ತುಮಕೂರು: ವರದಕ್ಷಿಣೆ ಕಿರುಕುಳ, ಕೌಟುಂಬಿಕ ದೌರ್ಜನ್ಯ, ಅತ್ಯಾಚಾರ ಹಾಗೂ ಲೈಂಗಿಕ ಕಿರುಕುಳ ಸೇರಿದಂತೆ ವಿವಿಧ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಸಮಲೋಚನೆ ಮತ್ತು ಅಗತ್ಯ ಕಾನೂನು ನೆರವನ್ನು ಒದಗಿಸಲು ಸಾಂತ್ವನ ಕೇಂದ್ರಗಳನ್ನು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ಅನುμÁ್ಠನಗೊಳಿಸಲಾಗುತ್ತಿದ್ದು, ದಿನದ 24 ಗಂಟೆಗಳ ಕಾಲ ಸಂಕಷ್ಟಕ್ಕೊಳಗಾದ ಮಹಿಳೆಯರಿಗೆ ನೆರವನ್ನು ಒದಗಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ತಿಳಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಪಂಚಾಯತಿಗಳು ಮಕ್ಕಳ ಗ್ರಾಮ ಸಭೆಯನ್ನು ನಡೆಸಬೇಕು. ಗಮನಾರ್ಹ ಸಮಸ್ಯೆಗಳಿದ್ದಲ್ಲಿ ಅವುಗಳನ್ನು ಬಗೆಹರಿಸಲು ಪಿಡಿಓ ಮತ್ತು ಇತರೆ ಅಧಿಕಾರಿಗಳು ಕ್ರಮವಹಿಸಬೇಕು ಎಂದರು. ಮಹಿಳೆಯರು ಆರ್ಥಿಕವಾಗಿ ಮುಂದುವರೆಯಲು ಬೇಕಾದ ಉದ್ಯಮ ಶೀಲತೆಯ ಬಗ್ಗೆ ಅರ್ಹರನ್ನು ಗುರುತಿಸಿ ಅವರಿಗೆ ತರಬೇತಿಯನ್ನು ನೀಡಿ, ಆರ್ಥಿಕ ಸದೃಢರನ್ನಾಗಿ ಮಾಡಬೇಕು ಎಂದು ತಿಳಿಸಿದರು. ರೈತ ಮಹಿಳೆಯರು, ಹೈನುಗಾರಿಕೆ, ಕುರಿ- ಕೋಳಿ ಸಾಕಾಣಿಕೆ ಮುಂತಾದ ಉಪಕ್ರಮಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ…
Author: News Desk Benkiyabale
ತುಮಕೂರು: ಗುಬ್ಬಿ ತಾಲೂಕು ಕಚೇರಿಯ ಕಂದಾಯ ಇಲಾಖೆಯ ಅಧಿಕಾರಿಗಳು, ಭೂಗಳ್ಳರ ಜೊತೆ ಸೇರಿ ನಡೆಸಿರುವ ಅವ್ಯವಹಾರವನ್ನು ಪತ್ತೆ ಹಚ್ಚಿ ತನಿಖೆ ನಡೆಸುವ ನಿಟ್ಟಿನಲ್ಲಿ ಸರಕಾರ ಪ್ರಕರಣವನ್ನು ಮುಂದಿನ 15 ದಿನಗಳಲ್ಲಿ ಸಿಒಡಿ ತನಿಖೆಗೆ ವಹಿಸದಿದ್ದರೆ ಆಗಸ್ಟ್ 08 ರಂದು ಗುಬ್ಬಿ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡಸಲಾಗುವುದು ಎಂದು ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ತಿಳಿಸಿದ್ದಾರೆ. ನಗರದ ವಿಜ್ಞಾನಕೇಂದ್ರದಲ್ಲಿ ಆಯೋಜಿಸಿದ್ದ ರೈತ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಗುಬ್ಬಿ ತಾಲೂಕಿನ 137 ಜನರಿಗೆ 450 ಎಕರೆ ಭೂಮಿಯನ್ನು ಅಕ್ರಮವಾಗಿ ಖಾತೆ ಮಾಡಿಕೊಟ್ಟಿದ್ದಾರೆ. 