Author: News Desk Benkiyabale

ಗುಬ್ಬಿ :        ಸುಮಾರು 40 ವರ್ಷಗಳಿಂದ ಭೂ ಸಾಗುವಳಿ ಮಾಡುತ್ತಿರುವ ರೈತರ ಭೂಮಿಯನ್ನು ಅರಣ್ಯ ಪ್ರದೇಶವೆಂದು ದಾಖಲಾತಿಗಳು ಇಲ್ಲದಿದ್ದರೂ ಅಧಿಕಾರಿಗಳು ಒಕ್ಕಲೆಬ್ಬಿಸಲು ಹೋಗುತ್ತಿರುವುದು ಎಷ್ಟು ಸಮಂಜಸವೆಂದು ಗುಬ್ಬಿ ವಲಯ ಅರಣ್ಯ ಇಲಾಖೆಯ ಅಧಿಕಾರಿ ದುಗ್ಗಪ್ಪನವರ ಮೇಲೆ ಶಾಸಕ ಎಸ್.ಆರ್.ಶ್ರೀನಿವಾಸ್ ಕಿಡಿಕಾರಿದರು. ಪಟ್ಟಣದ ತಾಲ್ಲೂಕು ಪಂಚಾಯ್ತಿ ಆವರಣಲ್ಲಿ ಕರೆದಿದ್ದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅರಣ್ಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ಇಂದು ನಡೆಯಿತು. ರಂಗನಹಳ್ಳಿ ಸರ್ವೆ ನಂ 7ರಲ್ಲಿ ಸುಮಾರು 40 ವರ್ಷಗಳಿಂದ 35ಜನ ರೈತರು ಭೂ ಸಾಗುವಳಿ ಮಾಡಿಕೊಂಡು ತಮ್ಮ ಜೀವನವನ್ನು ನಡೆಸುತ್ತಿದ್ದು ಈಗಾಗಲೇ ಈ ಕೃಷಿ ಭೂಮಿಯಲ್ಲಿ ಕೊಳವೆಬಾವಿ ಕೊರೆಸಿದ್ದು ಹಾಗೂ ತೆಂಗಿನಗಿಡ, ಹುಣಸೇಗಿಡಗಳನ್ನು ಬೆಳೆಸಿರುವುದು ಅಧಿಕಾರಿಗಳ ಕಣ್ಣಿಗೆ ಕಾಣಲಿಲ್ಲವೇ ? ಈಗ ಒಕ್ಕಲೆಬ್ಬಿಸುವ ಹಂತಕ್ಕೆ ಹೋಗಲು ಕಾರಣವೇನು ? ತಾಲ್ಲೂಕು ದಂಡಾಧಿಕಾರಿಗಳೇ ಭೂಒಡೆತನದ ಹಕ್ಕುಪತ್ರ ನೀಡಿದ್ದು ಸರ್ಕಾರ ನೀಡಿದಂತಾಗಲಿಲ್ಲವೇ ? ಎಂದ ಅವರು ಮುಂದಿನ ದಿನದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಕರೆದುಕೊಂಡು ಒಕ್ಕಲೆಬ್ಬಿಸುವ…

Read More

ತುಮಕೂರು :        ಜಿಲ್ಲೆಯಲ್ಲಿ ದಿನೇ ದಿನೇ ಹೆಚ್ಚಳವಾಗುತ್ತಿರುವ ಕೋವಿಡ್ ಸೋಂಕು ಪ್ರಕರಣಗಳನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಯಾವುದೇ ಅಧಿಕಾರಿಗಳು ಜಿಲ್ಲಾಡಳಿತದ ಅನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಡಬಾರದು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಸೂಚಿಸಿದರು. ತಮ್ಮ ಕಚೇರಿಯಲ್ಲಿಂದು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಜನವರಿ 11ರ ವರದಿಯನ್ವಯ ಕೋವಿಡ್ ಸೋಂಕು ಪ್ರಕರಣಗಳ ಪಾಸಿಟಿವಿಟಿ ದರ ಶೇ.13.4ರಷ್ಟಿರುವುದರಿಂದ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಕೋವಿಡ್ ಹರಡುವಿಕೆಯನ್ನು ತಡೆಯಬೇಕೆಂದು ಸೂಚಿಸಿದರು. ಜಿಲ್ಲೆಯಲ್ಲಿ ಕೋವಿಡ್ ಲಸಿಕಾಕರಣ ಶೇ.100ರಷ್ಟು ಪೂರ್ಣಗೊಳಿಸಿಲ್ಲದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ ಅವರು, ಪರಿಸ್ಥಿತಿ ಗಂಭೀರ ಸ್ವರೂಪ ಪಡೆಯುವ ಮುನ್ನ ಎರಡೂ ಡೋಸ್ ಲಸಿಕೆ ನೀಡುವ ಮೂಲಕ ಶೇ.100ರಷ್ಟು ಲಸಿಕಾಕರಣ ಪೂರ್ಣಗೊಳಿಸಬೇಕು ಎಂದರಲ್ಲದೆ ಶಾಲೆಗಳಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿದ್ದು, ಮಕ್ಕಳು ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸುವುದರ ಜೊತೆಗೆ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಶಾಲಾ ಮುಖ್ಯಸ್ಥರಿಗೆ ಸೂಚನೆಗಳನ್ನು ನೀಡಬೇಕು ಎಂದು ನಿರ್ದೇಶಿಸಿದರು. ಸರ್ಕಾರದ ಆದೇಶದನ್ವಯ…

Read More

 ತುಮಕೂರು :       ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿ ಮಾರನಾಯಕನಪಾಳ್ಯ ಗ್ರಾಮಕ್ಕೆ ಹೋಗುವ ಪೂರ್ವದ ಕಡೆ ಪಂಪ್‍ಹೌಸ್ ಕಟ್ಟಡದ ಹಿಂಭಾಗ ಗುಡ್ಡ ಪ್ರದೇಶದ ಕಲ್ಲು ಬಂಡೆಗಳ ಮಧ್ಯದಲ್ಲಿರುವ ಆಲದ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಜನವರಿ 10ರಂದು ಸುಮಾರು 40 ವರ್ಷದ ಅಪರಿಚಿತ ವ್ಯಕ್ತಿ ಶವವೊಂದು ಪತ್ತೆಯಾಗಿದ್ದು, ವಾರಸುದಾರರ ಬಗ್ಗೆ ಮಾಹಿತಿ ತಿಳಿದು ಬಂದಿರುವುದಿಲ್ಲ.        ಮೃತ ವ್ಯಕ್ತಿಯು 5.8 ಅಡಿ ಎತ್ತರ, ತೆಳ್ಳನೆ ಶರೀರ, ಕೋಲುಮುಖ ಹೊಂದಿದ್ದು, ಮೈಮೇಲೆ ತುಂಬುತೋಳಿನ ನೀಲಿ ಬಣ್ಣದ ಚುಕ್ಕೆಗಳಿರುವ ಅಂಗಿ, ತಿಳಿ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಇರುತ್ತದೆ. ಮೃತನ ವಾರಸುದಾರರಿದ್ದಲ್ಲಿ ದೂ.ಸಂ. 0816-2281124/ 2281120/ 2278000 ಅಥವಾ ಹತ್ತಿರದ ಪೊಲೀಸ್ ಠಾಣೆಯನ್ನು ಸಂಪರ್ಕಿಸಬೇಕೆಂದು ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ ಬಿ. ಓಂಪ್ರಕಾಶ್ ಗೌಡ ಮನವಿ ಮಾಡಿದ್ದಾರೆ.

Read More

ಕೊರಟಗೆರೆ :         ಮೇಕೆದಾಟು ನೀರಾವರಿ ಯೋಜನೆಗಾಗಿ ಕರ್ನಾಟಕ ಕಾಂಗ್ರೇಸ್ ಪಕ್ಷ ಪಾದಯಾತ್ರೆಗೆ ತಯಾರಿ ನಡೆಸುತ್ತೀದೆ.. ರಾಜ್ಯ ಸರಕಾರ ಪಾದಯಾತ್ರೆಯನ್ನು ಕೋವಿಡ್-19 ಲಾಕ್‍ಡೌನ್ – ನೈಟ್‍ಕಪ್ರ್ಯೂ ಹೆಸರಿನಲ್ಲಿ ಹತ್ತೀಕ್ಕುವ ಕೆಲಸ ಮಾಡುತ್ತೀದೆ.. ನೀರಾವರಿ ಯೋಜನೆಯ ಪಾದಯಾತ್ರೆ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ.. ಯಾರು ಪಾದಯಾತ್ರೆಯನ್ನು ನಿಲ್ಲಿಸಲು ಆಗುವುದಿಲ್ಲ ಎಂದು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ತಿಳಿಸಿದರು.        ಕೊರಟಗೆರೆ ಪಟ್ಟಣದ ಶಾಸಕರ ಕಚೇರಿ ಆವರಣದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಗಂಗಾಕಲ್ಯಾಣ ಯೋಜನೆಯಡಿಯ 2018-19ನೇ ಸಾಲಿನ ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ನಿಗಮದಿಂದ 16ಜನ ರೈತರಿಗೆ ಪಂಪು-ಮೋಟಾರ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.         ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರದಲ್ಲಿ ಮೇಕೆದಾಟು ಯೋಜನೆಯ ರೂಪರೇಷು ಸಿದ್ದಗೊಂಡಿದೆ. ಸಮ್ಮಿಶ್ರ ಸರಕಾರದ ಅವಧಿಯಲ್ಲಿ ನಾನು ಉಪಮುಖ್ಯಮಂತ್ರಿ ಮತ್ತು ಡಿ.ಕೆ.ಶಿವಕುಮಾರ್ ನೀರಾವರಿ ಸಚಿವರಾಗಿದ್ದಾಗ ಮತ್ತೇ ಕೇಂದ್ರ ಸರಕಾರಕ್ಕೆ ಮೇಕೆದಾಟು ಯೋಜನೆಯ ವರದಿ ಕಳುಹಿಸಿದ್ದೇವೆ. ಬೆಂಗಳೂರು ನಗರಕ್ಕೆ ಕುಡಿಯುವ ನೀರು ಕಲ್ಪಿಸುವ 9ಸಾವಿರ…

