ತುಮಕೂರು: ನಗರದ ಎನ್.ಆರ್ ಕಾಲೋನಿ ಶೈಕ್ಷಣೀಕ ಭವನದಲ್ಲಿ ತುಮಕೂರು ನಗರ ಪೋಲಿಸ್ ಠಾಣೆಯಿಂದ ಜನಸಂಪರ್ಕ ಸಭೆ ನಡೆಯಿತು. ಈ ಸಭೆಯನ್ನು ಉದ್ದೇಶಿ ತುಮಕೂರು ಪೋಲಿಸ್ ಉಪ ಅದೀಕ್ಷಕರಾದ ಶ್ರೀನಿವಾಸ್ ರವರು ಮಾತನಾಡಿ ಜನರ ಸಮಸ್ಯೆಗಳನ್ನು ಬಗೆಹರಸಿಲು ಪೋಲಿಸ್ ಇಲಾಖೆ ಸದಾ ಸಿದ್ದವಾಗಿದೆ, ಯಾವುದೇ ಅಶುಬ್ದ ಘಟನೆಗಳಿಗೆ ಅವಕಾಶ ಕೊಡದೇ ಸಾರ್ವಜನಿಕರು ಇಲಾಖೆಯ ಸಹಭಾಗಿತ್ವದಿಂದ ಕ್ರೈಮ್ ನಡೆಯದಂತೆ ನೋಡಿಕೊಳ್ಳಲು ಸಹಕರಿಸಬೇಕು ಮತ್ತು ಎನ್.ಆರ್ ಕಾಲೋನಿ, ಉರಳಿತೋಟ, ನಿರ್ವಾಣಿಲೇ ಔಟ್, ಅಂಬೇಡ್ಕರ್ ನಗರ, ಆದರ್ಶನಗರ. ಶಾರದಾ ದೇವಿ ನಗರ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಇಲ್ಲಿನ ನಾಗರೀಕರು. ಪೋಷಕರು ತುರ್ತು ಸಂಧರ್ಬದಲ್ಲಿ 112 ಗೆ ಎಮೆರ್ಜೆನ್ಸಿ ಕರೆ ಮಾಡಿ ದೂರು ಸಲ್ಲಿಸಬಹುದು ಈ ವ್ಯಾಪ್ತಿಯಲ್ಲಿ ಗಾಂಜಾ. ಮಧ್ಯಪಾನ, ಸಲ್ಯೂಷನ್ ಇತರೆ ವಹಿವಾಟುಗಳು ಗಮನಿಸಿದಲ್ಲಿ ತಕ್ಷಣಾ ಮಾಹಿತಿ ನೀಡಿ ಭವಿಷ್ಯದಲ್ಲಿ ಸುಂಧರ ವಾತವರಣ ನಿರ್ಮಿಸಲು ನಾಗರೀಕರ ಸಹಭಾಗಿತ್ವ ಮತ್ತು ಸಹಕಾರವು ಮುಖ್ಯ. ಕಾಲೋನಿಗಳಲ್ಲಿ ಪ್ರತಿ ದಿನ ಬೆಳಗ್ಗೆ ಮತ್ತು ರಾತ್ರಿ ಭೀಟ್ ಪೋಲಿಸ್ ಕಡ್ಡಾಯವಾಗಿ…
Author: News Desk Benkiyabale
ತುಮಕೂರು: ಸ್ಮಾರ್ಟ್‍ಸಿಟಿ ಲಿಮಿಟೆಡ್ ವತಿಯಿಂದ ಬೀದಿಬದಿ ವ್ಯಾಪಾರಿಗಳ ಅನುಕೂಲಕ್ಕಾಗಿ ಸುಸಜ್ಜಿತವಾದ ಹಾಗೂ ನೈರ್ಮಲ್ಯಯುತವಾದ ಆಹಾರ ನೀಡಲು ರೂ. 65 ಲಕ್ಷ ವೆಚ್ಚದಲ್ಲಿ ಆಹಾರ ಮಾರಾಟದ ಮಳಿಗೆಗಳನ್ನು ನಿರ್ಮಿಸಲಾಗಿದ್ದು, ಈ ಮಳಿಗೆಗಳನ್ನು ಇಂದು ಸಂತೋಷದಿಂದ ಲೋಕಾರ್ಪಣೆಗೊಳಿಸುತ್ತಿದ್ದೇನೆ ಎಂದು ನಗರಾಭಿವೃದ್ಧಿ ಸಚಿವರಾದ ಬಿ.