Author: News Desk Benkiyabale

ತುಮಕೂರು: ರೈತರ ಮೇಲೆ ಅರಣ್ಯ ಇಲಾಖೆಯ ದೌರ್ಜನ್ಯ, ದಬ್ಬಾಳಿಕೆ-ಕಿರುಕುಳ ಖಂಡಿಸಿ, ಬಗರ್ ಹುಕುಂ ಸಾಗುವಳಿದಾರರ ಹಕ್ಕು ರಕ್ಷಣೆಗಾಗಿ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ ಜೂ. 14 ರಿಂದ ರೈತರ ಬೃಹತ್ ಅನಿರ್ಧಿಷ್ಟಾವಧಿ ಧರಣಿಯನ್ನು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಹಮ್ಮಿಕೊಂಡಿದೆ. ದೌರ್ಜನ್ಯ, ದಬ್ಬಾಳಿಕೆ ಬಳಸಿ ಅರಣ್ಯ ಇಲಾಖೆ ಮೂಲಕ ಕಿತ್ತುಕೊಂಡಿರುವ ಬಗರ್ ಹುಕಂ ಸಾಗುವಳಿ ಭೂಮಿ ಮರಳಿಸಲು, ಎಲ್ಲಾ ಬಗರ್ ಹುಕಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಲು, ಸಾಗುವಳಿ ಮಂಜೂರಾತಿ ಆದೇಶ ಪಡೆದಿರುವ ಎಲ್ಲಾ ಬಗರ್‍ಹುಕುಂ ರೈತರಿಗೆ ಪಹಣಿ ವಿತರಿಸಲು, ಬಗರ್ ಹುಕುಂ ಸಕ್ರಮ ಕೋರಿ ಅರ್ಜಿ ಸಲ್ಲಿಸಲು ಅವಕಾಶವನ್ನು ವಿಳಂಬ ಮಾಡದೇ ಕಲ್ಪಿಸಲು, ವಸತಿ ರಹಿತರಿಗೆ ಮನೆ-ನಿವೇಶನಕ್ಕಾಗಿ ಸರ್ಕಾರಿ ಭೂಮಿ ಲಭ್ಯ ಇಲ್ಲದ ಕಡೆ ಭೂ ಸ್ವಾಧೀನದ ಮೂಲಕ ಮನೆ -ನಿವೇಶನ ಒದಗಿಸಲು, ವಿವಿಧ ಯೋಜನೆಗಳಿಗೆ ಭೂ ಸ್ವಾಧೀನಕ್ಕೆ ಒಳಗಾದ ಬಗರ್ ಹುಕುಂ ಸಾಗುವಳಿದಾರರು ಸೇರಿದಂತೆ ಎಲ್ಲಾ ರೈತರಿಗೆ ಪರಿಹಾರದ ಹಣ ನೀಡಲು ಆಗ್ರಹಿಸಿ ರೈತರ ಬೃಹತ್ ಧರಣಿಯನ್ನು ನಡೆಸಲಾಗುತ್ತಿದೆ…

