ತುಮಕೂರು: ನೇಕಾರರ ಸಮುದಾಯ ಶಿಕ್ಷಣ ಮತ್ತು ರಾಜಕಾರಣ ಕ್ಷೇತ್ರದಲ್ಲಿ ಅತ್ಯಂತ ಹೀನಾಯ ಸ್ಥಿತಿಯಲ್ಲಿದ್ದು, ನೇಕಾರರ ಒಕ್ಕೂಟದ ಹೆಸರಿನಲ್ಲಿ ಒಂದಾಗಿರುವ ನೇಕಾರ ಸಮುದಾಯಗಳು ಮುಂದಿನ ದಿನಗಳಲ್ಲಿ ತಮ್ಮ ರಾಜಕೀಯ ಶಕ್ತಿ ಏನು ಎಂಬುದನ್ನು ತೋರಿಸಬೇಕಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಧನಿಯಕುಮಾರ್ ತಿಳಿಸಿದ್ದಾರೆ. ನಗರದ ಹೊರಪೇಟೆಯ ಶ್ರೀನೀಲಕಂಠೇಶ್ವರ ಸಮುದಾಯ ಭವನದಲ್ಲಿ ತುಮಕೂರು ಜಿಲ್ಲಾ ನೇಕಾರರ ಒಕ್ಕೂಟದಿಂದ ಆಯೋಜಸಿದ್ದ ರಾಷ್ಟ್ರೀಯ ನೇಕಾರರ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತಿದ್ದ ಅವರು, ಎಲ್ಲಾ ಸೇರಿದಂತೆ ನಾಲ್ಕು ಜನರಿಲ್ಲ. ಇಂತಹವರಿಗೆ ಅಧಿಕಾರ ನೀಡಲು ಸಾಧ್ಯವೇ ಎಂದು ಹೀಯಾಳಿಸುವವರಿಗೆ ಮುಂದಿನ ದಿನಗಳಲ್ಲಿ ನಮ್ಮ ಶಕ್ತಿ ಏನು ಎಂಬುದನ್ನು ತೋರ್ಪಡಿಸುವ ಗುರುತರ ಜವಾಬ್ದಾರಿ ಎಲ್ಲಾ ನೇಕಾರ ಬಂಧುಗಳ ಮೇಲಿದೆ ಎಂದರು. ನೇಕಾರರ ತಮ್ಮ ಶ್ರಮವನ್ನೇ ನಂಬಿ ಬದುಕುತ್ತಿದ್ದಾರೆ.ಆದರೆ ಮಧ್ಯವರ್ತಿಗಳ ಹಾವಳಿಯಿಂದ ಅಂದಿನ ಕೂಲಿಯೂ ಸಿಗದಂತಹ ಪರಿಸ್ಥಿತಿ ಎದುರಾಗಿದೆ.ಕೋವಿಡ್‍ನಿಂದ ಆದ ಅರ್ಥಿಕ ನಷ್ಟದಿಂದ ಕಂಗಾಲಾಗಿದ್ದ ಸಮುದಾಯವನ್ನು, ಸ್ವಾತಂತ್ರದ ಅಮೃತ ಮಹೋತ್ಸವಕ್ಕೆ ನೈಲಾನ್ ಮತ್ತು ಪಾಲಿಸ್ಟರ್‍ನಿಂದ ತಯಾರಿಸಿ ವಿದೇಶದಲ್ಲಿ ತಯಾರಾದ ಬಾವುಟವನ್ನು…
Author: News Desk Benkiyabale
ತುಮಕೂರು: ಜಿಲ್ಲೆಯಲ್ಲಿ ಡೆಂಗ್ಯೂ, ಚಿಕನ್ ಗುನ್ಯ ರೋಗಗಳು ಹರಡದಂತೆ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ತಮ್ಮ ಕಚೇರಿಯ ನ್ಯಾಯಾಲಯದ ಸಭಾಂಗಣದಲ್ಲಿಂದು ಜಿಲ್ಲಾ ಸಮಗ್ರ ರೋಗಗಳ ಕಣ್ಗಾವಲು ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗಿದ್ದು ಎಲ್ಲಿಯೂ ನೀರು ನಿಲ್ಲದಂತೆ ಚರಂಡಿ ವ್ಯವಸ್ಥೆಯನ್ನು ಸರಿಪಡಿಸಿ ನೀರು ಸರಾಗವಾಗಿ ಹರಿಯುವಂತೆ ಅಧಿಕಾರಿಗಳು ಗಮನಹರಿಸಬೇಕೆಂದು ತಿಳಿಸಿದರಲ್ಲದೇ ನೀರು ಸರಬರಾಜು ಮಾಡುವ ಪೈಪುಗಳನ್ನು ಆಗಿಂದ್ದಾಗ್ಗೆ ಪರೀಕ್ಷಿಸುವುದು ಮತ್ತು