ಚಿಕ್ಕನಾಯಕನಹಳ್ಳಿ ನೆರೆ ರಾಜ್ಯಗಳ ತಕರಾರಿನಿಂದ ಆಗಿ ರಾಜ್ಯಕ್ಕೆ ನೀರಾವರಿ ಯೋಜನೆಯಲ್ಲಿ ಆಗಿರುವ ಅನ್ಯಾಯವನ್ನು ಸರಿಪಡಿಸಿ ರಾಜ್ಯದ ಉದ್ದಗಲಕ್ಕೂ ಈ ಯೋಜನೆಗಳ ಕಾಯಕಲ್ಪ ಕಲ್ಪಿಸಿ ರಾಜ್ಯದ ನದಿಗಳಲ್ಲಿ ನೀರಿನ ಸದ್ಬಳಕೆ ಮಾಡಿಕೊಂಡು ಜನತೆಗೆ ಜಲ ಶಾಮಲಾ ಸಸ್ಯ ಶ್ಯಾಮಲಾವಾಗಿಸಲು ಜಾತ್ಯತೀತ ಜನತಾದಳ ಸನ್ನದ್ಧವಾಗಿದೆ ಎಂದು ಮಾಜಿ ಶಾಸಕ ಸುರೇಶ್ ಬಾಬು ಹೇಳಿದರು ಅವರು ಪಟ್ಟಣದ ಅವರ ನಿವಾಸದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡುತ್ತಾ ಏಪ್ರಿಲ್ 21ರಂದು ಸನ್ಮಾನ್ಯ ಮಾಜಿ ಪ್ರಧಾನಿ ದೇವೇಗೌಡರು ಖಾಸಗಿ ಕಾರ್ಯಕ್ರಮವೊಂದಕ್ಕೆ ಆಗಮಿಸುತ್ತಿದ್ದಾರೆ ಅವರ ಅಭಿಮಾನಿಗಳು ಭೇಟಿ ಮಾಡುವ ಅವಕಾಶವಿದೆ ಅಲ್ಲದೆ 22 ಶುಕ್ರವಾರ ಜಾತ್ಯತೀತ ಜನತಾದಳದ ವತಿಯಿಂದ ಜನತಾ ಜಲದಾರೆ ಎಂಬ ಕಾರ್ಯಕ್ರಮವು ಪವಿತ್ರ ಕ್ಷೇತ್ರ ತೀರ್ಥರಾಮೇಶ್ವರ ವಜ್ರ ದಲ್ಲಿ ಗಂಗಾಜಲವನ್ನು ಹೊತ್ತು ತಾಲೂಕಿನಾದ್ಯಂತ ಪ್ರಚಾರ ಮಾಡುವ ರಥ ಯಾತ್ರೆ ಸಾಗಲಿದೆ ಎಂದು ತಿಳಿಸಿದರು ಈ ಸಂದರ್ಭದಲ್ಲಿ ಕಾರ್ಯಕರ್ತರು ಪ್ರತಿ ರಥಯಾತ್ರೆಯು ಆರಂಭಗೊಂಡು ಆಯಾ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕಾರ್ಯಕರ್ತರು ಪರಿಪೂರ್ಣವಾಗಿ ಪಾಲ್ಗೊಳ್ಳುವ ಮೂಲಕ ರಥಯಾತ್ರೆಯ ಸದುದ್ದೇಶ ಜನರ ಆಶೋತ್ತರಗಳಿಗೆ ಜೆಡಿಎಸ್ ಪರವಾಗಿ…
Author: News Desk Benkiyabale
