Author: News Desk Benkiyabale

ತುಮಕೂರು: ನಗರದ ಬಿ.ಹೆಚ್. ರಸ್ತೆಯಲ್ಲಿರುವ ಶಂಕರಮಠದ ಬೀಗ ಒಡೆದು ಒಳನುಗ್ಗಿರುವ ಕಳ್ಳರು ಹುಂಡಿ ಒಡೆದು ಅದರಲ್ಲಿದ್ದ ಕಾಣಿಕೆ ಹಣವನ್ನು ದೋಚಿಕೊಂಡು ಪರಾರಿಯಾಗಿರುವ ಘಟನೆ ಕಳೆದ ರಾತ್ರಿ ನಡೆದಿದೆ. ನಗರದ ಭದ್ರಮ್ಮ ವೃತ್ತದಲ್ಲಿರುವ ಶಂಕರಮಠದಲ್ಲಿರುವ ಶ್ರೀ ಶಂಕರಾಚಾರ್ಯ ಮತ್ತು ಅಮ್ಮನವರ ದೇವಾಲಯದ ಬಾಗಿಲು ಬೀಗ ಒಡೆಯುವ ಮುನ್ನ ಪಕ್ಕದಲ್ಲೇ ಇದ್ದ ಅರ್ಚಕರ ಮನೆಗೆ ಬಾಗಿಲಿಗೆ ಹೊರಗಡೆಯಿಂದ ಬೀಗ ಜಡಿದಿರುವ ಕಳ್ಳರು ಮನೆಯ ಮುಂಭಾಗದಲ್ಲಿ ಬಲ್ಬ್‍ನ್ನು ತೆಗೆದು ದೇವಾಲಯದ ಬೀಗ ಒಡೆದು ಹುಂಡಿಯನ್ನು ದೇವಾಲಯದ ಹೊರಗೆ ತೆಗೆದುಕೊಂಡು ಹೋಗಿ ಕಾಂಪೌಂಡ್ ಪಕ್ಕದಲ್ಲಿ ಅದನ್ನು ಒಡೆದು ಅದರೊಳಗಿದ್ದ ಕಾಣಿಕೆ ಹಣವನ್ನು ದೋಚಿಕೊಂಡು ಹುಂಡಿಯನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ಪ್ರತಿನಿತ್ಯ ಶಂಕರಮಠದ ಅರ್ಚಕರು ಬೆಳಗಿನ ಜಾವ 5 ಗಂಟೆಗೆ ಎದ್ದು ಪೂಜೆಗೆ ತೆರಳುವುದು ರೂಢಿ. ಅದರಂತೆ ಇಂದು ಬೆಳಗಿನ ಜಾವ 5 ಗಂಟೆಗೆ ಎದ್ದಿರುವ ಅರ್ಚಕರು ಮನೆಯ ಬಾಗಿಲನ್ನು ತೆರೆಯಲು ಪ್ರಯತ್ನಿಸಿದಾಗ ಬಾಗಿಲು ಹೊರಗಡೆಯಿಂದ ಲಾಕ್ ಆಗಿರುವುದು ಗೊತ್ತಾಗಿದೆ. ತಕ್ಷಣ ಅರ್ಚಕರು ಶಂಕರಮಠದ ವ್ಯವಸ್ಥಾಪಕರಿಗೆ ದೂರವಾಣಿ ಕರೆ…

