ತುಮಕೂರು: ಜಿಲ್ಲೆಯಲ್ಲಿ ದೇವಾಲಯ, ಮಂದಿರ, ಮಸೀದಿ, ಚರ್ಚು, ಗುರುದ್ವಾರ ಸೇರಿದಂತೆ ಇತರೆ ಧಾರ್ಮಿಕ ಸ್ಥಳಗಳಲ್ಲಿ ಲಾಕ್ ಡೌನ್ ನಿಂದ ಸ್ಥಗಿತಗೊಂಡಿದ್ದ ಪೂಜಾ ಕೈಂಕರ್ಯಗಳನ್ನು 25-7-2021 ರಿಂದ ಮುಂದುವರೆಸಲು ಅನುಮತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ತಿಳಿಸಿದ್ದಾರೆ. ಸರ್ಕಾರದ ಹೊಸ ಕೋವಿಡ್ 19 ಮಾರ್ಗಸೂಚಿಯಲ್ಲಿ ಇನ್ನಷ್ಷು ಚಟುವಟಿಕೆಗಳನ್ನು ನಡೆಸಲು ಅವಕಾಶ ನೀಡಲಾಗಿದ್ದು, ಇದರನ್ವಯ ಕೋವಿಡ್ ನಿಯಮಗಳನ್ನು ಅನುಸರಿಸುವುದರೊಂದಿಗೆ ಧಾರ್ಮಿಕ ಸ್ಥಳಗಳಲ್ಲಿ ಕಟ್ಟುನಿಟ್ಟಾಗಿ ಪೂಜಾ ಚಟುವಟಿಕೆಗಳನ್ನು ನಡೆಸಲು ಅನುಮತಿ ನೀಡಲಾಗಿದೆ. ಆದರೆ, ಜಾತ್ರೆ, ದೇವಾಲಯ ಉತ್ಸವ, ಮೆರವಣಿಗೆ, ಸಭೆಗಳಿಗೆ ಅವಕಾಶವಿಲ್ಲ. ಅದೇ ರೀತಿ ಕಟ್ಟುನಿಟ್ಟಿನ ಕೋವಿಡ್ ನಿಯಮಗಳನ್ನು ಪಾಲಿಸುವುದರೊಂದಿಗೆ ಮನೋರಂಜನಾ ಸ್ಥಳ, ಉದ್ಯಾನವನ/ ಪಾರ್ಕ್ ಗಳನ್ನು ಪುನಃ ತೆರೆಯಲು ಅನುಮತಿ ಇದೆ. ಆದರೆ ಜಲ ಕ್ರೀಡೆ / ಜಲ ಸಂಬಂಧಿತ ಸಾಹಸ ಚಟುವಟಿಕೆಗಳಿಗೆ ಅನುಮತಿ ಇಲ್ಲ. ಕೋವಿಡ್ ಸೋಂಕನ್ನು ಸಂಪೂರ್ಣವಾಗಿ ನಿಯಂತ್ರಿಸಲು ಸಾರ್ವಜನಿಕರು ಮಾಸ್ಕ್ ಧಾರಣೆ, ಕೈ-ಸ್ವಚ್ಛತೆಗಾಗಿ ಸ್ಯಾನಿಟೈಸರ್…
Author: News Desk Benkiyabale
ತುಮಕೂರು: ತಮ್ಮ ಇಳಿ ವಯಸ್ಸನ್ನು ಲಕ್ಕಿಸದೆ ಕೋರೋನ ಸಂದರ್ಭದಲ್ಲಿ ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿ ಸಮರ್ಥ ಆಡಳಿತ ನೀಡಿರುವ ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಪೂರೈಸಲು ಅವಕಾಶ ನೀಡುವಂತೆ ಬಿಜೆಪಿ ಹೈಕಮಾಂಡ್‍ಗೆ ತುಮಕೂರು ಜಿಲ್ಲಾ ವೀರಶೈವ ಸಮಾಜ ಹಾಗೂ ವೀರಶೈವ ಸಮಾಜದ ವಿವಿಧ ಸಂಘಟನೆಗಳ ಒಕ್ಕೂಟದ ಪರವಾಗಿ ಟಿ.ಬಿ.