Author: News Desk Benkiyabale

ತುಮಕೂರು : ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಅಂಗಡಿ, ಹೋಟೆಲ್‍ಗಳಲ್ಲಿ ಯಾವುದೇ ರೀತಿಯ ಪ್ಲಾಸ್ಟಿಕ್ ಕವರ್, ಬ್ಯಾಗ್ ಸೇರಿದಂತೆ ಪ್ಲಾಸ್ಟಿಕ್ ಉತ್ಪನ್ನಗಳ ಮಾರಾಟ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದರು. ತಮ್ಮ ಕಚೇರಿಯ ಸಭಾಂಗಣದಲ್ಲಿಂದು ನಡೆದ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ತೆರಿಗೆ ವಸೂಲಾತಿ ಹಾಗೂ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಆಗಸ್ಟ್ 2021ರಿಂದ ಈವರೆಗೂ 11 ನಗರ ಸ್ಥಳೀಯ ಸಂಸ್ಥೆಗಳಲ್ಲಿ 137 ದಾಳಿಗಳನ್ನು ನಡೆಸಿದ್ದು, 3545 ಕೆ.ಜಿ.ಯಷ್ಟು ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶಕ್ಕೆ ಪಡೆಯಲಾಗಿದ್ದು, 3.85ಲಕ್ಷ ರೂ.ಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಲಾಗಿದೆ ಎಂದರು. ಜಿಲ್ಲೆಯಲ್ಲಿ ಘನತ್ಯಾಜ್ಯ ನಿರ್ವಹಣೆಗಾಗಿ ನಗರ ಸ್ಥಳೀಯ ಸಂಸ್ಥೆಗಳ ಹೊರವಲಯಗಳಲ್ಲಿ ತ್ಯಾಜ್ಯ ವಿಲೇವಾರಿಗಾಗಿ ಸ್ಥಳವನ್ನು ಗುರುತಿಸಲಾಗಿದ್ದು, ಸೂಕ್ತ ರೀತಿಯಲ್ಲಿ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು ಎಂದರಲ್ಲದೆ, ಮನೆ ಮನೆಗೆ ಭೇಟಿ ನೀಡಿ ಹಸಿ-ಒಣ, ಮಿಶ್ರ ಕಸಗಳನ್ನು ಪ್ರತ್ಯೇಕಿಸಿ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕೆಂದರು. ನಗರ ಸ್ಥಳೀಯ…

Read More

ತುಮಕೂರು :       ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್.ಕೆ. ಅತೀಕ್ ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಲ ಜೀವನ್ ಮಿಷನ್, ಮಹಾತ್ಮ ಗಾಂಧಿ ನರೇಗಾ ಯೋಜನೆ ಹಾಗೂ ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಯೋಜನೆಯ ವಿಷಯಗಳ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರು ಸಭೆಗೆ ಮಾಹಿತಿ ನೀಡುತ್ತಾ, 2020-21ನೇ ಸಾಲಿನ ಜಲ ಜೀವನ್ ಮಿಷನ್ ಯೋಜನೆಯಡಿ 84 ಜನವಸತಿಗಳ ಕಾರ್ಯಾತ್ಮಕ ನಳ ನೀರು ಸಂಪರ್ಕ ಕಾಮಗಾರಿಗಳ ಪೈಕಿ 8 ಕಾಮಗಾರಿಗಳು ಪೂರ್ಣಗೊಂಡಿದ್ದು, ಉಳಿದ 76 ಕಾಮಗಾರಿಗಳು ಪ್ರಗತಿಯಲ್ಲಿರುತ್ತವೆ ಹಾಗೂ 2021-22ನೇ ಸಾಲಿನಲ್ಲಿ 82 ಕಾಮಗಾರಿಗಳ ಪೈಕಿ 22 ಕಾಮಗಾರಿಗಳಿಗೆ ಕಾರ್ಯಾದೇಶ ನೀಡಲಾಗಿದ್ದು, ಉಳಿದ 60 ಕಾಮಗಾರಿಗಳು ಟೆಂಡರ್ ಪ್ರಕ್ರಿಯೆ ಹಂತದಲ್ಲಿರುತ್ತವೆ.       ಅದೇ ರೀತಿ 2021-22ನೇ ಸಾಲಿಗೆ ಹೆಚ್ಚುವರಿ ಕ್ರಿಯಾ ಯೋಜನೆ ಅನುಮೋದನೆಯಾಗಿದೆ.…

