Author: News Desk Benkiyabale

ತುಮಕೂರು: ಜಿಲ್ಲಾಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜು ಖಾಸಗಿ ಸಹಭಾಗಿತ್ವ (ಪಿಪಿಪಿ) ಸ್ಥಾಪನೆ ಕೈಬಿಡುವಂತೆ ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಐ)ದ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಜಮಾಯಿಸಿದ ಭಾರತ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ಈ ಸಂಬ0ಧ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಪ್ರತಿಭಟನಾಕಾರರನ್ನುದ್ದೇಶಿಸಿ ಭಾರತ ಕಮ್ಯನಿಸ್ಟ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಗಿರೀಶ್ ಮಾತನಾಡಿ, ಈಗಾಗಲೇ ತುಮಕೂರು ಜಿಲ್ಲಾಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಹಾಗೂ ನವೀಕರಣದ ನೆಪದಲ್ಲಿ ನೆಲಸಮ ಮಾಡಿ ಖಾಸಗಿ ಸಹಭಾಗಿತ್ವಕ್ಕೆ ಒಪ್ಪಿಸಲು ಸಿದ್ಧತೆ ನಡೆಸಿರುವುದು ಖಂಡನೀಯ. ಸುಮಾರು ೩೨ ಎಕರೆ ಇದ್ದು ಜಿಲ್ಲಾಸ್ಪತ್ರೆಯನ್ನು ೫ ಎಕರೆಯಷ್ಟನ್ನು ಒತ್ತುವರಿ ಮಾಡಲಾಗಿದೆ ಎಂದು ಆರೋಪಿಸಿದರು. ಸಾವಿರಾರು ಕೋಟಿ ಬೆಲೆ ಬಾಳುವ ೩೨ ಎಕರೆ ಜಾಗದಲ್ಲಿ ಇರುವ ಜಿಲ್ಲಾಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜು ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ) ನಿರ್ಮಾಣ ಮಾಡಿದರೆ ಮುಂದೆ ಖಾಸಗಿಯವರ ಸ್ವತ್ತಾಗಲಿದೆ. ಇದರಿಂದಾಗಿ ಬಡ ಮಕ್ಕಳು ವೈದ್ಯರಾಗುವ ಕನಸು ನನಸಾಗುವುದಿಲ್ಲ.…

Read More

ತುಮಕೂರು: ಕಬ್ಬಿಗೆ ಹೆಚ್ಚಿನ ದರ ನಿಗದಿಗೆ ಆಗ್ರಹಿಸಿ ಬೆಳಗಾಂನಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟವನ್ನು ಬೆಂಬಲಿಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೂಡಲೇ ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಹಾಗೂ ಹುಳಿಯಾರಿನಲ್ಲಿ ಕಳೆದ ೩೦ ದಿನಗಳಿಂದ ನಡೆಯುತ್ತಿರುವ ಕಸ ವಿಲೇವಾರಿ ಘಟಕದ ರೈತರ ಹೋರಾಟ ಬೆಂಬಲಿಸಿ, ಕೂಡಲೇ ಸಮಸ್ಯೆ ಇತ್ಯರ್ಥಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಜಮಾಯಿಸಿದ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಈ ಸಂಬAಧ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಪ್ರತಿಭಟನಾಕಾರರನ್ನು ಉದ್ದೇಶಿಸಿ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಹಾಗೂ ರಾಜ್ಯ ಉಪಾಧ್ಯಕ್ಷ ಎ. ಗೋವಿಂದರಾಜು ಮಾತನಾಡಿ, ಕಳೆದ ೮ ದಿನಗಳಿಂದ ಬೆಳಗಾಂನಲ್ಲಿ ರೈತರು ಪ್ರತಿ ಟನ್ ಕಬ್ಬಿಗೆ ೩೫೦೦ ರೂ. ದರ ನಿಗದಿಪಡಿಸಬೇಕು ಎಂದು ಆಗ್ರಹಿಸಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಆದರೆ ಸರ್ಕಾರ ಕಬ್ಬು ಬೆಳೆಗಾರರ ಬೇಡಿಕೆಯನ್ನು…

