Author: News Desk Benkiyabale

ತುಮಕೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮನೆ-ಮನಗಳಲ್ಲಿ ರಾಷ್ಟ್ರದ ಬಗ್ಗೆ ಅಭಿಮಾನ ಮೂಡಿಸಲು ಜಿಲ್ಲಾಡಳಿತದ ವತಿಯಿಂದ ಸೈಕ್ಲೋಥಾನ್ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಿಂದ ಸ್ವಾತಂತ್ರ್ಯ ಚೌಕ, ಅಶೋಕ ರಸ್ತೆ, ಬಿ.ಜಿ.ಎಸ್. ವೃತ್ತ, ಶಿವಕುಮಾರಸ್ವಾಮಿ ವೃತ್ತ, ಭದ್ರಮ್ಮ ವೃತ್ತದ ಮೂಲಕ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದವರೆಗೂ ಸಂಚರಿಸಿದ ಸೈಕ್ಲೋಥಾನ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, 75ನೇ ಆಜಾದಿ ಕಾ ಅಮೃತ ಮಹೋತ್ಸವವನ್ನು ಅರ್ಥಪೂರ್ಣ ಹಾಗೂ ವಿನೂತನ ರೀತಿಯಲ್ಲಿ ಆಚರಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು. ಹರ್ ಘರ್ ತಿರಂಗಾ ಅಭಿಯಾನದಡಿ ಜಿಲ್ಲೆಯ 4.5 ಲಕ್ಷ ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸುವ ಉದ್ದೇಶವನ್ನು ಹೊಂದಲಾಗಿತ್ತು. ಆದರೆ 5 ಲಕ್ಷಕ್ಕೂ ಹೆಚ್ಚಿನ ಮನೆಗಳ ಮೇಲೆ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ರಾಷ್ಟ್ರದ ಮೇಲೆ ಜನರು ಅಭಿಮಾನ ತೋರಿದ್ದಾರೆ. ಅಭಿಮಾನ ತೋರಿದ ದೇಶಪ್ರೇಮಿಗಳಿಗೆ ಅಭಿನಂದನೆ ಸಲ್ಲಿಸಿದರು. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್ 15ರಂದು ವಿಶೇಷವಾಗಿ…

Read More

ತುಮಕೂರು: ದೇಶದ ಪ್ರತಿಯೊಬ್ಬರಿಗೂ ಸರ್ಕಾರದ ಸವಲತ್ತು ಸಿಕ್ಕಾಗ ಮಾತ್ರ ಸ್ವಾತಂತ್ರ್ಯಕ್ಕೆ ನಿಜವಾದ ಅರ್ಥ ಬರುತ್ತದೆ ಎಂದು ನಗರ ಕ್ಷೇತ್ರದ ಶಾಸಕ ಜಿ.ಬಿ.ಜ್ಯೋತಿಗಣೇಶ್ ತಿಳಿಸಿದರು. ನಗರದ ಬಿಜಿಎಸ್ ಟೌನ್ ಹಾಲ್ ವೃತ್ತದಲ್ಲಿ ಕಾರ್ಪೊರೇಷನ್ ಪರಿಮಿತಿಯಲ್ಲಿ ಭಾನುವಾರ ಕೆನರಾ ಬ್ಯಾಂಕ್ ವತಿಯಿಂದ ನಡೆದ ವಸ್ತುಪ್ರದರ್ಶನ ಹಾಗೂ ಜೀರೋ ಬ್ಯಾಲೆನ್ಸ್ ಖಾತೆಗೆ ಚಾಲನೆ ನೀಡಿ ಮಾತನಾಡಿದ ಅವರು, ಇಂದು ಸ್ವಾತಂತ್ರ್ಯದ ಅರ್ಥ ತಿಳಿಯಬೇಕಾದರೆ ಸರ್ಕಾರ ಮತ್ತು ನಮ್ಮ ದೇಶ ಶ್ರಮಿಕರಿಗೆ, ಜನರಿಗೆ ಸೌಕರ್ಯ ಕೊಟ್ಟಾಗ ಮಾತ್ರ ಸ್ವಾತಂತ್ರ್ಯದ ಬಗ್ಗೆ ಅರಿವು ಬರುತ್ತದೆ ಎಂದರು. ನರೇಂದ್ರ ಮೋದಿಯವರು ಪ್ರಧಾನಿಯಾದ ಮೇಲೆ ಸಾಕಷ್ಟು ಜನಪರ ಯೋಜನೆಗಳು ಜಾರಿಗೆ ತಂದಿದ್ದು, ಆ ಯೋಜನೆಗಳು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಕೂಡ ತಲುಪುತ್ತಿವೆ ಎಂದರೆ ಅದಕ್ಕೆ ನಾವು ಹೆಮ್ಮೆ ಪಡಬೇಕಾಗುತ್ತದೆ. ಇಂದು ಜನ್ ಧನ್ ಯೋಜನೆ, ಸಾಮಾಜಿಕ ಭದ್ರತೆ ಯೋಜನೆ, ಅಟಲ್ ಪಿಂಚಣಿ ಯೋಜನೆ, ಉಜ್ವಲ ಯೋಜನೆ, ಬೀದಿ ವ್ಯಾಪಾರ ಮಾಡುವವರಿಗೆ ಸ್ವನಿಧಿ ಯೋಜನೆ ಮುಂತಾದ ಹಲವಾರು ಯೋಜನೆಗಳನ್ನು ಜಾರಿಗೆ ತಂದು…

