Author: News Desk Benkiyabale

ತುಮಕೂರು ನಿವೇಶನ ಖಾತೆ ಮಾಡಿಕೊಡಲು 50 ಸಾವಿರ ರೂ. ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದಿದ್ದ ಪಿಡಿಒಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶಿಸಿದೆ. 2019ರಲ್ಲಿ ಮಣಿಕಂಠ ಎಂಬುವರ ನಿವೇಶನದ ಖಾತೆ ಮಾಡಿಕೊಡಲು ಚೇಳೂರು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸಿದ್ದೇಶ್ವರ 50 ಸಾವಿರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದನು. ಲಂಚದ ಹಣ ಪಡೆಯುವಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದರು. ಬಳಿಕ ಇನ್ಸ್ ಪೆಕ್ಟರ್ ಹಾಲಪ್ಪ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ತುಮಕೂರಿನ 7ನೇ ಜಿಲ್ಲಾ ಮತ್ತು ವಿಶೇಷ ದತ್ತ ನ್ಯಾಯಾಲಯದ ನ್ಯಾಯಾಧೀಶ ರಾಮಲಿಂಗೇಗೌಡ ಅವರು ಆರೋಪಿಗೆ 4 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿ ಬುಧವಾರ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಎನ್.ಡಿ ಬಸವರಾಜು ವಾದ ಮಂಡಿಸಿದ್ದರು. ಎಸಿಬಿ ರದ್ದುಗೊಂಡಿರುವ ಬೆನ್ನಲ್ಲೇ ರಾಜ್ಯದಲ್ಲಿ ಎಸಿಬಿ ನಿರ್ವಹಿಸಿದ ಪ್ರಕರಣವೊಂದರಲ್ಲಿ ಆರೋಪಿಗೆ ಶಿಕ್ಷೆ ಜಾರಿಯಾಗಿರುವುದು ವಿಶೇಷವಾಗಿದೆ.

Read More

ತುಮಕೂರು ಸರಕಾರದ ಕೃಷಿ ಯಂತ್ರಧಾರೆ ಯೋಜನೆಯಡಿ ರೈತರಿಗೆ ಕೃಷಿ ಯಂತ್ರೋಪಕರಣಗಳ ಸೇವೆ ಒದಗಿಸಬೇಕಾದ ಏಜನ್ಸಿಗಳು ರೈತರಿಗೆ ದುಪ್ಪಟ್ಟು ದರ ವಸೂಲಿ ಮಾಡಿ ಮೋಸ ಮಾಡುತ್ತಿರುವುದಲ್ಲದೆ, ಕಡಿಮೆ ಗುಣಮಟ್ಟದ ಯಂತ್ರಗಳನ್ನು ಖರೀದಿ ಮಾಡಿ ಕೋಟ್ಯಾಂತರ ರೂ. ಅವ್ಯವಹಾರದಲ್ಲಿ ತೊಡಗಿದ್ದು, ಇದರ ಕುರಿತು ಉನ್ನತ ಮಟ್ಟದ ತನಿಖೆಗೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸುವಂತೆ ಭಾರತೀಯ ಕೃಷಿಕ ಸಮಾಜದ ಕೋಡಿಹಳ್ಳಿ ಜಗದೀಶ್ ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ 50 ಹೋಬಳಿಗಳಲ್ಲಿ ಕೃಷಿ ಯಂತ್ರಧಾರೆ ಏಜೆನ್ಸಿಗಳು ಕೆಲಸ ಮಾಡುತ್ತಿದ್ದು, ಸಣ್ಣ ಮತ್ತು ಮಧ್ಯಮ ರೈತರಿಗೆ ಅನುಕೂಲವಾಗುವಂತೆ ಸರಕಾರ ನಿಗಧಿಪಡಿಸಿದ ರಿಯಾಯಿತಿ ದರದಲ್ಲಿ ರೈತರಿಗೆ ಸೇವೆ ಒದಗಿಸಬೇಕಾದ ಏಜೆನ್ಸಿಯವರು ಒಂದಕ್ಕೆ ಒಂದುವರೆ ಪಟ್ಟು ಬಾಡಿಗೆ ವಸೂಲಿ ಮಾಡಿ,ರಸೀದಿಯನ್ನು ನೀಡದೆ ರೈತರಿಗೆ ಜೊತೆಗೆ ಸರಕಾರಕ್ಕೂ ಮೋಸ ಮಾಡುತ್ತಿದ್ದಾರೆ. ಈ ಸಂಬಂಧ ಜಿಲ್ಲಾಡಳಿತ, ಕೃಷಿ ಇಲಾಖೆ ಹಾಗೂ ಲೋಕಾಯುಕ್ತರಿಗೆ ದೂರು ಸಲ್ಲಿಸಲಾಗಿದೆ ಎಂದರು. ಸರಕಾರ 70:30ರ ಅನುಪಾತದಲ್ಲಿ ಸುಮಾರು 8 ಕೋಟಿ ರೂಗಳ ಯಂತ್ರೋಪರಣಗಳನ್ನು ಈ ಯೋಜನೆಯಡಿ ಶ್ರೀಕ್ಷೇತ್ರ ಧರ್ಮಸ್ಥಳ…

