ತುಮಕೂರು: ಮನೆ ಮೆನೆಯ ಮೇಲೆ ತಿರಂಗ ಧ್ವಜವನ್ನು ಹಾರಿಸುತ್ತೇವೆ ಎಂದು ಹೇಳುವ ಬಿಜೆಪಿಗೆ ಧ್ವಜ ಹಾರಿಸುವ ನೈತಿಕತೆ ಇಲ್ಲ ಎಂದು ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಇಲಾಹಿ ಸಿಖಂದರ್ ಆರೋಪಿಸಿದರು. ತುಮಕೂರಿನ ಟೌನ್ ಹಾಲ್ ವೃತ್ತದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಶಶಿ ಹುಲಿಕುಂಟೆ ಅಧ್ಯಕ್ಷತೆಯಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಂಡಿದ್ದ ಅಹೋರಾತ್ರಿ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಕೇಸರಿ ಧ್ವಜವನ್ನು ರಾಷ್ಟ್ರಧ್ವಜವನ್ನಾಗಿ ಮಾಡುತ್ತೇವೆ ಎಂದು ಹೇಳುವ ಬಿಜೆಪಿ ಮುಖಂಡರು ಮನೆಮನೆಯ ಮೇಲೆ ತಿರಂಗ ಧ್ವಜವನ್ನು ಹಾರಿಸುತ್ತೇವೆ ಎಂದು ದ್ವಂದ್ವ ನೀತಿ ಅನುಸರಿಸುತ್ತಿದ್ದಾರೆ. ರಾಷ್ಟ್ರಧ್ವಜವನ್ನು ಹಾರಿಸುವ ನೈತಿಕತೆ ಅವರಿಗೆ ಇಲ್ಲ. ಇದು ಕೇವಲ ನಾಟಕವಾಗಿದ್ದು, ಜನರು ಇದನ್ನು ಪ್ರಶ್ನಿಸಬೇಕಾಗಿದೆ ಎಂದು ಟೀಕಿಸಿದರು. ದೇಶದಲ್ಲಿ ಜನಸಾಮಾನ್ಯರ ನಿರುದ್ಯೋಗ ಬೆಲೆ ಏರಿಕೆಯಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ. ಇಂತಹ ಸಮಯದಲ್ಲಿ ಅಮೃತ ಮಹೋತ್ಸವವನ್ನು ಆಚರಿಸುವ ಸ್ಥಿತಿಯಲ್ಲಿ ನಾವು ಇದ್ದೇವೆಯೇ ಎಂದು ಆಲೋಚಿಸಬೇಕಾದ ಪರಿಸ್ಥಿತಿ ಇದೆ ಎಂದು ಸಿಖಂದರ್ ಹೇಳಿದರು. ಇಂತಹ ಸಂಕಷ್ಟದ ಸಮಯದಲ್ಲಿ ನಮಗೆ ನಿರುದ್ಯೋಗದಿಂದ ಸ್ವಾತಂತ್ರ್ಯ ಬೇಕಾಗಿದೆ.…
Author: News Desk Benkiyabale
ತುಮಕೂರು: ಕುಳುವಾಡಿಕೆ ಜಮೀನಿನ ಹಂಚಿಕೆ ಸಂಬಂಧ ಕೇಸು ನ್ಯಾಯಾಲಯದಲ್ಲಿ ಇರುವಾಗಲೇ, ತುಮಕೂರು ತಹಶೀಲ್ದಾರರವರು, ಸರ್ವೆ ನಂ 91-92 ಜಾಗು 08ರ ಜಮೀನನ್ನು ಕೆಲವೇ ಜನರ ಹೆಸರುಗಳನ್ನು ಪಹಣಿ ಕಲಂನಲ್ಲಿ ನಮೂದು ಮಾಡಿ ಅನ್ಯಾಯ ಮಾಡಿದ್ದು, ಇವರ ವಿರುದ್ದ ಆಗಸ್ಟ್ 16 ರಿಂದ ನಿರಂತರ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುಮಕೂರು ತಾಲೂಕು ಕಸಬಾ ಹೋಬಳಿ ಸರ್ವೆ ನಂಬರ್ 08ರ ಬಾವಿಕಟ್ಟೆ ಕಲ್ಯಾಣ ಮಂಟಪದ ಹಿಂಭಾಗ ಸುಮಾರು 4.18 ಗುಂಟೆ ಹಾಗೂ ಸರ್ವೆ ನಂ 91-92ರಲ್ಲಿ 30 ಗುಂಟೆ ಜಮೀನು ಕಳೆದ 50 ವರ್ಷಗಳಿಂದಲೂ ವಿವಾದದಲ್ಲಿದೆ. ಮೂಲತಃ ಈ ಭೂಮಿ ದಲಿತರಾದ ರಾಮ, ಲಕ್ಕ ಮತ್ತು ಪಠಾಣ್ ಎಂಬುವವರಿಗೆ ಮಂಜೂರಾಗಿದ್ದು,ಸುಮಾರು 50-60 ಜನರು ಈ ಕುಟುಂಬದಲ್ಲಿದ್ದಾರೆ.ಆದರೆ ಕೇವಲ ಮೂರು ಜನರ ಹೆಸರಿನ ಪಹಣಿ ಕೂರಿಸಿ ಉಳಿದವರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದರು. ಸದರಿ ವಿಚಾರವನ್ನು ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳು ಮತ್ತು ತಹಶೀಲ್ದಾರರುಗಳಿಗೆ ಲಿಖಿತವಾಗಿ…
ತುಮಕೂರು 75ನೇ ಸ್ವಾತಂತ್ರ್ಯೋತ್ಸವವನ್ನು ವಿಶೇಷ ಮತ್ತು ಅರ್ಥ ಪೂರ್ಣವಾಗಿ ಆಚರಿಸಲು ರಾಷ್ಟ್ರೀಯ ಮಾನವ ಪರಿಸರ ಸಂರಕ್ಷಣಾ ಪಡೆ ವತಿಯಿಂದ ದೇಶಕ್ಕಾಗಿ ನಡಿಗೆ ರಾಷ್ಟ್ರ ಜಾಗೃತಿ ಅಭಿಯಾನವನ್ನು ನಗರದಲ್ಲಿ ನಡೆಸಲಾಯಿತು. ಇಲ್ಲಿನ ಸರ್ಕಾರಿ ಜ್ಯೂನಿಯರ್ ಕಾಲೇಜು ಮೈದಾನದಿಂದ ಆರಂಭವಾದ ದೇಶಕ್ಕಾಗಿ ನಡಿಗೆ(ವಾಕಥಾನ್)ಗೆ ಬಿಗ್‍ಬಾಸ್ ಖ್ಯಾತಿಯ ಹಾಗೂ ಕಿರುತೆರೆ ನಟಿ ಕುಮಾರಿ ಚಂದನ ಅನಂತಕೃಷ್ಣ ಚಾಲನೆ ನೀಡಿದರು. ನಂತರ ಮಾತನಾಡಿದ ಕು. ಚಂದನ ಅವರು, ನಾವೆಲ್ಲರೂ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸುತ್ತಿದ್ದೇವೆ. ಭಾರತ ಎಂದಾಕ್ಷಣ ನಮಗೆಲ್ಲ ಹೆಮ್ಮೆಯಾಗುತ್ತದೆ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಶಾಸಕ ಜಿ.ಬಿ. ಜ್ಯೋತಿಗಣೇಶ್ ಮಾತನಾಡಿ, ದೇಶದ 75ನೇ ವರ್ಷದ ಆಜಾದಿ ಕಾ ಅಮೃತ ಮಹೋತ್ಸವದ ಈ ಸುಸಂದರ್ಭದಲ್ಲಿ ರಾಷ್ಟ್ರ ಜಾಗೃತಿ ಅಭಿಮಾನ ಮಾಡುತ್ತಿರುವುದು ದೇಶದಲ್ಲಿ 75 ವರ್ಷದ ಹಿಂದೆ ಇದ್ದಂತಹ ಸ್ವಾತಂತ್ರ್ಯದ ಕಿಚ್ಚಿನ ವಾತಾವರಣವನ್ನು ಮತ್ತೊಮ್ಮೆ ನಮ್ಮೆಲ್ಲರ ನಡುವೆ ನಿರ್ಮಾಣವಾಗಿದೆ ಎಂದರು. ಮುಂದಿನ ದಿನಗಳಲ್ಲಿ ನಮ್ಮ ದೇಶವನ್ನು ವಿಶ್ವದಲ್ಲೇ ಅತ್ಯುನ್ನತ ಮಟ್ಟಕ್ಕೆ ಕೊಂಡೊಯ್ಯುವಂತಾಗಲಿ ಎಂದು ಆಶಿಸಿದರು. ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಮಾತನಾಡಿ,…
ತುಮಕೂರು: ಆಜಾದಿ ಕಾ ಅಮೃತ ಮಹೋತ್ಸವ ಭಾರತದ ಸಾಮಾಜಿಕ, ಆರ್ಥಿಕ ಅಭಿವೃದ್ಧಿಯ ಸಂಕೇತವಾಗಿದೆ ಎಂದು ರಾಜ್ಯಪಾಲರಾದ ತಾವರ್ ಚಂದ್ ಗೆಹ್ಲೋಟ್ ಪ್ರತಿಪಾದಿಸಿದರು. ನಗರದ ಅಮಾನಿಕೆರೆಯ ಗಾಜಿನ ಮನೆಯಲ್ಲಿ ರಾಷ್ಟ್ರೀಯ ಮಾನವ ಪರಿಸರ ಸಂರಕ್ಷಣಾ ಪಡೆ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಏರ್ಪಡಿಸಿದ್ದ ರಾಷ್ಟ್ರ ಜಾಗೃತಿ ಅಭಿಯಾನ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮ ದೇಶಕ್ಕೆ ಸ್ವಾತಂತ್ರ್ಯ ಅನೇಕ ಮಹನೀಯರ ತ್ಯಾಗ ಬಲಿದಾನದಿಂದ ಬಂದಿದೆ. ನಾವೆಲ್ಲರೂ ಸ್ವಾತಂತ್ರ್ಯ ತಂದುಕೊಟ್ಚ ಮಹನೀಯರುಗಳಿಗೆ ಚಿರಋಣಿಗಳು ಎಂದರು. ದೇಶದ ಪ್ರತಿಯೊಬ್ಬರೂ ಭಾರತದ ಸಂವಿಧಾನದ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ದೇಶಸೇವೆಯಲ್ಲಿ ತೊಡಗಬೇಕು. ಹೀಗಾದಾಗ ಮಾತ್ರ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವಕ್ಕೆ ನಿಜವಾದ ಅರ್ಥ ಬರುತ್ತದೆ ಎಂದು ಅವರು ಹೇಳಿದರು. ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಆತ್ಮನಿರ್ಭರ್ ಭಾರತ್ ಆಶಯ ಪ್ರತಿಯೊಬ್ಬರಿಗೂ ಒಳಿತು ಬಯಸುವುದೇ ಆಗಿದೆ. 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸುಸಂದರ್ಭವನ್ನು ಕಣ್ತುಂಬಿಕೊಳ್ಳವ ಕ್ಷಣದಲ್ಲಿ ನಾವೆಲ್ಲರೂ ಇದ್ದೇವೆ. ಪ್ರತಿಯೊಬ್ಬರೂ ಹರ್ ಘರ್ ತಿರಂಗ ಯಾತ್ರೆಯಲ್ಲಿ ಪಾಲ್ಗೊಂಡು…
ತುಮಕೂರು 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ದೇಶೆದೆಲ್ಲೆಡೆ ವಿಜೃಂಭಣೆಯಿಂದ ಆಚರಿಸುತ್ತಿದ್ದು, ಇದರ ಭಾಗವಾಗಿ ತುಮಕೂರು ನಗರದಲ್ಲೂ ಸಹ ಆ.15 ರಂದು ಮಧ್ಯಾಹ್ನ 3 ಗಂಟೆಗೆ ಸ್ವಾತಂತ್ರ್ಯೋತ್ಸವದ “ತಿರಂಗ ಯಾತ್ರೆ” ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ತಿರಂಗ ಯಾತ್ರಾ ಸಮಿತಿ ಸಂಚಾಲಕರಾದ ಹೆಚ್.