Author: News Desk Benkiyabale

ಕೊರಟಗೆರೆ: ಪಟ್ಟಣದ ದೊಡ್ಡಪೇಟೆ ಬಡಾವಣೆಯ ಗಿರಿಜಮ್ಮ ರೇಣುಕಪ್ಪ ಎಂಬ ವೃದ್ಧ ದಂಪತಿ ಮನೆಯಲ್ಲಿ ಬೆಳಿಗ್ಗೆ 9ಗಂಟೆ ಸುಮಾರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕಣ್ಣಿನ ಆಪರೇಶನ್ ಮಾಡಿಸಿದರೆ ಹತ್ತು ಸಾವಿರ ಉಚಿತ ಹಣವನ್ನು ಕೊಡುತ್ತಾರೆ ಎನ್ನುವ ನೆಪದಲ್ಲಿ ಮನೆಯೊಳಗೆ ಬಂದ ಆಸಾಮಿ ಅಜ್ಜಿ ಮತ್ತು ತಾತ ನನ್ನ ನಂಬಿಸಲು ಆಧಾರ್ ಕಾರ್ಡ್ ರೇಷನ್ ಕಾರ್ಡ್ ಹಾಗೂ ಪೆನ್ಷನ್ ಕ್ಲಿಪ್ ಪಡೆದು ಅಧಿಕಾರಿಗಳಿಗೆ ಕಾಲ್ ಮಾಡುವಂತೆ ಮಾಡಿದೆ ಅಜ್ಜಿ ತಾತನನ್ನು ನಂಬಿಸಿದ್ದಾನೆ. ನಂತರ ಅಜ್ಜಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವ ನೆಪದಲ್ಲಿ ತನ್ನ ಬೈಕ್ ನಲ್ಲಿ ಕೂರಿಸಿಕೊಂಡು ಆಸ್ಪತ್ರೆಯ ಬಳಿ ಹೋದಾಗ ಆಪರೇಷನ್ ಮಾಡುತ್ತಾರೆ ಯಾರಾದರೂ ಒಡವೆಗಳನ್ನು ಕೇಳುತ್ತಾರೆ ಆದ್ದರಿಂದ ನನ್ನ ಬಳಿ ಕೊಡಿ ಎಂದು ಎಂದು ನಂಬಿಸಿ ಒಡವೆಗಳನ್ನೆಲ್ಲ ತೆಗೆದುಕೊಂಡು ಆತ ತಿರುಗಿ ನೋಡುವಷ್ಟರಲ್ಲಿ ಅಪರಿಚಿತ ವ್ಯಕ್ತಿಯು ನಾಪತ್ತೆಯಾಗಿರುತ್ತಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೊರಟಗೆರೆ ಪೆÇಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ ಎನ್ನಲಾಗಿದೆ.

Read More

ತುಮಕೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಂಯುಕ್ರಾಶ್ರಯದಲ್ಲಿ ಇಂದು ನಡೆದ ಮಕ್ಕಳ ಸಹಾಯವಾಣಿ 1098 ದಿನಾಚರಣೆ ಮತ್ತು ಮಾಸಾಚರಣೆ ಕುರಿತ ಜಾಥಾ ಕಾರ್ಯಕ್ರಮಕ್ಕೆ ನಗರದ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ವಿದ್ಯಾರ್ಥಿಗಳು, ಜಾಥಾ ಉದ್ದೇಶವನ್ನು ಅರ್ಥ ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳು ಬುದ್ದಿವಂತರು, ವಿಚಾರ ಮಾಡುವ ಶಕ್ತಿಯುಳ್ಳವರು, ಸಾಧಿಸುವಂತ ಛಲವುಳ್ಳರಾಗಿರಬೇಕು ಎಂದರಲ್ಲದೇ, ಮಕ್ಕಳ ಯಾವುದೇ ರೀತಿಯ ಸಹಾಯಕ್ಕಾಗಿ 1098 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದರೆ ಅಗತ್ಯ ರಕ್ಷಣೆ ಮತ್ತು ಪೋಷಣೆ ನೀಡಲಾಗುವುದು ಎಂದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ. ರಾಘವೇಂದ್ರ ಶೆಟ್ಟಿಗಾರ್ ಮಾತನಾಡಿ, ಮಕ್ಕಳ ಮೇಲೆ ವಿವಿಧ ರೀತಿಯ ದೌರ್ಜನ್ಯ ಪ್ರಕರಣಗಳು ವರದಿಯಾಗುತ್ತಲೇ ಇರುತ್ತವೆ. ಮಕ್ಕಳು ಯಾವುದೇ ತೊಂದರೆಗೆ ಒಳಗಾದಾಗ ಮಕ್ಕಳ ಸಹಾಯವಾಣಿ ಸಂಖ್ಯೆ1098 ಕರೆ ಮಾಡಿದರೆ ಇಲಾಖಾಧಿಕಾರಿಗಳು ಭೇಟಿ ನೀಡಿ ಅಗತ್ಯ ರಕ್ಷಣೆ ನೀಡುತ್ತಾರೆಂದರು. ಜಿಲ್ಲಾ ಮಕ್ಕಳ…

