ತುಮಕೂರು: ಇಂದಿನ ಮಕ್ಕಳಿಗೆ ಹೇಮರೆಡ್ಡಿ ಮಲ್ಲಮ್ಮಳ ಆದರ್ಶಗಳನ್ನು ಕಲಿಸುವುದು ಬಹಳ ಮುಖ್ಯವಾಗಿದೆ ಎಂದು ಸಂಸದರಾದ ಜಿ.ಎಸ್. ಬಸವರಾಜು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಜಿಲ್ಲಾ ರೆಡ್ಡಿ ಜನಸಂಘ(ರಿ) ಇವರ ಸಂಯುಕ್ತಾಶ್ರಯದಲ್ಲಿ ಶಿವಶರಣೆ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ ಕಾರ್ಯಕ್ರಮವನ್ನು ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿಂದು ಭಾವಚಿತ್ರಕ್ಕೆ ಪುμÁ್ಪರ್ಚನೆ ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಇಂದಿನ ಸಮಾಜದಲ್ಲಿ ಕುಟುಂಬಗಳಲ್ಲಿ ಹೊಂದಾಣಿಕೆ ಇಲ್ಲದೆ ವೃದ್ಧಾಶ್ರಮಗಳು, ಅನಾಥಾಶ್ರಮಗಳು ಹೆಚ್ಚಾಗಿವೆ. ಹೇಮರೆಡ್ಡಿ ಮಲ್ಲಮ್ಮ ಸಂಪದ್ಭರಿತವಾದ ಸಮಾಜವನ್ನು ಕಟ್ಟಿದವರು. ಇಂದಿನ ಯುವಜನರು ಹೇಮರೆಡ್ಡಿ ಮಲ್ಲಮ್ಮ ಮತ್ತು ಮಹಾಯೋಗಿ ವೇಮನರ ಜೀವನ ಆದರ್ಶಗಳನ್ನು ತಿಳಿದುಕೊಳ್ಳಬೇಕು ಎಂದರು. ಕರ್ನಾಟಕದಲ್ಲಿ ಮನೆ ಮಾತಾಗಿರುವ ಶರಣೆಯರಾದ ಅಕ್ಕ ಮಾಹಾದೇವಿ ಹಾಗೂ ಹೇಮರೆಡ್ಡಿ ಮಲ್ಲಮ್ಮ ಮಹಾಸಾಧ್ವಿಯರಾಗಿದ್ದರು. ಸಮಾಜದಲ್ಲಿ ಬಡತನ, ಕೆಟ್ಟ ಆಲೋಚನೆಗಳನ್ನು ದೂರವಾಗಿಸಿ ದಾನ ಧರ್ಮಗಳನ್ನು ಅಳವಡಿಸಿಕೊಂಡವರು ಎಂದು ತಿಳಿಸಿದರು. ಕ.ಸಾ.ಪ ಅಧ್ಯಕ್ಷ…
Author: News Desk Benkiyabale
ಚಿಕ್ಕನಾಯಕನಹಳ್ಳಿ: ಸುಮಾರು 25 ವರ್ಷಗಳಿಂದ ಹೊರಗುತ್ತಿಗೆ ನೌಕರನಾಗಿ ಪುರಸಭೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರೇಣುಕಪ್ಪ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದ ವ್ಯಕ್ತಿಯ ಶವವನ್ನು ಪುರಸಭೆಯ ಆವರಣದಲ್ಲಿ ಇಟ್ಟು ಕುಟುಂಬಕ್ಕೆ ಪರಿಹಾರ ನೀಡಬೇಕು ಮತ್ತು ಮಗನಿಗೆ ನೌಕರಿ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಯಿತು ಮೃತ ರೇಣುಕಪ್ಪ 50 ವರ್ಷದವನಾಗಿದ್ದು ಸುಮಾರು 25 ವರ್ಷಗಳಿಂದ ಪುರಸಭೆಯ ಟ್ರ್ಯಾಕ್ಟರ್ ಚಾಲಕನಾಗಿ ಹೊರಗುತ್ತಿಗೆ ನೌಕರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎಂದು ತಿಳಿಯಲಾಗಿದೆ ಕಳೆದ ರಾತ್ರಿ ಸುಮಾರು ಎಂಟು ಗಂಟೆ ಸಮಯದಲ್ಲಿ ಪಟ್ಟಣದ ಲಕ್ಷ್ಮಿ ನರಸಿಂಹ ಚಿತ್ರಮಂದಿರದ ಎದುರು ರಸ್ತೆ ದಾಟುವಾಗ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಈತನಲ್ಲಿ ರಕ್ತಸ್ರಾವ ಹೆಚ್ಚಾಗಿ ರಾತ್ರಿಯೇ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಈತನ ಶವವನ್ನು ಪುರಸಭಾ ಕಚೇರಿ ಆವರಣಕ್ಕೆ ಪುರಸಭಾ ಸಿಬ್ಬಂದಿಗಳು ಕರೆತರುವ ಮೂಲಕ ಪ್ರತಿಭಟಿಸಿದರು. ಪಟ್ಟಣದ ಸ್ವಚ್ಛತೆಗೆ 25 ವರ್ಷಗಳಿಂದ ದೇಹವನ್ನು ಸವೆಸಿದ್ದು ಯಾವುದೇ ಪರಿಹಾರ ಇಲ್ಲವಾಗಿದೆ ಈಗಾಗಲೇ ಹೊರಗುತ್ತಿಗೆ ನೌಕರರು ಆತನನ್ನು ತೆಗೆದುಹಾಕಿದ್ದು ಆತ ಇಲ್ಲಿಯವರೆಗೂ ದುಡಿದ ಸಲುವಾಗಿ ಪುರಸಭೆಯಿಂದ 10 ಲಕ್ಷ ಪರಿಹಾರ ಧನ…
ತುಮಕೂರು: ನಗರದ ವಿವಿಧೆಡೆ ಬೈಕ್ ಕಳ್ಳತನ ಮಾಡುತ್ತಿದ್ದ ಪ್ರಕರಣಗಳಿಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಇಲ್ಲಿನ ಜಯನಗರ ಪೆÇಲೀಸರು ಬಂಧಿಸಿ, 2.5 ಲಕ್ಷ ರೂ. ಮೌಲ್ಯದ 5 ಬೈಕ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ನಗರದಲ್ಲಿ ಕಳೆದ ಕೆಲವು ದಿನಗಳಿಂದ ಬೈಕ್ ಕಳವು ಪ್ರಕರಣಗಳು ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಕಳ್ಳರ ಪತ್ತೆಗಾಗಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪುರ್ ವಾಡ್ ವಿಶೇಷ ತನಿಖಾ ತಂಡವನ್ನು ರಚಿಸದ್ದರು. ಅಂದಿನ ತಿಲಕ್ ಪಾರ್ಕ್ ಸಿಪಿಐ ಮುನಿರಾಜು ನೇತೃತ್ವದಲ್ಲಿ ಜಯನಗರ ಪೋಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಬಿ.ಸಿ ಮಂಜುನಾಥ್, ಹಾಗೂ ಸಿಬ್ಬಂದಿಗಳ ತಂಡ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಶ್ರಮಿಸಿದ್ದಾರೆ. ಬಂಧಿತರಾಗಿದ್ದ ನಾಲ್ವರ ಪೈಕಿ ಇಬ್ಬರು ಅಪ್ರಾಪ್ತ ಬಾಲಕರಾಗಿದ್ದು, ಇಬ್ಬರು ಪ್ರಾಪ್ತ ವಯಸ್ಕರಾಗಿದ್ದಾರೆ ಎಂದು ತಿಳಿದು ಬಂದಿದೆ. ಸದರಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷರೋಪಣೆ ಪತ್ರ ಸಲ್ಲಿಸಲಾಗಿದೆ ಎಂದು ಪೋಲೀಸರು ತಿಳಿಸಿದ್ದಾರೆ. ಇನ್ನು ನಗರದಲ್ಲಿ ದಿನೇ ದಿನೆ ಬೈಕ್ ವ್ಹೀಲಿಂಗ್ ಮಾಡುವ ಪುಂಡರ ಹಾವಳಿ ಹೆಚ್ವಾಗಿದ್ದು, ಇಂತಹ ಪುಂಡರಿಗೆ ಪೆÇಲೀಸರು ಬಿಸಿ ಮುಟ್ಟಿಸಿದ್ದಾರೆ.…
ತುಮಕೂರು: ಜನಸಾಮಾನ್ಯರಿಗೆ ಅವರ ಕಷ್ಟ ಸುಖಗಳಿಗೆ ಸ್ಪಂದಿಸಿ ನಿವಾರಣೆ ಮಾಡಿಕೊಡಲು ಸರ್ಕಾರ ಉದ್ಯೋಗ ನೀಡಿರುತ್ತದೆ. ಅದರಂತೆ ಕೆಲಸ ಮಾಡಿ ನಿವೃತ್ತರಾಗುತ್ತೇವೆ. ವೃತ್ತಿಯಲ್ಲಿದ್ದಾಗ ಒಂದು ರೀತಿ ನಿವೃತ್ತರಾದ ನಂತರ ಒಂದು ರೀತಿ ಸಮಸ್ಯೆಗಳಿರುತ್ತವೆ. ನಾಯಕತ್ವ ವಹಿಸಿ ಸಂಘಟನಾತ್ಮಕವಾಗಿ ಕೆಲಸ ಮಾಡಿ, ಉತ್ತಮ ಮಾರ್ಗದಲ್ಲಿ ನಡೆದರೆ ಅದಕ್ಕೆ ಸೂಕ್ತ ಪ್ರತಿಫಲ ಸಿಕ್ಕೇ ಸಿಗುತ್ತದೆ. ಸಂಘ-ಸಂಘಟನೆಗಳು ಸದಸ್ಯರ ಸಮಸ್ಯೆಗಳನ್ನು ಗುರುತಿಸಿ ಸೂಕ್ತ ಪರಿಹಾರ ಕಂಡುಕೊಳ್ಳುವುದೇ ಸಂಘದ ಗುರಿಯಾಗಿರಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಡಾ. ಎಲ್. ಭೈರಪ್ಪ ಅಭಿಪ್ರಾಯಪಟ್ಟರು. ಅವರು ಇಂದು ತುಮಕೂರು ಜಿಲ್ಲಾ ಸರ್ಕಾರಿ ನಿವೃತ್ತ ನೌಕರರ ಸಂಘವು ಸಂಘಟಿಸಿದ್ದ ಮಾಸಿಕ ಸಭೆ ಮತ್ತು ಸಂಘದ ಕರಪತ್ರ ಬಿಡುಗಡೆ ಮಾಡಿ ಮಾತನಾಡುತ್ತಿದ್ದರು. ನಿವೃತ್ತರ ಬೇಡಿಕೆಗಳ ಈಡೇರಿಕೆಗಾಗಿ 2019 ರಿಂದಲೂ ಸಂಘ ಹೋರಾಟ ಮಾಡುತ್ತ ಬಂದಿದ್ದರೂ ಇನ್ನೂವರೆಗು ನಮ್ಮ ಯಾವ ಬೇಡಿಕೆಯೂ ಈಡೇರಿಲ್ಲ. ಆದರೆ ಮುಖ್ಯಮಂತ್ರಿಗಳೂ ನಮ್ಮ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಅದರಲ್ಲಿ ನಗದು ರಹಿತ…
ತುಮಕೂರು: ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಗಿರಿರಾಜ್ ಸಿಂಗ್ ಅವರು ಜಿಲ್ಲೆಯ ಬೆಳ್ಳಾವಿ ಹೋಬಳಿ ಮಷಣಾಪುರ ಗ್ರಾಮದ ಪ್ರಗತಿಪರ ರೈತ ಎಂ.ಎಸ್. ಮೃತ್ಯುಂಜಯ ಅವರ ತೋಟಕ್ಕೆ ಭೇಟಿ ನೀಡಿ ಸಮಗ್ರ ಸಾವಯವ ಕೃಷಿ ವ್ಯವಸ್ಥೆಯಡಿ ಬೆಳೆದಿರುವ ವಿವಿಧ ತೋಟಗಾರಿಕಾ ಮಿಶ್ರ ತಳಿ ಬೆಳೆಗಳನ್ನು ವೀಕ್ಷಿಸಿದರು. ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ತೆಂಗು, ಅಡಿಕೆ, ಮೆಣಸು, ಏಲಕ್ಕಿ, ಕಾಫಿ, ಸಪೋಟ, ಸೀಬೆ, ಮಾವು, ಡ್ರ್ಯಾಗನ್ ಫ್ರೂಟ್, ರೋಸ್‍ಆ್ಯಪಲ್, ಮಲೆಯನ್ ಆ್ಯಪಲ್, ಎಗ್‍ಪ್ರೂಟ್, ಜಾಕಾಯಿ ಸೇರಿದಂತೆ 250ಕ್ಕೂ ಹೆಚ್ಚು ದೇಸಿ-ವಿದೇಶಿ ಫಲ-ಪುಷ್ಪ ತೋಟಗಾರಿಕೆ ಬೆಳೆಗಳನ್ನು ಬೆಳೆದಿದ್ದು, ರೈತ ಎಂ.ಎಸ್. ಮೃತ್ಯುಂಜಯ ಅವರ ಮಗ ಕೇಶವಸ್ವಾಮಿ ಅವರೊಂದಿಗೆ ತೋಟಕ್ಕೆ ತೆರಳಿದ ಸಚಿವರು ಪ್ರತಿಯೊಂದು ಬೆಳೆಯ ಬಗ್ಗೆಯೂ ತೀವ್ರ ಕುತೂಹಲದೊಂದಿಗೆ ಮಾಹಿತಿ ಪಡೆದರು. ನಂತರ ಸಚಿವರು, ಸದರಿ ರೈತ ಮಾಡಿರುವ ಸಾವಯವ ಕೃಷಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಸದರಿ ರೈತ ತೆಂಗು, ಅಡಿಕೆಯಂತಹ ದೀರ್ಘಾವಧಿ ಬೆಳೆಗಳ ನಡುವೆ ಮಿಶ್ರ ಬೆಳೆಗಳನ್ನು ಬೆಳೆದು ವಾರ್ಷಿಕ…
ಕೊರಟಗೆರೆ ; ತಾಲೂಕಿನ ಕಸಬಾ ಹೋಬಳಿ ಹಂಚಿಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನವು ಇತ್ತೀಚೆಗಷ್ಟೇ ತೆರವಾಗಿದ್ದ ಕಾರಣ ನೂತನವಾಗಿ ಅಧ್ಯಕ್ಷ ಉಪಾಧ್ಯಕ್ಷರನ್ನು ಅವಿರೋಧವಾಗಿ ಗ್ರಾಮ ಪಂಚಾಯಿತಿಯ ಸದಸ್ಯರು ತಹಶೀಲ್ದಾರ್ ನಹಿದಾ ಜಮ್ ಜಮ್ ರವರ ಸಮಕ್ಷಮದಲ್ಲಿ ಆಯ್ಕೆ ಮಾಡಿದರು. ತಾಲ್ಲೂಕು ದಂಡಾಧಿಕಾರಿಯಾದ ನಹಿದಾ ಜಮ್ ಜಮ್ ಮಾತನಾಡಿ ಹಂಚಿಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ತೆರವಾಗಿದ್ದ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಯಾವುದೇ ಚುನಾವಣೆ ಇಲ್ಲದೆ ಅವಿರೋಧವಾಗಿ ಅಧ್ಯಕ್ಷ ಸ್ಥಾನಕ್ಕೆ ಶ್ರೀಮತಿ ವಿಜಯ ಕುಮಾರಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ರಂಗನಾಥ್ ಬಿ ಎನ್ ರವರನ್ನು ಸದಸ್ಯರೆಲ್ಲರೂ ಸೇರಿ ಆಯ್ಕೆ ಮಾಡಿದ್ದಾರೆ. ಇನ್ನು ಮುಂದೆ ಅಧ್ಯಕ್ಷರಾಗಿ ಶ್ರೀಮತಿ ವಿಜಯ ಕುಮಾರಿ ಉಪಾಧ್ಯಕ್ಷರಾಗಿ ರಂಗನಾಥ್ ರವರು ಕಾರ್ಯನಿರ್ವಹಿಸಲಿದ್ದಾರೆ ಎಂದು ತಿಳಿಸಿದರು. ನೂತನ ಅಧ್ಯಕ್ಷೆ ಶ್ರೀಮತಿ ವಿಜಯಕುಮಾರಿ ಮಾತನಾಡಿ ನನ್ನ ಮೇಲೆ ಭರವಸೆಯಿಟ್ಟು ನನ್ನನ್ನು ಅಧ್ಯಕ್ಷೆಯಾಗಿ ಆಯ್ಕೆ ಮಾಡಿರುವ ಎಲ್ಲಾ ಗ್ರಾಮ ಪಂಚಾಯ್ತಿ ಸದಸ್ಯರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಹಾಗೆಯೇ ನನ್ನ ಅಧ್ಯಕ್ಷ ಸ್ಥಾನದಲ್ಲಿ ನಾನು ಇರುವವರೆಗೂ ಪ್ರಾಮಾಣಿಕವಾಗಿ ಜನರ…
ತುಮಕೂರು: ತಾಂತ್ರಿಕತೆಯಲ್ಲಿ ಮತ್ತಷ್ಟು ಕ್ರಾಂತಿ ಮಾಡಲು ಯುವ ಪೀಳಿಗೆ ಸಿದ್ಧರಾಗಬೇಕಿದೆ ಎಂದು ಭಾರತ್ ಫೋರ್ಜ್ ಲಿ.,ನ ಛೇರ್ಮನ್ ಬಾಬಾ ಸಾಹೇಬ್ ನೀಲಕಂಠ ಕಲ್ಯಾಣಿ ಸಲಹೆ ನೀಡಿದರು. ಸಿದ್ಧಗಂಗಾ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ 12ನೇ ಪದವಿ ಪ್ರದಾನ ಸಮಾರಂಭದಲ್ಲಿ ಪದವಿ ಪ್ರದಾನ ಮಾಡಿ ಮಾತನಾಡಿದ ಅವರು, ಭಾರತದಲ್ಲಿ ಓದಿದ ಸಾಕಷ್ಟು ಮಂದಿ ವಿದ್ಯಾರ್ಥಿಗಳು ವಿಶ್ವ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಭಾರತವು ತಾಂತ್ರಿಕತೆಯಲ್ಲಿ ವಿಶ್ವ ಮಟ್ಟದಲ್ಲಿ ಸಾಧನೆ ಮಾಡುತ್ತಿದೆ. ಈಗ ವ್ಯಾಸಂಗ ಮುಗಿಸಿ ಹೊರಬರುವ ವಿದ್ಯಾರ್ಥಿಗಳು ತಾಂತ್ರಿಕತೆಯಲ್ಲಿ ಮತ್ತಷ್ಟು ಕ್ರಾಂತಿ ಮಾಡಲು ಉತ್ಸುಕರಾಗಬೇಕಿದೆ ಎಂದು ಸಲಹೆ ನೀಡಿದರು. ನಮ್ಮ ದೇಶವು ಹಲವು ರಂಗಗಳಲ್ಲಿ ಅತ್ಯುನ್ನತ ಸಾಧನೆ ಮಾಡಿದೆ. ಇಲ್ಲಿನ ಉತ್ಪಾದನೆ ಮತ್ತು ಉತ್ಪನ್ನಗಳು ಅಮೆರಿಕಾ ಸೇರಿ ಹೊರ ರಾಷ್ಟ್ರಗಳಿಗೆ ರಫ್ತಾಗುತ್ತಿವೆ. ವಿಶ್ವದ ವಿವಿಧ ಕಂಪನಿಗಳಲ್ಲಿ ನಮ್ಮ ಭಾರತೀಯರು ಮುಖ್ಯ ಕಾರ್ಯನಿರ್ವಹಣಾಧಿಕಾರಿಯಂತಹ ಉನ್ನತ ಹುದ್ದೆಗಳನ್ನು ನಿರ್ವಹಿಸುತ್ತಿದ್ದಾರೆ. ತಾಂತ್ರಿಕತೆಯಲ್ಲಿ ಅತ್ಯಂತ ವೇಗ ಕಾಣುತ್ತಿದ್ದೇವೆ. ಇದರ ಜೊತೆಗೆ ಆರ್ಥಿಕವಾಗಿಯೂ ಪ್ರಗತಿ ಹೊಂದುತ್ತಿದ್ದೇವೆ. ಕಳೆದ 7ವರ್ಷಗಳಲ್ಲಿ ದೇಶದಲ್ಲಿ…