50-53ಯಲ್ಲಿ ಅರ್ಜಿ ಸಲ್ಲಿಸದೆ ಇದ್ದರೂ ಸಹ ಹಳೆಯ ಪಹಣಿಗಳನ್ನು ತಿದ್ದಿ, ಉಳ್ಳವರಿಗೆ ಅದರಲ್ಲಿಯೂ ಕಂದಾಯ ಇಲಾಖೆಯ ನೌಕರರ ಅಪ್ಪ, ಅಮ್ಮ, ತಂಗಿ, ಅಕ್ಕ, ಭಾವ, ತಮ್ಮ, ಅಣ್ಣನ ಸೇರಿದಂತೆ ಸಂಬಂಧಿಕರ ಹೆಸರಿಗೆ ಕೋಟ್ಯಾಂತರ ರೂ ಬೆಲೆ ಬಾಳುವ ಜಮೀನು ಮಂಜೂರು ಮಾಡಿಕೊಟ್ಟಿದ್ದಾರೆ. ಇದರ ಹಿಂದೆ ದೊಡ್ಡ ವ್ಯಕ್ತಿಗಳ ಕೈವಾಡ ಇರುವುದರಿಂದ ಕೂಡಲೇ ಪ್ರಕರಣವನ್ನು…
ತುಮಕೂರು: ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಡಿ.ಕೊರಟಗೆರೆಯಲ್ಲಿ ಫ್ಲೆಕ್ಸ್ ಅಳವಡಿಸುವ ವಿಚಾರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ನಡೆದಂತಹ ಗಲಭೆಯನ್ನೇ ಮಾಜಿ ಶಾಸಕರ ಮತ್ತು ಅವರ ಬೆಂಬಲಿಗರು ಹಿಂದು-ಮುಸ್ಲಿಂ ಗಲಾಟೆ, ಲಿಂಗಾಯಿತ- ಒಕ್ಕಲಿಗರ ನಡುವೆ ಗಲಾಟೆ ಎಂಬಂತೆ ಬಿಂಬಿಸಲು ಹೊರಟಿರುವುದು ಖಂಡನೀಯ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ಹಿರೇಹಳ್ಳಿ ಮಹೇಶ್ ತಿಳಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಸ್ಕಲ್ ಗ್ರಾಪಂ ವ್ಯಾಪ್ತಿ ಡಿ.ಕೊರಟಗೆರೆ ಗ್ರಾಮದಲ್ಲಿ ಜಾತ್ರಾ ಮಹೋತ್ಸವ ನಡೆಯಿತು, ಈ ಪ್ರಯುಕ್ತ ಫ್ಲೆಕ್ಸ್ ಬ್ಯಾನರ್ ಕಟ್ಟುವ ವಿಚಾರದಲ್ಲಿ ಬಿಜೆಪಿ ಕಿಡಿಗೇಡಿಗಳು ಜಗಳ ತೆಗೆದು ಕೆಟ್ಟ ಹೆಸರು ತರುವ ಹುನ್ನಾರ ಮಾಡಿದ್ದಾರೆ, ಜೆಡಿಎಸ್ ಶಾಸಕರ ಮೇಲಿನ ಅಭಿಮಾನದಿಂದ ಪಕ್ಷದ ಕಾರ್ಯಕರ್ತರು ಬ್ಯಾನರ್ ಕಟ್ಟಲು ಹೋದಾಗ ಜೆಡಿಎಸ್ ಕಾರ್ಯಕರ್ತರನ್ನು ಮಸ್ಕಲ್ ಗ್ರಾಪಂ ಅಧ್ಯಕ್ಷರು ತಡೆಯುತ್ತಾರೆ. ನಮ್ಮ ಮನೆ ಮುಂದೆ ಕಟ್ಟಬೇಡಿ ಎಂದಾಗ ನಾವು ಸುಮ್ಮನಾಗುತ್ತೇವೆ. ಬೇರೆ ಕಡೆ ಕಟ್ಟಲು ಮುಂದಾದಾಗ ಬ್ಯಾನರ್ ಹರಿದು ಹಲ್ಲೆ ಮಾಡಿದ್ದಾರೆ.ಆದರೆ ಸತ್ಯ ಮರೆಮಾಚುವ ಕೆಲಸಕ್ಕೆ…