Read More

ತುಮಕೂರು: ಶಿಕ್ಷಣದಲ್ಲಿ ಕಲಾ, ವಾಣಿಜ್ಯ, ವಿಜ್ಞಾನ ಇವುಗಳಲ್ಲಿ ಯಾವುದು ಕೀಳಲ್ಲ. ನಿರಂತರ ಪರಿಶ್ರಮದಿಂದ ನಿಗಧಿತ ಗುರಿಯನ್ನು ತಲುಪಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿಗಾರ್ ಅಭಿಪ್ರಾಯಪಟ್ಟಿದ್ದಾರೆ. ನಗರದ ಬಾಲಭವನದಲ್ಲಿ ಶ್ರೀರಾಮ್ ಫೈನಾನ್ಸ್ ಸಂಸ್ಥೆ ಆಯೋಜಿಸಿದ್ದ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತಿದ್ದ ಅವರು, ಕಲಾ ವಿಭಾಗದಲ್ಲಿ ಓದುವವರು ದಡ್ಡರು, ಬಡವರು ಎಂಬ ಕೀಳಿರಿಮೆ ಬೇಡ. ಆರ್ಟ್ ವಿಷಯ ಓದಿಯೇ ಇಂದು ನ್ಯಾಯಾಧೀಶನಾಗಿದ್ದೇನೆ. ಹಾಗಾಗಿ ಯಾವುದು ಕೀಳಲ್ಲ. ಮೇಲಲ್ಲ. ಗುರಿ ತಲುಪಲು ನಾವು ಅಡ್ಡದಾರಿ ಹಿಡಿಯದೆ ಸರಿಯಾದ ದಾರಿಯಲ್ಲಿ ಮುನ್ನೆಡೆದರೆ ಮಾತ್ರ ಸಾಧನೆಯ ಶಿಖರ ಹೇರಲು ಸಾಧ್ಯ ಎಂದರು. ಪ್ರತಿಭಾವಂತ ವಿದ್ಯಾರ್ಥಿಗಳ ಕಲಿಕೆಗೆ ಬಡತನ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ ಇಂದು ಸರಕಾರದ ಜೊತೆಗೆ, ಶ್ರೀರಾಮ್ ಫೈನಾನ್ಸ್ ನಂತಹ ಹಲವಾರು ಸಂಘ ಸಂಸ್ಥೆಗಳು ಶಿಕ್ಷಣಕ್ಕೆ ಉತ್ತೇಜನ ನೀಡಲು ಕೈಜೋಡಿವೆ. ನಾವುಗಳು ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ಮುನ್ನೆಡೆಯಬೇಕು.ಹಕ್ಕು ಮತ್ತು ಕರ್ತವ್ಯಗಳನ್ನು ಸಮಾನವಾಗಿ ಸ್ವೀಕರಿಸುವ…

