ತುಮಕೂರು: ಸರ್ಕಾರದ ಬಹು ನಿರೀಕ್ಷಿತ “ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ” ಕಾರ್ಯಕ್ರಮವು ಜೂನ್ 18ರಂದು ಜಿಲ್ಲೆಯ ತುರುವೇಕೆರೆ ತಾಲ್ಲೂಕು ಮಾಯಸಂದ್ರ ಗ್ರಾಮದಲ್ಲಿ ನಡೆಯಲಿದ್ದು, ಕಂದಾಯ ಸಚಿವ ಆರ್.ಅಶೋಕ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ತಿಳಿಸಿದರು. ತಮ್ಮ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಕಂದಾಯ ಸಚಿವರು ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಲು ಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು. ಎಲ್ಲಾ ಇಲಾಖೆಗಳು ತಮ್ಮ ಇಲಾಖೆಯ ಪ್ರಯೋಜನಗಳನ್ನು ತಿಳಿಸಲು 30ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆದು ಮಾಹಿತಿ ನೀಡಬೇಕಲ್ಲದೇ ಫಲಾನುಭವಿಗಳನ್ನು ಕಾರ್ಯಕ್ರಮಕ್ಕೆ ಕರೆತರಬೇಕು ಎಂದು ಸೂಚಿಸಿದರು. ಆರೋಗ್ಯ ಇಲಾಖಾಧಿಕಾರಿಗಳು ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಬೇಕಲ್ಲದೆ ಶಿಬಿರದಲ್ಲಿ ಆಯುμÁ್ಮನ್ ಕಾರ್ಡು ವಿತರಣೆ ಹಾಗೂ ಕಣ್ಣಿನ ತಪಾಸಣೆ ನಡೆಸಿ ಕನ್ನಡಕಗಳನ್ನು ವಿತರಣೆ ಮಾಡಬೇಕು ಎಂದು ನಿರ್ದೇಶಿಸಿದರು. ಸಾರ್ವಜನಿಕರು ನೀಡುವ ಅಹವಾಲುಗಳನ್ನು ಸ್ವೀಕರಿಸುವ ಹಾಗೂ ಪರಿಹಾರ ಕಲ್ಪಿಸುವ ಸಂಬಂಧ…
Author: News Desk Benkiyabale
ಕೊರಟಗೆರೆ: ಬೆಂಗಳೂರು ಮೂಲದ ವ್ಯಕ್ತಿಯೋರ್ವ ಜಮೀನು ಕೊಂಡುಕೊಳ್ಳಲು ಕಾರಿನಲ್ಲಿ ಇಟ್ಟಿದ್ದ 15 ಲಕ್ಷ ರೂ. ಹಣವನ್ನು ಬಿಹಾರ್ ಮೂಲದ ಡ್ರೈವರ್ ಕೊರಟಗೆರೆ ಸರಹದ್ದಿನಲ್ಲಿ ಕದ್ದು ಪರಾರಿಯಾಗಿರುವ ಪ್ರಕರಣ ಕೊರಟಗೆರೆ police ತಂಡ ಆರೋಪಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರು ಮೂಲದ ಸತೀಶ್ ಎಂಬ ವ್ಯಕ್ತಿ ಕೊರಟಗೆರೆ ಪಟ್ಟಣದ ಓಲ್ಡ್ ಗೆರೆ ಕ್ರಾಸ್ ನ ಬಳಿ ಜಮೀನು ಕೊಳ್ಳಲು ಅಡ್ವಾನ್ಸ್ ನೀಡುವುದಕ್ಕಾಗಿ ತರಲಾಗಿದ್ದ 15ಲಕ್ಷ ರೂ ಹಣವನ್ನ ಆತನ ಡ್ರೈವರ್ ಬಿಹಾರ ಮೂಲದ ಬಿಪಿನ್ ಕೊರಟಗೆರೆ ಪಟ್ಟಣದ ಓಲ್ಡ್ ಗೆರೆ ಕ್ರಾಸ್ ನ ಬಳಿ ಕಾರಿನಲ್ಲಿ ಇಟ್ಟ ಹಣವನ್ನ ತೆಗೆದುಕೊಂಡು ಪರಾರಿಯಾಗಿದ್ದ ಪ್ರಕರಣದ ಆರೋಪಿಯನ್ನ ಇತ್ತೀಚಿಗೆ ಕೊರಟಗೆರೆ ಪೆÇಲೀಸ್ ತಂಡ ಸೆರೆ ಹಿಡಿದು ನ್ಯಾಯಾಂಗ ಬಂಧನಕ್ಕೆ ಕಳಿಸಿದ್ದಾರೆ. ಜಮೀನು ಕೊಳ್ಳಲು ಬೆಂಗಳೂರಿನ ಮೂಲದ ಸತೀಶ್ ಎಂಬ ವ್ಯಕ್ತಿ ಅಡ್ವಾನ್ಸ್ ನೀಡಲು 15 ಲಕ್ಷಣವನ್ನು ಕಾರಿನ ಡ್ರಾನಲ್ಲಿ ಇಟ್ಟು ಜಮೀನು ನೋಡಲು ಹೋದಾಗ ಡ್ರೈವರ್ ಗೆ ಹಣ ಇದೆ ಕಾರಿನಲ್ಲಿಯೇ ಕುಳಿತುಕೋ ಎಂದು ಹೇಳಿ ಪರಿಚಯಸ್ಥರ…
ತುಮಕೂರು ರೈತರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ, ದಬ್ಬಾಳಿಕೆ-ಕಿರುಕುಳ ಖಂಡಿಸಿ, ಬಗರ್ ಹುಕಂ ಸಾಗುವಳಿದಾರರ ಹಕ್ಕು ರಕ್ಷಣೆಗಾಗಿ ಜಿಲ್ಲಾಧಿಕಾರಿ ಕಛೇರಿ ಎದುರು ಜೂನ್ 14 ರಿಂದ ರೈತರ ಬೃಹತ್ ಅನಿರ್ದಿಷ್ಟ ಧರಣಿ ನಡೆಯಲಿದೆ. ದೌರ್ಜನ್ಯ, ದಬ್ಬಾಳಿಕೆ ಬಳಸಿ ಅರಣ್ಯ ಇಲಾಖೆ ಮೂಲಕ ಕಿತ್ತುಕೊಂಡಿರುವ ಬಗರ್ ಹುಕಂ ಸಾಗುವಳಿ ಭೂಮಿ ಮರಳಿಸಲು ,ಎಲ್ಲಾ ಬಗರ್ ಹುಕಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಲು ,ಸಾಗುವಳಿ ಮಂಜೂರಾತಿ ಆದೇಶ ಪಡೆದಿರುವ ಎಲ್ಲಾ ಬಗರ್ ಹುಕಂ ರೈತರಿಗೆ ದುರಸ್ತು ಮಾಡಿ ಪಹಣಿ ವಿತರಿಸಲು, ಬಗರ್ ಹುಕಂ ಸಕ್ರಮ ಕೋರಿ ಅರ್ಜಿ ಸಲ್ಲಿಸಲು ಅವಕಾಶವನ್ನು ವಿಳಂಬ ಮಾಡದೇ ಕಲ್ಪಿಸಲು ,ವಸತಿ ರಹಿತರಿಗೆ ಮನೆ-ನಿವೇಶನಕ್ಕಾಗಿ ಸರ್ಕಾರಿ ಭೂಮಿ ಲಭ್ಯ ಇಲ್ಲದ ಕಡೆ ಭೂ ಸ್ವಾಧೀನದ ಮೂಲಕ ಮನೆ -ನಿವೇಶನ ಒದಗಿಸಲು ,ವಿವಿಧ ಯೋಜನೆಗಳಿಗೆ ಭೂ ಸ್ವಾಧೀನಕ್ಕೆ ಒಳಗಾದ ಬಗರ್ ಹುಕಂ ಸಾಗುವಳಿದಾರರು ಸೇರಿದಂತೆ ಎಲ್ಲಾ ರೈತರಿಗೆ ಪರಿಹಾರದ ಹಣ ನೀಡಲು ಆಗ್ರಹಿಸಿ ಜೂನ್ 14 ರಿಂದ ತುಮಕೂರು ಜಿಲ್ಲಾಧಿಕಾರಿ ಕಛೇರಿ ಎದುರು…
