ತುಮಕೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು, 10ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಗುಬ್ಬಿ ತಾಲ್ಲೂಕಿನ ದೊಡ್ಡಗುಣಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಮೃತಪಟ್ಟಿರುವ ದುರ್ದೈವಿಗಳನ್ನು ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕಂದಿಕೆರೆ ಗ್ರಾಮದ ಗಿರೀಶ್ (37) ಹಾಗೂ ಮಾನ್ಯ (17) ಎಂದು ಗುರುತಿಸಲಾಗಿದೆ. ಬಸ್‍ನಲ್ಲಿದ್ದ ಪ್ರಯಾಣಿಕರ ಪೈಕಿ 10ಕ್ಕೂ ಅಧಿಕ ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಗುಬ್ಬಿ ಮತ್ತು ತುಮಕೂರು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ಕೊಂಡೊಯ್ದು ದಾಖಲಿಸಲಾಗಿದೆ. ಗಾಯಗೊಂಡಿರುವವರಲ್ಲಿ ರಾಕೇಶ್ (21) ಎಂಬುವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಇಂದು ಬೆಳಿಗ್ಗೆ ಕಂದಿಕೆರೆ ಗ್ರಾಮದಿಂದ ಗಿರೀಶ್ ಮತ್ತು ಮಾನ್ಯ ಅವರು ಕಾಲೇಜು ದಾಖಲಾತಿಗಾಗಿ ತುಮಕೂರಿನತ್ತ ಕಾರಿನಲ್ಲಿ ಬರುತ್ತಿದ್ದರು. ಮಾರ್ಗಮಧ್ಯೆ ಗುಬ್ಬಿ ಸಮೀಪ ದೊಡ್ಡಗುಣಿ ಬಳಿ ಕಾರು ಬರುತ್ತಿದ್ದಾಗ ತುಮಕೂರು ಕಡೆಯಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ರಸ್ತೆ ವಿಭಜಕ ದಾಟಿ ಕಾರಿಗೆ ಅಪ್ಪಳಿಸಿದೆ. ಬಸ್ ಡಿಕ್ಕಿ ಹೊಡೆದ…
Author: News Desk Benkiyabale
ತುಮಕೂರು: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ನಿಮಿತ್ತ ಮಾಯಸಂದ್ರ ಗ್ರಾಮದಲ್ಲಿ ರಾತ್ರಿ ವಾಸ್ತವ್ಯ ಹೂಡಿದ್ದ ಕಂದಾಯ ಸಚಿವ ಆರ್. ಅಶೋಕ್ ಅವರು ದಲಿತರ ಮನೆಯಲ್ಲಿ ಉಪಹಾರ ಸೇವಿಸಿದರು. ಮಾಯಸಂದ್ರದ ಆದಿಚುಂಚಗಿರಿಯ ಮಠದ ಶಾಲೆಯ ಆಶ್ರಮದಲ್ಲಿ ಶಾಸಕ ಮಸಾಲೆ ಜಯರಾಂ, ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್, ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪ, ಉಪವಿಭಾಗಾಧಿಕಾರಿಗಳಾದ ಅಜಯ್ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ವಾಸ್ತವ್ಯ ಹೂಡಿದ್ದರು. ಅಧಿಕಾರಿಗಳೊಂದಿಗೆ ಗ್ರಾಮದ ಸುತ್ತಾಟ ನಡೆಸಿದ ಸಚಿವ ಅಶೋಕ್ ಅವರು ಬೆಳಿಗ್ಗೆ ಮಾಯಸಂದ್ರದ ಗೂಡಂಗಡಿಗೆ ತೆರಳಿ ಚಹಾ ಸೇವಿಸಿದರು. ನಂತರ ದಲಿತ ಕೇರಿಗೆ ತೆರಳಿದ ಸಚಿವರು ದಲಿತ ಕುಟುಂಬದ ವಿನೋದ್ ಎಂಬುವರ ಮನೆಗೆ ತೆರಳಿ ಅವರ ಮನೆಯಲ್ಲಿ ಸಿದ್ದಪಡಿಸಿದ್ದ ಅಕ್ಕಿರೊಟ್ಟಿ, ಹುಚ್ಚೆಳ್ಳು ಚಟ್ನಿ, ಕೇಸರಿಬಾತ್, ಉಪ್ಪಿಟ್ಟು ಹಾಗೂ ಚಿತ್ರಾನ್ನ ಸವಿದರು. ದಲಿತರ ಕೇರಿಗೆ ರಸ್ತೆ ನಿರ್ಮಾಣ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಅಶೋಕ್ ಅವರು, ಈ ದಲಿತ ಕೇರಿಯಲ್ಲಿ ಸುಮಾರು 80 ಮನೆಗಳಿದ್ದು, ರಸ್ತೆ ಅಭಿವೃದ್ಧಿಯಾಗದಿರುವುದು ಗಮನಕ್ಕೆ ಬಂದಿದೆ. ಹಾಗಾಗಿ ಈ…
ತುಮಕೂರು: ಮೊಸರಲ್ಲಿ ಕಲ್ಲು ಹುಡುಕುವುದು, ಟೀಕೆ ಮಾಡುವುದೇ ವಿರೋಧ ಪಕ್ಷಗಳ ಕೆಲಸ. ಪಠ್ಯ ಪುಸ್ತಕಗಳ ಪರಿಷ್ಕರಣೆ ವಿಚಾರದಲ್ಲಿ ನೂರಕ್ಕೆ ನೂರರಷ್ಟು ರಾಜಕಾರಣ ಮಾಡುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ಇಂದಿಲ್ಲಿ ವಾಗ್ದಾಳಿ ನಡೆಸಿದರು. ಕೆಲವರಿಗೆ ಸರ್ಕಾರದ ನೆಗೆಟಿವ್ ಹುಡುಕುವುದೇ ಕಾಯಕವಾಗಿದೆ. ಅವರಿಗೆ ಬೇರೆ ಕೆಲಸ ಇಲ್ಲ. ಸರ್ಕಾರ ಮಾಡಿರುವ ಒಳ್ಳೆಯ ಕೆಲಸಗಳನ್ನು ಅವರು ನೋಡುವುದೇ ಇಲ್ಲ ಎಂದು ವಿಪಕ್ಷಗಳ ವಿರುದ್ಧ ಹರಿಹಾಯ್ದರು. ಮಾಯಸಂದ್ರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ ಪಠ್ಯ ಪುಸ್ತವನ್ನು ಇನ್ನು ಯಾರು ಓದೇ ಇಲ್ಲ. ಆದರೂ ಕುವೆಂಪು ರವರ ವಿಚಾರವನ್ನು ಮುಂದಿಟ್ಟುಕೊಂಡು ದೊಡ್ಡ ಸದ್ದು ಮಾಡುತ್ತಿದ್ದಾರೆ. ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಕುವೆಂಪು ಅವರ ವಿಚಾರಕ್ಕೆ ಸಂಬಂಧ ಪಟ್ಟ ಪಠ್ಯವನ್ನು 8 ಪ್ಯಾರಕ್ಕೆ ಮಾಡಿದ್ದೆವು. ಆದರೆ ಸಿದ್ದರಾಮಯ್ಯ ಸರ್ಕಾರ ಬಂದ ಅದರಲ್ಲಿ ಒಂದು ಪ್ಯಾರ ಕಡಿತ ಮಾಡಿ 7 ಪ್ಯಾರಕ್ಕೆ ಇಳಿಸಿದ್ದರು. ಆದರೆ ಮತ್ತೆ ಬಿಜೆಪಿಯ ಬಿ.ಸಿ. ನಾಗೇಶ್ ಶಿಕ್ಷಣ ಸಚಿವರಾದ ಮೇಲೆ ಕುವೆಂಪುರವರ ಪಠ್ಯವನ್ನು…
ತುಮಕೂರು: ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಮಾಯಸಂದ್ರ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿರುವ ಗ್ರಾಮ ವಾಸ್ತವ್ಯದ ಸವಿ ನೆನಪಿಗಾಗಿ ಮಾಯಸಂದ್ರ ಗ್ರಾಮದ ಅಭಿವೃದ್ಧಿ ಕೆಲಸಕ್ಕೆ 1 ಕೋಟಿ ರೂ.ಗಳನ್ನು ಬಿಡುಗಡೆ ಮಾಡುವುದಾಗಿ ಕಂದಾಯ ಸಚಿವರಾದ ಆರ್. ಆಶೋಕ್ ಅವರು ಇಂದಿಲ್ಲಿ ಘೋಷಿಸಿದರು. ತುರುವೇಕೆರೆ ತಾಲ್ಲೂಕು ಮಾಯಸಂದ್ರ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂದು ನಡೆಯಲಿರುವ ಗ್ರಾಮ ಸಭೆಯಲ್ಲಿ ಒಂದು ಕೋಟಿ ರೂ.ಗಳನ್ನು ಯಾವ ಕಾಮಗಾರಿಗೆ ಬಳಸಿಕೊಳ್ಳಬೇಕು ಎಂಬುದನ್ನು ತೀರ್ಮಾನಿಸಲಾಗುವುದು ಎಂದರು. ರಾಜ್ಯದ ಜನತೆ ಪಿಂಚಣಿ, ವಿಧವಾ ವೇತನ, ವೃದ್ಧಾಪ್ಯ ವೇತನ ಮುಂತಾದ ಯೋಜನೆಗಳಿಗೆ ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರರ ಕಚೇರಿಗೆ ಅಲೆಡಾಡಬೇಕಿತ್ತು. ಗ್ರಾಮಸ್ಥರ ಈ ಅಲೆದಾಟವನ್ನು ತಪ್ಪಿಸಲೆಂದೇ ಜಿಲ್ಲಾಧಿಕಾರಿ, ತಹಶೀಲ್ದಾರ್ ಸೇರಿದಂತೆ ಎಲ್ಲ ಇಲಾಖೆಗಳ ಅಧಿಕಾರಿಗಳನ್ನು ಗ್ರಾಮದ ಮನೆ ಬಾಗಿಲಿಗೆ ಕರೆತರುವ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಕಂದಾಯ ಇಲಾಖೆಯಲ್ಲಿ ಇದೊಂದು ಕ್ರಾಂತಿಕಾರಕ ಪರಿವರ್ತನೆ ತರಲಾಗಿದೆ. ಇದಲ್ಲದೆ ಜಿಲ್ಲಾಧಿಕಾರಿಗಳು ಪ್ರತಿ…