Read More

ತುಮಕೂರು: ಜಿಲ್ಲೆಯ ಜನರ ಆರೋಗ್ಯ ರಕ್ಷಣೆಗಾಗಿ ಗ್ರಾಮ-ಒನ್, ತುಮಕೂರು ಒನ್, ಸಾಮಾನ್ಯ ಸೇವಾ ಕೇಂದ್ರ, ತಾಲ್ಲೂಕು ಆರೋಗ್ಯ ಕೇಂದ್ರ, ಜಿಲ್ಲಾಸ್ಪತ್ರೆಗಳ ಮೂಲಕ ಅರ್ಹರಿಗೆ ಆಯುμÁ್ಮನ್ ಭಾರತ್-ಆರೋಗ್ಯ ಕರ್ನಾಟಕ(ಂಃಂಖಏ) ಕಾರ್ಡುಗಳನ್ನು ವಿತರಿಸಲು ತುರ್ತಾಗಿ ಕ್ರಮಕೈಗೊಳ್ಳಲು ಆಯಾ ತಹಶೀಲ್ದಾರ್, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಗಳು, ಪಾಲಿಕೆ ಆಯುಕ್ತರು ಹಾಗೂ ಮುಖ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈ. ಎಸ್. ಪಾಟೀಲ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಈಗಾಗಲೇ 7 ಲಕ್ಷ ಂಃಂಖಏ ಕಾರ್ಡುಗಳನ್ನು ವಿತರಿಸಲಾಗಿದ್ದು, ತಾಲ್ಲೂಕುವಾರು ಗ್ರಾಮವಾರು ಈ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಲಾಯಿತು. ಕೋವಿಡ್-19 ತಡೆಗಟ್ಟಲು ಲಸಿಕಾಕರಣ ಮುಂದುವರೆದಿದ್ದು, 12 ರಿಂದ 14 ಮತ್ತು 15-17 ವಯಸ್ಸಿನೊಳಗಿನ ಮಕ್ಕಳಿಗೆ ನೀಡುವ ಲಸಿಕೆಯನ್ನು ಶೇ.100ರಷ್ಟು ಪೂರ್ಣಗೊಳಿಸಬೇಕು ಎಂದರಲ್ಲದೇ, ಮೇ 16ರಿಂದ ಶಾಲೆಗಳು ಪ್ರಾರಂಭವಾಗಿದ್ದು, ಎಲ್ಲಾ ತಾಲ್ಲೂಕು ವೈದ್ಯಾಧಿಕಾರಿಗಳು, ತಹಶೀಲ್ದಾರರು, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿಗಳು ತಾಲ್ಲೂಕು ಶಿಕ್ಷಣಾಧಿಕಾರಿಗಳೊಂದಿಗೆ ಚರ್ಚಿಸಿ ವ್ಯಾಕ್ಸಿನೇಷನ್ ಪ್ರಗತಿ ಸಾಧಿಸಲು ಸೂಚಿಸಿದರು. ಅಂಗನವಾಡಿ ಕೇಂದ್ರಗಳಿಗೆ ನಿವೇಶನ…

Read More

ತುಮಕೂರು: ಎರಡು ವರ್ಷದ ನಂತರ ಪೂರ್ಣ ಪ್ರಮಾಣದಲ್ಲಿ ಶಾಲೆಗಳು ಪ್ರಾರಂಭವಾಗುತ್ತಿರುವುದು ಸಂತಸ ತಂದಿದೆ. ಕೋವಿಡ್‍ನಿಂದಾಗಿ ಶಾಲೆಗಳಲ್ಲಿ ಭೌತಿಕವಾಗಿ ತರಗತಿಗಳು ನಿರಂತರವಾಗಿ ನಡೆಯದ ಕಾರಣ ಪಠ್ಯ ಕ್ರಮ ಹಿಂದುಳಿದಿದ್ದು, ಇದನ್ನು ಸರಿದೂಗಿಸಿ ಗುಣಮಟ್ಟದ ಶಿಕ್ಷಣವನ್ನು ನೀಡುವ ಮೂಲಕ ಕಲಿಕಾ ಅಂತರವನ್ನು ಸರಿದೂಗಿಸಲೆಂದೇ 2022-23ನೇ ಶೈಕ್ಷಣಿಕ ವರ್ಷವನ್ನು “ಕಲಿಕಾ ಚೇತರಿಕೆ” ವರ್ಷ ಎಂದು ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಎಸ್. ಬೊಮ್ಮಾಯಿ ಅವರು ತಿಳಿಸಿದರು. ನಗರದ ಎಂಪ್ರೆಸ್ ಕರ್ನಾಟಕ ಪಬ್ಲಿಕ್ ಶಾಲೆ ಸಭಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ ವತಿಯಿಂದ ಏರ್ಪಡಿಸಲಾಗಿದ್ದ 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ, ಉಚಿತ ಪಠ್ಯ ಪುಸ್ತಕ ವಿತರಣೆ ಹಾಗೂ ಕಲಿಕಾ ಚೇತರಿಕೆ ವರ್ಷದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತಿದ್ದರು. ಶಾಲಾ ಪ್ರಾರಂಭೋತ್ಸವ ಒಂದು ಮಹತ್ವದ ಕಾರ್ಯಕ್ರಮ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ನಮ್ಮ ಕರುನಾಡ ಮಕ್ಕಳಿಗೆ ಗುಣಮಟ್ಟದ ಮೂಲಭೂತ ಶಿಕ್ಷಣ ಅತ್ಯವಶ್ಯಕ. ಮಕ್ಕಳಿಗೆ ಅಕ್ಷರ ಜ್ಞಾನ ಮತ್ತು ಸಂಖ್ಯಾ ಜ್ಞಾನದ ಕೊರತೆ ಉಂಟಾಗಬಾರದು.…