Read More

ತುಮಕೂರು: ನಗರದ ಹೃದಯ ಭಾಗದಲ್ಲಿರುವ 2 ಮತ್ತು 3ನೇ ವಾರ್ಡ್ ವ್ಯಾಪ್ತಿಯಲ್ಲಿ ಬರುವ ಅಮಾನಿಕೆರೆ ಕೋಡಿಹಳ್ಳ ಸ್ಲಂ ನಿವಾಸಿಗಳು ಇತ್ತೀಚಿನ ಭಾರಿ ಮಳೆಗೆ ಜೀವನ ಅತಂತ್ರವಾಗಿದೆ ಸುಮಾರು 10 ದಿನಗಳ ಸತತ ಮಳೆಗೆ ಇಡೀ ಸ್ಲಂ ಜಲಾವೃತವಾಗಿ ಮನೆಯಲ್ಲಿದ್ದ ದಿನಸಿ. ಬಟ್ಟೆಗಳು, ಹೊದಿಕೆಗಳು, ಜೀವನ ನಡೆಸುವುದಕ್ಕಾಗಿ ಕೂಡಿಟ್ಟಿದ್ದ ಮನೆಯ ಸಾಮಗ್ರಿಗಳು ಎಲ್ಲವೂ ಮಳೆ ನೀರಿಂದ ಹಾಳಾಗಿದ್ದು ಜನರ ಜೀವನ ಸುಧಾರಣೆಯೇ ಕಷ್ಟಸಾಧ್ಯವಾಗಿದೆ. ಇನ್ನೂ ಇಲ್ಲಿನ ಮಕ್ಕಳು ವಿದ್ಯಾಭ್ಯಾಸಕ್ಕಾಗಿ ಬಳಸುವ ಪುಸ್ತಿಕೆಗಳು ಹಾಳಾಗಿ ಬಿಸಲು ಕಾಯಿದು ಒಣಗಿಸುವ ವಾತವರಣ ಸೃಷ್ಠಿಯಾಗಿ 15 ದಿನಗಳೇ ಕಳೆದವು, ಜನರ ನೋವಿಗೆ ಸ್ಪಂದಿಸಿ ಮಾನ್ಯ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು ಪುನರ್ ವಸತಿಗೊಳಿಸುವುದಾಗಿ ಭರವಸೆಯನ್ನು ನೀಡಿದ್ದಾರೆ. ಆದರೆ ತಾತ್ಕಾಲಿಕವಾಗಿ ಬದುಕು ಕಟ್ಟಿಕೊಂಡಿದ್ದ ಇಲ್ಲಿನ 30 ಕುಟುಂಬಗಳು ನಿಯಮಾನುಸಾರವೇ ವಿದ್ಯುತ್ ಮೀಟರ್ ಪಡೆದು ಬಿಲ್‍ಗಳ ಸಂದಾಯವು ಮಾಡುತ್ತಿದ್ದರು ಇತ್ತಿಚಿನ ಮಳೆ ಬಂದ ಕಾರಣ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ವಿದ್ಯಾರ್ಥಿಗಳ, ವಯೋವೃದ್ಧರ, ಮಹಿಳೆಯರ ಜೀವನ ನಿರ್ವಣೆಯನ್ನು ಅತಂತ್ರಗೊಳಿಸಲಾಗಿದೆ ಆಡಳಿತ ವ್ಯವಸ್ಥೆ…