ಶೇಖರ್ ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಯಾರದೋ ಮಾತು ಕೇಳಿ ಅವರನ್ನು ಪದಚ್ಯುತಿಗೊಳಿಸಲು ಹೊರಟಿರುವುದು ಖಂಡನೀಯ. ಮುಂದಿನ ಎರಡು ವರ್ಷಗಳ ಅವಧಿಗೆ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಬೇಕೆಂಬುದು ನಾಡಿನ ಹಲವು ಮಠಾಧೀಶರು, ಜನಸಾಮಾನ್ಯರ ಬೇಡಿಕೆಯಾಗಿದೆ. ಈ ನಿಟ್ಟಿನಲ್ಲಿ ವೀರಶೈವ ಸಮಾಜವೂ ದ್ವನಿಗೂಡಿಸುತ್ತಿದೆ ಎಂದರು. ರಾಜ್ಯದಲ್ಲಿ ಬಿಜೆಪಿ ಪಕ್ಷ ವಿಧಾನಸಭೆಯಲ್ಲಿ ಎರಡು ಸ್ಥಾನಗಳನ್ನು ಗಳಿಸಲು ಕಷ್ಟವಾಗಿದ್ದ ಸಂದರ್ಭದಲ್ಲಿ ಅದರ ನಾಯಕತ್ವ ವಹಿಸಿಕೊಂಡ ಬಿ.ಎಸ್.ಯಡಿಯೂರಪ್ಪ ಹಗಲಿರುಳೆನ್ನದೆ ಪಕ್ಷ ಸಂಘಟನೆ ಮಾಡಿದ್ದರ ಫಲವಾಗಿ 2008 ರಿಂದ 2013 ಮತ್ತು ಪ್ರಸ್ತುತ ಬಿಜೆಪಿ ಸರಕಾರ ಅಧಿಕಾರದಲ್ಲಿರಲು ಕಾರಣರಾಗಿದ್ದಾರೆ. ವಯಸ್ಸಿನ ನೆಪ ಮಾಡಿಕೊಂಡು ಇಂದು ಅಧಿಕಾರ ದಿಂದ ಕೆಳಗೆ ಇಳಿಸುವ ಮಾತನಾಡುತ್ತಿರುವ…
ಹುಳಿಯಾರು: ಹಂದನಕೆರೆ ಹೋಬಳಿಯ ದೊಡ್ಡಎಣ್ಣೇಗೆರೆ ಗ್ರಾಮ ಪಂಚಾಯ್ತಿಯ ಮುಂದೆ ಕಳೆದ ಹದಿನೈದಿಪ್ಪತ್ತು ದಿನಗಳಿಂದ ಸತತವಾಗಿ ಹರಿದು ಹೋಗಿರುವ ತ್ರಿವರ್ಣ ಧ್ವಜವನ್ನೇ ಹಾರಿಸಿ ರಾಷ್ಟ್ರಧ್ವಜಕ್ಕೆ ಅಗೌರವ ಮಾಡಲಾಗುತ್ತಿದೆ. ಹೌದು ಸರ್ಕಾರ ಎಲ್ಲಾ ಗ್ರಾಮ ಪಂಚಾಯ್ತಿ ಕಛೇರಿಗಳ ಮುಂದೆ ಪ್ರತಿದಿನ ಕಡ್ಡಾಯವಾಗಿ ತ್ರಿವರ್ಣ ಧ್ವಜ ಹಾರಿಸಬೇಕೆಂಬ ನಿಯಮ ಜಾರಿಗೆ ತಂದ ಮೇಲೆ ಧ್ವಜ್ಕಕೆ ಸಂಬಂಧಿಸಿದ ಅವಾಂತರಗಳು ಆಗುತ್ತಲೇ ಇವೆ. ಇದೀಗ ಅಂತದ್ದೇ ಅವಾಂತರದ ಪಟ್ಟಿಗೆ ದೊಡ್ಡಎಣ್ಣೇಗೆರೆ ಗ್ರಾಮ ಪಂಚಾಯ್ತಿ ಸೇರಿದೆ. ಹರಿದ, ಕೊಳಕಾದ, ಹಾಳಾದ ರಾಷ್ಟ್ರಧ್ವಜ ಹಾರಿಸುವದು ಅಪರಾಧ. ರಾಷ್ಟ್ರ ಧ್ವಜಕ್ಕೆ ತನ್ನದೇಯಾದ ಗೌರವ ಘನತೆ ಇದೆ. ಆದರೆ ದೊಡ್ಡಎಣ್ಣೇಗೆರೆ ಗ್ರಾಮ ಪಂಚಾಯ್ತಿ ಧ್ವಜಸ್ಥಂಭದಲ್ಲಿ ಹರಿದ ದ್ವಜ ಹಾರಾಡುವ ಮೂಲಕ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಊರಿನ ಮಧ್ಯಭಾಗದಲ್ಲಿರುವ ಈ ಗ್ರಾಪಂ ಕಛೇರಿಗೆ ನಿತ್ಯ ಅಪಾರ ಸಂಖ್ಯೆಯಲ್ಲಿ ಹಳ್ಳಿಗರು ಕೆಲಸದ ನಿಮಿತ್ತ ಬರುತ್ತಾರೆ. ಅಲ್ಲದೆ ಪಂಚಾಯ್ತಿ ಎದುರಿಗಿನ ರಸ್ತೆಯ ಮೂಲಕ ಹಂನಕೆರೆ, ತಿಪಟೂರಿಗೆ ನಿತ್ಯ ನೂರಾರು ಮಂದಿ ಬಸ್, ಕಾರು, ದ್ವಿಚಕ್ರ ವಾಹನದಲ್ಲಿ ಓಡಾಡುತ್ತಾರೆ. ಇಷ್ಟಿದರೂ…
