Author: News Desk Benkiyabale

ತುಮಕೂರು: ಅಕ್ಷರ ಮತ್ತು ಆರ್ಥಿಕತೆಯಿಂದ ದೂರವೇ ಉಳಿದಿದ್ದ ದಲಿತ ಸಮುದಾಯದ ಸಬಲೀಕರಣಕ್ಕೆ ಸ್ವಾತಂತ್ರ ನಂತರದಲ್ಲಿ ಸರಕಾರಗಳು ಹಲವಾರು ಯೋಜನೆಗಳನ್ನು ಹಾಕಿಕೊಂಡಿವೆ. ಇವುಗಳ ಫಲವಾಗಿ ಅಕ್ಷರ ಮತ್ತು ಆರ್ಥಿಕ ವಿಚಾರದಲ್ಲಿ ದಲಿತ ಸಮುದಾಯಗಳು ಕ್ರಾಂತಿಯನ್ನೇ ಮಾಡಿವೆ ಎಂದು ಹಿರೇಮಠದ ಡಾ.ಶ್ರೀಶಿವಾನಂದ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ. ನಗರದ ಚಿಲುಮೆ ಪೊಲೀಸ್ ಸಮುದಾಯ ಭವನದಲ್ಲಿ ಶ್ರೀಬಸವೇಶ್ವರ ಸಹಕಾರ ಸಂಘ ಉದ್ಘಾಟನಾ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದ ಅವರು, ಬಹಳ ಕಾಲ ಅಕ್ಷರ ವಂಚಿತರಾಗಿ, ಆರ್ಥಿಕತೆಯ ಅರಿವೆ ಇಲ್ಲದ ಜನರಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಂತಹ ಮಹಾನ್ ವ್ಯಕ್ತಿಗಳು ಪ್ರವಾಹದ ವಿರುದ್ದ ಈಜಿ ಈ ದೇಶದ ದಲಿತರು ಸ್ವಾಭಿಮಾನದ ಬದುಕು ಕಟ್ಟಿಕೊಡಲು ಶ್ರಮಿಸಿದ್ದಾರೆ ಎಂದರು. ಮಹನೀಯರ ಹೇಳಿದ ರೀತಿಯಲ್ಲಿ ನಡೆದುಕೊಳ್ಳುವ ಮೂಲಕ ನಾವುಗಳ ಅವರನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕೆಲಸ ಮಾಡಬೇಕೆಂದರು. ಸಹಕಾರ ಸಂಘವೆಂಬುದು ಒಂದು ಟೀಮ್ ವರ್ಕ್.ಪರಸ್ವರ ಸಹಕಾರದಿಂದ ಒಂದು ಅರ್ಥಿಕ ಸಂಸ್ಥೆ ಬೆಳೆಯಲು ಸಾಧ್ಯ, ಎಲ್ಲಾ ರಂಗದಲ್ಲಿಯೂ ಒಳ್ಳೆಯದು ಇದೆ,ಕೆಟ್ಟದ್ದು ಇದೆ.ಅವುಗಳಲ್ಲಿ ಬದಲಾವಣೆಗಳನ್ನು ತಂದುಕೊಂಡು…

Read More

ತುಮಕೂರು ದೂರದೃಷ್ಟಿ ಮತ್ತು ನಾಡ ಪ್ರೇಮದಿಂದ ಬೆಂಗಳೂರನ್ನು ಕಟ್ಟಿದ ಹೆಮ್ಮೆಯ ಕನ್ನಡಿಗ ನಾಡಪ್ರಭು ಕೆಂಪೇಗೌಡರ ಸಾಧನೆ ನಮಗೆಲ್ಲ ಪ್ರೇರಣೆಯಾಗಬೇಕು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಸಿ.ಆಂಜಿನಪ್ಪ ತಿಳಿಸಿದರು. ನಗರದ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಸೋಮವಾರ ಏರ್ಪಡಿಸಿದ್ದ ನಾಡಪ್ರಭು ಕೆಂಪೇಗೌಡರ 513ನೇ ಜಯಂತ್ಯೋತ್ಸವ ಸಮಾರಂಭದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಾಡಪ್ರಭು ಕೆಂಪೇಗೌಡರು ಹಾಗೂ ಅವರ ಕುಟುಂಬ ಸಾಕಷ್ಟು ವರ್ಷಗಳು ಶ್ರಮಿಸಿ ತಮ್ಮ ಕನಸಿನ ರಾಜಧಾನಿ ಬೆಂಗಳೂರು ಸಾಮಾನ್ಯ ಜನರಿಗೆ ಆಸರೆಯಾಗಿರಲೆಂದು ಅಚ್ಚುಕಟ್ಟಾಗಿ ಎಲ್ಲಾ ವ್ಯವಸ್ಥೆಗಳೊಂದಿಗೆ ಕಟ್ಟಿಕೊಟ್ಟವರು ಎಂದರು. ಬೆಂಗಳೂರು ವಿಶಾಲವಾಗಿ ಬೆಳೆಯಬೇಕು. ಎಲ್ಲ ವರ್ಗದವರು ಒಗ್ಗಟ್ಟಿನಿಂದ ಬಾಳಬೇಕೆಂಬ ಆಶಯದಿಂದ ಕೆಂಪೇಗೌಡರು ಬೆಂಗಳೂರನ್ನು ಕಟ್ಟಿ ಬೆಳೆಸಿದರು. ರೈತರ ಬೆನ್ನೆಲುಬಾಗಿ ಕೆರೆಗಳನ್ನು ಕಟ್ಟಿದ ಶಕ್ತಿ ಕೆಂಪೇಗೌಡರದು. ಹಲವಾರು ದೇವಾಲಯಗಳು, ಮಹಾದ್ವಾರಗಳು, ಶಾಲೆಗಳನ್ನು ನಿರ್ಮಿಸಿದ ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತದೆ ಎಂದು ಹೇಳಿದರು. ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ಗೋವಿಂದರಾಜು ಮಾತನಾಡಿ, ಸುಮಾರು 560 ವರ್ಷಗಳ ಹಿಂದೆಯೇ ನಾಡಪ್ರಭು ಕೆಂಪೇಗೌಡರು ಬೆಂಗಳೂರನ್ನು…

Read More

ತುಮಕೂರು: ಜಾರಿ ನಿರ್ದೇಶನಾಲಯ ಯಾವುದೇ ಒಂದು ರಾಜಕೀಯ ಪಕ್ಷಕ್ಕೆ ಸೇರಿದ್ದಲ್ಲ. ವಿನಾ ಕಾರಣ ಇ.ಡಿ. ಮೇಲೆ ಗೂಬೆ ಕೂರಿಸುವ ಕೆಲಸ ಮಾಡುವುದು ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಡಿ.ವಿ. ಸದಾನಂದ ಗೌಡ ಕಾಂಗ್ರೆಸ್ ನಾಯಕರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ದೇಶದ ಸಂವಿಧಾನದಲ್ಲಿ ಹಲವು ತನಿಖಾ ಸಂಸ್ಥೆಗಳು ಸ್ವತಂತ್ರವಾಗಿ ಕೆಲಸ ಮಾಡುತ್ತಿವೆ. ಹಾಗೆಯೇ ಇ.ಡಿ., ಐ.ಟಿ. ಸೇರಿದಂತೆ ಹಲವು ತನಿಖಾ ಸಂಸ್ಥೆಗಳು ತಮ್ಮ ಕೆಲಸ ಮಾಡುತ್ತಿವೆ. ವಿನಾ ಕಾರಣ ಈ ಸಂಸ್ಥೆಗಳ ಮೇಲೆ ಗೂಬೆ ಕೂರಿಸಬಾರದು ಎಂದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಇಲಾಖೆ, ಸಂಸ್ಥೆಯ ಅಧಿಕಾರಿಗಳನ್ನು ರಾಜಕೀಯವಾಗಿ ನೋಡಬಾರದು. ಹಾಗೊಂದು ಒಂದು ವೇಳೆ ರಾಜಕೀಯವಾಗಿ ನೋಡುವುದಾದರೆ ಸರ್ಕಾರಗಳು ಬದಲಾದಾಗ ಅಧಿಕಾರಿಗಳು ಎಲ್ಲಿಗೆ ಹೋಗಬೇಕು, ಏನು ಮಾಡಬೇಕು ಎಂದು ಪ್ರಶ್ನಿಸಿದರು. ಕಾನೂನಿನ ಮೇಲೆ ವಿಶ್ವಾಸ ಹೊಂದಿರುವ ಪಕ್ಷ ನಮ್ಮದು. ಕಾನೂನು ನ್ಯಾಯ ಕೊಡುತ್ತದೆ ಎಂಬ ನಂಬಿಕೆಯನ್ನು ಹೊಂದಿದ್ದೇವೆ. ಯಾರೂ ಕೂಡಾ ಅದರ ವಿರುದ್ಧ ನಡೆಯುವಂತಿಲ್ಲ. ಯಾರಿಗೆ ಕಾನೂನು, ಸುಪ್ರೀಂ…

Read More

ತುಮಕೂರು: ತುಮಕೂರು ಜಿಲ್ಲೆಯನ್ನು ಗೆದ್ದರೆ, ಇಡೀ ರಾಜ್ಯವನ್ನು ಗೆದ್ದಂತೆ ಎನ್ನುವ ಮಾತಿದೆ,ಇಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಶಕ್ತಿ ಮೀರಿ ಶ್ರಮಿಸಬೇಕಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕರೆ ನೀಡಿದ್ದಾರೆ. ನಗರದ ಡಾ.ಹೆಚ್.ಎಮ್.ಗಂಗಾಧರಯ್ಯ ಮೆಮೋರಿಯಲ್ ಹಾಲ್‍ನಲ್ಲಿ ನಡೆದ ಕಾಂಗ್ರೆಸ್, ನವ ಸಂಕಲ್ಪ ಶಿಬಿರವನ್ನು ಉದ್ಘಾಟಿಸಿ ಮಾತನಾಡುತಿದ್ದ ಅವರು,ಜಿಲ್ಲೆಯಲ್ಲಿ ಎರಡಂಕಿಯ ಶಾಸಕರನ್ನು ಹೊಂದಬೇಕು, ಬಿಜೆಪಿ, ಜೆಡಿಎಸ್ ಸರಕಾರದ ಆಡಳಿತವನ್ನು ಜಿಲ್ಲೆಯ ಜನರು ನೋಡಿದ್ದಾರೆ, ಸಮರ್ಥ ಆಡಳಿತ ನೀಡಿರುವ ಕಾಂಗ್ರೆಸ್ ಯೋಜನೆ ಬಗ್ಗೆ ಮನೆಮನೆಗೆ ತಿಳಿಸಬೇಕೆಂದರು. ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು, ಸಿದ್ದರಾಮಯ್ಯ ನೇತೃತ್ವದ ಸರಕಾರ ಮಾಡಿದ ಕೆಲಸ ಡಬಲ್ ಇಂಜಿನ್ ಸರಕಾರ ಮಾಡುತ್ತಿಲ್ಲ, ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಚಿಂತನಾ ಮಂಥನ ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗುತ್ತಿದೆ.ದಿನಬಳಕೆಯ ವಸ್ತುಗಳ ಬೆಲೆ ಏರಿಕೆಯಾಗಿದೆ.ಆದರೆ ರೈತರು ಬೆಳೆದ ಹಣ್ಣು, ತರಕಾರಿ,ಹಾಲಿನ ದರ ಮಾತ್ರ ಏರಿಕೆ ಮಾಡುತ್ತಿಲ್ಲ ಸಾಮಾನ್ಯ ಜನರ ಬದುಕಿನಲ್ಲಿ ತಾರತಮ್ಯ ಇಂತಹ ಶಿಬಿರಗಳಲ್ಲಿ ಚರ್ಚೆ ಯಾಗಬೇಕು,ರಾಜ್ಯಮಟ್ಟದ ಸಾಮಾಜಿಕ,…