ಎ. ಬಸವರಾಜು(ಭೈರತಿ) ತಿಳಿಸಿದರು. ತುಮಕೂರು ನಗರ ಅತ್ಯಾಧುನಿಕ ನಗರವಾಗಿ ಹೊರ ಹೊಮ್ಮುತ್ತಿದೆ, ಬೆಂಗಳೂರಿಗೆ ಹತ್ತಿರದಲ್ಲಿರುವ ಕಾರಣ ತುಮಕೂರು ನಗರಕ್ಕೆ ಹೆಚ್ಚು ಒತ್ತು ಕೊಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸುಸುಜ್ಜಿತ ಆಧುನಿಕ ಬಸ್ ನಿಲ್ದಾಣ ಮತ್ತು ಸ್ಟೇಡಿಯಂ ಸೇರಿದಂತೆ ಇತರೆ ಪೂರ್ಣಗೊಂಡ ಯೋಜನೆಗಳನ್ನು ಲೋಕಾರ್ಪಣೆಗೊಳಿಸಲಾಗುವುದು ಎಂದರು. ಆಹಾರ ಮಳಿಗೆಗಳ ಫಲಾನುಭವಿಗಳು ಮಳಿಗೆಗಳನ್ನು ತಮ್ಮ ಮನೆಯ ರೀತಿಯಲ್ಲಿ ಸ್ವಚ್ಛವಾಗಿರಿಸಿಕೊಳ್ಳಬೇಕು ಎಂದು ಕರೆ ನೀಡಿದ ಸಚಿವರು ಮತ್ತು ಅಧಿಕಾರಿಗಳು ಈ ಫಲಾನುಭವಿಗಳಿಗೆ ಆದೇಶ ಪತ್ರಗಳನ್ನು ನೀಡಲಿದ್ದು, ಈ ಮೂಲಕ ಫಲಾನುಭವಿಗಳು ತಮ್ಮ ಜೀವನೋಪಾಯವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ರಾಜ್ಯದೆಲ್ಲೆಡೆ ಸ್ಮಾರ್ಟ್‍ಸಿಟಿ ಯೋಜನೆಗಳ ಕಾಮಗಾರಿಗಳು ಶೇ. 85ರಷ್ಟು ಪೂರ್ಣಗೊಂಡಿದ್ದು, ಬಸ್‍ಸ್ಟ್ಯಾಂಡ್, ಕ್ರೀಡಾಂಗಣ ಮುಂತಾದ ದೊಡ್ಡ ಸಂಕೀರ್ಣಗಳ…
ತುಮಕೂರು: ತಂಬಾಕಿನಿಂದ ಮನುಷ್ಯರಿಗಷ್ಟೇ ಅಲ್ಲ, ಪರಿಸರಕ್ಕೂ ಮಾರಕ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅಭಿಪ್ರಾಯಪಟ್ಟರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಆಯೋಜಿಸಲಾಗಿದ್ದ ‘ವಿಶ್ವ ತಂಬಾಕು ರಹಿತ ದಿನಾಚರಣೆ-2022’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಂಬಾಕು ಉತ್ಪನ್ನಗಳ ಸೇವನೆ ಮಾಡುವುದರಿಂದ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಮಾತ್ರ ಈವರೆಗೂ ಚರ್ಚಿಸಲಾಗುತ್ತಿತ್ತು. ಆದರೆ ತಂಬಾಕು ಉತ್ಪನ್ನಗಳನ್ನು ತಯಾರಿಸಲು ಮರಗಳನ್ನು ಕಡಿಯುವುದರಿಂದ ಪರಿಸರ ಮಾಲಿನ್ಯ, ತಂಬಾಕು ಉತ್ಪನ್ನ ತಯಾರಿಸುವ ಕಾರ್ಖಾನೆಗಳು ಹೊರಬಿಡುವವ ಹೊಗೆಯಿಂದ ವಾಯುಮಾಲಿನ್ಯ, ಕಾರ್ಖಾನೆಯ ಮಲಿನವನ್ನು ನೀರಿಗೆ ಬಿಡುವುದರಿಂದ ಜಲಮಾಲಿನ್ಯ ಉಂಟಾಗುತ್ತದೆ. ಇದರಿಂದ ಪರಿಸರಕ್ಕೂ ಮಾರಕವೆಂದು ತಿಳಿಸಿದರು. ಪ್ರಸಕ್ತ ವರ್ಷದ ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು ‘ತಂಬಾಕು ಪರಿಸರಕ್ಕೆ ಮಾರಕ’ ಎಂಬ ಧ್ಯೇಯ ವಾಕ್ಯದೊಂದಿಗೆ ಆಚರಿಸಲಾಗುತ್ತಿದ್ದು, ತಂಬಾಕು ಬೆಳೆಯುವುದನ್ನು ನಿಲ್ಲಿಸಿದಾಗ ಮಾತ್ರ ಜನರ ಹಾಗೂ ಪರಿಸರದ ಆರೋಗ್ಯವನ್ನು ರಕ್ಷಿಸಬಹುದು. ಅಲ್ಲದೆ ತಂಬಾಕು ಸೇವನೆಯಿಂದ ಉಂಟಾಗುವ ವಿವಿಧ ಬಗೆಯ ಕ್ಯಾನ್ಸರ್ ರೋಗವನ್ನು ತಡೆಗಟ್ಟಬಹುದು ಎಂದು ತಿಳಿಸಿದರು. ತಂಬಾಕು ವ್ಯಸನವನ್ನಷ್ಟೇ ಅಲ್ಲದೆ ಪರಿಸರ, ಮುಂದಿನ ಪೀಳಿಗೆ, ಆರೋಗ್ಯಕ್ಕೆ ಮಾರಕವಾಗುವಂತಹ…
ತುಮಕೂರು: ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥರವರನ್ನು ಯಾರೋ ಏನೋ ಹೇಳುತ್ತಾರೆ ಎಂದು ಗಡಿಪಾರು ಮಾಡಲು ಆಗುವುದಿಲ್ಲ. ಅಷ್ಟಕ್ಕೂ ಅವರು ಗಡಿಪಾರು ಮಾಡುವಂತಹ ಅಪರಾಧ ಏನು ಮಾಡಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಇಂದಿಲ್ಲಿ ಪ್ರಶ್ನಿಸಿದರು. ನಗರದಲ್ಲಿ ಜಿ.ಪಂ. ಕೆಡಿಪಿ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡಿಪಾರು ಮಾಡಬೇಕೆಂದರೆ ಅದಕ್ಕೆ ಆದಂತಹ ನಿಯಮಾವಳಿಗಳಿವೆ. ಈ ರೀತಿ ಮಾತನಾಡುವವರಿಗೆ ಆ ನಿಯಮಾವಳಿಗಳ ಬಗ್ಗೆ ಗೊತ್ತಿಲ್ಲ ಎಂದರು. ರೋಹಿತ್ ಚಕ್ರತೀರ್ಥ ಗಡಿಪಾರು ಆಗುವಂತಹ ಅಪರಾಧ ಏನು ಮಾಡಿದ್ದಾರೆ ಎಂಬ ಬಗ್ಗೆ ನನಗೆ ಗೊತ್ತಿಲ್ಲ. ಯಾರೋ ಏನೋ ಹೇಳುತ್ತಾರೆ ಎಂದು ಅದನ್ನೆಲ್ಲ ನಾವು ಕೇಳಲು ಸಾಧ್ಯವಿಲ್ಲ ಎಂದು ಅವರು ಹೇಳಿದರು. ಬಸವಣ್ಣನ ಪಠ್ಯ ತಿರುಚಲಾಗಿದೆ ಎಂದು ಸ್ವಾಮೀಜಿಯವರು ಸಿಟ್ಟಾಗಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈಗಾಗಲೇ ಶಿಕ್ಷಣ ಸಚಿವರು ಆ ಬಗ್ಗೆ ಉತ್ತರ ಕೊಟ್ಟಿದ್ದಾರೆ. ಅಲ್ಲದೆ ಸ್ವಾಮೀಜಿಯವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ ಎಂದು ಹೇಳಿದರು. ಈ ಘಟನೆ 2017 ರಲ್ಲಿ ಆಗಿರುವಂತಹದ್ದು.…