ತುಮಕೂರು: ನಾವು ನವೀಕರಿಸಬಹುದಾದ ಶಕ್ತಿಯ ಮೂಲದಿಂದ 1,63,000 ಮೆ.ವ್ಯಾ. ವಿದ್ಯುತ್‍ನ್ನು ಉತ್ಪಾದಿಸುತ್ತಿದ್ದೇವೆ. ನಾವು ಪ್ರಪಂಚದಲ್ಲೇ ಅತೀ ವೇಗವಾಗಿ ವಿದ್ಯುತ್ ಉತ್ಪಾದಿಸುವ ಸಲಕರಣೆಗಳನ್ನು ಸ್ಥಾಪಿಸುತ್ತಿದ್ದೇವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಬಿ.ಸಿ. ನಾಗೇಶ್ ಅವರು ತಿಳಿಸಿದರು. 2030ಕ್ಕೆ ನವೀಕರಿಸಬಹುದಾದ ಶಕ್ತಿಯ ಮೂಲದಿಂದ ನಮ್ಮ ಉತ್ಪಾದನಾ ಸಾಮಥ್ರ್ಯವು 40% ಆಗಿದ್ದು, ಈ ಗುರಿಯನ್ನು ನಾವು ಈಗಾಗಲೇ ನವೆಂಬರ್ 2021ರಲ್ಲೇ ಸಾಧಿಸಿದ್ದೇವೆ. ಹೀಗಾಗಿ ನಿಗಧಿತ ಸಮಯಕ್ಕಿಂತ 9 ವರ್ಷಗಳ ಮುಂಚಿತವಾಗಿ ಗುರಿಯನ್ನು ಸಾಧಿಸಿದ್ದೇವೆ ಎಂದರು. ‘ಉಜ್ವಲ ಭಾರತ ಉಜ್ವಲ ಭವಿಷ್ಯ’ ವಿದ್ಯುಚ್ಛಕ್ತಿ @ 2047 ವಿದ್ಯುತ್ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಹಿಂದೆ ವಿದ್ಯುತ್ ಸಂಪರ್ಕ ಇಲ್ಲದೆ ರೈತರು ಪರದಾಡುವಂತಾಗಿತ್ತು. ದೇಶದ 36 ಸಾವಿರಕ್ಕಿಂತ ಹೆಚ್ಚು ಹಳ್ಳಿಗಳು ವಿದ್ಯುತ್ ಕಂಡಿರಲಿಲ್ಲ. ಪ್ರಧಾನಿ ಮೋದಿಯವರು ಗ್ರಾಮೀಣ ವಿದ್ಯುಧೀಕರಣ ಸಭೆಗಳನ್ನು ಕಾಲಕಾಲಕ್ಕೆ ನಡೆಸಿದ ಕಾರಣ ಇಂದು ಹಲವಾರು ಯೋಜನೆಗಳ ಮೂಲಕ 5 ವರ್ಷಗಳಲ್ಲಿ ದೇಶದ ಎಲ್ಲ ಹಳ್ಳಿಗಳಿಗೂ ವಿದ್ಯುತ್ ಸಂಪರ್ಕ ಒದಗಿಸಲಾಗಿದೆ.…
ಗುಬ್ಬಿ: ತಾಲೂಕಿನ ಜನತೆಯನ್ನು ತಾನು ಗೆದ್ದಂತ ಪಕ್ಷದಿಂದ ಬೇರೆ ಪಕ್ಷಕ್ಕೆ ಅಡವಿಡುತ್ತಿದ್ದಾರೆ ಎಂದು ವಕೀಲ ಹಾಗೂ ಕಾಂಗ್ರೆಸ್ ಮುಖಂಡ ಜಿ.ಎಸ್.ಪ್ರಸನ್ನ ಕುಮಾರ್ ಶಾಸಕರ ವಿರುದ್ಧ ಕಿಡಿಕಾರಿದರು. ಪಟ್ಟಣದ ಕಾಂಗ್ರೆಸ್ ಕಚೇರಿಯಿಂದ ಪ್ರತಿಭಟನೆ ನಡೆಸಿ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ ನಂತರ ಮಾತನಾಡಿದ ಅವರು ಜೆಡಿಎಸ್ ಪಕ್ಷದ ಚಿನ್ನೆ ಮೇಲೆ ಗೆದ್ದಂತ ಶಾಸಕ ತನ್ನ ಮತವನ್ನು ಬಿಜೆಪಿಗೆ ಮಾರಿಕೊಂಡ ನಂತರ ಜೆಡಿಎಸ್ ಪಕ್ಷದಿಂದ ಹೊರ ಹಾಕಿದ ನಂತರ ದಿ. 