ಎಸ್. ರವಿಶಂಕರ್ ಹೆಬ್ಬಾಕ ತಿಳಿಸಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ವಿಶೇಷ ಕಾರ್ಯಕ್ರಮಗಳನ್ನು ನಡೆಸುವುದರ ಮೂಲಕ ಭಾರತ ಮಾತೆಗೆ ನಮನ ಸಲ್ಲಿಸಲಾಗುವುದು ಎಂದು ಹೇಳಿದರು. ಅಂದು ಮಧ್ಯಾಹ್ನ 3 ಗಂಟೆಗೆ ತಿರಂಗ ಯಾತ್ರೆಯು ನಗರದ ಎಸ್‍ಐಟಿ ಮುಂಭಾಗದಿಂದ ಹೊರಡಲಿದ್ದು, ಗಂಗೋತ್ರಿ ರಸ್ತೆ, ಎಸ್‍ಐಟಿ ಮುಖ್ಯರಸ್ತೆ ಮೂಲಕ ಸಾಗಲಿರುವ ಈ ಯಾತ್ರೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ 13ಕ್ಕೂ ಹೆಚ್ಚು ಕಲಾತಂಡಗಳು ಭಾಗವಹಿಸಲಿವೆ. ವಿವಿಧತೆಯಲ್ಲಿ ಏಕತೆಯನ್ನು ಸಾರುವ ಈ ತಿರಂಗ ಯಾತ್ರೆಯಲ್ಲಿ ನಮ್ಮ ದೇಶದ ಸಂಸ್ಕøತಿ ಪರಂಪರೆಯನ್ನು ಬಿಂಬಿಸುವ ಸ್ವಾತಂತ್ರ್ಯ ಹೋರಾಟಗಾರರ ವೇಷಭೂಷಣ, ಕಲಾತಂಡಗಳಾದ ತಮಟೆ, ಹರೆ, ಕೋಲಾಟ, ಮೈಸೂರು ನಗಾರಿ, ಕೇರಳದ…
ತುಮಕೂರು: ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯಿಂದ ನಗರದ ಅಮಾನಿಕೆರೆ ಕೋಡಿಹಳ್ಳದ 30 ಬಡಕುಟುಂಬಗಳಿಗೆ ಪುನರ್‍ವಸತಿ ಕಲ್ಪಿಸಲು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ತುಮಕೂರು ಮಹಾನಗರ ಪಾಲಿಕೆಯ ವಾರ್ಡ್ ನಂ, 3ರಲ್ಲಿ ಬರುವ ಶಿರಾಗೇಟ್ ತುಮಕೂರು ಅಮಾನಿಕೆರೆ ಕೋಡಿಹಳ್ಳದಲ್ಲಿ ಸುಮಾರು 70 ವರ್ಷಗಳಿಗೂ ಮೇಲ್ಪಟ್ಟು 30 ಕುಟುಂಬಗಳು ಹಿಂದುಳಿದ ಮತ್ತು ದಲಿತ ಜನಾಂಗದ ಮಡಿವಾಳ, ಕುರುಬ, ಮೊದಲಿಯರ್ಸ್ ಮತ್ತು ಎಸ್‍ಸಿ/ಎಸ್‍ಟಿ ಇತರೆ ಜಾತಿಯ ಬಡಜನರು ಮನೆ ನಿರ್ಮಿಸಿಕೊಂಡು ವಾಸಿಸುತ್ತಿದ್ದು ಇತ್ತೀಚೆಗೆ ಭಾರಿ ಮಳೆಯಿಂದ ತುಮಕೂರು ಅಮಾನಿಕೆರೆ ಕೋಡಿ ಹೊಡೆದಿರುವುದರಿಂದ ಇಲ್ಲಿರುವ ಎಲ್ಲಾ ಮನೆಗಳಿಗೂ ನೀರು ನುಗ್ಗಿ ದಿನಾಂಕ:30-7-2022 ರ ಮಧ್ಯರಾತ್ರಿ ಇಲ್ಲಿದ್ದ ಎಲ್ಲಾ ಕುಟುಂಬಗಳನ್ನು ಜಿಲ್ಲಾಡಳಿತ ತುಮಕೂರು ಮಹಾನಗರ ಪಾಲಿಕೆಯ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಿದೆ ಕಳೆದ 8 ತಿಂಗಳಿಂದ 2ನೇ ಬಾರಿ ಇಂತಹ ಘಟನೆ ಸಂಭವಿಸಿದ್ದು ಕೋಡಿ ಹಳ್ಳದಲ್ಲಿ ಈ ಕುಟುಂಬಗಳು ವಾಸಿಸುತ್ತಿರುವುದರಿಂದ ಪದೇ ಪದೇ ಇಂತಹ ಘಟನೆಗಳಾಗುವ ಸಂಭವವಿದ್ದು ಜೀವ ಹಾನಿಯಾಗುವ ಮುನ್ಸೂಚನೆಯಿರುವುದರಿಂದ ಸದರಿ ಕುಟುಂಬಗಳಿಗೆ ಜಿಲ್ಲಾಡಳಿತ ಪುನರ್‍ವಸತಿ ಕಲ್ಪಿಸಿ ಪರ್ಯಾಯ…
