ಶಿರಾ: ಪ್ರತಿಭಾ ಪುರಸ್ಕಾರ ಅನ್ನುವುದು ಸಾಮಾನ್ಯವಲ್ಲ ಅಸಾಮಾನ್ಯವಾದದ್ದು ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಸನ್ಮಾನಿಸಿ ಪ್ರೋತ್ಸಾಹಿಸಿ ಮಕ್ಕಳ ಪ್ರತಿಭೆಗೆ ತಕ್ಕಂತ ಪಠ್ಯ ಸಲಕರಣೆಗಳನ್ನು ಕೊಡುಗೆಯಾಗಿ ನೀಡುವುದರಿಂದ ಮಕ್ಕಳು ಓದವುದರ ಜೊತೆಗೆ ಸಾಧನೆ ಮಾಡುವ ಸಂಕಲ್ಪವನ್ನು ತೊಡುತ್ತಾರೆ ಎಂದು ದೆಹಲಿ ವಿಶೇಷ ಪ್ರತಿನಿಧಿ, ಶಾಸಕ ಟಿ.ಬಿ. ಜಯಚಂದ್ರ ಹೇಳಿದರು. ಶಿರಾ ನಗರದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪೋಷಕರು ತಮ್ಮ ಮಕ್ಕಳಿಗೆ ಶಿಕ್ಷಣದ ಮಹತ್ವವನ್ನು ಸಾರಿ ಹೇಳಬೇಕು, ಭಾರತ ದೇಶವಲ್ಲದೆ ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಮುಂದಿನ ಭವಿಷ್ಯದ ಸಾಧಕರನ್ನಾಗಿ ಮಾಡಬೇಕು, ಬಾಲ್ಯದ ವಿದ್ಯಾಭ್ಯಾಸದಲ್ಲಿ ನನ್ನ ಪ್ರತಿಭೆಗೆ ಶಾಲೆಯಲ್ಲಿ ಕೊಡುಗೆಯಾಗಿ ದೊರೆತ ಒಂದು ಸಣ್ಣ ಪುಸ್ತಕ ನನ್ನಲ್ಲಿ ಓದುವ, ಸಾಧಿಸುವ ಛಲವನ್ನು ಪ್ರೆರೇಪಿಸಿದಲ್ಲದೇ ನನ್ನ ಜೀವನದ ದಿಕ್ಕನ್ನೇ ಬದಲಾಯಿಸಿದೇ ಎಂದು ಬಾಲ್ಯದ ನೆನಪು ಮೆಲುಕು ಹಾಕಿದ ಶಾಸಕರು. ಇಂತಹ ಪುರಸ್ಕಾರಗಳು ಮಕ್ಕಳಿಗೆ ಪ್ರೋತ್ಸಾಹಿಸಿ ಮತ್ತಷ್ಟು ಸಾಧನೆ ಮಾಡಲು ಪ್ರೇರಣೆ ನೀಡುತ್ತವೆ. ನಮ್ಮ ದೇಶ…
Author: News Desk Benkiyabale
ತುಮಕೂರು: ನಗರದಲ್ಲಿ ಪಾಕಿಸ್ತಾನ ಮೂಲದ ಸಂಘಟನೆಯ ಚಟುವಟಿಕೆಗಳು ನಡೆಯುತ್ತಿದ್ದು, ಮುಸ್ಲಿಂರನ್ನು ತಪ್ಪು ದಾರಿಗೆಳೆಯುವ ಮತ್ತು ಭದ್ರತೆಯ ಆತಂಕ ಎದುರಾಗಿದೆ. ಈ ಸಂಘಟನೆಗಳ ಬಗ್ಗೆ ನಿಗಾ ವಹಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮರ್ಕಜಿ ಮಜ್ಲಿಸೆ ಮುಶಾವರತ್ ನೇತೃತ್ವದಲ್ಲಿ ತುಮಕೂರಿನ ಮುಸ್ಲಿಂ ಬಾಂಧವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ನೂರಾನಿ ಮಸೀದಿ ಅಧ್ಯಕ್ಷರು ಹಾಗೂ ಮರ್ಕಜಿ ಮಜ್ಲಿಸೆ ಮುಶಾವರತ್ ಸದಸ್ಯರಾದ ಜಾಹಿದ್ ಖಾನ್ ಶೀರಾನಿ, ಇಕ್ಬಾಲ್ ಅಹಮದ್, ನಯಾಜ್ ಅಹಮದ್ ನೇತೃತ್ವದಲ್ಲಿ ನೂರಾರು ಮಂದಿ ಮುಸ್ಲಿಂ ಬಾಂಧವರು ತೆರಳಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಗೋಪಾಲ್ ಹಾಗೂ ಪುರುಷೋತ್ತಮ್ ಅವರಿಗೆ ಮನವಿ ಸಲ್ಲಿಸಿ ಪಾಕಿಸ್ತಾನ ಮೂಲದ ಸಂಘಟನೆಗಳ ಬಗ್ಗೆ ತೀವ್ರ ನಿಗಾ ವಹಿಸುವಂತೆ ಕೋರಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡ ಇಕ್ಬಾಲ್ ಅಹಮದ್, ರಿಯಾಜ್ ಅಹ್ಮದ್ ಗೋಹಲ್ ಶಾಹಿ ಗುಂಪು (ಎಂಎಫ್ಐ) ಪಾಕಿಸ್ತಾನದಲ್ಲಿ ಹುಟ್ಟುಕೊಂಡ ಸಂಘಟನೆಯಾಗಿದೆ. ಇದರ ಸ್ಥಾಪಕ ರಿಯಾಜ್ ಅಹ್ಮದ್ ಗೋಹರ್ ಶಾಹಿ…
ತುಮಕೂರು: ಕೆ.ಎನ್.ರಾಜಣ್ಣನವರನ್ನು ಸಚಿವ ಸಂಪುಟದಿ0ದ ವಜಾಗೊಳಿಸಿರುವುದನ್ನು ಖಂಡಿಸಿ, ಅವರನ್ನು ಮತ್ತೆ ಮಂತ್ರಿ ಮಂಡಲಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿ ಕೆ.ಎನ್.ಆರ್ ಹಾಗೂ ಆರ್.ಆರ್. ಅಭಿಮಾನಿ ಬಳಗ ನೇತೃತ್ವದಲ್ಲಿ ಜಿಲ್ಲೆಯ ವಿವಿಧ ಸಂಘಸ0ಸ್ಥೆಗಳ, ಅಹಿಂದ ವರ್ಗ, ಸಾಹಿತಿಗಳು, ವಿವಿಧ ಸಮಾಜಗಳ ಮುಖಂಡರೊ0ದಿಗೆ ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಧರಣಿ ಸತ್ಯಾಗ್ರಹ ಇಡೀ ದಿನ ಧರಣಿ ಸತ್ಯಾಗ್ರಹ ನಡೆಸಿದರು. ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಂದ ಆಗಮಿಸಿದ್ದ ಮುಖಂಡರು, ಕೆ.ಎನ್.ರಾಜಣ್ಣನವರು ದೇವರಾಜ ಅರಸು ಅವರ ತತ್ವಾದರ್ಶಗಳನ್ನು ತಮ್ಮ ರಾಜಕೀಯ ಬದುಕಿನಲ್ಲಿ ಅಳವಡಿಸಿಕೊಂಡು ಅವರಂತೆಯೇ ಹಿಂದುಳಿದ ವರ್ಗ, ಶೋಷಿತರ ಧ್ವನಿಯಾಗಿ ನೆರವಿಗೆ ನಿಂತವರು. ಕೆ.ಎನ್.ರಾಜಣ್ಣನವರಂತಹ ಪ್ರಭಾವಿ ನಾಯಕರ ವಿರುದ್ಧ ಕ್ರಮ ತೆಗೆದುಕೊಂಡಾಗಲೆಲ್ಲಾ ಕಾಂಗ್ರೆಸ್ ಹೀನಾಯ ಸ್ಥಿತಿ ಅನುಭವಿಸಿತ್ತು. ರಾಜೀವ್ ಗಾಂಧಿ ನೇತೃತ್ವದಲ್ಲಿ ೧೯೮೪ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ೪೦೫ ಸ್ಥಾನಗಳನ್ನು ಗಳಿಸಿತ್ತು. ಆನಂತರದಿ0ದ ಪಕ್ಷ ಕುಸಿತ ಕಂಡಿತು. ಪಕ್ಷದ ಸಂಘಟನಾ ಕೊರತೆ ಹಾಗೂ ನಿಷ್ಠಾವಂತರ ಕಡಿಗಣಿಕೆಯೂ ಇದಕ್ಕೆ ಕಾರಣ. ಮುಖ್ಯಮಂತ್ರಿಯಾಗಿ ಜನಪರ ಕಾರ್ಯಕ್ರಮ ಜಾರಿಗೆ…