5- 7- 2022 ರಂದು ತನ್ನ ಲೆಟರ್ ಹೆಡ್ಡಿನಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ತೀರ ಹಿಂದುಳಿದ ಪ್ರದೇಶ ಹಾಗಾಗಿ 100 ಕೋಟಿ ರೂಗಳನ್ನು ತನ್ನ ತಾಲೂಕಿನ ಅಭಿವೃದ್ಧಿಗೆ ಬಿಡುಗಡೆ ಮಾಡಬೇಕೆಂದು ಪತ್ರ ಬರೆದಿರುವುದು ಪಕ್ಷದಿಂದ ಹುಚ್ಚಾಟಿಸಿದ ನಂತರ ಇದರಿಂದ ಗುಬ್ಬಿ ತಾಲೂಕಿನ ಜನತೆಯ ಕಣ್ಣಿಗೆ ಮಣ್ಣು ಎರಚುವಂತಹ ಹುನ್ನಾರಿನಲ್ಲಿದ್ದಾರೆ. ಕೇವಲ ಚುನಾವಣೆಯು ಎಂಟು ತಿಂಗಳಲ್ಲಿ ಇರುವುದು ಸರಿ ಅಷ್ಟೇ. 20 ವರ್ಷಗಳಿಂದ ಆಡಳಿತ ನಡೆಸಿದಂತಹ ಗುಬ್ಬಿಯ ಶಾಸಕ ಹಿಂದುಳಿದ ಪ್ರದೇಶವೆಂದು…
ತುಮಕೂರು: ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಡಿ.ಕೊರಟಗೆರೆಯಲ್ಲಿ ಫ್ಲೆಕ್ಸ್ ಅಳವಡಿಸುವ ವಿಚಾರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ನಡೆದಂತಹ ಗಲಭೆಯನ್ನೇ ಮಾಜಿ ಶಾಸಕ ಬಿ.ಸುರೇಶ್‍ಗೌಡ ಮತ್ತು ಅವರ ಬೆಂಬಲಿಗರು ಹಿಂದು-ಮುಸ್ಲಿಂ ಗಲಾಟೆ, ಲಿಂಗಾಯಿತ-ಒಕ್ಕಲಿಗರ ನಡುವೆ ಗಲಾಟೆ ಎಂಬಂತೆ ಬಿಂಬಿಸಲು ಹೊರಟಿರುವುದು ಖಂಡನೀಯ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ಹಿರೇಹಳ್ಳಿ ಮಹೇಶ್ ತಿಳಿಸಿದ್ದಾರೆ. ಪಕ್ಷದ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಸ್ಕಲ್ ಗ್ರಾಪಂ ವ್ಯಾಪ್ತಿ ಡಿ.ಕೊರಟಗೆರೆ ಗ್ರಾಮದಲ್ಲಿ ಜಾತ್ರಾ ಮಹೋತ್ಸವ ನಡೆಯಿತು, ಈ ಪ್ರಯುಕ್ತ ಫ್ಲೆಕ್ಸ್ ಬ್ಯಾನರ್ ಕಟ್ಟುವ ವಿಚಾರದಲ್ಲಿ ಬಿಜೆಪಿ ಕಿಡಿಗೇಡಿಗಳು ಜಗಳ ತೆಗೆದು ಕೆಟ್ಟ ಹೆಸರು ತರುವ ಹುನ್ನಾರ ಮಾಡಿದ್ದಾರೆ, ಜೆಡಿಎಸ್ ಶಾಸಕರ ಮೇಲಿನ ಅಭಿಮಾನದಿಂದ ಪಕ್ಷದ ಕಾರ್ಯಕರ್ತರು ಬ್ಯಾನರ್ ಕಟ್ಟಲು ಹೋದಾಗ ಜೆಡಿಎಸ್ ಕಾರ್ಯಕರ್ತರನ್ನು ಮಸ್ಕಲ್ ಗ್ರಾಪಂ ಅಧ್ಯಕ್ಷರು ತಡೆಯುತ್ತಾರೆ. ನಮ್ಮ ಮನೆ ಮುಂದೆ ಕಟ್ಟಬೇಡಿ ಎಂದಾಗ ನಾವು ಸುಮ್ಮನಾಗುತ್ತೇವೆ. ಬೇರೆ ಕಡೆ ಕಟ್ಟಲು ಮುಂದಾದಾಗ ಬ್ಯಾನರ್ ಹರಿದು ಹಲ್ಲೆ ಮಾಡಿದ್ದಾರೆ.ಆದರೆ ಸತ್ಯ ಮರೆಮಾಚುವ ಕೆಲಸಕ್ಕೆ…
