ತುಮಕೂರು: ಪ್ರಧಾನಿ ನರೇಂದ್ರ ಮೋದಿಯವರ 8 ವರ್ಷದ ಸಾಧನೆಯ ಅಂಗವಾಗಿ ನಡೆದ ಸಮಾರಂಭದಲ್ಲಿ ಫಲಾನುಭವಿಗಳಿಗೆ ಇ-ಶ್ರಮ್ ಕಾರ್ಡ್ ವಿತರಣೆ ಮಾಡಿದ ಶಾಸಕ ಜಿ.ಬಿ.ಜ್ಯೋತಿಗಣೇಶ್, ಮೋದಿ ಸರ್ಕಾರದ ಸಾಧನೆ, ಯೋಜನೆಗಳನ್ನು ಜನರಿಗೆ ತಲುಪಿಸಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಮನವಿ ಮಾಡಿದರು. ನಗರದ 32ನೇ ವಾರ್ಡಿನ ಗೋಕುಲ ಬಡಾವಣೆಯಲ್ಲಿ ಭಾನುವಾರ ಸಂಜೆ ಜಿಲ್ಲಾ ಬಿಜೆಪಿಯಿಂದ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಸಾಧನೆಯ ಸಂಭ್ರಮ ಆಚರಿಸಲಾಯಿತು. ಮೋದಿ ಸರ್ಕಾರದ ಸಾಧನೆಯ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿದ ಶಾಸಕ ಬಿ.ಜಿ.ಜ್ಯೋತಿಗಣೇಶ್, ಇವತ್ತು ತುಮಕೂರು ನಗರ ಸ್ಮಾರ್ಟ್ ಸಿಟಿಯಾಗಿ ಅಭಿವೃದ್ಧಿಯಾಗುತ್ತಿರುವುದು ಮೋದಿಯವರು ಕೊಟ್ಟ ಕೊಡುಗೆ, ನಗರವನ್ನು ಸ್ಮಾರ್ಟ್ ಸಿಟಿ ಯೋಜನೆಗೆ ಆಯ್ಕೆ ಮಾಡಿ ನಾಗರೀಕರಿಗೆ ಅಗತ್ಯ ಸೌಲಭ್ಯ ನೀಡಲು ಸಹಕರಿಸಿದ ಪ್ರಧಾನಿಯವರ ಕೊಡುಗೆ ಶ್ಲಾಘನೀಯ ಎಂದರು. ಪ್ರಧಾನಿಯವರು ಎಲ್ಲಾ ವರ್ಗದವರಿಗೂ ಹಲವಾರು ಜನಪರ ಯೋಜನೆಗಳನ್ನು ನೀಡಿದ್ದಾರೆ. ಜನಸಾಮಾನ್ಯರಿಗೆ ಯೋಜನೆಯ ಪರಿಚಯ, ಫಲ ದೊರೆಯಬೇಕು. ಬಿಜೆಪಿ ಕಾರ್ಯಕರ್ತರು ಯೋಜನೆಗಳನ್ನು ಜನರಿಗೆ ತಿಳಿಸುವ ಕೆಲಸ ಮಾಡಬೇಕು. ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪಿಸಲು ಶ್ರಮಿಸಬೇಕು…
Author: News Desk Benkiyabale
ತುಮಕೂರು: ಜಿಲ್ಲೆಯಲ್ಲಿ ವಿದ್ಯಾರ್ಥಿ ಪಾಸ್‍ನ ವಿತರಣೆಯಲ್ಲಿ ಕೆಎಸ್‍ಆರ್‍ಟಿಸಿ ಅಧಿಕಾರಿಗಳು ವಿಳಂಬ ನೀತಿ ಅನುಸರಿಸುತ್ತಿದ್ದು, ಕೂಡಲೇ ಹೆಚ್ಚುವರಿ ಕೌಂಟರ್‍ಗಳನ್ನು ತೆರೆದು ಶಾಲಾ-ಕಾಲೇಜು ವಿದ್ಯಾರ್ಥಿಗಳು ಅನುಕೂಲ ಕಲ್ಪಿಸಬೇಕೆಂದು ಎನ್‍ಎಸ್‍ಯುಐ ವಿದ್ಯಾರ್ಥಿ ಸಂಘಟನೆಯೊಂದಿಗೆ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮುರಳೀಧರ ಹಾಲಪ್ಪ ಒತ್ತಾಯಿಸಿದರು. ನಗರದ ಬಸ್ ನಿಲ್ದಾಣದಲ್ಲಿ ಸಮಾವೇಶಗೊಂಡು ಕೆಎಸ್‍ಆರ್‍ಟಿಸಿ ಜಿಲ್ಲಾಧಿಕಾರಿ ಬಸವರಾಜು ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಶಾಲಾ-ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಬಸ್ ಪಾಸ್‍ಗಾಗಿಯೇ ದಿನಗಟ್ಟಲೆ ಕ್ಯೂನಲ್ಲಿ ನಿಲ್ಲುವಂತಾಗಿದೆ. ವಿದ್ಯಾರ್ಥಿಗಳು ಶಾಲಾ- ಕಾಲೇಜುಗಳಿಗೆ ಈಗತಾನೆ ಪ್ರವೇಶ ಪಡೆಯುತ್ತಿದ್ದಾರೆ. ಹಲವಾರು ವಿದ್ಯಾರ್ಥಿಗಳು ಕಾಲೇಜುಗಳಿಗೆ ಗೈರು ಹಾಜರಾಗಿ ಬಸ್ ಪಾಸ್ ಪಡೆಯಲು ದಿನಗಟ್ಟಲೇ ಕ್ಯೂ ನಿಲ್ಲುತ್ತಿದ್ದಾರೆ ಎಂದರು. ಕಾಲೇಜಿಗೆ ಸೇರಿದ ಪ್ರವೇಶ ಪತ್ರವಿದ್ದರೆ ಸಾಕೇ ಅಥವಾ ಮತ್ಯಾವುದಾದರೂ ದಾಖಲಾತಿ ಬೇಕಾ ಎಂಬುದನ್ನು ಕೆಎಸ್‍ಆರ್‍ಟಿಸಿ ಅಧಿಕಾರಿಗಳು ಸ್ಪಷ್ಟವಾಗಿ ವಿದ್ಯಾರ್ಥಿಗಳಿಗೆ ತಿಳಿಸಬೇಕು, ಇಲ್ಲಿಯವರೆಗೆ ಒಟ್ಟಾರೆ ಎಷ್ಟು ಪಾಸ್‍ಗಳು ವಿತರಣೆಯಾಗಬೇಕಿತ್ತು, ಇಲ್ಲಿಯವರೆಗೆ ಎಷ್ಟು ವಿತರಣೆಯಾಗಿವೆ ಎಂಬುದನ್ನು ಸ್ಪಷ್ಟಪಡಿಸಬೇಕೆಂದು ಒತ್ತಾಯಿಸಿದರು. ಕಾಲೇಜಿನಿಂದ ಡಿಪೋಗೆ ಮೂರ್ನಾಲ್ಕು ಸಲ ವಿದ್ಯಾರ್ಥಿಗಳು ಬಸ್‍ಪಾಸ್‍ಗಾಗಿ ಓಡಾಡುವಂತಹ ಪರಿಸ್ಥಿತಿ…
ತುಮಕೂರು: ನ್ಯಾ.ಎ.ಜೆ.ಸದಾಶಿವ ವರದಿ ಜಾರಿಗೆ ಒತ್ತಾಯಿಸಿ, ಮಾದಿಗ ದಂಡೋರ ರಾಷ್ಟ್ರೀಯ ಅಧ್ಯಕ್ಷ ಮಂದಕೃಷ್ಣ ಮಾದಿಗ ಅವರ ಸೂಚನೆಯಂತೆ ಇಂದು ಮಾದಿಗ ದಂಡೋರ ರಾಜ್ಯ ವಕ್ತಾರ ಎಂ.ವಿ.ರಾಘವೇಂದ್ರಸ್ವಾಮಿ ಅವರ ನೇತೃತ್ವದಲ್ಲಿ ಕ್ಯಾತ್ಸಂದ್ರ ಸರ್ಕಲ್‍ನಲ್ಲಿ ರಸ್ತೆ ತಡೆ ನಡೆಸಿದರು. ಶನಿವಾರ ಮಧ್ಯಾಹ್ನ 12:30ರ ಸುಮಾರಿಗೆ ಹತ್ತಾರು ಸಂಖ್ಯೆಯಲ್ಲಿದ್ದ ಮಾದಿಗ ದಂಡೋರ ಕಾರ್ಯಕರ್ತರು, ರಾಷ್ಟ್ರೀಯ ಹೆದ್ದಾರಿ ಹೊಸ 48 ರ ಕ್ಯಾತ್ಸಂದ್ರ ಸರ್ಕಲ್‍ಬಳಿ ರಸ್ತೆ ತಡೆ ನಡೆಸಿ, ಕೂಡಲೇ ಸರಕಾರ ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿಯನ್ನು ಜಾರಿಗೆ ತರಬೇಕೆಂದು ಆಗ್ರಹಿಸಿದರು. ಈ ವೇಳೆ ಮಾತನಾಡಿದ ಮಾದಿಗ ದಂಡೋರ ರಾಜ್ಯ ವಕ್ತಾರ ಎಂ.ವಿ.ರಾಘವೇಂದ್ರ, ಮಾದಿಗ ಸಮುದಾಯದ ನಿರಂತರ ಹೋರಾಟದ ಫಲವಾಗಿ 2004ರಲ್ಲಿ ಎಸ್.ಎಂ.ಕೃಷ್ಣ ಅವರು ಪರಿಶಿಷ್ಟ ಜಾತಿಯಲ್ಲಿರುವ 101 ಸಮುದಾಯಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹಂಚಿಕೆ ಮಾಡುವ ನಿಟ್ಟಿನಲ್ಲಿ ವೈಜ್ಞಾನಿಕ ವರದಿ ತಯಾರಿಸಲು ನ್ಯಾ.ಎ.ಜೆ.ಸದಾಶಿವ ಅವರ ನೇತೃತ್ವದಲ್ಲಿ ಆಯೋಗ ರಚಿಸಿದ್ದರು. ಸದರಿ ಆಯೋಗ 2011ರಲ್ಲಿ ವರದಿ ಸಲ್ಲಿಸಿದೆ.ಸರಕಾರಕ್ಕೆ ವರದಿ ಸಲ್ಲಿಕೆಯಾಗಿ 11 ವರ್ಷ ಕಳೆದರು ಸರಕಾರ ಸದರಿ ವರದಿಯನ್ನು…
ತುಮಕೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ನ್ಯಾ.ನಾಗಮೋಹನ್ ದಾಸ್ ವರದಿ ಜಾರಿಗೆ ಒತ್ತಾಯಿಸಿ 140 ದಿನಗಳಿಂದ ಬೆಂಗಳೂರಿನ ಪ್ರೀಡಂ ಪಾರ್ಕಿನಲ್ಲಿ ಅನಿರ್ಧಿಷ್ಟಾವಧಿ ಧರಣಿ ಕೈಗೊಂಡಿರುವ ರಾಜನಹಳ್ಳಿಯ ಶ್ರೀವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಗಳ ಕರೆಯ ಮೇರೆಗೆ ಜುಲೈ 11ರ ಸೋಮವಾರ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ ಮುತ್ತಿಗೆ ಹಾಕುವ ಕಾರ್ಯಕ್ರಮವನ್ನು ಕÀರ್ನಾಟಕ ಸ್ವಾಭಿಮಾನಿ ಎಸ್ಸಿ, ಎಸ್ಟಿ ಸಂಘಟನೆಗಳ ಒಕ್ಕೂಟ ಮತ್ತು ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಹೋರಾಟಗಾರರಾದ ಮೋಹನರಾಜ್ ತಿಳಿಸಿದ್ದಾರೆ. ನಗರದ ವಾಲ್ಮೀಕಿ ಸನಿವಾಸ ಪ್ರೌಢಶಾಲೆಯ ಆವರಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಾವಿರಾರು ವರ್ಷಗಳಿಂದ ಶೋಷಣೆ ಅನುಭವಿಸಿರುವ ಪರಿಶಿಷ್ಟ ಜಾತಿ ಮತ್ತು ಪಂಗಡಗಳು ಒಗ್ಗೂಡಿ ಈ ಹೋರಾಟವನ್ನು ರೂಪಿಸುತ್ತಿದ್ದು,ಇದು ನನ್ನ ಅಳಿವು ಉಳಿವಿನ ಪ್ರಶ್ನೆಯಾಗಿದೆ. ಸಂವಿಧಾನದ ಅಡಿಯಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು.ಆದರೆ ಭೂಮಿ, ಸಂಪತ್ತು ಹಂಚಿಕೆಯಲ್ಲಿ ಸಾಕಷ್ಟು ತಾರತಮ್ಯವಿದ್ದು, ಇದನ್ನು ಹೋಗಲಾಡಿಸುವ ಜಾರಿಗೆ…
ತುಮಕೂರು: ಬಿಜೆಪಿ ಸಂಘಟನೆಯನ್ನು ತಳಮಟ್ಟದಿಂದ ಕಾರ್ಯಕರ್ತರು, ಪ್ರಮುಖರು ಸಂಘಟಿಸಿದರೆ ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ತುಮಕೂರು ಜಿಲ್ಲೆಯ ಎಲ್ಲಾ ಹನ್ನೊಂದು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಯ ಶಾಸಕರನ್ನು ಗೆಲ್ಲಿಸಿಕೊಂಡು ಬರುವ ಮೂಲಕ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರವನ್ನು ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲಿದೆ ಎಂದು ಜಿಲ್ಲಾಧ್ಯಕ್ಷರಾದ ಹೆಚ್.ಎಸ್.ರವಿಶಂಕರ್ (ರವಿ ಹೆಬ್ಬಾಕ)ರವರು ತಿಳಿಸಿದರು. ಇವರು ತುಮಕೂರು ತಾಲ್ಲೂಕಿನ ಹೆಬ್ಬೂರಿನ ಹೊರವಲಯದಲ್ಲಿ ಶುಕ್ರವಾರ ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ನಡೆದ ಡಾ|| ಶ್ಯಾಮ್ ಪ್ರಸಾದ್ ಮುಖರ್ಜಿರವರ ಜೀವನ ಚರಿತ್ರೆ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ ಮಾತನಾಡುತ್ತ, ಜನಸಂಘದ ಸಂಸ್ಥಾಪಕ ಪ್ರಮುಖರಲ್ಲಿ ಒರ್ವರಾಗಿದ್ದ ಡಾ|| ಶ್ಯಾಮ್‍ಪ್ರಸಾದ್ ಮುಖರ್ಜಿ ದೇಶದ ಏಕತೆ, ಅಖಂಡತೆ, ಸಮಗ್ರತೆಗೆ ಅಂದೇ ಬುನಾದಿಯನ್ನು ಹಾಕಿ, ರಾಷ್ಟ್ರಪ್ರೇಮ-ರಾಷ್ಟ್ರಭಕ್ತಿಗೆ ಅಡಿಪಾಯವನ್ನು ಹಾಕಿ ಸಮಗ್ರ ಭಾರತದ ಅಭಿವೃದ್ಧಿ ಯೋಜನೆಯ ಪರಿಕಲ್ಪನೆಯನ್ನು ಪಕ್ಷದಲ್ಲಿ ಅಳವಡಿಸಿಕೊಳ್ಳುವಂತೆ ಕರೆ ನೀಡಿದ್ದರು ಎಂದರು. ಬಿಜೆಪಿ ರಾಜ್ಯ ಸಹ ವಕ್ತಾರ ವಿಕಾಸ್ ಪುತ್ತೂರುರವರು ಮುಖ್ಯ ಭಾಷಣಕಾರರಾಗಿ ಮಾತನಾಡುತ್ತಾ, ಸ್ವಾತಂತ್ರ್ಯ ಪೂರ್ವ…