Read More

ತುಮಕೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಜೂನ್ 16 ಮತ್ತು 17, 2022 ರಂದು ನಡೆಸಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಯು ತುಮಕೂರು ನಗರದ 14, ಶಿರಾ 2 ಮತ್ತು ತಿಪಟೂರಿನ 2 ಪರೀಕ್ಷಾ ಕೇಂದ್ರಗಳಂತೆ ಒಟ್ಟು 18 ಕೇಂದ್ರಗಳಲ್ಲಿ ನಡೆಯಲಿದ್ದು, ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದಂತೆ ಶಿಷ್ಟಾಚಾರವನ್ನು ಕಾಯ್ದುಕೊಂಡು ನಿಯಮಾನುಸಾರ ಪರೀಕ್ಷೆಯನ್ನು ನಡೆಸುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಅಧಿಕಾರಿಗಳಿಗೆ ಕರೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ವಿಡೀಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಉನ್ನತ ಶಿಕ್ಷಣ ಇಲಾಖೆ ವತಿಯಿಂದ ಏರ್ಪಡಿಸಲಾಗಿದ್ದ ಸಿಇಟಿ ಪರೀಕ್ಷೆಗೆ ಸಂಬಂಧಿಸಿದ ವಿಡೀಯೊ ಕಾನ್ಫರೆನ್ಸ್ ಸಭೆಯ ನಂತರ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಉದ್ದೇಶಿಸಿ ಈ ಮೇಲಿನಂತೆ ಸೂಚನೆ ನೀಡಿದರು. ತುಮಕೂರು ನಗರದ 14 ಪರೀಕ್ಷಾ ಕೇಂದ್ರಗಳಲ್ಲಿ 6264, ಶಿರಾ ತಾಲ್ಲೂಕಿನ 2 ಪರೀಕ್ಷಾ ಕೇಂದ್ರಗಳಲ್ಲಿ 984 ಮತ್ತು ತಿಪಟೂರು ತಾಲ್ಲೂಕಿನ 2 ಕೇಂದ್ರಗಳಲ್ಲಿ 1488 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 18 ಪರೀಕ್ಷಾ ಕೇಂದ್ರಗಳಲ್ಲಿ…

Read More

ತುಮಕೂರು: ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ 2022-23ನೇ ಸಾಲಿನಲ್ಲಿ ನಗರದ 12 ಪಾರ್ಕ್‍ಗಳ ಅಭಿವೃದ್ಧಿಗೆ ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಇಲ್ಲಿಯ ಮಾರುತಿನಗರ 3ನೇ ಕ್ರಾಸ್‍ನಲ್ಲಿರುವ ಸಂಜೀವಿನಿ ಉದ್ಯಾನವನದಲ್ಲಿ ಗುರುವಾರ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅವರು, ಪಾರ್ಕ್‍ಗಳ ಅಭಿವೃದ್ಧಿಗೆ ನಾಗರೀಕ ಸಮಿತಿಗಳ ಸಹಕಾರ ಅತೀ ಮುಖ್ಯವಾಗಿದೆ ಎಂದರು. 1.74 ಕೋಟಿ ರೂ. ವೆಚ್ಚದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದಿಂದ 12 ಪಾರ್ಕ್‍ಗಳನ್ನು ಅಭಿವೃದ್ಧಿಪಡಿಸುತ್ತಿದ್ದಾರೆ. ಕಳೆದ ಒಂದು ವರ್ಷದ ಹಿಂದೆಯೇ ಪಾರ್ಕ್‍ಗಳ ಅಭಿವೃದ್ಧಿ ಕಾಮಗಾರಿಗೆ ಟೆಂಡರ್ ಕರೆಯಲಾಗಿತ್ತು. ಕೋವಿಡ್ ಹಿನ್ನಲೆಯಲ್ಲಿ ಯಾರೂ ಟೆಂಡರ್ ಹಾಕದ ಕಾರಣ, ಟೆಂಡರ್ ವಾಪಸ್ ಹೋಗಿತ್ತು. ಮತ್ತೆ ರೀಟೆಂಡರ್ ಆಗಿ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು. ಮಾರುತಿನಗರದ ಸಂಜೀವಿನಿ ಉದ್ಯಾನವನ ದೊಡ್ಡ ಪಾರ್ಕ್ ಆಗಿರುವುದರಿಂದ 22 ಲಕ್ಷ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಸ್ಮಾರ್ಟ್‍ಸಿಟಿಯಿಂದ ಸುಮಾರು 30-35 ಕೋಟಿ ರೂ. ಪಾರ್ಕ್‍ಗಳ ಅಭಿವೃದ್ಧಿಗೆ ಸಿಕ್ಕಿದೆ. ಇದರ ಜೊತೆಗೆ ಟೂಡಾದವರೂ ಸಹ ಕೈಜೋಡಿಸಿ ಪಾರ್ಕ್‍ಗಳ…