Read More

ತುಮಕೂರು ಮೈಸೂರಿನಲ್ಲಿ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 5ರವರೆಗೆ ನಡೆಯಲಿರುವ ವಿಶ್ವವಿಖ್ಯಾತ ದಸರಾ ಮಹೋತ್ಸವದಲ್ಲಿ ಜಿಲ್ಲೆಯನ್ನು ಪ್ರತಿನಿಧಿಸಿ ಪಾಲ್ಗೊಂಡು ಜಿಲ್ಲೆಯ ಕಲೆ, ಸಂಸ್ಕøತಿ, ಸಾಹಿತ್ಯ, ಸಂಗೀತ, ಇತಿಹಾಸ, ಪರಂಪರೆ ಪ್ರತಿಬಿಂಬಿಸುವ ಸ್ತಬ್ದಚಿತ್ರ ನಿರ್ಮಾಣ ಮಾಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ: ಕೆ. ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಪಂಚಾಯತಿ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿಂದು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಬರುವ ಅಕ್ಟೋಬರ್ 5ರಂದು ನಡೆಯಲಿರುವ ವಿಜಯದಶಮಿ ಜಂಬೂ ಸವಾರಿ ಮೆರವಣಿಗೆಯಲ್ಲಿ ಜಿಲ್ಲೆಯಲ್ಲಿರುವ ಕಲೆ, ವಾಸ್ತುಶಿಲ್ಪ, ಸಂಸ್ಕøತಿ ಬಿಂಬಿಸುವ ಉತ್ತಮ ಗುಣಮಟ್ಟ ಹಾಗೂ ಕಲಾತ್ಮಕವಾಗಿ ಮೂಡಿಬರುವಂತೆ ಸ್ತಬ್ದಚಿತ್ರ ತಯಾರಿಸಲು ಕ್ರಮವಹಿಸಬೇಕೆಂದು ನಿರ್ದೇಶನ ನೀಡಿದರು. ಮೆರವಣಿಗೆಯಲ್ಲಿ ಭಾಗವಹಿಸಲು ಸ್ತಬ್ದಚಿತ್ರ ನಿರ್ಮಾಣ ಮತ್ತು ಮೇಲ್ವಿಚಾರಣೆಗಾಗಿ ಗ್ರಾಮೀಣ ಕೈಗಾರಿಕಾ ಇಲಾಖೆಯ ಉಪನಿರ್ದೇಶಕರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಕ ಮಾಡಲಾಯಿತು. ಸಭೆಯಲ್ಲಿ ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಅತೀಕ್ ಪಾಷಾ, ಯೋಜನಾ ನಿರ್ದೇಶಕ ಜಿ.ಎಸ್.ನರಸಿಂಹಮೂರ್ತಿ, ಮುಖ್ಯ ಯೋಜನಾಧಿಕಾರಿ ಸಣ್ಣಮಸಿಯಪ್ಪ, ಮೀನುಗಾರಿಕೆ ಉಪನಿರ್ದೇಶಕ ಟಿ.ಎಸ್. ವಿಶ್ವನಾಥ, ಅರಣ್ಯ ಸಂರಕ್ಷಣಾಧಿಕಾರಿ…