ತುಮಕೂರು: ಹನ್ನೆರಡನೆಯ ಶತಮಾನದಲ್ಲಿ ರಚಿಸಲ್ಪಟ್ಟ ವಚನ ಸಾಹಿತ್ಯವು ಓಲೆಗರಿ, ತಾಲೆ ಎಲೆಗಳಲ್ಲಿತ್ತು. ಅಂತಹ ವಚನಗಳ ಕಟ್ಟನ್ನು ಸಂಗ್ರಹಿಸಿ, ಅಧ್ಯಯನ ಮಾಡಿ ಮುದ್ರಿಸಿ ಜಗತ್ತಿಗೆ ಪರಿಚಯಿಸಿದವರು ಡಾ.ಫಕೀರಪ್ಪ ಗುರುಬಸಪ್ಪ ಹಳಕಟ್ಟಿಯವರು ಎಂದು ಇತಿಹಾಸ ಸಂಶೋಧಕ ಡಾ.ಡಿ.ಎನ್ ಯೋಗಿಶ್ವರಪ್ಪ ತಿಳಿಸಿದರು. ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತುಮಕೂರು ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಅಖಿಲ ಭಾರತ ವೀರಶೈವ ಮಹಾಸಭಾ, ನಗರ ವೀರಶೈವ ಸಮಾಜ ಸೇವಾ ಸಮಿತಿ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಹಾಗೂ ಬಸವ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ವಚನ ಪಿತಾಮಹ ಡಾ.ಫ.ಗು ಹಳಕಟ್ಟಿ ಜನ್ಮದಿನದ ಹಿನ್ನೆಲೆಯ “ವಚನ ಸಾಹಿತ್ಯ ದಿನಾಚರಣೆಯಲ್ಲಿ” ಪಾಲ್ಗೊಂಡು ಅವರು ಮಾತನಾಡಿದರು. ವಕೀಲಿ ವೃತ್ತಿಯಲ್ಲಿದ್ದ ಹಳಕಟ್ಟಿಯವರು ಬಿಜಾಪುರದ ಹಳ್ಳಿಯೊಂದರಲ್ಲಿ ವಚನಗಳ ಕಟ್ಟೊಂದು ಸಿಕ್ಕಿತ್ತು. ಅದರಲ್ಲಿರುವ ಸಾಹಿತ್ಯವನ್ನು ನೋಡಿ ಆಶ್ಚರ್ಯಚಕಿತರಾಗಿ ಅವುಗಳನ್ನು ಅಧ್ಯಯನ ಮಾಡಿ ಅದನ್ನು ಜಗತ್ತಿಗೆ ಪರಿಚಯಿಸಬೇಕೆಂದು ಪಣತೊಟ್ಟು ಹಳ್ಳಿ-…
ತುಮಕೂರು: ಪ್ರಜಾಪ್ರಭುತ್ವದಲ್ಲಿ ಶಾಸಕಾಂಗ, ಕಾರ್ಯಾಂಗ ವ್ಯವಸ್ಥೆಯಡಿಯಲ್ಲಿ ಲೋಪಗಳದಾಗ ಅವುಗಳನ್ನು ವಿಮರ್ಶಿಸಿ ಸರಿಯಾದ ದಾರಿಗೆ ತರುವಲ್ಲಿ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮಗಳ ಪಾತ್ರ ಬಹುಮುಖ್ಯವಾದದ್ದು ಎಂದು ಶಾಸಕ ಜಿ.ಬಿ ಜ್ಯೋತಿಗಣೇಶ್ ತಿಳಿಸಿದರು. ತುಮಕೂರು ವಾರ್ತಾ ಭವನದಲ್ಲಿಂದು ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಜಿಲ್ಲಾ ಘಟಕ ವತಿಯಿಂದ ಏರ್ಪಡಿಸಲಾಗಿದ್ದ, 2022ನೇ ಸಾಲಿನ ‘ಪತ್ರಿಕಾ ದಿನಾಚರಣೆ’ಯನ್ನು ಗಿಡಕ್ಕೆ ನೀರು ಎರೆಯುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಪತ್ರಕರ್ತರು ಸಮಾಜಮುಖಿಯಾಗಿ ಕೆಲಸ ನಿರ್ವಹಿಸಬೇಕು. ಹಸಿರು ತುಮಕೂರಿಗಾಗಿ ಗಿಡಗಳನ್ನು ನೆಡುವುದು, ಉದ್ಯಾನವನಗಳನ್ನು ದತ್ತು ತೆಗೆದುಕೊಳ್ಳುವಂತಹ ಕೆಲಸಗಳಿಗೆ ಸಂಪೂರ್ಣ ಸಹಕಾರ ನೀಡುವಂತೆ ಕೋರಿದರು. ತುಮಕೂರು ಮಹಾನಗರಪಾಲಿಕೆ ಪೂಜ್ಯ ಮಹಾಪೌರರಾದ ಬಿ.ಜಿ.ಕೃಷ್ಣಪ್ಪ ಮಾತನಾಡಿ, ಮಾಧ್ಯಮಗಳು ಇಂದು ಅತೀ ವೇಗವಾಗಿ ಮುಂದುವರೆಯುತ್ತಿವೆ. ಪತ್ರಿಕೆಗಳು ವಾಚಕರಿಗೆಂದೇ ವಾಚಕರ ವಾಣಿಯನ್ನು ಮೀಸಲಿಟ್ಟ ಹಾಗೆ ವಿದ್ಯುನ್ಮಾನ ಮಾಧ್ಯಮಗಳು ಸಾಧನೆಯ ಹಾದಿಯಲ್ಲಿರುವವರ ಯಶೋಗಾಥೆಗೆಂದೇ ಸ್ವಲ್ಪ ಜಾಗವನ್ನು ಮೀಸಲಿಡುವುದರಿಂದ ಸಾರ್ವಜನಿಕರಿಗೆ ಉತ್ತೇಜನ ನೀಡಿದಂತಾಗುತ್ತದೆ ಎಂದು ಮಾಧ್ಯಮ ಮಿತ್ರರಿಗೆ ಸಲಹೆ ನೀಡಿದರು. ತುಮಕೂರು ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮ ವಿಭಾಗದ…
ತುಮಕೂರು: 75ನೇ ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿರುವ 2022-23ನೇ ಸಾಲಿನ ಮುಂಗಾರು ಹಂಗಾಮಿನ ಪ್ರಧಾನ ಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆಯ ಪ್ರಚಾರಾಂದೋಲನಕ್ಕೆ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಚಾಲನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆಯ ಸಹಭಾಗಿತ್ವದಲ್ಲಿ ಜುಲೈ 1 ರಿಂದ 7ರವರೆಗೆ 3ನೇ ಬೆಳೆವಿಮೆ ಸಪ್ತಾಹದ ಅಂಗವಾಗಿ ಪ್ರಚಾರ ಕೈಗೊಳ್ಳುವ ವಾಹನಗಳಿಗೆ ಚಾಲನೆ ನೀಡುವ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿತ್ತು. ಪ್ರಚಾರಾಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿಗಳು, ಇಂದಿನಿಂದ ಜುಲೈ7 ರವರೆಗೆ 3ನೇ ಬೆಳೆ ವಿಮೆ ವಾರವಾಗಿ ಅಭಿಯಾನವನ್ನು ಹಮ್ಮಿಕೊಂಡಿದ್ದು ಜಿಲ್ಲಾದ್ಯಂತ 22 ವಾಹನಗಳು ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿವೆ.ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ 16 ಬೆಳೆಗಳನ್ನು ಗುರುತಿಸಲಾಗಿದೆ ಎಂದರು. ಈ ಯೋಜನೆಯ ಲಾಭವನ್ನು ಎಲ್ಲ ರೈತರು ಪಡೆದುಕೊಳ್ಳಬೇಕು ಎಂಬ ಹಿನ್ನೆಲೆಯಲ್ಲಿ ವಿಮೆಗೆ ನೋಂದಣಿ ಮಾಡಿಸಲು ಕೃಷಿ ಇಲಾಖೆಯಿಂದ ಪ್ರಚಾರಕ್ಕೆ ಚಾಲನೆ ನೀಡಲಾಗಿದೆ ಎಂದರಲ್ಲದೇ…
ತುಮಕೂರು: ಮುನ್ಸಿಪಾಲ್ ಕಾರ್ಮಿಕರ ಸೇವೆಯನ್ನು ಏಕಕಾಲದಲ್ಲಿ ಖಾಯಂಗೊಳಿಸುವಂತೆ ಆಗ್ರಹಿಸಿ ರಾಜ್ಯ ಮುನಿಸಿಫಲ್ ಕಾರ್ಮಿಕರ ಸಂಘ, ಪೌರ ಕಾರ್ಮಿಕರ ಸಂಘ, ಪಾಲಿಕೆ ಆಟೋ ಚಾಲಕರು ಮತ್ತು ಸಹಾಯಕರ ಸಂಘ, ಜಿಲ್ಲಾ ನೀರು ಸರಬರಾಜು ನೌಕರರ ಸಂಘ ಹಾಗೂ ಪೌರ ಕಾರ್ಮಿಕರ ಜಂಟಿ ಹೋರಾಟ ಸಮಿತಿ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಇಂದಿನಿಂದ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಲಾಗಿದೆ. ನಗರದ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪೆಂಡಾಲ್ ಹಾಕಿಕೊಂಡು ಮುಷ್ಕರ ನಡೆಸುತ್ತಿರುವ ಪೌರ ಕಾರ್ಮಿಕರು ಏಕಕಾಲದಲ್ಲಿ ತಮ್ಮ ಸೇವೆಯನ್ನು ಯಾವುದೇ ತಾರತಮ್ಯ ಮಾಡದೆ ಖಾಯಂಗೊಳಿಸುವಂತೆ ಸರ್ಕಾರವನ್ನು ಒತ್ತಾಯಿಸುವ ಘೋಷಣೆಗಳನ್ನು ಕೂಗಿದರು. ರಾಜ್ಯದ ಎಲ್ಲಾ ನೇರ ಪಾವತಿ, ಗುತ್ತಿಗೆ ಪೌರಕಾರ್ಮಿಕರು, ದಿನಾಗೂಲಿ ಲೋಡರ್ಸ್, ಕಸದ ವಾಹನ ಚಾಲಕರು, ಒಳಚರಂಡಿ ಸ್ವಚ್ಛತಾ, ಪಾರ್ಕ್, ಸ್ಮಶಾನ, ಘನ ತ್ಯಾಜ್ಯ ಘಟಕ, ಯು.ಜಿ.