ತುಮಕೂರು : ಗುತ್ತಿಗೆ ಪದ್ದತಿ ರದ್ದು ಮಾಡಿ, ನೇರ ನೇಮಕಾತಿಗೆ ಅವಕಾಶ ಕಲ್ಪಿಸಬೇಕು, ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು, ಖಾಯಿ ಇರುವ ವಾಟರ್‍ಮನ್ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಬೇಕು ಹಾಗೂ ಇನ್ನಿತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ತುಮಕೂರು ಜಿಲ್ಲಾ ನೀರು ಸರಬರಾಜು ನೌಕರರ ಸಂಘ(ರಿ)ದ ಸದಸ್ಯರು ಇಂದು ಪಾಲಿಕೆಯ ಎದುರು ಪ್ರತಿಭಟನಾ ಧರಣಿ ನಡೆಸಿದರು. ಪ್ರತಿಭಟನಾ ನಿರತ ವಾಟರ್‍ಮನ್‍ಗಳನ್ನು ಉದ್ದೇಶಿಸಿ ಮಾತನಾಡಿದ ಕೆ.ಕುಮಾರ್, ಮಹಾನಗರಪಾಲಿಕೆಯಲ್ಲಿ ಕಳೆದ 20-25 ವರ್ಷಗಳಿಂದ ಅತಿ ಕಡಿಮೆ ವೇತನಕ್ಕೆ ದುಡಿಯುತ್ತಿರುವ ನೀರು ಗಂಟೆಗಳಿಗೆ ಇದುವರೆಗೂ ಖಾಯಂ ಆಗಿಲ್ಲ. ಅಲ್ಲದೆ ವೇತನವೂ ಸರಿಯಾದ ಸಮಯಕ್ಕೆ ದೊರೆಯುವುದಿಲ್ಲ. ಪ್ರತಿಭಾರಿಯೂ ಪ್ರತಿಭಟನೆ ಮಾಡಿಯೇ ವೇತನ ಪಡೆಯಬೇಕಾದ ಸ್ಥಿತಿ ಇದೆ.ಸ್ವತಃ ರಾಜ್ಯಪಾಲರೆ ಪಾಲಿಕೆಗಳಲ್ಲಿ ಗುತ್ತಿಗೆ ನೌಕರರ ಪದ್ದತಿಯನ್ನು ರದ್ದು ಮಾಡುವಂತೆ ಸೂಚನೆ ನೀಡಿದ್ದರೂ ಇದುವರೆಗೂ ಅದನ್ನು ರಾಜ್ಯ ಸರಕಾರಗಕಳು ಜಾರಿಗೆ ತಂದಿಲ್ಲ. ಈ ಹಿಂದೆ ಹಲವು ಬಾರಿ ಮನವಿ ನೀಡಿದ್ದರೂ ಪ್ರಯೋಜನವಾಗಿಲ್ಲ.ಅಲ್ಲದೆ 5-04-2022 ರಂದು ಮನವಿ ಸಲ್ಲಿಸಿ, 19-04-2022ರೊಳಗೆ ನಮ್ಮ ಸೇವೆ…
ತುಮಕೂರು: ಪಠ್ಯಕ್ರಮದಲ್ಲಿ ರಾಮಾಯಣ-ಭಗವದ್ಗೀತೆ ಅಳವಡಿಸುವ ಮಾತಿಲ್ಲ. ಅದರ ಬದಲಾಗಿ ನೈತಿಕ ಶಿಕ್ಷಣ ತರಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸ್ಪಷ್ಟಪಡಿಸಿದ್ದಾರೆ. ತಾಲ್ಲೂಕಿನ ಕೋರಾದಲ್ಲಿ ಸರ್ವಮಂಗಳ ನಾಗಯ್ಯರವರ ಸ್ಮರಣಾರ್ಥ ಮಮತಾ ಹರ್ಷ ದಂಪತಿಗಳು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಸರಕಾರಿ ಮಾದರಿ ಹಿರಿಯ ಪ್ರಾಥ ಮಿಕ ಶಾಲಾ ಕಟ್ಟಡದ ಉದ್ಘಾಟನೆ ನೆರವೇರಿಸಿ ಮಾತನಾಡುತಿದ್ದ ಅವರು, ಭಾರತೀಯ ಸಂಸ್ಕøತಿಯಲ್ಲಿ ಅನ್ನ, ಅಕ್ಷರ ಮತ್ತು ಆರೋಗ್ಯ ದಾನ ಅತ್ಯಂತ ಮುಖ್ಯವಾದುದ್ದು, ಇಂತಹ ಹೊತ್ತಿನಲ್ಲಿ ಹರ್ಷ ದಂಪತಿಗಳು ತಮ್ಮ ತಾಯಿಯ ಹೆಸರಿನಲ್ಲಿ 20 ಸುಸಜ್ಜಿತ ಕೊಠಡಿಗಳನ್ನು ಒಳಗೊಂಡ ಕಟ್ಟಡ ನಿರ್ಮಾನ ಮಾಡಿಕೊಟ್ಟಿದ್ದಾರೆ. ಅದಕ್ಕಾಗಿ ನಾವೆಲ್ಲರೂ ಹರ್ಷ ಮತ್ತು ಕುಟುಂಬ ವರ್ಗದವರಿಗೆ ಧನ್ಯವಾದ ಸಲ್ಲಿಸಬೇಕಾಗಿದೆ ಎಂದರು. ದಾನಿಗಳು ನಿರ್ಮಿಸಿಕೊಟ್ಟಿರುವ ಈ ಶಾಲೆಯನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ನ್ಯಾಚುರಲ್ ಗ್ರೋಥ್‍ಗೆ ಹೆಚ್ಚಿನ ಒತ್ತು ನೀಡುವಂತೆ ಡಿಡಿಪಿಐ ಅವರಿಗೆ ಸೂಚನೆ ನೀಡಿದ್ದೇನೆ. ಇಲ್ಲಿ ಹೈಸ್ಕೂಲ್ ತೆರೆಯಲು ಅಗತ್ಯ ಮಕ್ಕಳ ಸಂಖ್ಯೆ ದೊರೆತರೆ ಕೂಡಲೇ ಅನುಮತ ನೀಡಲಾಗುವುದು…
ತುಮಕೂರು: ಕಾಂಗ್ರೆಸ್ ನ ಮಾಜಿ ಸಚಿವ ಟಿ.ಬಿ ಜಯಚಂದ್ರ ಅವರು ಪ್ರಯಾಣಿಸುತ್ತಿದ್ದ ಕಾರು ಮಂಗಳವಾರ ರಾತ್ರಿ ಅಪಘಾತಕ್ಕೀಡಾಗಿದ್ದು, ಜಯಚಂದ್ರ ಗಂಭೀರ ಗಾಯಗೊಂಡಿದ್ದಾರೆ. ತಮ್ಮ ಫಾರ್ಚೂನರ್ ಕಾರಿನಲ್ಲಿ ಟಿ.ಬಿ ಜಯಚಂದ್ರ ಪ್ರಯಾಣಿಸುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ತುಮಕೂರು ತಾಲ್ಲೂಕಿನ ಸೀಬಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಗೆ ಪಲ್ಟಿಯಾಗಿದೆ. ಪ್ರಾಣಾಪಾಯದಿಂದ ಜಯಚಂದ್ರ ಕಾರು ಚಾಲಕ ಮತ್ತು ಗನ್ ಮ್ಯಾನ್ ಪಾರಾಗಿದ್ದಾರೆ. ಮಾಜಿ ಸಚಿವ ಜಯಚಂದ್ರ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದಾರೆ.