Read More

ತುಮಕೂರು: ರಾಜಕಾರಣವೇ ಬೇಡ ಎಂದುಕೊಂಡಿದ್ದ ನನಗೆ, ಅಭಿಮಾನಿಗಳು ಮತ್ತು ಗ್ರಾಮಾಂತರ ಕ್ಷೇತ್ರದ ಜನರ ಒತ್ತಾಸೆಯ ಮೇರೆಗೆ ಸಕ್ರಿಯ ರಾಜಕಾರಣಕ್ಕೆ ಮರಳುತಿದ್ದು, ಕ್ಷೇತ್ರದ ಮತದಾರರ ಬಳಿ ಬಂದಾಗ, ಒರ್ವ ರಾಜಕಾರಣಿಯಾಗಿ ನೋಡದೆ, ನಿಮ್ಮ ಕ್ಷೇತ್ರದ ಮನೆ ಮಗನಂತೆ ಕಂಡು, ಸಹಕಾರ ನೀಡಿ ಎಂದು ಮಾಜಿ ಶಾಸಕ ಹೆಚ್.ನಿಂಗಪ್ಪ ಮನವಿ ಮಾಡಿದ್ದಾರೆ. ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹೆಬ್ಬೂರು ಸಮೀಪದ ಬಸವಣ್ಣನ ಗುಡಿಯ ಬಳಿ ತುಮಕೂರು ಗ್ರಾಮಾಂತರ ಜನತೆ ಹಾಗೂ ಸ್ವಾಭಿಮಾನಿ ಹೆಚ್.ನಿಂಗಪ್ಪ ಅಭಿಮಾನಿ ಬಳಗದವತಿಯಿಂದ ಆಯೋಜಿಸಿದ್ದ ಜಗಜ್ಯೋತಿ ಶ್ರೀಗುರು ಬಸವೇಶ್ವರ ಜಯಂತೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತಿದ್ದ ಅವರು, ನಾನು ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ ಮತದಾರ ರನ್ನು ಘನತೆಯಿಂದ ನಡೆಸಿಕೊಂಡಿದ್ದೇನೆ.ಮನೆ ಬಾಗಿಲಿಗೆ ಬಂದವರನ್ನು ಅನಾವಶ್ಯಕವಾಗಿ ಕಾಯಿಸಿಲ್ಲ.ಅಲ್ಲದೆ ನಾನು ಕ್ಷೇತ್ರದ ವರು, ಎಲ್ಲಿಂದಲೋ ವಲಸೆ ಬಂದವನಲ್ಲ. ಇದನ್ನು ಕ್ಷೇತ್ರದ ಪ್ರತಿಯೊಬ್ಬ ಮತದಾರರು ಅರ್ಥ ಮಾಡಿಕೊಳ್ಳಬೇಕೆಂದರು. ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವನ್ನು ಕಟ್ಟಿ ಬೆಳೆಸಿದವನು ನಾನು.ನಾನು ಅಧ್ಯಕ್ಷನಾಗಿದ್ದ ಕಾಲದಲ್ಲಿ 13 ಕ್ಷೇತ್ರಗಳಲ್ಲಿ 9ರಲ್ಲಿ ಜೆಡಿಎಸ್ ಪಕ್ಷದ ಶಾಸಕರು ಆಯ್ಕೆಯಾಗುವಂತೆ…