ತುಮಕೂರು: ನಗರದ ಹೊರವಲಯದ ಕ್ಯಾತ್ಸಂದ್ರದ ಮೈದಾಳ ರಸ್ತೆಯ (ಬಸವಾಪಟ್ಟಣ)ಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಡಿ. ದೇವರಾಜ ಅರಸು ಭವನವನ್ನು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಅರಗ ಜ್ಞಾನೇಂದ್ರ ಇಂದು ಲೋಕಾರ್ಪಣೆಗೊಳಿಸಿದರು. ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಡಿ. ದೇವರಾಜ ಅರಸು ಭವನ ನೂತನ ಕಟ್ಟಡವನ್ನು ಉದ್ಘಾಟಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ ಮಾತನಾಡಿ, ದೇವರಾಜ ಅರಸು ಭವನ ಹಿಂದುಳಿದ ವರ್ಗದ ಇಲಾಖೆ ವತಿಯಿಂದ 1 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದು, ಈ ಭವನವನ್ನು ಇಂದು ಉದ್ಘಾಟನೆ ಮಾಡಿದ್ದೇನೆ ಎಂದರು. ಬಿಸಿಎಂ ಇಲಾಖೆಯಿಂದ ಹಿಂದುಳಿದ ವರ್ಗದ ಜನರನ್ನು ಮೇಲೆತ್ತುವ ಮತ್ತು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ಕೆಲಸಕ್ಕೆ ರಾಜ್ಯ ಸರ್ಕಾರ ಉತ್ತೇಜನ ನೀಡುತ್ತಿದೆ. ಇಂತಹ ಭವನಗಳನ್ನು ನಿರ್ಮಾಣ ಮಾಡುವ ಮೂಲಕ ಹಿಂದುಳಿದ ವರ್ಗದ ಜನರಿಗೆ ಬೇಕಾಗಿರುವ ಆರ್ಥಿಕ ಚಟುವಟಿಕೆಗೆ ಉತ್ತೇಜನ ನೀಡುವ ಕೆಲಸ ನಡೆಯುತ್ತಿದೆ…
ತುಮಕೂರು: ಜಿಲ್ಲೆಯಲ್ಲಿ ನಡೆದ ಮೂರು ವಿವಿಧ ಸಮುದಾಯಗಳ ಸಮಾವೇಶಕ್ಕೆ ಗೈರಾಗಿದ್ದರೂ ಎಂಬುದನ್ನೇ ನೆಪ ಮಾಡಿಕೊಂಡು ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಕಾಂಗ್ರೆಸ್ ಪಕ್ಷದ ತೊರೆಯಲಿದ್ದಾರೆ ಎಂದು ಗುಲ್ಲೆಬ್ಬಿಸುವ ಕೆಲಸವನ್ನು ಕೆಲವರು ಮಾಡುತ್ತಿದ್ದು, ಇದು ಖಂಡನೀಯ ಎಂದು ಅಖಿಲ ಕರ್ನಾಟಕ ಡಾ.ಜಿ.ಪರಮೇಶ್ವರ್ ಯುವಸೈನ್ಯದ ರಾಜ್ಯಾಧ್ಯಕ್ಷ ನಗುತಾ ರಂಗನಾಥ್ ತಿಳಿಸಿದ್ದಾರೆ. ಖಾಸಗಿ ಹೊಟೇಲ್‍ವೊಂದರಲ್ಲಿ ಸಂಘದ ಸಭೆ ನಡೆಸಿ ಮಾತನಾಡಿದ ಅವರು, ಡಾ.ಜಿ.ಪರಮೇಶ್ವರ್ ಅವರ ತಂದೆಯ ಕಾಲದಿಂದಲೂ ಕಾಂಗ್ರೆಸ್ ಪಕ್ಷವನ್ನು ಅಪ್ಪಿ,ಒಪ್ಪಿ, ಅದರ ಸಂಘಟನೆಗೆ ಹಗಲಿರುಳೆನ್ನದೆ ದುಡಿದ್ದಾರೆ. ಬೇರೆ ನಾಯಕರಂತೆ ಅಧಿಕಾರಕ್ಕಾಗಿ, ರಾಜಕೀಯ ಅವಕಾಶಕ್ಕಾಗಿ ಮತ್ತೊಂದು ಪಕ್ಷಕ್ಕೆ ಹೋಗಿಲ್ಲ. ಆನಾರೋಗ್ಯದ ಸಂಬಂಧ ಮೇ.22 ರಂದು ನಡೆದ ಮಡಿವಾಳರ ರಾಜ್ಯ ಸಮಾವೇಶ ಹಾಗೂ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಸಮಾವೇಶ ಮತ್ತು ಮೇ.28 ರಂದು ನಡೆದ ಕುರುಬ ಸಮುದಾಯದ ಜಿಲ್ಲಾ ಸಮಾವೇಶಕ್ಕೆ ಬರಲು ಆಗಿಲ್ಲ. ಇದನ್ನೇ ನೆಪ ಮಾಡಿಕೊಂಡ ಕೆಲವರು ಡಾ.