ತುಮಕೂರು : ಪಾವಗಡ ಸಮೀಪದ ಪಳವಳ್ಳಿ ಕೆರೆ ಕಟ್ಟೆ ಮೇಲೆ ಸಂಭವಿಸಿ ಭೀಕರ ಬಸ್ ಅಪಘಾತದಲ್ಲಿ ಗಾಯಗೊಂಡು ನಗರದ ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯವನ್ನು ಸಂಸದ ಜಿ.ಎಸ್. ಬಸವರಾಜು, ವಿಧಾನ ಪರಿಷತ್ ಸದಸ್ಯ ಆರ್. ರಾಜೇಂದ್ರ ಹಾಗೂ ಬಿಜೆಪಿ ಮುಖಂಡ ಎಸ್. ಶಿವಪ್ರಸಾದ್ ವಿಚಾರಿಸಿದರು. ಬಸ್ ಅಪಘಾತದಲ್ಲಿ ಗಾಯಗೊಂಡವರ ಪೈಕಿ 21 ಮಂದಿಯನ್ನು ತುಮಕೂರು ಜಿಲ್ಲಾಸ್ಪತ್ರೆಗೆ ಕರೆ ತಂದು ಚಿಕಿತ್ಸೆಗಾಗಿ ದಾಖಲಿಸಿರುವ ಸುದ್ದಿ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಭೇಟಿ ನೀಡಿದ ಸಂಸದರು, ವಿಧಾನ ಪರಿಷತ್ ಸದಸ್ಯರು ಗಾಯಾಗಳುಗಳ ಬೆಡ್ ಬಳಿ ತೆರಳಿ ಅವರಿಂದ ಬಸ್ ಅವಘಾತದ ಮಾಹಿತಿ ಪಡೆದು ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು. ಗಾಯಾಳುಗಳಿಗೆ ಯಾವುದೇ ರೀತಿಯ ಕೊರತೆಯಾಗದಂತೆ ಸೂಕ್ತ ಚಿಕಿತ್ಸೆ ನೀಡುವಂತೆಯೂ ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ. ವೀರಭದ್ರಯ್ಯನವರಿಗೆ ಸೂಚಿಸಿದರು. ನಂತರ ಮಾತನಾಡಿದ ಸಂಸದ ಜಿ.ಎಸ್. ಬಸವರಾಜು ಅವರು, ಆರ್‍ಟಿಓ ಇಲಾಖೆ ಸತ್ತು ಹೋಗಿದೆ. ಹೀಗಾಗಿ ಈ ದುರಂತ ನಡೆದಿದೆ. ಈ ಘಟನೆಗೆ ಆರ್‍ಟಿಓ ಇಲಾಖೆಯ ಅಧಿಕಾರಿಗಳ ದಿವ್ಯ…
Author: News Desk Benkiyabale
ತುಮಕೂರು : ಮಾನವ ಮಲ ತ್ಯಾಜ್ಯ ನಿರ್ವಹಣೆ ಕುರಿತು ವಿಸ್ತøತ ಯೋಜನಾ ವರದಿಯನ್ನು ತಯಾರಿಸಿ ಸರ್ಕಾರದ ಅನುಮೋದನೆಗಾಗಿ ಸಲ್ಲಿಸಲಾಗಿದ್ದು, ತಿಪಟೂರು, ಶಿರಾ, ತುರುವೇಕೆರೆ ತಾಲ್ಲೂಕುಗಳನ್ನು ಪ್ರಾಥಮಿಕ ಹಂತದಲ್ಲಿ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ತಿಳಿಸಿದರು. ಜಿಲ್ಲಾ ಪಂಚಾಯತ್ ಕಚೇರಿಯಲ್ಲಿಂದು ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಶನ್ ಸಭೆಯಲ್ಲಿ ಮಾತನಾಡಿದ ಅವರು, ಜಲ ಜೀವನ್ ಮಿಶನ್ ಯೋಜನೆಯಡಿ ಪ್ರತಿ ಮನೆಗೂ 55 ಲೀ. ಶುದ್ಧ ಕುಡಿಯುವ ನೀರನ್ನು ಒದಗಿಸುವುದು ಪ್ರಮುಖ ಉದ್ದೇಶವಾಗಿದೆ ಜಿಲ್ಲೆಯಲ್ಲಿ ಈಗಾಗಲೇ ಕಾರ್ಯಕ್ರಮ ಅನುಷ್ಠಾನಕ್ಕೆ ತರಲಾಗಿದ್ದು, ಬಾಕಿ ಉಳಿದಿರುವ ಜನ ವಸತಿಗಳಿಗೂ ಯೋಜನೆಯನ್ನು ವಿಸ್ತರಿಸುವ ಉದ್ದೇಶದಿಂದ ಕ್ರಿಯಾ ಯೋಜನೆ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ತಿಳಿಸಿದರು. ಜಲ ಜೀವನ್ ಮಿಶನ್ ಯೋಜನೆಯಡಿ ಬಾಕಿ ಇರುವ ಜನ ವಸತಿ ಪ್ರದೇಶದಲ್ಲಿರುವ ಮನೆಗಳಿಗೆ ನಲ್ಲಿ ನೀರು ಒದಗಿಸುವ ಕುರಿತು ಕ್ರಿಯಾ ಯೋಜನೆ ತಯಾರಿಸಿ ಸರ್ಕಾರದ ಅನುಮೋದನೆಗೆ ಕಳುಹಿಸಲಾಗಿದೆ ಎಂದು…
ತುಮಕೂರು : ಹೆಗ್ಗೆರೆ ಗ್ರಾಮಕ್ಕೆ ಹೇಮಾವತಿ ನೀರು ಪೂರೈಕೆ ಆದರೆ ಈ ಭಾಗದ ನೀರಿನ ಸಮಸ್ಯೆ ಬಗೆಹರಿಯಲಿದ್ದು, ಈ ನಿಟ್ಟಿನಲ್ಲಿ ಶಾಸಕರೊಂದಿಗೆ, ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು. ಹೆಗ್ಗೆರೆ ಹೊಸ ಬಡಾವಣೆ ನಾಗರಿಕರ ಹಿತರಕ್ಷಣಾ ವೇದಿಕೆ(ರಿ) ವತಿಯಿಂದ ಹಮ್ಮಿಕೊಂಡಿದ್ದ ಶಿಕ್ಷಣ ಭೀಷ್ಮ ಡಾ: ಹೆಚ್. ಎಮ್.ಗಂಗಾಧರಯ್ಯನವರ ಬಡಾವಣೆ ರಸ್ತೆಯ ಮುಖ್ಯದ್ವಾರ ಉದ್ಘಾಟನಾ ಸಮಾರಂಭ ಹಾಗೂ ಅಭಿನಂದನಾ ಸಮಾರಂಭ ದಲ್ಲಿ ನಾಗರೀಕರ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು. ಹೆಗ್ಗೆರೆ- ಗೊಲ್ಲಹಳ್ಳಿ ಅತಿವೇಗವಾಗಿ ಅಭಿವೃದ್ಧಿ ಹೊಂದುತ್ತಿದ್ದು, ವಕ್ಕೊಡಿವರೆಗೂ ವಿಸ್ತಾರ ಗೊಂಡಿದೆ, ಇಲ್ಲಿನ ಜನರು ಕುಡಿಯುವ ನೀರಿಗೆ ಕೊಳವೆಬಾವಿಯನ್ನು ನೆಚ್ಚಿಕೊಂಡಿದ್ದು, ಮುಂದಿನ ದಿನಗಳಲ್ಲಿ ತೊಂದರೆಯಾಗದಂತೆ ನೀರು ಪೂರೈಕೆ ಆಗಬೇಕಾದರೆ ಹೇಮಾವತಿ ನೀರು ಹರಿಸಬೇಕಿದೆ ಎಂದು ಹೇಳಿದರು.