Read More

ತುಮಕೂರು  :      ಜಿಲ್ಲೆಯಲ್ಲಿ ಕೋವಿಡ್ ಹಾಗೂ ಒಮಿಕ್ರಾನ್ ಹರಡುವಿಕೆ ಪ್ರಮಾಣ ಹೆಚ್ಚಾಗುತ್ತಿದ್ದು, ಮೊದಲನೇ ಹಾಗೂ ಎರಡನೇ ಡೋಸ್ ಲಸಿಕೆ ನೀಡುವಲ್ಲಿ ವಿಳಂಬ ಮಾಡದೇ ಲಸಿಕಾಕರಣವನ್ನು ಶೇ.100ರಷ್ಟು ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು.       ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ್ರಸ್ತುತ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 200ರ ಗಡಿ ದಾಟಿದೆ. ಈ ಸಂದರ್ಭದಲ್ಲಿ ಲಸಿಕೆ ನೀಡುವಲ್ಲಿ ವಿನಾಕಾರಣ ಮುಂದೂಡದೆ ಲಸಿಕೆ ನೀಡಬೇಕು ಎಂದರಲ್ಲದೆ, ಎರಡನೇ ಡೋಸ್ ಲಸಿಕಾಕರಣ ಶೇ.80ರಷ್ಟಾಗಿದ್ದು, ಲಸಿಕೆ ಪಡೆಯಲು ಹಿಂಜರಿಯುವ ನಿಗಧಿತ ಪ್ರದೇಶಗಳಲ್ಲಿ ಜಾಗೃತಿ ಮೂಡಿಸಿ ಲಸಿಕೆ ಹಾಕಿಸಿಕೊಳ್ಳಲು ಮನವೊಲಿಸುವ ಮೂಲಕ ಶೀಘ್ರವಾಗಿ ಶೇ.100ರಷ್ಟು ಗುರಿ ಸಾಧಿಸಬೇಕು ಎಂದು ತಿಳಿಸಿದರು.        ಹಾಸ್ಟೆಲ್‍ಗಳಲ್ಲಿ ಕೋವಿಡ್ ಪಾಸಿಟೀವ್ ಪ್ರಕರಣ ವರದಿಯಾದಲ್ಲಿ ಸೋಂಕಿತ ವಿದ್ಯಾರ್ಥಿಯನ್ನು ಪ್ರತ್ಯೇಕ ಕೊಠಡಿಯಲ್ಲಿರಿಸಬೇಕು. ಪ್ರತಿದಿನ 2 ಬಾರಿಯಂತೆ ವೈದ್ಯರು ಶಾಲೆ ಹಾಗೂ ವಿದ್ಯಾರ್ಥಿ ನಿಲಯಗಳಿಗೆ…

Read More

ತುಮಕೂರು :       ಮೇಲ್ಮನೆ ಸದಸ್ಯರಾದ ಆರ್.ರಾಜೇಂದ್ರರವರು ಭಗವಂತ ಹಾಗು ರೈತರ ಹೆಸರಿನಲ್ಲಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.       ವಿಧಾನಸೌದದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ತುಮಕೂರು ಜಿಲ್ಲೆಯ ನೂತನ ವಿಧಾನಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.        ಭಗವಂತ ಹಾಗು ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿ, ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