ಜಿ.ಪರಮೇಶ್ವರ್ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಪಕ್ಷ ಸೇರಲಿದ್ದಾರೆ. ಹಾಗಾಗಿ ಮೂರು ಸಮಾವೇಶಗಳಿಗೆ ಗೈರಾಗಿದ್ದಾರೆ. ರಾಜ್ಯದ ನಾಯಕರೊಂದಿಗೆ ಭಿನ್ನಾಭಿಪ್ರಾಯವಿದೆ…
ಚಿಕ್ಕನಾಯಕನಹಳ್ಳಿ: ದೇವಾಲಯ ಕಟ್ಟಡ ಕಾರ್ಯದಲ್ಲಿ ತನು-ಮನ-ಧನ ಎಲ್ಲವನ್ನೂ ಅರ್ಪಿಸುವ ಮೂಲಕ ನಾನು ಮಣ್ಣಿಗೆ ಹೋಗೋವರೆಗೂ ನಿಮ್ಮೊಂದಿಗೆ ಇರುತ್ತೇನೆ ಎಂದು ತಮ್ಮಡಿಹಳ್ಳಿ ವಿರಕ್ತ ಮಠಾಧೀಶ ಅಭಿನವ ಮಲ್ಲಿಕಾರ್ಜುನ ದೇಶಿಕೇಂದ್ರ ಮಹಾಸ್ವಾಮಿಗಳು ಹೇಳಿದರು ತಾಲೂಕಿನ ಹಂದನಕೆರೆ ಹೋಬಳಿ ಬೇವಿನಹಳ್ಳಿ ಗ್ರಾಮದಲ್ಲಿರುವ ಅಂತರಘಟ್ಟೆ ಕರಿಯಮ್ಮದೇವಿ ದೇವಾಲಯದ ಕಟ್ಟಡ ಕಾಮಗಾರಿಗೆ ರಸೀತಿ ವಿತರಿಸುವ ಕಾರ್ಯಕ್ರಮ ಹಾಗೂ ಎಸೆಸೆಲ್ಸಿ ಉತ್ತೀರ್ಣರಾದ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಭಾಗವಹಿಸಿ ಮಾತನಾಡುತ್ತಾ, 36 ಹಳ್ಳಿಗಳ ಗ್ರಾಮದೇವತೆ ಜಗನ್ಮಾತೆಯ ಕಾರ್ಯ ಯಾರ್ಯಾರ ಕೈಯಲ್ಲಿ ಕಾರ್ಯ ಮಾಡಿಸುವವಳೋ ಈ ಕ್ಷೇತ್ರ ಎಲ್ಲರ ಸಹಕಾರದಿಂದ ಅಭಿವೃದ್ಧಿ ಆಗಬೇಕು ನಾವು ಸಹ ಕ್ಷೇತ್ರಕ್ಕೆ ಸಂದರ್ಭದಲ್ಲಿ ಸಹಕರಿಸುವ ಮೂಲಕ ನಾನು ನಿಮ್ಮೊಂದಿಗೆ ಇರುತ್ತೇನೆ ಎಂದರು. ತುಮಕೂರು ಜಿಲ್ಲಾ ಪೆÇೀಲಿಸ್ ಅಧೀಕ್ಷಕ ರಾಹುಲ್ ಕುಮಾರ್ ಶಹಪುರ್ ವಾಡ್ ಇವರು ಮಾತನಾಡುತ್ತಾ ನಾನು ವಿರಕ್ತಮಠದ ಭಕ್ತನಾಗಿದ್ದು ನನ್ನ ನಂಬಿಕೆಗೆ ದೇವರು ಸತ್ಯವಾಗಿದ್ದರೆ ನನ್ನ ಕುಟುಂಬದೊಂದಿಗೆ ಇಲ್ಲಿಗೆ ಆಗಮಿಸಿ ಭಕ್ತಿ ಸಮರ್ಥಿಸಿದ್ದಾನೆ ಅದೇ ರೀತಿ ಅಂತರಘಟ್ಟೆ ಕರಿಯಮ್ಮದೇವಿ ಅಮ್ಮನವರ ನೂತನ…