ಬಡಾವಣೆ ನಾಗರೀಕ ಸಮಿತಿ ಅಧ್ಯಕ್ಷ ಎಂ.ಕೃಷ್ಣಯ್ಯ ಮಾತನಾಡಿ, ಈ ಬಡಾವಣೆಗೆ ರಸ್ತೆಯಿಲ್ಲದೇ ನಾಗರೀಕರು ಪರಿತಪಿ ಸುತ್ತಿದ್ದಾಗ, ಸಿದ್ಧಾರ್ಥ ಮೆಡಿಕಲ್ ಕಾಲೇಜಿಗೆ ಸೇರಿದ ಜಾಗವನ್ನು ರಸ್ತೆಗಾಗಿ ನೀಡುವ ಮೂಲಕ ನಾಗರೀಕರ ಕಷ್ಟಕ್ಕೆ ಸ್ಪಂದಿಸಿ ದ್ದಾರೆ,…
ತುಮಕೂರು : ಕರ್ನಾಟಕ ಸರಕಾರ ಜಾರಿಗೆ ತಂದಿರುವ ಕರ್ನಾಟಕ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ,ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ಗೋ ವಂಶ ಸಂರಕ್ಷಣಾ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಹಾಗೂ ಬೆಂಬಲ ಬೆಲೆಯಲ್ಲಿ ಜಿಲ್ಲೆಯಲ್ಲಿ ರಾಗಿ,ಶೇಂಗಾ ಮತ್ತು ಸಿರಿಧಾನ್ಯಗಳ ಖರೀದಿ ಆರಂಭಿಸಬೇಕೆಂದು ಆಗ್ರಹಿಸಿ ಮಾರ್ಚ್ 21 ರಂದು ಬೃಹತ್ ಬೆಂಗಳೂರು ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ತಿಳಿಸಿದ್ದಾರೆ. ನಗರದ ವಿಜ್ಞಾನ ಕೇಂದ್ರದಲ್ಲಿ ರೈತ ಸಂಘದಿಂದ ಹಮ್ಮಿಕೊಳ್ಳಲಾಗಿದ್ದ ಬೆಂಗಳೂರು ಚಲೋ ಪೂರ್ವ ಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತಿದ್ದ ಅವರು,ರೈತರ ನಿರಂತರ ಹೋರಾಟಕ್ಕೆ ಮಣಿದು ಕೇಂದ್ರ ಸರಕಾರ ಸುಗ್ರಿವಾಜ್ಞೆ ಮೂಲಕ ಜಾರಿಗೆ ತಂದಿದ್ದ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದಿದೆ. ಆದರೆ ರಾಜ್ಯ ಸರಕಾರ ಜಾರಿಗೆ ತಂದಿರುವ ಜನವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆಯಲು ಇನ್ನೂ ಮೀನಾಮೇಷ ಎಣಿಸುತ್ತಿದೆ.ಇದರ ವಿರುದ್ದ ಸಾವಿರಾರು ರೈತರು ಮಾರ್ಚ್ 21 ರಂದು ಬೆಂಗಳೂರು ಚಲೋ ಕಾರ್ಯಕ್ರಮದಲ್ಲಿ…
