ತುಮಕೂರು: ನಗರದ ಅರ್ಬನ್ ರೆರ್ಸಾಟ್‌ನಲ್ಲಿ ತುಮಕೂರು ಜಿಲ್ಲಾ ಯುವ ಕಾಂಗ್ರೆಸ್‌ನ ಕಾರ್ಯಕಾರಿಣಿ ಸಭೆಯನ್ನು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ನಿಖಿಲ್ ರಾಜಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಯುವಕಾಂಗ್ರೆಸ್ ಜಿಲ್ಲಾಧ್ಯಕ್ಷ ನಿಖಿಲ್ ರಾಜಣ್ಣ ಮಾತನಾಡಿ, ಚುನಾವಣೆಗಳಲ್ಲಿ ಯುವಜನರ ಪಾತ್ರ ಮಹತ್ವದ್ದಾಗಿರುತ್ತದೆ. ಹಾಗಾಗಿ ಜಿಲ್ಲೆಯಲ್ಲಿ ಯುವ ಕಾಂಗ್ರೆಸ್‌ನ್ನು ಮತ್ತಷ್ಟು ಬಲಿಷ್ಠವಾಗಿ ಕಟ್ಟುವ ನಿಟ್ಟಿನಲ್ಲಿ ನಾವೆಲ್ಲರೂ ಒಗ್ಗೂಡಿ ಕೆಲಸ ಮಾಡಬೇಕಿದೆ.ಈಗಾಗಲೇ ಪಕ್ಷದ ಅಂತರಿಕ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಶೀಘ್ರವೇ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ತುಂಬಲಾಗುವುದು.ಎಲ್ಲಾ ತಾಲೂಕು ಘಟಕಗಳ ಅಧ್ಯಕ್ಷರು ಶೀಘ್ರವೇ ಪಟ್ಟಿಯನ್ನು ಜಿಲ್ಲಾ ಸಂಘಕ್ಕೆ ಕಳುಹಿಸುವಂತೆ ಸೂಚನೆ ನೀಡಿದ ಅವರು,ಕಾಂಗ್ರೆಸ್ ಪಕ್ಷದಲ್ಲಿ ಯುವ ಘಟಕವನ್ನು ಸದೃಢವಾಗಿ ಕಟ್ಟಲು ಇದು ಸಹಕಾರಿಯಾಗಲಿದೆ ಎಂದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಹಿಲಾಯಿ ಸಿಖಂದರ್ ಮಾತನಾಡಿ,ಜಿಲ್ಲೆಯಲ್ಲಿ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿರುವ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಆಯ್ಕೆಯಾಗಿರುವ ವ್ಯಕ್ತಿಗಳು ತಮ್ಮ ಕ್ಷೇತ್ರದ ಶಾಸಕರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಸಲಹೆ ಪಡೆದು,ಯೂತ್ ಕಾಂಗ್ರೆಸ್‌ನಲ್ಲಿ ಖಾಲಿ ಹುದ್ದೆಗಳ…
Author: News Desk Benkiyabale
ತುಮಕೂರು: ನಗರದ ಹೊರವಲಯದ ನಂದಿಹಳ್ಳಿ ಬಳಿ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ರಾಜೇಶ್ (೨೫), ಧನಂಜಯ (೨೭), ಧನುಷ್ (೨೩) ಎಂದು ಗುರುತಿಸಲಾಗಿದೆ. ಮೂವರು ಒಂದೇ ಬೈಕ್ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಸಮೀಪದ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಕಿಸಿಕೊಂಡು ಹೊರಬರುತ್ತಿದ್ದಂತೆ ಎದುರಾದ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ. ಇದರಿಂದಾಗಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ವಿಷಯ ತಿಳಿದ ತಕ್ಷಣ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ್ ಹಾಗೂ ಡಿವೈಎಸ್ಪಿ ಚಂದ್ರಶೇಖರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ತೆರಳಿ ಸ್ಥಳ ಪರಿಶೀಲನೆ ಮಾಡಿದ್ದಾರೆ. ಮೃತಪಟ್ಟಿರುವ ಮೂವರು ದಾಬಸ್ ಪೇಟೆಯ ಸೋಲಾರ್ ಕಂಪನಿಯೊ0ದರಲ್ಲಿ ಗಾರ್ಡುಗಳಾಗಿ ಕೆಲಸ ಮಾಡುತ್ತಿದ್ದರು. ಬೆಳಗಿನ ಜಾವ ತಮ್ಮ ಕೆಲಸವನ್ನು ಮುಗಿಸಿಕೊಂಡು ವಾಪಸ್ ತುಮಕೂರಿಗೆ ಬರುತ್ತಿದ್ದ ಸಂದರ್ಭದಲ್ಲಿ ಘಟನೆ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ಸ್ಪಷ್ಟಪಡಿಸಿವೆ. ಈ ಸಂಬAಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ…
ತುಮಕೂರು: ಜಿಲ್ಲೆಯಲ್ಲಿ ಜೂನ್ ೯ ರಿಂದ ೨೦ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳಲ್ಲಿ ಸಾನಿಟೈಸರ್ ಮಾಡಿ ಯಾವುದೇ ಲೋಪದೋಷಗಳಿಲ್ಲದಂತೆ ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಗುರುವಾರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-೩ಕ್ಕೆ ಸಂಬ0ಧಿಸಿದAತೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ದ್ವಿತೀಯ ಪಿಯುಸಿ ಪರೀಕ್ಷೆ- ೧ ಮತ್ತು ೨ ರ ಪರೀಕ್ಷೆಯನ್ನು ಯಾಶಸ್ವಿಯಾಗಿ ನಡೆಸಿದಂತೆ ಈ ಪರೀಕ್ಷೆಯನ್ನೂ ಪಾರದರ್ಶಕವಾಗಿ ನಡೆಸಬೇಕು ಎಂದು ತಿಳಿಸಿದರು. ಜಿಲ್ಲೆಯ ತುಮಕೂರು ತಾಲ್ಲೂಕಿನಲ್ಲಿ ೪ ಹಾಗೂ ಉಳಿದೆಲ್ಲ ತಾಲೂಕುಗಳಲ್ಲಿ ತಲಾ ೧ ರಂತೆ ಒಟ್ಟು ೧೩ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಎಲ್ಲಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಈಗಾಗಲೇ ಸಿಸಿ ಕ್ಯಾಮರಾ ಅಳವಡಿಸಿದ್ದಲ್ಲಿ ಸುಸ್ಥಿತಿಯಲ್ಲಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು. ಪ್ರಶ್ನೆಪತ್ರಿಕೆಗಳನ್ನು ಠೇವಣಿಸುವ ತುಮಕೂರು ಜಿಲ್ಲಾ ಖಜಾನೆ ಮತ್ತು ಮಧುಗಿರಿ ಉಪ ಖಜಾನೆಗಳಲ್ಲಿ ಸುಸ್ಥಿತಿಯಲ್ಲಿರುವ ಸಿಸಿ…
ತುಮಕೂರು: ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ವಿರೋಧಿಸಿ ಹೋರಾಟ ನಡೆಸುತ್ತಿದ್ದ ಸ್ವಾಮೀಜಿಗಳು, ರೈತರ ಮೇಲೆ ಹಾಕಿರುವ ಮೊಕದ್ದಮೆಗಳನ್ನು ವಾಪಸ್ ಪಡೆಯಬೇಕು.ಅವೈಜ್ಞಾನಿಕ ಪೈಪ್‌ಲೈನ್ ಕಾಮಗಾರಿ ನಿಲ್ಲಿಸಬೇಕು ಎಂದು ತುಮಕೂರು ನಗರ ವೀರಶೈವ ಸೇವಾ ಸಮಾಜ ಮತ್ತು ಅಖಿಲ ಭಾರತ ಲಿಂಗಾಯಿತ, ವೀರಶೈವ ಮಹಾಸಭಾ ಒತ್ತಾಯಿಸುತ್ತದೆ ಎಂದು ತುಮಕೂರು ನಗರ ವೀರಶೈವ ಸಮಾಜದ ಅಧ್ಯಕ್ಷ ಎಸ್.ಚಂದ್ರಮೌಳಿ ತಿಳಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿಂದು ಮಾತನಾಡಿದ ಅವರು, ಹೇಮಾವತಿ ನಾಲೆಗೆ ಲಿಂಕ್ ಕೆನಾಲ್ ನಿರ್ಮಿಸಿ ನಮ್ಮ ಪಾಲಿನ ನೀರನ್ನು ಪಕ್ಕದ ಜಿಲ್ಲೆಗೆ ತೆಗೆದುಕೊಂಡು ಹೋಗುವ ಅಪಾಯಕಾರಿ ಕೆಲಸಕ್ಕೆ ರಾಜ್ಯ ಸರ್ಕಾರ ಕೈ ಹಾಕಿರುವುದು ಜಿಲ್ಲೆಯ ರೈತರಿಗೆ ಭಾರೀ ಅನ್ಯಾಯ ಮಾಡಿದಂತೆ ಎಂದರು. ತುಮಕೂರು ಜಿಲ್ಲೆಗೆ ಹಂಚಿಕೆಯಾಗಿರುವ ೨೫.೩೧ಟಿಎಂಸಿ ನೀರು ಆದೇಶದಲ್ಲಿ ಅಷ್ಟೇ ಇದ್ದು ಮಳೆಯಾದರೂ ಪೂರ್ಣಪ್ರಮಾಣದಲ್ಲಿ ನಮಗೆ ಗೊರೂರು ಜಲಾಶಯದಿಂದ ದೊರೆ ಯುತ್ತಿಲ್ಲ.ಪರಿಸ್ಥಿತಿ ಹೀಗಿರುವಾಗ ಕುಣಿಗಲ್ ತಾಲೂಕನ್ನು ತೋರಿಸಿ ಮಾಗಡಿ ಹಾಗೂ ರಾಮನಗರ ಭಾಗಕ್ಕೆ ನೀರನ್ನು ತೆಗೆದುಕೊಂಡು ಹೋಗುವ ಕುತಂತ್ರ ನಡೆದಿದ್ದು ತುರುವೇಕೆರೆ, ಗುಬ್ಬಿ, ತುಮಕೂರು ಗ್ರಾಮಾಂತರ ಹಾಗೂ ತುಮಕೂರು…