ತುಮಕೂರು: ಗ್ರಾಮಾಂತರ ಕ್ಷೇತ್ರದಲ್ಲಿ ಪದೇ ಪದೇ ಪ್ರಚೋದನಾಕಾರಿ ಹೇಳಿಕೆ ನೀಡುತ್ತಿರುವ ಜೆಡಿಎಸ್‍ನ ಪಾಲನೇತ್ರಯ್ಯನವರ ವಿರುದ್ಧ ಪೆÇಲೀಸ್ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಮುಖಂಡ ಹಾಗೂ ಜಿ.ಪಂ. ಮಾಜಿ ಸದಸ್ಯ ಶಿವಕುಮಾರ್ ಒತ್ತಾಯಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದುವರೆಗೂ ಗ್ರಾಮ ಪಂಚಾಯ್ತಿ ಸದಸ್ಯ ಕೂಡ ಆಗಿರದ ಪಾಲನೇತ್ರಯ್ಯ ಅವರು ಗ್ರಾಮಾಂತರ ಕ್ಷೇತ್ರದಲ್ಲಿ ಕೆಲ ಅಹಿತಕರ ಘಟನೆಗಳಿಗೆ ಕಾರಣವಾಗುತ್ತಿದ್ದಾರೆ. ಅಲ್ಲದೆ ಅಂತಹ ಸ್ಥಳಗಳಲ್ಲಿ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇವರ ವಿರುದ್ಧ ಕೂಡಲೇ ಪೆÇಲೀಸರು ಕ್ರಮ ಕೈಗೊಳ್ಳಬೇಕು ಎಂದರು. ಗ್ರಾಮಾಂತರ ಕ್ಷೇತ್ರದಲ್ಲಿ ವೀರಶೈವ ಜನಾಂಗವನ್ನು ಒಡೆಯುವ ಉದ್ದೇಶದಿಂದ ಪಾಲನೇತ್ರಯ್ಯ ಪದೇ ಪದೇ ಮಾಜಿ ಶಾಸಕ ಸುರೇಶ್‍ಗೌಡ ಅವರ ಬಗ್ಗೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಸುರೇಶ್‍ಗೌಡರು ಬೆಂಗಳೂರಿನಲ್ಲಿದ್ದರೂ ಸಹ ಅವರ ಹೆಸರನ್ನು ಮುನ್ನಲೆಗೆ ತರುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಗುಡುಗಿದರು. ಊರ ಜಾತ್ರೆ ಸಂದರ್ಭದಲ್ಲಿ ಪ್ಲಕ್ಸ್ ಕಟ್ಟುವ ವಿಚಾರಕ್ಕೆ ಗಲಾಟೆ ನಡೆದಿದೆ. ಆದರೆ ಅದಕ್ಕೆ ಸುರೇಶ್‍ಗೌಡರೇ ಕಾರಣ ಎಂದು ಪಾಲನೇತ್ರಯ್ಯ ಹೇಳಿಗೆ ನೀಡುತ್ತಾರೆ.…
