ತುಮಕೂರು : ರಾಮನಗರದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಸಚಿವರಾದ ಅಶ್ವತ್ಥ್ ನಾರಾಯಣ್ ಅವರ ಉದ್ಧಟತನ ತೋರಿ, ವೇದಿಕೆಯಲ್ಲಿ ಗಂಡಸ್ತನದ ಬಗ್ಗೆ ಮಾತನಾಡಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಟೌನ್‍ಹಾಲ್ ವೃತ್ತದಲ್ಲಿ ಸಂಕ್ರಾಂತಿಯ ಎಳ್ಳು ಬೆಲ್ಲ, ಸಕ್ಕರೆ ಅಚ್ಚು ಹಂಚುವ ಮೂಲಕ ವಿನೂತವಾಗಿ ಬುಧವಾರ ಪ್ರತಿಭಟನೆ ನಡೆಸಿದರು. ಉನ್ನತ ಶಿಕ್ಷಣ ಸಚಿವರಾದ ಅಶ್ವತ್ಥನಾರಾಯಣ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ದಿಕ್ಕಾರ ಕೂಗಿ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಕೆಪಿಸಿಸಿ ಮಾಧ್ಯಮ ವಿಶ್ಲೇಷಕರಾದ ಮುರಳೀಧರ ಹಾಲಪ್ಪ ಅವರು, ರಾಮನಗರದಲ್ಲಿ ನಡೆದ ಕೆಂಪೇಗೌಡರ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಯ ಅನಾವರಣ ಕಾರ್ಯಕ್ರಮಕ್ಕೆ ಸ್ಥಳೀಯರನ್ನು ಮತ್ತು ದಲಿತರನ್ನು ಆಹ್ವಾನ ಮಾಡದೆ ಉದ್ಧಟತನ ಪ್ರದರ್ಶನ ಮಾಡಿದ್ದಾರೆ. ಇದನ್ನು ಪ್ರಶ್ನೆ ಮಾಡಿದ್ದು ಸಂಸದರ ತಪ್ಪೇ.? ಸರ್ಕಾರಿ ಕಾರ್ಯಕ್ರಮದಲ್ಲಿ ಪಕ್ಷವನ್ನು ಪ್ರಚಾರ ಮಾಡಲಿಕ್ಕೆ ವೇದಿಕೆಯನ್ನು ಉಪಯೋಗಿಸಿಕೊಂಡಿರುವ, ಶಿಕ್ಷಕರಿಗೆ ಮದರಿಯಾಗಿ, ವಿದ್ಯಾರ್ಥಿಗಳಿಗೆ ಪಾಠ ಮಾಡಬೇಕಾಗಿರುವಂತಹ ಉನ್ನತವಾದ…
Author: News Desk Benkiyabale
ತುಮಕೂರು : ಜಿಲ್ಲಾ ಪೊಲಿಸ್ ಇಲಾಖೆ ಆಯೋಜಿಸಿದ್ದ ಪೊಲಿಸ್ ಕ್ರೀಡಾ ಕೂಟದಲ್ಲಿ ಪತ್ರಕರ್ತರು ಮತ್ತು ಪೊಲಿಸ್ ಇಲಾಖೆಯ ತಂಡಗಳು ಭಾಗವಹಿಸಿದ್ದವು. ಕ್ರಿಕೆಟ್ ಪಂದ್ಯದಲ್ಲಿ ರೋಚಕವಾದ ಆಟ ಆಡುವ ಮುಖೇನ ತಂಡಗಳು ಉತ್ತಮ ಪ್ರದರ್ಶನ ನೀಡಿದವು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಾಪುರ್‍ವಾಡ್ ನೇತೃತ್ವದಲ್ಲಿ ನಡೆದ ಸೌಹಾರ್ದಯುತ ಕ್ರೀಡಾ ಕೂಟದ ಪಂದ್ಯ ಪೊಲಿಸ್ ಇಲಾಖೆ ಮತ್ತು ಪತ್ರಕರ್ತರ ನಡುವಿನ ಬಾಂಧವ್ಯ ಬೆಸೆಯುವ ಅವಿನಾಭಾವ ಸಂಬಂಧ ಗಟ್ಟಿಗೊಳಿಸುವ ನಿಟ್ಟಿನಲ್ಲಿ ಕಂಡು ಬಂದಿತು.
