ಗುಬ್ಬಿ: ತಾಲೂಕಿನ ಶಾಸಕರು ಅಸಮರ್ಥರಾಗಿದ್ದು ಕಮಿಟಿಯ ಅಧ್ಯಕ್ಷರಾದವರೇ ಭ್ರಷ್ಟಾಚಾರಿಗಳಾದರೆ ಜನಸಾಮಾನ್ಯರ ಗತಿ ಏನು ಎಂದು ಕಾಂಗ್ರೆಸ್ ಮುಖಂಡ ಹೊನ್ನಗಿರಿಗೌಡ ಅವರು ಶಾಸಕರ ವಿರುದ್ಧ ಕಿಡಿಕಾರಿದರು. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು 20 ವರ್ಷಗಳಿಂದ ಅಧಿಕಾರದ ಚುಕ್ಕಾಣಿ ಹಿಡಿದಿರುವ ಶಾಸಕ ತನ್ನ ಹಿಂಬಾಲಕರ ಟೀಮ್ ಕಟ್ಟಿಕೊಂಡು ತಾಲೂಕಿನಾದ್ಯಂತ ಭ್ರಷ್ಟಾಚಾರ ವೆಸಿಗಿದ್ದು ಇದನ್ನು ಪ್ರಶ್ನೆಸಲು ಹೋದ ಸಾರ್ವಜನಿಕರಿಗೆ ಧಮ್ಕಿ ಹಾಕುವಂತಹ ಈ ಶಾಸಕರ ಸ್ಥಾನದಲ್ಲಿರಲು ಅರ್ಹರಲ್ಲ. ಭೂ ಹಗರಣದ ರೂವಾರಿ ನೀವೇ ಅಲ್ಲವೇ ಎಂದು ಪ್ರಶ್ನಿಸಿದರು. ಇದೇ ತಿಂಗಳ 25 ಸೋಮವಾರದಂದು ಕಾಂಗ್ರೆಸ್ ಪಕ್ಷದ ವತಿಯಿಂದ ಕಾರ್ಯಕರ್ತರುಗಳು ಹಾಗೂ ನೋಂದ ರೈತರಗಳ ಜೊತೆ ಬೃಹತ್ ಪ್ರತಿಭಟನೆ ಯೊಂದಿಗೆ ನ್ಯಾಯ ಒದಗಿಸುವಂತೆ ಹಾಗೂ ಸಿ ಓಡಿ ತನಿಖೆಗೆ ಒಳಪಡಿಸುವಂತೆ ಆಗ್ರಹಿಸಿ ಜಿಲ್ಲಾ ಮುಖಂಡರು ಹಾಗೂ ತಾಲೂಕು ಮುಖಂಡರುಗಳ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದ ಅವರು ಪಕ್ಷದಿಂದ ಹುಚ್ಚಾಟಿತರಾದ ವಾಸು ರವರು ಶಾಸಕ ಗಿರಿಯನ್ನು ನಿಭಾಯಿಸಲು ಅಸಮರ್ಥರಾಗಿದ್ದಾರೆ. ಭೂ ನ್ಯಾಯ ಮಂಡಳಿಯ…
Author: News Desk Benkiyabale
ಗುಬ್ಬಿ: ತಾಲ್ಲೂಕಿನಲ್ಲಿ ಶಾಸಕರ ದುರಾಡಳಿತ ದಿಂದ ಜನತೆ ಬೇಸತ್ತಿದ್ದಾರೆ ಎಂದು ಜೆಡಿಎಸ್ ಮುಖಂಡ ಬಿ.ಎಸ್.ನಾಗರಾಜ್ ನೇರ ವಾಗ್ದಾಳಿ ನಡೆಸಿದರು. ಗುಬ್ಬಿ ತಾಲ್ಲೂಕಿನಲ್ಲಿ 20ವರ್ಷಗಳಿಂದ ಶಾಸಕರಾಗಿರುವ ನೀನು ತಾಲ್ಲೂಕಿನ ಯಾವ ಅಭಿವೃದ್ಧಿ ಮಾಡಿದ್ದೀರಿ ಎಂಬುದನ್ನು ತೋರಿಸಿ ನೋಡೋಣ ಕೇವಲ ಚುನಾವಣೆಯಲ್ಲಿ ತಮ್ಮ ಬೆಂಬಲಿಗರನ್ನು ಅಧಿಕಾರಿಗಳನ್ನು ಬಳಸಿಕೊಂಡು ಭ್ರಷ್ಟಾಚಾರಕ್ಕೆ ನೇರ ಕಾರಣ ಶಾಸಕ ಎಸ್. ಆರ್.