ತುಮಕೂರು: ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ತಮ್ಮ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಚರ್ಚಿಸಿದರು. ಗ್ರಾಮೀಣ ಮತ್ತು ನಗರ ಪ್ರದೇಶಗಳ ಅಂಗನವಾಡಿ ಕೇಂದ್ರಗಳಿಗೆ ನಿವೇಶನ ಒದಗಿಸಬೇಕಾಗಿದ್ದು, ಕನಿಷ್ಠ 20×30 ಅಳತೆಯ ನಿವೇಶನಗಳನ್ನು ಪಾಲಿಕೆ, ಸ್ಥಳೀಯ ಸಂಸ್ಥೆಗಳ ಆಯುಕ್ತರು, ಪೌರಾಯುಕ್ತರು, ಮುಖ್ಯಾಧಿಕಾರಿಗಳು ಮತ್ತು ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ಪಿಡಿಓಗಳು ನಿವೇಶನ ಒದಗಿಸುವಂತೆ ಸೂಚಿಸಿದರು. 15ನೇ ಹಣಕಾಸು ಪ್ರಗತಿ ಪರಿಶೀಲನೆ ನಡೆಸಿದ ಅವರು, ಕುಡಿಯುವ ನೀರು, ಅಮೃತ್ ನಿರ್ಮಲ ನಗರ ಯೋಜನೆ, ಅಂಬೇಡ್ಕರ್, ವಾಜಪೇಯಿ ವಸತಿ ಯೋಜನೆಗಳಡಿ ನಿರೀಕ್ಷಿತ ಪ್ರಗತಿ ಸಾಧಿಸುವಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು, ಮುಖ್ಯಾಧಿಕಾರಿಗಳಿಗೆ ಸೂಚಿಸಿದರು. ನೋಟಿಸ್ ಅವಧಿಯ ಭೂಮಿ ಅರ್ಜಿಗಳನ್ನು 33 ದಿನಗಳೊಗಾಗಿ ವಿಲೇವಾರಿ ಮಾಡದ ತಹಸಿಲ್ದಾರ್, ಕಂದಾಯ ನಿರೀಕ್ಷಕ, ಸರ್ವೇ ಸೂಪರ್‍ವೈಸರ್‍ಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು. ಜಿಲ್ಲೆಯಲ್ಲಿ 6850 ಪಹಣಿ ಕಾಲಂ 3/9 ಮಿಸ್ ಮ್ಯಾಚ್ ಪ್ರಕರಣಗಳಿದ್ದು, ಶೀಘ್ರ ವಿಲೇವಾರಿ ಮಾಡುವಂತೆ ಸೂಚಿಸಿದರು. ಕಂದಾಯ ಇಲಾಖೆಯ ಸರ್ಕಾರಿ…
ತುಮಕೂರು: ವಿಶ್ವ ಜನಸಂಖ್ಯಾ ದಿನಾಚರಣೆ ಪ್ರಯುಕ್ತ ಕುಟುಂಬ ಯೋಜನೆ ಉಪಯೋಗಗಳನ್ನು ನಮ್ಮದಾಗಿಸಿ ಉನ್ನತಿಯ ಹೊಸ ಆಧ್ಯಾಯ ಬರೆಯೋಣ ಎಂಬ ಘೋಷವಾಕ್ಯದೊಂದಿಗೆ ಜನಸಂಖ್ಯೆ ನಿಯಂತ್ರಣ ಕುರಿತು ಜನಜಾಗೃತಿ ಜಾಥಾವನ್ನು ನಗರದಲ್ಲಿ ನಡೆಸಲಾಯಿತು. ಇಲ್ಲಿನ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಜಿಲ್ಲಾಡಳಿತ, ಜಿ.ಪಂ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಜನಸಂಖ್ಯೆ ನಿಯಂತ್ರಣ ಕುರಿತ ಜನಜಾಗೃತಿ ಜಾಥಾಕ್ಕೆ ಮಹಾನಗರ ಪಾಲಿಕೆ ಮೇಯರ್ ಬಿ.