ತುಮಕೂರು: ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಿಸುವ ಸಲುವಾಗಿ ಗ್ರಾಮ ಕಾಯಕ ಮಿತ್ರ ಹುದ್ದೆಗೆ ಮಹಿಳೆಯರನ್ನೇ ಆಯ್ಕೆ ಮಾಡಲಾಗಿದ್ದು, ಅವರು ತಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರತಿ ಮನೆ ಮನೆಗೆ ಭೇಟಿ ನೀಡಿ ನರೇಗಾ ಯೋಜನೆಯಡಿ ದೊರೆಯುವ ಸೌಲಭ್ಯಗಳನ್ನು ಜನರಿಗೆ ತಲುಪುವಂತೆ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರು ಕರೆ ನೀಡಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಮೊದಲನೇ ಸುತ್ತಿನ ಗ್ರಾಮ ಕಾಯಕ ಮಿತ್ರರ ಬುನಾದಿ ತರಬೇತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ನರೇಗಾ ಯೋಜನೆಯಡಿ ಉದ್ಯೋಗ ಚೀಟಿ ಬಯಸುವ ಗ್ರಾಮೀಣ ಜನರಿಂದ ನಮೂನೆ-1ರಲ್ಲಿ ಅರ್ಜಿಗಳನ್ನು ಸ್ವೀಕರಿಸುವುದು, ಸ್ವೀಕೃತಿ ನೀಡುವ ಮತ್ತು ಉದ್ಯೋಗ ಚೀಟಿ ದೊರಕಿಸಿಕೊಡುವಲ್ಲಿ ಗ್ರಾಮ ಕಾಯಕ ಮಿತ್ರರು ಪ್ರಮುಖ ಪಾತ್ರ ವಹಿಸಲಿದ್ದಾರೆ. ಅಂತೆಯೇ ಕೂಲಿ ಕೆಲಸ ಬಯಸುವ ಕೂಲಿಕಾರರಿಂದ ನಮೂನೆ-6ರಲ್ಲಿ ಕೆಲಸದ ಬೇಡಿಕೆ ಸ್ವೀಕರಿಸುವುದರೊಂದಿಗೆ ಕಾಲಮಿತಿಯೊಳಗೆ ಕೂಲಿಕಾರರಿಗೆ ಕೆಲಸ ದೊರೆಯುವಂತೆ ಕಾಯಕ ಮಿತ್ರರು ನೋಡಿಕೊಳ್ಳಬೇಕು ಎಂದು ಸಿಇಓ ತಿಳಿಸಿದರು. ನರೇಗಾ…
ತುಮಕೂರು : ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ತಿಂಗಳಲ್ಲಿ ಕನಿಷ್ಟ ಒಂದು ಬಾರಿಯಾದರೂ ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ತಾಲೂಕು ಪ್ರವಾಸ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ಮೊದಲನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಪ್ರವಾಸ ಕೈಗೊಳ್ಳುವ ಮಾಹಿತಿಯನ್ನು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸ್ಥಳೀಯ ಶಾಸಕರ ಗಮನಕ್ಕೆ ತರಬೇಕು. ತಾಲೂಕು ಪ್ರವಾಸ ಕೈಗೊಳ್ಳದಿದ್ದರೆ ಅಂತಹ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಸಮಾಜ ಕಲ್ಯಾಣ ಇಲಾಖೆಯಿಂದ ಕೈಗೊಂಡಿರುವ ಮೆಟ್ರಿಕ್ ಪೂರ್ವ /ನಂತರದ ವಿದ್ಯಾರ್ಥಿ ನಿಲಯಗಳ ಕಟ್ಟಡ ಹಾಗೂ ಭವನ ನಿರ್ಮಾಣಗಳ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಸೂಕ್ತ ಕ್ರಮ ವಹಿಸಬೇಕು. ಹಾಸ್ಟೆಲ್ ಅಥವಾ ಭವನ ನಿರ್ಮಾಣಕ್ಕೆ ಜಾಗದ ಸಮಸ್ಯೆ ಎದುರಾದಲ್ಲಿ ಜಿಲ್ಲಾಡಳಿತ ಹಾಗೂ ಸ್ಥಳೀಯ ಶಾಸಕರ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಿಕೊಂಡು ನಿರ್ಮಾಣ ಕಾಮಗಾರಿ…
ಗುಬ್ಬಿ: ತಾಲ್ಲೂಕಿನ ಜಿ.ಹೊಸಳ್ಳಿ ಗ್ರಾಪಂ ವ್ಯಾಪ್ತಿಗೆ ಬರುವ ಜವರೇಗೌಡನಪಾಳ್ಯದಲ್ಲಿರುವ ರಸ್ತೆಯು ಮಳೆ ಬಂದರೆ ಸಾಕು ಕೆಸರು ಗದ್ದೆಯಾಗಿ ಪರಿವರ್ತನೆಯಾಗಿ ಜನ ಜಾನುವಾರುಗಳು ಓಡಾಡಲು ಯೋಗ್ಯವಿಲ್ಲದಂತಾಗುತ್ತದೆ. ಈ ಕುರಿತು ಅನೇಕ ಬಾರಿ ಅಧಿಕಾರಿಗಳಿಗೆ ದೂರು ಕೊಟ್ಟರೂ, ಎಷ್ಟೇ ಮನವಿ ಸಲ್ಲಿಸಿದರೂ ಯಾವೊಬ್ಬ ಅಧಿಕಾರಿಗಳು ಈ ಕಡೆ ತಲೆಹಾಕಿಲ್ಲ ಎಂದು ಊರಿನ ಜನ ಆರೋಪಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಇಲಾಖೆಯವರು ಈ ರಸ್ತೆಯನ್ನು ನರೇಗಾ ಅಡಿಯಲ್ಲಿ ಸೇರಿಸಿ ರಸ್ತೆ ನಿರ್ಮಾಣ ಮಾಡಿಸಬಹುದಿತ್ತು. ಆದರೆ ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ಇದರ ಕಡೆ ಗಮನ ಹರಿಸಿಲ್ಲವೆಂದು ಸ್ಥಳೀಯ ಪಂಚಾಯಿತಿ ಸದಸ್ಯ ನರಸಿಂಹಮೂರ್ತಿ ಆಪಾದಿಸಿದ್ದಾರೆ. ಸುಮಾರು ಇಪ್ಪತ್ತು ವರ್ಷಗಳಿಂದಲೂ ದುಸ್ಥಿತಿಯಲ್ಲಿದೆ. ಆದರೂ ನಮ್ಮ ಜನಪ್ರತಿನಿಧಿಗಳು ಈ ಬಗ್ಗೆ ಯಾವುದೇ ರೀತಿಯಲ್ಲಿ ಸ್ಪಂದಿಸುತ್ತಿಲ್ಲ. ಸ್ಥಳೀಯ ಶಾಸಕರನ್ನು ಕೇಳಿದರೆ ಸರ್ಕಾರ ನನಗೆ ಕೊಟ್ಟ ಅನುದಾನ ವಾಪಸ್ ತೆಗೆದುಕೊಂಡಿದೆ, ಇಲ್ಲದಿದ್ದಲ್ಲಿ ನಾನು ಈ ರಸ್ತೆಗೆ ಹಣ ಹಾಕುತ್ತಿದ್ದೆ ಎನ್ನುತ್ತಾರೆ. ಊರಿನ ಒಳಗಡೆ ಸು.900-100 ಮೀಟರ್ ಇರುವ ಈ ಕೆಸರುಗದ್ದೆ ರಸ್ತೆಗೆ ಮುಕ್ತಿ…