ಜಿಲ್ಲೆಯಲ್ಲಿ ಮೂರು ಮಂದಿ ಸಿಬ್ಬಂದಿಗಳಿಗೆ ಮಾರ್ಚ್ 14ರ ಸೋಮವಾರ ಬೆಂಗಳೂರಿನಲ್ಲಿ 2021-22ನೇ ಸಾಲಿನ ನರೇಗಾ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ಅವರ ಸಮ್ಮುಖದಲ್ಲಿ ನಡೆದ ನರೇಗಾ ಹಬ್ಬ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಜಿಲ್ಲೆಯ ಮೂರು ಮಂದಿ ಸಿಬ್ಬಂದಿಗಳಿಗೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಗ್ರಾಮೀಣಾಭಿವೃದ್ಧಿ ಆಯುಕ್ತೆ ಶಿಲ್ಪಾ ನಾಗ್ ಸೇರಿದಂತೆ ರಾಜ್ಯ ಮಟ್ಟದ ಅಧಿಕಾರಿಗಳು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿರುತ್ತಾರೆ. ಮಹಾತ್ಮಗಾಂಧಿ ನರೇಗಾ ಯೋಜನೆಯನ್ನು ಉತ್ತಮವಾಗಿ ಅನುμÁ್ಟನಗೊಳಿಸಿದ ಹಿನ್ನೆಲೆಯಲ್ಲಿ ರಾಜ್ಯ ಮಟ್ಟದ ಪ್ರಶಸ್ತಿ ಪಡೆದು ಜಿಲ್ಲೆಯ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ.ವಿದ್ಯಾ ಕುಮಾರಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಕೊರಟಗೆರೆ ತಾಲ್ಲೂಕು ಮಾಹಿತಿ ಶಿಕ್ಷಣ ಸಂವಹನ(ಐಇಸಿ) ಸಂಯೋಜಕ ಟಿ.ಕೆ.ವಿನುತ್, ಕುಣಿಗಲ್ ತಾಲ್ಲೂಕು…
ಮಧುಗಿರಿ : ಪಟ್ಟಣದ ಇತಿಹಾಸ ಪ್ರಸಿದ್ಧ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಮಾ.23 ರಂದು ಮಾರಮ್ಮದೇವಿಯ ಬೆಳ್ಳಿ ಪಲ್ಲಕ್ಕಿ ಉತ್ಸವ ಹಾಗೂ ಮಾ.24 ರಂದು ಅಗ್ನಿಕುಂಡ ನಡೆಯುತ್ತದೆ ಎಂದು ಉಪವಿಭಾಗಾಧಿಕಾರಿ ಹಾಗೂ ದೇವಾಲಯದ ಆಡಳಿತಾಧಿಕಾರಿ ಸೋಮಪ್ಪ ಕಡಕೋಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಮಾ.15 ರಿಂದ 25 ರವರೆಗೂ ನಡೆಯುತ್ತದೆ. ಮಾರ್ಚ್ 15 ಮಂಗಳವಾರ ಜಾತ್ರೆ ಪ್ರಾರಂಭ, ಪಂಚ ಕಳಸ ಸ್ಥಾಪನೆ, 16 ಬುಧವಾರ ಗ್ರಾಮಸ್ಥರಿಂದ ಆರತಿ, 17 ಗುರುವಾರ ಗುಗ್ಗುರಿ ಗಾಡಿಗಳ ಸೇವೆ, 18 ಶುಕ್ರವಾರ ರಥೋತ್ಸವ, 19 ಶನಿವಾರ ಹಳ್ಳಿಕಾರ ರಿಂದ ಉಯ್ಯಾಲೋತ್ಸವ, 20 ರಂದು ಭಾನುವಾರ ಕುಂಚಿಟಿಗ ಒಕ್ಕಲಿಗರಿಂದ ಸಿಂಹವಾಹನ, 21 ಸೋಮವಾರ ಕುರುಬರ ಸಮುದಾಯ ವತಿಯಿಂದ ಚಂದ್ರಮಂಡಲ ವಾಹನ, 22 ಮಂಗಳವಾರ ಭಜಂತ್ರಿ ಅವರಿಂದ ನವಿಲು ವಾಹನ, 23 ಬುಧವಾರ ಬಂಡಾರ ಉತ್ಸವ ಮತ್ತು ಬೆಳ್ಳಿ ಪಲ್ಲಕ್ಕಿ, 24 ರಂದು ಅಗ್ನಿಕುಂಡ, 25…
ತುಮಕೂರು : ಇತಿಹಾಸ ಪ್ರಸಿದ್ದ ಶ್ರೀ ಸಿದ್ದಗಂಗಾ ಮಠದಲ್ಲಿ ಜಿಲ್ಲಾ ಗೃಹರಕ್ಷದ ದಳ ತುಮಕೂರು ಘಟಕ ಹಾಗೂ ಊರ್ಡಿಗೆರೆ ಘಟಕದ ವತಿಯಿಂದ ಶ್ರಮದಾನ ಮತ್ತು ಸ್ವಚ್ಚತಾ ಆಂದೋಲನ ನಡೆಸಲಾಯಿತು. ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಅನುಮತಿ ಮೇರೆಗೆ ಹಾಗೂ ಜಿಲ್ಲಾ ಗೃಹರಕ್ಷದ ದಳದ ಸಮಾದೇಷ್ಟರ ಆದೇಶದ ಮೇರೆಗೆ ಇಡೀ ಶ್ರೀಮಠದ ಆವರಣದಲ್ಲಿ ಈ ಸ್ಪಚ್ಚತಾ ಕಾರ್ಯವನ್ನು ನಡೆಸಲಾಯಿತು. ಸಿದ್ದಗಂಗೆಯಲ್ಲಿ ನಡೆದ ಜಾತ್ರೆ ಹಾಗೂ ಮಹಾಶಿವರಾತ್ರಿ ಸಂದರ್ಭದಲ್ಲಿ ಶ್ರೀಮಠದ ಆವರಣದಲ್ಲಿ ಕಂಡು ಬಂದಿದ್ದ ಪ್ಲಾಸ್ಟಿಕ್, ತಟ್ಟೆ, ಲೋಟ ಸೇರಿದಂತೆ ಇನ್ನಿತರೆ ಅನೈರ್ಮಲ್ಯತೆ ಹಾಗೂ ಪರಿಸರವನ್ನು ಸ್ವಚ್ಚಗೊಳಿಸುವ ಕಾರ್ಯವನ್ನು ಗೃಹರಕ್ಷಕ ದಳದ ಸಮಾದೇಷ್ಟರಾದ ಪಾತಣ್ಣ ಅವರ ನೇತೃತ್ವದಲ್ಲಿ ಸಿಬ್ಬಂದಿಗಳು ಮಾಡಿದರು. ಶ್ರೀಮಠದ ಆವರಣದಾದ್ಯಂತ ಬಿದ್ದಿದ್ದ ಪ್ಲಾಸ್ಟಿಕ್ ಇನ್ನಿತರೆ ತ್ಯಾಜ್ಯವನ್ನು ಒಂದೆಡೆ ಸಂಗ್ರಹಿಸಿ ಮಠದ ಆವರಣವನ್ನು ಗೃಹ ರಕ್ಷಕ ದಳದ ಸಿಬ್ಬಂದಿ ಶ್ರಮದಾನದ ಮೂಲಕ ಸಂಪೂರ್ಣ ಸ್ವಚ್ಚಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಗೃಹ…
ತುಮಕೂರು : ಪತ್ರಕರ್ತರು ಪತ್ರಿಕಾ ಮೌಲ್ಯಗಳನ್ನು ಉಳಿಸಿ ಬೆಳೆಸಬೇಕಾದ ಅಗತ್ಯತೆ ಇದೆ ಎಂದು ಮಾಜಿ ಶಾಸಕ ಬಿ.