Read More

ತುಮಕೂರು: ಪತ್ನಿ ವಿದೇಶಕ್ಕೆ ತೆರಳಿದ್ದರಿಂದ ಬೇಸತ್ತು ಪತಿ, ತನ್ನ ಮೂವರು ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಪತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ನಗರದ ಪಿ.ಎಚ್ ಕಾಲೋನಿಯ ನಿವಾಸಿ ಸಮಿವುಲ್ಲಾ ಮೃತ ದುರ್ದೈವಿ, ಈತನೊಂದಿಗೆ ವಿಷ ಸೇವಿಸಿದ್ದ ಮೂವರು ಮಕ್ಕಳು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವು, ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಸಮಿವುಲ್ಲಾನ ಪತ್ನಿ ಸಾಹೆರಾಬಾನು ಪತಿಯ ವಿರೋಧದ ನಡುವೆಯೂ ಮನೆ ಕೆಲಸಕ್ಕೆಂದು ಸೌದಿ ಅರೆಬಿಯಾಕ್ಕೆ ತೆರಳಿದ್ದಳು. ವಿದೇಶಕ್ಕೆ ತೆರಳಿದ ಬಳಿಕ ಪತ್ನಿಯ ವರ್ತನೆ ಬದಲಾಗಿತ್ತು. ಮನೆ ಕೆಲಸಕ್ಕೆಂದು ಹೋಗಿದ್ದ ಪತ್ನಿ ಸಾಹೆರಾಬಾನು ವಾಪಸು ಭಾರತಕ್ಕೆ ಬರಲು ನಿರಾಕರಿಸಿದ್ದಳು. ಸಾಲದಕ್ಕೆ ಪತಿ ಕರೆ ಮಾಡಿದಾಗಲೆಲ್ಲಾ ಕರೆ ಸ್ವೀಕರಿಸುತ್ತಿರಲಿಲ್ಲ. ಅಲ್ಲದೇ ಮೋಜು ಮಸ್ತಿ ಮಾಡುತ್ತ ಪತಿಗೆ ವಿಡಿಯೋ ಕಾಲ್ ಮಾಡಿ ರೇಗಿಸುತ್ತಿದ್ದಳು ಎನ್ನಲಾಗಿದೆ. ಇದರಿಂದಾಗಿ ಬೇಸತ್ತ ಪತಿ, ಹಲವು ಬಾರಿ ಕರೆದರೂ ಪತ್ನಿ ವಾಪಾಸು ಬರುತ್ತಿಲ್ಲವೆಂದು ನೊಂದು ತನ್ನ ಮೂವರು ಮಕ್ಕಳೊಂದಿಗೆ ವಿಷ ಸೇವಿಸಿದ್ದಾನೆ. ಆಸ್ಪತ್ರೆಗೆ ಸಾಗಿಸುವ ವೇಳೆ ಸಮಿವುಲ್ಲಾ ಮೃತ…

Read More

ತುಮಕೂರು: ನೇಕಾರರ ಸಮುದಾಯ ಶಿಕ್ಷಣ ಮತ್ತು ರಾಜಕಾರಣ ಕ್ಷೇತ್ರದಲ್ಲಿ ಅತ್ಯಂತ ಹೀನಾಯ ಸ್ಥಿತಿಯಲ್ಲಿದ್ದು, ನೇಕಾರರ ಒಕ್ಕೂಟದ ಹೆಸರಿನಲ್ಲಿ ಒಂದಾಗಿರುವ ನೇಕಾರ ಸಮುದಾಯಗಳು ಮುಂದಿನ ದಿನಗಳಲ್ಲಿ ತಮ್ಮ ರಾಜಕೀಯ ಶಕ್ತಿ ಏನು ಎಂಬುದನ್ನು ತೋರಿಸಬೇಕಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಧನಿಯಕುಮಾರ್ ತಿಳಿಸಿದ್ದಾರೆ. ನಗರದ ಹೊರಪೇಟೆಯ ಶ್ರೀನೀಲಕಂಠೇಶ್ವರ ಸಮುದಾಯ ಭವನದಲ್ಲಿ ತುಮಕೂರು ಜಿಲ್ಲಾ ನೇಕಾರರ ಒಕ್ಕೂಟದಿಂದ ಆಯೋಜಸಿದ್ದ ರಾಷ್ಟ್ರೀಯ ನೇಕಾರರ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತಿದ್ದ ಅವರು, ಎಲ್ಲಾ ಸೇರಿದಂತೆ ನಾಲ್ಕು ಜನರಿಲ್ಲ. ಇಂತಹವರಿಗೆ ಅಧಿಕಾರ ನೀಡಲು ಸಾಧ್ಯವೇ ಎಂದು ಹೀಯಾಳಿಸುವವರಿಗೆ ಮುಂದಿನ ದಿನಗಳಲ್ಲಿ ನಮ್ಮ ಶಕ್ತಿ ಏನು ಎಂಬುದನ್ನು ತೋರ್ಪಡಿಸುವ ಗುರುತರ ಜವಾಬ್ದಾರಿ ಎಲ್ಲಾ ನೇಕಾರ ಬಂಧುಗಳ ಮೇಲಿದೆ ಎಂದರು. ನೇಕಾರರ ತಮ್ಮ ಶ್ರಮವನ್ನೇ ನಂಬಿ ಬದುಕುತ್ತಿದ್ದಾರೆ.ಆದರೆ ಮಧ್ಯವರ್ತಿಗಳ ಹಾವಳಿಯಿಂದ ಅಂದಿನ ಕೂಲಿಯೂ ಸಿಗದಂತಹ ಪರಿಸ್ಥಿತಿ ಎದುರಾಗಿದೆ.ಕೋವಿಡ್‍ನಿಂದ ಆದ ಅರ್ಥಿಕ ನಷ್ಟದಿಂದ ಕಂಗಾಲಾಗಿದ್ದ ಸಮುದಾಯವನ್ನು, ಸ್ವಾತಂತ್ರದ ಅಮೃತ ಮಹೋತ್ಸವಕ್ಕೆ ನೈಲಾನ್ ಮತ್ತು ಪಾಲಿಸ್ಟರ್‍ನಿಂದ ತಯಾರಿಸಿ ವಿದೇಶದಲ್ಲಿ ತಯಾರಾದ ಬಾವುಟವನ್ನು…