Read More

ತುಮಕೂರು: ಸೇವೆಯೇ ಜೀವನವನ್ನಾಗಿಸಿಕೊಂಡಿರುವ ನಾನು ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ದಿನದ 24 ಗಂಟೆ ವಾರದ ಏಳು ದಿನಗಳ ಕಾಲ ಜನರ ಸೇವೆಗೆ ಸದಾ ಸಿದ್ಧನಾಗಿಯೇ ಬಂದಿದ್ದೇನೆ. ಸೇವೆಯೇ ನನ್ನ ಜೀವನ ಎಂದು ಮಾಜಿ ಶಾಸಕ ಸುರೇಶಗೌಡ ತಿಳಿಸಿದರು. ತುಮಕೂರು ಗ್ರಾಮಾಂತರ ಕ್ಷೇತ್ರದ ಕುಣಿಗಲ್ ರಸ್ತೆಯ ಬಾಣಾವರ ಗೇಟಿನಲ್ಲಿ ಇಂದು ಜನಸಂಪರ್ಕ ಕಾರ್ಯಾಲಯಕ್ಕೆ ಅಡಿಗಲ್ಲು ಹಾಕುವ ಮುಖೇನ ಭೂಮಿ ಪೂಜಾ ಕಾರ್ಯಕ್ರಮವನ್ನು ನೆರವೇರಿಸಿ ಬಿ.ಸುರೇಶ್ ಗೌಡ ಮಾತನಾಡಿದರು. ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಳೆದ 18 ವರ್ಷಗಳಿಂದ ನಿತ್ಯ ನಿರಂತರವಾಗಿ ಜನರ ಸೇವೆಯಲ್ಲಿ ತೊಡಗಿಸಿಕೊಂಡಿರುವ ನಾನು ಇಲ್ಲಿನ ಜನತೆಗೆ ಯುವಕರಿಗೆ ಏನಾದರೂ ಉತ್ತಮ ಕಾರ್ಯ ಮಾಡಬೇಕೆಂಬ ಮಹದಾಕಾಂಕ್ಷೆಯೊಂದಿಗೆ ಕ್ಷೇತ್ರದ ಜನರ ಬದುಕು ಅಕ್ಷಯವಾಗಲಿ ಎಂಬ ನಿಟ್ಟಿನಲ್ಲಿ ಅಕ್ಷಯ ತೃತೀಯ ಮತ್ತು ಬಸವ ಜಯಂತಿಯ ದಿನ ಜನತೆಗೆ ಉತ್ತಮ ಸೇವೆ ನೀಡುವ ಸಲುವಾಗಿ ಸಂಕಲ್ಪ ಮಾಡಿ ಎಲ್ಲರಿಗೂ ಪ್ರೇರಣಾದಾಯಕವಾಗಿರುವ ಕಟ್ಟಡ ನಿರ್ಮಾಣ ಮಾಡುತ್ತಿರುವುದಾಗಿ ತಿಳಿಸಿದರು. ಕ್ಷೇತ್ರದ ಜನ ಯಾವುದೇ ಸಮಸ್ಯೆ ತಂದರೂ ಅದನ್ನು ಬಗೆಹರಿಸುವಂತ ಕಚೇರಿ…

Read More

ತುಮಕೂರು: ಮುಸ್ಲಿಂ ಬಾಂಧವರ ಪವಿತ್ರ ಹಬ್ಬಗಳಲ್ಲಿ ಒಂದಾದ ಈದ್ ಉಲ್ ಫಿತರ್ ರಂಜಾನ್ ಹಬ್ಬವನ್ನು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಕಳೆದ ಎರಡು ವರ್ಷಗಳಿಂದ ಕೊರೊನಾ ಮಹಾಮಾರಿಯ ಆರ್ಭಟದಿಂದಾಗಿ ರಂಜಾನ್ ಹಬ್ಬವನ್ನು ಮುಸ್ಲಿಂ ಬಾಂಧವರು ಯಾವುದೇ ಅದ್ದೂರಿ, ಆಡಂಬರ ಇಲ್ಲದೆ ತಮ್ಮ ಮನೆಗಳಲ್ಲೇ ಆಚರಿಸಿದ್ದರು. ಆದರೆ ಈ ಬಾರಿ ಕೊರೊನಾ ಸೋಂಕಿನ ಪ್ರಮಾಣ ಗಣನೀಯವಾಗಿ ತಗ್ಗಿ, ಕಠಿಣ ಕ್ರಮಗಳನ್ನು ತೆರವುಗೊಳಿಸಿರುವುದರಿಂದ ಮುಸ್ಲಿಂ ಬಾಂಧವರು ರಂಜಾನ್ ಹಬ್ಬವನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಅದ್ದೂರಿಯಾಗಿ ಆಚರಿಸಿದರು. ಬೆಳಿಗ್ಗೆ 9.15ಕ್ಕೆ ನಗರದ ಮೆಳೇಕೋಟೆ ಸಮೀಪ ಇರುವ ಮಾಜಿ ಶಾಸಕ ಡಾ. ನಜೀರ್ ಅಹ್ಮದ್ ಈದ್ಗಾ (ಕೆಂಪು ಈದ್ಗಾ) ಮೈದಾನದಲ್ಲಿ ಮುಸ್ಲಿಂ ಬಾಂಧವರು ಸಮಾವೇಶಗೊಂಡು ಪ್ರಾರ್ಥನೆ ಸಲ್ಲಿಸುವ ಮೂಲಕ ಹಬ್ಬದ ಸಂಭ್ರಮವನ್ನು ಇಮ್ಮಡಿಗೊಳಿಸಿದರು. ನಂತರ ಕುಣಿಗಲ್ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ಜಮಾಯಿಸಿದ ಸಾವಿರಾರು ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಪರಸ್ಪರ ಹಬ್ಬದ ಶುಭಾಶಯವನ್ನು ವಿನಿಮಯ ಮಾಡಿಕೊಂಡರು. ಹೊಸ ಉಡುಪುಗಳನ್ನು ಧರಿಸಿ, ಒಬ್ಬರಿಗೊಬ್ಬರು ಆಲಿಂಗನ…