Read More

ಚಿಕ್ಕನಾಯಕನಹಳ್ಳಿ :       ಪಟ್ಟಣದಲ್ಲಿ ನಡೆದ 73ನೇ ಗಣರಾಜ್ಯೋತ್ಸವದ ಕಾರ್ಯಕ್ರಮಕ್ಕೆ ಸಚಿವ ಜೆ.ಸಿ. ಮಾಧುಸ್ವಾಮಿಯವರು ಗೈರು ಹಾಜರಾಗಿರುವ ಬಗೆಗಿನ ವಿವಾದದ ಬಗ್ಗೆ ಬಿಜೆಪಿ ಕಾರ್ಯಕರ್ತರು ಬುಧವಾರ ಪತ್ರಿಕಾಗೋಷ್ಠಿಯ ಮೂಲಕ ಸ್ಪಷ್ಣನೆ ನೀಡಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬಿಜೆಪಿಯ ತಾಲ್ಲೂಕು ಉಪಾಧ್ಯಕ್ಷ ನಿರಂಜನ್ ಮಾತನಾಡಿ ಸಚಿವ ಜೆ.ಸಿ. ಮಾಧುಸ್ವಾಮಿಯವರಿಗೆ ಜಿಲ್ಲೆಯ ಉಸ್ತುವಾರಿಯಿಂದ ವಿಮುಕ್ತಗೊಳಿಸಿದಾಗ, ಸಚಿವರು ಗಣರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ಮಾಡಲು ಅವಕಾಶ ನೀಡಲು ಜಿಲ್ಲಾಧಿಕಾರಿಗಳಿಗೆ ಮೌಖಿಕವಾಗಿ ಪ್ರಸ್ತಾಪಿಸಿದ್ದರು. ಈಗಾಗಲೇ ಆಯಾ ತಾಲ್ಲೂಕು ಕೇಂದ್ರಗಳಲ್ಲಿ ಅಲ್ಲಿನ ತಹಸೀಲ್ದಾರ್‍ರವರರೆ ಆಡಳಿತಾತ್ಮವಾಗಿ ಧ್ವಜಾರೋಹಣ ಮಾಡುವ ನಿಯಮವಿದ್ದ ಕಾರಣ, ಪ್ರಸ್ತುತ ಸಚಿವರ ಕೋರಿಕೆಯನ್ವಯ ಚಿಕ್ಕನಾಯಕನಹಳ್ಳಿಯ ತಾಲ್ಲೂಕು ಕೇಂದ್ರದಲ್ಲಿ ಧ್ವಜಾರೋಹಣ ಮಾಡಲ ರಾಜ್ಯ ಶಿಷ್ಟಾಚಾರ ಇಲಾಖೆಗೆ ಜ. 25 ರಂದು ಪತ್ರ ರವಾನಿಸಲಾಗಿತ್ತು. ಆದರೆ ಅಲ್ಲಿಂದ ಸೂಕ್ತ ಸಂದೇಶ ಬಾರದಕಾರಣ ರಾಷ್ಟ್ರೀಯಹಬ್ಬಗಳ ಆಚರಣೆಯಲ್ಲಿ ಯಾವುದೇ ಕಾನೂನು ತೊಡಕು ನಿರ್ಮಾಣವಾಗದಿರಲೆಂದು ಸಚಿವರು ಈ ಕಾರ್ಯಕ್ರಮಕ್ಕ ಆಗಮಿಸಲಿಲ್ಲ ಎಂದರು. ಸಚಿವರಿಂದ ಸಂವಿಧಾನಕ್ಕಾಗಲಿ, ಡಾ. ಅಂಬೇಡ್ಕರ್‍ರವರ ಬಗ್ಗೆ ಯಾವುದೇ ಅಗೌರವತೋರಿಲ್ಲ ಎಂದರು.…

Read More

ಮಧುಗಿರಿ :       ಮಧುಗಿರಿ ಉಪವಿಭಾಗವನ್ನು ಕಂದಾಯ ಜಿಲ್ಲೆಯನ್ನಾಗಿ ಘೋಷಿಸಬೇಕೆಂದು ಸರ್ಕಾರವನ್ನು ಒತ್ತಾಯಿಸುವುದಾಗಿ ಶಾಸಕ ವೀರಭದ್ರಯ್ಯ ತಿಳಿಸಿದರು. ಪಟ್ಟಣದ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ 73 ನೇ ಗಣರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ ಜಿಲ್ಲಾ ಕೇಂದ್ರ ಮಾಡುವುದರಿಂದ ಅಭಿವೃದ್ಧಿ ಕಾರ್ಯ ಕಾರ್ಯ ಸಾಧ್ಯ ಎಂದ ಅವರು ಎತ್ತಿನಹೊಳೆ ಕಾಮಗಾರಿಯ ವೇಗವನ್ನು ಹೆಚ್ಚಿಸಬೇಕೆಂದು ಮಧುಗಿರಿಯನ್ನು ಪ್ರವಾಸಿ ಕೇಂದ್ರವನ್ನಾಗಿ ಮಾಡುವಂತೆ ಸರ್ಕಾರವನ್ನು ಒತ್ತಾಯಿಸುವುದಾಗಿ ತಿಳಿಸಿದ ಅವರು ತಾಲ್ಲೂಕಿನಲ್ಲಿ 336 ಎಕರೆ ಪ್ರದೇಶದಲ್ಲಿ ಕೈಗಾರಿಕಾ ವಲಯ ಮುಂಜೂರಾಗಿದ್ದು, ಶೀಘ್ರದಲ್ಲೇ ಕಾಮಗಾರಿಯನ್ನು ಪ್ರಾರಂಭಿಸಬೇಕಾಗಿದೆ. ಅದೇ ರೀತಿ 264 ಕೋಟಿ ರೂಪಾಯಿಗಳ 4 ಪಥಗಳ ರಸ್ತೆ ಕಾಮಗಾರಿಯನ್ನು ಪ್ರಾರಂಬಿಸುವಂತೆ ಒತ್ತಾಯಿಸಿದ ಅವರು ಬಾಜಪ ಸರ್ಕಾರ ಅನುದಾನ ಹಂಚಿಕೆಯಲ್ಲಿ ತಾರತಮ್ಯವೆಸಗುತ್ತಿದೆ ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಬೇಡ ಕ್ಷೇತ್ರದಲ್ಲಿ ಅನುದಾನ ಕೊರತೆಯಿಂದ ಅಭಿವೃದ್ಧಿಯಲ್ಲಿ ಸ್ವಲ್ಪ ಹಿನ್ನೆಡೆ ಇದೆ ಎಂದರು. ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕೊಡುವುದೇ ನಮ್ಮ ಸಂವಿಧಾನ ಅದು ನಮಗೆ ಉತ್ತಮ ನೆಲೆ ದಾರಿ ತೋರಿಸಿಕೊಟ್ಟಿದೆ ಎಂದರು. ದ್ವಜಾರೋಹಣ…

Read More

ತುಮಕೂರು :       ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಧುಗಿರಿ ಇವರ ಸಹಯೋಗದೊಂದಿಗೆ ಮಧುಗಿರಿ ತಾಲ್ಲೂಕು ಚಂದ್ರಗಿರಿ ಗೊಲ್ಲರಹಟ್ಟಿಯಲ್ಲಿ ಸಾರ್ವಜನಿಕರಿಗೆ ಹಾಗೂ ಅಲೆಮಾರಿ ಹಾಗೂ ಅರೆಅಲೆಮಾರಿ ಸಮುದಾಯವರಿಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಂದ್ರಗಿರಿ ಗ್ರಾ.ಪಂ ಅಧ್ಯಕ್ಷರಾದ ಶ್ರೀಮತಿ ಸವಿತ ಕೆ.ಟಿ. ರವರು ಅಧ್ಯಕ್ಷತೆ ವಹಿಸಿ ಉದ್ಘಾಟಿಸಿದರು.       ಇವರು ಮಾತನಾಡುತ್ತಾ ಗೊಲ್ಲರಹಟ್ಟಿಗಳಲ್ಲಿ ಇಂದಿಗೂ ಕೂಡ ಮೂಡನಂಬಿಕೆ ಹಾಗೂ ಕಂದಾಚಾರವನ್ನು ಅಳವಡಿಸಿಕೊಂಡಿದ್ದು, ಹೆರಿಗೆಯಾದ ಹಾಗೂ ಋತುಮತಿಯಾದ ಹೆಣ್ಣು ಮಕ್ಕಳನ್ನು ಊರಿನಿಂದ ದೂರವಿಡುತ್ತಿರುವುದು ನಿಜವಾಗಲು ಕೂಡ ಶೌಚನೀಯ ಎಂದರು. ಮುಂದಿನ ದಿನಗಳಲ್ಲಿ ಇಂತಹ ಪದ್ದತಿಗಳನ್ನು ದೂರವಿಟ್ಟು ಸಮಾಜದಲ್ಲಿ ಎಲ್ಲಾರಂತೆ ಬದಕಲು ತಿಳಿಸಿದರು. ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಶಿಕ್ಷಣ ಇಲಾಖೆಯ ಎಲ್.ಟಿ.ದಾಸಣ್ಣ ನವರು ಮಾತನಾಡಿ ಗೊಲ್ಲರಹಟ್ಟಿಗಳಲ್ಲಿ ಅಲೆಮಾರಿ ಅರೆ ಅಲೆಮಾರಿ ಜನಾಂಗದವರು ಪ್ರಾಚೀನ ಕಾಲದಿಂದ ಕೆಲವು ಅವೈಜ್ಞಾನಿಕ ಆಚರಣೆಗಳನ್ನು ಆಚರಿಸಿಕೊಂಡು ಬಂದಿದ್ದು ಅವುಗಳಿಗೆ ಯಾವುದೇ…