Read More

ತುಮಕೂರು: ಜಿಲ್ಲೆಯಲ್ಲಿ ಡೆಂಗ್ಯೂ, ಚಿಕನ್ ಗುನ್ಯ ರೋಗಗಳು ಹರಡದಂತೆ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ತಮ್ಮ ಕಚೇರಿಯ ನ್ಯಾಯಾಲಯದ ಸಭಾಂಗಣದಲ್ಲಿಂದು ಜಿಲ್ಲಾ ಸಮಗ್ರ ರೋಗಗಳ ಕಣ್ಗಾವಲು ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗಿದ್ದು ಎಲ್ಲಿಯೂ ನೀರು ನಿಲ್ಲದಂತೆ ಚರಂಡಿ ವ್ಯವಸ್ಥೆಯನ್ನು ಸರಿಪಡಿಸಿ ನೀರು ಸರಾಗವಾಗಿ ಹರಿಯುವಂತೆ ಅಧಿಕಾರಿಗಳು ಗಮನಹರಿಸಬೇಕೆಂದು ತಿಳಿಸಿದರಲ್ಲದೇ ನೀರು ಸರಬರಾಜು ಮಾಡುವ ಪೈಪುಗಳನ್ನು ಆಗಿಂದ್ದಾಗ್ಗೆ ಪರೀಕ್ಷಿಸುವುದು ಮತ್ತು ನೀರಿನ ಸೋರಿಕೆಯಾಗದಂತೆ ಎಚ್ಚರಿಕೆವಹಿಸಬೇಕೆಂದು ತಿಳಿಸಿದರು. ಗ್ರಾಮೀಣ ಪ್ರದೇಶಗಳಲ್ಲಿ ವಾರಕೊಮ್ಮೆ ಸೊಳ್ಳೆ ನಾಶಕ ದ್ರಾವಣಗಳನ್ನು ಸೊಳ್ಳೆ ಉತ್ಪತ್ತಿಯಾಗುವ ತಾಣಗಳಲ್ಲಿ ಸಿಂಪಡಿಸಿಕೊಳ್ಳಲು ಅಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳಬೇಕೆಂದು ಸೂಚಿಸಿದರು. ರಸ್ತೆ ಬದಿಯ ತೆರೆದ ವಾತಾವರಣದಲ್ಲಿ ಕತ್ತರಿಸಿದ ಹಣ್ಣುಗಳ ಮಾರಾಟ ನಿμÉೀಧಿಸುವುದು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಹೋಟೆಲ್‍ಗಳಲ್ಲಿ ಸ್ವಚ್ಛತೆ, ನೈರ್ಮಲ್ಯತೆಯನ್ನು ಕಾಪಾಡುವುದು, ಧೂಮಿಕರಣ ಕೈಗೊಳ್ಳುವುದು, ಉದ್ಯಾನವನಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವುದರೊಂದಿಗೆ ನೀರು ನಿಲ್ಲದಂತೆ ಸೂಕ್ತ ಕ್ರಮವಹಿಸಬೇಕೆಂದು ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ…