ತುಮಕೂರು: “ವಿಶ್ವವಿದ್ಯಾನಿಲಯಗಳಲ್ಲಿ ಅನ್ಯೋನ್ಯ ಸಂಬಂಧ ಬೆಳೆಯಬೇಕೆಂದರೆ ಆಡಳಿತ ಸುಧಾರಣೆಗಳು ಆಗಬೇಕು. ವಿಶ್ವವಿದ್ಯಾನಿಲಯದ ಎಲ್ಲರೂ ಜತೆಗೂಡಿ ಅದರ ಅಭಿವೃದ್ಧಿಗೆ ಅಗತ್ಯವಿರುವ ನೀಲನಕ್ಷೆಯನ್ನು ಸಿದ್ದಪಡಿಸಬೇಕು” ಎಂದು ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದ ನಿವೃತ್ತ ಅರ್ಥಶಾಸ್ತ್ರ ಪ್ರಾಧ್ಯಾಪಕ ಪ್ರೊ. ಪಿ. ಎಂ. ಹೊನಕೇರಿ ತಿಳಿಸಿದರು. ತುಮಕೂರು ವಿಶ್ವವಿದ್ಯಾನಿಲಯವು ಸೋಮವಾರ ಆಯೋಜಿಸಿದ್ದ ಆಡಳಿತ ಸುಧಾರಣೆ ಕುರಿತ ಕಾರ್ಯಗಾರದಲ್ಲಿ ಮಾತನಾಡಿದ ಅವರು, ವಿಶ್ವವಿದ್ಯಾನಿಲಯದ ಅಭಿವೃದ್ಧಿ ಕೇವಲ ಕುಲಪತಿ, ಕುಲಸಚಿವರಿಂದ ಆಗುವ ಕೆಲಸ ಅಲ್ಲ. ಅದು ಎಲ್ಲರೂ ತೊಡಗಿಸಿಕೊಳ್ಳಬೇಕಾದ ಪ್ರಕ್ರಿಯೆ ಎಂದರು. ಯಾವುದೇ ವಿಶ್ವವಿದ್ಯಾನಿಲಯದ ಅಭಿವೃದ್ಧಿಯಲ್ಲಿ ಬೋಧಕ-ಬೋಧಕೇತರ ಸಿಬ್ಬಂದಿ, ಸಿಂಡಿಕೇಟ್‍ನ ಪಾತ್ರ ಬಹುದೊಡ್ಡದು. ಸಿಂಡಿಕೇಟ್ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡರೆ ವಿಶ್ವವಿದ್ಯಾನಿಲಯದ ಪ್ರಗತಿಗೆ ಯಾವುದೇ ಅಡ್ಡಿ ಉಂಟಾಗಲಾರದು. ಯಾವುದೇ ಸಮಸ್ಯೆ ಇದ್ದಾಗಲೂ ಉದ್ಯೋಗಿಗಳು ತಮ್ಮ ಮೇಲಧಿಕಾರಿಗಳನ್ನು ಭೇಟಿಯಾಗಿ ಚರ್ಚೆ ನಡೆಸುವ ವಾತಾವರಣ ಸೃಷ್ಟಿಯಾಗಬೇಕು ಎಂದು ತಿಳಿಸಿದರು. ಬೆಂಗಳೂರಿನ ಎಂ. ಎಸ್. ರಾಮಯ್ಯ ಸಂಸ್ಥೆಗಳ ನಿಕಟಪೂರ್ವ ಆಡಳಿತಾಧಿಕಾರಿ ಡಾ. ಬೆಟ್ಟೇಗೌಡ ಮಾತನಾಡಿ, ಪ್ರತಿಯೊಬ್ಬರಲ್ಲೂ ಆತ್ಮ ಗೌರವ ಇರಬೇಕು. ಯಾವುದೇ ಒಂದು ಕೆಲಸ ಮಾಡಲು ಸ್ವಯಂ…
ಚಿಕ್ಕನಾಯಕನಹಳ್ಳಿ: ಬಾಬು ಜಗಜೀವನ್ ರಾಮ್ ಹಾಗೂ ಅಂಬೇಡ್ಕರ್ ಅವರ ಜಯಂತಿ ಏಪ್ರಿಲ್ 23ರಂದು ನಡೆಯುವ ಕಾರ್ಯಕ್ರಮಕ್ಕೆ ಕನಿಷ್ಠ ಐದು ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಬೇಕು ಕಾರ್ಯಕ್ರಮದ ಬಗ್ಗೆ ತಾಲೂಕಿನಾದ್ಯಂತ ಹೆಚ್ಚು ಪ್ರಚಾರ ಮಾಡುವ ಮೂಲಕ ಸರ್ವ ಜನಾಂಗವನ್ನು ಈ ಜಯಂತಿಗೆ ಕರೆತರುವ ಪ್ರಯತ್ನ ಆಗಬೇಕು ಎಂದು ತಹಸಿಲ್ದಾರ್ ತೇಜಸ್ವಿನಿ ಹೇಳಿದರು ಇಂದು ತಾಲೂಕು ಕಚೇರಿಯ ಸಭಾಂಗಣದಲ್ಲಿ ಬಾಬು ಜಗಜೀವನ್ ರಾಮ್ ಹಾಗೂ ಅಂಬೇಡ್ಕರ್ ಅವರ ಜಯಂತಿ ಆಚರಣೆಯ ಅಂಗವಾಗಿ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಏಪ್ರಿಲ್ 