Read More

ತುಮಕೂರು: ಜಗತ್ತಿಗೆ ಬೇಕಾದ ಇಬ್ಬರು ಮಹಾನ್ ದಾರ್ಶನಿಕರು ಬಸವಣ್ಣ, ಸಿದ್ದರಾಮೇಶ್ವರರು, ಕೆರೆಕಟ್ಟೆಗಳನ್ನು ಕಟ್ಟಿಸಿ ನೀರಾವರಿ ಯೋಜನೆ ಮಾಡಿದರು, ಅದೇ ಇಂದಿಗೂ ಮಾದರಿಯಾಗಿದೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ತಿಳಿಸಿದರು. ನಗರದ ಸ್ನೇಹ ಸಂಗಮ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತದಿಂದ ಹಮ್ಮಿಕೊಂಡಿದ್ದ ಜಗಜ್ಜ್ಯೋತಿ ಬಸವವೇಶ್ವರ ಮತ್ತು ಕಾಯಕಯೋಗಿ ಸಿದ್ದರಾಮೇಶ್ವರರ ಜಯಂತಿಯಲ್ಲಿ ಅವರು ಮಾತನಾಡಿದರು. ಸಮಾಜದ ಋಣ ತೀರಿಸುವ ನಿಟ್ಟಿನಲ್ಲಿ ಎಲ್ಲರು ಚಿಂತಿಸಬೇಕಿದೆ, ಇರುವುದರಲ್ಲಿಯೇ ಸಮಾಜಕ್ಕೆ ಒಳಿತನ್ನೇ ಮಾಡುವ ಮನೋಭಾವನೆಯನ್ನು ರೂಢಿಸಿಕೊಂಡಾಗ ಮಾತ್ರ ಸಮುದಾಯ ಶಕ್ತವಾಗಲಿದೆ, ಸಮುದಾಯಕ್ಕೆ ಕೊಡುವ ನಿಟ್ಟಿನಲ್ಲಿ ಸಮುದಾಯ ಮುಖಂಡರು ಚಿಂತಿಸಬೇಕಿದೆ ಎಂದು ಹೇಳಿದರು. ವೀರಶೈವ ಬ್ಯಾಂಕ್ ಮಾಜಿ ನಿರ್ದೇಶಕ ಹೆಚ್.ಜಿ.ಬಸವರಾಜು ಮಾತನಾಡಿ, ಬುದ್ಧ, ಬಸವ, ಅಂಬೇಡ್ಕರ್ ಅವರು ದೇಶದ ಸಮಾನತೆಯ ಆಶಯಗಳು, ಭಗವಾನ್ ಬುದ್ಧ ವೈಚಾರಿಕ ವಿಚಾರಗಳನ್ನು ತಿಳಿಸಿದರೆ ಅಣ್ಣ ಬಸವಣ್ಣ ಅದಕ್ಕೆ ಸ್ಥಿತಪ್ರಜ್ಞೆಯನ್ನು ಮೂಡಿಸಿದರು, ಅಂಬೇಡ್ಕರ್ ಅದಕ್ಕೊಂದು ಚೌಕಟ್ಟು ನೀಡಿದರು ಅದನ್ನು ಪಾಲಿಸುವ ಮೂಲಕ ಸಮಾಜಕ್ಕೆ ಕೊಡುಗೆ ನೀಡಬೇಕಿದೆ, ದೇಶ ಇರುವವರೆಗೆ ಬುದ್ಧ, ಬಸವ, ಅಂಬೇಡ್ಕರ್ ಪ್ರಾಂತಸ್ಮರಣೀಯರು…