Read More

ತುರುವೇಕೆರೆ: ತಾಲೂಕಿನ ಜಿ.ಮಂಚೇನಹಳ್ಳಿಯ ಗೊಲ್ಲರಹಟ್ಟಿಗೆ ಸೂಕ್ತ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕೆಂದು ಕೇಂದ್ರ ತೆಂಗು ಮತ್ತು ನಾರು ಅಭಿವೃದ್ಧಿ ಮಂಡಲಿಯ ನಿರ್ದೇಶಕ ಎಂ.ಟಿ.ಕೃಷ್ಣಮೂರ್ತಿ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಜಿ.ಮಂಚೇನಹಳ್ಳಿ ಗೊಲ್ಲರಹಟ್ಟಿಯಲ್ಲಿ ಬಹುಪಾಲು ಹಿಂದುಳಿದ ವರ್ಗಗಳ ಜನಾಂಗದ ಜನರು ವಾಸಿಸುತ್ತಿದ್ದಾರೆ. ಇಲ್ಲಿ ಯಾವುದೇ ಮೂಲಭೂತ ಸೌಕರ್ಯವನ್ನು ಒದಗಿಸಲು ತಾಲೂಕು ಆಡಳಿತ ವಿಫಲವಾಗಿದೆ. ಈ ಸಂಬಂಧಿಸಿದಂತೆ ಹತ್ತಾರು ಬಾರಿ ತಾಲೂಕು ಆಡಳಿತ ಮತ್ತು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದರೂ ಸಹ ಯಾವುದೇ ಕ್ರಮ ಕೈಗೊಂಡಿಲ್ಲವೆಂದು ದೂರಿದರು. ಸಾರ್ವಜನಿಕರ ದೇಣಿಗೆಯಲ್ಲಿ ಗೊಲ್ಲರಹಟ್ಟಿಯ ರಸ್ತೆಯನ್ನು ಸಿಮೆಂಟ್ ರಸ್ತೆಯನ್ನಾಗಿ ಅಭಿವೃದ್ಧಿ ಪಡಿಸಲಾಗಿದೆ. ಆದರೆ ದಾರಿಯ ಆರಂಭದಲ್ಲಿರುವ ಜಮೀನಿನ ಮಾಲೀಕರೋರ್ವರು ಇಲ್ಲದ ತಕರಾರು ತೆಗೆದು ರಸ್ತೆಯನ್ನು ಸಂಪೂರ್ಣಗೊಳಿಸಲು ಅವಕಾಶ ನೀಡುತ್ತಿಲ್ಲ. ಇದರಿಂದಾಗಿ ಜನರು ಓಡಾಡಲು ತೊಂದರೆಯಾಗಿದೆ. ಮಳೆ ಬಂದರೆ ಗೊಲ್ಲರಹಟ್ಟಿಯೊಳಗೆ ಜನರು ಬರುವುದು ಅಸಾಧ್ಯವಾಗಿದೆ. ಅಲ್ಲದೇ ಸದರಿ ವ್ಯಕ್ತಿ ಗ್ರಾಮದಲ್ಲಿರುವ ಬಡವರಿಗೆ ಬೆದರಿಕೆ ಒಡ್ಡಿ ಅವರ ಆಸ್ತಿಗಳನ್ನು ಕಿತ್ತುಕೊಂಡಿದ್ದಾನೆ. ಹಲವಾರು ಬಡವರ ಜಮೀನನ್ನು ಬೆದರಿಸಿ ಒತ್ತುವರಿ ಸಹ ಮಾಡಿಕೊಂಡಿದ್ದಾನೆ. ರಾಜಕೀಯವಾಗಿ ಪ್ರಭಾವಿಯಾಗಿರುವ ಈತ ಬಡ…