ತುಮಕೂರು: ರಾಜಕೀಯ ಇತಿಹಾಸಕ್ಕಿಂತ, ಸಾಂಸ್ಕೃತಿಕ ಇತಿಹಾಸ ಆಯಾಯ ಕಾಲಘಟ್ಟದ ಜನಜೀವನ, ಅವರ ಜೀವನ ಕ್ರಮಗಳ ಕುರಿತಂತೆ ಮಹತ್ವದ ದಾಖಲೆಯಾಗುತ್ತದೆ. ಹಾಗಾಗಿ ಡಾ.ಡಿ.ಎನ್.ಯೋಗೀಶ್ವರಪ್ಪ ಅವರ ಕಲ್ಪಹಾಸ, ಸಂಪುಟ-೦೨ ಬಹಳ ನಿರೀಕ್ಷೆಯನ್ನು ಹುಟ್ಟು ಹಾಕಿದೆ ಎಂದು ಸಂಶೋಧಕರು ಹಾಗೂ ಕರ್ನಾಟಕ ಇತಿಹಾಸ ಅಕಾಡೆಮಿಯ ಅಧ್ಯಕ್ಷರಾದ ಡಾ.ದೇವರ ಕೊಂಡಾರೆಡ್ಡಿ ತಿಳಿಸಿದ್ದಾರೆ. ನಗರದ ಶ್ರೀಸಿದ್ದಗಂಗಾ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ, ಕನ್ನಡ ಸಾಹಿತ್ಯ ಪರಿಷತ್, ತುಮಕೂರು ಹಾಗೂ ಸುಹಾಸ್ ಗ್ರಾಫ್ರಿಕ್ಸ್ ಬೆಂಗ ಳೂರು ಇವರ ಸಹಯೋಗದಲ್ಲಿ ಡಾ.ಡಿ.ಎನ್.ಯೋಗೀಶ್ವರಪ್ಪ ಅವರ ಕಲ್ಪಹಾಸ, ಸಂಪುಟ ೧ ಕೃತಿ ಲೋಕಾರ್ಪಣೆಗೊಳಿಸಿ ಮಾತನಾಡುತಿದ್ದ ಅವರು, ಡಾ.ಡಿ.ಎನ್.ಯೋಗೀಶ್ವರಪ್ಪ ಅವರಿಗಿಂತಲೂ ಮೊದಲು ಸಿ.ಎನ್.ಭಾಸ್ಕರಪ್ಪ ಸೇರಿದಂತೆ ಹಲವರು ತುಮಕೂರು ಜಿಲ್ಲೆಯ ಇತಿಹಾಸದ ಕುರಿತು ಕೃತಿಗಳನ್ನು ಹೊರತರಲು ಪ್ರಯತ್ನಿಸಿದ್ದಾರೆ. ಆದರೆ ಇಡೀ ಸಮಗ್ರ ಇತಿಹಾಸವನ್ನು ತಿಳಿಸುವ ಕಲ್ಪಹಾಸ ಮಹತ್ವದ ಕೃತಿಯಾಗಿದೆ ಎಂದರು. ಗAಗರ ನಂತರ ಬಂದ ನೊಳಂಬರು ತಮಿಳು ನಾಡಿನ ಧರ್ಮಪುರಿಯಿಂದ ಹೆಂಜಾರು ಹೇಮಾವತಿವರೆಗಿನ ರಾಜ್ಯ ವಿಸ್ತರಣೆಯನ್ನು ಕಾಣಬಹುದು.ನಿಡಗಲ್ಲು ಜೋಳರು, ಕರಿಕಾಳ ಜೋಳರು, ನೊಳಂಬ ಪಲ್ಲವರು, ಅಮರನಾಯಕತ್ವ,…
ತುಮಕೂರು: ಅಪಾರ ಅಣ್ಯಗಳ ನಾಶದಿಂದ ಇಂದು ಭೂಮಿಯ ಉಷ್ಣಾಂಶ ಹೆಚ್ಚಾಗಿದ್ದು ಜೀವಜಂತುಗಳು ನಲುಗುತ್ತಿದೆ ಇದರಿಂದ ಮುಕ್ತಿ ದೊರೆಯಬೇಕೆಂದರೆ ಹೆಚ್ಚಾಗಿ ಗಿಡಗಳನ್ನು ನೆಟ್ಟಾಗ ಮಾತ್ರ ಜೀವ ಸಂಕುಲ ಉಳಿಯುತ್ತದೆ ಎಂದು ಶ್ರೀ ಸಿದ್ಧಾರ್ಥ ಸ್ಕೂಲ್ ಆಪ್ ಇಂಜಿನಿಯರಿAಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂಜೀವ್ ಕುಮಾರ್ ತಿಳಿಸಿದರು. ನಗರದ ಹೊರವಲಯದ ಕ್ಯಾತ್ಸಂದ್ರದಲ್ಲಿರುವ ಶ್ರೀ ಸಿದ್ಧಾರ್ಥ ಸ್ಕೂಲ್ ಆಫ್ ಇಂಜಿನಿಯರಿAಗ್ ಕಾಲೇಜು ಕ್ಯಾಂಪಸ್ ನಲ್ಲಿ ವಿಶ್ವ ಪರಿಸರದ ದಿನದ ಪ್ರಯುಕ್ತ ಗಿಡನೆಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಧಾಟಿಸಿ ಮಾತನಾಡಿದ ಅವರು ಇಂದು ನಾವು ಸಾಕಷ್ಟು ಪ್ರಮಾಣದಲ್ಲಿ ಪ್ಲಾಸ್ಟಿಕ್ ಕೈ ಚೀಲಗಳು, ಪ್ಲಾಸ್ಟಿಕ್ ಬಾಟೆಲ್‌ಗಳು ಸೇರಿದಂತೆ ಹಲವು