Read More

ತುಮಕೂರು: ಎಲ್ಲಿ ಶಾಂತಿ ಮತ್ತು ಪ್ರೀತಿ ಇರುತ್ತದೆಯೋ ಅಲ್ಲಿ ಮಾನವ ವಿಕಾಸದ ಜಗತ್ತಿನ ಉಳಿವು ಇರುತ್ತದೆ ಎಲ್ಲಿ ಧ್ವೇಷ ಅಸೂಯೆ ಇರುತ್ತದೆಯೋ ಅಲ್ಲಿ ಜಗತ್ತಿನ ನಾಶ ಮತ್ತು ಮಾನವ ವಿಕಾಸದ ನಾಶವಾಗುತ್ತದೆ ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷರಾದ ಪ್ರೊ ಕೆ. ದೊರೈರಾಜ್ ಹೇಳಿದರು ತುಮಕೂರಿನ ಎನ್.ಆರ್ ಕಾಲೋನಿ ದಲಿತ ಮತ್ತು ಕೋತಿ ತೋಪು ಮದೀನ ಮಹೊಲ್ಲ ಮುಸ್ಲಿಂ ಸೌಹಾರ್ದ ಸಮಿತಿಯಿಂದ ರಂಜಾನ್ ಹಬ್ಬದ ಅಂಗವಾಗಿ ದಲಿತರಿಂದ ಮುಸ್ಲಿಂ ಬಾಂಧವರಿಗೆ ಸಮುದಾಯ ಶೈಕ್ಷಣಿಕ ಭವನದಲ್ಲಿ ಹಮ್ಮಿಕೊಂಡಿದ್ದ ಇಫ್ತಾರ್ ಕೂಟದಲ್ಲಿ ಮುಖ್ಯ ಭಾಷಣ ಮಾಡಿದ ಕೆ.ದೊರೈರಾಜ್ ಮನುಷ್ಯ ಪ್ರೀತಿ, ಶಾಂತಿ ಮತ್ತು ಸಂತೋಷದಿಂದ ಬದುಕುವಂತಾಗಬೇಕು, ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ದ್ವೇಷ ಸರಿಯಲ್ಲ. ರಂಜಾನ್ ಉಪವಾಸ ಮನುಷ್ಯನಲ್ಲಿರುವ ಕ್ರೌರ್ಯವನ್ನು ದಹಿಸಿ ಹಸಿವಿನ ಅನುಭವವನ್ನು ಕಲಿಸುವುದರಿಂದ ಸಮಾಜದಲ್ಲಿ ಸೌಹಾರ್ಧಯುತವಾಗಿ ಬದುಕುವ ಸಂದೇಶ ನೀಡುತ್ತದೆ ಸಮಾಜದಲ್ಲಿರುವ ಅಶಕ್ತರನ್ನು ಗೌರವದಿಂದ ಕಾಣುವಂತೆ ಮಾಡುತ್ತದೆ ಎಂದರು. ಪ್ರತಿಕೋದ್ಯಮಿ ಎಸ್.ನಾಗಣ್ಣ ಮಾತನಾಡಿ ಎನ್.ಆರ್ ಕಾಲೋನಿಯ ದಲಿತ ಮುಖಂಡರು ಇಫ್ತಾರ್ ಕೂಟ ಮಾಡುತ್ತಿರುವುದು…