Read More

ತುಮಕೂರು: ಡಿಜಿಟಲ್ ಮಾಧ್ಯಮವು ಮುಂದಿನ ದಿನಗಳಲ್ಲಿ ಸ್ಥಳೀಯ ಮಟ್ಟದಲ್ಲಿ ಹೆಚ್ಚಿನ ಯಶಸ್ಸು ಕಾಣಲಿದೆ. ಸಾಂಪ್ರದಾಯಿಕ ಮಾಧ್ಯಮಗಳಿಗಿಂತ ಡಿಜಿಟಲ್ ಮಾಧ್ಯಮವು ಹೆಚ್ಚು ಮಂದಿಯನ್ನು ತುಂಬ ವೇಗವಾಗಿ ತಲುಪುವ ಗುಣವೇ ಇದಕ್ಕೆ ಕಾರಣ ಎಂದು  ರವಿತೇಜ ಚಿಗಳಿಕಟ್ಟೆ ತಿಳಿಸಿದರು. ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಬುಧವಾರ ಹಮ್ಮಿಕೊಂಡಿದ್ದ ‘ಆರಂಭ-೨೦೨೫’ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಕಳೆದ ಎರಡು ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಹೆಚ್ಚು ಮಂದಿಯನ್ನು ಪರಿಣಾಮಕಾರಿಯಾಗಿ ತಲುಪುತ್ತಿದೆ. ವೆಬ್ ಮಾಧ್ಯಮ, ವಿವಿಧ ಬಗೆಯ ಆ್ಯಪ್ ಹಾಗೂ ಸಾಮಾಜಿಕ ಮಾಧ್ಯಮಗಳ ಮೂಲಕ ಜನರನ್ನು ತಲುಪುವುದು ಈಗ ಸುಲಭವಾಗಿದೆ. ಆರ್ಥಿಕವಾಗಿಯೂ ಈ ಮಾಧ್ಯಮಗಳು ಯಶಸ್ಸು ಕಾಣಲಾರಂಭಿಸಿವೆ ಎಂದರು. ಮಾಧ್ಯಮರ0ಗದಲ್ಲಿ ಉತ್ತಮ ಸಾಧನೆ ಮಾಡಬೇಕಾದರೆ ಕೌಶಲ ಮುಖ್ಯ. ಅದರಲ್ಲೂ ಡಿಜಿಟಲ್ ಮಾಧ್ಯಮಗಳಲ್ಲಿ ತೊಡಗಿ ಸಿಕೊಳ್ಳುವವರಿಗೆ ಅನೇಕ ಕೌಶಲಗಳನ್ನು ಏಕಕಾಲದಲ್ಲಿ ಪ್ರಯೋ ಗಿಸುವ ಕೌಶಲ ಇರಬೇಕು. ಉತ್ತಮ ಕಂಟೆ0ಟ್ ನಿರಂತ ರವಾಗಿ ನೀಡುವುದು ಡಿಜಿಟಲ್ ಮಾಧ್ಯಮದ ಪ್ರಮುಖ ಸವಾಲು ಎಂದರು. ಡಿಜಿಟಲ್ ಮಾಧ್ಯಮಗಳು ಸ್ಥಳೀಯ…