Read More

ತುಮಕೂರು :       ಭಾರತೀಯ ಸಂವಿಧಾನವು ವಿವಿಧ ಧರ್ಮ, ಬಣ್ಣ, ಭಾಷೆ, ಸಂಸ್ಕøತಿ, ಆಚಾರ-ವಿಚಾರಗಳ ವೈವಿಧ್ಯತೆಯ ನಡುವೆ ದೇಶದ ಏಕತೆಯನ್ನು ಸಾರುವ ಮಾದರಿ ಪ್ರಜಾತಂತ್ರ ವ್ಯವಸ್ಥೆಯಾಗಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಅರಗ ಜ್ಞಾನೇಂದ್ರ ತಿಳಿಸಿದರು.       ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ 73ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ, ಗೌರವರಕ್ಷೆ ಸ್ವೀಕರಿಸಿ ಮಾತನಾಡಿದ ಅವರು, ಭಾರತ ದೇಶವು ಸ್ವಾತಂತ್ರ್ಯ ಪಡೆದ ಬಳಿಕ ಸಂಪೂರ್ಣ ಕಾರ್ಯೋನ್ಮುಖವಾದ ಸಂವಿಧಾನ ರಚನಾ ಸಮಿತಿಯು 2 ವರ್ಷಗಳ ಕಾಲ ನಿರಂತರ ಶ್ರಮವಹಿಸಿ ಸಂವಿಧಾನದ ಪ್ರಾಥಮಿಕ ಕರಡು ಪ್ರತಿಯನ್ನು ಸಿದ್ಧಪಡಿಸಿತು. ನಂತರ ಸಂವಿಧಾನದ ಕರಡು ಪ್ರತಿಯ ಬಗ್ಗೆ ಚರ್ಚೆ ನಡೆದು ಅಂತಿಮವಾಗಿ 1949ರ ನವೆಂಬರ್ 26ರಂದು ಸಂವಿಧಾನವನ್ನು . ವಿಧಿಗಳು, ಅನುಸೂಚಿಗಳು ಹಾಗೂ ಅಧ್ಯಾಯಗಳನ್ನೊಳಗೊಂಡ ಭಾರತ ಸಂವಿಧಾನವು 1950ರ ಜನವರಿ 26ರಂದು ಜಾರಿಗೆ ಬಂದಿತು. ಇದೇ ದಿನವನ್ನು ಪ್ರತಿ ವರ್ಷ ಗಣರಾಜ್ಯ…