ನೀರಿನ ಸೋರಿಕೆಯಾಗದಂತೆ ಎಚ್ಚರಿಕೆವಹಿಸಬೇಕೆಂದು ತಿಳಿಸಿದರು. ಗ್ರಾಮೀಣ ಪ್ರದೇಶಗಳಲ್ಲಿ ವಾರಕೊಮ್ಮೆ ಸೊಳ್ಳೆ ನಾಶಕ ದ್ರಾವಣಗಳನ್ನು ಸೊಳ್ಳೆ ಉತ್ಪತ್ತಿಯಾಗುವ ತಾಣಗಳಲ್ಲಿ ಸಿಂಪಡಿಸಿಕೊಳ್ಳಲು ಅಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳಬೇಕೆಂದು ಸೂಚಿಸಿದರು. ರಸ್ತೆ ಬದಿಯ ತೆರೆದ ವಾತಾವರಣದಲ್ಲಿ ಕತ್ತರಿಸಿದ ಹಣ್ಣುಗಳ ಮಾರಾಟ ನಿμÉೀಧಿಸುವುದು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಹೋಟೆಲ್‍ಗಳಲ್ಲಿ ಸ್ವಚ್ಛತೆ, ನೈರ್ಮಲ್ಯತೆಯನ್ನು ಕಾಪಾಡುವುದು, ಧೂಮಿಕರಣ ಕೈಗೊಳ್ಳುವುದು, ಉದ್ಯಾನವನಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವುದರೊಂದಿಗೆ ನೀರು ನಿಲ್ಲದಂತೆ ಸೂಕ್ತ ಕ್ರಮವಹಿಸಬೇಕೆಂದು ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ…
ತುಮಕೂರು: ಜಿಲ್ಲಾ ಪಂಚಾಯಿತಿ ಸಿಇಓ ಡಾ.ವಿದ್ಯಾಕುಮಾರಿ ಶಿರಾ ತಾಲೂಕು ಬರಗೂರು ಗ್ರಾಮ ಪಂಚಾಯಿತಿ ದಿಢೀರ್ ಭೇಟಿ ನೀಡಿ ಅಮೃತ ಯೋಜನೆ ಹಾಗೂ ಇನ್ನಿತರ ಯೋಜನೆಯ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಮಂಗಳವಾರ ಬರಗೂರು ಗ್ರಾಮಪಂಚಾಯಿತಿಗೆ ಭೇಟಿ ನೀಡಿ, ಕುಡಿಯುವ ನೀರು, ಚರಂಡಿ, ಕಸವಿಲೇವಾರಿ ಘಟಕ, ಡಿಜಿಟಲ್ ಲೈಬ್ರರಿ, ಅಮೃತ ಪಾರ್ಕು, ಶಾಲಾ ಕಾಂಪೌಂಡ್, ಆಟದ ಮೈದಾನ, ಅಡುಗೆ ಕೊಠಡಿಗಳು, ಶೌಚಾಲಯಗಳನ್ನು ವೀಕ್ಷಿಸಿದ ನಂತರ ಮಾತನಾಡಿದ ಅವರು, ಅಮೃತ ಯೋಜನೆ ಅಡಿ ನೀಡಲಾಗಿರುವ ಕಾಮಗಾರಿಗಳನ್ನು ಚನ್ನಾಗಿಯೇ ನಿರ್ವಹಿಸಿದ್ದಾರೆ. ಆದರೂ ಕೆಲವು ಸಲಹೆಗಳನ್ನು ನೀಡಿದ್ದೇನೆ.ಇದರ ಜೊತೆಗೆ ಜಿಲ್ಲಾ ಪಂಚಾಯಿತಿಯ ಇತರೆ ಕಾರ್ಯಗಳನ್ನು ಸದರಿ ಗ್ರಾಮಪಂಚಾಯಿತಿ ಯಲ್ಲಿ ಉತ್ತಮವಾಗಿ ನಿರ್ವಹಿಸಿದ್ದಾರೆ ಎಂದು ಪ್ರಶಂಶೆ ವ್ಯಕ್ತಪಡಿಸಿದರು. ಕಳೆದ ಸಾಲಿನಲ್ಲಿ ಶಿರಾ ತಾಲೂಕು ಬರಗೂರು ಗ್ರಾಮಪಂಚಾಯಿತಿಯನ್ನು ಅಮೃತ ಯೋಜನೆಯಡಿ ಆಯ್ಕೆ ಮಾಡಲಾಗಿದ್ದು,ಗ್ರಾಪಂ. ವ್ಯಾಪ್ತಿಯ ಜನರಿಗೆ ಎಲ್ಲಾ ಮೂಲ ಸೌಕರ್ಯಗಳನ್ನು ಒದಗಿಸುವ ಕೆಲಸವನ್ನು ಉತ್ತಮ ರೀತಿಯಲ್ಲಿ ಮಾಡಿದ್ದಾರೆ ಎಂದರು. ಅಮೃತ ಯೋಜನೆಯಡಿ ಒಂದು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಹಳ್ಳಿಗಳಿಗೂ ಅಗತ್ಯವಿರುದ್ದ…