ಸುರೇಶ್‍ಗೌಡ ತಿಳಿಸಿದರು. ನಗರದ ಹೊರಪೇಟೆ ಮುಖ್ಯರಸ್ತೆಯಲ್ಲಿರುವ ಕೆಇಬಿ ಇಂಜಿನಿಯರ್ಸ್ ಅಸೋಸಿಯೇಷನ್ ಹಾಲ್‍ನಲ್ಲಿ “ಬೆಂಕಿಯ ಬಲೆ” ಕನ್ನಡ ದಿನಪತ್ರಿಕೆಯ 18 ನೇ ವಾರ್ಷಿಕೋತ್ಸವದ ಅಂಗವಾಗಿ ಶನಿವಾರ ಏರ್ಪಡಿಸಿದ್ದ ರಾಜ್ಯಮಟ್ಟದ ಕವಿಕಾವ್ಯ ಮೇಳ, ಪ್ರತಿಭಾ ಪುರಸ್ಕಾರ ಹಾಗೂ ಅನಾಥ, ಬಡ, ವಿಶೇಷ ಚೇತನ ಮಕ್ಕಳಿಗೆ ಉಚಿತ ವಸ್ತ್ರ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಇಂದಿನ ದಿನಗಳಲ್ಲಿ ಪತ್ರಿಕೆಗಳನ್ನು ನಡೆಸುವುದು ಅತ್ಯಂತ ಕಷ್ಟದಾಯಕ ಕೆಲಸವಾಗಿದೆ. ಆದರೂ ಸಹ ಸತ್ಯ, ವಸ್ತುನಿಷ್ಠ ಹಾಗೂ ಜನರಿಗೆ ಅಗತ್ಯವಿರುವ ಸುದ್ದಿಗಳನ್ನು ಬಿತ್ತರಿಸಲು ಪ್ರಯತ್ನಿಸಬೇಕು. ವೃತ್ತಿ ಜೀವನದಲ್ಲಿ ಕೇವಲ ನಕಾರಾತ್ಮಕ ವಿಷಯಗಳಿಗೆ ಆದ್ಯತೆ ನೀಡದೇ ಉತ್ತಮ ಕೆಲಸಗಳನ್ನು ಗುರುತಿಸಿ ಪೆÇ್ರೀತ್ಸಾಹಿಸುವ ಕೆಲಸ ಮಾಡಬೇಕು ಎಂದರು. ವಿಧಾನ ಪರಿಷತ್ ಮಾಜಿ ಸದಸ್ಯ ಬೆಮೆಲ್ ಕಾಂತರಾಜು ಮಾತನಾಡಿ, ದೇಶ ಕಟ್ಟುವುದರಲ್ಲಿ ಪತ್ರಿಕೋದ್ಯಮದ ಜವಾಬ್ದಾರಿಯೂ ಪ್ರಮುಖ ಪಾತ್ರ ವಹಿಸಲಿದೆ. ಸಮಾಜದಲ್ಲಿ ನಡೆಯುವ ಹೆಚ್ಚು ಹೆಚ್ಚು ವಿಚಾರಗಳನ್ನು ಜನತೆಗೆ…
ತುಮಕೂರು : ತುರ್ತು ಸಂದರ್ಭಗಳಲ್ಲಿ ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಲು 108 ಆ್ಯಂಬುಲೆನ್ಸ್ ಸೇವೆಯು 24 x 7 ಕಾಲ ಸಾರ್ವಜನಿಕರಿಗೆ ಲಭ್ಯವಿರುವಂತೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು. ತಮ್ಮ ಕಚೇಯಲ್ಲಿಂದು ಜರುಗಿದ ತಾಯಿ ಮತ್ತು ಶಿಶು ಮರಣ, ತಂಬಾಕು ನಿಯಂತ್ರಣ ಕೋಶದ ಕಾರ್ಯಕ್ರಮಗಳ ನಾಲ್ಕನೇ ತ್ರೈಮಾಸಿಕ, ಜಿಲ್ಲಾ ಸಮಗ್ರ ರೋಗಗಳ ಕಣ್ಗಾವಲು ಸಮಿತಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, 108 ಆ್ಯಂಬುಲೆನ್ಸ್ ಸೇವೆ ಸಾರ್ವಜನಿಕರಿಗೆ ಸಕಾಲದಲ್ಲಿ ಅಲಭ್ಯವಾಗುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ದಿನದ 24 