Read More

ಕೊರಟಗೆರೆ :         ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಇರುವ ದೇಶ ನನ್ನ ಭಾರತ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಭಾರತ ದೇಶಕ್ಕೆ ನೀಡಿದಂತಹ ಸಂವಿಧಾನವು ವಿಶ್ವಕ್ಕೆ ಮಾದರಿ ಆಗಿದೆ. ದೇಶದ ಕಾಯುವ ಸೈನಿಕ ಮತ್ತು ಅನ್ನ ನೀಡುವ ರೈತನಿಗೆ ನಾವೆಲ್ಲರೂ ಗೌರವಿಸೋಣ ಎಂದು ತಹಶೀಲ್ದಾರ್ ನಾಹೀದಾ ಜಮ್ ಜಮ್ ತಿಳಿಸಿದರು.       ಕೊರಟಗೆರೆ ಪಟ್ಟಣದ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಕೊರಟಗೆರೆ ಆಡಳಿತ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಬುಧವಾರ ಏರ್ಪಡಿಸಲಾಗಿದ್ದ ಭಾರತ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.       ಭಾರತ ಗಣರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಬೇಕಾದ ಕೊರಟಗೆರೆ ಕ್ಷೇತ್ರದ ಶಾಸಕ ಡಾ.ಜಿ.ಪರಮೇಶ್ವರ್‍ಗೆ ಕೊರೊನಾ ಸೊಂಕು ದೃಢಪಟ್ಟ ಹಿನ್ನಲೆ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. ಕೊರೊನಾ ದೃಢಪಟ್ಟ ಹಿನ್ನಲೆಯಲ್ಲಿ ಹತ್ತಿರದ ಸಂಪರ್ಕ ಇರುವಂತಹ ಪಕ್ಷದ ಮುಖಂಡರು ಮತ್ತು ಸಾರ್ವಜನಿಕರು ಆರೋಗ್ಯದ ಬಗ್ಗೆ ಕಾಳಜಿಯ ಜೊತೆ ತಪಾಸಣೆ ಮಾಡಿಸಿಕೊಳ್ಳುವಂತೆ ಈಗಾಗಲೇ ಮನವಿ ಮಾಡಿದ್ದಾರೆ.        …

Read More

ತುಮಕೂರು :        ಜಿಲ್ಲೆಯಲ್ಲಿ ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆಗೊಂಡವರಿಗೆ ಜಿಲ್ಲಾಧಿಕಾರಿ ವೈ. ಎಸ್. ಪಾಟೀಲ ಅವರು ಸಾಂಕೇತಿಕವಾಗಿ ಗುರುತಿನ ಚೀಟಿ ವಿತರಣೆ ಮಾಡಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ರಾಷ್ಟ್ರೀಯ ಮತದಾರರ ದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗುರುತಿನ ಚೀಟಿ ವಿತರಿಸಿದ ನಂತರ ಮಾತನಾಡಿದ ಅವರು, ಮತದಾರರ ಪಟ್ಟಿಯಲ್ಲಿ ಗಣರಾಜ್ಯೋತ್ಸವ ಆಚರಣೆಯ ವಜ್ರಮಹೋತ್ಸವದ ನೆನಪಿಗಾಗಿ 2011ರಿಂದ ರಾಷ್ಟ್ರವ್ಯಾಪಿ ಮತದಾರ ದಿನವನ್ನು ಆಚರಿಸುತ್ತ ಬಂದಿದ್ದು, ಮತದಾನದ ಮಹತ್ವವನ್ನು ಅರಿಯುವ ಅಗತ್ಯವಿದೆ. ಹೆಸರು ನೋಂದಾಯಿಸಿದ ಅರ್ಹರು ಶೇ.100ರಷ್ಟು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕೆಂದು ತಿಳಿಸಿದ ಅವರು, 18 ವರ್ಷ ಮೇಲ್ಪಟ್ಟ ಎಲ್ಲ ಅರ್ಹರು ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು ಎಂದು ತಿಳಿಸಿದರು.          ಸಂವಿಧಾನದತ್ತವಾಗಿ ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಕೂಡ ಮತದಾನದ ಹಕ್ಕನ್ನು ಚಲಾಯಿಸುವ ಅಧಿಕಾರ ಹೊಂದಿರುತ್ತಾನೆ. ಪ್ರತಿಯೊಬ್ಬರೂ ಮತದಾನ ಮಾಡುವ ಮೂಲಕ ತಮ್ಮ ಮೂಲಭೂತ ಹಕ್ಕನ್ನು ಚಲಾಯಿಸಬೇಕು.       ಯಾರೊಬ್ಬರೂ ಮತದಾನದಿಂದ ಹೊರಗುಳಿಯುವಂತಿಲ್ಲ…