23ರಂದು ಶೆಟ್ಟಿಕೆರೆ ಹೋಬಳಿ ಜೆಸಿಪುರ ಗ್ರಾಮದಲ್ಲಿ ಜಯಂತೋತ್ಸವ ಆಚರಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು ಅಂದು ನಡೆಯುವ ಸಭೆಗೆ ಕೇಂದ್ರ ಸಚಿವ ಶ್ರೀ ನಾರಾಯಣ ಸ್ವಾಮಿಯವರು ಸೇರಿದಂತೆ ಜಿಲ್ಲೆಯ ಶಾಸಕರುಗಳು ಸಚಿವರುಗಳು ಮತ್ತು ಸಮಾಜದ ಮುಖಂಡರುಗಳು ಇನ್ನೂ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಲು ಪಟ್ಟಣದ ಪುರಸಭೆ ಹಾಗೂ ಹುಳಿಯಾರು ಪಟ್ಟಣ ಪಂಚಾಯಿತಿ ಎಲ್ಲ ಗ್ರಾಮ ಪಂಚಾಯಿತಿಗಳ ಮಟ್ಟದಲ್ಲಿ ಜನರನ್ನು ಕರೆತರುವ…
ತುಮಕೂರು: ರಾಜ್ಯ ಬಿಜೆಪಿ ಸರ್ಕಾರದ 40 ಪರ್ಸಂಟೇಜ್ ಕಮೀಷನ್ ದಂಧೆ ಖಂಡಿಸಿ ಹಾಗೂ ಭ್ರಷ್ಟಾಚಾರದ ಆರೋಪ ಹೊತ್ತಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನವರನ್ನು ಬಂಧಿಸುವಂತೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಇಲ್ಲಿನ ಟೌನ್‍ಹಾಲ್ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್ ನಾಯಕರು ರಾಜ್ಯ ಬಿಜೆಪಿ ಸರ್ಕಾರ ಹಾಗೂ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನವರ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್. ರಾಜಣ್ಣ ಅವರು, ಭ್ರಷ್ಟಾಚಾರದ ಆರೋಪ ಹೊತ್ತಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನವರನ್ನು ಎಫ್‍ಐಆರ್‍ನಲ್ಲಿ ಸೇರ್ಪಡೆ ಮಾಡಿ ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು. ಬಿಜೆಪಿ ಪಕ್ಷದ ಮುಖಂಡನಾಗಿದ್ದ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಳ್ಳುವಂತಹ ದಯನೀಯ ಸ್ಥಿತಿ ಬಿಜೆಪಿ ಸರ್ಕಾರದಲ್ಲಿದೆ. ಇದು ಆ ಪಕ್ಷ ಹಾಗೂ ಸರ್ಕಾರಕ್ಕೆ ಗೌರವ ತರುವುದಿಲ್ಲ ಎಂದು ಕಿಡಿಕಾರಿದರು. ಭ್ರಷ್ಟಾಚಾರದ ಆರೋಪ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಈಶ್ವರಪ್ಪನವರ ಬಗ್ಗೆ ಮುಖ್ಯಮಂತ್ರಿಗಳು ನೀಡುತ್ತಿರುವ ಹೇಳಿಕೆಯನ್ನು…