Read More

 ತುಮಕೂರು:       ಈ ನನ್ನ ಮಗ ನಮ್ಮ ಮಂತ್ರಿ ಹೇಂಗೆ ಗೊತ್ತಾ, ದಕ್ಷಿಣ ಕೋರಿಯಾದ ಕಿಂಗ್ ಪಿನ್ ಇದಾನಲ್ಲ ಹಾಗೆ ಕೆಟ್ಟ ಸೂಳೇ ಮಗ ಎಂದು ಸುದ್ದಿಗೋಷ್ಠಿಯಲ್ಲಿ ಸಂಸದ ಬಸವರಾಜು ಸಚಿವ ಬೈರತಿ ಬಸವರಾಜು ಜೊತೆ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ. ಸುಮ್ಮನೀರು ಅಮೇಲೇ ಮಾತನಾಡೋಣ ಎಂದ ಬೈರತಿ ಬಸವರಾಜು ಆದರೂ ಮುಂದುವರೆದು ಸಂಸದ ಬಸವರಾಜು ಮಾಧುಸ್ವಾಮಿ ವಿರುದ್ಧ ನಾಲಿಗೆ ಹರಿಬಿಟ್ಟು       ಹಾಳು ಮಾಡಿಬಿಟ್ಟಿದ್ದಾನೆ ನಮ್ಮ ಜಿಲ್ಲೆಯನ್ನ, ಒಂದು ಸೀಟ್ ಬರಲ್ಲ, ಮಾತು ಎತ್ತಿದ್ದರೇ ಹೊಡಿ-ಬಡಿ-ಕಡಿ ಅಂತಾನೆ. ಅನವ್ಯಾರೋ ಇಂಜಿನಿಯರ್‍ಗೆ ಹೇಳ್ತಾನೆ. ಹೆಂಡ್ತಿ ಸೀರೆ ಹೊಗೊಯೋಕೆ ಲಾಯಕ್ ನೀನು ಅಂತಾ, ಎಕ್ಸಿಕ್ಯೂಟಿವ್ ಇಂಜಿನಿಯರ್ ಗೆ ಹೆಳ್ತಾನೆ, ಒಂದು ಹ್ಯಾಂಡ್ ಬಿಲ್ ಪ್ರಿಂಟ್ ಮಾಡಿಸಲ್ಲ. ಮೊನ್ನೆ ಸಾವಿರ ಕೋಟಿ ಡಿಕ್ಲೈರ್ ಮಾಡಿಕೊಂಡು ಬಂದವನೇ, ನಮಗೆ ಯಾರಿಗೂ ಇನ್ವಿಟೇಶನ್ ಇಲ್ಲ ಕರೆಯೋದು ಇಲ್ಲ, ನಿಮ್ಮ ಇಲಾಖೆಗೆ ಬಂದು ಹೇಳಿದರೇ ತಲೆಕೆಡಿಸಕೊಳ್ಳಬೇಡಿ ಎಂದು ಹೆಸರು ಹೇಳದೇ ಮಾಧುಸ್ವಾಮಿ ವಿರುದ್ಧ…

Read More

ತುಮಕೂರು :       ತುಮಕೂರು ನಗರದ ಅಭಿವೃದ್ಧಿಗೆ ಸ್ಮಾರ್ಟ್ ಸಿಟಿ ಮಾತ್ರವಲ್ಲದೆ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿ 125 ಕೋಟಿ ರೂ.ಗಳ ಅನುದಾನವನ್ನು ಸರ್ಕಾರ ನೀಡಿದ್ದು, ತುಮಕೂರು ನಗರವನ್ನು ಬೆಂಗಳೂರಿನ ಉಪನಗರವನ್ನಾಗಿ ಅಭಿವೃದ್ಧಿಪಡಿಸಲು ಆದ್ಯತೆ ನೀಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ತಿಳಿಸಿದರು. ಪಾಲಿಕೆ ಸಭಾಂಗಣದಲ್ಲಿಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿರುವ ಸ್ಮಾರ್ಟ್ ಸಿಟಿಗಳಲ್ಲಿ ತುಮಕೂರು ಸ್ಮಾರ್ಟ್ ಸಿಟಿ ಮೊದಲನೇ ಸ್ಥಾನದಲ್ಲಿದ್ದು, ದೇಶದಲ್ಲಿ ಒಂಭತ್ತನೇ ಸ್ಥಾನ ಪಡೆದುಕೊಂಡು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಶ್ಲಾಘಿಸಿದರು. ಸ್ಮಾರ್ಟ್ ಸಿಟಿಯಲ್ಲಿ ಅವ್ಯವಸ್ಥೆಗಳ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಸ್ಮಾರ್ಟ್ ಸಿಟಿಯಲ್ಲಿ ಉಂಟಾಗಿರುವ ಲೋಪದೋಷಗಳನ್ನು ಸರಿಪಡಿಸಲಾಗುವುದು. ಯೋಜನೆಯಿಂದ ಜನರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಅರಿವಿದ್ದು, ಯೋಜನೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದ ಅವರು, ನಗರ ಪ್ರದೇಶದಲ್ಲಿ ಅಕ್ರಮವಾಗಿ ನಿರ್ಮಿಸಿರುವ ಕಟ್ಟಡಗಳನ್ನು ಸಕ್ರಮಗೊಳಿಸುವ ಉದ್ದೇಶದಿಂದ ಅಕ್ರಮ-ಸಕ್ರಮ ಯೋಜನೆಯನ್ನು ಜಾರಿಗೆ ತರಲಾಗುವುದು. ಈ ಯೋಜನೆಯನ್ನು ಜಾರಿಗೊಳಿಸುವುದರಿಂದ ಜನರಿಗೂ ಅನುಕೂಲವಾಗುವುದಲ್ಲದೆ ಸರಕಾರಕ್ಕೂ ಆದಾಯ ಬರುವ…