ತುಮಕೂರು: ಜಿಲ್ಲೆಯಲ್ಲಿ ಕಳೆದ ಜುಲೈ ಮಾಹೆಯ ಅಂತ್ಯ ಹಾಗೂ ಆಗಸ್ಟ್ ಮಾಹೆಯ ಮೊದಲ ವಾರದಲ್ಲಿ ಸುರಿದ ಭಾರಿ ಮಳೆಯಿಂದ ಭಾಗಶಃ ಮತ್ತು ಪೂರ್ಣ ಪ್ರಮಾಣದಲ್ಲಿ ಹಾನಿಯಾದ ಮನೆಗಳಿಗೆ ಸಂಬಂಧಪಟ್ಟಂತೆ ಪರಿಹಾರವನ್ನು ಶೀಘ್ರ ನೀಡಬೇಕೆಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಎಲ್ಲಾ ತಹಶೀಲ್ದಾರರಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಎಲ್ಲಾ ಉಪವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮಳೆ ನಷ್ಟ ಪರಿಹಾರ ನೀಡಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದ ಅವರು, ಮಳೆಯಿಂದ ಮೃತಪಟ್ಟ 8 ಪ್ರಕರಣಗಳ ವಾರಸುದಾರರಿಗೆ ಈಗಾಗಲೇ ಪರಿಹಾರ ನೀಡಲಾಗಿದ್ದು, ಹಾನಿಗೊಳಗಾದ ಮನೆ ಮಾಲೀಕರಿಗೆ ಪರಿಹಾರ ನೀಡುವ ಕೆಲವೇ ಪ್ರಕರಣಗಳು ಬಾಕಿ ಇದ್ದು, ಕೂಡಲೇ ಪರಿಹಾರ ನೀಡಲು ಅಧಿಕಾರಿಗಳು ಕ್ರಮವಹಿಸಬೇಕೆಂದು ಅವರು ನಿರ್ದೇಶನ ನೀಡಿದರು. ಅಪರ ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್-19ರಿಂದ ಮೃತಪಟ್ಟ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳನ್ನು ಸಲ್ಲಿಸಿರುವ ಸ್ವೀಕೃತ ಎಲ್ಲಾ ಅರ್ಜಿಗಳನ್ನು ಅನುಮೋದಿಸಿ ಈಗಾಗಲೇ ಪರಿಹಾರ ನೀಡಲಾಗಿದೆ.…
ತುಮಕೂರು: ದೇಶ ಭಕ್ತಿಗೀತೆಗಳಿಂದ ದೇಶದ ಮಹತ್ವದ ಬಗ್ಗೆ ತಿಳುವಳಿಕೆಯನ್ನು ಹೆಚ್ಚಿಸುತ್ತದೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ: ಕೆ. ವಿದ್ಯಾಕುಮಾರಿ ತಿಳಿಸಿದರು. ನಗರದ ಬಾಲಭವನದಲ್ಲಿ ಬೆಂಗಳೂರಿನ ಬಾಲಭವನ ಸೊಸೈಟಿ, ಜಿಲ್ಲಾ ಬಾಲಭವನ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ 75ನೇ ಅಮೃತ ಮಹೋತ್ಸವದ ಅಂಗವಾಗಿ 5 ರಿಂದ 16 ವರ್ಷದ ವಯೋಮಾನದ ಮಕ್ಕಳಿಗಾಗಿ ಆಯೋಜಿಸಿದ್ದ ಚಿತ್ರಕಲೆ ಮತ್ತು ದೇಶಭಕ್ತಿ ಗೀತೆ ಸ್ಪರ್ಧೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸ್ವಾತಂತ್ರ್ಯ ದಿನ ಅತ್ಯಂತ ಅರ್ಥಪೂರ್ಣವಾದ ದಿನವಾಗಿದ್ದು, ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಆಯೋಜಿಸಿರುವ ಚಿತ್ರಕಲೆ ಮತ್ತು ದೇಶಭಕ್ತಿ ಗೀತೆಗಳ ಸ್ಪರ್ಧೆಗಳು ಪ್ರಯೋಜನಕಾರಿಯಾಗಿವೆ. ದೇಶಭಕ್ತಿ ಗೀತೆಗಳು ದೇಶದ ಮಹತ್ವವನ್ನು ತಿಳಿಸುತ್ತದೆ ಎಂದರು. ಈ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯು ಪಾಲ್ಗೊಂಡು ತನ್ನ ಪ್ರತಿಭೆಯನ್ನು ವಿಸ್ತರಿಸಿಕೊಳ್ಳಬೇಕು. ಸ್ಪರ್ಧೆಗಳು ಕೇವಲ ಬಹುಮಾನಕ್ಕಾಗಿರದೇ ಸ್ಪರ್ಧಿಸುವ ಅನುಭವ ಮತ್ತೊಂದು ಹಂತಕ್ಕೆ ಕೊಂಡೊಯ್ದು ವಿದ್ಯಾರ್ಥಿ ಜೀವನ ಪರಿಪೂರ್ಣವಾಗುವುದಕ್ಕೆ ಸಹಕಾರಿಯಾಗುತ್ತದೆಂದರು. ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಜಿಲ್ಲಾ ಬಾಲಭವನ ಸಮಿತಿ ಸದಸ್ಯರಾದ ಬಸವಯ್ಯ…
ತುಮಕೂರು: ಜಿಲ್ಲೆಯಲ್ಲಿ ಸಾವರ್ಕರ್ ಫ್ಲೆಕ್ಸ್ ಹರಿದವರನ್ನು ಕಂಡಲ್ಲಿ ಗುಂಡಿಡಬೇಕು ಎಂದು ಮಾಜಿ ಸಚಿವ ಸೊಗಡು ಶಿವಣ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರು ಕೆಜೆ ಹಳ್ಳಿ ಡಿಜೆಹಳ್ಳಿ ಹಾಗೂ ಶಿವಮೊಗ್ಗದಂತಾಗುವುದು ಬೇಡ. ಸಾವರ್ಕರ್ ಫೆÇೀಟೋ ಹರಿದವರು ಪಾಪಿಗಳು. ಅವರನ್ನು ಕೂಡಲೇ ಬಂಧಿಸಬೇಕು. ಕಿಡಿಗೇಡಿಗಳನ್ನು ಗಡಿಪಾರು ಮಾಡಬೇಕು. ಪಾಲಿಕೆಯವರು ಫ್ಲೆಕ್ಸ್ ತೆಗೆದುಹಾಕಿರುವುದು ತಪ್ಪು, ಆಯುಕ್ತರನ್ನು ಕೂಡಲೇ ಅಮಾನತು ಮಾಡಬೇಕು ಎಂದು ಆಕ್ರೋಶ ಹೊರ ಹಾಕಿದರು. ಸ್ವಾತಂತ್ರ್ಯ ದಿನೋತ್ಸವದ ಹಿನ್ನೆಲೆಯಲ್ಲಿ ನಗರದ ಅಲ್ಲಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಫ್ಲೆಕ್ ಗಳನ್ನು ಹಾಕಲಾಗಿತ್ತು. ಅದರಲ್ಲಿ ಸಾವರ್ಕರ್ ಭಾವಚಿತ್ರವೂ ಇತ್ತು. ಅಶೋಕ ರಸ್ತೆಯ ಎಂಪ್ರೆಸ್ ಕಾಲೇಜಿನ ಮುಂಭಾಗ ಸಾವರ್ಕರ್ ಫೆÇೀಟೋ ಇದ್ದ ಫ್ಲೆಕ್ಸ್ ಅನ್ನು ಕಿಡಿಗೇಡಿಗಳು ಸೋಮವಾರ ರಾತ್ರಿ ಹರಿದು ಹಾಕಿರುವ ಸಂಗತಿ ಬೆಳಕಿಗೆ ಬಂದಿತ್ತು.