ತುಮಕೂರು: ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ವಿಶೇಷ ಮುತುವರ್ಜಿವಹಿಸಿ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡಬೇಕು ಹಾಗೂ ಮನೆಗಳಿಗೆ ಸರಬರಾಜು ಮಾಡುವ ನೀರು ಗುಣಮಟ್ಟದಿಂದ ಕೂಡಿರುವ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸುವಂತೆ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಸೂಚಿಸಿದರು. ತಮ್ಮ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿಂದು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫೆರೆನ್ಸ್ ಸಭೆ ನಡೆಸಿ ಮಾತನಾಡಿದ ಅವರು ನಗರಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ನೀರಿನ ಮೂಲಗಳನ್ನು ಪರಿಶೀಲಿಸಿ ನೀರು ಸರಿಯಾಗಿ ಶುದ್ಧೀಕರಣವಾಗುತ್ತಿರುವ ಬಗ್ಗೆ ಹೆಚ್ಚು ಮುತುವರ್ಜಿವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. ನಗರ ಸ್ಥಳೀಯ ಸಂಸ್ಥೆಗಳಲ್ಲಿ ತೆರಿಗೆ ವಸೂಲಾತಿಯ ಬಗ್ಗೆ ಹೆಚ್ಚು ಗಮನ ನೀಡಬೇಕೆಂದರಲ್ಲದೇ ನಿಯಮಾವಳಿಯನ್ವಯ ಮಾರ್ಗಸೂಚಿಗಳನ್ನು ಪಾಲಿಸುವುದರೊಂದಿಗೆ ತೆರಿಗೆಯನ್ನು ವಸೂಲು ಮಾಡಲು ಕ್ರಮವಹಿಸಬೇಕೆಂದರು. ಆಶ್ರಯ, ವಾಜಪೇಯಿ ಸೇರಿದಂತೆ ವಿವಿಧ ವಸತಿ ಯೋಜನೆಗಳಡಿ ವಸತಿ ಮಂಜೂರಾತಿಗಾಗಿ ಪ್ರಸ್ತಾವನೆ ಕಳುಹಿಸಿಕೊಡಲು ನಗರ ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದು ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಂಜನಪ್ಪ ಅವರು ಸಭೆಯ…
ತುಮಕೂರು: ಅಧಿಕಾರಿಗಳು ರೈತಸ್ನೇಹಿಯಾಗಿ ವರ್ತಿಸಬೇಕು. ಅವರ ಸಮಸ್ಯೆಗಳಿಗೆ ಕಾನೂನಾತ್ಮಕ ಪರಿಹಾರವನ್ನು ಒದಗಿಸುವತ್ತ ಕಾರ್ಯಪ್ರವೃತ್ತರಾಗಬೇಕು, ಜನರ ಕಷ್ಟ-ಕಾರ್ಪಣ್ಯಗಳಿಗೆ ಸ್ಪಂದಿಸಿ ಅವರಿಗೆ ಹತ್ತಿರವಾಗಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ತಿಳಿಸಿದರು. ಕೊರಟಗೆರೆ ತಾಲ್ಲೂಕಿನ ಕೋಳಾಲ ಹೋಬಳಿಯ ದೊಡ್ಡ ಪಾಲನಹಳ್ಳಿಯಲ್ಲಿಂದು ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜನರ ಸಮಸ್ಯೆಗಳಿಗೆ ಹತ್ತಿರದಿಂದ ಸ್ಪಂದಿಸುವ ಉದ್ದೇಶದಿಂದ ಸರ್ಕಾರವು ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ರೂಪಿಸಿದೆ ಎಂದರು. ಜನಸಾಮಾನ್ಯರು