Read More

ತುಮಕೂರು: ನಗರದಲ್ಲಿ ಸ್ಮಾರ್ಟ್‍ಸಿಟಿ ಯೋಜನೆಯಡಿ ಅಭಿವೃದ್ಧಿಪಡಿಸಿರುವ ಆಲದಮರ ಪಾರ್ಕ್ ನಿರ್ವಹಣೆ ಜವಾಬ್ದಾರಿಯನ್ನು ಪ್ರೆಸ್ ಕ್ಲಬ್‍ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಸ್ತಾಂತರಿಸಿದರು. ನಗರದ ಜ್ಯೂನಿಯರ್ ಕಾಲೇಜು ಆವರಣದಲ್ಲಿರುವ ಆಲದಮರದ ಪಾರ್ಕ್‍ನಲ್ಲಿ ಆಲದ ಸಸಿ ನೆಟ್ಟು ನೀರೆರೆಯುವ ಮೂಲಕ ಪ್ರೆಸ್‍ಕ್ಲಬ್ ಕಾರ್ಯ ಚಟುವಟಿಕೆಗೆ ವಿದ್ಯುಕ್ತ ಚಾಲನೆ ನೀಡಿದರು. ಆಲದಮರದ ಪಾರ್ಕ್‍ನಲ್ಲಿ ಸಿದ್ದಗೊಳಿಸಿದ್ದ ವೇದಿಕೆಯಲ್ಲಿ ಪ್ರೆಸ್‍ಕ್ಲಬ್‍ನ ಉಪಾಧ್ಯಕ್ಷರುಗಳಾದ ಶ್ರೀನಿವಾಸರೆಡ್ಡಿ, ಕರುಣಾಕರ್, ಮಾರುತಿ ಗಂಗಹನುಮಯ್ಯ ಹಾಗೂ ಪ್ರಧಾನ ಕಾರ್ಯದರ್ಶಿ ಯೋಗೀಶ್ ಅವರಿಗೆ ಆಲದ ಮರದ ಪಾರ್ಕ್ ನಿರ್ವಹಣೆ ಹೊಣೆಯನ್ನು ದಾಖಲಾತಿ ಹಸ್ತಾಂತರಿಸುವ ಮೂಲಕ ಮುಖ್ಯಮಂತ್ರಿಗಳು ನೀಡಿದರು. ನಂತರ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಸ್ಮಾರ್ಟ್‍ಸಿಟಿ ಯೋಜನೆಯಡಿ ಅಭಿವೃದ್ಧಿಪಡಿಸಿರುವ ಆಲದ ಮರದ ಪಾರ್ಕ್‍ನ ನಿರ್ವಹಣೆಯ ಜವಾಬ್ದಾರಿಯನ್ನು ಪ್ರೆಸ್‍ಕ್ಲಬ್‍ಗೆ ವಹಿಸುತ್ತಿರುವುದು ಉತ್ತಮ ಕಾರ್ಯವಾಗಿದೆ. ಇದರಿಂದ ಪ್ರೆಸ್‍ಕ್ಲಪ್‍ನವರಿಗೆ ಸಾಮಾಜಿಕ ಹೊಣೆಗಾರಿಕೆ, ಪರಿಸರ ಕಾಳಜಿ ಎಷ್ಟಿದೆ ಎಂಬುದು ಗೊತ್ತಾಗುತ್ತದೆ ಎಂದರು. ಸಾಮಾಜಿಕ ಹೊಣೆಗಾರಿಕೆ ಎಂಬುದು ಬಹಳ ಮುಖ್ಯ. ಈ ನಿಟ್ಟಿನಲ್ಲಿ ಪ್ರತಿಯೊಂದು ಸಂಘ ಸಂಸ್ಥೆಗಳು ಸಹ ಪ್ರಯತ್ನಗಳನ್ನು ನಡೆಸಲಿ ಎಂದು…

