ಇದನ್ನರಿತು ವಿವಿಧ ಇಲಾಖೆಗಳು ಪರಸ್ಪರ ಒಗ್ಗೂಡಿ ಕಾರ್ಯಾಚರಣೆಗೆ ಇಳಿದರೆ ಈ ಸಾಮಾಜಿಕ ಪಿಡುಗನ್ನು ನಿಯಂತ್ರಿಸಲು ಸಾಧ್ಯವಿದೆ ಎಂದರು. ಮಕ್ಕಳನ್ನು ಬಳಸಿಕೊಂಡು ಭಿಕ್ಷಾಟನೆ ಮಾಡುವ ಹಿಂದೆ ಕೆಲವರ ಪಿತೂರಿ ಇರುವುದು ಹಲವು ಪ್ರಕರಣಗಳಲ್ಲಿ ತಿಳಿದು…
ತುಮಕೂರು: ನಗರಕ್ಕೆ ಸಮೀಪವಿರುವ ಮಂಚಕಲ್ಲುಕುಪ್ಪೆ ಗ್ರಾಮದ ಶ್ರೀಕಂಬದ ರಂಗನಾಥಸ್ವಾಮಿ ದೇವಾಲಯದ ಜಮೀನಿನನ್ನು ಕೆಲವರು ಒತ್ತುವರಿ ಮಾಡಿಕೊಂಡು ತಮ್ಮ ಸ್ವಂತ ಆಸ್ತಿಯಾಗಿಸಲು ಪ್ರಯತ್ನಿಸುತ್ತಿದ್ದು,ಜಿಲ್ಲಾಡಳಿತ ಹಾಗೂ ಮುಜರಾಯಿ ಇಲಾಖೆ ಕೂಡಲೇ ಕ್ರಮ ಕೈಗೊಂಡು,ದೇವಾಲಯದ ಜಾಗ ಉಳಿಸಿಕೊಡಬೇಕೆಂದು ಗ್ರಾಮಸ್ಥರು ಶುಕ್ರವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಮಂಚಕಲ್ ಕುಪ್ಪೆ ಗ್ರಾಮದ ಶ್ರೀಕಂಬದ ರಂಗನಾಥಸ್ವಾಮಿ ದೇವಾಲಯ ಮುಜರಾಯಿ ಇಲಾಖೆಯ ಸಿ.ದರ್ಜೆ ದೇವಾಲಯ ವಾಗಿದೆ. ವಾರ್ಷಿಕ ತಸ್ಥಿಕೆಯನ್ನು ನಿಗಧಿಪಡಿಸಲಾಗಿದೆ.ಗ್ರಾಮಸ್ಥರು ಶುಭ ಕಾರ್ಯಕ್ರಮಗಳಿಗಾಗಿ ಒಂದು ಸಮುದಾಯ ಭವನವನ್ನು ನಿರ್ಮಿಸಿಕೊಂಡಿದ್ದು, ಸದರಿ ಸಮುದಾಯಭವನವನ್ನು ದೇವಾಲಯ ಅಭಿವೃದ್ದಿ ಸಮಿತಿಯಲ್ಲಿದ್ದ ಕೆಲವರು ತಮ್ಮ ಸ್ವಂತ ಹೆಸರಿಗೆ ಮಾಡಿಕೊಂಡು, ಕಲ್ಯಾಣ ಮಂಟಪ ಮಾಡಿಕೊಂಡು ಅದರ ಆದಾಯವನ್ನು ದೇವಾಲಯ ಸಮಿತಿಗೆ ನೀಡದೆ, ಮೋಸ ಮಾಡಿಕೊಂಡು ಬರುತ್ತಿರುವುದಲ್ಲದೆ,ದೇವಾಲಯದ ಆಸ್ತಿ ಹೊಡೆಯಲು ಸಂಚು ರೂಪಿಸಿದ್ದಾರೆ ಎಂದು ಮನವಿ ಯಲ್ಲಿ ತಿಳಿಸಿದ್ದಾರೆ. ತುಮಕೂರು ತಹಶೀಲ್ದಾರರ ಅವರು 2002ರಲ್ಲಿ ಸದರಿ ದೇವಾಲಯದ ಮತ್ತು ಅದರ ಪ್ರಾಂಗಣದಲ್ಲಿರುವ ಕಟ್ಟಡಗಳು ದೇವಾಲಯಕ್ಕೆ ಸೇರಿದ್ದು ಎಂದು ಆದೇಶ ಮಾಡಿರುತ್ತಾರೆ.ಅಲ್ಲದೆ ಆರ್.ಟಿ.ಐ.ಕಾರ್ಯಕರ್ತರೊಬ್ಬರು ಲೋಕಾಯುಕ್ತಕ್ಕೆ 2002ರಲ್ಲಿ ಸಲ್ಲಿಸಿದ ದೂರಿನ ಅನ್ವಯ ಜಿಲ್ಲಾಧಿಕಾರಿಗಳು…
