ತುಮಕೂರು : ಜಿಲ್ಲೆಯಲ್ಲಿ ಕಾರ್ಯಾರಂಭ ಮಾಡಿರುವ ಗ್ರಾಮ-ಒನ್ ಕೇಂದ್ರಗಳಲ್ಲಿ ಮೊದಲಾದ್ಯತೆಯ ಮೇರೆಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ (ಂಃಂಖಏ) ಯೋಜನೆಯಡಿ ಆರೋಗ್ಯ ಕಾರ್ಡ್‍ಗಳನ್ನು ನೀಡಬೇಕೆಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು. ತಮ್ಮ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮಾತನಾಡಿದ ಅವರು ಗ್ರಾಮ-ಒನ್ ಯೋಜನೆಯು ಮುಖ್ಯಮಂತ್ರಿಯವರ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಈ ಯೋಜನೆಯಡಿ ನೂರಕ್ಕೂ ಹೆಚ್ಚು ಸರ್ಕಾರಿ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲಾಗುತ್ತಿದೆ. ಯೋಜನೆಯಡಿ ಸರ್ಕಾರಿ ಸೇವೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶ ಹೊಂದಿದ್ದು, ಇದರಿಂದ ಜನರು ಸರ್ಕಾರಿ ಕೆಲಸಗಳಿಗಾಗಿ ನಗರಗಳಿಗೆ ಬಂದು-ಹೋಗುವುದು ತಪ್ಪುತ್ತದೆ ಎಂದರಲ್ಲದೆ, ತಹಶೀಲ್ದಾರ್, ತಾಲ್ಲೂಕು ಆರೋಗ್ಯಾಧಿಕಾರಿಗಳು ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯಲ್ಲಿ ಇಂದಿನಿಂದ 9 ಮತ್ತು 10ನೇ ತರಗತಿಯನ್ನು ಪ್ರಾರಂಭಿಸಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉಚ್ಚ ನ್ಯಾಯಾಲಯದ ನಿರ್ದೇಶನವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಅವರು ಸೂಚಿಸಿದರು.…
Author: News Desk Benkiyabale
ಕೊರಟಗೆರೆ : ರಾಜ್ಯದಲ್ಲಿ ಹಿಜಾಬ್ ವಿಚಾರವಾಗಿ ನಡೆಯುತ್ತಿರುವ ವಿದ್ಯಮಾನಗಳು ಅತ್ಯಂತ ಖಂಡನೀಯ ವಾಗಿದೆ ಇದರ ಹಿಂದೆ ರಾಜಕೀಯ ಹುನ್ನಾರವಿದ್ದು ಸರ್ಕಾರವು ಕೂಡಲೇ ಇದನ್ನು ಹಿತ್ತಿಕ್ಕಿ ಕಾನೂನು ಕ್ರಮ ಕೈಗೊಳ್ಳದಿದ್ದರೆ ಮುಂಬರುವ ಪರಿಸ್ಥಿತಿಗೆ ಜವಾಬ್ದಾರಿ ಹೊರಬೇಕಾಗುತ್ತದೆ ಎಂದು ಮಾಜಿ ಉಪಮುಖ್ಯಮಂತ್ರಿ ಶಾಸಕ ಡಾ.ಜಿ.