Read More

ತುಮಕೂರು: ದಲಿತ ಸಂಘರ್ಷ ಸಮಿತಿಯ ಸಂಸ್ಥಾಪಕರಾದ ಬಿ.ಕೃಷ್ಣಪ್ಪನವರ 84ನೇ ಜಯಂತಿಯನ್ನು ಎನ್,ಆರ್ ಕಾಲೋನಿಯ ಶೈಕ್ಷಣಿಕ ಭವನದಲ್ಲಿ ಸಾಮಾಜಿಕ ಪರಿವರ್ತನೆಗಾಗಿ ಬಿ,ಕೃಷ್ಣಪ್ಪ ಪ್ರತಿಷ್ಠಾನ(ರಿ)ದಿಂದ ಆಯೋಜಿಸಲಾಗಿತ್ತು. ಬಿ.ಕೃಷ್ಣಪ್ಪ ನವರ ಅನುಯಾಯಿಗಳು ಮತ್ತು ದಸಂಸದ ಪ್ರಾರಂಭದ ದಿನಗಳಲ್ಲಿ ಬಿ.ಕೆ ಯವರ ಜೊತೆ ತುಮಕೂರು ಜಿಲ್ಲೆಯಲ್ಲಿ ದಲಿತ ಚಳುವಳಿಯನ್ನು ಕಟ್ಟಿದ ಕೆ.ದೊರೈರಾಜ್ ನುಡಿ ನೆನಪುಗಳ ಮೂಲಕ ಅಂದಿನ ಹೋರಾಟದ ದಿನಗಳನ್ನು ಎನ್.ಆರ್ ಕಾಲೋನಿಯ ಯುವಜನರೊಂದಿಗೆ ಹಂಚಿಕೊಂಡರು ನಮ್ಮ ವಿಮೋಚನೆಗೆ ಶ್ರಮಿಸಿದವರನ್ನು ಸ್ಮರಿಸಿಕೊಂಡು ಗೌರವಿಸುವುದು ನಮ್ಮ ಜವಾಬ್ದಾರಿ ಇದರಿಂದ ತುಳಿತಕ್ಕೆ ಒಳಪಟ್ಟಿರುವ ಜನರ ವಿಮೋಚನೆಗೆ ನಾವು ಪ್ರೇರಣೆಗೊಳ್ಳುತ್ತೇವೆ. ಭಾರತದಲ್ಲಿ ಮಾದರಿ ಚಳುವಳಿಯನ್ನು ಕಟ್ಟಿದವರು ಬಿ.ಕೆಯವರು ನಮ್ಮ ಜನಾಂಗದ ಧೌರ್ಬಲ್ಯ ನಮ್ಮ ಜೊತೆಗಿನ ನಾಯಕತ್ವವನ್ನು ಒಪ್ಪಿಕೊಳ್ಳುವುದಿಲ್ಲ. ಕಾರಣ ನಮ್ಮಲ್ಲಿರುವ ಗುಲಾಮಗಿರಿ ಆದರೆ 70ರ ದಶಕದಲ್ಲಿ ದಲಿತ ಚಳುವಳಿಯ ಮೂಲಕ ಅಸ್ಪøಶ್ಯ ಜನಾಂಗಕ್ಕೆ ಸ್ವಾಭಿಮಾನದ ನಡೆಯನ್ನು ಕಲಿಸಿ ಇಡೀ ರಾಜ್ಯಕ್ಕೆ ವಿಚಾರದ ನಾಯಕತ್ವವನ್ನು ಕೃಷ್ಣಪ್ಪ ಕೊಟ್ಟರು. 1977 ರಲ್ಲಿ ಎನ್.ಆರ್ ಕಾಲೋನಿಗೆ ಪ್ರಪ್ರಥಮ ಭೇಟಿ ಕೊಟ್ಟ ಬಿ.ಕೆ ಕಾಲೋನಿಯ ಹೋರಾಟದಲ್ಲಿ “ಹೆಂಡಾ…