Read More

ತುಮಕೂರು: ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿರುವ ಮಹಾತ್ಮಗಾಂಧಿ ಸ್ಮಾರಕ ಭವನ ಇಂದು ಬಹಳ ನಿರ್ಲಕ್ಷ್ಯಕ್ಕೆ ಒಳಗಾಗಿರುವುದು ಬೇಸರದ ಸಂಗತಿ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಕೊರಟಗೆರೆ ಶಾಸಕ ಡಾ.ಜಿ.ಪರಮೇಶ್ವರ್ ತಿಳಿಸಿದರು. ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿರುವ ಮಹಾತ್ಮಗಾಂಧಿ ಸ್ಮಾರಕ ಭವನಕ್ಕೆ ಭಾನುವಾರ ಭೇಟಿ ನೀಡಿ ಮಾತನಾಡಿದ ಅವರು, 1932 ಮತ್ತು 1937 ರಲ್ಲಿ ಗಾಂಧೀಜಿಯವರು ತುಮಕೂರಿಗೆ ಎರಡು ಭಾರಿ ಭೇಟಿ ನೀಡುತ್ತಾರೆ. ಆ ಸಂದರ್ಭದಲ್ಲಿ ಇಲ್ಲಿನ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿರುವ ಕೊಠಡಿಯೊಂದರಲ್ಲಿ ತಂಗಿರುತ್ತಾರೆ. ಇದು ಇಂದು ಬಹಳ ನಿರ್ಲಕ್ಷಕ್ಕೆ ಒಳಗಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಮಹಾತ್ಮ ಗಾಂಧಿಜಿಯ ಸ್ಮಾರಕವಾಗಿರುವ ಇದನ್ನು ಅಭಿವೃದ್ಧಿ ಪಡಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಸರ್ಕಾರ ಇದಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಿ ಅಭಿವೃದ್ಧಿ ಪಡಿಸಬೇಕು, ಇಲ್ಲವೇ ಕಾರ್ಪೊರೇಷನ್‍ನವರಿಗೆ ಸೂಚನೆ ಕೊಟ್ಟು ಅವರ ಮುಖಾಂತರವಾದರೂ ಅಭಿವೃದ್ಧಿಪಡಿಸಬೇಕು, ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಈಗಲಾದರೂ ಎಚ್ಚೆತ್ತುಕೊಂಡು ಗಮನ ಹರಿಸಬೇಕೆಂದು ಒತ್ತಾಯಿಸಿದರು. ಇಂತಹ ಸ್ಮಾರಕಗಳು ನಮಗೆ ಸಿಗುವುದೇ ಅಪರೂಪ. ಗಾಂಧಿಜಿಯವರ ನಡಿಗೆ,…

