ತುಮಕೂರು: ಒಂದು ಮಠ ಧಾರ್ಮಿಕ ಕಾರ್ಯಗಳಿಗಷ್ಟೇ ಸಿಮೀತವಾಗದೆ ತನ್ನ ಸುತ್ತಮುತ್ತಲಿನ ಜನರ ದುಃಖ ದುಮ್ಮಾನಗಳಿಗೆ ಪರಿಹಾರ ಕಂಡು ಹಿಡಿಯಬಹುದು ಎಂಬುದಕ್ಕೆ ಸಿದ್ದಗಂಗಾ ಮಠದ ಸಾಕ್ಷಿಯಾಗಿದೆ ಎಂದು ತುಮಕೂರು ಜಿಲ್ಲಾ ಉಸ್ತುವಾರಿ ಹಾಗು ಗೃಹ ಸಚಿವ ಅರಗ ಜ್ಞಾನೇಂದ್ರ ಅಭಿಪ್ರಾಯಪಟ್ಟಿದ್ದಾರೆ. ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹರಳೂರು ಗ್ರಾಮದಲ್ಲಿ ತ್ರಿವಿಧ ದಾಸೋಹಿ ಡಾ.ಶ್ರೀಶಿವಕುಮಾರಸ್ವಾಮೀಜಿಗಳ 115ನೇ ಜನ್ಮ ಜಯಂತಿ ಹಾಗೂ ಶ್ರೀವೀರಭದ್ರಸ್ವಾಮಿ ದೇವಾಲಯದ ನಿತ್ಯ ದಾಸೋಹ ಪ್ರಾರಂಭ ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನಾ ಮತ್ತು ಹರಳೂರು ಶಿವಕುಮಾರ್ ವಿಚರಿತ ಅರಿವಿನ ಕಣ್ಣು ಪುಸ್ತಕ ಬಿಡುಗಡೆ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡುತಿದ್ದ ಅವರು, ಡಾ. ಶ್ರೀಶಿವಕುಮಾರಸ್ವಾಮೀಜಿಗಳು ಇರದಿದ್ದರೆ ಲಕ್ಷಾಂತರ ಮಕ್ಕಳು ವಿದ್ಯೆ ವಂಚಿತರಾಗುವುದಲ್ಲದೆ, ಹಸಿವಿನಿಂದ ಸಾವನ್ನಪ್ಪುತಿದ್ದರು. ಹಾಗಾಗಿ ಮಠಗಳ ಕಾರ್ಯವೈಖರಿಗೆ ಶ್ರೀಸಿದ್ದಗಂಗಾ ಮಠ ಮಾದರಿ ಎಂದರು. ನಾನು ಜಗತ್ತಿನಲ್ಲಿಯೇ ಭಕ್ತಿ ಮತ್ತು ಪ್ರೀತಿಯಿಂದ ಕಾಣುವ ಯಾವುದಾದರೂ ಸ್ವಾಮೀಜಿ ಇದ್ದರೆ ಅದು ಲಿಂಗೈಕ್ಯ ಡಾ.ಶ್ರೀಶಿವಕುಮಾರ ಸ್ವಾಮೀಜಿಗಳು, ಅವರು ನಮಗೆ ನಾವು ಭೂಮಿಯ…
Author: News Desk Benkiyabale
ತುಮಕೂರು: ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಸಾರ್ವಭೌಮ. ಕನ್ನಡವನ್ನು ಎಲ್ಲೆಡೆ ಕಾಣಿಸುವ ಮತ್ತು ಕೇಳಿಸುವ ಕೆಲಸ ನಮ್ಮೆಲ್ಲರಿಂದ ಆಗಬೇಕು. ನಮ್ಮ ರಾಜ್ಯದ ಆಡಳಿತ ಭಾಷೆಯಾದ ಕನ್ನಡ ಭಾಷೆಯಲ್ಲಿ ನಮ್ಮ ಬದುಕಿದೆ, ಜೀವನಕ್ರಮವಿದೆ ಮತ್ತು ನಮ್ಮಗಳ ಭವಿಷ್ಯವಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಅಭಿಪ್ರಾಯ ವ್ಯಕ್ತಪಡಿಸಿದರು. ತುಮಕೂರು ಜಿಲ್ಲೆಯಲ್ಲಿ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಬಹು ರಾಷ್ಟ್ರೀಯ ಕಂಪನಿಗಳು ಮತ್ತು ಕೈಗಾರಿಕೆಗಳಲ್ಲಿ ಕಡ್ಡಾಯವಾಗಿ “ಕನ್ನಡ ಘಟಕ” ಕಾರ್ಯ ನಿರ್ವಹಿಸಬೇಕು. ಕನ್ನಡ ಬಳಕೆ ಸುಗಮವಾಗಿ ಸಾಗುವ ರೀತಿ ನೋಡಿಕೊಳ್ಳುವ ಜವಾಬ್ದಾರಿ ಈ ಕನ್ನಡ ಘಟಕದ್ದಾಗಿರುತ್ತದೆ. ಇನ್ನೊಂದು ತಿಂಗಳಲ್ಲಿ ಜಿಲ್ಲೆಯ ಎಲ್ಲಾ ಕೈಗಾರಿಕಾ ವಲಯಗಳಲ್ಲಿ ಕನ್ನಡ ಘಟಕ ಸ್ಥಾಪನೆ ಮತ್ತು ಕಡ್ಡಾಯ ಕನ್ನಡ ಬಳಸುವಿಕೆ ಕುರಿತಂತೆ ಕಟ್ಟುನಿಟ್ಟಾದ ನಿರ್ದೇಶನವನ್ನು ನೀಡುವಂತೆ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರಾದ ನಾಗೇಶ್ ಅವರಿಗೆ ಸೂಚಿಸಿದರು. ಅವರಿಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದ್ದ, ತುಮಕೂರು ಜಿಲ್ಲೆಯ ಕಚೇರಿಗಳಲ್ಲಿನ ಕನ್ನಡ ಬಳಕೆ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ,…
ತುಮಕೂರು: ಬಿಜೆಪಿ ತುಮಕೂರು ಸಂಘಟನಾತ್ಮಕ ಜಿಲ್ಲೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಶ್ರೀ ಹೆಚ್.ಎಸ್. ರವಿಶಂಕರ್ ರವರ ಅಧಿಕಾರ ಪದಗ್ರಹಣ ಸಮಾರಂಭ ಮತ್ತು ಜಿಲ್ಲಾ ಕಾರ್ಯಕಾರಿಣಿಯ ಉದ್ಘಾಟನಾ ಸಮಾರಂಭವು ತುಮಕೂರಿನ ಶಿರಾ ರಸ್ತೆಯಲ್ಲಿರುವ ಬಾವಿಕಟ್ಟೆ ಕಲ್ಯಾಣ ಮಂಟಪದಲ್ಲಿ ದಿನಾಂಕ 24.05.2022ರ ಮಂಗಳವಾರ ಬೆಳೆಗ್ಗೆ 10.30ಕ್ಕೆ ಆರಂಭಗೊಳಲಿದೆ. ಈ ಸಮಾರಂಭದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ, ವಿಧಾನ ಪರಿಷತ್ ಸದಸ್ಯರು ಮತ್ತು ದಾವಣಗೆರೆ ವಿಭಾಗದ ಪ್ರಭಾರಿ ಶ್ರೀ ಕೆ.ಎಸ್.ನವೀನ್, ರಾಜ್ಯ ಉಪಾಧ್ಯಕ್ಷರಾದ ಶ್ರೀ ಎಂ.ಬಿ.ನಂದೀಶ್, ರಾಜ್ಯ ಕಾರ್ಯದರ್ಶಿ ಶ್ರೀ ವಿನಯ್ ಬಿದರೆ, ರಾಜ್ಯ ರೈತಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀ ಎಸ್.ಶಿವಪ್ರಸಾದ್, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವರಾದ ಶ್ರೀ ಅರಗ ಜ್ಞಾನೇಂದ್ರ, ಸಚಿವರಾದ ಶ್ರೀ ಬಿ.ಸಿ.ನಾಗೇಶ್ ಮತ್ತು ಶ್ರೀ ಜೆ.ಸಿ.ಮಾಧುಸ್ವಾಮಿ, ಸಂಸದರಾದ ಶ್ರೀ ಜಿ.ಎಸ್.ಬಸವರಾಜು, ವಿಧಾನ ಪರಿಷತ್ ಸದಸ್ಯರಾದ ಶ್ರೀ ಚಿದಾನಂದ.ಎಂ.ಗೌಡ, ಸಿ.ನಾರಾಯಣಸ್ವಾಮಿ, ಮಾಜಿವಿಧಾನ ಪರಿಷತ್ ಸದಸ್ಯ ಡಾ|| ಎಂ.ಆರ್.ಹುಲಿನಾಯ್ಕ್‍ರ್, ಶಾಸಕರಾದ ಶ್ರೀ ಜಿ.ಬಿ.ಜ್ಯೋತಿಗಣೇಶ್, ಶ್ರೀ ಮಸಾಲೇ ಜಯರಾಮ್, ಶ್ರೀ ಡಾ|| ರಾಜೇಶ್‍ಗೌಡ, ಮಾಜಿ…
ತುಮಕೂರು: ಕಾಡುಗೊಲ್ಲ ಸಮುದಾಯದಲ್ಲಿ ಹೇರಳವಾದ ಜಾನಪದ ಸಂಪತ್ತಿದ್ದು ಇನ್ನೂ ಹೆಚ್ಚಿನ ಅಧ್ಯಯನ ನಡೆಯಬೇಕಿದೆ ಎಂದು ಕಾಡುಗೊಲ್ಲ ಸಮುದಾಯದ ಹಿರಿಯ ಮುಖಂಡ ಮಾಚೇನಹಳ್ಳಿ ಕರಿಯಪ್ಪ ಸಲಹೆ ನೀಡಿದರು. ತುಮಕೂರಿನ ಪ್ರವಾಸಿ ಮಂದಿರದ ಬಳಿ ಕಾಡುಗೊಲ್ಲ ಸಮುದಾಯದಿಂದ ಆಯೋಜಿಸಿದ್ದ ಜಾನಪದ ವಿದ್ವಾಸ ತೀ.ನಂ.ಶಂಕರನಾರಾಯಣ ಅವರ ಶ್ರದ್ದಾಂಜಲಿ, ನುಡಿನಮನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಕಾಡುಗೊಲ್ಲರ ಆಚಾರ ವಿಚಾರಗಳ ಬಗ್ಗೆ ಹೆಚ್ಚು ದಾಖಲೆಗಳು ಲಭ್ಯ ಇಲ್ಲದ ಕಾಲದಲ್ಲಿ ಚಿಕ್ಕನಾಯಕನಹಳ್ಳಿ ತಾಲ್ಲೂಕು ತೀರ್ಥಪುರದ ತೀ.ನಂ.ಶಂಕರನಾರಾಯಣ ಅವರು 7 ವರ್ಷಗಳ ಕಾಲ ಈ ಬುಡಕಟ್ಟು ಸಮುದಾಯದ ಬಗ್ಗೆ ಅಧ್ಯಯನ ನಡೆಸಿ ಕರ್ನಾಟಕ ಕಾಡುಗೊಲ್ಲರ ಸಂಪ್ರದಾಯಗಳು ಮತ್ತು ನಂಬಿಕೆಗಳು ಕುರಿತ ಪ್ರಬಂಧ ಹೊರತಂದರು. ಆ ನಂತರ ಈ ಜನಾಂಗದ ಅಧ್ಯಯನಕ್ಕೆ ಒಂದು ಹೊಸ ಮಾರ್ಗ ಸಿಕ್ಕಂತಾಯಿತು. ಕಾಡುಗೊಲ್ಲರ ಸಂಪ್ರದಾಯಗಳ ಸಾಕಷ್ಟು ಅಂಶಗಳು ಈ ಗ್ರಂಥದಲ್ಲಿ ಅಡಕವಾಗಿವೆ. ಎಷ್ಟೋ ಕಲಿಕಾ ವಿದ್ಯಾರ್ಥಿಗಳಿಗೆ ಇದೊಂದು ಆಕರ ಗ್ರಂಥವಾಗಿದೆ ಎಂದರು. ಕಾಡುಗೊಲ್ಲ ಸಮುದಾಯ ಬುಡಕಟ್ಟು ಆಚರಣೆಗಳನ್ನು ಪಾಲಿಸುತ್ತಿದ್ದು ಈ ಸಂಪ್ರದಾಯಗಳು ಕೆಲವರಿಗೆ ವಿಭಿನ್ನ ಎನಿಸುತ್ತಿವೆ.…