ತುಮಕೂರು: ಸರಕಾರಿ ಶಾಲೆಗಳು ಸಶಕ್ತವಾದರೆ, ಕಾನ್ವೆಂಟ್ ಪಿಡುಗಿನಿಂದ ಜನಸಾಮಾನ್ಯರನ್ನು ರಕ್ಷಿಸಬಹುದಾಗಿದೆ ಎಂದು ತುಮಕೂರು ಮೇಯರ್ ಬಿ.ಜಿ.ಕೃಪ್ಷಪ್ಪ ಅಭಿಪ್ರಾಯ ಪಟ್ಟಿದ್ದಾರೆ. ನಗರದ ಶಿರಾಗೇಟ್ ಉತ್ತರ ಬಡಾವಣೆಯ ಹಿರಿಯ ಮಾದರಿ ಪಾಠಶಾಲೆ ಮಕ್ಕಳಿಗೆ ಕೆ.ಎನ್.ಆರ್.ಅಭಿಮಾನಿ ಬಳಗದ ವತಿಯಿಂದ ಆಯೋಜಿಸಿದ್ದ ಲೇಖನ ಸಾಮಗ್ರಿಗಳ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದ ಅವರು, ದಾನಿಗಳು, ಸಂಘ ಸಂಸ್ಥೆಗಳು ಇಂತಹ ಸರಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ಕೈಜೋಡಿಸಿದರೆ ದೇಶಕ್ಕೆ ಉತ್ತಮ ಪ್ರಜೆಗಳನ್ನು ಕೊಡುಗೆಯಾಗಿ ನೀಡಬಹುದೆಂದರು. ಸರಕಾರ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಾ ಬಂದಿದೆ. ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಶೂಗಳನ್ನು ನೀಡುವುದರ ಜೊತೆಗೆ, ಮಧ್ಯಾಹ್ನದ ಬಿಸಿಯೂಟ, ಹಾಲು ಇನ್ನಿತರ ಸವಲತ್ತುಗಳನ್ನು ನೀಡಿ ವಿದ್ಯೆಗೆ ಪೆÇ್ರೀತ್ಸಾಹ ನೀಡುವ ಕೆಲಸ ಮಾಡುತ್ತಿದೆ. ಹಾಗಾಗಿ ಮಕ್ಕಳ ಗೈರುಹಾಜರಿ ಕಡಿಮೆಯಾಗಿದೆ. ಸದರಿ ಶಾಲೆಯ ಅಭಿವೃದ್ದಿಗೆ ಪಾಲಿಕೆ ವತಿಯಿಂದ ದೊರೆಯುವ ಎಲ್ಲಾ ಸೌಲಭ್ಯಗಳನ್ನು ದೊರಕಿಸಿಕೊಡುವ ಭರವಸೆಯನ್ನು ಮೇಯರ್ ಕೃಷ್ಣಪ್ಪ ನೀಡಿದರು. ಕಾರ್ಯಕ್ರಮ ಉದ್ಘಾಟಿಸಿದ ಉತ್ತರ ಬಡಾವಣೆ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ.ಉಪಾಧ್ಯಕ್ಷೆ ಜಬೀನಾ ಮಾತನಾಡಿ,ಬಡ ಮಕ್ಕಳೇ ಒದುವ ಈ…
ತುಮಕೂರು: ಯುವ ಪೀಳಿಗೆಗೆ ದೇಶವನ್ನು ಮುನ್ನಡೆಸುವ ಜವಾಬ್ದಾರಿ ಹೊರಿಸುವಾಗ ಅವರಿಗೆ ಯಾವ ರೀತಿಯ ಶಿಕ್ಷಣ ನೀಡಬೇಕು ಎಂಬ ಆಲೋಚನೆ ಅಗತ್ಯ. ಅವರಲ್ಲಿ ದೇಶಾಭಿಮಾನ, ಸಾಮಾಜಿಕ ಕಾಳಜಿ ತುಂಬುವ ಶಿಕ್ಷಣ ಕೊಡಬೇಕಾಗಿದೆ. ಈ ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದವರ ಕೊಡುಗೆ, ಆಶಯಗಳನ್ನು ಪರಿಚಯಿಸಬೇಕಾಗಿದೆ. ತಾನು ಈ ದೇಶಕ್ಕಾಗಿ, ಈ ಸಮಾಜಕ್ಕಾಗಿ ಏನು ಮಾಡಬೇಕೆಂಬ ಚಿಂತನೆಯ ಶಿಕ್ಷಣವನ್ನು ನಮ್ಮ ಮಕ್ಕಳಿಗೆ ಕೊಡಬೇಕು ಎಂದು ಕುಡಚಿ ಶಾಸಕ ಪಿ.