Read More

ತಿಪಟೂರು :        ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಮತ್ತು ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಅವ್ಯವಸ್ಥೆಗಳ ಆಗರವಾಗಿದ್ದು, ವಿದ್ಯಾರ್ಥಿನಿಯರನ್ನು ದನದ ದೊಡ್ಡಿಯ ರೀತಿಯಲ್ಲಿ ಕೂಡಿ ಹಾಕಿ ಹಾಸ್ಟೆಲ್ ನಡೆಸುತ್ತಿದ್ದಾರೆ.         ಮಕ್ಕಳ ಹಕ್ಕುಗಳು ಉಲ್ಲಂಘನೆಯಾಗುತ್ತಿದ್ದು, ಪ್ರಾಣಿಗಳ ರೀತಿಯಲ್ಲಿ ಮಕ್ಕಳನ್ನು ನಡೆಸಿಕೊಳ್ಳುತ್ತಿದ್ದಾರೆ ಎನ್ನುವ ಆರೋಪವಿದೆ. ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ ತಿಪಟೂರು ಗಾಂಧಿ ನಗರದ ಶಾಖೆಯು ಸರ್ಕಾರಿ ಕಟ್ಟಡದಲ್ಲಿ ನಡೆಯುತ್ತಿತ್ತು. ಅದನ್ನು ಬಾಗಿಲು ಮುಚ್ಚಿ ಅಲ್ಲಿ ಇದ್ದಂತಹ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಯರನ್ನು ಬಿ.ಹೆಚ್. ರಸ್ತೆ ಸಮೀಪದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಕ್ಲಬ್ ಮಾಡಿರುತ್ತಾರೆ.   ಸರ್ಕಾರದ ಅಧಿಕೃತ ಆದೇಶವಿರುವುದಿಲ್ಲ. ಜಿಲ್ಲಾ ಬಿಸಿಎಂ ಅಧಿಕಾರಿಗಳ ಅನುಮತಿಯೂ ಇಲ್ಲದೇ ಎರಡೂ ಹಾಸ್ಟೆಲ್‍ಗಳನ್ನು ಒಂದೇ ಕಡೆ ಕ್ಲಬ್ ಮಾಡಿದ್ದು, ಜೂನಿಯರ್ ಸೂಪರಿಡೆಂಟ್ ಶೋಭಾ ರವರು ಕ್ಲಬ್ ಮಾಡಿರುತ್ತಾರೆ.        ತಾಲ್ಲೂಕು ಬಿಸಿಎಂ ಅಧಿಕಾರಿ ಜಲಜಾಕ್ಷಮ್ಮನವರ ಜೊತೆ ನಿಕಟವಾದ ಸಂಬಂಧ…

Read More

 ತುಮಕೂರು :       ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಆರೋಗ್ಯದ ಹಿತದೃಷ್ಟಿಯಿಂದ ಕಡ್ಡಾಯವಾಗಿ ಪೂರಕ ಔಷಧಿಗಳನ್ನೊಳಗೊಂಡ ಹೆಲ್ತ್ ಕಿಟ್ ಅನ್ನು ಅಗತ್ಯವಿರುವ ಸೋಂಕಿತರಿಗೆ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.       ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಈಗಾಗಲೇ ಮೊದಲ ಡೋಸ್ ಲಸಿಕೆ ನೀಡುವಲ್ಲಿ ಶೇ.100ರಷ್ಟು ಗುರಿ ಸಾಧಿಸಿದ್ದು, ಸೋಂಕು ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬಾಕಿ ಉಳಿಸಿಕೊಂಡಿರುವ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಲಸಿಕೆಗಳನ್ನು ನೀಡಿ ಪೂರ್ಣಗೊಳಿಸಬೇಕು. ಲಸಿಕೆ ಪಡೆಯಲು ಹಿಂಜರಿಯುವ ಪ್ರದೇಶಗಳಲ್ಲಿ ಸೋಂಕಿನ ತೀವ್ರತೆಯನ್ನು ಹಾಗೂ ಲಸಿಕೆಯ ಅಗತ್ಯತೆ ಕುರಿತು ಮನವರಿಕೆ ಮಾಡಿ ಲಸಿಕೆ ನೀಡಬೇಕು ಎಂದು ತಿಳಿಸಿದರು. ಜಿಲ್ಲೆಯ ತುಮಕೂರು, ಶಿರಾ ಹಾಗೂ ಮಧುಗಿರಿ ತಾಲೂಕುಗಳಲ್ಲಿ 2000ಕ್ಕಿಂತಲೂ ಅಧಿಕ ಕೋವಿಡ್ ಸೋಂಕು ವರದಿಯಾಗಿದ್ದು, ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಸೂಕ್ತ ಸಮಯದಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು. ಸೋಂಕಿತರಿಗೆ ಹೆಲ್ತ್…

Read More