ಶ್ರೀನಿವಾಸ್ ಎಂದು ನೇರ ಆರೋಪ ಮಾಡಿದರು. ಗುಬ್ಬಿ ಪಟ್ಟಣದ ತಾಲೂಕು ಕಛೇರಿಯ ಮುಂಭಾಗದಲ್ಲಿ ಜೆಡಿಎಸ್ ತಾಲೂಕು ಘಟಕದ ವತಿಯಿಂದ ಗುಬ್ಬಿ ತಾಲ್ಲೂಕಿನ ಲ್ಲಿ ನೆಡೆದಿರುವ ಭೂ ಹಗರಣವನ್ನು ಸಿಒಡಿ ತನಿಖೆಗೆ ವಹಿಸುವಂತೆ ಆಗ್ರಹಿಸಿ ಇಂದು ಆಯೋಜಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿ ದ ಅವರು ಶಾಸಕರೇ ನಾನಂತು ಬಗರುಕುಂ ಸಾಗುವಳಿ ಮತ್ತು 50.53 ಬಗ್ಗೆ ಪಿ ಹೆಚ್ ಡಿ ಪದವಿ ಮಾಡಿಲ್ಲ ನೀವು ಬಗರುಕುಂ ಸಮಿತಿ ಅಧ್ಯಕ್ಷ ರಾಗಿರುವವರು ಸಾಗುವಳಿ ವಿತರಣೆ ಗೆ ಅರ್ಜಿ ಸಲ್ಲಿಸಿ ಕಾಯುತ್ತಿರುವ ರೈತರಿಗೆ ಅನ್ಯಾಯ ಮಾಡಲು ಮುಂದಾಗಬೇಡಿ. ಇಂದು ರೈತರ ಜಮೀನು ಕಬಳಿಸಲು ಮುಂದಾಗಿರುವ…
ತುಮಕೂರು: ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ತಮ್ಮ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿಂದು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆಯನ್ನು ನಡೆಸಿ ಚರ್ಚಿಸಿದರು. ಸಭೆಯನ್ನು ಉದ್ದೇಶಿಸಿ ಅಧಿಕಾರಿಗಳೊಂದಿಗೆ ಮಾತನಾಡಿದ ಅವರು, ಕೋವಿಡ್-19 ತಡೆಗಟ್ಟಲು ಲಸಿಕಾಕರಣ ಅಗತ್ಯವಾಗಿದ್ದು, ಗ್ರಾಮ ಪಂಚಾಯತ್ ಹಂತದಲ್ಲಿ ಪಿಡಿಓ ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ವೃದ್ಧಾಪ್ಯ ವೇತನ ಪಡೆಯತ್ತಿರುವವರ ಮಾಹಿತಿ ತರಿಸಿಕೊಂಡು ಅವರಿಗೆ ಬೂಸ್ಟರ್ ಡೋಸ್ ಲಸಿಕೆಯನ್ನು ಹಾಕಿಸಿಕೊಳ್ಳಲು ತಿಳಿಸಬೇಕು. ಈ ಕುರಿತು ತಹಶೀಲ್ದಾರರು ಮತ್ತು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಕಾಧಿಕಾರಿಗಳು ತಮ್ಮ ಅಧೀನ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಸೂಚಿಸಿದರು. ಕೇಂದ್ರ ಸರ್ಕಾರ 18 ವರ್ಷ ಮೇಲ್ಪಟ್ಟ ಮೊದಲೆರಡು ಡೋಸ್ ಲಸಿಕಾಕರಣ ಪೂರೈಸಿದವರಿಗೆ ಹತ್ತಿರದ ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ ಜುಲೈ 15 ರಿಂದ 75 ದಿನಗಳ ಕಾಲ ಬೂಸ್ಟರ್ ಡೋಸ್ ಹಾಕಲಾಗುವುದು ಎಂದರಲ್ಲದೇ, ನಿಗಧಿತ ವಯಸ್ಸಿನ ಮೇಲ್ಪಟ್ಟ ಎಲ್ಲರೂ ಲಸಿಕೆಯನ್ನು ಹಾಕಿಸಿಕೊಳ್ಳುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಕ್ರಮವಹಿಸುವಂತೆ ಸೂಚಿಸಿದರು. ಶಿಕ್ಷಣಾಧಿಕಾರಿಗಳು ತಮ್ಮ ತಾಲ್ಲೂಕು ವ್ಯಾಪ್ತಿಯ ಪಿಯುಸಿ, ಐಟಿಐ, ಡಿಪ್ಲೊಮಾ, ನಸಿರ್ಂಗ್…
ತುಮಕೂರು: ದೇಶಾದ್ಯಂತ ಸ್ವಾತಂತ್ರ್ಯದ 75ರ ಸಂಭ್ರಮವನ್ನು ವೈವಿಧ್ಯಮಯವಾಗಿ ಮತ್ತು ವರ್ಣರಂಜಿತವಾಗಿ ಆಚರಿಸಲಾಗುತ್ತಿದ್ದು, ಈ ಸಂಭ್ರಮದ ಒಂದು ಭಾಗವಾಗಿ ಕೇಂದ್ರ ಸರ್ಕಾರದ ‘ಹರ್ ಘರ್ ತಿರಂಗಾ’ ಎಂಬ ಘೋಷ ವಾಕ್ಯದೊಂದಿಗೆ 2022ರ ಆಗಸ್ಟ್ 11ರಿಂದ 17ರವರೆಗೆ ದೇಶದ ಪ್ರತಿ ಮನೆಯಲ್ಲೂ ರಾಷ್ಟ್ರಧ್ವಜವನ್ನು ಹಾರಿಸಿ ದೇಶಭಕ್ತಿ, ದೇಶಾಭಿಮಾನ ಬಿಂಬಿಸುವ ಮೂಲಕ ನಮ್ಮ ರಾಷ್ಟ್ರಪ್ರೇಮವನ್ನು ಅಭಿವ್ಯಕ್ತಗೊಳಿಸಿ ದಾಖಲಿಸುವ ನಿಟ್ಟಿನಲ್ಲಿ ‘ಹರ್ ಘರ್ ತಿರಂಗಾ’ ಎಂಬ ಕಾರ್ಯಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ನಡೆದ ‘ಹರ್ ಘರ್ ತಿರಂಗಾ’ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ನಿರ್ದೇಶನದಂತೆ ಪ್ರತಿಯೊಬ್ಬ ವ್ಯಕ್ತಿಯಲ್ಲಿ ರಾಷ್ಟ್ರಾಭಿಮಾನವನ್ನು ಮೂಡಿಸಲು, ಪ್ರತಿ ಮನೆಯ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಬೇಕು ಹಾಗೂ ಮಕ್ಕಳಲ್ಲಿ ರಾಷ್ಟ್ರಾಭಿಮಾನವನ್ನು ಮೂಡಿಸುವುದು ‘ಹರ್ ಘರ್ ತಿರಂಗಾ’ ಕಾರ್ಯಕ್ರಮದ ಮೂಲ ಉದ್ದೇಶವಾಗಿದೆ. ಪ್ರತೀ ಗ್ರಾಮ ಪಂಚಾಯ್ತಿಗಳಲ್ಲಿ 250 ಭಾವುಟಗಳನ್ನು ಖರೀದಿಸಿ ಸಂಬಂಧಿಸಿದ ಎಲ್ಲಾ ಸರ್ಕಾರಿ ಕಚೇರಿ, ಕ್ವಾಟ್ರಸ್, ಅಂಗನವಾಡಿ, ಶಾಲಾ-ಕಾಲೇಜು, ನ್ಯಾಯ ಬೆಲೆ ಅಂಗಡಿಗಳಿಗೆ ನೀಡುವ ಮೂಲಕ ರಾಷ್ಟ್ರಧ್ವಜವನ್ನು…