Read More

ತುಮಕೂರು: ಜಿಲ್ಲಾ ಪಂಚಾಯಿತಿ ಸಿಇಓ ಡಾ.ವಿದ್ಯಾಕುಮಾರಿ ಶಿರಾ ತಾಲೂಕು ಬರಗೂರು ಗ್ರಾಮ ಪಂಚಾಯಿತಿ ದಿಢೀರ್ ಭೇಟಿ ನೀಡಿ ಅಮೃತ ಯೋಜನೆ ಹಾಗೂ ಇನ್ನಿತರ ಯೋಜನೆಯ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಮಂಗಳವಾರ ಬರಗೂರು ಗ್ರಾಮಪಂಚಾಯಿತಿಗೆ ಭೇಟಿ ನೀಡಿ, ಕುಡಿಯುವ ನೀರು, ಚರಂಡಿ, ಕಸವಿಲೇವಾರಿ ಘಟಕ, ಡಿಜಿಟಲ್ ಲೈಬ್ರರಿ, ಅಮೃತ ಪಾರ್ಕು, ಶಾಲಾ ಕಾಂಪೌಂಡ್, ಆಟದ ಮೈದಾನ, ಅಡುಗೆ ಕೊಠಡಿಗಳು, ಶೌಚಾಲಯಗಳನ್ನು ವೀಕ್ಷಿಸಿದ ನಂತರ ಮಾತನಾಡಿದ ಅವರು, ಅಮೃತ ಯೋಜನೆ ಅಡಿ ನೀಡಲಾಗಿರುವ ಕಾಮಗಾರಿಗಳನ್ನು ಚನ್ನಾಗಿಯೇ ನಿರ್ವಹಿಸಿದ್ದಾರೆ. ಆದರೂ ಕೆಲವು ಸಲಹೆಗಳನ್ನು ನೀಡಿದ್ದೇನೆ.ಇದರ ಜೊತೆಗೆ ಜಿಲ್ಲಾ ಪಂಚಾಯಿತಿಯ ಇತರೆ ಕಾರ್ಯಗಳನ್ನು ಸದರಿ ಗ್ರಾಮಪಂಚಾಯಿತಿ ಯಲ್ಲಿ ಉತ್ತಮವಾಗಿ ನಿರ್ವಹಿಸಿದ್ದಾರೆ ಎಂದು ಪ್ರಶಂಶೆ ವ್ಯಕ್ತಪಡಿಸಿದರು. ಕಳೆದ ಸಾಲಿನಲ್ಲಿ ಶಿರಾ ತಾಲೂಕು ಬರಗೂರು ಗ್ರಾಮಪಂಚಾಯಿತಿಯನ್ನು ಅಮೃತ ಯೋಜನೆಯಡಿ ಆಯ್ಕೆ ಮಾಡಲಾಗಿದ್ದು,ಗ್ರಾಪಂ. ವ್ಯಾಪ್ತಿಯ ಜನರಿಗೆ ಎಲ್ಲಾ ಮೂಲ ಸೌಕರ್ಯಗಳನ್ನು ಒದಗಿಸುವ ಕೆಲಸವನ್ನು ಉತ್ತಮ ರೀತಿಯಲ್ಲಿ ಮಾಡಿದ್ದಾರೆ ಎಂದರು. ಅಮೃತ ಯೋಜನೆಯಡಿ ಒಂದು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಹಳ್ಳಿಗಳಿಗೂ ಅಗತ್ಯವಿರುದ್ದ…