ಡಿ ನೀರು ಸಂಸ್ಕರಣಾ ಘಟಕದ ಕಾರ್ಮಿಕರು, ನೀರು ಸರಬರಾಜು ನೌಕರರನ್ನು ಒಂದೇ ಬಾರಿಗೆ ಖಾಯಂಗೊಳಿಸುವಂತೆ ಮುಷ್ಕರ ನಿರತರು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಮಾತನಾಡಿದ ರಾಜ್ಯ ಮುನಿಸಿಫಲ್ ಕಾರ್ಮಿಕರ ಸಂಘದ ಖಜಾಂಚಿ…
ತುಮಕೂರು: ರಾಜಸ್ಥಾನದ ಉದಯ್‍ಪುರದ ಟೈಲರ್ ವೃತ್ತಿಯ ಕನ್ಹಯ್ಯಲಾಲ್‍ರವರನ್ನು ಮತಾಂಧ, ಜಿಹಾದಿ ಮಾನಸಿಕತೆಯನ್ನು ಹೊಂದಿದ್ದವರು ಭೀಕರ ಹತ್ಯೆ ಮಾಡಿದ್ದನ್ನ ಬಿಜೆಪಿ ಜಿಲ್ಲಾಧ್ಯಕ್ಷ ಹೆಚ್.ಎಸ್.ರವಿಶಂಕರ್ ಉಗ್ರವಾಗಿ ಖಂಡಿಸಿದ್ದಾರೆ. ಇವರು ಇಂದು ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ರಾಜಸ್ಥಾನದ ಕಾಂಗ್ರೆಸ್ ಆಡಳಿತ ಕಾರ್ಯ ವೈಖರಿಯ ಬಗ್ಗೆ ತೀವ್ರ ಅಸಮದಾನ ವ್ಯಕ್ತಪಡಿಸಿ, ನೂಪುರ್ ಶರ್ಮರವರ ಹೇಳಿಕೆಯನ್ನು ಬೆಂಬಲಿಸಿದ್ದ ಕನ್ಹಯ್ಯಲಾಲ್‍ಗೆ ಜೀವ ಬೆದರಿಕೆ ಇದ್ದುದರಿಂದ ಸ್ಥಳೀಯ ಪೋಲೀಸ್ ಠಾಣೆಗೆ ಹೋಗಿ ದೂರನ್ನು ನೀಡದ್ದರೂ, ಸೂಕ್ತ ಭದ್ರತೆ ನೀಡದೆ ಇದ್ದುದರಿಂದ ಮತಾಂಧ ಮುಸ್ಲಿಂ ವ್ಯಕ್ತಿಗಳಿಂದ ಹತ್ಯೆಯ ಬಗ್ಗೆ ವಿಷಾದಿಸಿ ರಾಜಸ್ಥಾನದ ಆಡಳಿದಲ್ಲಿ ದಿನನಿತ್ಯವೂ ಹಿಂದೂಗಳ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದ್ದರೂ, ಯಾವುದೇ ಕ್ರಮವಾಗದಿರುವುದೇ ಕನ್ಹಯ್ಯಲಾಲ್ ಭೀಕರ ಹತ್ಯೆಗೆ ಕಾರಣವಾಗಿದೆ ಎಂದರು. ಕಾಂಗ್ರೆಸ್‍ನವರು ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಪ್ರಕರಣದಲ್ಲಿ ರಾಹುಲ್ ಗಾಂಧೀಯನ್ನು ಇ.ಡಿ.ರವರು ಪ್ರಶ್ನಿಸುತ್ತಾರೆ ಎಂದುದಕ್ಕೆ ದೇಶಾದ್ಯಂತ ಹೋರಾಟ ನಡೆಸಿದರು. ಕಾಶ್ಮೀರದಲ್ಲಿ ಸ್ವಾತಂತ್ರ್ಯ ಬಂದ ನಂತರದಿಂದ ದಿನನಿತ್ಯವೂ ಕಾಶ್ಮೀರಿ ಪಂಡಿತರಿಗೆ ಕಿರುಕುಳ, ಹತ್ಯೆ, ಬೆದರಿಕೆಯನ್ನು ಜಿಹಾದಿ ಮನಸ್ಸಿನ ದೇಶದ್ರೋಹಿ ಮಾತಾಂದರು…