ತುಮಕೂರು: ಮಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ಆಟೋ ಚಾಲಕನ ಮೃತದೇಹ ಮೂರು ದಿನಗಳ ಸತತ ಕಾರ್ಯಾಚರಣೆಯ ಫಲದಿಂದಾಗಿ ಸೋಮವಾರ ಭೀಮಸಂದ್ರದ ಬಳಿ ಮಣ್ಣಿನಲ್ಲಿ ಪತ್ತೆಯಾಗಿದೆ. ಕಳೆದ ಮೂರು ದಿನಗಳ ಹಿಂದೆ ನಗರದಲ್ಲಿ ಸುರಿದ ಭಾರೀ ಮಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ಆಟೋ ಚಾಲಕ ಅಮ್ಜದ್ ಖಾನ್ ಅವರ ಮೃತದೇಹ ಶೋಧನಾ ಕಾರ್ಯವನ್ನು ಎನ್‍ಡಿಆರ್‍ಎಫ್ ತಂಡ, ಮಹಾನಗರ ಪಾಲಿಕೆ ಸಿಬ್ಬಂದಿ, ಅಗ್ನಿಶಾಮಕ ದಳದವರು ನಡೆಸಿದ್ದು, ಸೋಮವಾರ ಮಧ್ಯಾಹ್ನ 2.30 ರ ವೇಳೆಗೆ ಮಣ್ಣಿನಲ್ಲಿ ಹೂತಿಕೊಂಡಿದ್ದ ಶವವನ್ನು ಹಿಟಾಚಿ ಯಂತ್ರದ ಮೂಲಕ ಕಾರ್ಯಾಚರಣೆ ನಡೆಸಿ ಹೊರ ತೆಗೆಯಲಾಯಿತು. ಆಟೋ ಚಾಲಕ ಶವ ಪತ್ತೆಯಾದ ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿದ ಶಾಸಕ ಜ್ಯೋತಿಗಣೇಶ್ ಕುಟುಂಬದವರಿಗೆ ಸಾಂತ್ವನ ಹೇಳಿದರು. ನಂತರ ಮಾತನಾಡಿದ ಅವರು, ಮಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ಆಟೋ ಚಾಲಕನ ಮೃತದೇಹ ಎನ್‍ಡಿಆರ್‍ಎಫ್ ತಂಡ, ಅಗ್ನಿಶಾಮಕ ದಳ ಸಿಬ್ಬಂದಿಯ ಸತತ ಕಾರ್ಯಾಚರಣೆಯಿಂದಾಗಿ ಪತ್ತೆಯಾಗಿದೆ. ಆಟೋ ಚಾಲಕ ಕೊಚ್ಚಿ ಹೋಗಿದ್ದ ಸ್ಥಳದಿಂದ ಸುಮಾರು 1.05…
ತುಮಕೂರು: ಕೋವಿಡ್-19 ತಡೆಗಟ್ಟಲು ಲಸಿಕಾಕರಣ ಮುಂದುವರೆದಿದೆ. ಮೊದಲ ಎರಡು ಡೋಸ್ ಹಾಕಿಸಿಕೊಂಡು 60 ದಿನ ಕಳೆದ 18 ರಿಂದ 59 ವಯೋಮಾನದ ಎಲ್ಲರೂ ಹತ್ತಿರದ ಸರ್ಕಾರಿ ಲಸಿಕಾ ಕೇಂದ್ರಗಳಿಗೆ ತೆರಳಿ ಮುನ್ನೆಚ್ಚರಿಕಾ(ಬೂಸ್ಟರ್) ಡೋಸ್ ಪಡೆಯಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದರು. ಮುಖ್ಯ ಕಾರ್ಯದರ್ಶಿಯವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ನಡೆದ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಭಾಗವಹಿಸಿದ ನಂತರ ತಮ್ಮ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಮತ್ತೆ ಹೆಚ್ಚು