ತುಮಕೂರು : ವೈದ್ಯಕೀಯ ಪೂರ್ವ ಅನುಮತಿಯಿಲ್ಲದೆ ಅನಗತ್ಯವಾಗಿ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆಗಳನ್ನು ಮಾಡದೇ, ಸಹಜ ಹೆರಿಗೆ ಪ್ರಮಾಣವನ್ನು ಹೆಚ್ಚಿಸಬೇಕು, ತಾಯಿ ಮಕ್ಕಳ ಮರಣ ಪ್ರಮಾಣವನ್ನು ಶೂನ್ಯಕ್ಕೆ ಇಳಿಸಬೇಕು ಹಾಗೂ ಎಲ್ಲ ತಾಲ್ಲೂಕುಗಳಲ್ಲಿಯೂ ಗರ್ಭಿಣಿ ಮಹಿಳೆಯರ ನೋಂದಣಿ ಕಡ್ಡಾಯ ಮಾಡಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು. ಆರೋಗ್ಯ ಇಲಾಖೆಯ ಎಲ್ಲ ವೈದ್ಯರುಗಳು ಮತ್ತು ನೌಕರರು ತಮ್ಮ ತಮ್ಮ ಕೇಂದ್ರ ಸ್ಥಾನದಲ್ಲಿ ಲಭ್ಯವಿರಬೇಕು ಮತ್ತು ಈ ಮೂಲಕ ಸದಾಕಾಲ ಜನರ ಸೇವೆಗೆ ಸಿದ್ಧರಿರಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು. ತಮ್ಮ ಕಚೇರಿಯ ನ್ಯಾಯಾಲಯದ ಸಭಾಂಗಣದಲ್ಲಿಂದು ಆರೋಗ್ಯ ಇಲಾಖೆಯ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಪ್ರಾಥಮಿಕ ಆರೋಗ್ಯ ಸಂರಕ್ಷಣಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ ಗ್ರಾಮಗಳಿಗೆ ಭೇಟಿ ನೀಡಿ ಗರ್ಭಿಣಿ ಸ್ತ್ರೀಯರ ಆರೋಗ್ಯ ತಪಾಸಣೆ ನಡೆಸಬೇಕು. ಸಮಸ್ಯೆಗಳು ಕಂಡು ಬಂದಲ್ಲಿ ತಾಲ್ಲೂಕು ಮಟ್ಟದ ಆಸ್ಪತ್ರೆಗಳಿಗೆ ಸೇರಿಸಬೇಕು. ಈ ನಿಟ್ಟಿನಲ್ಲಿ ಡಿಹೆಚ್‍ಓ ತಮ್ಮ ಅಧೀನ ಅಧಿಕಾರಿಗಳಿಗೆ…
ತುಮಕೂರು: ಕರ್ನಾಟಕ ಪ್ರಸಿದ್ಧ ಮತ್ತು ಪ್ರಭಾವಶಾಲಿ ಮಠಗಳಲ್ಲಿ ಒಂದಾಗಿರುವ ಶ್ರೀ ಮುರುಘಾಮಠದ ಶ್ರೀಗಳಾದ ಶಿವಮೂರ್ತಿ ಶರಣರು ತಮ್ಮ ಕ್ರಾಂತಿಕಾರಿ ವಿಚಾರಧಾರೆಯಿಂದ, ವೈಜ್ಞಾನಿಕ ಚಿಂತನೆಗಳಿಂದ ಮತ್ತು ಶೋಷಿತರ ಪರ ಕಾಳಜಿಯಿಂದಾಗಿ ನಾಡಿನಾದ್ಯಂತ ಎಲ್ಲರ ಗೌರವಕ್ಕೆ ಪಾತ್ರರಾಗಿದ್ದಾರೆ. ಹೀಗಿರುವಾಗ ಶ್ರೀಗಳ ವಿರುದ್ಧ ಕೇಳಿ ಬಂದಿರುವ ಇಂತಹ ಭೀಕರ ಆರೋಪದಿಂದ ಕನ್ನಡನಾಡು ಬೆಚ್ಚಿಬಿದ್ದಿದೆ. ಶ್ರೀಗಳ ಮಠದ ಹಾಸ್ಟೆಲ್ ನಲ್ಲಿ ವ್ಯಾಸಂಗ ಮಾಡುತ್ತಿರುವ ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ ಆರೋಪಕ್ಕೆ ಒಳಗಾಗಿರುವ ಶ್ರೀಗಳ ವಿರುದ್ಧ ಫೋಕ್ಸೋ ಕಾಯ್ದೆಯಡಿ ಕೇಸು ದಾಖಲಾಗಿರುವುದು ಎಲ್ಲರಿಗೂ ತಿಳಿದಿದೆ. ಅಲ್ಲದೆ ಸಂತ್ರಸ್ತ ವಿದ್ಯಾರ್ಥಿನಿಯರ ಪೈಕಿ ಒಬ್ಬ ಪರಿಶಿಷ್ಟಜಾತಿಯ ವಿದ್ಯಾರ್ಥಿನಿಯೂ ಇರುವುದರಿಂದಾಗಿ ಶ್ರೀಗಳ ವಿರುದ್ಧ ಎಸ್.ಸಿ. ಮತ್ತು ಎಸ್.ಟಿ. ದೌರ್ಜನ್ಯ ತಡೆ ಕಾಯ್ದೆ ಅನ್ವಯ ದೂರು ದಾಖಲಾಗಿದೆ. ಈ ಎರಡು ಕಾಯ್ದೆಗಳಡಿ ಎಫ್.ಐ.ಆರ್. ದಾಖಲಿಸಿದ ಕೂಡಲೇ ಆರೋಪಿಗಳನ್ನು ಬಂಧಿಸಬೇಕಾಗಿದ್ದ ಪೊಲೀಸರು ಒಂದು ವಾರ ವಿಳಂಬ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಮೂಲಕ ಒಂದು ಕೆಟ್ಟ ಪರಂಪರೆಗೆ ನಾಂದಿ ಹಾಡಿದ್ದಾರೆ. ಈ…
ತುಮಕೂರು: ಸಾರ್ವಕರ್ ಅಧ್ಯಯನ ಪೀಠ ಸ್ಥಾಪನೆ ವಿರೋಧಿಸಿ ಎಸ್.ಎಫ್.ಐ ಮತ್ತು ಪ್ರಗತಿಪರ ಸಂಘಟನೆಗಳು ಪ್ರತಿಭಟಿಸುತ್ತಿರುವುದನ್ನು ಸರ್ಕಾರದ ಗಮನಕ್ಕೆ ತರಲಾಗುವುದು ಮತ್ತು ವಿವಿಯಲ್ಲಿ ವಿದ್ಯಾರ್ಥಿ ವಿರೋಧಿಯಾದ ಯಾವುದೇ ನಿಲುವುಗಳನ್ನು ತೆಗೆದುಕೊಳ್ಳುವುದಿಲ್ಲ ಎಂದು ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ವೆಂಕಟೇಶ್ವರಲು ತಿಳಿಸಿದ್ದಾರೆ. ತುಮಕೂರು ವಿವಿಯಲ್ಲಿ ಸಾವರ್ಕರ್ ಅಧ್ಯಯನ ಪೀಠ ಸ್ಥಾಪನೆ ವಿರೋಧಿಸಿ ಎಸ್.ಎಫ್.ಐ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖಂಡರು ಕುಲಪತಿಯವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಈ ಭರವಸೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ವಿವಿಯಲ್ಲಿ ಬ್ರಿಟಿಷರಿಗೆ ತಪ್ಪೊಪ್ಪಿಗೆ ಪತ್ರ ಬರೆದುಕೊಟ್ಟ ಸಾವರ್ಕರ್ ಅಧ್ಯಯನ ಪೀಠ ಸ್ಥಾಪನೆ ಮಾಡಬಾರದು. ಮಾಡಿದರೆ ಜಿಲ್ಲೆಯಲ್ಲಿ ಪ್ರತಿಭಟನೆಗಳನ್ನು ತೀವ್ರಗೊಳಿಸಲಾಗುವುದು ಎಂಬುದನ್ನು ಕುಲಪತಿಗಳ ಗಮನಕ್ಕೆ ತರಲಾಯಿತು. ಈ ಹಿನ್ನೆಲೆಯಲ್ಲಿ ಕುಲಪತಿಗಳು ವಿದ್ಯಾರ್ಥಿ ವಿರೋಧಿ ಪೀಠಗಳನ್ನು ವಿವಿಯಲ್ಲಿ ಜಾರಿಗೊಳಿಸುವುದಿಲ್ಲ ಎಂದು ಭರವಸೆ ನೀಡಿದರು. ಭಾರತೀಯ ಶರಣ ಸೇನಾ ಜಿಲ್ಲಾಧ್ಯಕ್ಷ ರವಿಕುಮಾರ ರಾಯಸಂದ್ರ ಮಾತನಾಡಿ, ವಿವಿಯು ಸಾವರ್ಕರ್ ಅಧ್ಯಯನ ಪೀಠದಿಂದ ಹಿಂದೆ ಸರಿಯದಿದ್ದಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು. ವಿಶ್ವವಿದ್ಯಾಲಯದಲ್ಲಿ ಯಾವುದೇ ಕಾರಣಕ್ಕೂ ವಿಷಬೀಜ ಬಿತ್ತಲು ಬಿಡುವುದಿಲ್ಲ.…
ತುಮಕೂರು: ಉದ್ಯೋಗದಾತರು ಮತ್ತು ಉದ್ಯೋಗಾಕಾಂಕ್ಷಿಗಳ ನಡುವೆ ಸೇತುವೆಯಾಗಿ ಉದ್ಯೋಗ ಮೇಳಗಳು ಕಾರ್ಯನಿರ್ವಹಿಸುತ್ತವೆ ಎಂದು ತುಮಕೂರು ನಗರ ಶಾಸಕ ಡಾ.ಜಿ.ಬಿ.ಜೋತಿಗಣೇಶ್ ತಿಳಿಸಿದ್ದಾರೆ. ನಗರದ ಎಂಪ್ರೆಸ್ ಶಾಲೆಯ ಆವರಣದಲ್ಲಿ ರೆಡ್ಡಿ ಫೌಂಡೇಷನ್, ಟೀಮ್ ಲೀವ್ ಸಂಸ್ಥೆ ಹಾಗು ಜಿ.ಬಿ.ಜೋತಿಗಣೇಶ್ ಅಭಿಮಾನಿ ಬಳಗ ಆಯೋಜಿಸಿದ್ದ ಉಚಿತ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಸರಕಾರಿ ಸಂಸ್ಥೆ ಗಳಾದ ಉದ್ಯೋಗ ವಿನಿಮಯ ಕಚೇರಿ ಹಾಗು ಕೌಶಲ್ಯಾಭಿವೃದ್ದಿ ಸಂಸ್ಥೆ ಯ ಜೊತೆಗೆ ಸೇರಿ ಪ್ರತಿ 40-50 ದಿನಗಳಿಗೊಮ್ಮೆ ಇಂತಹ ಉದ್ಯೋಗ ಮೇಳಗಳನ್ನು ತುಮಕೂರು ನಗರದಲ್ಲಿ. ಆಯೋಜಿಸಲಾಗುವುದೆಂದರು ಹೊಸ ಶಿಕ್ಷಣ ನೀತಿ-2020ರ ಪ್ರಕಾರ ಅನುತ್ತೀರ್ಣ ಎಂಬುದು ಇರುವುದಿಲ್ಲ. ಕೋರ್ಸ್ ಕಂಪ್ಲೀಲೆಡ್ ,ನಾನ್ ಕಂಪ್ಲಿಟೆಂಡ್ ಎಂಬಷ್ಟೇ ಪರಿಗಣಿಸಲಾಗುತ್ತದೆ.ಇದು ಅಯಾಯ ವಿದ್ಯಾರ್ಹತೆಗೆ ಅನುಗುಣವಾಗಿ ಉದ್ಯೋಗ ಪಡೆಯಲು ಸಾಧ್ಯವಾಗುತ್ತದೆ.ನಿಮಗೆ ಉದ್ಯೋಗ ನೀಡುವ ಕಂಪನಿ ನಿಮ್ಮಂದ ನಿಷ್ಠೆಯನ್ನು ಬಯಸುತ್ತದೆ. ಹಾಗಾಗಿ ಕೆಲಸ ನೀಡುವ ಸಂಸ್ಥೆಗಾಗಿ ದುಡಿಯುವ ಕೆಲಸ ಮಾಡಿ,ನೀವು ಕಂಪನಿಯನ್ನು ಪ್ರೀತಿಸಿದರೆ, ಅವರು ನಿಮ್ಮನ್ನು ಗೌರವದಿಂದ ಕಾಣುತ್ತಾರೆ ಎಂದು ಶಾಸಕ…