ಹುಳಿಯಾರು: ಹಂದನಕೆರೆ ಹೋಬಳಿಯ ದೊಡ್ಡಎಣ್ಣೇಗೆರೆ ಗ್ರಾಮ ಪಂಚಾಯ್ತಿಯ ಉದ್ಯೋಗಖಾತ್ರಿಯಲ್ಲಿ ಅವ್ಯಹಾರ ನಡೆದಿದ್ದು ಮೇಲಧಿಕಾರಿಗಳು ಸೂಕ್ತ ತನಿಖೆ ನಡೆಸುವಂತೆ ತಾಪಂ ಸದಸ್ಯರ ಶ್ರೀಹರ್ಷ ಸೇರಿದಂತೆ ಗ್ರಾಪಂ ಸದಸ್ಯರು ಒತ್ತಾಯಿಸಿದ್ದಾರೆ. ದೊಡ್ಡಎಣ್ಣೇಗೆರೆಯ ಗ್ರಾಪಂ ಕಛೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಎನ್‍ಆರ್‍ಇಜಿ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ಮೀಸಲಿಟ್ಟಿದ್ದ 5 ಲಕ್ಷ ರೂ. ಅನುದಾನದಲ್ಲಿ ಗ್ರಾಪಂ ಸಾಮಾನ್ಯ ಸಭೆಯಲ್ಲಿ ಸದಸ್ಯರ ಗಮನಕ್ಕೆ ತಂದು ಅವರ ಒಪ್ಪಿಗೆ ಪಡೆದು ಕಾಮಗಾರಿ ಆರಂಭಿಸದೆ ಏಕಾಏಕಿ ತಮಗಿಷ್ಟ ಬಂದವರಿಂದ ಕಾಮಗಾರಿ ಮಾಡಿಸುತ್ತಿದ್ದಾರೆ. ಕಾಮಗಾರಿಗೆ ಬೇಕಾದ ಅಗತ್ಯ ವಸ್ತುಗಳನ್ನು ಗುತ್ತಿಗೆದಾರರೇ ತಂದು ಮಾಡಬೇಕಿದ್ದರೂ ಪಂಚಾಯ್ತಿಯಿಂದ ಪ್ರತ್ಯೇಕವಾಗಿ ಪೈಪ್‍ಲೈನ್ ಮಾಡಿ ಕಾಮಗಾರಿ ನೀರು ಪೂರೈಕೆ ಮಾಡುತ್ತಿದ್ದಾರೆ. ಗ್ರಾಪಂನ ಅನೇಕ ಹಳ್ಳಿಗಳಲ್ಲಿ ನಲ್ಲಿ ಹಾಕಿ ನೀರು ಕೊಡಿ ಎಂದು ಕೇಳುತ್ತಿದ್ದರೂ ಸಹ ಅವರಿಗೆ ನಲ್ಲಿ ಸಂಪರ್ಕ ಕೊಡದೆ ಗುತ್ತಿಗೆದಾರರಿಗೆ ನೀರು ಪೂರೈಸಲು ಲಕ್ಷಾಂತರ ರೂ. ವೆಚ್ಚ ಮಾಡಿ ನೀರು ಕೊಟ್ಟಿದ್ದಾರೆ ಎಂದು ಆರೋಪಿಸಿದರಲ್ಲದೆ ಈ ಪೈಪ್ ಲೈನ್ ಕಾಮಗಾರಿಯ ಬಿಲ್…
ತುಮಕೂರು : ತುಮಕೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಯಲ್ಲಿ ಜುಲೈ 19 ಹಾಗೂ 22ರಂದು 130 ಪರೀಕ್ಷಾ ಕೇಂದ್ರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಸುಗಮವಾಗಿ ನಡೆಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ. ನಂಜಯ್ಯ ತಿಳಿಸಿದ್ದಾರೆ. ಜಿಲ್ಲೆಯಲ್ಲಿ 21729 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದರು. ಈ ಪೈಕಿ 21672 ವಿದ್ಯಾರ್ಥಿಗಳು ಹಾಜರಾಗಿದ್ದು, 57 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಖಾಸಗಿಯಾಗಿ 326 ಮತ್ತು 1469 ಪುನಾರವರ್ತಿತ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಕೋವಿಡ್ ಮಾರ್ಗಸೂಚಿ ಅನ್ವಯ ಎಲ್ಲಾ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡಿ, ಪ್ರತಿ ವಿದ್ಯಾರ್ಥಿಯನ್ನು ತಪಾಸಣೆಗೆ ಒಳಪಡಿಸಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು. ಎಲ್ಲಾ ವಿದ್ಯಾರ್ಥಿಗಳಿಗೂ ಪರೀಕ್ಷೆಗೆ ಹಾಜರಾಗುವಂತೆ ಆಯಾ ಶಾಲೆಗಳ ಮುಖ್ಯ ಶಿಕ್ಷಕರು ಹಾಗೂ ಇಲಾಖಾಧಿಕಾರಿಗಳು ಪೋಷಕರನ್ನು ಸಂಪರ್ಕಿಸಿ ಗರಿಷ್ಠ ಹಾಜರಾತಿಗೆ ಕ್ರಮ ವಹಿಸಿದ್ದರು. ಗುಬ್ಬಿ ತಾಲೂಕಿನಲ್ಲಿ ಜುಲೈ 19ರಂದು ಪರೀಕ್ಷೆಗೆ ಗೈರು ಹಾಜರಾಗಿದ್ದ ನಾಗಸಂದ್ರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಲ್ಮಾನ್ ಹಾಗೂ ಕಡಬಾ ಕೆಪಿಎಸ್…
ಕೊರಟಗೆರೆ: ಸ್ವಾತಂತ್ರ್ಯದ ನಂತರ ಭಾರತದ ಶಿಕ್ಷಣವ್ಯವಸ್ಥೆಯಲ್ಲಿ ಬಹುದೊಡ್ಡ ಬದಲಾವಣೆಯಾಗಿದ್ದು, ಕೊರಟಗೆರೆ ವಿಧಾನಸಭಾ ವ್ಯಾಪ್ತಿಯಲ್ಲು ಸಹ ಪ್ರತಿಭಾನ್ವಿತ ಬಡ ಮಕ್ಕಳಿಗೆ 100 ಕೋಟಿ ರೂಗಳ ಅನುದಾನದ ಬೃಹತ್ ವಸತಿಶಾಲೆಗಳನ್ನು ನಿರ್ಮಿಸಲಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ, ಶಾಸಕ ಡಾ.ಜಿ. ಪರಮೇಶ್ವರ್ ತಿಳಿಸಿದರು. ಅವರು ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಸಿದ್ದರಬೆಟ್ಟ ಸಮೀಪದ ನೇಗಳಾಲ ಗ್ರಾಮದ ಹೊರವಲಯದಲ್ಲಿ 24.5 ಕೋಟಿ ರೂಗಳ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಇಂದೀರಾಗಾಂಧಿ ವಸತಿ ಶಾಲೆಯ ಕಟ್ಟಡವನ್ನು ಪರಿಶೀಲಿಸಿ ಮಾತನಾಡಿ, ಸ್ವತಂತ್ರ ನಂತರ ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಬಹುದೊಡ್ಡ ಕ್ರಾಂತಿಯನ್ನು ಕಂಡಿದೆ. 