ತುಮಕೂರು: ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದಲ್ಲಿ ಕೈಗೊಂಡಿರುವ ಕಾಮಗಾ ರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅಧಿಕಾ ರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಸ್ಮಾರ್ಟ್ ಸಿಟಿ ಯೋಜನೆ ಕುರಿತು ಜರುಗಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ನಾಗರೀಕರಿಗೆ ಅತ್ಯವಶ್ಯಕವಾಗಿರುವ ಕಾಮಗಾರಿಗಳನ್ನು ಬೇಗ ಪೂರ್ಣಗೊಳಿಸಿ ಜನರ ಬಳಕೆಗೆ ಅನುವು ಮಾಡಿಕೊಡಬೇಕು ಎಂದು ನಿರ್ದೇಶಿಸಿದರು. ಕೆಸ್ಸಾರ್ಟಿಸಿ ನಿಲ್ದಾಣ ಕಾಮಗಾರಿಯನ್ನು ತ್ವರಿತವಾಗಿ ಮುಗಿಸಲು ಸರ್ಕಾರದ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿ ಕಾಮಗಾ ರಿಯನ್ನು ಚುರುಕುಗೊಳಿಸಲು ಕ್ರಮ ವಹಿಸಬೇಕು. ಜೊತೆಗೆ ಕುಡಿಯುವ ನೀರು ಒದಗಿಸುವ ಯೋಜನೆ, ಉದ್ಯಾನವನ, ರಸ್ತೆ ಅಭಿವೃದ್ಧಿ ಸೇರಿದಂತೆ ಜನರಿಗೆ ಅತ್ಯವಶ್ಯಕವಾಗಿರುವ ಕಾಮಗಾರಿಗಳನ್ನು ತುರ್ತಾಗಿ ಮುಗಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು. ರಾಜ್ಯದ ಏಳು ನಗರದಲ್ಲಿ ತುಮಕೂರು ಜಿಲ್ಲೆಯು ಸ್ಮಾರ್ಟ್‍ಸಿಟಿ ಕಾಮಗಾರಿ ಪ್ರಗತಿಯಲ್ಲಿ ಉತ್ತಮ ಸ್ಥಾನ ಪಡೆದಿರುವುದು ಶ್ಲಾಘನೀಯ. ಸ್ಮಾರ್ಟ್ ಸಿಟಿ ಯೋಜನೆಯ ಒಟ್ಟು 154 ಕಾಮಗಾರಿಗಳ ಪೈಕಿ 97 ಕಾಮಗಾರಿಗಳು ಪೂರ್ಣ ಗೊಂಡಿವೆ. ಉಳಿದಂತೆ 55…
Author: News Desk Benkiyabale
ತುಮಕೂರು : 45 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು ಕಿತ್ತುಕೊಂಡು ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ರವಿಕುಮಾರ್ ಬಂಧಿತ ಆರೋಪಿ. ಈತ ಬೆಂಗಳೂರಿನ ನಿವಾಸಿಯಾಗಿದ್ದು, ಸುಲಿಗೆ ಮಾಡಲು ನಿಟ್ಟೂರು-ಸಂಪಿಗೆ ರಸ್ತೆಯ ಸಿಂಗಸಂದ್ರ ಗೇಟ್ ಬಳಿ ಶೆಡ್ ಬಳಿ ಮಡಿಕೆ ಕೊಳ್ಳಲು ಬಂದು, ಮಡಿಕೆ ಮಾರುವವರ ಕುತ್ತಿಗೆಗೆ ಲಾಂಗ್ ನಿಂದ ಹಲ್ಲೆ ನಡೆಸಿ ಅವರ ಬಳಿಯಿದ್ದ ಸುಮಾರು 45 ಗ್ರಾಂ ಮಾಂಗಲ್ಯ ಸರವನ್ನು ಕಿತ್ತುಕೊಂಡು ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದಾನೆ. ಈ ಸಂಬಂಧ ದಂಡಿನಶಿವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪತ್ತೆಹಚ್ಚಲು ಸಹಕರಿಸಿದ ಪೊಲೀಸ್ ಸಿಬ್ಬಂದಿಗಳಿಗೆ ಎಸ್ಪಿ ರಾಹುಲ್ ಕುಮಾರ್ ಶಹಾಪುರ್ ರವರು ಅಭಿನಂದಿಸಿದ್ದಾರೆ.