ತುಮಕೂರು: ಜಿಲ್ಲಾಡಳಿತದಿಂದ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಸೆಪ್ಟೆಂಬರ್ ೨೨ ರಿಂದ ಅಕ್ಟೋಬರ್ ೨ರವರೆಗೆ ೧೧ ದಿನಗಳ ಕಾಲ ಜರುಗಲಿರುವ ದಸರಾ ಉತ್ಸವದಲ್ಲಿ ಆಗಮ ರೀತಿಯ ವಿಧಿ ವಿಧಾನಗಳೊಂದಿಗೆ ಪೂಜಾ ಕೈಂಕರ್ಯಗಳನ್ನು ನಡೆಸಲು ನಿರ್ಣಯಿಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಧಾರ್ಮಿಕ ಪೂಜಾ ವಿಧಾನಗಳ ಆಚರಣಾ ಸಮಿತಿ ಸಭೆಯಲ್ಲಿ ಈ ನಿರ್ಣಯವನ್ನು ಕೈಗೊಳ್ಳಲಾಯಿತು. ನಂತರ ಮಾತನಾಡಿದ ಅಪರ ಜಿಲ್ಲಾಧಿಕಾರಿಗಳು ದಸರಾ ಉತ್ಸವ ನವರಾತ್ರಿ ದಿನಗಳಂದು ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಿರ್ಮಿಸಲಾಗುವ ಭವ್ಯ ಧಾರ್ಮಿಕ ಮಂಟಪದಲ್ಲಿ ದೇವಿಯನ್ನು ಪ್ರತಿಷ್ಠಾಪಿಸಿ ಪ್ರತಿದಿನ ವಿವಿಧ ಅಲಂಕಾರಗಳಿAದ ಪೂಜಿಸಬೇಕು ಎಂದು ತಿಳಿಸಿದರು. ದಸರಾ ಉತ್ಸವ ಮೊದಲ ದಿನ ಬೆಳಿಗ್ಗೆ ಧಾರ್ಮಿಕ ವಿಧಿ-ವಿಧಾನಗಳಂತೆ ಗಣಪತಿ ಪೂಜೆ, ಪೂಣ್ಯಾಹ ವಾಚನ, ಭೂಮಿ ಪೂಜೆ, ಧ್ವಜ ಪೂಜೆ, ಮಂಟಪ ಪೂಜೆ ಮತ್ತು ಧ್ವಜಾರೋಹಣ, ಭಾರತ ಮಾತಾ ಪೂಜೆ, ಗಣಪತಿ ಹೋಮ ಮತ್ತು ದುರ್ಗಾ…
ತುಮಕೂರು: ಸಂವಿಧಾನದ ಆಶಯಗಳನ್ನು ಚಾಚೂ ತಪ್ಪದೇ ಅನುಷ್ಠಾನಗೊಳಿಸಿ ಶೋಷಿತರು, ಹಿಂದುಳಿದ ವರ್ಗದವರು ಹಾಗೂ ಬಡ ಜನರ ಆಶಾಕಿರಣವಾಗಿರುವ ಮಾಜಿ ಮುಖ್ಯಮಂತ್ರಿ ಡಿ. ದೇವರಾಜು ಅರಸುರವರ ತತ್ವಾದರ್ಶಗಳನ್ನು ಎಲ್ಲರೂ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ಕರೆ ನೀಡಿದರು. ನಗರದ ಟೌನ್ಹಾಲ್ ವೃತ್ತದಲ್ಲಿರುವ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜು ಅರಸು ರವರ ೧೧೦ನೇ ಜನ್ಮ ದಿನಾಚರಣೆಯಲ್ಲಿ ಡಿ. ದೇವರಾಜು ಅರಸು ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿ ಅವರು ಮಾತನಾಡಿದರು. ನಮ್ಮ ಸಂವಿಧಾನದ ಮೂಲ ಆಶಯವಾಗಿರುವ ಸಾಮಾಜಿಕ ನ್ಯಾಯವನ್ನು ರಾಜ್ಯದಲ್ಲಿ ಚಾಚೂ ತಪ್ಪದೇ ಅನುಷ್ಠಾನಕ್ಕೆ ತಂದ ಮುಖ್ಯಮಂತ್ರಿ ಅಂದರೆ ಡಿ. ದೇವರಾಜು ಅರಸು ರವರು ಎಂದು ಅವರು ಹೇಳಿದರು. ಕರ್ನಾಟಕದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿರುವ ಡಿ. ದೇವರಾಜು ಅರಸು ರವರು ರಾಜ್ಯದಲ್ಲಿ ಉಳುವವನೇ ಭೂಮಿ ಒಡೆಯ ಎಂಬ ಕಾನೂನನ್ನು ಜಾರಿಗೊಳಿಸಿ ಬಡವರ…
ದ ಪರಿಹಾರಕ್ಕೆ ಹೋರಾಟ ನಡೆಸಿದ ನೆಯ ನಡೆಸುತ್ತಿರುವ ರಾಷ್ಟ್ರೀಯ ಸಂಘಟನೆಯಾಗಿದ್ದು, ಕರ್ನಾಟಕ ದಕ್ಷಿಣ ಪ್ರಾಂತ್ಯದಲ್ಲಿ ಐದು ಸಾವಿರ ಕಾರ್ಯಕರ್ತರಿಗೆ ತರಬೇತಿ ನೀಡಿ ಬೇರುಮಟ್ಟದಲ್ಲಿ ಕೆಲಸ ಮಾಡಲು ಉತ್ತೇಜಿಸುತ್ತಿದೆ ಎಂದು ಭಾರತೀಯ ಕಿಸಾನ್ ಸಂಘದ ಕರ್ನಾಟಕ ದಕ್ಷಿಣ ಪ್ರಾಂತೀಯ ಪ್ರಧಾನ ಕಾರ್ಯದರ್ಶಿ ಸೋಮಶೇಖರ್ ತಿಳಿಸಿದ್ದಾರೆ ಗುಬ್ಬಿ ಪಟ್ಟಣದ ಕೃಷಿ ಮಾರುಕಟ್ಟೆ ಪ್ರಾಂಗಣದಲ್ಲಿರುವ ರೈತ ಭವನದಲ್ಲಿ ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶ,ಗುಬ್ಬಿ ತಾಲೂಕು ಘಟಕದವತಿಯಿಂದ ಆಯೋಜಿಸಿದ್ದ ತಾಲೂಕು ಹಾಗೂ ಗ್ರಾಮ ಸಮಿತಿಗಳ ಪ್ರಶಿಕ್ಷಣವರ್ಗ ಕಾರ್ಯಾಗಾರವನ್ನು ಗೋ ಪೂಜೆ ನೆರವೇರಿಸುವ ಮೂಲಕ ಉದ್ಘಾಟಿಸಿ ಮಾತನಾಡುತಿದ್ದ ಅವರು,ಸದಸ್ಯತ್ವ ಅಭಿಯಾನದಲ್ಲಿ ಕರ್ನಾಟಕದ ದಕ್ಷಿಣ ಪ್ರಾಂತ್ಯದಲ್ಲಿ ಸುಮಾರು ೪೩ ಸಾವಿರ ಜನರು ಸದಸ್ಯರಾಗಿದ್ದು, ಇವರಲ್ಲಿ ೫ ಸಾವಿರ ಜನರಿಗೆ ತರಬೇತಿ ನೀಡಲಾಗುತ್ತಿದೆ.ಈಗಾಗಲೇ ಪ್ರಾಂತೀಯ, ಜಿಲ್ಲಾ ಮಟ್ಟದ ತರಬೇತಿಗಳು ಮುಗಿದಿವೆ ಎಂದರು. ಸ್ವಾವಲ0ಬಿ ರೈತ, ಸಂಪನ್ನ ಗ್ರಾಮ, ಸಮರ್ಥ ಭಾರತ ಇದು ಭಾರತೀಯ ಕಿಸಾನ್ ಸಂಘದ ಮೂಲ ಉದ್ದೇಶವಾಗಿದ್ದು,ರೈತರ ಸಮಸ್ಯೆಯ ಜೊತೆಗೆ, ವಿಷಮುಕ್ತ ಆಹಾರ ನೀಡುವ ಸಾವಯವ ಕೃಷಿಯ ಮೂಲಕ…