ತುಮಕೂರು: ಕೇಂದ್ರ ಸರ್ಕಾರದ ವತಿಯಿಂದ ಪ್ರಾಯೋಜನೆಗೊಂಡ ವಿವಿಧ ಯೋಜನೆ/ ಕಾರ್ಯಕ್ರಮಗಳ ಕುರಿತಾದ ಗರೀಬ್ ಕಲ್ಯಾಣ ಸಮ್ಮೇಳನವನ್ನು ದೇಶಾದ್ಯಂತ ಇರುವ ಫಲಾನುಭವಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರು ವಿಡಿಯೋ ಸಂವಾದ ನಡೆಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಯೋಗದೊಂದಿಗೆ ಜಿಲ್ಲಾ ಪಂಚಾಯತ್ ಪ್ರಧಾನ ಮಂತ್ರಿಗಳ ನೇರ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಭಾಂಗಣದಲ್ಲಿ ನೆರೆದಿದ್ದ ಫಲಾನುಭವಿಗಳೊಂದಿಗೆ ಮಾತನಾಡಿದ ಶಾಸಕ ಜಿ.ಬಿ ಜ್ಯೋತಿಗಣೇಶ್ ಅವರು ಸ್ವಾತಂತ್ರ್ಯ ಬಂದು 75 ವರ್ಷವಾದ ಹಿನ್ನೆಲೆಯಲ್ಲಿ ಮಾನ್ಯ ಪ್ರಧಾನಮಂತ್ರಿಗಳು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಜನಕಲ್ಯಾಣ ಯೋಜನೆಗಳು ಜನಸಾಮಾನ್ಯರಿಗೆ ಯಾವ ರೀತಿಯಲ್ಲಿ ಫಲಪ್ರದವಾಗಿವೆ ಎಂಬುದನ್ನು ತಿಳಿಯಲು ಗರೀಬ್ ಕಲ್ಯಾಣ ಸಮ್ಮೇಳನ ನಡೆಸುತ್ತಿದ್ದಾರೆ ಎಂದರು ಪ್ರಧಾನಮಂತ್ರಿ ಆವಾಜ್ ಯೋಜನೆ (ಗ್ರಾಮೀಣ ಮತ್ತು ನಗರ), ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ, ಪಿ.ಎಂ ಉಜ್ವಲ ಯೋಜನಾ, ಪೋಷಣ್ ಅಭಿಯಾನ್, ಮಾತೃವಂದನಾ ಯೋಜನಾ, ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ ಮತ್ತು ನಗರ), ಜಲಜೀವನ್ ಮತ್ತು ಅಮೃತ್ ಯೋಜನೆ, ಪ್ರಧಾನಮಂತ್ರಿ ಸ್ವನಿಧಿ ಯೋಜನೆ, ಒಂದು ರಾಷ್ಟ್ರ ಒಂದು…
ಚಿಕ್ಕನಾಯಕನಹಳ್ಳಿ: ಕುರುಬರ ಜಾಗೃತಿ ಸಮಾವೇಶದ ಕಾರ್ಯಕ್ರಮವೊಂದರಲ್ಲಿ ಚಿಕ್ಕನಾಯಕನಹಳ್ಳಿ ಕ್ಷೇತ್ರದ ಮಾಜಿ ಶಾಸಕ ಸಿ.ಬಿ ಸುರೇಶ್ ಬಾಬು ಅಭಿಮಾನಿಗಳು ಸಮಾರಂಭದಲ್ಲಿ ಸುರೇಶ್‍ಬಾಬು ಹೆಸರನ್ನು ಕೈಬಿಟ್ಟಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅಭಿಮಾನಿಗಳ ಕೀರಾಟ ಸಂಘಟನಾಕಾರರು ಸುರೇಶ್ ಬಾಬು ಅವರ ಅನುಪಸ್ಥಿತಿಯಲ್ಲಿ ಕಾರ್ಯಕ್ರಮ ಆರಂಭವಾಯಿತು. ಈ ಸಂದರ್ಭದಲ್ಲಿ ಮಧುಗಿರಿಯ ಮಾಜಿ ಶಾಸಕ ಕೆ ಎನ್ ರಾಜಣ್ಣನವರು ಸುರೇಶ್ ಬಾಬು ಅವರ ಬಗ್ಗೆ ಕಾಂಗ್ರೆಸ್ ಪಕ್ಷಕ್ಕೆ ಬರುವಂತೆ ಇಡೀ ಸಮಾಜದ ಎದುರು ಸವಾಲೆಸೆಯುವ ಮೂಲಕ ಆಹ್ವಾನ ನೀಡಿ ಸುರೇಶ್ ಬಾಬು ಅಭಿಮಾನಿಗಳ ಆಕ್ರೋಶಕ್ಕೆ ಕಾರಣರಾದರು. ಈ ಸುದ್ದಿ ಇಡೀ ಜಿಲ್ಲೆಯಾದ್ಯಂತ ಹರಡುತ್ತಿದ್ದಂತೆ ಮಾಜಿ ಶಾಸಕ ಸಿ ಬಿ ಸುರೇಶ್ ಬಾಬು ಅವರಲ್ಲಿ ಅವರ ಅಭಿಮಾನಿಗಳು ಆಕ್ರೋಶವನ್ನು ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸ್ವತಹ ಮಾಜಿ ಶಾಸಕ ಸುರೇಶ್ ಬಾಬು ಮಾತನಾಡಿ, ಮಾಜಿ ಶಾಸಕ ಕೆ ಎನ್ ರಾಜಣ್ಣನವರು ಅವರ ಸದುದ್ದೇಶ ಒಳ್ಳೆಯದೇ ಆಗಿರಬಹುದು ಆದರೆ ಮೂಲತಹ ಕೆ ಎನ್ ರಾಜಣ್ಣನವರು ಕಾಂಗ್ರೆಸ್ಸಿನಲ್ಲಿ ಇದ್ದರೂ ಅವರಿಗೆ ವಿಧಾನಪರಿಷತ್ ಟಿಕೆಟ್ ಕಾಂಗ್ರೆಸ್…
ತುಮಕೂರು: ತುಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ತಂಬಾಕು ಪರಿಸರಕ್ಕೆ ಮಾರಕ ಎಂಬ ಘೋಷವಾಕ್ಯದೊಂದಿಗೆ ನಗರದಲ್ಲಿ ಜಾಗೃತಿ ಜಾಥಾ ನಡೆಸಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿವಿಧ ಇಲಾಖೆಗಳು ಹಾಗೂ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಸಾರ್ವಜನಿಕ ಆರೋಗ್ಯ ರಕ್ಷಣೆ ಉದ್ದೇಶದಿಂದ ನಗರದ ಜಿಲ್ಲಾಸ್ಪತ್ರೆ ಆವರಣದಿಂದ ಹಮ್ಮಿಕೊಂಡಿದ್ದ ಜಾಥಾಗೆ ಕಾನೂನು ಪ್ರಾಧಿಕಾರದ ಪ್ರಧಾನ ಕಾರ್ಯದರ್ಶಿಗಳೂ ಆದ ನ್ಯಾಯಮೂರ್ತಿ ರಾಘವೇಂದ್ರ ಶೆಟ್ಟಿಗಾರ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ನಂತರ ಮಾತನಾಡಿದ ನ್ಯಾಯಾಧೀಶರು, ಲಕ್ಷಾಂತರ ಮಂದಿ ತಂಬಾಕು ಸೇವನೆಯಿಂದ ಕ್ಯಾನ್ಸರ್, ಶ್ವಾಸಕೋಶಗಳ ಸಮಸ್ಯೆಗೆ ತುತ್ತಾಗಿ ಜೀವ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ತಂಬಾಕು ಸೇವನೆಯ ದುಷ್ಪರಿಣಾಮಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದರು. ಪ್ರತಿಯೊಬ್ಬರೂ ತಂಬಾಕು ಸೇವಿಸುವುದನ್ನು ನಿಲ್ಲಿಸಬೇಕು. ಸ್ವಾಸ್ಥ್ಯ ಸಮಾಜವನ್ನು ನಿರ್ಮಿಸಬೇಕು. ಈ ನಿಟ್ಟಿನಲ್ಲಿ ಜಾಥಾ ಕಾರ್ಯಕ್ರಮದ ಪ್ರಯೋಜನವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ಅವರು…