ಕೋವಿಡ್ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ 75 ದಿನಗಳ ಕಾಲ ವಿಶೇಷ ಅಭಿಯಾನ ನಡೆಯಲಿದ್ದು, ಈಗಾಗಲೇ ಎರಡು ಡೋಸ್ ಪಡೆದು 60 ದಿನ ಆದವರು ಹತ್ತಿರದ ಲಸಿಕಾ ಕೇಂದ್ರಗಳಲ್ಲಿ ಬೂಸ್ಟರ್ ಡೋಸ್ ಪಡೆಯಬೇಕೆಂದರು. ಜಿಲ್ಲೆಯಲ್ಲಿ 12-14 ವಯೋಮಾನದ ಮಕ್ಕಳ ಲಸಿಕಾಕರಣ ಮೊದಲ ಡೋಸ್ ಶೇ.113.4ರಷ್ಟು, ಎರಡನೇ ಡೋಸ್ ಶೇ.87.6ರಷ್ಟು ಪೂರ್ಣಗೊಂಡಿದ್ದು, ಶಾಲಾ ಮುಖ್ಯೋಪಾಧ್ಯಾಯರು ಸಂಬಂಧಿಸಿದ ಬಿಇಓ ಅಧಿಕಾರಿಗಳ ಗಮನಕ್ಕೆ ತಂದು ಹತ್ತಿರದ ಲಸಿಕಾ ಕೇಂದ್ರಗಳಿಗೆ ತೆರಳಿ ಲಸಿಕೆಯನ್ನು ಹಾಕಿಸಬೇಕು.…
ತುಮಕೂರು: ದಾವಣಗೆರೆಯಲ್ಲಿ ಆಗಸ್ಟ್ 3 ರಂದು ಮಾಜಿ ಮುಖ್ಯಮಂತ್ರಿ, ರಾಜ್ಯ ವಿಧಾನಸಭೆಯ ವಿಪಕ್ಷನಾಯಕ ಸಿದ್ದರಾಮಯ್ಯ ಅವರ ಜನ್ಮದಿನದ ಅಮೃತೋತ್ಸವ (75 ಜನ್ಮದಿನಜೋತ್ಸವ) ಮತ್ತು ಸ್ವಾತಂತ್ರೋತ್ಸವದ ಅಮೃತ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ ಎಂದು ಅಮೃತೋತ್ಸವ ಆಚರಣಾ ಸ್ವಾಗತ ಸಮಿತಿಯ ಅಧ್ಯಕ್ಷರಾದ ಮಾಜಿ ಶಾಸಕ ಹಾಗೂ ತುಮಕೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಕೆ.ಎನ್.ರಾಜಣ್ಣ ತಿಳಿಸಿದರು. ನಗರದ ಕನ್ನಡಭವನದಲ್ಲಿ ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯನವರು ಎಲ್ಲ ಜಾತಿ, ಧರ್ಮ, ವರ್ಗಗಳಲ್ಲಿನ ತುಳಿತಕ್ಕೆ ಒಳಗಾದವರ, ಬಡವರ, ದೀನದಲಿತರ ನಾಯಕ ಅವರು ಆ ವರ್ಗದ ನಾಯಕರು, ಅವರು ಯಾವುದೇ ಜಾತಿ, ವರ್ಗ, ಪಂಗಡಕ್ಕೆ ಸೀಮಿತವಾದವರಲ್ಲ ಎಂದು ಅವರು ಹೇಳಿದರು. ಅಂತಹ ನಾಯಕನ ಜನ್ಮ ಅಮೃತೋತ್ಸವವನ್ನು ದಾವಣಗೆರೆಯಲ್ಲಿ ಪಕ್ಷತೀತವಾಗಿ ಅವರ ಅಭಿಮಾನಿಗಳು ಆಚರಿಸುತ್ತಿದ್ದಾರೆ ಎಂದರು. ಈ ಕಾರ್ಯಕ್ರಮ ಅಹಿಂದ ಶಕ್ತಿಯನ್ನು ಜಾಗೃತಗೊಳಿಸುವ ಕಾರ್ಯಕ್ರಮ ಯಾರ ವಿರುದ್ದವೂ ಅಲ್ಲ ಎಂದು ಸ್ಪಷ್ಠಪಡಿಸಿದ ಅವರು ರಾಜ್ಯದೆಲ್ಲೆಡೆಯಿಂದ ಐದು ಲಕ್ಷಕ್ಕೂ ಹೆಚ್ಚಿನ ಸಿದ್ದರಾಮಯ್ಯ ಅಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು ಸ್ವಾಗತ…