Read More

ತುಮಕೂರು:  ಸಿದ್ಧಗಂಗಾ ಮಠದ ಡಾ. ಶ್ರೀ ಶಿವಕುಮಾರ ಸ್ವಾಮಿಗಳು ತಮ್ಮ ಮಠದಲ್ಲಿಯೇ ಅಲ್ಲದೆ ರಾಜ್ಯದ ವಿವಿಧಡೆ ಕನ್ನಡ ಮಾಧ್ಯಮದ ಐವತ್ತೇಂಟು ಪ್ರೌಢಶಾಲೆಗಳನ್ನು ತೆರೆದದ್ದೇ ಅಲ್ಲದೆ ತಮ್ಮ ಸಿದ್ಧಗಂಗಾ ಪುರಾತನ ಸಂಸ್ಥೆಯ ಮೂಲಕ ೧೫೦ಕ್ಕೂ ಹೆಚ್ಚು ಕನ್ನಡ ಸಾಹಿತ್ಯದ ಕೃತಿಗಳನ್ನು ಪ್ರಕಟಿಸಿ ಕನ್ನಡ ಭಾಷೆ ಮತ್ತು ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿರುವುದರಿಂದ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಿರುವ ಸರ್ಕಾರದ ತುಮಕೂರು ವಿಶ್ವವಿದ್ಯಾನಿಲಯಕ್ಕೆ ಡಾ. ಶಿವಕುಮಾರಸ್ವಾಮೀಜಿಯವರ ಹೆಸರನ್ನು ನಾಮಕರಣ ಮಾಡಬೇಕು ಎಂದು ಇತಿಹಾಸ ಸಂಶೋಧಕ ಡಾ. ಡಿ.ಎನ್.ಯೋಗೀಶ್ವರಪ್ಪ ಆಗ್ರಹ ಪಡಿಸಿದರು. ಅವರು ನಗರದ ಶ್ರೀ ಸಿದ್ಧಗಂಗಾ ಮಹಿಳಾ ಕಾಲೇಜಿನಲ್ಲಿ ಏರ್ಪಡಿಸಿದ್ದ ೭೦ನೇ ಕರ್ನಾಟಕ ರಾಜ್ಯೋತ್ಸವವನ್ನು ಉದ್ಘಾಟನೆ ಮಾತನಾಡಿದರು. ಅರವತ್ತರ ದಶಕದಲ್ಲಿ ಕರ್ನಾಟಕದಲ್ಲಿ ಕನ್ನಡ ಭಾಷೆಯ ಅಭಿವೃದ್ಧಿಗಾಗಿ ಇದ್ದ ಎರಡೇ ಕಾಲೇಜುಗಳಲ್ಲಿ ಮೈಸೂರು ಸರ್ಕಾರ ತನ್ನ ಕಾಲೇಜನ್ನು ಮುಚ್ಚಿದರೂ ಪೂಜ್ಯ ಶಿವಕುಮಾರ ಸ್ವಾಮಿಗಳು ಅದನ್ನು ಮುಚ್ಚದೆ ನಷ್ಟವಾ ದರೂ ಅದನ್ನು ಬಲಪಡಿಸಿ ಮುಂದುವರಿಸಿಕೊ0ಡು ಬಂದಿದ್ದು ಕನ್ನಡ ಭಾಷೆಯ ಮೇಲಿನ ಅವರ ಅಗಾಧ ಪ್ರೀತಿಯನ್ನು ತೋರಿಸುತ್ತದೆ…

Read More

ತುಮಕೂರು: ಬಿದರಕಟ್ಟೆಯಲ್ಲಿರುವ ತುಮಕೂರು ವಿಶ್ವವಿದ್ಯಾನಿಲಯದ ನೂತನ ಕ್ಯಾಂಪಸ್ ‘ಜ್ಞಾನಸಿರಿ’, ಶೈಕ್ಷಣಿಕ ಭವನ ಹಾಗೂ ಇತರ ಕಟ್ಟಡಗಳ ಲೋಕಾರ್ಪಣಾ ಸಮಾರಂಭವನ್ನು ನ.೦7 ರಂದು ಬೆಳಗ್ಗೆ ೧೧-೦೦ ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ಕುಲಾಧಿಪತಿಗಳಾದ ಶ್ರೀ ಥಾವರ್‌ಚಂದ್ ಗೆಹ್ಲೋಟ್ ಅವರು ನೂತನ ಕ್ಯಾಂಪಸ್ ಲೋಕಾರ್ಪಣೆ ಮಾಡಲಿದ್ದಾರೆ. ಕರ್ನಾಟಕದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ನೂತನವಾಗಿ ನಿರ್ಮಾಣಗೊಂಡಿರುವ ಶೈಕ್ಷಣಿಕ ಭವನ ಹಾಗೂ ಇತರ ಕಟ್ಟಡಗಳ ಉದ್ಘಾಟನೆ ಮಾಡಲಿದ್ದಾರೆ. ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಡಿ. ಕೆ. ಶಿವಕುಮಾರ, ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವರಾದ ಶ್ರೀ ವಿ. ಸೋಮಣ್ಣ, ಗೃಹಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ. ಪರಮೇಶ್ವರ ಅವರು ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವರು ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ಸಹ ಕುಲಾಧಿಪತಿಗಳಾಗಿರುವ ಡಾ. ಎಂ. ಸಿ. ಸುಧಾಕರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ಸರ್ಕಾರದ ನವದೆಹಲಿ ಪ್ರತಿನಿಧಿಗಳಾದ ಶ್ರೀ ಟಿ.…