Read More

ತುಮಕೂರು: ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತದ ಐಕ್ಯತೆ ಮತ್ತು ಸಮಗ್ರತೆ ಉಳಿಯುವ ನಿಟ್ಟಿನಲ್ಲಿ ಇಂದಿನ ಯುವ ಪೀಳಿಗೆ ಅಸಮಾನತೆ, ಅಸ್ಪøಷ್ಯತೆ ರಹಿತ, ಸೌಹಾರ್ಧ ಭಾರತವನ್ನು ಕಟ್ಟಬೇಕಿದೆ ಎಂದು ಸರ್ವೋದಯ ಪಿಯು ಕಾಲೇಜಿನ ನಿವೃತ್ತ ಪ್ರಾಂಶುಪಾಲ ಮೇಜರ್ ಹೆಚ್.ನಾರಾಯಣಪ್ಪ ಅಭಿಪ್ರಾಯಪಟ್ಟಿದ್ದಾರೆ. ನಗರದ ವಿಜಯನಗರ ಸರ್ವೋದರ್ಯ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಸರ್ವೋದಯ ಶಿಕ್ಷಣ ಸಂಸ್ಥೆವತಿಯಿಂದ ಆಯೋಜಿಸಿದ್ದ 75ನೇ ಸ್ವಾತಂತ್ರ ದಿನದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ, ಗೌರವವಂಧನೆ ಸ್ವೀಕರಿಸಿ ಮಾತನಾಡುತ್ತಿದ್ದ ಅವರು, ಹಲವಾರು, ಭಾಷೆ, ಜಾತಿ, ಧರ್ಮಗಳ ಸಮ್ಮೀಲನವಾಗಿರುವ ಭಾರತ ಮತ್ತಷ್ಟು ಉಜ್ವಲ ಭವಿಷ್ಯ ಕಾಣಬೇಕಾದರೆ,ಭಾರತೀಯರೆಲ್ಲರೂ ಒಂದೇ ಎಂಬ ಭಾವನೆ ಪ್ರತಿಯೊಬ್ಬ ಪ್ರಜೆಯಲ್ಲಿಯೂ ಮೂಡುವಂತೆ ಮಾಡಬೇಕಿದೆ ಎಂದರು. ಇಂದು ಇಡೀ ದೇಶವೇ ಭಾರತದ ಸ್ವಾತಂತ್ರದಿನದ ಅಮೃತ ಮಹೋತ್ಸವದ ಆಚರಣೆಯಲ್ಲಿ ತೊಡಗಿದೆ.ಇಂತಹ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿರುವುದು ಸುದೈವ ಎಂದು ನಾನು ಭಾವಿಸಿದ್ದೇನೆ.ದೇಶದ ಸ್ವಾತಂತ್ರಕ್ಕಾಗಿ ಒಟ್ಟಾರೆ ದೇಶದ ಶೇ5ರಷ್ಟು ಜನ ಮಾತ್ರ ಹೋರಾಟ ನಡೆಸಿದ್ದಾರೆ. ಉಳಿದ ಶೇ95ರಷ್ಟು ಜನ ಅದರ ಫಲವನ್ನು ಅನುಭವಿಸುತ್ತಿದ್ದೇವೆ.ಹಾಗಾಗಿ ಸ್ವಾತಂತ್ರಕ್ಕಾಗಿ ಹೋರಾಟ ನಡೆಸಿದ…