ತುಮಕೂರು: ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಏಕಕಾಲಕ್ಕೆ ಇಬ್ಬರು ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಸುರೇಶ್ ಗೌಡ ರಾಜೀನಾಮೆ ನೀಡಿದ ನಂತರ ಖಾಲಿಯಿದ್ದ ಸ್ಥಾನಕ್ಕೆ ತಿಗಳ ಸಮುದಾಯದ ಲಕ್ಷ್ಮೀಶ್, ಕುರುಬ ಸಮುದಾಯದ ಬಿ.ಕೆ.ಮಂಜುನಾಥ್ ಅವರನ್ನು ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇಮಕ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಬಿಜೆಪಿಗೆ ಇಬ್ಬರನ್ನು ಅಧ್ಯಕ್ಷ ಗಾದಿಗೆ ಕೂರಿಸಲಾಗಿದೆ. ಲಕ್ಷ್ಮೀಶ್ ಅವರಿಗೆ 7 ತಾಲೂಕುಗಳಾದ ತುಮಕೂರು ನಗರ, ಗ್ರಾಮಾಂತರ, ಕುಣಿಗಲ್, ತುರುವೇಕೆರೆ, ತಿಪಟೂರು, ಚಿಕ್ಕನಾಯಕನಹಳ್ಳಿ, ಗುಬ್ಬಿ ತಾಲೂಕಿನ ಜವಾಬ್ದಾರಿ ವಹಿಸಲಾಗಿದೆ. ಮಧುಗಿರಿ, ಕೊರಟಗೆರೆ, ಶಿರಾ, ಪಾವಗಡ 4 ತಾಲೂಕಿನ ಉಸ್ತುವಾರಿಯನ್ನು ಬಿ.ಕೆ.ಮಂಜುನಾಥ್ ಹೆಗಲಿಗೆ ನೀಡಲಾಗಿದೆ. ಸಂಘ ಪರಿವಾರದಲ್ಲಿ ಗುರುತಿಸಿಕೊಂಡಿರುವ ಲಕ್ಷ್ಮೀಶ್ ಅವರು ಅಧ್ಯಕ್ಷ ಗಾದಿಯ ಮೇಲೆ ಬಹಳ ದಿನಗಳಿಂದ ಕಣ್ಣಿಟ್ಟಿದ್ದರು. ಶಿರಾ ಭಾಗದಲ್ಲಿ ಬಿಜೆಪಿ ಯನ್ನು ಸಂಘಟಿಸುತ್ತಿರುವ ಮಂಜುನಾಥ್ ಅವರಿಗೆ ಬಯಸದೆ ಅಧ್ಯಕ್ಷ ಹುದ್ದೆ ಒಲಿದಿದೆ. ಮಧುಗಿರಿ ಜಿಲ್ಲೆ ಯಾವಾಗ ಆಯ್ತು? …
ತುಮಕೂರು : ಜಿಲ್ಲೆಯಲ್ಲಿ ಕೊರೋನಾ ಪಾಸಿಟೀವ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸಬೇಕು ಎಂ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಿತ್ಯ 3400 ಪರೀಕ್ಷೆ ನಡೆಸುವ ಗುರಿ ಹೊಂದಲಾಗಿದ್ದು, ತುಮಕೂರು ತಾಲೂಕು 700 ಹಾಗೂ ಎಲ್ಲಾ ತಾಲೂಕುಗಳು ಪ್ರತಿದಿನ ತಲಾ 350ರಂತೆ ಕೋವಿಡ್ ಪರೀಕ್ಷೆಗಳನ್ನು ನಡೆಸಬೇಕು. ಪಾಸಿಟೀವ್ ಪ್ರಕರಣಗಳು ಹೆಚ್ಚಾಗಿರುವ ಪ್ರದೇಶಗಳಲ್ಲಿ ಕಡ್ಡಾಯವಾಗಿ ಆರ್‍ಟಿಪಿಸಿಆರ್ ಪರೀಕ್ಷೆಯನ್ನು ನಡೆಸಬೇಕು ಹಾಗೂ ಪರೀಕ್ಷೆ ನಡೆಸಿರುವ ಕುರಿತು 2 ದಿನಗಳೊಳಗೆ ವರದಿ ನೀಡಬೇಕು. ನಿಗಧಿತ ಸಮಯದೊಳಗೆ ಪರೀಕ್ಷಾ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ತಿಳಿಸಿದರು. ಕೋವಿಡ್ ಪರೀಕ್ಷೆಗೊಳಪಡಿಸಿದ 24 ಗಂಟೆಗಳೊಳಗೆ ವರದಿ ಸಿದ್ಧಪಡಿಸಬೇಕು. ಜಿಲ್ಲೆಯಲ್ಲಿ ಪ್ರಸ್ತುತ 64 ಸಕ್ರಿಯ ಕೋವಿಡ್ ಪ್ರಕರಣಗಳಿದ್ದು, ತೀವ್ರ ನಿಗಾ ಘಟಕದಲ್ಲಿರುವ ಯಾವುದೇ ಪ್ರಕರಣ ಗಳು ಇರುವುದಿಲ್ಲ.…
ತುಮಕೂರು : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗಾಗಿ ಮಠದ ವತಿಯಿಂದ ವಿದ್ಯಾರ್ಥಿ ನಿಲಯ ಸ್ಥಾಪಿಸಿ, ಶೈಕ್ಷಣಿಕ ಕ್ಷೇತ್ರಕ್ಕೆ ಮುರುಘ ಮಠದ ಕೊಡುಗೆ ಅಪಾರ ಎಂದು ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಅಭಿಪ್ರಾಯಪಟ್ಟರು. ನಗರದ ಜಯದೇವ ವಿದ್ಯಾರ್ಥಿ ನಿಲಯದಲ್ಲಿ ಶ್ರೀಶಿವಮೂರ್ತಿಮುರುಘರಾಜೇಂದ್ರ ಸಭಾಂಗಣ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತಿದ್ದ ಅವರು,ಸಮಾಜದ ಜೊತೆ ಜೊತೆಗೆ ಸಣ್ಣಪುಟ್ಟ ಸಮುದಾಯಗಳ ಸ್ವಾಮೀಜಿಗಳಿಗೆ ದೀಕ್ಷೆ ನೀಡಿ, ಬಸವಣ್ಣ ತತ್ವವನ್ನು ಅಳವಡಿಸಿಕೊಂಡಿರುವ ನಿಜಯೋಗಿ ಎಂದು ತಿಳಿಸಿದರು. ಬಸವಣ್ಣನವರ ತತ್ವಗಳನ್ನು ನಮಗೆ ಅರ್ಥವಾಗಿದ್ದು ಕಡಿಮೆ, ಶರಣ ಧರ್ಮದ ಬಗ್ಗೆ ಉತ್ತಮವಾದ ಕೆಲಸಗಳಾಗುತ್ತಿರುವುದು ಸಿದ್ಧಗಂಗಾ ಮಠ ಮತ್ತು ಮುರುಘ ಮಠದಿಂದ ಇಂತಹ ಇನ್ನ?À್ಟು ಕಾರ್ಯಗಳು ಹೆಚ್ಚಬೇಕಿದೆ, ಮನುಷ್ಯ ನಿಗೆ ಸಮಾಧಾನವೇ ಅವಶ್ಯಕ.ಸಮಾಧಾನವಿದ್ದರೆ ನೆಮ್ಮದಿ, ಸಂತೋ?À ಸಿಗುತ್ತದೆ ಅದಕ್ಕಾಗಿ ಆಧ್ಯಾತ್ಮಿಕ ಚಿಂತನೆಗಳು ಅಗತ್ಯ ಎಂದರು. ತಂತ್ರಜ್ಞಾನ ಹೆಚ್ಚಾದಂತೆ ಆಧ್ಯಾತ್ಮಿಕ ಚಿಂತನೆಗಳು ಕಡಿಮೆಯಾಗುತ್ತಿವೆ.ಆಧ್ಯಾತ್ಮಿಕ ಚಿಂತನೆ,ಮನಸ್ಸಿನ ಸಂದ್ಧಿಗ್ನತೆ ದೂರವಾಗಿಸುವ ನಿಟ್ಟಿನಲ್ಲಿ ವೇದಿಕೆಯನ್ನು ಮುರುಘಾಶರಣರು ಮಾಡಿ ಕೊಟ್ಟಿದ್ದಾರೆ,…