Read More

ತುಮಕೂರು: ತಿಪಟೂರು ನಗರದಲ್ಲಿ ಶಿಕ್ಷಣ ಸಚಿವರ ಮನೆ ಮುಂದೆ ಎನ್‍ಎಸ್‍ಯುಐ ಕಾರ್ಯಕರ್ತರು ನಡೆಸಿರುವ ಪ್ರತಿಭಟನೆಗೆ ಸಂಬಂಧಿಸಿದಂತೆ ಕಾರಾಗೃಹದಲ್ಲಿರುವ 25 ಮಂದಿ ಎನ್‍ಎಸ್‍ಯುಐ ಕಾರ್ಯಕರ್ತರಿಗೆ ಗೌರವಾನ್ವಿತ ನ್ಯಾಯಾಲಯ ಬುಧವಾರ ಸಂಜೆ ಜಾಮೀನು ಮಂಜೂರು ಮಾಡಿದ್ದು, ಸತ್ಯಕ್ಕೆ ಸಿಕ್ಕ ಜಯ ಎಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮುರಳೀಧರ ಹಾಲಪ್ಪ ತಿಳಿಸಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಿಪಟೂರು ಜಿಲ್ಲಾ ಸತ್ರ ನ್ಯಾಯಾಧೀಶರಾದ ಪುಷ್ಪಾವತಿ ಅವರು ಬೇಲ್ ಮಂಜೂರು ಮಾಡಿ ಆದೇಶಿಸಿದ್ದು, ಆದೇಶ ಪತ್ರದಲ್ಲಿ ಒಬ್ಬರಿಗೆ ಇಬ್ಬರು ಶ್ಯೂರಿಟಿ ನೀಡಬೇಕೆಂದು ಆ ಆದೇಶದಲ್ಲಿ ತಿಳಿಸಲಾಗಿದೆ. ನ್ಯಾಯಾಲಯದ ವಿಧಿ ವಿಧಾನಗಳು ಕಾರಾಗೃಹದ ಮುಖ್ಯಸ್ಥರಿಗೆ ತಲುಪಿದ ನಂತರ ಬಂಧಿಯಾಗಿರುವ ಎಲ್ಲಾ ಎನ್ ಎಸ್‍ಯುಐ ಕಾರ್ಯಕರ್ತರು ಗುರುವಾರ ಬಿಡುಗಡೆಯಾಗಲಿದ್ದಾರೆ ಎಂದು ಹೇಳಿದರು. ವಿದ್ಯಾರ್ಥಿಗಳು ಪಠ್ಯ ಪರಿಷ್ಕರಣೆ ವಿರೋಧಿಸಿ ಹಾಗೂ ಇದುವರೆಗೂ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಸರಬರಾಜು ಮಾಡದೇ ಇರುವುದನ್ನು ಖಂಡಿಸಿ ಶಿಕ್ಷಣ ಸಚಿವರ ಮನೆ ಮುಂದೆ ಪ್ರತಿಭಟನೆ ನಡೆಸಿದ್ದಾರೆಯೇ ವಿನಃ ಯಾವುದೇ ದುರುದ್ಧೇಶ ಪೂರ್ವಕವಲ್ಲ ಎಂದರು.…

Read More

ತುಮಕೂರು: ರಾಜ್ಯದಾದ್ಯಂತ ಆರ್.ಎಸ್.ಎಸ್ ಚಡ್ಡಿ ಸುಡುವ ಅಭಿಯಾನ ನಡೆಸುವುದಾಗಿ ಹೇಳಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಖಂಡಿಸಿ, ಇಂದು ಜಿಲ್ಲಾ ಬಿಜೆಪಿ ಎಸ್.ಸಿ.ಮೋರ್ಚಾ ಅಧ್ಯಕ್ಷ ಓಂಕಾರ್ ನೇತೃತ್ವದಲ್ಲಿ ಇಂದು ಚಡ್ಡಿ ರವಾನಿಸುವ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ನಗರದ ಟೌನ್‍ಹಾಲ್ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಸೇರಿದ್ದ ಬಿಜೆಪಿ ಹಿರಿಯ, ಕಿರಿಯ ಮುಖಂಡರು ಹಾಗೂ ಎಸ್ಸಿ ಮೋರ್ಚಾದ ಪದಾಧಿಕಾರಿಗಳು, ಸಿದ್ದರಾಮಯ್ಯ ವಿರುದ್ದ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಓಂಕಾರ್, ಬಿಜೆಪಿಗೆ ಆರ್.ಎಸ್.ಎಸ್ ಮಾತೃ ಸಮಾನ. ನನ್ನಂತಹ ಲಕ್ಷಾಂತರ ಜನರನ್ನು ಬೆಳೆಸಿ, ಪಕ್ಷದಲ್ಲಿ ಹಲವು ಹುದ್ದೆಗಳನ್ನು ನೀಡಿದೆ. ಇದರ ಅರಿವಿಲ್ಲದ ಸಿದ್ದರಾಮಯ್ಯ ಆರ್.ಎಸ್.ಎಸ್.ನಲ್ಲಿ ದಲಿತರನ್ನು ಕೀಳಾಗಿ ಕಾಣಲಾಗುತ್ತಿದೆ.ನಿಮ್ಮ ಯೋಗ್ಯತೆ ಇಷ್ಟೇ ಎಂದು ಚಡ್ಡಿ ರವಾನೆ ಆಂದೋಲನದ ನೇತೃತ್ವ ವಹಿಸಿರುವ ಚಲವಾದಿ ನಾರಾಯಣಸ್ವಾಮಿ ಅವರ ಬಗ್ಗೆ ಲಘುವಾಗಿ ಮಾತನಾಡಿರುವುದು ಖಂಡನೀಯ ಎಂದರು. ಸಿದ್ದರಾಮಯ್ಯ ಅವರು ತಮ್ಮ ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ಮುಸ್ಲಿಂರನ್ನು ಓಲೈಸಿ, ದಲಿತರು,…