ತುಮಕೂರು: ಕೇಂದ್ರ ಸರಕಾರ ಧ್ವಜ ಸಂಹಿತೆಗೆ ತಿದ್ದುಪಡಿ ತರುವ ಮೂಲಕ ನೈಲಾನ್ ಮತ್ತು ಪಾಲಿಸ್ಟರ್ ವಸ್ತುಗಳಿಂದ ತಯಾರಿಸಿದ ರಾಷ್ಟ್ರದ್ವಜ ಬಳಕೆಗೆ ಅವಕಾಶ ಮಾಡಿಕೊಡುವ ಮೂಲಕ, ನೇಕಾರರ ಹೊಟ್ಟೆಯ ಮೇಲೆ ಒಡೆದಿದೆ ಎಂದು ಜಿಲ್ಲಾ ನೇಕಾರರ ಸಮುದಾಯಗಳ ಒಕ್ಕೂಟದ ಪದಾಧಿಕಾರಿಗಳು ತಿಳಿಸಿದ್ದಾರೆ. ನಗರದ ಖಾಸಗಿ ಹೊಟೇಲ್‍ನಲ್ಲಿ ಆಗಸ್ಟ್ 17 ರಂದು ನಡೆಸಲು ಉದ್ದೇಶಿಸಿರುವ 8ನೇ ಅಂತರರಾಷ್ಟ್ರೀಯ ನೇಕಾರರ ದಿವಸ ಕಾರ್ಯಕ್ರಮದ ಅಂಗವಾಗಿ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ನೇಕಾರರ ಸಮುದಾಯದÀ ಕುರುಹಿನ ಶೆಟ್ಟಿ, ತೋಗಟವೀರ, ಪದ್ಮಶಾಲಿ, ದೇವಾಂಗ ಸಮುದಾಯದ ಮುಖಂಡರಾದ ರಾಮಕೃಷ್ಣಯ್ಯ, ಧನಿಯಕುಮಾರ್, ಅನಿಲ್‍ಕುಮಾರ್, ಎಸ್.ವಿ.ವೆಂಕಟೇಶ್, ಎಸ್.ಎನ್.ರಂಗಸ್ವಾಮಿ, ಯೋಗಾನಂದ, ಕರಿಯಪ್ಪ ಮತ್ತಿತರರು ಸರಕಾರದ ನಡೆಯನ್ನು ಖಂಡಿಸಿದರು. ಜಿಲ್ಲಾ ನೇಕಾರರ ಸಮುದಾಯದ ಕಾರ್ಯದರ್ಶಿ ಧನಿಯಕುಮಾರ್, ರಾಷ್ಟ್ರಧ್ವಜಕ್ಕೆ ತನ್ನದೇ ಆದ ಘನತೆ,ಗೌರವವಿದೆ.ಹತ್ತಿಯ ಬಟ್ಟೆಯಿಂದ ತಯಾರಿಸಿದ ರಾಷ್ಟ್ರದ್ವಜವನ್ನು ಮಾತ್ರ ಬಳಕೆ ಮಾಡಬೇಕೆಂಬ ನಿಯಮವಿದ್ದ ಕಾರಣ, ರಾಷ್ಟ್ರೀಯ ಹಬ್ಬಗಳ ಸಂದರ್ಭದಲ್ಲಿ ನೇಕಾರರಿಗೆ ಧ್ವಜ ನೇಯ್ಗೆ ಮಾಡಲು ಆಡರ್‍ಗಳು ಬರುತ್ತಿದ್ದವು.ಇದರಿಂದ ಸಾವಿರಾರು ನೇಕಾರರ ಕುಟುಂಬಗಳು ಜೀವನ ನಡೆಸುತ್ತಿದ್ದರು. ಆದರೆ ಸರಕಾರ…