ತುಮಕೂರು ಕೆಲವು ಪಠ್ಯಗಳಲ್ಲಿ ಇರಬಹುದಾದ ಸೂಕ್ಷ್ಮ ಸಂಕೀರ್ಣ ವಿಷಯಗಳ ಕುರಿತು ಪರಿಶೀಲಿಸಿ ವರದಿ ನೀಡುವುದಕ್ಕೆ ರಚಿಸಲಾದ ರೋಹಿತ್ ಚಕ್ರವರ್ತಿ ಅಧ್ಯಕ್ಷೀಯ ಸಮಿತಿ ತನಗೆ ವಹಿಸಿದ ಜವಾಬ್ದಾರಿಯನ್ನು ಮೀರಿ, ಪಠ್ಯ ಪುಸ್ತಕ ಪರಿಷ್ಕರಣೆಗೆ ಮುಂದಾದ ದುಷ್ಕøತ್ಯವನ್ನು ಭಾರತ ಕಮ್ಯುನಿಸ್ಟ್ ಪಕ್ಷ ( ಮಾಕ್ರ್ಸವಾದಿ) ತುಮಕೂರು ಜಿಲ್ಲಾ ಸಮಿತಿ ಬಲವಾಗಿ ಖಂಡಿಸುತ್ತದೆ. ಈ ಸರಕಾರದಲ್ಲಿ ಯಾರು ಹೇಗೆ ಬೇಕಾದರೂ ವರ್ತಿಸಬಹುದೆಂಬುದನ್ನು ಮತ್ತು ಆಡಳಿತದ ಮೇಲೆ ಸರಕಾರದ ಯಾವುದೇ ನಿಯಂತ್ರಣವಿಲ್ಲವೆಂಬುದನ್ನು ಮತ್ತೊಮ್ಮೆ ಸ್ಪಷ್ಠ ಪಡಿಸುತ್ತದೆ. ಯಾವುದೇ ಸೂಕ್ತ ವೇದಿಕೆಗಳಲ್ಲಿ ಚರ್ಚಿಸದೇ, ಸೂಕ್ತ ಆದೇಶ ಹೊರಡಿಸದೇ ತಮಗೆ ತಿಳಿದಂತೆ ಕಾರ್ಯ ನಿರ್ವಹಿಸುವುದು, ಇಲ್ಲವೇ ಮತ್ಯಾವುದೋ ಅವಿತಿಟ್ಟುಕೊಂಡ ದುಷ್ಠ ಶಕ್ತಿಯ ನಿಯಂತ್ರಣದಲ್ಲಿ ಕಾರ್ಯ ನಿರ್ವಹಿಸುತ್ತಿರುವುದನ್ನು ಇದು ಮತ್ತೊಮ್ಮೆ ಎತ್ತಿ ತೋರಿಸುತ್ತದೆ. ಈ ಅಧಿಕಾರ ದುರುಪಯೋಗದಿಂದ ಮತ್ತು ತಜ್ಞರಲ್ಲದವರ ದುರ್ನಡೆಯಿಂದ ನಾಡಿನ ಗಣ್ಯ ವ್ಯಕ್ತಿಗಳು ಅಪಮಾನಿತರಾಗುವಂತಾಯಿತು. ರಾಜ್ಯದ ದಶ ಲಕ್ಷಾಂತರ ಶಾಲಾ ಮಕ್ಕಳು ಪಠ್ಯ ಪುಸ್ತಕ ಲಭ್ಯವಿಲ್ಲದೇ ಶೈಕ್ಷಣಿಕವಾಗಿ ಈ ವರ್ಷವೂ ತೊಂದರೆಗೀಡಾಗುವಂತಾಯಿತು. ಮಾತ್ರವಲ್ಲಾ, ರಾಜ್ಯದ ಬೊಕ್ಕಸದ ನೂರಾರು ಕೋಟಿ…
ತುಮಕೂರು: ಗುಬ್ಬಿಯ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಅವರು ತಮ್ಮ ಪಕ್ಷದ ಮುಖಂಡ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, `ಅವನು ಉತ್ತಮನಾ, ಅವನು ಯಾವುದರಲ್ಲಿ ಉತ್ತಮನೆಂದು ಹೇಳಲಿ. ಬೆಳಿಗ್ಗೆ ಒಂದು ಹೇಳುತ್ತಾನೆ, ಸಂಜೆ ಮತ್ತೊಂದು ಹೇಳುತ್ತಾನೆ. ಊಸರವಳ್ಳಿ ಇದ್ದಂತೆ’ ಎಂದು ನಿಂದಿಸಿದರು. ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಶ್ರೀನಿವಾಸ್ ಮತ ಹಾಕಿಲ್ಲ ಎಂಬ ಕಾರಣ ಮುಂದಿಟ್ಟುಕೊಂಡು, ಕುಮಾರಸ್ವಾಮಿ ಹರಿಹಾಯ್ದಿದಿದ್ದರು. ಅಡ್ಡ ಮತದಾನ ಖಂಡಿಸಿ ಜೆಡಿಎಸ್ ಕಾರ್ಯಕರ್ತರು ನಗರದಲ್ಲಿರುವ ಮನೆ ಎದುರು ಶನಿವಾರ ಪ್ರತಿಭಟನೆ ನಡೆಸಿದರು. ಇದಕ್ಕೆ ಪ್ರತಿಯಾಗಿ ಶ್ರೀನಿವಾಸ್ ಟೀಕಾ ಪ್ರಹಾರ ನಡೆಸಿದ್ದಾರೆ. `ಇನ್ನು ಮುಂದೆ ನೋಡಲಿ, ಎಲ್ಲವನ್ನೂ ಬಿಚ್ಚಿಡುತ್ತೇನೆ. ಯಾವುದರಲ್ಲಿ ಪರಿಶುದ್ಧವಾಗಿ ಇದ್ದಾನೆ. ಕಚ್ಚೆ ಸರಿ ಇಲ್ಲ, ಬಾಯಿ ಸರಿ ಇಲ್ಲ. ಇನ್ನೊಬ್ಬರ ಬಗ್ಗೆ ಮಾತನಾಡಲು ಯಾವ ನೈತಿಕತೆ ಇದೆ? ಇವನ ವಿರುದ್ಧ ಹೋರಾಟ ಮಾಡುವುದು ನನ್ನ ಮುಂದಿನ ನಡೆ. ನಾನು ಸೋತರೂ ಪರವಾಗಿಲ್ಲ. ಇವನ ಅಭ್ಯರ್ಥಿಯನ್ನು ಗೆಲ್ಲುವುದಕ್ಕೆ ಬಿಡುವುದಿಲ್ಲ. ಅವನು ಗಂಡಸಾದರೆ ನನ್ನ…
ಗುಬ್ಬಿ: ಜೆಡಿಎಸ್ ಪಕ್ಷದ ಸದಸ್ಯನಾಗಿ ಹಾಗೂ ನಾಲ್ಕು ಬಾರಿ ಶಾಸಕನಾಗಿ ಪಕ್ಷದ ಎಲ್ಲಾ ಸೌಲಭ್ಯಗಳನ್ನು ಪಡೆದು ಪಕ್ಷಕ್ಕೆ ದ್ರೋಹವೆಸಗಿದ ಶಾಸಕ ಎಸ್.ಆರ್.ಶ್ರೀನಿವಾಸ್ ಕೂಡಲೇ ಪಕ್ಷಕ್ಕೆ ಹಾಗೂ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಜೆ.ಡಿ.ಎಸ್.ಮುಂಖಡ ಬಿ.ಎಸ್.ನಾಗರಾಜು ಒತ್ತಾಯಿಸಿದರು. ಪಟ್ಟಣದ ಜೆ.ಡಿ.ಎಸ್.ಕಛೇರಿಯಿಂದ ನೂರಾರು ಕಾರ್ಯಕರ್ತರೊಡನೆ ಶಾಸಕ ಎಸ್.ಆರ್.ಶ್ರೀನಿವಾಸ್ ವಿರುದ್ದ ಘೋಷಣೆಗಳನ್ನು ಕೂಗುತ್ತಾ ರಸ್ತೆ ತಡೆ ನಡೆಯಿಸಿ ಮಾತನಾಡಿದ ಅವರು ಕಳೆದ ಸುಮಾರು 20 ವರ್ಷಗಳಿಂದ ಗುಬ್ಬಿ ತಾಲ್ಲೂಕಿನ ಮತದಾರರ ಕಣ್ಣಿಗೆ ಮಣ್ಣು ಎರಚಿ ಮತಬ್ಯಾಂಕ್‍ಗಳನ್ನಾಗಿ ಪರಿವರ್ತಿಸಿದ ಖ್ಯಾತಿ ಈ ಶಾಸಕರದ್ದಾಗಿದೆ. ತಾಲ್ಲೂಕಿನ ಜನತೆಯನ್ನು ಮೂರ್ಖರನ್ನಾಗಿ ಮಾಡಿ ಯಾವುದೇ ಗುರುತಿಸುವಂತಹ ಕೆಲಸವನ್ನು ಈ ತಾಲ್ಲೂಕಿನಲ್ಲಿ ನಡೆಯದೇ ಇರುವುದು ಈ ತಾಲ್ಲೂಕಿನ ಮತದಾರರ ದೌಭಾಗ್ಯವೇ ಸರಿ ಎಂದ ಅವರು ಪಕ್ಷಕ್ಕೆ ದ್ರೋಹವೆಸಗಿ ಬೇರೆ ಪಕ್ಷಕ್ಕೆ ಮತ ನೀಡಿ ತಾನು ನಿಷ್ಟಾವಂತ ಜೆಡಿಎಸ್ ಪಕ್ಷದ ಅಭ್ಯರ್ಥಿ ಎಂದು ಬಿಂಬಿಸುತ್ತಿರುವುದಕ್ಕೆ ಈ ತಾಲ್ಲೂಕಿನ ಜನರೇನು ದಡ್ಡರೇನು ಅಲ್ಲ. ಆತ್ಮ ಸಾಕ್ಷಿ ಎಂಬುವುದು ಶಾಸಕರಲ್ಲಿ ಇದ್ದರೆ ಈ ಕೂಡಲೇ ಪಕ್ಷದ ಸದಸ್ಯತ್ವಕ್ಕೆ…
ತುಮಕೂರು: ತುಮಕೂರು ನಗರದ ಸಿದ್ಧಾರ್ಥ ಎಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಿಮ ವರ್ಷದ ಸಿವಿಲ್ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಕವಿತ (21) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ 12.30ರ ಸುಮಾರಿಗೆ ನಡೆದಿದೆ. ಕಾಲೇಜು ಹಾಸ್ಟೆಲ್‍ನ ಸಂಗಮಿತ್ರ ಬ್ಲಾಕ್ ನಲ್ಲಿ ಘಟನೆ ಸಂಭವಿಸಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿರುವುದಿಲ್ಲ. ಮೃತ ವಿದ್ಯಾರ್ಥಿನಿ ಕವಿತ ಮೈಸೂರು ಮೂಲದವರು ಎಂದು ತಿಳಿದು ಬಂದಿದೆ. ತಿಲಕ್‍ಪಾರ್ಕ್ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ತುಮಕೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಜಲ ಜೀವನ್ ಮಿಷನ್ ಯೋಜನೆಯಡಿ ಇಂದು ತಿಪಟೂರು ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ಅಧ್ಯಕ್ಷರುಗಳಿಗೆ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಪಂಚಾಯತ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಸ್ನೇಹ ಜೀವನ ಫೌಂಡೇಶನ್ (ಗುಬ್ಬಿ) ಇವರುಗಳ ಸಂಯುಕ್ತಾಶ್ರಯದಲ್ಲಿಂದು ತಿಪಟೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಗಾರ ಉದ್ಘಾಟಿಸಿ ಮಾತನಾಡಿದ ಕಾರ್ಯ ನಿರ್ವಾಹಕ ಅಧಿಕಾರಿ ಸುದರ್ಶನ್ ಅವರು, ಪ್ರತಿಯೊಂದು ಮನೆಗೂ ಕಾರ್ಯಾತ್ಮಕ ನಳ ಸಂಪರ್ಕ ಕಲ್ಪಿಸುವುದು ಸಮರ್ಪಕವಾದ ಶುದ್ಧವಾದ ನೀರನ್ನು ಎಲ್ಲರಿಗೂ ಸಹ ಒದಗಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಪ್ರತಿ ಗ್ರಾಮಗಳಲ್ಲೂ ಸರಿಯಾದಂತಹ ನೀರು ಸರಬರಾಜು ವ್ಯವಸ್ಥೆಯನ್ನು ಮಾಡುವಂತಹ ಕೆಲಸಗಳಲ್ಲಿ ಗ್ರಾಮಪಂಚಾಯಿತಿಯ ಪಾತ್ರ ಅತ್ಯಂತ ಮಹತ್ವವಾಗಿದ್ದು, ಗ್ರಾಮ ಪಂಚಾಯಿತಿಯ ಎಲ್ಲಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಅಧ್ಯಕ್ಷರುಗಳು ಹೆಚ್ಚಿನ ಆಸಕ್ತಿ ವಹಿಸಿ, ಯೋಜನೆಯ ಲಾಭವನ್ನು ಎಲ್ಲ ಗ್ರಾಮಸ್ಥರುಗಳಿಗೆ ತಲುಪಿಸುವಂತೆ ಕ್ರಮವಹಿಸಬೇಕು. ಯೋಜನೆಯಲ್ಲಿ ಬರುವಂತಹ ಸಮುದಾಯ ವಂತಿಕೆ ಏಕೆ…
ತುಮಕೂರು: ಜಿಲ್ಲಾ ಪಂಚಾಯಿತಿ ತುಮಕೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಸರಕಾರಿ ಕಚೇರಿಗಳಲ್ಲಿನ ಶಿಶುಪಾಲನಾ ಕೇಂದ್ರ ತೆರೆಯ ಬೇಕೆಂಬ ರಾಜ್ಯ ಸರಕಾರದ ನಿರ್ದೇಶನದ ಹಿನ್ನೆಲೆಯಲ್ಲಿ ಇಂದು ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಸಮರ್ಥ್ ಪೌಂಢೇಷನ್ ಸಹಯೋಗದಲ್ಲಿ ಶಿಶುಪಾಲನಾ ಕೇಂದ್ರವನ್ನು ಉದ್ಘಾಟಿಸಲಾಯಿತು. ಜಿಲ್ಲಾ ಪಂಚಾಯತ್ ಕಚೇರಿಯ ಮೂರನೇ ಮಹಡಿಯಲ್ಲಿ ಶಿಶುಪಾಲನಾ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದ ಸಿಇಓ ಡಾ.ಕೆ.ವಿದ್ಯಾಕುಮಾರಿ, ಸರಕಾರದ ನಿರ್ದೇಶನದಂತೆ ಮಹಿಳಾ ಸರಕಾರಿ ನೌಕರರ ಅನುಕೂಲಕ್ಕಾಗಿ ನಗರದಲ್ಲಿ ಎರಡು ಕಡೆ ಶಿಶುಪಾಲನಾ ಕೇಂದ್ರಗಳನ್ನು ತೆರೆಯಲು ಮುಂದಾಗಿದ್ದು,ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿಯೂ ಇದೇ ರೀತಿಯೇ ಕೇಂದ್ರವನ್ನು ತೆರೆಯಲು ಸಿದ್ದತೆಗಳನ್ನು ಕೈಗೊಳ್ಳಲಾಗಿದೆ. ಅಲ್ಲದೆ ಖಾಸಗಿ ಕ್ಷೇತ್ರದಲ್ಲಿರುವ ಉದ್ಯೋಗಸ್ತ ಮಹಿಳೆಯರ 0-6 