ತುಮಕೂರು: ದೇವರು, ಧರ್ಮ, ಆಹಾರದ ವಿಚಾರದಲ್ಲಿ ಜನರ ನಡುವೆ ವಿಷ ಬೀಜ ಬಿತ್ತುತ್ತಿರುವ ಆರ್.ಎಸ್.ಎಸ್. ಬಜರಂಗದಳ, ವಿಶ್ವ ಹಿಂದೂ ಪರಿಷತ್ ಬಗ್ಗೆ ಅಲ್ಪಸಂಖ್ಯಾತ ಸಮುದಾಯ ಎಚ್ಚರಿಕೆಯಿಂದ ಇರುವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ನಗರದ ಗಾಜಿನಮನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದವತಿಯಿಂದ ಆಯೋಜಿಸಿದ್ದ ಜಿಲ್ಲಾ ಅಲ್ಪಸಂಖ್ಯಾತರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡುತಿದ್ದ ಅವರು,ನಮ್ಮ ಸಂವಿಧಾನದಲ್ಲಿ ಧರ್ಮ ನಿರಪೇಕ್ಷತೆಯನ್ನು ಪ್ರತಿಪಾದಿಸಲಾಗಿದೆ.ನಾನು ಆಚರಿಸುವ ಧರ್ಮದ ಬಗ್ಗೆ ಗೌರವದಿಂದ ಇರುವುದರ ಜೊತೆಗೆ, ಇತರೆ ಧರ್ಮಗಳ ಬಗ್ಗೆ ಪ್ರೀತಿ ಬೆಳೆಸಿಕೊಳ್ಳಬೇಕು.ಅದೇ ನಿಜವಾದ ಭಾರತ ಎಂದರು. ನಾನು ಯಾವ ಧರ್ಮದಲ್ಲಿ ಹುಟ್ಟಿದ್ದೇನೆ ಎಂಬುದು ಮುಖ್ಯವಲ್ಲ. ನಾವ್ಯಾರು ಇಂತಹ ಧರ್ಮ, ಜಾತಿಯಲ್ಲಿ ಹುಟ್ಟಬೇಕು ಎಂದು ಅರ್ಜಿ ಹಾಕಿಕೊಂಡು ಹುಟ್ಟಿದವರಲ್ಲ.ಆದರೆ ನಾವೆಲ್ಲರೂ ಭಾರತೀಯರು ಎಂಬುದನ್ನು ಮರೆಯಬಾರದು.ಈ ದೇಶ ಒಂದು ಧರ್ಮಕ್ಕೆ ಸೇರಿದಲ್ಲ.ಎಲ್ಲರಿಗೂ ಸಮಾನ ಅವಕಾಶವಿದ.ಭಾರತದಲ್ಲಿರುವ ಎಲ್ಲಾ ಧರ್ಮಗಳ ಜನರ ನಡುವೆ ಸಹಬಾಳ್ವೆ ಆಗತ್ಯ.ಇದನ್ನೇ ನಮ್ಮ ಸಂವಿಧಾನವೂ ಪ್ರತಿಪಾದಿಸುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದರು. ಕುವೆಂಪು ಅವರ ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಹಲವು…
ತುರುವೇಕೆರೆ: ತಾಲ್ಲೂಕಿನ ಮಾಯಸಂದ್ರ ಹೋಬಳಿಯ ಶೆಟ್ಟಿಗೊಂಡನಹಳ್ಳಿ ಸಮೀಪ ಯಡಿಯೂರು ಕಲ್ಲೂರು ಮುಖ್ಯರಸ್ತೆಯಲ್ಲಿ ಏಕಕಾಲದಲ್ಲಿ ಮೂರು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ. ಜಲಧಿಗೆರೆ ಕಡೆಯಿಂದ ಕಾರ್ಯಕ್ರಮವೊಂದನ್ನು ಮುಗಿಸಿಕೊಂಡು ಕಲ್ಲೂರು ಕಡೆಗೆ ಡಿಸ್ ಕವರ್ ಮತ್ತು ಪಲ್ಸರ್ ಬೈಕ್ ಗಳಲ್ಲಿ ತೆರಳುತ್ತಿದ್ದ ನಾಲ್ವರು ತೆರಳುತ್ತಿದ್ದರು