ತುಮಕೂರು: ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರುವ ಫ್ಲೆಕ್ಸ್‍ನಲ್ಲಿದ್ದ ವೀರ ಸಾವರ್ಕರ್ ಭಾವಚಿತ್ರವನ್ನು ಕಿಡಿಗೇಡಿಗಳು ಹರಿದು ಹಾಕಿರುವ ಘಟನೆ ತುಮಕೂರು ನಗರದಲ್ಲಿ ನಡೆದಿದೆ. ನಗರದ ಅಶೋಕ ರಸ್ತೆಯ ಎಂಪ್ರೆಸ್ ಕಾಲೇಜು ಮುಂಭಾಗ ನಗರ ಶಾಸಕ ಜಿ.ಬಿ ಜ್ಯೋತಿಗಣೇಶ್ ಅವರು ವಿವಿಧ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರದೊಂದಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರುವ ಫ್ಲೆಕ್ಸ್ ಅಳವಡಿಸಿದ್ದರು. ಕಿಡಿಗೇಡಿಗಳು ಸಾವರ್ಕರ್ ಭಾವಚಿತ್ರವಿರುವ ಫ್ಲೆಕ್ಸನ್ನು ಹರಿದು ಹಾಕಿ ವಿಕೃತಿಯನ್ನು ಮೆರೆದಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಘಟನೆಯಿಂದ ಪ್ರೇರೇಪಿತಗೊಂಡು ತುಮಕೂರು ನಗರದಲ್ಲಿಯೂ ಕೂಡ ಕಿಡಿಗೇಡಿಗಳು ವೀರ ಸಾವರ್ಕರ್ ಫೆÇೀಟೋ ಹರಿದು ಹಾಕಿರುವ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ನಾಲ್ಕು ದಿನಗಳ ಹಿಂದೆ ಫ್ಲೆಕ್ಸ್ ಹಾಕಲಾಗಿದ್ದು, ಅಂದಿನಿಂದ ಎಲ್ಲ ಫ್ಲೆಕ್ಸ್‍ಗಳು ಸುಸ್ಥಿತಿಯಲ್ಲಿದ್ದವು. ಆದರೆ ಸ್ವಾತಂತ್ರ್ಯ ದಿನಾಚರಣೆ ದಿನದ ರಾತ್ರಿ ಕಿಡಿಗೇಡಿಗಳು ವೀರ ಸಾರ್ವಕರ್ ಭಾವಚಿತ್ರ ಇರುವ ಫ್ಲೆಕ್ಸ್ ಅನ್ನು ಹರಿದು ಹಾಕಿದ್ದಾರೆ. ಈ ಕುರಿತು ಹಿಂದೂಪರ ಸಂಘಟನೆಗಳ ಮುಖಂಡರು ಹಾಗೂ ನಾಗರೀಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ…
ತುಮಕೂರು: ಹೋರಿಮುದ್ದಪ್ಪ ನಾಗರೀಕ ಹಿತರಕ್ಷಣಾ ಸಮಿತಿ ವತಿಯಿಂದ ನಗರದ ಹೋರಿಮುದ್ದಪ್ಪ ಕಾಂಪೌಂಡ್‍ನಲ್ಲಿರುವ ಕನ್ನಡ ಧ್ವಜಸ್ತಂಭದ ಆವರಣದಲ್ಲಿ ಮಧ್ಯರಾತ್ರಿ 12ರ ಸಮಯದಲ್ಲಿ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಧ್ವಜಾರೋಹಣ ನೆರವೇರಿಸುವ ಮೂಲಕ ವಿಶೇಷವಾಗಿ ಆಚರಿಸಲಾಯಿತು. ಮಧ್ಯರಾತ್ರಿ ನಡೆದ 75ನೇ ಸ್ವಾತಂತ್ರ್ಯೋತ್ಸವದಲ್ಲಿ ಹಿರಿಯರಾದ ಗಂಗಮ್ಮ ಧ್ವಜಾರೋಹಣ ನೆರವೇರಿಸಿದರು. ಹೋರಿಮುದ್ದಪ್ಪ ನಾಗರೀಕ ಹಿತರಕ್ಷಣಾ ಸಮಿತಿ ನಿರ್ದೇಶಕ ಗುರುಮೂರ್ತಿ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ಕೊಟ್ಟಿದ್ದು ಮಧ್ಯರಾತ್ರಿಯಾಗಿದ್ದು ಅದರ ಸವಿನೆನಪಿಗಾಗಿ ಇಲ್ಲೂ ಕೂಡ ಮಧ್ಯರಾತ್ರಿಯೇ ಆಚರಣೆ ಮಾಡುತ್ತಿರುವುದು ಶ್ಲಾಘನೀಯ ಎಂದರು. ಇಂದಿನ ಯುವಕರಿಗೆ ಹಿಂದಿನವರ ಮಾರ್ಗದರ್ಶನ ಅಗತ್ಯವಿದ್ದು ರಾಷ್ಟ್ರನಾಯಕರ ಅದರ್ಶ ವ್ಯಕ್ತಿತ್ವವನ್ನು ಮೈಗೂಡಿಸಿಕೊಂಡು ದೇಶದ ಪ್ರಗತಿಗೆ ಮುಂದಾಗಿ ಎಂದು ಕರೆ ನೀಡಿದರು. ಶಿಕ್ಷಕ ವಿಶ್ವನಾಥ್ ಮಾತನಾಡಿ, ಧಾರ್ಮಿಕ ಸಂಸ್ಕಾರದ ಹಿನ್ನಲೆಯಲ್ಲಿ ವೈಜ್ಞಾನಿಕ ಬೆಳವಣಿಗೆಯಾಗಬೇಕು. ಧಾರ್ಮಿಕ ಸಂಸ್ಕಾರದ ಮೂಲಕ ಸಮಾನತೆ, ಸದಾಚಾರ, ಮಾನವೀಯತೆ ಬೆಳೆಸಿಕೊಳ್ಳಿ ಎಂದು ಹೇಳಿದರು. ಸ್ವರ ಸಿಂಚನ ಸುಗಮ ಸಂಗೀತ ಸಂಸ್ಥೆಯ ಕೆಂಕೆರೆ ಮಲ್ಲಿಕಾರ್ಜುನ್ ಮಾತನಾಡಿ, ಪ್ರಸ್ತುತದಲ್ಲಿ ದೇಶವ್ಯಾಪಿ ಅನೇಕ ಜ್ವಲಂತಸಮಸ್ಯೆಗಳಿದ್ದು ಅವುಗಳ ನಿರ್ಮೂಲನೆಯಾಗದೆ ದೇಶದ ಅಭಿವೃದ್ಧಿ…
ತುಮಕೂರು: ಸಿದ್ಧಾರ್ಥ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ 75ನೇ ಅಮೃತ ಮಹೋತ್ಸವದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಇಂದು ವನಮಹೋತ್ಸವ, ಆರೋಗ್ಯ ತಪಾಸಣೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಸನ್ಮಾನ ಸೇರಿದಂತೆ ಹತ್ತು ಹಲವು ಸಾಂಸ್ಕøತಿಕ ಕಾರ್ಯಕ್ರಮಗಳ ಮೂಲಕ ರಾಷ್ಟ್ರೀಯ ಹಬ್ಬವನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು. ನಗರದ ಅಗಳಕೋಟೆಯಲ್ಲಿರುವ ಶ್ರೀ ಸಿದ್ದಾರ್ಥ ವೈದ್ಯಕೀಯ ಕಾಲೇಜಿನಲ್ಲಿಂದು 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸಾಹೇ ವಿಶ್ವ ವಿದ್ಯಾಲಯದ ಕುಲಾಧಿಪತಿಗಳಾದ ಡಾ.ಜಿ.