Read More

ತುಮಕೂರು: ಕೇಂದ್ರ ಸರ್ಕಾರ ಜಾರಿಗೊಳಿಸುತ್ತಿರುವ ಅಗ್ನಿಪಥ್ ಯೋಜನೆಯನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ರಾಮಕೃಷ್ಣ, ಮುರುಳೀಧರ ಹಾಲಪ್ಪ ನೇತೃತ್ವದಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಹಾಗೂ ಅಗ್ನಿಪಥ್ ಯೋಜನೆಯ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಕೂಡಲೇ ಅಗ್ನಿಪಥ್ ಯೋಜನೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿದರು. ಪ್ರತಿಭಟನಾಕಾರರನ್ನು ಉದ್ದೇಶಿಸಿದ ಮಾತನಾಡಿದ ಜಿಲ್ಲಾ ಕಾಂಗ್ರಸ್ ಅಧ್ಯಕ್ಷ ಆರ್. ರಾಮಕೃಷ್ಣ, ಕೇಂದ್ರದ ಬಿಜೆಪಿ ಸರ್ಕಾರ ಕೇಂದ್ರೀಯ ಸಂಸ್ಥೆಗಳನ್ನು ಅಡ್ಡಾದಿಡ್ಡಿ ಬೆಲೆಗೆ ಅವರಿಗೆ ಬೇಕಾದವರಿಗೆ ಮಾರಾಟ ಮಾಡುತ್ತಿದೆ. ದೇಶದ ಗಡಿಯಲ್ಲಿ ಕೆಲಸ ಮಾಡುವ ಸೈನಿಕರನ್ನು 4 ವರ್ಷ ಕೆಲಸ ಮಾಡಿ ಮನೆಗೆ ಹೋಗಿ ಎಂದರೆ ಏನರ್ಥ. ಇವರು ಬೇಕಾದರೆ 4 ವರ್ಷ ಕೆಲಸ ಮಾಡಿ ಮನೆಗೆ ಹೋಗಲಿ ಎಂದು ಆಕ್ರೋಶ ಹೊರ ಹಾಕಿದರು. ಬಿಜೆಪಿಯವರಿಗೆ ಉನ್ನತ ಹುದ್ದೆಗಳು ಬೇಕು, ಸವಲತ್ತುಗಳು ಬೇಕು. ಆದರೆ ಗಡಿಯಲ್ಲಿ ದೇಶ ಕಾಯುವ…

Read More

ತುಮಕೂರು: ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಾಡಪ್ರಭು ಕೆಂಪೇಗೌಡರ 513ನೇ ಜಯಂತಿಯನ್ನು ಜಿಲ್ಲಾಡಳಿತದಿಂದ ಸೋಮವಾರ ಸಾಂಕೇತಿಕವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕೆಂಪೇಗೌಡರ ಭಾವಚಿತ್ರಕ್ಕೆ ಪುಸ್ಪಾರ್ಚನೆ ಸಲ್ಲಿಸಿ ಮಾತನಾಡಿದ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಅವರು, ನಾಡಪ್ರಭು ಕೆಂಪೇಗೌಡರ ಕೊಡುಗೆ ಕರ್ನಾಟಕದ ವಿಶ್ವ ಭೂಪಟದಲ್ಲಿ ಗುರುತಿಸಿಕೊಂಡಿದ್ದು ಬೆಂಗಳೂರು ಮುಖಾಂತರ ಎಂದು ಎಲ್ಲರಿಗೂ ತಿಳಿದ ವಿಷಯ. ಬೆಂಗಳೂರಿನ ನಿರ್ಮಾತೃ, ಬೆಂಗಳೂರನ್ನು ಇದೇ ರೀತಿಯಲ್ಲಿ ಕಟ್ಟಬೇಕೆಂಬ ದೂರದೃಷ್ಠಿಯ ಕನಸನ್ನು ಹೊಂದಿದ್ದವರು ಎಂದು ಬಣ್ಣಿಸಿದರು. ಬೆಂಗಳೂರು ಸೇರಿದಂತೆ ಅವರು ಆಳಿದ ಜಿಲ್ಲೆಗಳಲ್ಲಿ ತುಮಕೂರು ಕೂಡ ನೇರವಾದ ಆಡಳಿತದಲ್ಲಿ ಒಳಪಟ್ಟಂತಹ ಜಿಲ್ಲೆಯಾಗಿದೆ. ಎಲ್ಲರಿಗೂ ಆಹಾರವನ್ನು ನೀಡುವಂತಹವರು ರೈತರು ಆ ರೈತರಿಗೆ ನಮ್ಮ ಜಿಲ್ಲೆಯಲ್ಲಿ ಕೆರೆಗಳನ್ನು ಕಟ್ಟಿ ಅನುಕೂಲ ಕಲ್ಪಿಸಿದಂತಹ ಮಹಾನ್ ವ್ಯಕ್ತಿ ಎಂದರೆ ಕೆಂಪೇಗೌಡರು ಎಂದರು. ಕೆಲವು ದೊಡ್ಡ ದೊಡ್ಡ ನಗರಗಳು ಸಮುದ್ರದ ತಟದಲ್ಲಿ ಅಪಾಯದಲ್ಲಿವೆ. ಆದರೆ ಬೆಂಗಳೂರು ನಗರ ನಿರ್ಮಾಣ ಮಾಡಿರುವುದು ಸಮುದ್ರ ತಟಕ್ಕಿಂತ 3000 ಅಡಿಗಳಷ್ಟು ಮೇಲ್ಬಾಗದಲ್ಲಿದೆ. ಭೂಕಂಪ ಆದರೂ ಸಹ ಅಷ್ಟು ಪ್ರಭಾವ ಬೀರುವುದಿಲ್ಲ, ಇಂತಹ ಪರಿಕಲ್ಪನೆಯನ್ನು ಹೊಂದಿ…