ತುಮಕೂರು : ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ದಿನದ 24ಗಂಟೆಯೂ ಕಾರ್ಯನಿರ್ವಹಿಸುವ ಪೊಲೀಸರ ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಹೇಳಿದರು. ನಗರದ ಜಿಲ್ಲಾ ಪೊಲೀಸ್ ಇಲಾಖೆಯ ಡಿಎಆರ್ ಮೈದಾನದಲ್ಲಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಬಲೂನ್ ಗಳನ್ನು ಹಾರಿ ಬಿಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಪೊಲೀಸರು ಸಮಾಜದಲ್ಲಿ ಅಪರಾಧ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ತಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸದೆ ಕಾರ್ಯನಿರ್ವಹಿಸುತ್ತಾರೆ. ಸದಾ ಒತ್ತಡದಲ್ಲಿ ಕೆಲಸ ಮಾಡುವ ಪೊಲೀಸರಿಗೆ ವರ್ಷಕ್ಕೊಮ್ಮೆ ಇಂತಹ ಕ್ರೀಡಾ ಕೂಟಗಳನ್ನು ಆಯೋಜಿಸುವುದು ತುಂಬಾ ಆರೋಗ್ಯಕರ ಬೆಳವಣಿಗೆ ಎಂದರು. ನಿಂದನೆಗಳು, ಸೋಲು-ಗೆಲುವು ಎದುರಾದಾಗ ಯಾವ ರೀತಿ ಎದುರಿಸಬೇಕು ಎಂಬುದನ್ನು ಕ್ರೀಡೆ ಕಲಿಸುತ್ತದೆ ಎಂದರು. ಸಮಯ, ಶಿಸ್ತು ಪಾಲನೆ ಜೊತೆಗೆ ಧೈರ್ಯವನ್ನು ಪೊಲೀಸ್ ಇಲಾಖೆ ಕಲಿಸುತ್ತದೆ ಎಂದು ಅವರು ತಿಳಿಸಿದರು. ವರ್ಷಪೂರ್ತಿ ಒತ್ತಡದಲ್ಲಿ ಕಾರ್ಯ ನಿರ್ವಹಿಸುವ…
ತುಮಕೂರು : ಆಡು ಮುಟ್ಟದ ಸೊಪ್ಪಿಲ್ಲ, ಕುವೆಂಪು ರಚಿಸದ ಸಾಹಿತ್ಯ ಪ್ರಕಾರವಿಲ್ಲ ಎಂದು ಕವಿ, ಚಿತ್ರ ಸಾಹಿತಿ ಹಾಗೂ ನಿಯೋಜಿತ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಡಾ. ದೊಡ್ಡರಂಗೇಗೌಡ ನುಡಿದರು. ನಗರದ ಅಮಾನಿಕೆರೆ ರಸ್ತೆಯಲ್ಲಿರುವ ಕನ್ನಡ ಭವನದಲ್ಲಿಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳ ಉದ್ಘಾಟನೆ, ಕುವೆಂಪು ಜಯಂತಿ, ಅಭಿನಂದನಾ ಸಮಾರಂಭ ಹಾಗೂ ಪ್ರೇರಣಾ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜ್ಞಾನಕ್ಕೆ ಮತ್ತೊಂದು ಹೆಸರೇ ಕುವೆಂಪು. ಅವರು ತಮ್ಮ ಜ್ಞಾನದಿಂದ ವಸ್ತು-ವಿಷಯದ ನಿಜವಾದ ಸಾರಸಂಗ್ರಹವನ್ನು ಸಮರ್ಥವಾಗಿ ಬಣ್ಣಿಸುವ ಶಕ್ತಿ ಹೊಂದಿದ್ದರು. ಆದ್ದರಿಂದಲೇ ಅವರೊಬ್ಬ ವಾಗ್ದೇವಿಯ ಶಬ್ದ ಭಂಡಾರವನ್ನು ಸೂರೆಗೈದ ಕನ್ನಡದ ಏಕೈಕ ಮೇರು ಕವಿ ಎಂದರಲ್ಲದೆ, ಕನ್ನಡದ ಮತ್ತೋರ್ವ ಸಾಹಿತ್ಯ ಶ್ರೇಷ್ಠ ವರಕವಿ ದ.