ಪರಮೇಶ್ವರ ಎಚ್ಚರಿಸಿದ್ದಾರೆ. ಅವರು ಪತ್ರಿಕಾ ಹೇಳಿಕೆ ನೀಡಿ ರಾಜ್ಯದಲ್ಲಿ ಇತ್ತೀಚೆಗೆ ಹಿಜಾಬ್ ಮತ್ತು ಕೇಸರಿ ಶಾಲ್ ವಿಚಾರವಾಗಿ ನಡೆಯತ್ತಿರುವ ಬೆಳವಣಿಗೆ ಅತ್ಯಂತ ಕಳವಳಕಾರಿಯಾಗಿದೆ. ಡಾ.ಬಿ.ಆರ್.ಅಂಬೇಡ್ಕರ್‍ರವರು ತಮ್ಮ ಸಂವಿಧಾನ ದಲ್ಲಿ ದೇಶದಲ್ಲಿ ಎಲ್ಲರೂ ಅವರ ಧರ್ಮಗಳನ್ನು ಶಾಂತಿ ಸೌಹಾರ್ದಯಿಂದ ಗೌರವವಾಗಿ ಆಚರಿಸಿಕೊಂಡು ಹೋಗಲು ಅವಕಾಶವನ್ನು ಮಾಡಿಕೊಟ್ಟಿದ್ದಾರೆ ಇದು ಭಾರತದಲ್ಲಿ ಕಳೆದ 73 ವರ್ಷದಿಂದ ನಡೆದುಕೊಂಡು ಬರುತ್ತಿದೆ, ದೇಶದಲ್ಲಿ ಪ್ರತಿಯೋಬ್ಬರಿಗೂ ಶಿಕ್ಷಣ ಸಿಗಬೇಕು ಎಂದು ಕೇಂದ್ರ ಮತ್ತು ರಾಜ್ಯಸರ್ಕಾರಗಳು ಸಾವಿರಾರು ಕೋಟಿರೂಗಳ ಯೋಜನೆಯನ್ನು ಶಿಕ್ಷಣಕ್ಕಾಗಿ ಖರ್ಚುಮಾಡುತ್ತಿದೆ, ನ್ಯಾಯಮೂರ್ತಿ ರಾಜೇಂದ್ರ ಸಾಚಾರ್ ಆಯೋಗದ ವರದಿಯಲ್ಲಿ ಅಲ್ಪಸಂಖ್ಯಾತರು ಅತ್ಯಂತ ಕಡಿಮೆ ಶಿಕ್ಷಣವನ್ನು ಪಡೆಯುತ್ತಿದ್ದಾರೆ ಎಂಬ ಅಂಶವನ್ನು ಉಲ್ಲೇಖಿಸಿದ್ದಾರೆ, ವಿಶೇಷವಾಗಿ ಕೆಳಸ್ತರದ…
ತುಮಕೂರು : ಪರಿಶಿಷ್ಟ ಜಾತಿ, ಪಂಗಡದವರ ಶ್ರೇಯೋಭಿವೃದ್ಧಿಗಾಗಿ ಸರ್ಕಾರ ಜಾರಿಗೆ ತಂದಿರುವ ಹಲವಾರು ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವುದು ಅಧಿಕಾರಿಗಳ ಜವಾಬ್ದಾರಿ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ 2021-22ನೇ ಸಾಲಿನ ರಾಜ್ಯ ವಲಯ ವಿಶೇಷ ಘಟಕ ಯೋಜನೆ/ಗಿರಿಜನ ಉಪಯೋಜನೆ ಕಾರ್ಯಕ್ರಮಗಳಡಿ ಜನವರಿ 2022ರ ಅಂತ್ಯಕ್ಕೆ ಸಾಧಿಸಲಾದ ಪ್ರಗತಿಗೆ ಸಂಬಂಧಿಸಿದಂತೆ ಜಿಲ್ಲಾ ಮೇಲ್ವಿಚಾರಣಾ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಸರ್ಕಾರ ಪರಿಶಿಷ್ಟರ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳನ್ನು ಜಾರಿಗೆ ತಂದು ಅನುಷ್ಠಾನಕ್ಕಾಗಿ ಇಲಾಖೆಗಳಿಗೆ ಅನುದಾನವನ್ನು ಒದಗಿಸುತ್ತಿದೆ. ಅರ್ಹರಿಗೆ ಸವಲತ್ತುಗಳನ್ನು ಒದಗಿಸಲು ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕೆಂದು ಸೂಚಿಸಿದರು. ಬರುವ ಮಾರ್ಚ್ ಅಂತ್ಯಕ್ಕೆ ಆರ್ಥಿಕ ವರ್ಷ ಅಂತ್ಯವಾಗುತ್ತಿದ್ದು, ಇಲಾಖೆಗಳಿಗೆ ಒದಗಿಸಿರುವ ಅನುದಾನವನ್ನು ಸಮರ್ಪಕವಾಗಿ ಖರ್ಚು ಮಾಡಿ ನಿಗಧಿತ ಗುರಿಯನ್ನು ಸಾಧಿಸಬೇಕು. ಆ ಮೂಲಕ ಅರ್ಹ ಫಲಾನುಭವಿಗಳಿಗೆ ಸವಲತ್ತು ತಲುಪಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು. ಪರಿಶಿಷ್ಟ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದಂತೆ ಆಧಾರ್ ಕಾರ್ಡ್ ಪೆಂಡಿಂಗ್ ಕೆಲಸಗಳು ಬಾಕಿ…
ತುಮಕೂರು : ಹೆಣ್ಣು ಮಕ್ಕಳ ರಕ್ಷಣೆಗೆ ಕಾನೂನು-ಕಟ್ಟಳೆಗಳಿದ್ದರೂ ಸಹ ಸಮಾಜದಲ್ಲಿ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯಗಳು ನಡೆಯುತ್ತಲೇ ಇವೆ. ಹೆಣ್ಣು ಮಕ್ಕಳು ದೈಹಿಕ ಮತ್ತು ಮಾನಸಿಕವಾಗಿ ಸದೃಢರಾದಾಗ ಮಾತ್ರ ತಮ್ಮ ಮೇಲಾಗುವ ದೌರ್ಜನ್ಯವನ್ನು ಯಾರ ಸಹಾಯವೂ ಇಲ್ಲದೆ ಎದುರಿಸಿ ನಿಲ್ಲಲು ಸಾಧ್ಯ ಎಂದು ಶಾಸಕ ಜ್ಯೋತಿ ಗಣೇಶ್ ನುಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಂಯುಕ್ತಾಶ್ರಯದಲ್ಲಿ ನಗರದ ಅಮಾನಿಕೆರೆ ಗಾಜಿನ ಮನೆಯಲ್ಲಿ ಏರ್ಪಡಿಸಿದ್ದ ‘ಓಬವ್ವ ಆತ್ಮ ರಕ್ಷಣಾ ಕಲೆಯ ಕೌಶಲ್ಯಗಳ ತರಬೇತಿ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರದಿಂದ ಈಗಾಗಲೇ ವಸತಿ ಶಾಲೆ ಮತ್ತು ಸರ್ಕಾರಿ ಶಾಲೆಗಳಲ್ಲಿ ಹೆಣ್ಣು ಮಕ್ಕಳ ಆತ್ಮ ರಕ್ಷಣೆಗೆಂದು ವಿಶೇಷವಾಗಿ ನುರಿತ ತರಬೇತುದಾರರಿಂದ ಕರಾಟೆ ತರಬೇತಿಯನ್ನು ನೀಡುವ ವ್ಯವಸ್ಥೆ ಮಾಡಲಾಗುತ್ತಿದೆ. ಹೆಣ್ಣು ಮಕ್ಕಳಿಗೆ ಮನೆಯಿಂದ ಹೊರಗೆ ಪ್ರತಿನಿತ್ಯ ಎದುರಾಗುವ…