Read More

ತುಮಕೂರು: ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾದ ಜಲಜೀವನ ಮಿಷನ್ ಯೋಜನೆ ಯಸಸ್ವಿಯಾಗಬೇಕೆಂದರೆ ಸಮುದಾಯದ ಸಹಭಾಗಿತ್ವ ಮುಖ್ಯವಾಗಿರುತ್ತದೆ ಎಂದು ಕಾರ್ಯನಿರ್ವಾಹಕ ಅಧಿಕಾರಿ ಜೋಸೆಫ್ ತಿಳಿಸಿದರು. ಜಿಲ್ಲಾ ಪಂಚಾಯತ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಸ್ನೇಹ ಜೀವನ ಫೌಂಡೇಶನ್ (ಗುಬ್ಬಿ) ಇವರ ಸಹಯೋಗದಲ್ಲಿಂದು ಕುಣಿಗಲ್ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ಅಧ್ಯಕ್ಷರುಗಳಿಗೆ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರದ ಜೀವನ್ ಮಿಷನ್ ಯೋಜನೆಗೆ ಸಮುದಾಯದವರು ಸಹಕಾರ ನೀಡಬೇಕು. ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು. ಜಲಜೀವನ್ ಮಿಷನ್ ಕಾರ್ಯಕ್ರಮ ನಮ್ಮಲ್ಲಿ ತಡವಾಗಿ ಪ್ರಾರಂಭವಾಗಿದೆ ಕೇಂದ್ರ ಸರ್ಕಾರ 2024ರೊಳಗಾಗಿ ಪ್ರತಿ ಮನೆಗೆ ನಳ ಸಂಪರ್ಕ ನೀಡಿ ಶುದ್ಧ ನೀರನ್ನು ಒದಗಿಸಬೇಕು ಎಂಬ ಗುರಿ ಹೊಂದಿದೆ. ಇದಕ್ಕೆ ಎಲ್ಲಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಎಲ್ಲಾ ಗ್ರಾಮ ಪಂಚಾಯಿತಿ ಅಧ್ಯಕ್ಷರುಗಳು ಹೆಚ್ಚಿನ ಜವಾಬ್ದಾರಿ ವಹಿಸಬೇಕಾಗುತ್ತದೆ. ಜೀವನ್ ಮಿಷನ್ ಯೋಜನೆಯಡಿ ಪ್ರತಿ…