Read More

ತುಮಕೂರು: ತುಮಕೂರು ಗ್ರಾಮಾಂತರ ಕ್ಷೇತ್ರದ ಹೊನ್ನುಡಿಕೆಯ ದೊಡ್ಡ ಕೆರೆ ತುಂಬಿದ ಸಂದರ್ಭದಲ್ಲಿ ಮಂಗಳವಾರ ಸಂಜೆ ಶಾಸಕ ಬಿ.ಸುರೇಶ್‌ಗೌಡರು ಗಂಗಾಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು. ಇದರ ಅಂಗವಾಗಿ ಗ್ರಾಮದ ಹೊನ್ನಾದೇವಿ, ಲಕ್ಷಿö್ಮÃದೇವರ ವೈಭವದ ತೆಪ್ಪೋತ್ಸವ ನಡೆಯಿತು. ಅಲಂಕೃತ ತೆಪ್ಪದಲ್ಲಿ ಪ್ರತಿಷ್ಠಾಪಿಸಿದ್ದ ದೇವರ ಮೂರ್ತಿಗಳಿಗೆ ಶಾಸಕರು ಪೂಜೆ ಸಲ್ಲಿಸಿ ತೆಪ್ಪೋತ್ಸವಕ್ಕೆ ಚಾಲನೆ ನೀಡಿದರು. ಮಾಗಡಿ ಜಡೆದೇವರ ಮಠ ಹಾಗೂ ಹೊನ್ನುಡಿಕೆ ಗೋಸಲ ಚನ್ನಬಸವೇಶ್ವರ ಗದ್ದಿಗೆ ಮಠದ ಇಮ್ಮಡಿ ಬಸವರಾಜ ಸ್ವಾಮೀಜಿ, ಶಿವಗಂಗೆಯ ಮಲಯ ಶಾಂತಮುನಿ ಸ್ವಾಮೀಜಿಗಳ ಸಮ್ಮುಖದಲ್ಲಿ ಪೂಜಾ ಕಾರ್ಯಕ್ರಮಗಳು ನೆರವೇರಿದವು. ಹೊನ್ನುಡಿಕೆ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನ ಆಗಮಿಸಿ ತೆಪ್ಪೋತ್ಸವವನ್ನು ಕಣ್ತುಂಬಿಕೊAಡು ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಶಾಸಕರು ಹೆಣ್ಣುಮಕ್ಕಳಿಗೆ ಉಡುಗೊರೆಯಾಗಿ ಸೀರೆ ವಿತರಿಸಿದರು. ಈ ವೇಳೆ ಮಾತನಾಡಿದ ಶಾಸಕ ಸುರೇಶ್‌ಗೌಡರು, ವರುಣನ ಕೃಪೆಯಿಂದ ಹಾಗೂ ಹೇಮಾವತಿ ನೀರು ಹರಿಸಿದ್ದರಿಂದ ಗ್ರಾಮಾಂತರ ಕ್ಷೇತ್ರದ ಹಲವಾರು ಕೆರೆಗಳು ತುಂಬುತ್ತಿವೆ. ಪ್ರತಿ ವರ್ಷ ಹೀಗೇ ಕೆರೆಗಳು ತುಂಬಲಿ ಎಂದು ದೇವರಲ್ಲಿ ಪ್ರಾರ್ಥಿಸೋಣ. ರೈತರಿಗೆ ಸಂತೃಷ್ಟ ನೀರು, ಸಮರ್ಪಕ…

Read More

ತುಮಕೂರು: ಸರ್ಕಾರಿ ಶಾಲೆಗಳ ಬಗ್ಗೆ ಅಸಡ್ಡೆ ಬೇಡ. ಸರ್ಕಾರಿ ಶಾಲೆಗಳ ಬಗ್ಗೆ ಪೋಷಕರು ಮುಜುಗರ, ಹಿಂಜರಿಕೆ ಬಿಟ್ಟು ತಮ್ಮ ಮಕ್ಕಳನ್ನು ಸೇರಿಸಿ ಶಾಲೆಯ ಬಗ್ಗೆ ಅಭಿಮಾನ ಮೆರೆಯಬೇಕು. ದೇಶದ ಅನೇಕ ಮಹನೀಯರು ಸರ್ಕಾರಿ ಶಾಲೆಗಳಲ್ಲೇ ಓದಿ ಉನ್ನತ ಸಾಧನೆ ಮಾಡಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಕರು, ಗುಣಮಟ್ಟದ ಸೌಕರ್ಯಗಳಿವೆ ಎಂದು ಶಾಸಕ ಬಿ.ಸುರೇಶ್‌ಗೌಡರು ಹೇಳಿದರು. ತುಮಕೂರು ಗ್ರಾಮಾಂತರ ಕ್ಷೇತ್ರದ ನಾಗವಲ್ಲಿಯ ಕರ್ನಾಟಕ ಪಬ್ಲಿಕ್ ಶಾಲೆ ಕಟ್ಟಡದ ನವೀಕರಣಕ್ಕೆ ೧.೪ ಕೋಟಿ ರೂ. ವೆಚ್ಚದ ಕಾಮಗಾರಿಗೆ ಬುಧವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಶಾಸಕರು, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ದೇವೇಗೌಡರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಾನೂ ಸರ್ಕಾರಿ ಶಾಲೆಯಲ್ಲೇ ಓದಿದ್ದು, ಶಾಲೆ ಕೇವಲ ಕಟ್ಟಡವಲ್ಲ, ಇದೊಂದು ಜ್ಞಾನ ದೇಗುಲ. ಸರ್ಕಾರಿ ಶಾಲೆಗಳು ಸಮಾಜದ ಆಸ್ತಿ, ಅವುಗಳನ್ನು ಕಾಳಜಿಯಿಂದ ಕಾಪಾಡಿಕೊಂಡು ಬೆಳೆಸಬೇಕು ಎಂದು ಮನವಿ ಮಾಡಿದರು. ಆಗಿನ ಶಾಸಕ ಮೂಡಲಗಿರಿಯಪ್ಪನವರು ಹಾಗೂ ಮೈಸೂರು ಮಹಾರಾಜರು ಅಡಿಗಲ್ಲು ಹಾಕಿದ್ದ ನಾಗವಲ್ಲಿ ಸರ್ಕಾರಿ ಶಾಲೆ…