ತುಮಕೂರು: ನಗರದ ಶೇಷಾದ್ರಿಪುರಂ ಪದವಿ ಕಾಲೇಜಿನ ವಿವೇಕಾನಂದ ಅಧ್ಯಯನ ಕೇಂದ್ರ ಮತ್ತು ಆಂತರಿಕ ಗುಣಮಟ್ಟದ ಭದ್ರತಾ ಘಟಕವು ರಾಮಕೃಷ್ಣ-ವಿವೇಕಾನಂದ ಆಶ್ರಮದ ಸಂಯುಕ್ತಾಶ್ರಯದಲ್ಲಿ ಆ. 16 ಮತ್ತು 17 ರಂದು ‘ಆರೋಹ’ ಎಂಬ ಶೀರ್ಷಿಕೆಯಡಿಯಲ್ಲಿ ‘ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ’ದ ಅಂಗವಾಗಿ ಎರಡು ದಿನಗಳ ಅಂತಾರಾಷ್ಟ್ರೀಯ ಯುವ ಸಮ್ಮೇಳನವನ್ನು ಗಂಗಸಂದ್ರ ರಸ್ತೆಯ ಶೇಷಾದ್ರಿಪುರಂ ಪದವಿ ಕಾಲೇಜಿನಲ್ಲಿ ಆಯೋಜಿಸಲಾಗಿದೆ ಎಂದು ರಾಮಕೃಷ್ಣ-ವಿವೇಕಾನಂದ ಆಶ್ರಮದ ಅಧ್ಯಕ್ಷರಾದ ಸ್ವಾಮಿ ವೀರೇಶಾನಂದ ಸರಸ್ವತೀ ಅವರು ತಿಳಿಸಿದರು. ರಾಮಕೃಷ್ಣ ಮಠ ಮತ್ತು ಮಿಷನ್‍ನ ಉಪಾಧ್ಯಕ್ಷರಾದ ಸ್ವಾಮಿ ಗೌತಮಾನಂದಜೀ ಮಹಾರಾಜ್ ರವರು ಯುವ ಸಮ್ಮೇಳನವನ್ನು ಉದ್ಘಾಟಿಸುವರು. ಕರ್ನಾಟಕ-ಕೇರಳ ವಿಭಾಗದ ಸಿಬ್ಬಂದಿ ನೇಮಕಾತಿ ಆಯೋಗದ ಪ್ರಾದೇಶಿಕ ನಿರ್ದೇಶಕರಾದ ಎಸ್.ಎನ್. ಗಿರೀಶ್, ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಪ್ರಧಾನ ಕಾರ್ಯದರ್ಶಿ ನಾಡೋಜ ಡಾ. ವೂಡೆ ಪಿ. ಕೃಷ್ಣ, ತುಮಕೂರು ವಿಭಾಗದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾಗಿರುವ ಡಬ್ಲ್ಯೂ.ಡಿ. ಅಶೋಕ್ ಅಂತಾರಾಷ್ಟ್ರೀಯ ಯುವ ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಕಾರ್ಯಕ್ರಮವು ಒಟ್ಟು…
ತುಮಕೂರು: ಸತತ ಮಳೆಯಿಂದ ಜಿಲ್ಲೆಯ ವಿವಿಧ ಕೆರೆ ಕಟ್ಟೆಗಳು, ಅಣೆಕಟ್ಟೆಗಳು ತುಂಬಿರುವ ಹಿನ್ನೆಲೆಯಲ್ಲಿ ಇಂದು ರಾಜ್ಯ ಜಲಸಂಪನ್ಮೂಲ ಸಚಿವ ಗೋವಿಂದ ಎಂ.ಕಾರಜೋಳ ಅವರು ಜಿಲ್ಲೆಯ ಕುಣಿಗಲ್ ತಾಲೂಕಿನ ಮಾರ್ಕೋನಹಳ್ಳಿ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾಜ್ಯದಲ್ಲಿ ಸತತವಾಗಿ ಮುಂಗಾರು ಮಳೆಯಾಗುತ್ತಿರುವ ಹಾಗೆಯೇ ತುಮಕೂರು ಜಿಲ್ಲೆಯಲ್ಲಿಯೂ ನಿರಂತರವಾಗಿ ಮಳೆಯಾಗುತ್ತಿದ್ದು,ಜಿಲ್ಲೆಯಲ್ಲಿ ಹುಟ್ಟುವ ಶಿಂಸಾ,ಜಯಮಂಗಲಿ, ಗರುಡದ್ವಜ, ಉತ್ತರ ಪಿನಾಕಿನಿ, ದಕ್ಷಿಣ ಪಿನಾಕಿನಿ ನದಿಗಳು ತುಂಬಿ ಹರಿದ್ದ ಪರಿಣಾಮ ನದಿಪಾತ್ರಗಳ ಕೆರೆ, ಕಟ್ಟೆಗಳು ಸಹ ತುಂಬಿ ಕೋಡಿ ಬಿದ್ದಿವೆ.ಶಿಂಷಾ ನದಿ ನೀರಿನಿಂದ ಕುಣಿಗಲ್ ತಾಲೂಕಿನ ಮಾರ್ಕೋನಹಳ್ಳಿಯ ಮಂಗಳ ಜಲಾಶಯ ತುಂಬಿದ್ದು, ಜಲಾಶಯದಿಂದ ನದಿ ಪಾತ್ರಗಳಿಗೆ ನೀರು ಬಿಡುಗಡೆ ಮಾಡಲಾಗಿದೆ. ಮಳೆಯಿಂದ ಜನಜೀವನದ ಮೇಲಾಗಿರುವ ದುಷ್ಪರಿಣಾಮಗಳ ಅಧ್ಯಯನದಲ್ಲಿ ಸರಕಾರ ತೊಡಗಿದೆ.ಈ ಹಿನ್ನೆಲೆಯಲ್ಲಿ ಸರಕಾರದ ಜಲಸಂಪನ್ಮೂಲ ಸಚಿವರಾದ ಗೋವಿಂದ ಎಂ.ಕಾರಜೋಳ ಅವರು ಇಂದು ಕುಣಿಗಲ್ ತಾಲೂಕಿನ ಮಾರ್ಕೋನಹಳ್ಳಿ ಜಲಾಶಯಕ್ಕೆ ಭೇಟಿ ನೀಡಿ,ಹೇಮಾವತಿ ನಾಲಾವಲಯದ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಈ ವೇಳೆ ಮಾತನಾಡಿದ ಸಚಿವ ಗೋವಿಂದ ಎಂ.ಕಾರಜೋಳ,ಈ ವರ್ಷ…
ತುಮಕೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸೂಚನೆಯಂತೆ, 75ನೇ ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಆಗಸ್ಟ್ 13 ರಿಂದ 15, 2022ರವರೆಗೆ “ಹರ್ ಘರ್ ತಿರಂಗಾ” ಅಭಿಯಾನ ಕಾರ್ಯಕ್ರಮವನ್ನು ದೇಶದಾದ್ಯಂತ ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನದಲ್ಲಿ ರಾಜ್ಯದಲ್ಲಿರುವ ಎಲ್ಲಾ ಮನೆಗಳು, ಸರ್ಕಾರಿ ಕಟ್ಟಡಗಳು, ಅರೆ ಸರ್ಕಾರಿ ಕಟ್ಟಡಗಳು, ಸಂಘ-ಸಂಸ್ಥೆಗಳ ಕಟ್ಟಡಗಳು ಹಾಗೂ ಇತರೆ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಹಾರಿಸಿ ದೇಶಪ್ರೇಮವನ್ನು ಅಭಿವ್ಯಕ್ತಗೊಳಿಸಬೇಕಿದೆ. ಈ ಹಿನ್ನಲೆಯಲ್ಲಿ ದಿನಾಂಕ:12-08-2022ರಂದು ಜಿಲ್ಲಾಡಳಿತ, ತುಮಕೂರು ವತಿಯಿಂದ ತುಮಕೂರು ನಗರದ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ “ಶ್ರೀ ನುಲಿಯ ಚಂದಯ್ಯ” ಜಯಂತಿಯಲ್ಲಿ “ಹರ್ ಘರ್ ತಿರಂಗಾ ಅಭಿಯಾನ” ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮಾನ್ಯ ಉಪಕಾರ್ಯದರ್ಶಿಗಳಾದ ಶ್ರೀ ಗೋಪಾಲ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀ ಡಿ.ಎಂ.ರವಿಕುಮಾರ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಕೆ.ಎಸ್.ಸಿದ್ಧಲಿಂಗಪ್ಪ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಿಬ್ಬಂದಿಗಳಾದ ಶ್ರೀ ಡಿ.ವಿ.ಸುರೇಶ್…