Read More

ತುಮಕೂರು: ವಿಶ್ವದ ಬಲಾಡ್ಯ ರಾಷ್ಟ್ರಗಳ ಪೈಕಿ ಭಾರತವು ಸಹ ಒಂದಾಗಿದ್ದು, ಜಿ-20 ರಾಷ್ಟ್ರಗಳ ಗುಂಪಿನಲ್ಲಿ ‘ಭಾರತ ನಾಯಕ ರಾಷ್ಟ್ರ’ವೆನಿಸಿದೆ. ಇಂದು ಇಡೀ ಜಗತ್ತೇ ನಮ್ಮ ದೇಶವನ್ನು ಗೌರವಿಸುವಂತಹ ನಾಯಕತ್ವ ನಮ್ಮ ದೇಶಕ್ಕಿದ್ದು, ಇದು ನಮ್ಮೆಲ್ಲರಿಗೂ ಹೆಮ್ಮೆ ತರುವ ವಿಷಯವಾಗಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ಬಾಹ್ಯಕಾಶ ತಂತ್ರಜ್ಞಾನದಲ್ಲಿ ನಾವು ಸ್ವಾವಲಂಭನೆಯನ್ನು ಸಾಧಿಸಿದ್ದು, ಮಾಹಿತಿ ತಂತ್ರಜ್ಞಾನದಲ್ಲಿ ನಮ್ಮ ದೇಶ ಮುಂಚೂಣಿಯಲ್ಲಿದೆ. ಅತ್ಯಾಧುನಿಕ ಸಬ್‍ಮೆರಿನ್‍ಗಳು ಮತ್ತು ಶಸ್ತ್ರಾಸ್ತ್ರಗಳನ್ನು ಹೊಂದಿದ್ದೇವೆ. ಅಂತೆಯೇ ವಿಶ್ವದಲ್ಲಿಯೇ ನಾಲ್ಕನೇ ಅತಿದೊಡ್ಡ ಸೈನ್ಯ ನಮ್ಮದಾಗಿದ್ದು, ಇದು ಸಹ ನಾವೆಲ್ಲರೂ ಹೆಮ್ಮೆ ಪಡುವ ಸಂಗತಿಯಾಗಿದೆ ಎಂದರು. ನಗರದ ಸರ್ಕಾರಿ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ನಡೆದ 76ನೇ ಸ್ವಾತಂತ್ರ್ಯೋತ್ಸವದಲ್ಲಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿದ ನಂತರ, ಜಿಲ್ಲೆಯ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಣ್ಣಿಗೆ ಕಾಣದ ವೈರಾಣು ಕೋವಿಡ್-19ನಿಂದ ಇಡೀ ಜಗತ್ತೇ ತತ್ತರಿಸಿದ್ದು, ಈ ಸಂದರ್ಭ ಭಾರತದ ಎರಡು ಕಂಪನಿಗಳು ಕೋವಿಡ್ ವೈರಾಣು ವಿರುದ್ಧ ಲಸಿಕೆಯನ್ನು ಕಂಡುಹಿಡಿದು ನಮ್ಮ…

Read More

ತುಮಕೂರು: ಮನೆ ಮೆನೆಯ ಮೇಲೆ ತಿರಂಗ ಧ್ವಜವನ್ನು ಹಾರಿಸುತ್ತೇವೆ ಎಂದು ಹೇಳುವ ಬಿಜೆಪಿಗೆ ಧ್ವಜ ಹಾರಿಸುವ ನೈತಿಕತೆ ಇಲ್ಲ ಎಂದು ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಇಲಾಹಿ ಸಿಖಂದರ್ ಆರೋಪಿಸಿದರು. ತುಮಕೂರಿನ ಟೌನ್ ಹಾಲ್ ವೃತ್ತದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಶಶಿ ಹುಲಿಕುಂಟೆ ಅಧ್ಯಕ್ಷತೆಯಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಂಡಿದ್ದ ಅಹೋರಾತ್ರಿ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಕೇಸರಿ ಧ್ವಜವನ್ನು ರಾಷ್ಟ್ರಧ್ವಜವನ್ನಾಗಿ ಮಾಡುತ್ತೇವೆ ಎಂದು ಹೇಳುವ ಬಿಜೆಪಿ ಮುಖಂಡರು ಮನೆಮನೆಯ ಮೇಲೆ ತಿರಂಗ ಧ್ವಜವನ್ನು ಹಾರಿಸುತ್ತೇವೆ ಎಂದು ದ್ವಂದ್ವ ನೀತಿ ಅನುಸರಿಸುತ್ತಿದ್ದಾರೆ. ರಾಷ್ಟ್ರಧ್ವಜವನ್ನು ಹಾರಿಸುವ ನೈತಿಕತೆ ಅವರಿಗೆ ಇಲ್ಲ. ಇದು ಕೇವಲ ನಾಟಕವಾಗಿದ್ದು, ಜನರು ಇದನ್ನು ಪ್ರಶ್ನಿಸಬೇಕಾಗಿದೆ ಎಂದು ಟೀಕಿಸಿದರು. ದೇಶದಲ್ಲಿ ಜನಸಾಮಾನ್ಯರ ನಿರುದ್ಯೋಗ ಬೆಲೆ ಏರಿಕೆಯಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ. ಇಂತಹ ಸಮಯದಲ್ಲಿ ಅಮೃತ ಮಹೋತ್ಸವವನ್ನು ಆಚರಿಸುವ ಸ್ಥಿತಿಯಲ್ಲಿ ನಾವು ಇದ್ದೇವೆಯೇ ಎಂದು ಆಲೋಚಿಸಬೇಕಾದ ಪರಿಸ್ಥಿತಿ ಇದೆ ಎಂದು ಸಿಖಂದರ್ ಹೇಳಿದರು. ಇಂತಹ ಸಂಕಷ್ಟದ ಸಮಯದಲ್ಲಿ ನಮಗೆ ನಿರುದ್ಯೋಗದಿಂದ ಸ್ವಾತಂತ್ರ್ಯ ಬೇಕಾಗಿದೆ.…