ಎನ್ನಲಾಗಿದ್ದು ಇತ್ತ ಕಲ್ಲೂರು ಕಡೆಯಿಂದ ಸ್ಪೆಂಡರ್ ಬೈಕಿನಲ್ಲಿ ಇಬ್ಬರು ಬರುತ್ತಿದ್ದರು ಎನ್ನಲಾಗಿದೆ. ಈ ಮೂರು ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿ ನಾಲ್ಕು ಸಾವನ್ನಪ್ಪಿದ್ದಾರೆ. ಇನ್ನು ಓರ್ವನ ಸ್ಥಿತಿ ಗಂಬೀರವಾಗಿದ್ದು ಸ್ಥಳೀಯರ ಸಹಾಯದಿಂದ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಪಘಾತದಲ್ಲಿ ಒಬ್ಬ ಅಪಾಯದಿಂದ ಪಾರಾಗಿದ್ದಾನೆ. ಮಾಯಸಂದ್ರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕೊರಟಗೆರೆ: ವಿಧವಾ ಮಹಿಳೆಯೊಬ್ಬರು ವಿಎಸ್‍ಎಸ್‍ಎನ್ ಸೊಸೈಟಿಯಲ್ಲಿ ಇಟ್ಟಿದ್ದ ಭದ್ರತಾ ಠೇವಣಿಯನ್ನು ಆ ಮಹಿಳೆಗೆ ಕೊಡಿಸುವಂತೆ ಮಹಿಳಾ ಮೂಲಭೂತ ಹಕ್ಕುಗಳ ಸಂರಕ್ಷಣಾ ಸಮಿತಿಯ ತಾಲ್ಲೂಕು ಅಧ್ಯಕ್ಷೆ ಜಿ.ನಾಗಲಕ್ಷ್ಮಿ ಅವರು, ಕರ್ನಾಟಕ ರಾಜ್ಯ ಮಹಿಳಾ ಆಯೋಗ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ತಾಲ್ಲೂಕಿನ ವಡ್ಡಗೆರೆ ಗಾಮದ ಪದ್ಮಲತಾ ಎಂಬುವವರು ವಿಎಸ್‍ಎಸ್‍ಎನ್ ಸೊಸೈಟಿಯಲ್ಲಿ 2015 ಆಗಸ್ಟ್ 29 ರಂದು 60,000 (ಅರವತ್ತು ಸಾವಿರ) ರೂ.ಗಳನ್ನು ಭದ್ರತಾ ಠೇವಣಿ ಇಟ್ಟಿದ್ದು, ಇದರ ಕಾಲಾವಧಿ ಏಳು ವರ್ಷಗಳು ಇದ್ದು ಈಗ ಬಡ್ಡಿ ಸೇರಿ 1,20,000 (ಒಂದು ಲಕ್ಷ ಇಪ್ಪತ್ತು ಸಾವಿರ) ರೂ.ಗಳು ನೀಡಬೇಕಾಗಿದೆ. ಪದ್ಮಲತಾ ಒಬ್ಬಂಟಿ ಮಹಿಳೆಯಾಗಿದ್ದು, ತುರ್ತಾಗಿ ಮೊಣಕಾಲಿನ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳಬೇಕಾಗಿದೆ. ಆದರೆ ವಿಎಸ್‍ಎಸ್‍ಎನ್ ಸೊಸೈಟಿಯಲ್ಲಿ ಇಟ್ಟಿದ್ದ ಬಾಂಡ್ ಮೆಚ್ಯೂರಿಟಿ ಆಗಿದ್ದು, ಕಾರ್ಯನಿರ್ವಹಣಾಧಿಕಾರಿ ಬೋರೇಗೌಡ ಎಂಬುವವರು ನಮ್ಮ ಬಳಿ ಹಣದ ಕೊರತೆ ಇದೆ. ಆಡಿಟ್ ಆಗಬೇಕು, ಕೇಂದ್ರ ಕಚೇರಿಯಿಂದ ಅನುದಾನ ಬರಬೇಕು ಎಂಬ ಸಬೂಬು ಹೇಳಿ ಆ ಮಹಿಳೆಗೆ ಹಣ ನೀಡದೆ…