1951ರಲ್ಲಿ ಶೇಕಡ 18.33 ರಷ್ಟಿದ ಸಾಕ್ಷಾರತಾ ಪ್ರಮಾಣವು 2011ರ ಹೊತ್ತಿಗೆ ಶೇಕಡ 74.04 ಕ್ಕೆ ಮಟ್ಟಕ್ಕೆ ಏರಿದೆ. ಇದು ಶಿಕ್ಷಣ ಕ್ಷೇತ್ರದಲ್ಲಿ ಬಹುದೊಡ್ಡ ಸಾಧನೆಯಾಗಿದೆ. ಅದಕ್ಕಾಗಿ ಸರ್ಕಾರವು ಸಾವಿರಾರು ಕೋಟಿ ಯೋಜನೆಗಳನ್ನು ಅಕ್ಷರಜ್ಞಾನಕ್ಕಾಗಿ ನೀಡುತ್ತಿದೆ. ಸಮಾಜದಲ್ಲಿ ಬಡವರು,ತುಳಿತಕ್ಕೆ ಒಳಗಾದವರು ಶಿಕ್ಷಣದಿಂದ ಉನ್ನತ ಸ್ಥಾನವನ್ನು ತಲುಪಿದ್ದಾರೆ. ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಬಿ.ಆರ್ ಅಂಬೇಡ್ಕರ್ ರವರ ಹೋರಾಟ ಮತ್ತು ಶ್ರಮದ ಸಾರ್ಥಕತೆ…
ಚಿಕ್ಕನಾಯಕನಹಳ್ಳಿ: ಲಸಿಕೆಹಾಕುವ ನೆಪದಲ್ಲಿ ಬಂದು ಚಿನ್ನಾಭರಣ ವಂಚಿಸಿದ ಘಟನೆ ತಾಲ್ಲೂಕಿನ ಮಾದಿಹಳ್ಳಿ ಗ್ರಾಮz ತೋಟದ ಮನೆಯಲ್ಲಿ ನಡೆದಿದೆ. ತಾಲ್ಲೂಕಿನ ಶೆಟ್ಟಿಕೆರೆ ಹೋಬಳಿ ಮಾದಿಹಳ್ಳಿ ಗ್ರಾಮದ ರವಿ ಎಂಬುವರಿಗೆ ಅಪರಿಚಿತರು ಕರೆಮಾಡಿ ನಿಮ್ಮ ಮನೆಗೆ ಲಸಿಕೆ ಹಾಕಲು ಬರುತ್ತಿದ್ದೇವೆ ಎಂದು ಮನವಿ ಮಾಡಿದಾಗ ರವೀಶ್ ರವರು ನಾವು ಊರಿನಲ್ಲಿ ಇಲ್ಲವೆಂದು ತಿಳಿಸಿದ್ದಾರೆ. ಆದರೆ ಅವರು ನಿಮ್ಮ ಕುಟುಂಬದವರಿಗೆ ಲಸಿಕೆ ನೀಡುವುದಾಗಿ ತಿಳಿಸಿದ್ದಾರೆ. ನಂತರ ಇಬ್ಬರು ವ್ಯಕ್ತಿಗಳು ಅವರ ಮನೆಗೆ ಬಂದು ಮನೆಯಲ್ಲಿರುವ ಮಹಿಳೆಗೆ ಲಸಿಕೆ ಹಾಕುವುದಾಗಿ ತಿಳಿಸಿ ಲಸಿಕೆ ಹಾಕಲು ಒಡವೆ ತೆಗೆಯಬೇಕೆಂದು ತೆಗೆಸಿಕೊಂಡು ನಂತರ ಬಿಸಿನೀರು ತರಲು ಹೇಳಿದ್ದಾರೆ. ಮನೆಯಿಂದ ಬಿಸಿನೀರು ತರುವಷ್ಟರಲ್ಲಿ ವಂಚಕರು ಒಡೆವೆಯೊಂದಿಗೆ ಪರಾರಿಯಾಗಿದ್ದಾರೆ. ಸುಮಾರು 1.5ಲಕ್ಷರೂ. ಮೌಲ್ಯದ ಚಿನ್ನಾಭರಣ ವಂಚಿಸಲಾಗಿದೆ ಎಂದು ತಿಳಿದುಬಂದಿದ್ದು ಪ್ರಕರಣ ಚಿಕ್ಕನಾಯಕನಹಳ್ಳಿಠಾಣೆಯಲ್ಲಿ ದಾಖಲಾಗಿದ್ದು ತನಿಖೆ ನಡೆದಿದೆ.