Read More

ತುಮಕೂರು: ಜಿಲ್ಲೆಯ ಗುಬ್ಬಿ ಪಟ್ಟಣದ ನರಸಿಂಹಮೂರ್ತಿ ಅಲಿಯಾಸ್ ಕುರಿ ಮೂರ್ತಿ ಕೊಲೆ ಪ್ರಕರಣದ 13 ಮಂದಿಯನ್ನು ಗುಬ್ಬಿ ಪೆÇಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಜೂನ್ 15 ರಂದು ಹಾಡು ಹಗಲೇ ರಸ್ತೆಯಲ್ಲಿ ಕುರಿ ಮೂರ್ತಿಯನ್ನು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆಗೈದು ಕೊಲೆಗಾರರು ತಲೆಮರೆಸಿಕೊಂಡಿದ್ದರು. ಏಳು ಮಂದಿ ಆರೋಪಿಗಳು ಗುಬ್ಬಿ ಪಟ್ಟಣದ ವರಾಗಿದ್ದು ಉಳಿದ ಆರು ಮಂದಿ ವಿವಿಧ ಜಿಲ್ಲೆಗಳವರೆಂದು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಿಯಲ್ ಎಸ್ಟೇಟ್ ವಿವಾದವೇ ಘಟನೆಗೆವೆನ್ನಲಾಗಿದೆ. ಶಿರಾ ಡಿವೈಎಸ್ಪಿ ಕುಮಾರಪ್ಪ ಇನ್ಸ್ ಪೆಕ್ಟರ್ ಗಳಾದ ನದಾಫ್, ಅವಿನಾಶ್, ರವಿಕುಮಾರ್ ಮತ್ತು ಸಿಬ್ಬಂದಿ ಆರೋಪಿಗಳನ್ನು ಪತ್ತೆ ಹಚ್ಚಲು ಶ್ರಮಿಸಿದ್ದಾರೆ. ಬೆಂಗಳೂರು ನಗರ ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಲ್ಲಿ ಆರು ಮಂದಿ ಆರೋಪಿಗಳು ರೌಡಿಶೀಟರ್ ಗಳೆಂದು ಹೇಳಲಾಗಿದೆ. ಆರೋಪಿಗಳನ್ನು ಪತ್ತೆ ಹಚ್ಚಿ ಬಂದಿಸಿ ಕೊಲೆ ಪ್ರಕರಣ ಬೆಳಕಿಗೆ ತರುವಲ್ಲಿ ಶ್ರಮಿಸಿದ ಡಿವೈಎಸ್ಪಿ ಕುಮಾರಪ್ಪ ಮತ್ತು ಸಿಬ್ಬಂದಿ ವರ್ಗದ ಕಾರ್ಯವೈಕರಿ ಬಗ್ಗೆ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಾಹುಲ್…

Read More

ತುಮಕೂರು: ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ಮಾರ್ಗದರ್ಶನದಂತೆ ಜೂನ್ 26ರ ಭಾನುವಾರ ಬೆಳಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರಗೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರುಗಳಿಗಾಗಿ ನವಚೈತನ್ಯ ಚಿಂತನಾ ಶಿಬಿರವನ್ನು ಶ್ರೀಸಿದ್ದಾರ್ಥ ಮೆಡಿಕಲ್ ಕಾಲೇಜು ಆವರಣದಲ್ಲಿರುವ ಡಾ.ಹೆಚ್.ಎಂ.ಗಂಗಾಧರಯ್ಯ ಮೆಮೋರಿಯಲ್ ಹಾಲ್‍ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ತುಮಕೂರು ಉಸ್ತುವಾರಿಗಳಾದ ವಿಧಾನಪರಿಷತ್ ಸದಸ್ಯ ರಮೇಶ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಕೆಪಿಸಿಸಿ ಅಧ್ಯಕ್ಷರ ಸೂಚನೆಯಂತೆ ರೈತರು, ಕಾರ್ಮಿಕರು, ಸಾರ್ವಜನಿಕರು ಹಾಗೂ ಯುವಜನತೆಯನ್ನು ಒಳಗೊಂಡು ಸಮಾಜದ ಎಲ್ಲಾ ವರ್ಗಗಳ ಬೇಡಿಕೆಗಳ ಕುರಿತು ಆರು ವಿಭಾಗಗಳಲ್ಲಿ ಚಿಂತನೆ ನಡೆಸಿ,ಅಂತಿಮ ನಿರ್ಣಯವನ್ನು ಸಂಜೆ ಪ್ರಕಟಿಸಲಿದ್ದೇವೆ.ಈ ಚಿಂತನ ಸಭೆಯಲ್ಲಿ ವ್ಯಕ್ತವಾದ ಮಾಹಿತಿಗಳನ್ನು ಆಧಾರಿಸಿ, ಮುಂಬರುವ 2023ರ ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷದ ಪ್ರಾಣಾಳಿಕೆಗಳು ಸಿದ್ದಗೊಳ್ಳಲಿವೆ ಎಂದರು. ನಡೆದ ಪೂರ್ವಭಾವಿ ಸಭೆಯಲ್ಲಿ ಕೈಗೊಳ್ಳಲಾದ ತೀರ್ಮಾನದಂತೆ ಆರು ಪ್ರಮುಖ ವಿಚಾರಗಳ ಕುರಿತು ಪ್ರತ್ಯೇಕ ತಲಾ 100 ಜನ ಸದಸ್ಯರನ್ನು ಒಳಗೊಂಡ ಸಮಿತಿಗಳನ್ನು ರಚಿಸಲಾಗಿದೆ. ಮಾಜಿ ಸಚಿವ ಟಿ.ಬಿ.ಜಯಚಂದ್ರ ನೇತೃತ್ವದಲ್ಲಿ ಅರ್ಥಿಕ ವ್ಯವಹಾರ…