ಸಮಸ್ಯೆಗಳ ಬಗ್ಗೆ ಮನವಿ ಸಲ್ಲಿಸಿದಾಗ ಆಯಾ ಇಲಾಖಾ ಮುಖ್ಯಸ್ಥರು ಶೀಘ್ರ ಸಮಸ್ಯೆಗಳನ್ನು ಇತ್ಯರ್ಥಗೊಳಿಸಬೇಕು ಎಂದು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ದೊಡ್ಡ ಪಾಲನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಬೆಳಧರ-ಹೊಸಹಳ್ಳಿ ರಸ್ತೆಯು ಹದಗೆಟ್ಟಿರುವ ಬಗ್ಗೆ ಗ್ರಾಮಸ್ಥರು ಈ ಸಂದರ್ಭ ಮನವಿ ಸಲ್ಲಿಸಿದಾಗ ಸ್ಪಂದಿಸಿದ ಜಿಲ್ಲಾಧಿಕಾರಿಗಳು, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಹಾಗೂ ಸಹಾಯಕ ಕಾರ್ಯಪಾಲಕ ಇಂಜಿನಿಯರ್‍ಗಳ ಮೂಲಕ ರಸ್ತೆ ದುರಸ್ಥಿಗೊಳಿಸಲಾಗುವುದು ಎಂದು ಭರವಸೆ ನೀಡಿದರು. ಸರ್ಕಾರದ ನಿಯಮಗಳನ್ವಯ ಅರ್ಹ ಫಲಾನುಭವಿಗಳಿಗೆ…
ತುಮಕೂರು: ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯ ಸದುಪಯೋಗವನ್ನು ಪಡೆಯಲು ಪ್ರತಿಯೊಬ್ಬ ನಾಗರೀಕನೂ ಆಯುಷ್ಮಾನ್ ಯೋಜನೆಗೆ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಶಾಸಕ ಜಿ.ಬಿ. ಜ್ಯೋತಿ ಗಣೇಶ್ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ 75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ನಗರದ ಸರ್ಕಾರಿ ಎಂಪ್ರೆಸ್ ಬಾಲಕಿಯರ ಪ್ರೌಢಶಾಲಾ ಆವರಣದಲ್ಲಿ “ತಾಲ್ಲೂಕು ಮಟ್ಟದ ಆರೋಗ್ಯ ಮೇಳ ಹಾಗೂ ಆರೋಗ್ಯ ಕಾರ್ಯಕ್ರಮಗಳ ಜಾಗೃತಿ ಅಭಿಯಾನ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾನಾಡಿದ ಅವರು ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಆಯುಷ್ಮಾನ್-ಭಾರತ್ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಪ್ರತಿಯೊಬ್ಬ ನಾಗರೀಕನೂ ಯೋಜನೆಗೆ ನೋಂದಾಯಿಸಿಕೊಳ್ಳುವ ಮೂಲಕ ಯೋಜನೆಯ ಅನುಕೂಲ ಪಡೆದುಕೊಳ್ಳಿ ಎಂದರು. ಇಂದು ಡಿಜಿಟಲೀಕರಣ ಹೆಚ್ಚಾಗಿರುವ ಕಾರಣ ಎಲ್ಲಾ ನಾಗರೀಕರಿಗೂ ಡಿಜಿಟಲ್ ಆರೋಗ್ಯ ಗುರುತಿನ ಐಡಿ ಕಾರ್ಡ್ ಮಾಡಿಕೊಡಲಾಗುತ್ತದೆ. ಈ ಕಾರ್ಯಕ್ರಮವು ದೇಶಾದ್ಯಂತ ಚಾಲನೆಯಲ್ಲಿದೆ. ಸರ್ಕಾರದ ಈ ಯೋಜನೆಯು ಉತ್ತಮ ರೀತಿಯಲ್ಲಿ ಬಳಕೆಯಾಗುವ ಮೂಲಕ ಆಯುಷ್ಮಾನ್ ಕಾರ್ಡ್ ಎಲ್ಲರಿಗೂ…