Read More

ತುಮಕೂರು: ಪತ್ರಕರ್ತರ ಹಿತಕಾಯಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನಗರದ ಬಾಳನಕಟ್ಟೆಯ ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಪಕ್ಕದಲ್ಲಿರುವ ಪತ್ರಿಕಾ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಜಿಲ್ಲಾ ಸಂಘದಿಂದ ಸೋಮವಾರ ಹಮ್ಮಿಕೊಂಡಿದ್ದ ಪತ್ರಿಕಾ ಭವನ ನವೀಕರಣ ಕಾಮಗಾರಿಗೆ ಚಾಲನೆ ನೀಡಿ, ಪತ್ರಕರ್ತರ ನಾಮಫಲಕ ಅನಾವರಣಗೊಳಿಸಿ ಮಾತನಾಡಿದ ಅವರು, ರಾಜ್ಯದ ಗ್ರಾಮೀಣ ಪ್ರದೇಶದ ಪತ್ರಕರ್ತರ ಸಮಸ್ಯೆಗಳನ್ನು ಬಗೆ ಹರಿಸುವುದರ ಜೊತೆಗೆ ನಗರ ಪ್ರದೇಶದ ಪತ್ರಕರ್ತರ ಸಮಸ್ಯೆಗಳನ್ನೂ ಬಗೆ ಹರಿಸಲು ಮುಂದಾಗಿರುವುದಾಗಿ ತಿಳಿಸಿದರು. ಬಿ.ಎಸ್. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ತುಮಕೂರು ಜಿಲ್ಲಾ ಪತ್ರಿಕಾ ಭವನ ನಿರ್ಮಾಣಕ್ಕೆ 25 ಲಕ್ಷ ರೂ. ಅನುದಾನ ನೀಡಿದ್ದರ ಹಿನ್ನಲೆಯಲ್ಲಿ ಪತ್ರಿಕಾ ಭವನ ನಿರ್ಮಾಣವಾಗಿತ್ತು. ತಂತ್ರಜ್ಞಾನ ಬೆಳೆದಂತೆಲ್ಲಾ ಸಮಾಜದ ಓರೆ ಕೋರೆಗಳನ್ನು ತಿದ್ದುವ ಪತ್ರಕರ್ತರ ಸಂಖ್ಯೆಯೂ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿರುವ ಪತ್ರಿಕಾ ಭವನ ಇನ್ನೂ ಉತ್ತಮ ರೀತಿಯಲ್ಲಿ ನಿರ್ಮಾಣವಾಗಬೇಕೆಂಬ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಜಿಲ್ಲಾ ಸಂಘದ ಮನವಿ ಮೇರೆಗೆ ಇದರ ನವೀಕರಣಕ್ಕೆ 18 ಲಕ್ಷ ರೂ.…

Read More

ತುಮಕೂರು: ಸಮವಸ್ತ್ರದಲ್ಲಿರುವ ನಮ್ಮ ವರ್ತನೆಗಳನ್ನು ಸಮಾಜವು ಸೂಕ್ಷ್ಮವಾಗಿ ಗಮನಿಸುತ್ತದೆ ಆದ್ದರಿಂದ ಯಾವುದೇ ಇಲಾಖೆಯ ಸಮವಸ್ತ್ರಧಾರಿ ಸಿಬ್ಬಂದಿಗೆ ವರ್ತನೆ ಎಂಬುದು ಬಹಳ ಮುಖ್ಯ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಟಿ.ಜೆ.ಉದೇಶ್ ಅಭಿಪ್ರಾಯಪಟ್ಟರು. ಜಿಲ್ಲಾ ಗೃಹ ರಕ್ಷಕ ದಳವು ಶನಿವಾರ ಸಿದ್ಧಗಂಗಾಮಠದಲ್ಲಿ ನೂತನ ಗೃಹ ರಕ್ಷಕರಿಗೆ ಆಯೋಜಿಸಿದ್ದ 10 ದಿನಗಳ ಮೂಲ ತರಬೇತಿ ಶಿಬಿರದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಪೊಲೀಸ್, ಅಗ್ನಿಶಾಮಕ ಹಾಗೂ ಗೃಹ ರಕ್ಷಕ ದಳದ ಸಿಬ್ಬಂದಿ ಒಬ್ಬರಿಗೊಬ್ಬರು ಪೂರಕವಾಗಿ ಸಮನ್ವಯದಿಂದ ಕರ್ತವ್ಯ ನಿರ್ವಹಿಸುತ್ತಾರೆ. ಕರ್ತವ್ಯದ ವೇಳೆ ನಾವೆಲ್ಲ ನಮ್ಮ ಸಮವಸ್ತ್ರದ ಶರ್ಟಿನ ತೋಳನ್ನು ಅರ್ಧಕ್ಕೆ ಮಡಚಿರುತ್ತೇವೆ. ಶರ್ಟಿನ ತೋಳನ್ನು ಪೂರ್ತಿ ಬಿಟ್ಟುಕೊಂಡು ಓಡಾಡಬಹುದು ಆದರೆ ನಾವು ಆ ರೀತಿ ಮಾಡುವುದಿಲ್ಲ, ಶರ್ಟಿನ ಅರ್ಧ ತೋಳನ್ನು ಮಡಚುವುದು ನಾವು ಸದಾ ಕಾಲ ಕರ್ತವ್ಯಕ್ಕೆ ಸಿದ್ಧ ಎಂಬುದನ್ನು ಸಂಕೇತಿಸುತ್ತದೆ ಎಂದು ಗೃಹ ರಕ್ಷಕ ದಳದ ಪ್ರಶಿಕ್ಷಾಣಾರ್ಥಿಗಳಿಗೆ ಹುಮ್ಮಸ್ಸು ತುಂಬಿದ ಅವರು, ಮುಂದಿನ ದಿನಗಳಲ್ಲಿ ನಿಮ್ಮನ್ನು ವಿವಿಧ ಇಲಾಖೆಗಳಿಗೆ ನಿಯೋಜನೆ ಮಾಡಲಾಗುತ್ತದೆ…

Read More

ಗುಬ್ಬಿ : ತಾಲ್ಲೂಕಿನ ದಲಿತ ಸಮುದಾಯದವರಿಗೆ ರುದ್ರ ಭೂಮಿ ಮಂಜೂರಾತಿ ಮಾಡಬೇಕು ಎಂದು ದಲಿತ ಮುಖಂಡರು ಸಭೆಯಲ್ಲಿ ತಾಲೂಕು ಆಡಳಿತವನ್ನು ಆಗ್ರಹಿಸಿದರು. ದ.ಸಂ.ಸ ಜಿಲ್ಲಾ ಸಂಚಾಲಕ ನಿಟ್ಟೂರು ರಂಗಸ್ವಾಮಿ ಮಾತನಾಡಿ ತಾಲೂಕು ಆಡಳಿತದ ವತಿಯಿಂದ ತಾಲೂಕು ಪಂಚಾಯಿತಿ ಸಂಭಾಗಣದಲ್ಲಿ ಆಯೋಜಿಸಿದ್ದ ದಲಿತರ ಕುಂದುಕೊರತೆ ಸಭೆಯಲ್ಲಿ ಮಾತನಾಡಿದ ಮುಖಂಡರು ತಾಲ್ಲೂಕಿನ ಯಾವುದೇ ದಲಿತ ಗ್ರಾಮದಲ್ಲಿ ದಲಿತರಿಗೆ ಸ್ಮಶಾನ ವಿಲ್ಲ ಇರುವ ಕಡೆ ಪ್ರಭಾವಿಗಳು ಜಾಗವನ್ನು ಒತ್ತುವರಿ ಹಾಗೂ ಖಾತೆ ಮಾಡಿಸಿಕೊಂಡಿದ್ದಾರೆ ದಲಿತರು ಸತ್ತರೆ ಶವ ಸಂಸ್ಕಾರಕ್ಕೆ ಬಹಳ ತೊಂದರೆ ಯಾಗುತ್ತಿದೆ.ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ದಲಿತರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಮುಂದಾಗುತ್ತಿಲ್ಲ ಕೇವಲ ಸಭೆಯಲ್ಲಿ ಮಾತ್ರ ದಲಿತರ ಸಮಸ್ಯೆ ಬಗೆಹರಿಸುತ್ತೇವೆ ಎಂದು ಹೇಳುವ ಅಧಿಕಾರಿಗಳು ಇದುವರೆವಿಗೂ ಸಮಸ್ಯೆ ಬಗೆಹರಿದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮುಖಂಡ ನಿಟ್ಟೂರು ನಾಗರಾಜ್ ಮಾತನಾಡಿ ತಾಲ್ಲೂಕಿನಲ್ಲಿ ದಲಿತರ ಜಮೀನು ಒತ್ತುವರಿಯಾಗಿದೆ ಕೆಲವು ಗ್ರಾಮದಲ್ಲಿ ದಲಿತರಿಗೆ ಮೀಸಲಿರುವ ಜಮೀನು ಮಂಜೂರಾತಿ ಮಾಡುವಲ್ಲಿ ತಾಲೂಕು ಆಡಳಿತ ವಿಫಲವಾಗಿದೆ .ಜಮೀನುಗಳು ಪ್ರಭಾವಿಗಳ ಪಾಲಾಗುತ್ತಿದೆ ಕಂದಾಯ…