Read More

ತುಮಕೂರು: ಕಷ್ಟಕ್ಕೆ ದೇವರು ಪೂಜೆ ಪರಿಹಾರವಲ್ಲ. ದುಡಿಮೆಯೇ ಪರಿಹಾರ ಎಂದು ಶ್ರೀ ನಿಜಗುಣಾನಂದ ಸ್ವಾಮೀಜಿ ತಿಳಿಸಿದ್ದಾರೆ. ನಗರದ ಎಂಪ್ರೆಸ್ ಶಾಲೆಯ ಸಭಾಂಗಣದಲ್ಲಿ ವಿವಿಧ ಪ್ರಗತಿಪರ, ದಲಿತ ಪರ ಸಂಘಟನೆಗಳು ಜಂಟಿಯಾಗಿ ಆಯೋಜಿಸಿದ್ದ ಬುದ್ದ, ಬಸವ, ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಮ್ಮ ಕಷ್ಟಗಳಿಗೆ ದೇವರು ಪರಿಹಾರ ನೀಡುತ್ತಾನೆ ಎಂಬುದಾಗಿದ್ದರೆ, ಸಾಲ ಮಾಡಿಕೊಂಡ ರೈತರು, ಸಾಲ ಮನ್ನಾಕ್ಕಾಗಿ ದೇವರ ಮುಂದೆ ಬೇಡುವ ಬದಲು ಸರಕಾರಗಳಿಗೆ ಮನವಿ ಸಲ್ಲಿಸುವ ಅಗತ್ಯವೆನ್ನಿತ್ತು ಎಂದು ಪ್ರಶ್ನಿಸಿದರು. ಇಂದು ದೇವರು ಎಂಬುದು ಒಂದು ಉದ್ಯೋಗವಾಗಿದೆ.ಜನತೆಗೆ ಇನ್ನಿಲ್ಲದ ಭಯ ಹುಟ್ಟಿಸಿ, ಅವರಿಂದು ಒಂದಿಲೊಂದು ಪೂಜೆ ಮಾಡಿಸಿ, ತಾವು ಹೊಟ್ಟೆ ಹೊರೆಯುವ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ. ಇದನ್ನು ಅರಿಯದೆ ವಿದ್ಯಾವಂತರು ಹೆಚ್ಚಿನ ಸಂಖ್ಯೆಯಲ್ಲಿ ಪೂಜೆ, ಪುನಸ್ಕಾರಗಳಿಗೆ ಬಲಿಯಾಗುತ್ತಿರುವುದು ವಿಪರ್ಯಾಸವೇ ಸರಿ.ಮೈಮೇಲೆ ಬರುವ ದೇವರುಗಳ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿವೆ.ಅದರಲ್ಲಿಯೂ ಕೆಳವರ್ಗದವರ ಮೇಲೆ ದೇವರುಗಳ ಬರುತ್ತಿರುವುದು ದುರದೃಷ್ಟಕರ ಎಂದರು. ತಂದೆ, ತಾಯಿ, ಗುರು, ಹಿರಿಯರು ದೇವರು ಎಂದು ಹಿರಿಯರು ಹೇಳಿದ್ದಾರೆ.ಆದರೆ…

Read More

ತುಮಕೂರು: ಪ್ರಬಲ ಜಾತಿಗಳನ್ನು ಪ್ರವರ್ಗ-2ಕ್ಕೆ ಸೇರಿಸುವುದರಿಂದ ಹಿಂದುಳಿದ ವರ್ಗಗಳಿಗೆ ಸೇರಿದ 105 ಜಾತಿಗಳಿಗೆ ತೀವ್ರ ಅನ್ಯಾಯವಾಗಲಿದೆ. ಇದರ ವಿರುದ್ದ ಜನಜಾಗೃತಿ ಮೂಡಿಸುವ ಕೆಲಸವನ್ನು ಹಿಂದುಳಿದ ವರ್ಗಗಳ ಮುಖಂಡರು ಮಾಡಬೇಕಾಗಿದೆ ಎಂದು ಚಿಕ್ಕನಾಯಕನಹಳ್ಳಿ ತಾಲೂಕು ಹಿಂದುಳಿದ ವರ್ಗಗಳ ಹಿತರಕ್ಷಣಾ ಸಮಿತಿ ಸಂಚಾಲಕ ಕ್ಯಾಪ್ಟನ್ ಸೋಮಶೇಖರ್ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಎದುರು ಚಿಕ್ಕನಾಯಕನಹಳ್ಳಿ ತಾಲೂಕು ಹಿಂದುಳಿದ ವರ್ಗಗಗಳ ಹಿತರಕ್ಷಣಾ ಸಮಿತಿವತಿಯಿಂದ ಆಯೋಜಿಸಿದ್ದ ಪ್ರತಿಭಟನಾ ಧರಣಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಬಲ ಜಾತಿಗಳನ್ನು ಪ್ರವರ್ಗ-2ಎಗೆ ಸೇರಿಸುವುದರಿಂದ ಹಿಂದುಳಿದ ಜಾತಿಗಳಿಗೆ ಸರಕಾರಿ ನೌಕರಿ,ರಾಜಕೀಯ ಅಧಿಕಾರ ಮರೀಚಿಕೆಯಾಗಲಿದೆ.ಸಾಮಾಜಿಕವಾಗಿ, ಶೈಕ್ಷಣಿಕವಾಗಿ,ಅರ್ಥಿಕವಾಗಿ ಕುಸಿಯುವುದಲ್ಲದೆ,ಮುಂದಿನ ಯುವಜನತೆ ಸಾಕಷ್ಟು ಪಶ್ಚಾತಾಪ ಪಡಲಿದ್ದಾರೆ.ಹಾಗಾಗಿ ಸರಕಾರ ಪ್ರಬಲ ಜಾತಿಗಳನ್ನು ಹಿಂದುವರ್ಗ ಎಗೆ ಸೇರಿಸುವ ಪ್ರಸ್ತಾಪವನ್ನು ಕೈಬಿಡಬೇಕೆಂಬುದು ನಮ್ಮ ಆಗ್ರಹವಾಗಿದೆ.ಅಲ್ಲದೆ ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ವಿಚಾರಸಂಕಿರಣದಂತಹ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಜಿಲ್ಲಾ ಸಮಿತಿಯ ಮುಖಂಡರುಗಳಿಗೆ ಮನವಿ ಮಾಡಿದರು. ಸಮಿತಿಯ ಮತ್ತೊಬ್ಬ ಸಂಚಾಲಕ ಸಿ.ಡಿ.ಚಂದ್ರಶೇಖರ್ ಮಾತನಾಡಿ,ಪಂಚಮಶಾಲಿ ಲಿಂಗಾಯಿತರನ್ನು ಪ್ರವರ್ಗ 2 ಎ ಗೆ ಸೇರಿಸಲು ಸರಕಾರ ಮುಂದಾಗಿದೆ.ಇದು ಸಂವಿಧಾನಕ್ಕೆ…

Read More

ಮಧುಗಿರಿ: ಇದು ನನ್ನ ಕೊನೆಯ ಚುನಾವಣೆ ಮುಖಂಡರುಗಳು ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕೆಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಮಾಜಿ ಶಾಸಕ .ಕೆ ಎನ್ ರಾಜಣ್ಣ ತಿಳಿಸಿದ್ದಾರೆ. ತಾಲ್ಲೊಕಿನ ಮಿಡಿಗೇಶಿ ಹೋಬಳಿಯ ಬಿದರೆಕೆರೆ ಗ್ರಾಮದ ಬಯಲಾಂಜನೇಯ ಸ್ವಾಮಿ ದೇವಾಲಯದ ಅವರಣದಲ್ಲಿ ಬೇಡತ್ತೂರು ಪಂಚಾಯಿತಿಯ ಬೂತ್ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿ ಮಧುಗಿರಿ ಕ್ಷೇತ್ರದಲ್ಲಿ ಈಗಾಗಲೆ ಕೆಲವು ಮಂದಿ ಅಭ್ಯರ್ಥಿಗಳಾಗಲು ಓಡಾಡುತ್ತಿದ್ದಾರೆ ಅವರುಗಳು ನಮ್ಮ ಆಸ್ತಿ ಉಳಿಸಿಕೊಳ್ಳಲು ರಾಜಕಾರಣಕ್ಕೆ ಬರುತ್ತಿದ್ದಾರೆ ಅವರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ.ಮನವಿ ಮಾಡಿದ ಅವರು ಕಳೆದ ಬಾರಿ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಕೆಎನ್‍ಆರ್ ಗಿಂತ ಹತ್ತು ಪಟ್ಟು ಕೆಲಸ ಮಾಡುತ್ತೇನೆ ಎಂದು ಹೇಳಿ ಸೀರೆ ಹಂಚಿ ಗೆಲುವು ಸಾಧಿಸಿದ ಅವರ ಅಭಿವೃದ್ಧಿ ಕಾರ್ಯಗಳ ಬಗ್ಗೆ ನನ್ನ ಅವಧಿಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ಕಾರ್ಯಕರ್ತರು ಮತದಾರರು ಆತ್ಮಾವಲೋಕನೆ ಮಾಡಿಕೊಳ್ಳಿ ನನ್ನ ಕಾರ್ಯಗಳ ಬಗ್ಗೆ ಹೇಳಿಕೊಳ್ಳುವುದು ಏನಿಲ್ಲ ನಾನು ನನ್ನ ಇತಿಮಿತಿಯಲ್ಲಿ ಕೆಲಸ ಮಾಡಿದ್ದು ರೈತರ ಧ್ವನಿಯಾಗಿ ಕಾರ್ಯನಿರ್ವಹಿಸಿದ್ದೇನೆ ಇತ್ತೀಚಿಗೆ ಮರುವೇಕೆರೆ…