ತುಮಕೂರು : ಜಿಲ್ಲೆಯಲ್ಲಿ ತುಮಕೂರು-ರಾಯದುರ್ಗ ರೈಲ್ವೇ ಯೋಜನೆಗೆ ಸಂಬಂಧಿಸಿದಂತೆ ಹೊಸದಾಗಿ ಹೆಚ್ಚುವರಿಯಾಗಿ ಬೇಡಿಕೆ ಇಟ್ಟಿರುವ 400 ಎಕರೆ ಜಮೀನಿನ ಭೂಸ್ವಾಧೀನಕ್ಕಾಗಿ ಅಗತ್ಯವಿರುವ 50 ಕೋಟಿ ರೂ.ಗಳ ಅನುದಾನವನ್ನು ಇನ್ನೊಂದು ತಿಂಗಳೊಳಗೆ ಒದಗಿಸಲು ಕ್ರಮ ಕೈಗೊಳ್ಳುತ್ತೇನೆ ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ, ಚಿತ್ರದುರ್ಗ ಸಂಸದ ಹಾಗೂ ಜಿಲ್ಲಾ ದಿಶಾ ಸಮಿತಿ ಅಧ್ಯಕ್ಷ ಎ. ನಾರಾಯಣಸ್ವಾಮಿ ಭರವಸೆ ನೀಡಿದರು. ಜಿಲ್ಲಾ ಪಂಚಾಯತಿಯಲ್ಲಿಂದು ಜರುಗಿದ ದಿಶಾ ಸಮಿತಿ ಸಭೆ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತುಮಕೂರು-ರಾಯದುರ್ಗ ಮಾರ್ಗದಲ್ಲಿ ಕೈಗೊಂಡಿರುವ ರೈಲ್ವೆ ಯೋಜನೆ ಸಾಕಾರಕ್ಕಾಗಿ ಶೇ.100ರಷ್ಟು ಭೂಸ್ವಾಧೀನ ಪ್ರಕ್ರಿಯೆ ಈಗಾಗಲೇ ಪೂರ್ಣಗೊಂಡಿದ್ದು, ಈ ಯೋಜನೆಗೆ ಸಂಬಂಧಿಸಿದಂತೆ ರೈಲ್ವೆ ಇಲಾಖೆಯು ಹೊಸದಾಗಿ ಹೆಚ್ಚುವರಿಯಾಗಿ ಬೇಡಿಕೆ ಇಟ್ಟಿರುವ ಜಮೀನನ್ನು ಭೂಸ್ವಾಧೀನಪಡಿಸಿಕೊಳ್ಳಲು ಅಗತ್ಯವಿರುವ 50 ಕೋಟಿ ರೂ.ಗಳ ಅನುದಾನವನ್ನು ಒದಗಿಸಲು ಯಾವುದೇ ಹಣದ ಕೊರತೆಯಿಲ್ಲ ಎಂದು ಸ್ಪಷ್ಟ ಪಡಿಸಿದರು. ಅದೇ ರೀತಿ ಬಹಳ ದಿನಗಳ ಕನಸಾದ…
ತುಮಕೂರು : ಮಹಾನಗರ ಪಾಲಿಕೆ, ರಾಕ್ ಯೂತ್ ಕ್ಲಬ್ ಹಾಗೂ ಜಿಲ್ಲಾ ಅಮಚೂರ್ ಕಬಡ್ಡಿ ಸಂಸ್ಥೆಯ ಸಹಯೋಗದಲ್ಲಿ ಫೆಬ್ರುವರಿ 25 ರಿಂದ 27ರವರೆಗೆ ನಗರದ ಜ್ಯೂನಿಯರ್ ಕಾಲೇಜಿನ ಮೈದಾನದಲ್ಲಿ ಮೇಯರ್ಸ್ ಕಪ್ ಪಂದ್ಯಾವಳಿಯನ್ನು ಹಮ್ಮಿಕೊಳ್ಳಲಾಗುವುದು ಎಂದು ಮಹಾನಗರ ಪಾಲಿಕೆಯ ಮೇಯರ್ ಬಿ.ಜಿ. ಕೃಷ್ಣಪ್ಪ ತಿಳಿಸಿದರು. ತಮ್ಮ ಕೊಠಡಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಳೆದ ವರ್ಷದಂತೆ ಈ ಬಾರಿಯೂ ಸಹ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಮೇಯರ್ಸ್ ಕಪ್ ಪಂದ್ಯಾವಳಿಯಲ್ಲಿ ಹೊನಲು ಬೆಳಕಿನ ರಾಜ್ಯ ಮಟ್ಟದ ಕಬಡ್ಡಿ; ಪಾಲಿಕೆ ಸದಸ್ಯರು, ಪೌರ ಕಾರ್ಮಿಕರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ/ಸಿಬ್ಬಂದಿಗಳು ಹಾಗೂ ಮಾಧ್ಯಮದವರಿಗಾಗಿ ಕ್ರಿಕೆಟ್ ಪಂದ್ಯವನ್ನು ಆಯೋಜಿಸಲಾಗುವುದು ಎಂದರು. ಮೇಯರ್ಸ್ ಕಪ್‍ನಡಿ ನಡೆಯಲಿರುವ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಪುರುಷ ಮತ್ತು ಮಹಿಳಾ ತಂಡಗಳು ಭಾಗವಹಿಸಲಿವೆ. ಪಂದ್ಯಾವಳಿಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಪಾಲಿಕೆ ವತಿಯಿಂದ ವಸತಿ, ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ಪಂದ್ಯಾವಳಿಯಲ್ಲಿ ವಿಜೇತರಾದವರಿಗಾಗಿ ನಗದು ಬಹುಮಾನವನ್ನು ನೀಡಲಾಗುವುದು ಎಂದು ತಿಳಿಸಿದರು.…
ಕೊರಟಗೆರೆ: ಗುಲಾಮಗಿರಿ ಚಿತ್ರಿಕರಕ್ಕಾಗಿ ಕೊರಟಗೆರೆ ಸುತ್ತಮುತ್ತಲಿನ ಸ್ಥಳವನ್ನು ಆಯ್ಕೆ ಮಾಡುವ ಪ್ರಯುಕ್ತ ಪಟ್ಟಣದ ಸರ್ಕಾರಿ ಪ್ರಾಥಮಿಕ ಪಾಠಶಾಲೆಯಲ್ಲಿ ನ್ಯಾಯಲಯದ ಕೆಲವು ಸನ್ನಿವೇಶಗಳನ್ನು ಚಿತ್ರಿಕರೀಸಲು ಸ್ಥಳ ವೀಕ್ಷಣೆ ಮಾಡಲು ಚಿತ್ರ ನಿರ್ದೇಶಕ ಹಾಗೂ ಸಂಗೀತ ನಿರ್ದೇಶಕ ವಿ.ಮನೋಹರ್ ಮತ್ತು ಗುಲಾಮಗಿರಿ ಚಿತ್ರತಂಡ ಶುಕ್ರವಾರ ಭೇಟಿ ನೀಡಿದರು. ಟೈಗರ್ ನಾಗ್‍ರವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಗುಲಾಮಗಿರಿ ಚಿತ್ರಿಕರಣಕ್ಕಾಗಿ ಕೊರಟಗೆರೆ ಸುತ್ತಮುತ್ತಲಿನ ಸ್ಥಳವನ್ನು ಆಯ್ಕೆ ಮಾಡುವ ಪ್ರಯುಕ್ತ ಪಟ್ಟಣದ ಸರ್ಕಾರಿ ಪ್ರಾಥಮಿಕ ಪಾಠಶಾಲೆಯ ಆವರಣದಲ್ಲಿ ನ್ಯಾಯಲಯದ ಕೆಲವು ಸನ್ನಿವೇಶಗಳನ್ನು ಚಿತ್ರಿಕರೀಸಲು ಸ್ಥಳ ವೀಕ್ಷಣೆ ಮಾಡಲು ಭೇಟಿ ನೀಡಿದ್ದೇವೆ ಎಂದು ಚಿತ್ರ ನಿರ್ದೇಶಕ ಹಾಗೂ ಸಂಗೀತ ನಿರ್ದೇಶಕ ವಿ.ಮನೋಹರ್ ತಿಳಿಸಿದರು. ಮಧುಗಿರಿಯ ಬಿ.ಎ.ಎಸ್ ಫಿಲಂಸ್ ಬ್ಯಾನರ್ ಅಡಿಯಲ್ಲಿ ಸಾಧಿಕ್ ಸಾಬ್ ನಿರ್ಮಿಸುತ್ತಿರುವ ‘ಗುಲಾಮಗಿರಿ ಚಿತ್ರವು’ ಕಾದಂಬರಿ ಆಧಾರಿತ ಚಿತ್ರವಾಗಿದ್ದು ಚಿತ್ರದಲ್ಲಿ ಸ್ಯಾಂಡಲ್ ವುಡ್ ನ ಖ್ಯಾತ ನಟ-ನಟಿಯರ ಜೊತೆ ಟಾಲಿವುಡ್ ಮತ್ತು ಹಾಲಿವುಡ್ ಹಾಗೂ ತೆಲುಗು…