Read More

ತುಮಕೂರು: ಜಾತ್ರೆ, ಉತ್ಸವ, ಹಾಗೂ ಅಕ್ಷಯ ತೃತೀಯ ಮುಂತಾದ ಹಬ್ಬ ಹಾಗೂ ಜಯಂತಿಗಳಲ್ಲಿ ವಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ ವಿವಾಹಗಳು ನಡೆಯುವ ಸಾಧ್ಯತೆ ಹೆಚ್ಚಿದ್ದು, ಸದರಿ ದಿನಗಳಂದು ಯಾವುದೇ ಬಾಲ್ಯ ವಿವಾಹಗಳು ನಡೆಯದಂತೆ ಎಚ್ಚರಿಕೆ ವಹಿಸಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಜಿಲ್ಲೆಯ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಜಿಲ್ಲೆಯ ಎಲ್ಲಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಕರೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಕರೆಯಲಾಗಿದ್ದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದ ಅವರು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಗ್ರಾಮ ಸಹಾಯಕಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂಚಿತವಾಗಿ ಬಾಲ್ಯ ವಿವಾಹ ನಡೆಯುವ ಬಗ್ಗೆ ವರದಿ ಪಡೆದು, ಬಾಲ್ಯ ವಿವಾಹ ಪ್ರಕರಣ ನಡೆಯದಂತೆ ತಡೆಗಟ್ಟಲು ಶ್ರಮಿಸಬೇಕು ಎಂದು ಕರೆ ನೀಡಿದರು. ಅತ್ಯಾಚಾರ/ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಒಂದೇ ಸೂರಿನಡಿ ಸಮಾಲೋಚನೆ, ವೈದ್ಯಕೀಯ ನೆರವು, ಕಾನೂನು ಸಲಹೆ, ಪೊಲೀಸ್ ನೆರವನ್ನು…