ತುಮಕೂರು: ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿ ಪಕ್ಷದ ಆಡಳಿತ, ಸ್ವಾಮಿ ವಿವೇಕಾನಂದರು ವಿಶ್ವಕುಟುಂಬ ಹಾಗೂ ಗಾಂಧೀಜಿಯವರ ರಾಮರಾಜ್ಯದ ಪರಿಕಲ್ಪನೆಯಲ್ಲಿ ಕೆಲಸ ಮಾಡುತಿದ್ದು, ದೀನದಯಾಳ್ ಉಪಾಧ್ಯಾಯ ಅವರ ಅಂತ್ಯೋದಯದ ಕನಸನ್ನು ಸಕಾರಗೊಳಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳೀನಕುಮಾರ್ ಕಟೀಲ್ ಅಭಿಪ್ರಾಯಪಟ್ಟಿದ್ದಾರೆ. ನಗರದ ಗಾಜಿನಮನೆಯಲ್ಲಿ ಬಿಜೆಪಿ ವತಿಯಿಂದ ಆಯೋಜಿಸಿದ್ದ ಮಧುಗಿರಿ ಮತ್ತು ತುಮಕೂರು ಸಂಘಟನಾತ್ಮಕ ಜಿಲ್ಲೆಗಳ ವಿವಿಧ ಪ್ರಕೋಷ್ಠಗಳ ಮುಖಂಡರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡುತಿದ್ದ ಅವರು,ಕಾಂಗ್ರೆಸ್ ಪಕ್ಷದ ಒಲೈಕೆ ರಾಜಕಾರಣದಿಂದ ಇಂದು ದೇಶದ ಪ್ರತಿ ಮನೆ ಮನೆಯಲ್ಲಿಯೂ ರಾವಣರಿದ್ದು,ಅವರನ್ನು ಸರಿದಾರಿಗೆ ತರಲು ಗಾಂಧಿಜೀಯ ರಾಮರಾಜ್ಯದ ಕನಸನ್ನು ಸಾಕಾರಗೊಳಿಸುತ್ತಿದೆ ಎಂದರು. ಬಿಜೆಪಿ ಅಡಳಿತವನ್ನು ಸರ್ವವ್ಯಾಪ್ತಿ ಮತ್ತು ಸರ್ವಸ್ಪಷಿಯಾಗಿ ಮಾಡಲು ಬಿಜೆಪಿ ಪಕ್ಷದ ಹುಟ್ಟು ಹಾಕಿರುವ 24 ವಿವಿಧ ಪ್ರಕೋಷ್ಠಗಳ 32 ಸಾವಿರಕ್ಕು ಹೆಚ್ಚು ಕಾರ್ಯಕರ್ತರು ಇಂದಿನಿಂದ ಜಿಲ್ಲೆಯಿಂದ ತಾಲೂಕು, ತಾಲೂಕಿನಿಂದ ಹೋಬಳಿ, ಹೋಬಳಿಯಿಂದ ಗ್ರಾಮ, ಗ್ರಾಮದಿಂದ ಬೂತ್, ಬೂತ್‍ನಿಂದ ಮತದಾರ. ಹೀಗೆ ಎಲ್ಲಾ ಹಂತದಲ್ಲಿ ಪಕ್ಷದ ಸಾಧನೆಗಳು, ಜಾರಿಗೆ ತಂದ ಯೋಜನೆಗಳನ್ನು ಮತದಾರನಿಗೆ…
ತುಮಕೂರು: ಪಿಎಸ್‍ಐ ನೇಮಕಾತಿ ಪರೀಕ್ಷೆಯನ್ನು ಪ್ರಾಮಾಣಿಕವಾಗಿ ಬರೆದವರು ಮತ್ತೆ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಲಿ. ಈ ಮರು ಪರೀಕ್ಷೆಗೆ ವಯೋಮಿತಿಯನ್ನು ಮಾನದಂಡವಾಗಿ ಪರಿಗಣಿಸುತ್ತಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದರು. ಪಿಎಸ್‍ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದರಿಂದ ಈ ಆಯ್ಕೆ ಪ್ರಕ್ರಿಯೆಯನ್ನು ರದ್ದುಪಡಿಸಿದ್ದೇವೆಯೇ ಹೊರತು ಪರೀಕ್ಷೆಯನ್ನಲ್ಲ. ಹಾಗಾಗಿ ಮತ್ತೆ ಮರು ಪರೀಕ್ಷೆ ನಡೆಸಲಾಗುತ್ತಿದೆ. ಅಭ್ಯರ್ಥಿಗಳು ಎದೆಗುಂದದೆ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಬೇಕು. ಪ್ರಾಮಾಣಿಕತೆ ಇದ್ದಲ್ಲಿ ದೇವರು ಒಳ್ಳೆಯದು ಮಾಡುತ್ತಾನೆ ಎಂದರು. ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಪರೀಕ್ಷೆ ಬರೆದಿರುವ 54 ಸಾವಿರ ಮಂದಿಗೆ ಮಾತ್ರ ಮರು ಪರೀಕ್ಷೆ ನಡೆಯಲಿದೆ. ಅವರು ಮಾತ್ರ ಪರೀಕ್ಷೆ ಬರೆಯಬಹುದು ಎಂದು ಅವರು ಹೇಳಿದರು. ಕಿಮ್ಮನೆ ರತ್ನಾಕರ ಅವರಂತಹ ಸಿಲ್ಲಿ ರಾಜಕಾರಣಿ ಹೇಳಿಕೆಗೆ ಪ್ರತಿಕ್ರಿಯಿಸುವುದಿಲ್ಲ. ಕಾಂಗ್ರೆಸ್ ಪಕ್ಷದವರಿಗೆ ರಾಜಕೀಯ ಲಾಭ ಪಡೆಯುವುದೇ ಉದ್ದೇಶವಾಗಿದೆ ಎಂದು ಟೀಕಿಸಿದರು. ಕಿಮ್ಮನೆ ರತ್ನಾಕರ ಸಚಿವರಾಗಿದ್ದ ಅವಧಿಯಲ್ಲಿ ನಡೆದ ಪಿಯುಸಿ ಪರೀಕ್ಷೆಯಲ್ಲೂ ಅಕ್ರಮವಾಗಿತ್ತು. ಆಗ ಅವರು ಏನು ಮಾಡಿದರು,…
ತುಮಕೂರು; ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಯುವಕರ ಪೈಕಿ ಓರ್ವ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಸಿದ್ದಾಪುರ ಕೆರೆಯಲ್ಲಿ ಘಟನೆ ಸಂಭವಿಸಿದ್ದು, ಆಸೀಫ್(17)ಮೃತ ದುರ್ದೈವಿ. ತುಮಕೂರಿನ ಗುಬ್ಬಿಗೇಟ್ ನಿವಾಸಿಯಾದ ಈತ ಸ್ನೇಹಿತರೊಂದಿಗೆ ಮಧುಗಿರಿ ಬಳಿಯಿರುವ ಸಿದ್ದಾಪುರದ ದರ್ಗಾಗೆ ಪೂಜೆ ಸಲ್ಲಿಸಲು ತೆರಳಿದ್ದನು. ಈ ವೇಳೆ ನಾಲ್ವರು ಸ್ನೇಹಿತರು ಈಜಲು ಸಿದ್ದಾಪುರ ಕೆರೆಗೆ ಇಳಿದಿದ್ದು, ಆಸೀಫ್ ನೀರಿನಲ್ಲಿ ಮುಳುಗಿ ಮೃತನಾಗಿದ್ದಾನೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಮಧುಗಿರಿ ಪೆÇಲೀಸರು ಭೇಟಿದ್ದು ಮೃತ ದೇಹವನ್ನು ಹೊರ ತೆಗೆದಿದ್ದಾರೆ. ಈ ಕುರಿತು ಮಧುಗಿರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆರೆಯಲ್ಲಿ ಯುವಕನೋರ್ವ ಮುಳುಗಿ ಸಾವನ್ನಪ್ಪಿದ್ದಾನೆಂಬ ವಿಷಯ ತಿಳಿಯುತ್ತಿದ್ದಂತೆ ನೂರಾರು ಮಂದಿ ಸ್ಥಳಕ್ಕೆ ಓಡೋಡಿ ಬಂದಿದ್ದು, ಜನರನ್ನು ನಿಯಂತ್ರಣ ಮಾಡಲು ಪೋಲೀಸರು ಹರಸಾಹಸ ಪಡಬೇಕಾಯಿತು. ಘಟನೆ ಸ್ಥಳದಲ್ಲಿ ಮೃತನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.