ರಾಜೀವ್ ಹೇಳಿದರು. ನಗರದ ಕನ್ನಡ ಭವನದಲ್ಲಿ ಶುಕ್ರವಾರ ಸಂಜೆ ಚಿಂತಕರ ಚಾವಡಿ ಏರ್ಪಡಿಸಿದ್ದ ಪಠ್ಯ ರಾಜಕಾರಣ ಕಾಳಜಿಯೇ? ಲೆಕ್ಕಾಚಾರವೇ? ಎಂಬ ವಿಷಯ ಕುರಿತ ವಿಚಾರ ಸಂಕಿರಣದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದ ಅವರು, ನಮ್ಮ ದೇಶದ ಆಸ್ಮಿತೆ, ಸಂಸ್ಕøತಿ, ಆಚಾರ ವಿಚಾರಗಳನ್ನು ಅವಹೇಳನ ಮಾಡಿದ, ಇತಿಹಾಸದ ಸತ್ಯ ಮರೆಮಾಚಿದ್ದ ಈವರೆಗಿನ ಪಠ್ಯ ಸಮಿತಿಗಳು ಮಾಡಿದ್ದ ರಾದ್ಧಾಂತ ಈಗ ಎಲ್ಲರಿಗೂ ಗೊತ್ತಾಗಿದೆ. ನಮ್ಮ ಮಕ್ಕಳು ಯಾವ ರೀತಿಯ ಶಿಕ್ಷಣ ಕಲಿಯಬೇಕು ಎಂದು ಪೋಷಕರು ಚಿಂತಿಸುವತಾಗಿದೆ ಎಂದರು. ಸನಾತನ ಧರ್ಮದ ಭಾರತ…
ತುಮಕೂರು: ದ್ವಿತೀಯ ಪಿಯುಸಿ ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ತುಮಕೂರು ನಗರದ ವಿದ್ಯಾವಾಹಿನಿ ಸ್ವತಂತ್ರ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಸಹನ ಜಿಲ್ಲೆಗೆ ಟಾಪರ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 600ಕ್ಕೆ 595 ಅಂಕಗಳನ್ನು ಪಡೆದಿರುವ ಸಹನ ಜಿಲ್ಲೆಗೆ ಪ್ರಥಮ ಹಾಗೂ ರಾಜ್ಯಕ್ಕೆ ಆರನೇ ರ್ಯಾಂಕ್ ಗಳಿಸಿ ಕೀರ್ತಿ ತಂದಿದ್ದಾರೆ. ಈಕೆಯು ತುಮಕೂರಿನ ಕುವೆಂಪು ನಗರದ ರಮೇಶ್ ಮತ್ತು ಶಶಿಲಕಾ ದಂಪತಿಗಳ ಪುತ್ರಿಯಾಗಿದ್ದು, ಇವರ ಸಾಧನೆಗೆ ನಗರ ಶಾಸಕ ಜ್ಯೋತಿಗಣೇಶ್ ಅಭಿನಂದನೆ ತಿಳಿಸಿದ್ದಾರೆ.
ತುಮಕೂರು: ಗುಜರಾತ್‍ನಲ್ಲಿ ನಡೆದ ಅಥ್ಲೇಟಿಕ್ಸ್ ಫೆಡರೇಶನ್ ಬಾಲಕರ ವಿಭಾಗದಲ್ಲಿ 110 ಮೀಟರ್ ಓಟವನ್ನು ಕೇವಲ 14.2 ಸೆಕೆಂಡ್‍ಗಳಲ್ಲಿ ಓಡಿ ಗುರಿಮುಟ್ಟಿ ಚಿನ್ನದ ಪದಕ ಪಡೆದು ಕೊಲಂಬಿಯದಲ್ಲಿ ನಡೆಯಲಿರುವ ವಿಶ್ವಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಭಾರತವನ್ನು ಪ್ರತಿನಿಧಿಸುವ ಅವಕಾಶವನ್ನು ತುಮಕೂರು ನಗರದ ಮಂಜುನಾಥ ಪುತ್ರ ಕೃಷಿಕ್ ಪಡೆದು ನಾಡಿಗೆ ಕೀರ್ತಿಯನ್ನು ತಂದಿದ್ದಾರೆ. ವಿಶ್ವಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ತುಮಕೂರು ನಗರದ ಕೃಷಿಕ್ ಅವರನ್ನ ತುಮಕೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ಮುಂಜಾನೆ ಗೆಳೆಯರ ಬಳಗದ ವತಿಯಿಂದ ಅಂತರಾಷ್ಟ್ರೀಯ ಹಿರಿಯ ಕ್ರೀಡಾಪಟು ಟಿ.