Read More

ತುಮಕೂರು: ಕುಳುವಾಡಿಕೆ ಜಮೀನಿನ ಹಂಚಿಕೆ ಸಂಬಂಧ ಕೇಸು ನ್ಯಾಯಾಲಯದಲ್ಲಿ ಇರುವಾಗಲೇ, ತುಮಕೂರು ತಹಶೀಲ್ದಾರರವರು, ಸರ್ವೆ ನಂ 91-92 ಜಾಗು 08ರ ಜಮೀನನ್ನು ಕೆಲವೇ ಜನರ ಹೆಸರುಗಳನ್ನು ಪಹಣಿ ಕಲಂನಲ್ಲಿ ನಮೂದು ಮಾಡಿ ಅನ್ಯಾಯ ಮಾಡಿದ್ದು, ಇವರ ವಿರುದ್ದ ಆಗಸ್ಟ್ 16 ರಿಂದ ನಿರಂತರ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುಮಕೂರು ತಾಲೂಕು ಕಸಬಾ ಹೋಬಳಿ ಸರ್ವೆ ನಂಬರ್ 08ರ ಬಾವಿಕಟ್ಟೆ ಕಲ್ಯಾಣ ಮಂಟಪದ ಹಿಂಭಾಗ ಸುಮಾರು 4.18 ಗುಂಟೆ ಹಾಗೂ ಸರ್ವೆ ನಂ 91-92ರಲ್ಲಿ 30 ಗುಂಟೆ ಜಮೀನು ಕಳೆದ 50 ವರ್ಷಗಳಿಂದಲೂ ವಿವಾದದಲ್ಲಿದೆ. ಮೂಲತಃ ಈ ಭೂಮಿ ದಲಿತರಾದ ರಾಮ, ಲಕ್ಕ ಮತ್ತು ಪಠಾಣ್ ಎಂಬುವವರಿಗೆ ಮಂಜೂರಾಗಿದ್ದು,ಸುಮಾರು 50-60 ಜನರು ಈ ಕುಟುಂಬದಲ್ಲಿದ್ದಾರೆ.ಆದರೆ ಕೇವಲ ಮೂರು ಜನರ ಹೆಸರಿನ ಪಹಣಿ ಕೂರಿಸಿ ಉಳಿದವರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದರು. ಸದರಿ ವಿಚಾರವನ್ನು ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳು ಮತ್ತು ತಹಶೀಲ್ದಾರರುಗಳಿಗೆ ಲಿಖಿತವಾಗಿ…