Read More

ತುಮಕೂರು: ಜಿಲ್ಲೆಯಲ್ಲಿ ಕಳೆದ ಜುಲೈ ಮಾಹೆಯ ಅಂತ್ಯ ಹಾಗೂ ಆಗಸ್ಟ್ ಮಾಹೆಯ ಮೊದಲ ವಾರದಲ್ಲಿ ಸುರಿದ ಭಾರಿ ಮಳೆಯಿಂದ ಭಾಗಶಃ ಮತ್ತು ಪೂರ್ಣ ಪ್ರಮಾಣದಲ್ಲಿ ಹಾನಿಯಾದ ಮನೆಗಳಿಗೆ ಸಂಬಂಧಪಟ್ಟಂತೆ ಪರಿಹಾರವನ್ನು ಶೀಘ್ರ ನೀಡಬೇಕೆಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಎಲ್ಲಾ ತಹಶೀಲ್ದಾರರಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಎಲ್ಲಾ ಉಪವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮಳೆ ನಷ್ಟ ಪರಿಹಾರ ನೀಡಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದ ಅವರು, ಮಳೆಯಿಂದ ಮೃತಪಟ್ಟ 8 ಪ್ರಕರಣಗಳ ವಾರಸುದಾರರಿಗೆ ಈಗಾಗಲೇ ಪರಿಹಾರ ನೀಡಲಾಗಿದ್ದು, ಹಾನಿಗೊಳಗಾದ ಮನೆ ಮಾಲೀಕರಿಗೆ ಪರಿಹಾರ ನೀಡುವ ಕೆಲವೇ ಪ್ರಕರಣಗಳು ಬಾಕಿ ಇದ್ದು, ಕೂಡಲೇ ಪರಿಹಾರ ನೀಡಲು ಅಧಿಕಾರಿಗಳು ಕ್ರಮವಹಿಸಬೇಕೆಂದು ಅವರು ನಿರ್ದೇಶನ ನೀಡಿದರು. ಅಪರ ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್-19ರಿಂದ ಮೃತಪಟ್ಟ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳನ್ನು ಸಲ್ಲಿಸಿರುವ ಸ್ವೀಕೃತ ಎಲ್ಲಾ ಅರ್ಜಿಗಳನ್ನು ಅನುಮೋದಿಸಿ ಈಗಾಗಲೇ ಪರಿಹಾರ ನೀಡಲಾಗಿದೆ.…

Read More

ತುಮಕೂರು: ದೇಶ ಭಕ್ತಿಗೀತೆಗಳಿಂದ ದೇಶದ ಮಹತ್ವದ ಬಗ್ಗೆ ತಿಳುವಳಿಕೆಯನ್ನು ಹೆಚ್ಚಿಸುತ್ತದೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ: ಕೆ. ವಿದ್ಯಾಕುಮಾರಿ ತಿಳಿಸಿದರು. ನಗರದ ಬಾಲಭವನದಲ್ಲಿ ಬೆಂಗಳೂರಿನ ಬಾಲಭವನ ಸೊಸೈಟಿ, ಜಿಲ್ಲಾ ಬಾಲಭವನ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ 75ನೇ ಅಮೃತ ಮಹೋತ್ಸವದ ಅಂಗವಾಗಿ 5 ರಿಂದ 16 ವರ್ಷದ ವಯೋಮಾನದ ಮಕ್ಕಳಿಗಾಗಿ ಆಯೋಜಿಸಿದ್ದ ಚಿತ್ರಕಲೆ ಮತ್ತು ದೇಶಭಕ್ತಿ ಗೀತೆ ಸ್ಪರ್ಧೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸ್ವಾತಂತ್ರ್ಯ ದಿನ ಅತ್ಯಂತ ಅರ್ಥಪೂರ್ಣವಾದ ದಿನವಾಗಿದ್ದು, ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಆಯೋಜಿಸಿರುವ ಚಿತ್ರಕಲೆ ಮತ್ತು ದೇಶಭಕ್ತಿ ಗೀತೆಗಳ ಸ್ಪರ್ಧೆಗಳು ಪ್ರಯೋಜನಕಾರಿಯಾಗಿವೆ. ದೇಶಭಕ್ತಿ ಗೀತೆಗಳು ದೇಶದ ಮಹತ್ವವನ್ನು ತಿಳಿಸುತ್ತದೆ ಎಂದರು. ಈ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯು ಪಾಲ್ಗೊಂಡು ತನ್ನ ಪ್ರತಿಭೆಯನ್ನು ವಿಸ್ತರಿಸಿಕೊಳ್ಳಬೇಕು. ಸ್ಪರ್ಧೆಗಳು ಕೇವಲ ಬಹುಮಾನಕ್ಕಾಗಿರದೇ ಸ್ಪರ್ಧಿಸುವ ಅನುಭವ ಮತ್ತೊಂದು ಹಂತಕ್ಕೆ ಕೊಂಡೊಯ್ದು ವಿದ್ಯಾರ್ಥಿ ಜೀವನ ಪರಿಪೂರ್ಣವಾಗುವುದಕ್ಕೆ ಸಹಕಾರಿಯಾಗುತ್ತದೆಂದರು. ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಜಿಲ್ಲಾ ಬಾಲಭವನ ಸಮಿತಿ ಸದಸ್ಯರಾದ ಬಸವಯ್ಯ…

Read More