ಕೆ ಆನಂದ್ ಮತ್ತು ಸದಸ್ಯರು ಅಭಿನಂದಿಸಿದರು. ಪತ್ರಕರ್ತ ಎಸ್ ನಾಗಣ್ಣ ಮಾತನಾಡಿ ಶತಮಾನಗಳಿಂದಲೂ ತುಮಕೂರು ನಗರದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಅನೇಕ ದಿಗ್ಗಜರು ಇಲ್ಲಿ ಇದ್ದಾರೆ 12 ವರ್ಷಗಳಿಂದ ತುಮಕೂರು ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದೆ ಇಂದಿನ ಮಕ್ಕಳು ಐಎಎಸ್ ಐಪಿಎಸ್ ಮತ್ತು ಇಂಜಿನಿಯರಿಂಗ್ ಪದವಿಗಳನ್ನು ಪಡೆದು ಉನ್ನತ ಹುದ್ದೆಗಳಿಗೆ ಆಸೆ ಪಡುತ್ತಿರುವ ಕಾಲಘಟ್ಟದಲ್ಲಿ ಕ್ರೀಡಾ ಕ್ಷೇತ್ರವನ್ನು ತನ್ನ ಉಸಿರಾಗಿಸಿಕೊಂಡು…
ಕೊರಟಗೆರೆ: ರೈತಪರ ನಾಯಕ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಣ್ಣ ವಿರುದ್ದ ಗುಬ್ಬಿ ಕ್ಷೇತ್ರದ ಶಾಸಕ ಶ್ರೀನಿವಾಸ್ ನೀಡಿರುವ ನಿಂದನೆಯೇ ಹೇಳಿಕೆ ಖಂಡನೀಯ. ಗುಬ್ಬಿ ಕ್ಷೇತ್ರದ ಶಾಸಕ ಶ್ರೀನಿವಾಸ್ ತಕ್ಷಣ ಜೆಡಿಎಸ್ ಕಾರ್ಯಕರ್ತರ ಕ್ಷಮೆಯಾಚನೆ ಮಾಡಬೇಕು ಎಂದು ಕೊರಟಗೆರೆ ಕ್ಷೇತ್ರದ ಮಾಜಿ ಶಾಸಕ ಪಿ.ಆರ್.ಸುಧಾಕರಲಾಲ್ ಆಗ್ರಹ ಮಾಡಿದರು. ಕೊರಟಗೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜಾತ್ಯಾತೀತಾ ಜನತಾದಳ ಪಕ್ಷದ ವತಿಯಿಂದ ಬುಧವಾರ ಏರ್ಪಡಿಸಲಾಗಿದ್ದ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದರು. ಗುಬ್ಬಿ ಕ್ಷೇತ್ರದಲ್ಲಿ ಜೆಡಿಎಸ್‍ನಿಂದ ಗೆದ್ದು ಸಚಿವ ಸ್ಥಾನ ಅನುಭವಿಸಿ ಈಗ ಪಕ್ಷದ ವರಿಷ್ಠರ ವಿರುದ್ದವಾಗಿ ಹೇಳಿಕೆ ನೀಡಿರುವುದು ಶೋಭೆ ತರುವುದಿಲ್ಲ. ಪಕ್ಷ ಬಿಡುವುದು ಅವರ ವೈಯಕ್ತಿಕ ವಿಚಾರ. ಆದರೇ ಪಕ್ಷವನ್ನು ನಿಂದನೆ ಮಾಡಿರುವುದೇ ಖಂಡನೀಯ. ರಾಜ್ಯದ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರ ಕ್ಷಮೆ ಕೇಳುಬೇಕು ಎಂದು ಒತ್ತಾಯ ಮಾಡಿದರು. ತುಮಕೂರು ಜೆಡಿಎಸ್ ಜಿಲ್ಲಾ ಕಾರ್ಯದರ್ಶಿ ಮಹಾಲಿಂಗಪ್ಪ ಮಾತನಾಡಿ ತುಮಕೂರು ಜಿಲ್ಲೆಯ ನಾಯಕತ್ವವನ್ನು ಜೆಡಿಎಸ್ ಪಕ್ಷದ ವರೀಷ್ಠರು ಶ್ರೀನಿವಾಸ್‍ಗೆ ನೀಡಿ ಗೌರವ ನೀಡಿದ್ದಾರೆ. ಪಕ್ಷದ ಚಿಹ್ನೆಯ ಮೂಲಕ ಶಾಸಕರಾಗಿ…
ತುಮಕೂರು: ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ ವಿವಿಧ ಬಡಾವಣೆಗಳ ಪ್ರಾಥಮಿಕ ಶಾಲೆಗಳ ಆವರಣದಲ್ಲಿ ಅಂಗನವಾಡಿ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ದುಸ್ಥಿತಿಯಲ್ಲಿರುವ ಅಂಗನವಾಡಿ ಕಟ್ಟಡಗಳನ್ನು ಗುರುತಿಸಿ ಸುಸಜ್ಜಿತವಾಗಿ ನಿರ್ಮಾಣ ಮಾಡಲಾಗುವುದು ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಹೇಳಿದರು. ನಗರದ 20ನೇ ವಾರ್ಡಿನ ಬಿ.ಎ.ಗುಡಿ ಪಾಳ್ಯದ ಸರ್ಕಾರಿ ಶಾಲೆ ಆವರಣದಲ್ಲಿ ನಿರ್ಮಿಸಲಾಗಿರುವ ಅಂಗನವಾಡಿ ಕಟ್ಟಡ ಉದ್ಘಾಟಿಸಿ, ಶಾಲಾ ಆವರಣದಲ್ಲೇ ಅಂಗನವಾಡಿಗಳನ್ನು ಸ್ಥಾಪಿಸಿದರೆ ಮಕ್ಕಳ ಮುಂದಿನ ಶಿಕ್ಷಣಕ್ಕೆ ಸೂಕ್ತ ವಾತಾವರಣ ರೂಪಿಸಿದಂತಾಗುತ್ತದೆ. ಶಾಲೆಯಿಂದ ದೂರ ಅಂಗನವಾಡಿಗಳು ಇರುವುದಕ್ಕೆ ಬದಲು ಶಾಲಾವರಣದಲ್ಲಿ ಇದ್ದರೆ ಉತ್ತಮ ಎಂದರು. ನಗರದ ಅನೇಕ ಕಡೆ ಅಂಗನವಾಡಿ ಕಟ್ಟಡಗಳು ದುಸ್ಥಿತಿಯಲ್ಲಿವೆ. ಅಗತ್ಯ ಸೌಕರ್ಯಗಳಿಲ್ಲದ ಕೊಟ್ಟಿಗೆಯಂತಿವೆ. ಅಂತಹ ಕಡೆ ಉತ್ತಮ ಕಟ್ಟಡ ಕಟ್ಟಲಾಗುವುದು ಎಂದು ಹೇಳಿದರು. ಸ್ಮಾರ್ಟ್ ಸಿಟಿ ಯೋಜನೆಯಡಿ 5-6 ಕೋಟಿ ರೂ.ಗಳನ್ನು ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಬಳಸಲಾಗುತ್ತದೆ. ಪ್ರತಿ ಕಟ್ಟಡಕ್ಕೆ ಸುಮಾರು 16 ಲಕ್ಷ ರೂ. ವೆಚ್ಚವಾಗುತ್ತದೆ ಎಂದು ಶಾಸಕರು ಹೇಳಿದರು. ಮೇಯರ್ ಬಿ.ಜಿ.ಕೃಷ್ಣಪ್ಪ, ಪಾಲಿಕೆ ಸದಸ್ಯರಾದ ಶ್ರೀನಿವಾಸ್, ನರಸಿಂಹಮೂರ್ತಿ, ಟೂಡಾ ಸದಸ್ಯ…