Read More

ತುಮಕೂರು :       ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಕೆ.ಚನ್ನಬಸಪ್ಪ(ಕೆ.ಎ.ಎಸ್.(ಆಯ್ಕೆ ಶ್ರೇಣಿ)ಅಧಿಕಾರಿ) ಅವರು ಅಧಿಕಾರ ವಹಿಸಿಕೊಂಡಿದ್ದಾರೆ.       ಕರ್ನಾಟಕ ವಿಧಾನ ಪರಿಷತ್ತಿನ(ಸ್ಥಳೀಯ ಸಂಸ್ಥೆಗಳು) ದ್ವೈವಾರ್ಷಿಕ ಚುನಾವಣೆ 2021ರ ಹಿನ್ನೆಲೆಯಲ್ಲಿ ಭಾರತ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆಗೊಂಡಿದ್ದ ಇವರನ್ನು ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಂಡಿರುವುದರಿಂದ ಸದರಿ ಹುದ್ದೆಗೆ ಸ್ಥಳ ನಿಯುಕ್ತಿಗೊಳಿಸಿ ನೇಮಿಸಲಾಗಿದೆ.

Read More

 ತುಮಕೂರು :         ರಾಜ್ಯದಲ್ಲಿ ಕೋವಿಡ್ ಹಾಗೂ ಓಮಿಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸಿರುವ ಆಕ್ಸಿಜನ್ ಪ್ಲಾಂಟ್‍ಗಳನ್ನು ತುರ್ತಾಗಿ ಸಕ್ರಿಯಗೊಳಿಸಬೇಕೆಂದು ಕಾನೂನು ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಅಧಿಕಾರಿಗಳಿಗೆ ಕಟ್ಟು-ನಿಟ್ಟಿನ ಸೂಚನೆ ನೀಡಿದರು.         ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮಾತನಾಡಿದ ಅವರು, ರಾಜ್ಯಾದ್ಯಂತ ಕೋವಿಡ್ ಪಾಸಿಟೀವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವುದು ಅತ್ಯಗತ್ಯವಾಗಿದೆ. ಜಿಲ್ಲೆಯ ಯಾವುದೇ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಸಿಲಿಂಡರ್, ಬೆಡ್ ಪೂರೈಕೆ ಸೇರಿದಂತೆ ಪ್ರತಿ ಆಸ್ಪತ್ರೆಯಲ್ಲಿರುವ ವೆಂಟಿಲೇಟರ್‍ಗಳನ್ನು ಸೂಕ್ತ ಸಮಯದಲ್ಲಿ ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.       ಕೋವಿಡ್ ಲಸಿಕಾಕರಣಕ್ಕೆ ಸಂಬಂಧಿಸಿದಂತೆ ಮೊದಲ ಹಾಗೂ ಎರಡನೇ ಡೋಸ್ ಲಸಿಕೆ ನೀಡುವುದನ್ನು ವಿನಾ ಕಾರಣ ಮುಂದೂಡುವಂತಿಲ್ಲ. ಲಸಿಕೆ ಪಡೆಯಲು ಹಿಂಜರಿಯುವ ಪ್ರದೇಶಗಳಲ್ಲಿ ಜನರಿಗೆ ಆರೋಗ್ಯ ಹಾಗೂ ಕೋವಿಡ್…

Read More