Read More

ತುಮಕೂರು: ಜಿಲ್ಲೆಗೆ ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.೧೦೦ರಷ್ಟು ಫಲಿತಾಂಶ ಬರುವಂತೆ ಶಾಲಾ ಶಿಕ್ಷಣ ಇಲಾಖೆ ಶ್ರಮಿಸಬೇಕು. ವಿಫಲವಾದಲ್ಲಿ ಸಂಬAಧಿಸಿದ ಅಧಿಕಾರಿಗಳನ್ನೇ ಹೊಣೆಗಾರಿಕೆ ಮಾಡಲಾಗುವುದು ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಶಿಕ್ಷಣ ಇಲಾಖೆಗೆ ತಾಕೀತು ಮಾಡಿದರು. ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ೨೦೨೫-೨೬ನೇ ಸಾಲಿನ ದ್ವಿತೀಯ  ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಕಳೆದ ಬಾರಿ ಜಿಲ್ಲೆಯ ಎಸ್‌ಎಸ್‌ಎಲ್‌ಸಿ ಫಲಿತಾಂಶ ಕುಂಠಿತಗೊAಡಿದೆ. ಮಕ್ಕಳ ಮುಂದಿನ ಭವಿಷ್ಯ ರೂಪಿಸಲು ಶೇಕಡಾ ೧೦೦ರಷ್ಟು ಫಲಿತಾಂಶ ಸಾಧಿಸುವತ್ತ ಅಗತ್ಯ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಸಂಬAಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳು ಯಾವ ವಿಷಯದಲ್ಲಿ ಹಿಂದುಳಿದಿದ್ದಾರೆ ಎಂಬುದನ್ನು ಗಮನಿಸಿ, ಅವರಿಗೆ ವಿಶೇಷ ತರಗತಿಗಳನ್ನು ನಡೆಸಬೇಕು. ಶಾಲಾ ಶಿಕ್ಷಕರಿಗೆ ಕಾರ್ಯಾಗಾರಗಳು ಹಾಗೂ ಮಾರ್ಗದರ್ಶನ ಶಿಬಿರಗಳನ್ನು ಆಯೋಜಿಸಿ, ಮುಂದಿನ ಪರೀಕ್ಷೆಯಲ್ಲಿ ಶೇ.೧೦೦ರಷ್ಟು ಫಲಿತಾಂಶ ಸಾಧಿಸಲು ಪ್ರಯತ್ನಿಸಬೇಕು ಎಂದು ತುಮಕೂರು ಹಾಗೂ…

Read More

ತುಮಕೂರು: ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ರಸ್ತೆ ಹಾಗೂ ಒಳಚರಂಡಿ ಕಾಮಗಾರಿಗಳನ್ನು ಬರುವ ಡಿಸೆಂಬರ್ ಒಳಗೆ ಪೂರ್ಣಗೊಳಿಸಬೇಕು ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಸೂಚಿಸಿದರು. ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ೨೦೨೫-೨೬ನೇ ಸಾಲಿನ ದ್ವಿತೀಯ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಲೋಕೋಪಯೋಗಿ ಇಲಾಖೆಗೆ ಕಳೆದ ಆಯವ್ಯಯದಲ್ಲಿ ರಸ್ತೆ ಕಾಮಗಾರಿಗಳಿಗಾಗಿ ಸುಮಾರು ೬೩೦ ಕೋಟಿ ರೂ. ಮಂಜೂರು ಮಾಡಲಾಗಿದ್ದರೂ ಈವರೆಗೆ ಒಂದೂ ಕಾಮಗಾರಿಗಳನ್ನು ಆರಂಭಿಸದಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ಡಿಸೆಂಬರ್ ಒಳಗೆ ಟೆಂಡರ್ ಕರೆದು ಗುದ್ದಲಿ ಪೂಜೆ ಮಾಡಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. ಪಂಚಾಯತ್ ರಾಜ್ ಮತ್ತು ಲೋಕೋಪಯೋಗಿ ಇಲಾಖೆಗಳ ವ್ಯಾಪ್ತಿಯಲ್ಲಿನ ರಸ್ತೆ ಹಾಗೂ ಒಳಚರಂಡಿ ಕಾಮಗಾರಿಗಳು ಆಮೇಗತಿಯಲ್ಲಿ ಸಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ ಸಚಿವರು, ಅಭಿವೃದ್ಧಿ ಕಾಮಗಾರಿಗಳಲ್ಲಿ ಯಾವುದೇ ರೀತಿಯ ನಿರ್ಲಕ್ಷö್ಯವನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದರು. ಪ್ರಗತಿಯಲ್ಲಿರುವ ಎಲ್ಲಾ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ…

Read More

ತುಮಕೂರು: ಇದೀಗ ಕರ್ನಾಟಕದಲ್ಲಿ ‘ಮುಖ್ಯಮಂತ್ರಿ ಬದಲಾವಣೆ’ ಚರ್ಚೆಯು ಆಡಳಿತರೂಢ ಕಾಂಗ್ರೆಸ್ ಪಕ್ಷದಲ್ಲಿ ಮತ್ತೊಮ್ಮೆ ಗರಿಗೆದರಿರುವ ಹಿನ್ನಲೆಯಲ್ಲಿ ತುಮಕೂರು ನಗರದ ಅಂಬೇಡ್ಕರ್ ಭವನದಲ್ಲಿ ದಲಿತ ಸಂಘಟನೆಗಳ ಒಕ್ಕೂಟದಿಂದ ಸಭೆ ನಡೆಸಿ ಪ್ರಕಟಣೆಯನ್ನು ಹೊರಡಿಸಿರುತ್ತಾರೆ. ಈ ಕುರಿತು ದಲಿತ ಸಂಘಟನೆಗಳ ಒಕ್ಕೂಟ ರಾಜ್ಯಾಧ್ಯಕ್ಷರಾದ ಡಾ. ಎಂ ವೆಂಕಟಸ್ವಾಮಿ ಮಾತನಾಡುತ್ತಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎರಡೂವರೆ ವರ್ಷಗಳ ಆಡಳಿತವು ಮುಗಿಯುವ ದಿನಾಂಕವು ಸನಿಹ ಆಗುತ್ತಿರುವಾಗ ಮುಂದಿನ ಮುಖ್ಯಮಂತ್ರಿ ಯಾರಾಗಬೇಕೆಂಬ ಊಹೆಗಳ ಚರ್ಚೆಯು ರಾಜ್ಯದಲ್ಲಿ ವಿಚಿತ್ರ ರಾಜಕೀಯ ಗೊಂದಲಗಳನ್ನು ಸೃಷ್ಠಿಸುತ್ತಿದೆ. ಇದೇ ನವೆಂಬರ್ ೨೧ರ ನಂತರದ ಎರಡೂವರೆ ವರ್ಷಗಳ ಮುಖ್ಯಮಂತ್ರಿ ಮತ್ತು ೨೦೨೮ರ ಚುಣಾವಣೆಯ ನಂತರದ ಮುಖ್ಯಮಂತ್ರಿ ಆಯ್ಕೆಯ ಊಹಾಪೋಹಗಳು ನಾಡಿನ ಜನತೆಯಲ್ಲಿ ಸಾರ್ವಜನಿಕ ಚರ್ಚೆಯನ್ನು ಹುಟ್ಟುಹಾಕಿವೆ. ಕಾಂಗ್ರೆಸ್‌ನ ರಾಜ್ಯ ಮುಖಂಡರ ಇಂತಹ ತರಾವರಿ ಹೇಳಿಕೆಗಳು ಹೈಕಮ್ಯಾಂಡ್ ವರಿಷ್ಟರನ್ನು ಇಕ್ಕಟ್ಟಿಗೆ ಸಿಲುಕಿಸಿವೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಪರವಿರೋಧಗಳ ಹೇಳಿಕೆಗಳು ರಾಜಕೀಯ ಬಿರುಗಾಳಿಯನ್ನೇ ಎಬ್ಬಿಸುತ್ತಿವೆ. ಎಂ.ಎಲ್.ಸಿ. ಡಾ.ಯತೀಂದ್ರ ಅವರು ಬೆಳಗಾವಿಯಲ್ಲಿ ಆಡಿರುವ ಮಾತು ಗಂಭೀರವಾದ ರಾಜಕೀಯ ಬದಲಾವಣೆಯ ಮುನ್ಸೂಚನೆ…

Read More