ಹುಳಿಯಾರು: ಕಳೆದ ೧೦ ದಿನಗಳಿಂದ ಹುಳಿಯಾರು ಪಟ್ಟಣದಲ್ಲಿ ಗೊಬ್ಬರ ವಿತರಿಸುತ್ತಿದ್ದರೂ ಸಹ ರೈತರ ನೂಕುನುಗ್ಗಲು ಕಡಿಮೆ ಆಗಿಲ್ಲ. ಪರಿಣಾಮ ಸೋಮವಾರ ಪೊಲೀಸ್ ಕಣ್ಗಾವಲಿನಲ್ಲಿ ಗೊಬ್ಬರ ವಿತರಿಸುವ ಸ್ಥಿತಿ ನಿರ್ಮಾಣವಾಯಿತು. ಹುಳಿಯಾರು ಹೋಬಳಿ ವ್ಯಾಪ್ತಿಯಲ್ಲಿ ಕಳೆದ ವಾರದಿಂದ ಮಳೆ ಬೀಳುತ್ತಿರುವುದರಿಂದ ರಾಗಿ ಇನ್ನಿತರ ಬೆಳೆಗಳಿಗೆ ಮೇಲು ಗೊಬ್ಬರವಾಗಿ ನೀಡುವ ಯೂರಿಯಾಗೆ ಬೇಡಿಕೆ ಹೆಚ್ಚಿದೆ. ಪಟ್ಟಣದ ಮುಸ್ತಾಫ ಟ್ರೇರ್ಸ್, ರೈತ ಅಗ್ರಿ ಕ್ಲಿನಿಕ್ ಹಾಗೂ ಗಾಂಧಿಪೇಟೆಯ ಬಸವೇಶ್ವರ ಟ್ರೇಡರ್ಸ್ ಗೊಬ್ಬರದ ಅಂಗಡಿಗಳ ಜೊತೆಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲೂ ಸಹ ವಾರಕ್ಕೆ ಎರಡ್ಮೂರು ಲೋಡ್ ಗೊಬ್ಬರ ಕೊಡುತ್ತಿದ್ದರೂ ಸಹ ಬೆಳಗ್ಗೆಯಿಂದಲೇ ರೈತರು ಗೊಬ್ಬರದ ಅಂಗಡಿಗಳ ಮುಂದೆ ನಸುಕಿನಿಂದಲೇ ಸರತಿಸಾಲಿನಲ್ಲಿ ನಿಲ್ಲುವುದು ಕಡಿಮೆಯಾಗಿಲ್ಲ. ಸೋಮವಾರ ಗೊಬ್ಬರ ಬರುವ ಮುನ್ಸೂಚನೆ ತಿಳಿದ ರೈತರ ಸೋನೆ ಮಳೆಯಲ್ಲೂ ಗೊಬ್ಬರದ ಅಂಗಡಿಗಳ ಮುಂದೆ ಮೈಲುದ್ದ ಸರತಿ ಸಾಲು ನಿಂತಿದ್ದರು. ಗೊಬ್ಬರದ ಲಾರಿ ಅಂಗಡಿಗಳ ಮುಂದೆ ಬಂದಿದ್ದೇ ತಡ ಗೊಬ್ಬರದ ಚೀಲ ಅಂಗಡಿಗೆ ಇಳಿಸಲೂ ಬಿಡದೆ ಖರೀದಿಗೆ ನೂಕುನುಗ್ಗಲು ಸೃಷ್ಟಿಸಿದರು.…
ತುಮಕೂರು: ಮಳೆಯಿಂದ ಹಾನಿಗೊಳಗಾದ ಮನೆ, ತೋಟ, ಜಾನುವಾರುಗಳನ್ನು ಪರಿಶೀಲಿಸಿ ಪರ್ಟಲ್ ನಲ್ಲಿ ದಾಖಲಿಸಿ ತಕ್ಷಣವೇ ಪರಿಹಾರ ನೀಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದರು. ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ವಿಪತ್ತು ನರ್ವಹಣಾ ಪ್ರಾಧಿಕಾರ ಸಭೆ ನಡೆಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ವಿವಿಧ ಕುಡಿಯುವ ನೀರಿನ ಕಾಮಗಾರಿಗಳು ನಡೆಯುತ್ತಿವೆ, ಕುಡಿಯುವ ನೀರಿಗೆ ಕಲುಷಿತ ನೀರು ಸೇರದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂದು ತಿಳಿಸಿದರು. ಇತ್ತೀಚೆಗೆ ಮಳೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು, ಸರ್ವಜನಿಕರು ಮನೆಗಳ ಸುತ್ತಮುತ್ತ ನೀರು ನಿಲುಗಡೆಯಾಗದಂತೆ ಸ್ವಚ್ಛಗೊಳಿಸಿಕೊಳ್ಳಬೇಕು ಎಂದು ಮನವಿ ಮಾಡಿದರು. ಜೊತೆಗೆ ಪ್ರತಿ ವರ್ಡ್ ಹಾಗೂ ಗ್ರಾಮಗಳಲ್ಲಿ ಪ್ರತಿದಿನ ಫಾಗಿನೇಷನ್ ಕರ್ಯಾಚರಣೆ ನಡೆಯಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕಡಲೆಕಾಯಿ ಬಿತ್ತನೆಗೆ ಸಮಯಮಿತಿಯೊಳಗೆ ಮಳೆಯಾಗದ ಕಾರಣ ರೈತರು ರಾಗಿ ಬಿತ್ತನೆಗೆ ಮುಂದಾಗಿದ್ದಾರೆ. ಈ ಸಂರ್ಭದಲ್ಲಿ ಯೂರಿಯ ಬೇಡಿಕೆ ಹೆಚ್ಚಾಗುತ್ತಿರುವುದರಿಂದ ರೈತರಿಗೆ ಯಾವುದೇ ತೊಂದರೆ ಉಂಟಾಗದಂತೆ ಯೂರಿಯ ವಿತರಣೆ ಮಾಡಬೇಕೆಂದು ಕೃಷಿ ಜಂಟಿ ನರ್ದೇಶಕ ರಮೇಶ್ ಅವರಿಗೆ…
ತುಮಕೂರು: ಶ್ರೀಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಮಸಿ ಬಳಿಯಲು ಯತ್ನಿಸಿ, ಧರ್ಮಾಧಿಕಾರಿಗಳಾದ ಶ್ರೀವೀರೇಂದ್ರ ಹೆಗಡೆ ಅವರ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವವರನ್ನು ಕೂಡಲೇ ಬಂಧಿಸಬೇಕು, ಅವರುಗಳನ್ನು ತನಿಖೆಗೆ ಒಳಸಪಡಿಸಬೇಕು ಎಂದು ಆಗ್ರಹಿಸಿ ಬುಧವಾರ ವಿವಿಧ ಸಮುದಾಯಗಳ ಜನರು, ಶ್ರೀಕ್ಷೇತ್ರ ಧರ್ಮಸ್ಥಳದ ಭಕ್ತಾಧಿಗಳ ಹೆಸರಿನಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ನಗರದ ಟೌನ್ಹಾಲ್ ವೃತ್ತದಿಂದ ಎಂ.ಜಿ.ರಸ್ತೆ, ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯ ಮೂಲಕ ಜಿಲ್ಲಾಧಿಕಾರಿಗಳ ಕಚೇರಿ ತಲುಪಿದ ನೂರಾರು ಭಕ್ತಾಧಿಗಳು,ಧರ್ಮಸ್ಥಳದ ಹೆಸರಿಗೆ ಚ್ಯುತಿ ಉಂಟು ಮಾಡಲು ಯತ್ನಿಸುತ್ತಿರುವ ಎಲ್ಲಾ ಪಟ್ಟಭದ್ರ ಹಿತಾಸಕ್ತಿಗಳ ವಿರುದ್ದ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ, ಬಿತ್ತಿ ಪತ್ರ ಹಿಡಿದು ಪ್ರತಿಭಟನಾ ಮೆರವಣಿಗೆ ನಡೆಸಿದರು. ನಗರದ ಟೌನ್ಹಾಲ್ ಬಳಿ ಪ್ರತಿಭಟನೆ ಕುರಿತಂತೆ ಮಾತನಾಡಿದ ಅಯ್ಯಪ್ಪಸ್ವಾಮಿ ಸೇವಾ ಸಮಾಜಂನ ರಾಷ್ಟಿçÃಯ ಅಧ್ಯಕ್ಷ ಟಿ.