ಗುಬ್ಬಿ: ತಾಲ್ಲೂಕಿನಲ್ಲಿ ನಡೆದಿರುವ 450 ಎಕರೆ ಅಕ್ರಮ ಭೂ ದಾಖಲಾತಿ ವಂಚನೆ ಬಗ್ಗೆ ಯಾರೇ ತಪ್ಪು ಮಾಡಿದ್ದರು ಸಹ ಅವರಿಗೆ ಶಿಕ್ಷೆ ಯಾಗಬೇಕಿದೆ ಮೂಲ ರೈತರಿಗೆ ಅನ್ಯಾಯ ವಾಗಲು ಬಿಡುವುದಿಲ್ಲ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಪಂಚಾಕ್ಷರಿ ತಿಳಿಸಿದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿ ಸರಕಾರ ರೈತರ ಪರವಿದ್ದು ಅವರಿಗೆ ಯಾವುದೇ ರೀತಿಯ ಅನ್ಯಾಯವಾಗಲು ಬಿಡುವುದಿಲ್ಲ ಇದರ ಬಗ್ಗೆ ಕಂದಾಯ ಇಲಾಖೆ ಹೊರತು ಪಡಿಸಿ ಬೇರೆಯವರ ಯಾವುದೇ ಸಂಸ್ಥೆಯಿಂದ ತನಿಖೆಯನ್ನು ಸರ್ಕಾರ ಮಾಡುವಂತೆ ಒತ್ತಾಯ ಮಾಡುತ್ತೇವೆ. ಈಗಾಗಲೇ ಹಲವು ಅಧಿಕಾರಿಗಳನ್ನು ಕಾನೂನಿಗೆ ಒಳಪಡಿಸಿದೆ ಇನ್ನೂ ಹಲವು ಮದ್ಯವರ್ತಿ ಗಳನ್ನು ಶಿಕ್ಷೆಗೆ ಒಳಪಡಿಸಿದ್ದು ಇದರ ಬಗ್ಗೆ ಸೂಕ್ತ ತನಿಖೆ ಮಾಡುವಂತೆ ಸರ್ಕಾರಕ್ಕೆ ನಮ್ಮ ಪಕ್ಷದಿಂದ ಒತ್ತಾಯ ಮಾಡುತ್ತೇನೆ ಎಂದು ತಿಳಿಸಿದರು. ಮುಖಂಡ ಬೆಟ್ಟಸ್ವಾಮಿ ಮಾತನಾಡಿ ಕಾನೂನನ್ನು ಗಾಳಿಗೆ ತೂರಿರುವ ಶಾಸಕರು ಕೇವಲ ರಾಜಕೀಯಕ್ಕಾಗಿ ಹಣಕ್ಕಾಗಿ ಅಧಿಕಾರಿಗಳನ್ನು ಬಳಸಿಕೊಂಡು ತಮಗೆ ಹೇಗೆ ಬೇಕೋ ಹಾಗೆ ತಿದ್ದುಪಡಿ ಮಾಡಿಸಿರುವುದು ಹಾಗೂ…
ಗುಬ್ಬಿ: ತಾಲ್ಲೂಕಿನಲ್ಲಿ ನಡೆದಿರುವ ಸರ್ಕಾರಿ ಜಮೀನು ಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಎಸ್.ಡಿ ದಿಲೀಪ್ ಕುಮಾರ್ ಮಾಡಿರುವ ಆರೋಪಕ್ಕೆ ಶಾಸಕ ಎಸ್.ಆರ್ ಶ್ರೀನಿವಾಸ್ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಕಲಿ ದಾಖಲೆ ಸೃಷ್ಟಿಸಿ 450 ಎಕರೆ ಸರ್ಕಾರಿ ಜಮೀನು ಕಬಳಿಕೆ ಪ್ರಕರಣದಲ್ಲಿ ಶಾಸಕ ಶ್ರೀನಿವಾಸ್ ಎ1 ಆರೋಪಿ ಎಂದು ಬಿಜೆಪಿಯ ದಿಲೀಪ್ ಆರೋಪಿಸಿರುವುದು ಸರಿಯಲ್ಲ ಅವರಿಗೆ ಸರಿಯಾದ ಮಾಹಿತಿಯ ಕೊರತೆಯಿದೆ. 