Read More

ತುಮಕೂರು: ಕುಂಚಿಟಿಗ ಒಕ್ಕಲಿಗರ ಸಂಘ ಆರಂಭವಾಗಿ 50 ವರ್ಷಗಳು ಪೂರೈಸಿರುವ ಹಿನ್ನೆಲೆಯಲ್ಲಿ ಸಂಘದವತಿ ಯಿಂದ ಜೂನ್ 25 ರಂದು ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ರಾಜ್ಯಮಟ್ಟದ ಕುಂಚಿಟಿಗ ಸಮುದಾಯದ ಜನಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕುಂಚಿಟಿಗ ಒಕ್ಕಲಿಗರ ವಿದ್ಯಾಭಿವೃದ್ದಿ ಸಂಘದ ಕಾರ್ಯಾಧ್ಯಕ್ಷ ಆರ್.ಕಾಮರಾಜು ತಿಳಿಸಿದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಜೂನ್ 25 ರಂದು ಬೆಳಗ್ಗೆ 10 ಗಂಟೆಗೆ ಕುಂಚಿಟಿಗ ಸಮುದಾಯದ ಎಲ್ಲಾ ಪಂಗಡ, ಉಪಪಂಗಡಗಳನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ತುಮಕೂರಿನ ಅಮಾನಿಕೆರೆಯಲ್ಲಿರುವ ಗಾಜಿನ ಮನೆಯಲ್ಲಿ ಕುಂಚಿಟಿಗರ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದರು. ಕುಂಚಿಟಿಗ ಒಕ್ಕಲಿಗರ ವಿದ್ಯಾಭಿವೃದ್ದಿ ಸಂಘವನ್ನು 1963ರಲ್ಲಿ ಸ್ಥಾಪಿಸಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಜನಾಂಗದ ಅಭಿವೃದ್ದಿಗೆ ಶ್ರಮಿಸಿದ ಬಿ.ರಂಗಣ್ಣ ಅವರ ಪುತ್ಥಳಿಯನ್ನು ಕುಂಚಟಿಗ ಭವನದ ಮುಂಭಾಗದಲ್ಲಿ ಆನಾವರಣ ಮಾಡಲಾಗುವುದು. ಅವರು ಸಂಘಕ್ಕೆ ನೀಡಿದ ಜಾಗದಲ್ಲಿ ಇಂದು ಗಂಡು ಮತ್ತು ಹೆಣ್ಣು ಮಕ್ಕಳ ಹಾಸ್ಟಲ್ ನಡೆಯುತ್ತಿದೆ.ಅಲ್ಲದೆ ಸರಕಾರದಿಂದ ಅವರ ಕಾಲದಲ್ಲಿ ಮಂಜೂರಾದ ಜಾಗದಲ್ಲಿ ಇಂದು ನಾಲ್ಕು ಕೋಟಿ ರೂ ವೆಚ್ಚದಲ್ಲಿ ಕುಂಚಟಿಗ ಭವನ ನಿರ್ಮಾಣ…

Read More

ತುಮಕೂರು: ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರ ರೋಗಿಯಾಗಿ ಚಿಕಿತ್ಸೆ ಪಡೆಯಲು ಬರುವ ಸಾರ್ವಜನಿಕರಿಗೆ ಬಿಪಿಎಲ್/ಎಪಿಎಲ್ ಪಡಿತರ ಚೀಟಿಯನ್ನು ಕಡ್ಡಾಯಗೊಳಿಸಿ ಎಲ್ಲರಿಗೂ ಆಯುμÁ್ಮನ್ ಆರೋಗ್ಯ ಕಾರ್ಡುಗಳನ್ನು ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದರು. ತಮ್ಮ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಮಾತನಾಡಿದ ಅವರು , ಜಿಲ್ಲೆಯಲ್ಲಿ 28 ಲಕ್ಷ ಕಾರ್ಡುಗಳನ್ನು ನೀಡುವ ಗುರಿಯನ್ನು ಹೊಂದಿದ್ದು, ಈವರೆಗೆ 7.4 ಲಕ್ಷ ಕಾರ್ಡುಗಳನ್ನು ವಿತರಿಸಲಾಗಿದೆ. ಇದೇ ಜೂ.8 ರಿಂದ 14 ರವರೆಗೆ ಆಯುμÁ್ಮನ್ ಕಾರ್ಡುಗಳನ್ನು ನೀಡಲು ಅಭಿಯಾನವನ್ನು ಹಮ್ಮಿಕೊಂಡಿದ್ದು, ಒಂದು ತಾಲ್ಲೂಕಿಗೆ 20 ಸಾವಿರ ಕಾರ್ಡುಗಳನ್ನು ವಿತರಿಸಲು ಸೂಚನೆ ನೀಡಲಾಯಿತು. ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರಗಳು, ಸಾಮಾನ್ಯ ಸೇವಾ ಕೇಂದ್ರಗಳು, ಸೇವಾಸಿಂಧು ಕೇಂದ್ರಗಳಲ್ಲಿ ಆದ್ಯತೆಯ ಕಾರ್ಡುಗಳನ್ನು ವಿತರಿಸಿ ನಿಗಧಿಪಡಿಸಿರುವ ಗುರಿಯನ್ನು ತಲುಪಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲೆಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗವನ್ನು ತಡೆಯಲು…

Read More