Read More

ತುಮಕೂರು 75ನೇ ಸ್ವಾತಂತ್ರ್ಯೋತ್ಸವವನ್ನು ವಿಶೇಷ ಮತ್ತು ಅರ್ಥ ಪೂರ್ಣವಾಗಿ ಆಚರಿಸಲು ರಾಷ್ಟ್ರೀಯ ಮಾನವ ಪರಿಸರ ಸಂರಕ್ಷಣಾ ಪಡೆ ವತಿಯಿಂದ ದೇಶಕ್ಕಾಗಿ ನಡಿಗೆ ರಾಷ್ಟ್ರ ಜಾಗೃತಿ ಅಭಿಯಾನವನ್ನು ನಗರದಲ್ಲಿ ನಡೆಸಲಾಯಿತು. ಇಲ್ಲಿನ ಸರ್ಕಾರಿ ಜ್ಯೂನಿಯರ್ ಕಾಲೇಜು ಮೈದಾನದಿಂದ ಆರಂಭವಾದ ದೇಶಕ್ಕಾಗಿ ನಡಿಗೆ(ವಾಕಥಾನ್)ಗೆ ಬಿಗ್‍ಬಾಸ್ ಖ್ಯಾತಿಯ ಹಾಗೂ ಕಿರುತೆರೆ ನಟಿ ಕುಮಾರಿ ಚಂದನ ಅನಂತಕೃಷ್ಣ ಚಾಲನೆ ನೀಡಿದರು. ನಂತರ ಮಾತನಾಡಿದ ಕು. ಚಂದನ ಅವರು, ನಾವೆಲ್ಲರೂ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸುತ್ತಿದ್ದೇವೆ. ಭಾರತ ಎಂದಾಕ್ಷಣ ನಮಗೆಲ್ಲ ಹೆಮ್ಮೆಯಾಗುತ್ತದೆ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಶಾಸಕ ಜಿ.ಬಿ. ಜ್ಯೋತಿಗಣೇಶ್ ಮಾತನಾಡಿ, ದೇಶದ 75ನೇ ವರ್ಷದ ಆಜಾದಿ ಕಾ ಅಮೃತ ಮಹೋತ್ಸವದ ಈ ಸುಸಂದರ್ಭದಲ್ಲಿ ರಾಷ್ಟ್ರ ಜಾಗೃತಿ ಅಭಿಮಾನ ಮಾಡುತ್ತಿರುವುದು ದೇಶದಲ್ಲಿ 75 ವರ್ಷದ ಹಿಂದೆ ಇದ್ದಂತಹ ಸ್ವಾತಂತ್ರ್ಯದ ಕಿಚ್ಚಿನ ವಾತಾವರಣವನ್ನು ಮತ್ತೊಮ್ಮೆ ನಮ್ಮೆಲ್ಲರ ನಡುವೆ ನಿರ್ಮಾಣವಾಗಿದೆ ಎಂದರು. ಮುಂದಿನ ದಿನಗಳಲ್ಲಿ ನಮ್ಮ ದೇಶವನ್ನು ವಿಶ್ವದಲ್ಲೇ ಅತ್ಯುನ್ನತ ಮಟ್ಟಕ್ಕೆ ಕೊಂಡೊಯ್ಯುವಂತಾಗಲಿ ಎಂದು ಆಶಿಸಿದರು. ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಮಾತನಾಡಿ,…

Read More

ತುಮಕೂರು: ಆಜಾದಿ ಕಾ ಅಮೃತ ಮಹೋತ್ಸವ ಭಾರತದ ಸಾಮಾಜಿಕ, ಆರ್ಥಿಕ ಅಭಿವೃದ್ಧಿಯ ಸಂಕೇತವಾಗಿದೆ ಎಂದು ರಾಜ್ಯಪಾಲರಾದ ತಾವರ್ ಚಂದ್ ಗೆಹ್ಲೋಟ್ ಪ್ರತಿಪಾದಿಸಿದರು. ನಗರದ ಅಮಾನಿಕೆರೆಯ ಗಾಜಿನ ಮನೆಯಲ್ಲಿ ರಾಷ್ಟ್ರೀಯ ಮಾನವ ಪರಿಸರ ಸಂರಕ್ಷಣಾ ಪಡೆ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಏರ್ಪಡಿಸಿದ್ದ ರಾಷ್ಟ್ರ ಜಾಗೃತಿ ಅಭಿಯಾನ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮ ದೇಶಕ್ಕೆ ಸ್ವಾತಂತ್ರ್ಯ ಅನೇಕ ಮಹನೀಯರ ತ್ಯಾಗ ಬಲಿದಾನದಿಂದ ಬಂದಿದೆ. ನಾವೆಲ್ಲರೂ ಸ್ವಾತಂತ್ರ್ಯ ತಂದುಕೊಟ್ಚ ಮಹನೀಯರುಗಳಿಗೆ ಚಿರಋಣಿಗಳು ಎಂದರು. ದೇಶದ ಪ್ರತಿಯೊಬ್ಬರೂ ಭಾರತದ ಸಂವಿಧಾನದ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ದೇಶಸೇವೆಯಲ್ಲಿ ತೊಡಗಬೇಕು. ಹೀಗಾದಾಗ ಮಾತ್ರ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವಕ್ಕೆ ನಿಜವಾದ ಅರ್ಥ ಬರುತ್ತದೆ ಎಂದು ಅವರು ಹೇಳಿದರು. ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಆತ್ಮನಿರ್ಭರ್ ಭಾರತ್ ಆಶಯ ಪ್ರತಿಯೊಬ್ಬರಿಗೂ ಒಳಿತು ಬಯಸುವುದೇ ಆಗಿದೆ. 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸುಸಂದರ್ಭವನ್ನು ಕಣ್ತುಂಬಿಕೊಳ್ಳವ ಕ್ಷಣದಲ್ಲಿ ನಾವೆಲ್ಲರೂ ಇದ್ದೇವೆ. ಪ್ರತಿಯೊಬ್ಬರೂ ಹರ್ ಘರ್ ತಿರಂಗ ಯಾತ್ರೆಯಲ್ಲಿ ಪಾಲ್ಗೊಂಡು…