ಬಿ.ಶೇಖರ್,ಕಳೆದ ೨೫-೩೦ ವರ್ಷಗಳಿಂದಲೂ ಧರ್ಮಸ್ಥಳದ ಪರಂಪರೆಯ ಮೇಲೆ ನಿರಂತರವಾಗಿ ದಾಳಿ ನಡೆಸಲಾಗುತ್ತಿದೆ.ಧರ್ಮಸ್ಥಳದ ಹೆಸರು ಹಾಳು ಮಾಡಲು ಇನ್ನಿಲ್ಲದ ಪ್ರಯತ್ನವನ್ನು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ನಡೆಸುತ್ತಿವೆ.ಭಕ್ತರು ದೇವರ ಸಮಾನ ಎಂದು ಪರಿಗಣಿಸಿರುವ ಶ್ರೀ…
ತುಮಕೂರು: ಸಚಿವ ಸಂಪುಟದಿ0ದ ಕೆ.ಎನ್.ರಾಜಣ್ಣನವರನ್ನು ವಜಾಗೊಳಿಸಿದ ಕಾಂಗ್ರೆಸ್ ಹೈಕಮಾಂಡ್ ಕ್ರಮ ಖಂಡಿಸಿ ಕಲ್ಪತರುನಾಡು ತುಮಕೂರಿನಲ್ಲಿ ಆಕ್ರೋಶ ಭುಗಿಲೆದಿದ್ದು, ಕೆ.ಎನ್. ರಾಜಣ್ಣನವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿ ಕೆ.ಎನ್.ಆರ್. ಅಭಿಮಾನಿಗಳು, ವಾಲ್ಮೀಕಿ ಸಮುದಾಯದವರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ವಿವಿಧ ಸಂಘಟನೆಗಳು ಮುಖಂಡರು ಪ್ರತಿಭಟನೆ ನಡೆಸಿದರು. ಕೆ.ಎನ್.ಆರ್, ಆರ್.ಆರ್. ಅಭಿಮಾನಿ ಬಳಗ, ಕಾಂಗ್ರೆಸ್ ಮುಖಂಡರು, ಹಿಂದುಳಿದ ವರ್ಗಗಳ ಒಕ್ಕೂಟ, ದಲಿತ ಸಂಘರ್ಷ ಸಮಿತಿ, ಅಲ್ಪಸಂಖ್ಯಾತ ಸಮುದಾಯ ಸೇರಿದಂತೆ ವಿವಿಧ ಸಮಾಜಗಳ ಮುಖಂಡರು ನಗರದ ಟೌನ್ಹಾಲ್ ವೃತ್ತ ಜಮಾಯಿಸಿ ಮಹಾನಗರ ಪಾಲಿಕೆ ಆವರಣದಲ್ಲಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಯಾವುದೇ ತಪುö್ಪ ಮಾಡದ ಕೆ.ಎನ್.ರಾಜಣ್ಣನವರನ್ನು ಸಂಪುಟದಿ0ದ ವಜಾ ಮಾಡಿ ಅಪಮಾನ ಮಾಡಲಾಗಿದೆ ಎಂದು ಆಕ್ರೋಶ ಹೊರ ಹಾಕಿದರು. ಟೌನ್ಹಾಲ್ ವೃತ್ತದಲ್ಲಿ ದೊಡ್ಡ ಸಂಖ್ಯೆಯಲ್ಲಿ ಜಮಾಯಿಸಿದ್ದ ಕೆಎನ್ಆರ್ ಅಭಿಮಾನಿಗಳು, ಮಧುಗಿರಿ ಕ್ಷೇತ್ರದ ಕಾರ್ಯಕರ್ತರು ಕೆಎನ್ಆರ್ ಪರ ಘೋಷಣೆಗಳನ್ನು ಕೂಗುತ್ತಾ ಬಿ.ಹೆಚ್. ರಸ್ತೆ ಮುಖೇನ ಎಂ.ಜಿ. ರಸ್ತೆಯಲ್ಲಿ…