ಜಿ. ಕೃಷ್ಣಪ್ಪ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಭಾರತ ದೇಶ ಜನಸಂಖ್ಯೆಯಲ್ಲಿ ಮುಂಚೂಣಿಯಲ್ಲಿದೆ. ಜನಸಂಖ್ಯಾ ಸ್ಫೋಟವನ್ನು ನಿಯಂತ್ರಣಗೊಳಿಸುವಲ್ಲಿ ಅಧಿಕಾರಿಗಳು ಸಹ ಮುಂದಾಗಿದ್ದಾರೆ. ಈ ಕುರಿತು ಜನರಲ್ಲಿ ಮತ್ತಷ್ಟು ಅರಿವು ಮೂಡಿಸುವ ಕೆಲಸ ನಿರಂತರವಾಗಿ ನಡೆಯಬೇಕಿದೆ ಎಂದರು. ಜನಸಾಮಾನ್ಯರಿಗೆ ಜನಸಂಖ್ಯೆ ನಿಯಂತ್ರಣದ ಬಗ್ಗೆ ಅರಿವು ಮೂಡಿಸುವ ಇಂತಹ ಕಾರ್ಯಕ್ರಮ ಅತ್ಯಗತ್ಯವಾಗಿದೆ ಎಂದರು. ಡಿಹೆಚ್‍ಓ ಡಾ. ಮಂಜುನಾಥ್ ಮಾತನಾಡಿ, ಕುಟುಂಬ ಯೋಜನೆ ಕಾರ್ಯಕ್ರಮಗಳ ಬಗ್ಗೆ ಪ್ರತಿಯೊಬ್ಬರೂ…
ತುಮಕೂರು: ಮುಂದಿನ ಆಗಸ್ಟ್ 03 ರಂದು ದಾವಣಗೆರೆಯಲ್ಲಿ ನಡೆಯುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75ನೇ ಜನ್ಮ ದಿನದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲೆಯ ಹಿಂದುಳಿದ ಸಮುದಾಯಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಇಂದು ಕಾಳಿದಾಸ ವಿದ್ಯಾವರ್ಧಕ ಸಂಘದ ಕಚೇರಿಯಲ್ಲಿ ಎಂ.ಎಲ್.ಸಿ. ಆರ್.ರಾಜೇಂದ್ರ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿತ್ತು. ಪೂರ್ವಭಾವಿ ಸಭೆಯಲ್ಲಿ ಕುರುಬ, ಮಡಿವಾಳ, ಕುಂಬಾರ, ನೇಕಾರ, ಸವಿತಾ, ವಾಲ್ಮೀಕಿ, ಗೊಲ್ಲ ಸಮುದಾಯದ ಮುಖಂಡರು ಸೇರಿದಂತೆ ಓಬಿಸಿ ಸಮುದಾಯಕ್ಕೆ ಸೇರಿದ ಹಲವು ಮುಖಂಡರು ಭಾಗವಹಿಸಿ, ಜಿಲ್ಲೆಯಿಂದ ಹೆಚ್ಚು ಜನರನ್ನು ಕರೆದುಕೊಂಡು ಹೋಗುವ ನಿಟ್ಟಿನಲ್ಲಿ ಚರ್ಚೆ ನಡೆಸಲಾಯಿತು. ಕಾರ್ಯಕ್ರಮ ಕುರಿತು ಮಾತನಾಡಿದ ಜಿಲ್ಲಾ ಹಿಂದುಳಿದ ಸಮುದಾಯಗಳ ಒಕ್ಕೂಟದ ಸಂಚಾಲಕ ಧನಿಯಕುಮಾರ್, ದಿವಂಗತ ದೇವರಾಜ ಅರಸು ನಂತರ ಹಿಂದುಳಿದ ವರ್ಗಗಳ ಕುಂದು ಕೊರತೆಗಳಿಗೆ ಸ್ಪಂದಿಸಿ ಕೆಲಸ ಮಾಡಿದ ಮುಖ್ಯಮಂತ್ರಿಗಳಿದ್ದರೆ ಅದು ಸಿದ್ದರಾಮಯ್ಯ ಮಾತ್ರ. ಹಾಗಾಗಿ ದಾವಣಗೆರೆಯಲ್ಲಿ ನಡೆಯುವ ಅವರ 75ನೇ ಹುಟ್ಟು ಹಬ್ಬದಲ್ಲಿ ಜಿಲ್ಲೆಯಿಂದ ಹೆಚ್ಚು ಜನರು ಭಾಗವಹಿಸುವ ಮೂಲಕ ಒಗ್ಗಟ್ಟು…