ಪರಮೇಶ್ವರ್ ಧ್ವಜಾರೋಹಣ ನೇರವೆರಿಸಿ ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಿ ಮಾತನಾಡಿದರು. ದೇಶಕ್ಕಾಗಿ ಮಣಿದ ವೀರ ಯೋಧರನ್ನು ಸ್ಮರಿಸುತ್ತಾ ಅವರ ಹೋರಾಟ, ಬಲಿದಾನದ ಫಲವಾಗಿ ಇಂದು ನಾವು ನೆಮ್ಮದಿಯಿಂದ ಜೀವಿಸುತ್ತಿದ್ದೇವೆ. ಅವರ ತ್ಯಾಗ ಬಲಿದಾನವನ್ನು ಸ್ಮರಿಸಿದರು. ಸಮಾಜದ ಅಭಿವೃದ್ಧಿ ಪೂರಕವಾದ ಶೈಕ್ಷಣಿಕ ಕ್ಷೇತ್ರದ ಸುಧಾರಣೆಗೆ ನಾವೆಲ್ಲರೂ ಬದ್ಧರಾಗಬೇಕು. ಹಿಂದುಳಿದ ಪ್ರದೇಶದ ಮಕ್ಕಳಿಗೆ ಶಿಕ್ಷಣ ಸಿಗಬೇಕು. ಈ ನಿಟ್ಟಿನಲ್ಲಿ ನಮ್ಮ ತಂದೆ ಸ್ಥಾಪಿಸಿದ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡುಯ್ಯುತ್ತಿರುವುದಾಗಿ ಹೇಳಿದ ಅವರು ಇದಕ್ಕಾಗಿ ಅಡ್ಡಿ ಬರುವ ಹಲವಾರು ಸಮಸ್ಯೆಗಳನ್ನು…
ತುಮಕೂರು: ‘ಕ್ಯಾಂಪಸ್ ಕಹಾನಿ’ ಲೇಖಕ ಯೋಗೇಶ್ ಮಲ್ಲೂರು ಅವರ ಮೊದಲ ಪುಸ್ತಕವಾಗಿದ್ದು, ನವಿರಾದ ಅಭಿವ್ಯಕ್ತಿಯಿಂದ ಕೂಡಿದೆ. ಪುಸ್ತಕದ ನಿರೂಪಣೆ ಓದುಗರನ್ನು ಸೆಳೆಯುತ್ತವೆ ಎಂದು ತುಮಕೂರು ವಿಶ್ವವಿದ್ಯಾನಿಲಯ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗ ಸಹಾಯಕ ಪ್ರಾಧ್ಯಾಪಕ ಹಾಗೂ ಲೇಖಕ ಡಾ. ಸಿಬಂತಿ ಪದ್ಮನಾಭ ಕೆ.ವಿ ತಿಳಿಸಿದರು. ನಗರದ ತುಮಕೂರು ವಿಶ್ವವಿದ್ಯಾನಿಲಯದ ಸದಾನಂದಮಯ ಕಟ್ಟಡದಲ್ಲಿರುವ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ನಡೆದ ಯೋಗೇಶ್ ಮಲ್ಲೂರು ಅವರ ಕ್ಯಾಂಪಸ್ ಕಹಾನಿ ಪುಸ್ತಕದ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಯೋಗೇಶ್ ನನ್ನ ಹಳೆಯ ವಿದ್ಯಾರ್ಥಿ, ಅವರ ಬರವಣಿಗೆಯ ಆಸಕ್ತಿಯನ್ನು ಪದವಿ ಹಂತದಿಂದಲೇ ನೋಡಿಕೊಂಡು ಬಂದಿದ್ದೆ. ಉತ್ತಮವಾದ ಬರಹಗಳನ್ನು ಬರೆಯುತ್ತಿದ್ದರು ಎಂದರು. ಹದಿಹರೆಯದ ಮನಸ್ಸಿನ ತುಡಿತಗಳು, ಭಾವನೆಗಳನ್ನು ಪುಸ್ತಕದಲ್ಲಿ ಕಾಣುತ್ತೇವೆ. ಯುವ ವಯಸ್ಸಿಗೆ ಈ ತರಹದ ಭಾವನೆಗಳು ಸಹಜವಾದರೂ ಅದನ್ನು ಅಭಿವ್ಯಕ್ತಿ ಪಡಿಸುವುದು ಮುಖ್ಯ. ಪುಸ್ತಕದಲ್ಲಿ ಸುಮಾರು 40 ರಷ್ಟು ಬರಹಗಳಿದ್ದು, ನವಿರಾದ ನಿರೂಪಣೆ ಹಾಗೂ ಉತ್ತಮ ಶೈಲಿಯಿಂದ ಕೂಡಿದೆ. ವಿದ್ಯಾರ್ಥಿ ದಿಸೆಯಿಂದಲೇ ಒಳ್ಳೆಯ ರೀತಿಯ…