Read More

ತುಮಕೂರು 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ದೇಶೆದೆಲ್ಲೆಡೆ ವಿಜೃಂಭಣೆಯಿಂದ ಆಚರಿಸುತ್ತಿದ್ದು, ಇದರ ಭಾಗವಾಗಿ ತುಮಕೂರು ನಗರದಲ್ಲೂ ಸಹ ಆ.15 ರಂದು ಮಧ್ಯಾಹ್ನ 3 ಗಂಟೆಗೆ ಸ್ವಾತಂತ್ರ್ಯೋತ್ಸವದ “ತಿರಂಗ ಯಾತ್ರೆ” ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ತಿರಂಗ ಯಾತ್ರಾ ಸಮಿತಿ ಸಂಚಾಲಕರಾದ ಹೆಚ್.ಎಸ್. ರವಿಶಂಕರ್ ಹೆಬ್ಬಾಕ ತಿಳಿಸಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ವಿಶೇಷ ಕಾರ್ಯಕ್ರಮಗಳನ್ನು ನಡೆಸುವುದರ ಮೂಲಕ ಭಾರತ ಮಾತೆಗೆ ನಮನ ಸಲ್ಲಿಸಲಾಗುವುದು ಎಂದು ಹೇಳಿದರು. ಅಂದು ಮಧ್ಯಾಹ್ನ 3 ಗಂಟೆಗೆ ತಿರಂಗ ಯಾತ್ರೆಯು ನಗರದ ಎಸ್‍ಐಟಿ ಮುಂಭಾಗದಿಂದ ಹೊರಡಲಿದ್ದು, ಗಂಗೋತ್ರಿ ರಸ್ತೆ, ಎಸ್‍ಐಟಿ ಮುಖ್ಯರಸ್ತೆ ಮೂಲಕ ಸಾಗಲಿರುವ ಈ ಯಾತ್ರೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ 13ಕ್ಕೂ ಹೆಚ್ಚು ಕಲಾತಂಡಗಳು ಭಾಗವಹಿಸಲಿವೆ. ವಿವಿಧತೆಯಲ್ಲಿ ಏಕತೆಯನ್ನು ಸಾರುವ ಈ ತಿರಂಗ ಯಾತ್ರೆಯಲ್ಲಿ ನಮ್ಮ ದೇಶದ ಸಂಸ್ಕøತಿ ಪರಂಪರೆಯನ್ನು ಬಿಂಬಿಸುವ ಸ್ವಾತಂತ್ರ್ಯ ಹೋರಾಟಗಾರರ ವೇಷಭೂಷಣ, ಕಲಾತಂಡಗಳಾದ ತಮಟೆ, ಹರೆ, ಕೋಲಾಟ, ಮೈಸೂರು ನಗಾರಿ, ಕೇರಳದ…

Read More