Read More

ಕೊರಟಗೆರೆ: ಶಾಸಕರಾದ ಡಾ.ಜಿ.ಪರಮೇಶ್ವರ್ ಇಚ್ಚಾಶಕ್ತಿ ಕೊರತೆ ಮತ್ತು ಅಭಿವೃದ್ದಿ ನಿರ್ಲಕ್ಷದಿಂದ ಶಾಶ್ವತ ಯೋಜನೆಯ ಅನುಷ್ಠಾನವೇ ಸ್ಥಗೀತವಾಗಿ ಕೊರಟಗೆರೆ ಕ್ಷೇತ್ರವು ಅಭಿವೃದ್ದಿಯಿಂದ ಸಂಪೂರ್ಣವಾಗಿ ವಂಚಿತವಾಗಿದೆ ಎಂದು ಮಾಜಿ ತೆಂಗುನಾರು ಅಭಿವೃದ್ದಿ ನಿಗಮದ ಅಧ್ಯಕ್ಷ ಜಿ.ವೆಂಕಟಾಚಲಯ್ಯ ಆರೋಪ ಮಾಡಿದರು. ಕೊರಟಗೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜಯಮಂಗಳಿ ಮತ್ತು ಸುವರ್ಣಮುಖಿ ನದಿಪಾತ್ರದ ರೈತರ ಶಾಶ್ವತ ನೀರಿಗಾಗಿ ಹೋರಾಟ ಸಮಿತಿ ಮತ್ತು ರೈತಸಂಘದಿಂದ ಇತ್ತೀಚಿಗೆ ಏರ್ಪಡಿಸಲಾಗಿದ್ದ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದರು. ಬಯಲುಸೀಮೆ ಕ್ಷೇತ್ರವಾದ ಕೊರಟಗೆರೆಗೆ ಈಗಾಗಲೇ ಹೇಮಾವತಿ ನೀರು ಮರೀಚಿಕೆ ಆಗಿದೆ. ಕೊರಟಗೆರೆ ಕ್ಷೇತ್ರದ ಶಾಸಕ ಡಾ.ಜಿ.ಪರಮೇಶ್ವರ್ ನಿರ್ಲಕ್ಷದಿಂದ ಈಗ ಎತ್ತಿನಹೊಳೆ ಯೋಜನೆಯ ಬಫರ್‍ಡ್ಯಾಂ ಸಹ ದೊಡ್ಡಬಳ್ಳಾಪುರ ಕ್ಷೇತ್ರಕ್ಕೆ ಸ್ಥಳಾಂತರ ಮಾಡುವ ಹುನ್ನಾರ ನಡೆಯುತ್ತೀದೆ. ಮೇ.16ರಂದು ಕೊರಟಗೆರೆ ಪಟ್ಟಣದಲ್ಲಿ ಶಾಶ್ವತ ನೀರಿಗಾಗಿ ಸಾವಿರಾರು ರೈತರಿಂದ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ರೈತಸಂಘದ ಕೊರಟಗೆರೆ ಅಧ್ಯಕ್ಷ ಕೋಡ್ಲಹಳ್ಳಿ ಸಿದ್ದರಾಜು ಮಾತನಾಡಿ ಬಹುರ್ ಹುಕ್ಕುಂ ಕಮಿಟಿ ರಚನೆಯಾಗಿ ಈಗಾಗಲೇ 4ತಿಂಗಳು ಕಳೆದಿದೆ. ಕಳೆದ 4ವರ್ಷದಿಂದ ಒಬ್ಬರಿಗೂ ಸಾಗುವಳಿ ಚೀಟಿ…

Read More