ರಾ.ಬೇಂದ್ರೆಯವರು ಕುವೆಂಪು ಅವರನ್ನು ಯುಗದ ಕವಿ, ಜಗದ ಕವಿ ಎಂದು ಬಣ್ಣಿಸಿದ್ದಾರೆಂಬುದನ್ನು ಸ್ಮರಿಸಿದರು. ಕನ್ನಡ…
ಚಿಕ್ಕನಾಯಕನಹಳ್ಳಿ : ಪೊಲೀಸ್ ಠಾಣಾ ಕಟ್ಟಡದ ಶಂಕುಸ್ಥಾಪನೆಗೆ ಆಗಮಿಸಿದ್ದ ತುಮಕೂರು ಜಿಲ್ಲಾ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪುರ್ ವಾಡ್ ಮಾರ್ಗ ಮಧ್ಯೆದಲ್ಲಿ ಕುಪ್ಪುರು ತಮ್ಮಡಿಹಳ್ಳಿ ವಿರಕ್ತಮಠಕ್ಕೆ ಧಿಡೀರ್ ಭೇಟಿ ನೀಡಿದರು . ಇದೆ ಸಂದರ್ಭದಲ್ಲಿ ಬೆಟ್ಟದ ಪರ್ವತ ಮಲ್ಲಿಕಾರ್ಜುನ ಸ್ವಾಮಿಗೆ ಭಕ್ತಿ ಸಮರ್ಪಿಸಿದ ಅವರು ಸಮಾಜದ ಉದ್ದಾರ ಹಾಗೂ ಏಳಿಗೆಗಾಗಿ ಹಾಗೂ ಸಮಾಜದ ಶಾಂತಿಗಾಗಿ ಪರ್ವತ ಮಲ್ಲಿಕಾರ್ಜುನ ಸ್ವಾಮಿ ಬಳಿ ಸಂಕಲ್ಪ ಮಾಡುವ ಮೂಲಕ ಕೈ ಅಪ್ಪಣೆಗೆ ಮುಂದಾದರು ಭಕ್ತನಿಗೂ ಮತ್ತು ದೇವರಿಗೂ ನಡುವಿನ ಅಂತರ ದೂರವಿದ್ದ ಕಾರಣ ಕೈಅಪ್ಪನಣೆ 10 ಭಾರಿ ಆಗಲಿಲ್ಲ ಆಗದೆ ಒದರು ಛಲ ಬಿಡದ ತ್ರಿವಿಕ್ರಮನಂತೆ ಜಿಲ್ಲಾ ವರಿಷ್ಠಾಧಿಕಾರಿ ಜನತೆಯ ಶಾಂತಿಗಾಗಿ ಕರ್ಪುರ ದೀವಿಗೆಯನ್ನ ಹಚ್ಚಿ ಕೇಳಿದ ನಂತರ ಬೆಟ್ಟದ ಪರ್ವತ ಮಲ್ಲಿಕಾರ್ಜುನ ತುಂಬೆ ಹೂವಿನ ಮೂಲಕ ಪುಷ್ಪ ವೃಷ್ಟಿ ರೀತಿಯಲ್ಲಿ ಆಶೀರ್ವದಿಸಿದ್ದು ಪವಾಡವೇ ಸರಿ ಬೆಟ್ಟದ 150 ಎಕರೆ ಗೌನ್ದಾರ್ಣ್ಯದ ಸೊಬಗನ್ನ ವೀಕ್ಷಿಸಿದ…
ತುಮಕೂರು : ಹೊಸ ವರ್ಷಾಚರಣೆ ಸನ್ನಿಹಿತದಲ್ಲಿರುವ ಹಿನ್ನೆಲೆಯಲ್ಲಿ ಜನಸಂದಣಿ ನಿಯಂತ್ರಣ ಅತ್ಯಗತ್ಯವಾಗಿದ್ದು, ಸರ್ಕಾರದ ಆದೇಶದನ್ವಯ ಜಿಲ್ಲೆಯಲ್ಲಿ ಇಂದಿನಿಂದ ನೈಟ್ ಕಫ್ರ್ಯೂ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಡಿ.28ರಿಂದ ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆಯವರೆಗೆ ನೈಟ್ ಕಫ್ರ್ಯೂ ಜಾರಿಗೆ ಬರಲಿದ್ದು, ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ. ಅದೇ ರೀತಿ ಡಿಸೆಂಬರ್ 30 ರಿಂದ 2022ರ ಜನವರಿ 2ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಸಭೆ, ಸಮಾರಂಭಗಳನ್ನು ನಡೆಸುವುದನ್ನು ಹಾಗೂ ಹೆಚ್ಚು ಜನ ಸೇರುವುದನ್ನು ನಿಷೇಧಿಸಲಾಗಿದೆ. ಅಗತ್ಯ ಚಟುವಟಿಕೆಗಳನ್ನು ಹೊರತುಪಡಿಸಿ ಅನಗತ್ಯವಾಗಿ ಓಡಾಡುವಂತಿಲ್ಲ. ಮದುವೆಯಲ್ಲಿ 300 ಮಂದಿ ಮಾತ್ರ ಭಾಗವಹಿಸಲು ಅವಕಾಶವಿದೆ ಎಂದು ಅವರು ತಿಳಿಸಿದರು. ಔಷಧಾಲಯಗಳು, ಆರೋಗ್ಯ ಕೇಂದ್ರಗಳು ಎಂದಿನಂತೆ ಕಾರ್ಯ ನಿರ್ವಹಿಸಲಿದ್ದು, ವೈದ್ಯಕೀಯ ತುರ್ತು ಇರುವಲ್ಲಿ ರೋಗಿಗಳು ಮತ್ತು…
ತುಮಕೂರು : ಜಿಲ್ಲೆಯಲ್ಲಿ 2021-22ನೇ ಮುಂಗಾರು ಋತುವಿನ ಅವಧಿಗೆ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿಸಲು 2022ರ ಜನವರಿ 1 ರಿಂದ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಶುಕ್ರವಾರ ನಡೆದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಸರ್ಕಾರ ನಿಗಧಿಪಡಿಸಿರುವ ಬೆಂಬಲ ಬೆಲೆಯಲ್ಲಿ ರೈತರಿಂದ ರಾಗಿ ಖರೀದಿಸಲು ಜನವರಿ 1 ರಿಂದ 20ರವರೆಗೆ ಕೋವಿಡ್ ನಿಯಮಗಳನ್ನು ಅನುಸರಿಸುವ ಮೂಲಕ ರೈತರ ನೋಂದಣಿಗೆ ಸೂಕ್ತ ಕ್ರಮ ಕೈಗೊಳ್ಳುವುದಲ್ಲದೆ, ವ್ಯವಸ್ಥಿತವಾಗಿ ನೋಂದಣಿ ಪ್ರಕ್ರಿಯೆಯನ್ನು ನಡೆಸಬೇಕೆಂದು ಸೂಚಿಸಿದರು. ರೈತರು ನೋಂದಣಿಯನ್ನು ಆಯಾ ಖರೀದಿ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಮಾಡಿಕೊಳ್ಳಬೇಕಾಗುತ್ತದೆ. ಕೃಷಿ ಇಲಾಖೆ ನೀಡಿರುವ ‘FRUITS ID’’ ಯನ್ನು ಮಾತ್ರ ಹಾಜರುಪಡಿಸಿ ನೋಂದಾಯಿಸಿಕೊಳ್ಳಬೇಕು ಎಂದರಲ್ಲದೆ, ಸರ್ಕಾರ ನಿಗಧಿಪಡಿಸಿರುವ ಮಾನದಂಡವನ್ನು ಅನುಸರಿಸಿ ಎಫ್.ಎ.ಕ್ಯೂ. ಗುಣಮಟ್ಟದ ರಾಗಿಯನ್ನು…