2004 ರಲ್ಲಿ ಕದ್ದು ಮೈನ್ಸ್ ಹೊಡೆದು ಅವರ 12 ಲಾರಿ ಹಾಗೂ ಹಿಟಾಚಿಯನ್ನು ಪೆÇಲೀಸರು ಸೀಜ್ ಮಾಡಿದ್ದರು. ಅವರನ್ನು ಬರೀ ಚಡ್ಡಿಯಲ್ಲಿ ಸ್ಟೇಷನ್‍ನಲ್ಲಿ ಕೂರಿಸಿದ್ದರು. ಅವಾಗ ಸ್ಟೇಷನ್‍ಗೆ ಹೋಗಿ ಬಿಡಿಸಿದ್ದು ನಾನು. ಆ ಮನುಷ್ಯ ಇವತ್ತು ಮಾತನಾಡುತ್ತಾನೆ ಎಂದು ಹಿಂದಿನ ಘಟನೆಯನ್ನು ಕೆದಕಿ ಕಿಡಿಕಾರಿದರು. ಇವಾಗ ಅರೆಸ್ಟ್ ಆಗಿರುವ ಆರೋಪಿ ಕರಿಯಣ್ಣ ಯಾರು? ನನ್ನ ಹಿಂದೆ ಇರುವವನಾ? ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಅಕ್ರಮ ಮಾಡಿರುವ ವಿಚಾರ ನನಗೆ ಮೊದಲು ಗೊತ್ತಾಯಿತು. ಆಗ…
ತುಮಕೂರು: ಭವಿಷ್ಯ ನಿಧಿ, ಸುಪ್ರೀಂಕೋರ್ಟ್ ಆದೇಶ ಪಾಲನೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ನಗರದ ಟೌನ್‍ಹಾಲ್‍ನಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಅಂಗನವಾಡಿ ಕಾರ್ಯಕರ್ತರು, ಗಾಜಿನ ಮನೆಯಲ್ಲಿ ಸಭೆ ನಡೆಸಿದ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ, ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕಮಲಮ್ಮ ಮಾತನಾಡಿ ಶಾಲಾ ಪೂರ್ವ ಶಿಕ್ಷಣದೊಂದಿಗೆ ಮಕ್ಕಳು, ಗರ್ಭೀಣಿಯರು, ತಾಯಂದಿರಿಗೆ ಆಹಾರ ಭದ್ರತೆ ಒದಗಿಸುವ ಪ್ರಮುಖ ಕೆಲಸ ಮಾಡುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಸರ್ಕಾರ ಅತ್ಯಲ್ಪ ಗೌರವ ಧನಕ್ಕೆ ಕೆಲಸ ಮಾಡುತ್ತಿದ್ದು, ಸುಪ್ರೀಂಕೋರ್ಟ್ ಆದೇಶದ ಅನ್ವಯ ಭವಿಷ್ಯ ನಿಧಿ ಸೇರಿದಂತೆ ಪಿಂಚಣಿ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಅಂಗನವಾಡಿ ನೌಕರರು ನಿವೃತ್ತರಾದರೆ ಇಡಗಂಟು ನೀಡುವ ಯೋಜನೆಯನ್ನು ಪ್ರಾರಂಭಿಸಲಾಗಿದ್ದು, ಈಗಿನ ಸರ್ಕಾರ ಇಡಗಂಟು ನೀಡುವುದಕ್ಕೆ ಅನುದಾನದ ಕೊರತೆ ಎನ್ನುತ್ತಿದೆ. ಸಮಾನಾಂತರ ಕೆಲಸಕ್ಕೆ ಸಮಾನ…