ವಸ್ತುಗಳನ್ನು ಬಳಸಿ ಎಸೆಯುತ್ತಿದ್ದೇವೆ ಇದರಿಂದ ಮಾಲಿನ್ಯ ಹೆಚ್ಚಾಗುತ್ತಿದೆ. ಇದನ್ನು ತಡೆಯಲು ಪ್ಲಾಸ್ಟಿಕ್‌ಗೆ ಪರ್ಯಾಯವಾಗಿ ತಂತ್ರಜ್ಞಾನದ ಮೂಲಕ ಹಲವು ರೀತಿಯ ಮಣ್ಣಲ್ಲಿ ಕರಗುವ ವಸ್ತಗಳನ್ನು ಸಂಶೋಧಿಸಿದ್ದಾರೆ. ಇಂತಹ ಪರಿಸರ ಸ್ನೇಹಿ ವಸ್ತುಗಳನ್ನು ಬಳಸುವುದರ ಮೂಲಕ ಪರಿಸರ ಮಾಲಿನ್ಯವನ್ನು ತಡೆಗಟ್ಟುವ ಪ್ರಯತ್ಸವನ್ನು ಮಾಡೋಣ, ಪ್ರತಿಯೊಬ್ಬರು ಸಸಿಗಳನ್ನು ನೆಟ್ಟು ಪೋಷಿಸಿ ಪರಿಸರ ಸಂರಕ್ಷಣೆಯನ್ನು ಮಾಡೋಣ…
ತುರುವೇಕೆರೆ: ತುಮಕೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘದ ಒಕ್ಕೂಟದಿಂದ ಜಿಲ್ಲೆಯ ಹೈನುಗಾರ ರೈತಾಪಿಗಳಿಗೆ ವಿಶೇಷವಾದ ಸವಲತ್ತುಗಳು ದೊರೆಯುತ್ತಿವೆ ಎಂದು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ನಿರ್ದೇಶಕ ಸಿ.ವಿ.ಮಹಲಿಂಗಯ್ಯ ಹೇಳಿದರು. ಪಟ್ಟಣದ ಕೃಷಿ ಮಾರುಕಟ್ಟೆ ಸಮಿತಿ ಆವರಣದಲ್ಲಿರುವ ನಂದಿನಿ ಸಭಾ ಭವನದಲ್ಲಿ ನಡೆದ ತಾಲೂಕು ಹಾಲು ಉತ್ಪಾದಕರ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ನೀಡಲಾದ ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು ರಾಜ್ಯದಲ್ಲೇ ತುಮಕೂರು ಜಿಲ್ಲೆ ಹಾಲು ಉತ್ಪಾದಿಸುತ್ತಿರುವ ಎರಡನೇ ಜಿಲ್ಲೆಯಾಗಿದೆ. ಅಲ್ಲದೇ ಹೈನುಗಾರರ ಹಿತ ಕಾಪಾಡುತ್ತಿರುವ ಉತ್ತಮ ಸಂಸ್ಥೆಯಾಗಿ ಹೊರಹೊಮ್ಮಿದೆ. ಈಗ ಪ್ರತಿ ದಿನ ಸುಮಾರು ೧೦ ಲಕ್ಷ ಲೀಟರ್ ಹಾಲು ಶೇಖರಣೆ ಆಗುತ್ತಿದೆ. ಪ್ರತಿ ತಿಂಗಳು ರೈತಾಪಿಗಳ ಖಾತೆಗೆ ಸುಮಾರು ೯ ಕೋಟಿಯಷ್ಟು ಹಣ ಜಮಾ ಆಗುತ್ತಿದೆ. ಉತ್ತಮ ಗುಣಮಟ್ಟದ ಹಾಲು ನೀಡಿದಷ್ಟೂ ಹೆಚ್ಚು ಹಣ ರೈತರಿಗೆ ಲಭಿಸಲಿದೆ. ನಮ್ಮ ಸಹಕಾರ ಸಂಘಗಳಿಗೆ ಹಾಲು ಸರಬರಾಜು ಮಾಡುವ ರೈತಾಪಿಗಳಿಗೆ ಹತ್ತು ಹಲವಾರು ಸವಲತ್ತುಗಳು ದೊರೆಯುತ್ತಿದೆ.…
ತುಮಕೂರು: ಸಾರ್ವಜನಿಕರು ಸರ್ಕಾರ ರೂಪಿಸುವ ವಿವಿಧ ಜನಪರ ಯೋಜನೆಗಳ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ ಮಾಡಿದರು. ಜಿಲ್ಲಾಡಳಿತ ಹಾಗೂ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ನಗರದ ಶ್ರೀ ಡಿ.ದೇವರಾಜ ಅರಸು ಬಸ್ ನಿಲ್ದಾಣದಲ್ಲಿ ಬುಧವಾರ ಸರ್ಕಾರದ ೨ ವರ್ಷದ ಸಾಧನೆ ಹಾಗೂ ಯೋಜನೆಗಳ ಕುರಿತು ಏರ್ಪಡಿಸಲಾಗಿದ್ದ ವಸ್ತುಪ್ರದರ್ಶನವನ್ನು ವೀಕ್ಷಿಸಿದ ನಂತರ ಮಾತನಾಡಿದ ಅವರು, ಇಂದಿನಿAದ ಜೂನ್ ೧೦ರವರೆಗೆ ಆಯೋಜಿಸಲಾಗಿರುವ ಈ ವಸ್ತುಪ್ರದರ್ಶನವನ್ನು ಸಾರ್ವಜನಿಕರು ವೀಕ್ಷಿಸಿ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ ಪಡೆದು ಸೌಲಭ್ಯ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು. ಸರ್ಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಿಗೆ ಸಂಬAಧಿಸಿದAತೆ ಜಿಲ್ಲೆಯಲ್ಲಿ ಕಳೆದೆರಡು ವರ್ಷಗಳಲ್ಲಿ ಗೃಹಲಕ್ಷಿö್ಮ ಯೋಜನೆಯಡಿ ಮನೆಯ ಯಜಮಾನಿಯ ಖಾತೆಗೆ ಪ್ರತೀ ತಿಂಗಳು ೨,೦೦೦ ರೂ.ಗಳನ್ನು ಜಮೆ ಮಾಡಲಾಗುತ್ತಿದ್ದು, ಈವರೆಗೆ ಅರ್ಹ ಫಲಾನುಭವಿಗಳಿಗೆ ೨೩೦೦ ಕೋಟಿ ರೂ.ಗಳನ್ನು ತಲುಪಿಸಲಾಗಿದೆ. ಮಹಿಳಾ ಸಬಲೀಕರಣಕ್ಕಾಗಿ ಜಮೆಯಾಗುತ್ತಿರುವ ಈ ಹಣದಿಂದ ಮಹಿಳೆಯರು ತಮ್ಮ ಮಕ್ಕಳ ವಿದ್ಯಾಭ್ಯಾಸ, ಕುಟುಂಬ…
ತುಮಕೂರು: ಇತ್ತೀಚಿನ ದಿನಗಳಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಡೇಟಾ ಸೈನ್ಸ್ ಕೋರ್ಸ್ಗೆ ಸಾಕಷ್ಟು ಬೇಡಿಕೆ ಹೆಚ್ಚಾಗುತ್ತಿದ್ದು, ತುಮಕೂರಿನಲ್ಲಿ ಮೊದಲ ಬಾರಿಗೆ ಬಿ.ಸಿ.ಎ. ಪದವಿಗೆ ಎಐಡಿಎಸ್ ಕೋರ್ಸ್ ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿಮತ್ತೆ ಮತ್ತು ಡೇಟಾ ಸೈನ್ಸ್ನಂತಹ “ಉದಯೋನ್ಮುಖ ಕ್ಷೇತ್ರಗಳಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಉತ್ತಮ ಅವಕಾಶಗಳನ್ನು ಒದಗಿಸಲಿದೆ” ಈ ಕೋರ್ಸ್ ವಿದ್ಯಾರ್ಥಿಗಳಿಗೆ ಅತ್ಯಾಧುನಿಕ ತಂತ್ರಜ್ಞಾನಗಳ ಬಗ್ಗೆ ಸಮಗ್ರವಾದ ತಿಳುವಳಿಕೆಯನ್ನು ನೀಡಲಾಗುತ್ತಿದೆ ಮತ್ತು ಉದ್ಯಮದ ಅಗತ್ಯತೆಗಳಿಗೆ ತಕ್ಕಂತೆ ಅವರನ್ನು ಸಿದ್ಧಗೊಳಿಸುತ್ತದೆ ಎಂದು ವರದರಾಜ ಶಿಕ್ಷಣ ಸಂಸ್ಥೆಗಳ ನಿರ್ದೇಶಕರಾದ ಡಾ.