ಗಂಟೆಗಳ ಕಾಲ ಸೇವೆ ಒದಗಿಸದೆ ಕರ್ತವ್ಯ ಲೋಪ ಎಸಗಿದರೆ 108 ವಾಹನ ನಿರ್ವಹಣಾ ಸಂಸ್ಥೆಯ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಹೆಚ್ಚಿನ ಸಂಖ್ಯೆಯಲ್ಲಿ ಅಪಘಾತಗಳು ಸಂಭವಿಸುವುದರಿಂದ ರಾಷ್ಟ್ರೀಯ ಹೆದ್ದಾರಿಗಳು, ಮಾಯಸಂದ್ರದ ರಸ್ತೆ ಸೇರಿದಂತೆ ಮತ್ತಿತರ ರಸ್ತೆಗಳಲ್ಲಿ 108 ವಾಹನ ಚಾಲಕರು ಸೇವೆ ಒದಗಿಸಲು ಸದಾ ಸಿದ್ಧರಿರುವಂತೆ ಹಾಗೂ ವಾಹನ ದುರಸ್ತಿಗೆ…
ತುಮಕೂರು : ನಗರದ ಎನ್.ಆರ್ ಕಾಲೋನಿಯ ಮಾದಿಗ ಜನಾಂಗದ ಕುಲ ದೇವತೆಯಾದ ಶ್ರೀ ದುರ್ಗಮ್ಮ ದೇವಿಯ ಮೂಲ ನೆಲೆಯಾದ ತುಮಕೂರು ಕಸಬಾ ಸರ್ವೇ ನಂ, 170 ಮತ್ತು 171ರ 1.29 ಎಕರೆ ಭೂಮಿಯನ್ನು ಮಂಜೂರಾತಿ ಮಾಡಿ ಮಾದಿಗ ಜನಾಂಗದ ಧಾರ್ಮಿಕ ನಂಬಿಕೆಯ ದೇವಸ್ಥಾನದ ಜಾಗಕ್ಕೆ ಮುಖ್ಯದ್ವಾರ ನಿರ್ಮಿಸಿ ಎನ್,ಆರ್ ಕಾಲೋನಿ, ಅಂಬೇಡ್ಕರ್‍ನಗರ, ನಿರ್ವಾಣಿಲೇಔಟ್(ಇಂದಿರಾ ನಗರ) ಹಕ್ಕುಪತ್ರಗಳಿಲ್ಲದ ಕುಟುಂಬಗಳಿಗೆ ಸರಳಖಾತೆ ಮಾಡಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಲ್ಲಿ ಆಯ್ಕೆಯಾಗಿರುವ ಪಲಾನುಭವಿಗಳಿಗೆ ನಗರಪಾಲಿಕೆ ವಿಶೇಷ ಅನುದಾನದಲ್ಲಿ ಪಲಾನುಭವಿ ಶುಲ್ಕ ಪಾವತಿಸಲು ಒತ್ತಾಯಿಸಿ ಇಂದು ತುಮಕೂರು ಜಿಲ್ಲಾಧಿಕಾರಿಗಳ ಕಛೇರಿ ಎದುರು ಶ್ರೀ ದುರ್ಗಮ್ಮ ದೇವಸ್ಥಾನ ಜೀರ್ಣೋದ್ಧಾರ ಮತ್ತು ಎನ್,ಆರ್ ಕಾಲೋನಿ ಅಭಿವೃದ್ಧಿ ಸಂಘ (ರಿ) ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು. ಪ್ರತಿಭಟನಾ ಧರಣಿಯನ್ನು ಉದ್ದೇಶಿಸಿ ಮಾತನಾಡಿದ ಜನಾಂಗದ ಹಿರಿಯ ಮುಖಂಡರಾದ ಪ್ರೋ ಕೆ.ದೊರೈರಾಜ್ ತುಮಕೂರು ನಗರದ ಅಸ್ತಿತ್ವಕ್ಕೆ ಹಾಗೂ ದಲಿತ ಚಳಿವಳಿಗೆ ತನ್ನದೇಯಾದ ಕೊಡುಗೆ ನೀಡಿರುವ ಎನ್,ಆರ್ ಕಾಲೋನಿಯ ಮಾದಿಗರ ಧಾರ್ಮಿಕ ಅಸ್ಮಿತೆಯ ಭಾಗವಾದ…