Read More

ತುಮಕೂರು: ರಾಜ್ಯದಲ್ಲಿರುವ ಎಲ್ಲಾ ವರ್ಗದ ಜನರನ್ನು ರಕ್ಷಿಸುವುದಾಗಿ ಪ್ರಮಾಣ ವಚನ ಸ್ವೀಕರಿಸುವ ಶಾಸಕರು, ಸಚಿವರುಗಳು, ಇಬ್ಬರು ದಲಿತ ಯುವಕರ ಕೊಲೆಯಾಗಿ 8 ದಿನಗಳು ಕಳೆಯುತ್ತಾ ಬಂದರೂ ಇದುವರೆಗೂ ಸೌಜನ್ಯಕ್ಕಾದರೂ ಒಬ್ಬರು ಭೇಟಿ ನೀಡದಿರುವುದು ದಲಿತರ ಬಗ್ಗೆ ಸರಕಾರಕ್ಕೆ ಇರುವ ಕಾಳಜಿಯನ್ನು ತೋರಿಸುತ್ತದೆ ಎಂದು ವಿಧಾನಪರಿಷತ್ ಸದಸ್ಯ ಆರ್.ರಾಜೇಂದ್ರ ಸರಕಾರದ ವಿರುದ್ದ ಕಿಡಿ ಕಾರಿದ್ದಾರೆ. ಇಂದು ಏಪ್ರಿಲ್ 22 ರಂದು ಭರ್ಬರವಾಗಿ ತನ್ನ ಗ್ರಾಮದವರಿಂದಲೇ ಕೊಲೆಯಾದ ಪೆದ್ದನಹಳ್ಳಿಯ ಗಿರೀಶ್ ಮತ್ತು ಮಂಚಲದೊರೆಯ ಗಿರೀಶ್ ಮನೆಗೆ ಭೇಟಿ ನೀಡಿ,ಅವರು ಕುಟುಂಬಗಳಿಗೆ ಸಾಂತ್ವಾನ ಹೇಳಿ, ತಮ್ಮ ಕೈಲಾದ ಅರ್ಥಿಕ ನೆರವು ನೀಡಿ,ನಿಮ್ಮ ಕುಟುಂಬದೊಂದಿಗೆ ನಾವಿದ್ದೇವೆ ಎಂದು ಧೈರ್ಯ ತುಂಬಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಲ್ವರ್ಗದ ಜನರು ಕೊಲೆಯಾದಾಗÀ, ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ, ಪ್ರತಿಭಟನೆ ನಡೆಸಿ, ಶವದ ಮೆರವಣಿಗೆ ನಡೆಸಿ,ಪರಿಹಾರ ವಿತರಿಸುವ ಸರಕಾರದ ಸಚಿವರುಗಳು, ತುಮಕೂರು ಜಿಲ್ಲೆಯಲ್ಲಿ ದಲಿತ ಯುವಕರ ಸಾವಿಗೆ ಸ್ಪಂದನೆಯೇ ಇಲ್ಲದಂತಾಗಿದೆ. ಇಂತಹ ತಾರತಮ್ಯ ಅಗತ್ಯವೇ ಎಂದು ಪ್ರಶ್ನಿಸಿದರು. ತುಮಕೂರು ಜಿಲ್ಲೆಯ…

Read More