ಮುಬಾರಕ್‌ರವರು ತಿಳಿಸಿದರು. ನಗರದ ಶೆಟ್ಟಿಹಳ್ಳಿ ಹೊರವಲಯದ ಜಯನಗರ ದಕ್ಷಿಣದಲ್ಲಿರುವ ವರದರಾಜ ಚಾರಿಟಬಲ್ ಟ್ರಸ್ಟ್ನ ವತಿಯಿಂದ ವರದರಾಜ ಪದವಿ ಕಾಲೇಜಿನಲ್ಲಿ ಜೂನ್ ೪ ರಂದು ಬುಧವಾರ ಬೆಳಿಗ್ಗೆ ೧೧ ಗಂಟೆಗೆ ಕಾಲೇಜಿನ ಆವರಣದಲ್ಲಿ ಬಿ.ಸಿ.ಎ.ವಿದ್ಯಾರ್ಥಿಗಳಿಗೆ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಮತ್ತು ಡೇಟಾ ಸೈನ್ ಕುರಿತು ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿದ್ದ ಡಾ.ಮುಬಾರಕ್‌ರವರು ಮಾತನಾಡುತ್ತಾ ವಿದ್ಯಾರ್ಥಿಗಳನ್ನು ಕ್ಯಾಂಪಸ್ ನೇಮಕಾತಿಗಳು ಮತ್ತು ಸ್ಪರ್ಧಾತ್ಮಕ ಮಾರುಕಟ್ಟೆಗೆ ಸಿದ್ಧಪಡಿಸುವ ನಿಟ್ಟಿನಲ್ಲಿ ಪ್ರಮುಖವಾಗಿ…
ಶಿರಾ: ರೈತರು ಹಾಗೂ ಕೃಷಿಕ ಮಹಿಳೆಯರು ವರ್ಷವಿಡಿ ಆದಾಯಗಳಿಸುವ ಏಕೈಕ ಮಾರ್ಗ ಹೈನುಗಾರಿಕೆಯಾಗಿದ್ದು, ಈ ನಿಟ್ಟಿನಲ್ಲಿ ಶಿರಾ ತಾಲೂಕಿನಲ್ಲಿ ಹೈನುಗಾರರು ಹೆಚ್ಚು ಹಾಲು ಉತ್ಪಾದನೆಯ ಮಾಡುವ ಮೂಲಕ ಒಂದು ಲಕ್ಷ ಲೀಟರ್ ಹಾಲು ಉತ್ಪಾದನೆ ಮಾಡುವ ಸಂಕಲ್ಪವನ್ನು ಯಶಸ್ವಿಗೊಳಿಸಿ ಎಂದು ತುಮಕೂರು ಹಾಲು ಉತ್ಪಾದಕರ ಸಂಘದ ನಿರ್ದೇಶಕ ಎಸ್ ಆರ್ ಗೌಡ ಹೇಳಿದರು. ಅವರು ತಾಲೂಕಿನ ಬುಕ್ಕಾಪಟ್ಟಣ ಗ್ರಾಮದಲ್ಲಿ ತುಮಕೂರು ಜಿಲ್ಲಾ ಸಹಕಾರ ಉತ್ಪಾದಕರ ಸಂಘಗಳ ಒಕ್ಕೂಟ, ಬುಕ್ಕಾಪಟ್ಟಣ ಮತ್ತು ಶಿರಾ ತಾಲೂಕಿನ ಎಲ್ಲಾ ಹಾಲು ಉತ್ಪಾದಕರ ಸಂಘಗಳು, ತುಮಕೂರು ಹಾಲು ಒಕ್ಕೂಟದ ಟ್ರಸ್ಟ್ ಮಲ್ಲಸಂದ್ರ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ, ಮಿಶ್ರತಳಿ ಹೆಣ್ಣು ಕುರುಗಳ ಪ್ರದರ್ಶನ, ಒಂದು ಲಕ್ಷ ಲೀಟರ್ ಹಾಲು ಶೇಖರಣ ಸಂಕಲ್ಪ ದಿನ ಹಾಗೂ ಫಲಾನುಭವಿಗಳಿಗೆ ಚೆಕ್ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸರಕಾರದ ಯಾವುದೇ ಯೋಜನೆಗಳು ನೀಡದಂತಹ ಆದಾಯ ಪಶುಸಂಗೋಪನೆಯಿAದ ರೈತರಿಗೆ ಸಿಗುತ್ತಿದೆ ರೈತರ ಆದಾಯ ದ್ವಿಗುಣಗೊಳಿಸುವ ರೈತರ ಜೀವನ ಗುಣಮಟ್ಟ…