Read More

ತುಮಕೂರು: ನಗರದ ಸರ್ವತೋಮುಖ ಅಭಿವೃದ್ಧಿಯ ಹೆಗ್ಗಳಿಕೆ ಪ್ರಧಾನಿ ನರೇಂದ್ರ ಮೋದಿಯವರ ಸ್ಮಾರ್ಟ್‍ಸಿಟಿ ಯೋಜನೆಗೆ ಸಲ್ಲಬೇಕು ಎಂದು ಶಾಸಕ ಜಿ.ಬಿ. ಜ್ಯೋತಿಗಣೇಶ್ ತಿಳಿಸಿದರು. ತುಮಕೂರು ನಗರ ಸ್ಮಾರ್ಟ್‍ಸಿಟಿ ಯೋಜನೆಗೆ ಆಯ್ಕೆಯಾಗದಿದ್ದರೆ ನಗರದ ಸ್ಥಿತಿ ಏನಾಗುತ್ತಿತ್ತು ಎಂಬುದನ್ನು ಊಹಿಸಲು ಸಾಧ್ಯವಾಗುತ್ತಿರಲಿಲ್ಲ. ಆದರೆ 2ನೇ ಹಂತದಲ್ಲಿ ತುಮಕೂರು ಸ್ಮಾರ್ಟ್‍ಸಿಟಿ ಯೋಜನೆಗೆ ಆಯ್ಕೆಯಾದ ನಂತರ ಸುಮಾರು 900 ಕೋಟಿ ರೂ. ವೆಚ್ಚದಲ್ಲಿ 128 ಅಭಿವೃದ್ಧಿ ಯೋಜನೆಗಳು ಪೂರ್ಣಗೊಂಡಿವೆ ಎಂದರು. ನಗರದ ಆಲದಮರ ಪಾರ್ಕ್‍ನಲ್ಲಿ ಏರ್ಪಡಿಸಿದ್ದ ಸ್ಮಾರ್ಟ್‍ಸಿಟಿ ಯೋಜನೆಯ 7ನೇ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇಶದಲ್ಲಿ 2015ರ ಜೂನ್ 25 ರಂದು ಸ್ಮಾರ್ಟ್‍ಸಿಟಿ ಯೋಜನೆ ಘೋಷಣೆಯಾಗಿ ಇಂದಿಗೆ 7 ವರ್ಷ ಸಂದಿದೆ. ಈ ಯೋಜನೆಗೆ ತುಮಕೂರು ಆಯ್ಕೆಯಾಗಿ 5 ವರ್ಷವಾಗಿದ್ದು, ನಗರದಲ್ಲಿ ಸುಮಾರು 151 ಅಭಿವೃದ್ಧಿ ಯೋಜನೆಗಳು ಚಾಲನೆಯಲ್ಲಿವೆ. ಹೊಸದಾಗಿ 27 ಯೋಜನೆಗಳು ಟೆಂಡರ್ ಹಂತದಲ್ಲಿದ್ದು, ಒಟ್ಟು 178 ಯೋಜನೆಗಳು ಸುಮಾರು 900 ಕೋಟಿ ರೂ. ವೆಚ್ಚದಲ್ಲಿ ನಡೆಯುತ್ತಿವೆ ಎಂದರು. ನಗರದ ಮಧ್ಯೆ ಭಾಗದಲ್ಲಿರುವ ಬಡಾವಣೆಗಳನ್ನು…

Read More