ವರ್ಷದವರೆಗಿನ ಮಕ್ಕಳ ಪಾಲನೆಗಾಗಿ ಜಿಲ್ಲೆಯಲ್ಲಿ ಎರಡು ಕಡೆ ಇದೇ ರೀತಿಯ ಶಿಶುಪಾಲನಾ ಕೇಂದ್ರಗಳನ್ನು ತೆರೆಯಲು ಈಗಾಗಲೇ ಜಾಗ ಗುರುತಿಸಿ, ರಾಜ್ಯ ಸರಕಾರಕ್ಕೆ ಶಿಫಾರಸ್ಸು ಮಾಡಲಾಗಿದೆ. ಅನುಮೋಧನೆ ದೊರೆತ ಕೂಡಲೇ ತುಮಕೂರು ಮತ್ತು ತಿಪಟೂರಿನಲ್ಲಿ ಈ ಕೇಂದ್ರಗಳು ಆರಂಭಗೊಳ್ಳಲಿವೆ ಎಂದರು. ಜಿಲ್ಲಾ…
ತುಮಕೂರು: ನಗರದ ಸಪ್ತಗಿರಿ ಬಡಾವಣೆಯ ರಾಘವೇಂದ್ರ ನಗರದ ಟಿ.ಪಿ.ಕೈಲಾಸಂ ರಸ್ತೆಯಲ್ಲಿ ರಾಷ್ಟ್ರೀಯ ಮಾನವ ಪರಿಸರ ಸಂರಕ್ಷಣಾ ಪಡೆಯ ಕಚೇರಿಯನ್ನು ಉದ್ಘಾಟಿಸಲಾಯಿತು. ಭಾರತಾಂಭೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ರಾಷ್ಟ್ರೀಯ ಮಾನವ ಪರಿಸರ ಸಂರಕ್ಷಣಾ ಪಡೆಯ ಕಚೇರಿಯನ್ನು ಅಧಿಕೃತವಾಗಿ ಚಾಲನೆಗೆ ದೊರೆಯಿತು. ರಾಷ್ಟ್ರೀಯ ಗೌರವಾಧ್ಯಕ್ಷ ಎಸ್.ಪಿ.ಚಿದಾನಂದ ಮಾತನಾಡಿ, ನಮ್ಮ ಪಡೆಯನ್ನು ಕಟ್ಟಿರುವ ಪ್ರಮುಖ ಉದ್ದೇಶವೆಂದರೆ, ಮಾನವ ಹಕ್ಕುಗಳು ಮತ್ತು ಮಕ್ಕಳ ಹಕ್ಕುಗಳ ಸಂರಕ್ಷಣೆಯ ಜೊತೆಗೆ, ಭ್ರಷ್ಟಾಚಾರವನ್ನು ಕಿತ್ತೊಗೆಯುವುದು. ಗೋಶಾಲೆಗಳ ನಿರ್ವಹಣೆ ಮತ್ತು ಗೋವು ಹಾಗೂ ಅದರ ಸಂತತಿ ರಕ್ಷಣೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕ್ಷೇತ್ರವನ್ನು ಭ್ರಷ್ಟಾಚಾರ ಮುಕ್ತ ಮಾಡಿ, ಎಲ್ಲರಿಗೂ ಗುಣಮಟ್ಟದ ಆರೋಗ್ಯ ಸೇವೆ ದೊರೆಯುವಂತೆ ಮಾಡುವುದು, ಕೃಷಿ ಮತ್ತು ಅದಕ್ಕೆ ಪೂರಕ ಕ್ಷೇತ್ರಗಳನ್ನು ಬಲಿಷ್ಠಗೊಳಿಸುವುದು, ಪರಿಸರದ ಆಪಾಯಕಾರಿ ತ್ಯಾಜ್ಯಗಳಿಂದಾಗುತ್ತಿರುವ ದುಷ್ಪರಿಣಾಮವನ್ನು ಕಡಿಮೆ ಮಾಡುವುದು. ಪ್ರಾಣಿಗಳ ಹಕ್ಕು ಸಂರಕ್ಷಣೆ, ಗ್ರಾಮೀಣ ಮತ್ತು ನಗರಗಳ ಅಭಿವೃದ್ದಿಯಲ್ಲಿ ತೊಡಗಿಸಿಕೊಳ್ಳುವುದು. ಯುವ ಜನರ ಸಬಲೀಕರಣಕ್ಕೆ ಒತ್ತು ನೀಡುವುದು, ವಿಜ್ಞಾನ ಮತ್ತು ತಂತ್ರಜ್ಞಾನದ,ಮಾಹಿತಿ ಸಂವಹನ ಕ್ಷೇತ್ರದಲ್ಲಿ ಯುವಜನರನ್ನು…