ತುಮಕೂರು: ಪರಿಶಿಷ್ಟ ಜಾತಿ ಮತ್ತು ವರ್ಗಗಳ ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ ರಾಜನಹಳ್ಳಿಯ ಶ್ರೀವಾಲ್ಮೀಕಿ ಮಹರ್ಷಿಗಳು ನಡೆಸುತ್ತಿರುವ ಧರಣಿಗೆ ಬೆಂಬಲ ವ್ಯಕ್ತಪಡಿಸಿ ಇಂದು ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ನಗರದ ಟೌನ್‍ಹಾಲ್ ವೃತ್ತದಲ್ಲಿ ಸಮಾವೇಶಗೊಂಡ ನೂರಾರು ಪರಿಶಿಷ್ಟ ಜಾತಿ ಮತ್ತು ವರ್ಗಗಳ ಮುಖಂಡರುಗಳು ಸರಕಾರದ ವಿರುದ್ದ ಘೋಷಣೆಗಳನ್ನು ಕೂಗುತ್ತಾ ಅಶೋಕ ರಸ್ತೆಯ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಬಳಿ ಸಮಾವೇಶಗೊಂಡ ಹೋರಾಟಗಾರರನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಸದಸ್ಯೆ ಹಾಗೂ ಶಬರಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷೆ ಶ್ರೀಮತಿ ಶಾಂತಲಾ ರಾಜಣ್ಣ,ಮೀಸಲಾತಿ ಹೆಚ್ಚಳ ಮಾಡಿ ಎಂದು ನಮ್ಮ ಸಂವಿಧಾನ ಬದ್ದವಾದ ಹಕ್ಕನ್ನು ಕೇಳುತ್ತಿದ್ದೆವೆಯೇ ಹೊರತು ಭೀಕ್ಷೆಯನ್ನಲ್ಲ.ಸಂವಿಧಾನದ ಪ್ರಕಾರ ಜನಸಂಖ್ಯೆ ಅನುಗುಣವಾಗಿ ಮೀಸಲಾತಿ ಪ್ರಮಾಣ ಹಂಚಿಕೆಯಾಗಬೇಕು. ಈ ಮೊದಲು ನಾವು ಮೀಸಲಾತಿ ಹೆಚ್ಚಳ ಮಾಡಿ ಎಂದು ಕೇಳಿದರೆ ಅಂಕಿ…
ತುಮಕೂರು: ಯುವತಿ-ಯುವಕರಿಗೆ ಸೂಕ್ತ ಕೌಶಲ್ಯ ತರಬೇತಿ ನೀಡಿ, ಅಧಿಕೃತ ಪ್ರಮಾಣ ಪತ್ರ ವಿತರಿಸಿ, ಅವರ ಭವಿಷ್ಯ ಉಜ್ವಲವಾಗುವಂತೆ ನೋಡಿಕೊಳ್ಳುವುದು ಜಿಲ್ಲಾ ಕೌಶಲ್ಯ ಸಮಿತಿಯ ಜವಾಬ್ದಾರಿಯಾಗಿದೆ ಎಂದು ಮುಖ್ಯ ಕಾರ್ಯನಿರ್ವಣಾಧಿಕಾರಿ ಡಾ. ವಿದ್ಯಾಕುಮಾರಿ ತಿಳಿಸಿದರು. ಇಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕಾರ್ಯಕ್ರಮಗಳ ಅನುಷ್ಟಾನದ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರದ ಯೋಜನೆಗಳು ಜಿಲ್ಲೆಯಲ್ಲಿ ವಿಫುಲ ಉದ್ಯೋಗದ ಅವಕಾಶ ತೆರೆದಿವೆ. ಸ್ಥಳಿಯ ಯುವತಿ-ಯುವಕರಿಗೆ ಹೆಚ್ಚಿನ ಅವಕಾಶ ಕಲ್ಪಿಸಿ, ಉನ್ನತ ಗುಣಮಟ್ಟದ ಕೈಗಾರಿಕೆಗಳು ಹಾಗೂ ತಾಂತ್ರಿಕ ಶಿಕ್ಷಣ ಸಂಸ್ಥೆಗಳಿಂದ ಯುವತಿ-ಯುವಕರಿಗೆ ತರಬೇತಿ ನೀಡಬೇಕು. ದುರ್ಬಲ ಆರ್ಥಿಕ ಪರಿಸ್ಥಿತಿಯ ಕುಟುಂಬದ ವಿದ್ಯಾರ್ಥಿಗಳಿಗೆ ಈ ತರಬೇತಿಯು ಅವರ ಭವಿಷ್ಯವನ್ನು ಉತ್ತಮವಾಗಿ ರೂಪಿಸುತ್ತದೆ, ಹೆಚ್ಚಿನ ಸಂಖ್ಯೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡ ವರ್ಗದ ಬಡ ಹಾಗೂ ಮಧ್ಯಮ ವರ್ಗದ ಕುಟುಂಬದ ಯುವಕರಿಗೆ ಕೌಶಲ್ಯ ಅಭಿವೃದ್ಧಿಯ ತರಬೇತಿ ನೀಡಿ ಅವರ ಜೀವನೋಪಾಯಕ್ಕೆ ಸಹಾಯವಾಗುವಂತೆ…
ತುಮಕೂರು: ತುಮಕೂರಿನ ನಾಗರೀಕರಿಗೆ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಉತ್ತಮ ಆರೋಗ್ಯ, ಬೀದಿ ದೀಪ ವ್ಯವಸ್ಥೆ, ಒಳಚರಂಡಿ, ಉದ್ಯಾನವನಗಳ ಅಭಿವೃದ್ಧಿ ಮೂಲಕ ಸ್ವಚ್ಛ ಮತ್ತು ಹಸಿರು ತುಮಕೂರು ನಿರ್ಮಾಣಕ್ಕೆ 2022-23ನೇ ಸಾಲಿನ ಆಯವ್ಯಯದಲ್ಲಿ ಆದ್ಯತೆ ನೀಡಲಾಗಿದ್ದು, ಸ್ಮಾರ್ಟ್ ಸಿಟಿ ಯೋಜನೆ ವತಿಯಿಂದ ಉತ್ತಮ ಸಾರಿಗೆ, ಸಿಸಿ ಟಿವಿ ಅಳವಡಿಕೆ, ಕ್ರೀಡಾಂಗಣ ಅಭಿವೃದ್ಧಿ, ಗ್ಯಾಸ್‍ಲೈನ್ ಜೋಡಣೆ ಮುಂತಾದ ಸಾರ್ವಜನಿಕ ಅಭಿವೃದ್ಧಿ ಕಾರ್ಯಕ್ರಮಗಳು ಪ್ರಗತಿಯಲ್ಲಿರುತ್ತವೆ ಎಂದು ತುಮಕೂರು ಮಹಾನಗರಪಾಲಿಕೆ ತೆರಿಗೆ ಹಣಕಾಸು ಮತ್ತು ಅಪೀಲುಗಳ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಮತಿ ನಳಿನ ಇಂದ್ರಕುಮಾರ್ ಅವರು ತಿಳಿಸಿದರು. ಅವರು ತುಮಕೂರು ಮಹಾನಗರಪಾಲಿಕೆಯ 2022-23ನೇ ಸಾಲಿನ ಆಯವ್ಯಯ ಅಂದಾಜು ಮೇಲಿನ ಭಾಷಣ ಮಾಡುತ್ತಾ, ಪಾಲಿಕೆಯು ತನ್ನ ಆರ್ಥಿಕ ಇತಿಮಿತಿಗಳಲ್ಲಿ ಲಭ್ಯವಿರುವ ಸಂಪನ್ಮೂಲ ಬಳಸಿಕೊಂಡು ಆಯವ್ಯಯ ಅಂದಾಜು ತಯಾರಿಸಿದ್ದು, ಒಟ್ಟು ರೂ. 415.94ಲಕ್ಷಗಳ ಉಳಿತಾಯ ಬಜೆಟ್ ಮಂಡಿಸಲು ಸಂತಸವಾಗುತ್ತಿದೆ ಎಂದು ನುಡಿದರು. 2022-23ನೇ ಸಾಲಿಗೆ ತುಮಕೂರು ಮಹಾನಗರ ಪಾಲಿಕೆಯಲ್ಲಿ ಒಟ್ಟು ರೂ. 20811.15 ಲಕ್ಷಗಳ ಒಟ್ಟು ಸ್ವೀಕೃತಿಯನ್ನು ನಿರೀಕ್ಷಿಸಲಾಗಿದೆ.…