ತುಮಕೂರು : ಬೇಸಿಗೆ ಬರುತ್ತಿರುವುದರಿಂದ ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಕೆಲಸ ನಿರ್ವಹಿಸಬೇಕು, ಕುಡಿಯುವ ನೀರಿನ ಘಟಕಕ್ಕೆ ವಿದ್ಯುತ್ ಸಂಪರ್ಕ ಕಡಿತಗೊಳಿಸದಂತೆ ಬೆಸ್ಕಾಂ ಅಧಿಕಾರಿಗಳಿಗೆ ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ ಸೂಚನೆ ನೀಡಿದರು. ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಬೆಸ್ಕಾಂ ಇಲಾಖೆಯ ಅಧಿಕಾರಿಗಳು ಅಭಿವೃದ್ಧಿ ನಿಗಮಗಳು ಕೊರೆಸಿರುವ ಕೊಳವೆ ಬಾವಿಗಳಿಗೆ ಶೀಘ್ರ ವಿದ್ಯುತ್ ಸಂಪರ್ಕ ಕಲ್ಪಿಸಬೇಕು, ಹಿರಿತನದ ಆಧಾರದ ಮೇಲೆ ವಿದ್ಯುತ್ ಪರಿವರ್ತಕ ನೀಡಬೇಕೆ ಹೊರತು, ಶಿಫಾರಸ್ಸಿಗಲ್ಲ ಎಂದು ಬೆಸ್ಕಾಂ ಎಇಇ ಷರೀಫ್ ಅವರಿಗೆ ತಾಕೀತು ಮಾಡಿದರು. ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದಿರುವ ರೈತರ ಮೇಲೆ ವಿಜಿಲೆನ್ಸ್ ಅಧಿಕಾರಿಗಳು ದಬ್ಬಾಳಿಕೆ ಮಾಡುತ್ತಿದ್ದಾರೆ, ಮನೆ ಕಟ್ಟುವಾಗಲೋ, ಪುಂಪು ಮೋಟಾರು ಬಿಡುವಾಗಲೋ ವಿದ್ಯುತ್ ಸಂಪರ್ಕ ಪಡೆದುಕೊಂಡವರ ಮೇಲೆ ಲಕ್ಷಾಂತರ ರೂ ದಂಡ ವಿಧಿಸಿದರೆ ಹೇಗೆ? ಅಕ್ರಮ ನಿಗದಿ ಮಾಡುವಾಗ ಸರಿಯಾದ ಮಾನದಂಡ ಅನುಸರಿಸಬೇಕು, ಕಷ್ಟದಲ್ಲಿರುವ ರೈತರ…
ಚಿಕ್ಕನಾಯಕನಹಳ್ಳಿ : ಪಟ್ಟಣದ ಪೊಲೀಸ್ ವಸತಿಗೃಹದಲ್ಲಿ 21 ವರ್ಷದ ಲಾವಣ್ಯ ಎಂಬ ಯುವತಿ ನೇಣುಬಿಗಿದು ಆತ್ಮಹತ್ಯೆಮಾಡಿಕೊಂಡ ಘಟನೆ ಭಾನುÀವಾರ ಮಧ್ಯಾಹ್ನ 3-30ರಲ್ಲಿ ನಡೆದಿದೆ. ಪಟ್ಟಣದ ಪೊಲೀಸ್ ವಸತಿಗೃಹದಲ್ಲಿ ವಾಸವಿದ್ದ ಪೊಲೀಸ್‍ಪೇದೆ ಶಶಿಧರ್‍ಕುಮಾರ್‍ರವರ ಪತ್ನಿ ಲಾವಣ್ಯ ಮನೆಯ ರೂಮಿನಲ್ಲಿನ ಫ್ಯಾನ್‍ಗೆ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ದಂಪತಿಗಳಿಗೆ ಆರು ತಿಂಗಳ ಗಂಡುಮಗುವಿದ್ದು, ಶಶಿಧರ್ ರಾತ್ರಿಪಾಳಿಮುಗಿಸಿ ಮನೆಯಲ್ಲಿ ನಿದ್ರಿಸುತ್ತಿದ್ದ ಸಂದರ್ಭದಲಿ ಈಕೆ ಮಗುವನ್ನು ಮಲಗಿಸಿ ಮತ್ತೊಂದು ರೂಮಿಗೆ ತೆರಳಿ ಏಕಾಏಕಿ ಫ್ಯಾನ್‍ಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ, ಶಶಿಧರ್ ಶಿರಾ ತಾಲ್ಲೂಕಿನ ಬುಕ್ಕಾಪಟ್ಟಣ ಹೋಬಳಿ ತಪ್ಪದಕೋಣ ನಿವಾಸಿಯಾಗಿದ್ದು ಕಳೆದ ಐದುವರ್ಷದಿಂದ ಇಲ್ಲಿ ಕರ್ತವ್ಯ ನಿರ್ವಹಸುತ್ತಿದ್ದರು, ಲಾವಣ್ಯ ತಾಲುಕಿನ ಹುಳಿಯಾರು ಹೋಬಳಿ ಕಲ್ಲೇನಹಳ್ಳಿ ಗ್ರಾಮದ ನಿವಾಸಿಯಾಗಿದ್ದರು. ಅನ್ಯೋನ್ಯವಾಗಿದ್ದ ಈ ದಂಪತಿಗಳ ನಡುವೆ ಅಂತಹ ಯಾವುದೇ ಮನಸ್ಥಾಪವಿರಲಿಲ್ಲ ಎಂದು ಸ್ಥಳಿಯರು ತಿಳಿಸಿದ್ದಾರೆ. ಪ್ರಕರಣ ಸ್ಥಳೀಯ ಠಾಣೆಯಲ್ಲಿ ದಾಖಲಾಗಿದ್ದು, ಸ್ಥಳಕ್ಕೆ ಎಎಸ್ಪಿ ಸುಧಾಕರ್ ಗೋಯಲ್, ಸಿಪಿಐ ನಿರ್ಮಲ ಭೇಟಿನೀಡಿದ್ದರು. ಮೃತ ಯುವತಿಯ…
ತುಮಕೂರು : ಸರ್ಕಾರದಿಂದ ಅನುದಾನ ತರಲು ಸಾಕಷ್ಟು ಕಷ್ಟ ಅನುಭವಿಸಿದ್ದೇವೆ, ಅಧಿಕಾರಿಗಳು ಶ್ರದ್ಧೆ ವಹಿಸಿ ಕಾರ್ಯನಿರ್ವಹಿಸಿ ಅನುದಾನ ಸದ್ಬಳಕೆ ಮಾಡಬೇಕೆಂದು ಎಂದು ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ ಸೂಚನೆ ನೀಡಿದರು. ತಹಶೀಲ್ದಾರ್ ಕಾರ್ಯಾಲಯದಲ್ಲಿ ಬಗರ್ ಹುಕುಂ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದ ಅವರು, ಬಗರ್‍ಹುಕುಂ ಸಮಿತಿ ಕೋರಂ ಕೊರತೆಯಿಂದ ಸಭೆ ರದ್ದುಗೊಂಡ ನಂತರ ಅಧಿಕಾರಿಗಳೊಂದಿಗೆ ಮಾತನಾಡಿದ ಅವರು, ಗ್ರಾಮಾಂತರ ಕ್ಷೇತ್ರದ ಡೀಮ್ಡ್ ಅರಣ್ಯದಲ್ಲಿ ಉಳುಮೆ ಮಾಡುತ್ತಿರುವವರನ್ನು ಒಕ್ಕಲೆಬ್ಬಿಸುವುದು ಬೇಡ, ರೈತರಿಗೆ ಅನಗತ್ಯ ತೊಂದರೆ ನೀಡಬೇಡಿ ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಾನೂನು ಸಚಿವರಾದ ಮಾಧುಸ್ವಾಮಿ ಅವರು ಡೀಮ್ಡ್ ಅರಣ್ಯ ಪ್ರದೇಶವವನ್ನು ಕೈಬಿಡಬೇಕೆಂದು ಸುಪ್ರೀಂಕೋರ್ಟ್‍ಗೆ ಅಫಿಡವಿಟ್ ಸಲ್ಲಿಸಿದ್ದಾರೆ. ಇದರಿಂದ ರಾಜ್ಯದಲ್ಲಿ ಭೂ ರಹಿತರಿಗೆ ಭೂಮಿ ಹಂಚಿ ಮಾಡಲು ಸಾಧ್ಯವಿದ್ದು, ಡೀಮ್ಡ್ ಅರಣ್ಯದಿಂದ ಜನರು ಅನುಭವಿಸುತ್ತಿರುವ ಸಮಸ್ಯೆಗೆ ಮುಕ್ತಿ ದೊರೆಯಲಿದೆ, ಪಕ್ಷಾತೀತವಾಗಿ ಅಭಿವೃದ್ಧಿ ಪರ ಚಿಂತಿಸುವ ರಾಜಕಾರಣಿ ಎಂದು ಹೇಳಿದರು. ಗ್ರಾಮಾಂತರದಲ್ಲಿ ರೈತರನ್ನು ಒಕ್ಕಲೆಬ್ಬಿಸುವ ಪ್ರಯತ್ನ…