ಶಿರಾ : ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಅತ್ತೆಯನ್ನು ಸೊಸೆಯೇ ಪೆಟ್ರೋಲ್ ಸುರಿದು ಕೊಲೆ ಮಾಡಿರುವ ದುರ್ಘಟನೆ ತಾಲ್ಲೂಕಿನ ಗೌಡನಗೆರೆಯ ಉಜ್ಜನಕುಂಟೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸರೋಜಮ್ಮ(65) ಕೊಲೆಯಾದ ದುರ್ದೈವಿ. ಇವರ ಸೊಸೆ ಸುಧಾಮಣಿ ಮತ್ತು ಈಕೆಯ ಪ್ರಿಯಕರ ಶ್ರೀರಂಗಪ್ಪ ಕೊಲೆಗೈದ ಆರೋಪಿಗಳು. ಸರೋಜಮ್ಮ ರವರು ತಮ್ಮ ಮನೆಯಲ್ಲಿ ಸುಟ್ಟಗಾಯಗಳಿಂದ ಮೃತಪಟ್ಟಿದ್ದರು ಎನ್ನಲಾಗಿತ್ತು. ಈ ಕುರಿತು ತಾವರೆಕೆರೆ ಪಿಎಸ್ಐ ಪಾಲಾಕ್ಷಪ್ರಭು ರವರು ಸ್ಥಳಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿದ ವೇಳೆ ಅನುಮಾನ ಬಂದು ಮೇಲಧಿಕಾರಿಗಳಿಗೆ ಈ ಕುರಿತು ಮಾಹಿತಿ ನೀಡಿದ್ದಾರೆ. ನಂತರ ಪೊಲೀಸ್ ಅಧೀಕ್ಷಕರು ಪರಿಶೀಲನೆ ನಡೆಸಿ ಎಫ್ಎಸ್ಎಲ್ ವೈಜ್ಞಾನಿಕ ತನಿಖೆ ನಡೆಸಲಾಗಿ ಇದು ಕೊಲೆ ಎಂದು ಶಂಕಿಸಿದ್ದಾರೆ. ಈ ಕುರಿತು ಸರೋಜಮ್ಮರ ಅಳಿಯ, ಸೊಸೆಯ ಮೇಲೆ ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿದಾಗ ಸೊಸೆ ಸುಧಾಮಣಿ ಮತ್ತು ಶ್ರೀರಂಗಪ್ಪರ ಅಕ್ರಮ ಸಂಬಂಧದ ವಿಷಯ ಬೆಳಕಿಗೆ…
ಹುಳಿಯಾರು: ಪಟ್ಟಣದ ಪ್ರಖ್ಯಾತ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಓದಿದ ಪಠ್ಯ, ಬರೆಯುವ ಪರೀಕ್ಷೆ, ಪಡೆಯುವ ಪದವಿಯನ್ನೇ ಹಳ್ಳಿ ವಿದ್ಯಾರ್ಥಿಗಳೂ ಪಡೆಯುತ್ತಾರೆ. ಆದರೂ ಹಳ್ಳಿ ವಿದ್ಯಾರ್ಥಿಗಳಲ್ಲಿ ಕೀಳರಿಮೆ ಇದೆ. ಇದನ್ನು ಬಿಟ್ಟು ಮುನ್ನುಗ್ಗುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು. ಹುಳಿಯಾರು-ಕೆಂಕೆರೆ ಬಿಎಂಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್‍ಗಳ ವಿತರಣೆ ಹಾಗೂ ಸ್ಮಾರ್ಟ್ ಕ್ಲಾಸ್ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಕೊರೊನಾ ಅಲೆಯಿಂದಾಗಿ ವಿದ್ಯಾರ್ಥಿಗಳಿಗೆ ಆನ್‍ಲೈನ್ ಕ್ಲಾಸ್ ಅನಿವಾರ್ಯವಾಗಿದೆ. ಹಾಗಾಗಿ ಸರ್ಕಾರಿ ಕಾಲೇಜು ವಿದ್ಯಾರ್ಥಿಗಳ ಆನ್‍ಲೈನ್ ಶಿಕ್ಷಣಕ್ಕೆ ನೆರವಾಗಲೆಂದು ಆರ್ಥಿಕ ಸಂಕಷ್ಟದಲ್ಲೂ 165 ಕೋಟಿ ರೂ. ವೆಚ್ಚದಲ್ಲಿ ರಾಜ್ಯದ 1.58 ಲಕ್ಷ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್‍ಗಳನ್ನು ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಚಾಟಿಂಗ್ ಮಾಡಿ ಕಾಲಾಹರಣಕ್ಕೆ ಟ್ಯಾಬ್‍ಗಳನ್ನು ಬಳಸದೆ ಜ್ಞಾನಾರ್ಜನೆಗೆ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು. ಜವಾಬ್ದಾರಿಯುತ ಪ್ರಜೆಗಳನ್ನಾಗಿ ಮಾಡಲು ಶಿಕ್ಷಣ ಕೊಡುತ್ತಿದ್ದೇವೆ. ಪರೀಕ್ಷೆಗಾಗಿ ಓದದೆ ಜ್ಞಾನ ಸಂಪಾದನೆಗಾಗಿ ವಿದ್ಯಾರ್ಥಿಗಳು ಓದಬೇಕಿದೆ. ವಿಷಯದ ಬಗ್ಗೆ ಸಮಗ್ರವಾದ ಆಧ್ಯಯನ ಮಾಡಬೇಕು. ಅರ್ಥ ಮಾಡಿಕೊಂಡು ಓದಬೇಕು. ಮೇದಾವಿಗಳ ಉಪನ್ಯಾಸ ಮಾಲಿಕೆಗಳನ್ನು…
ತುಮಕೂರು : ಕೇಂದ್ರ ಸರ್ಕಾರದ ನಗರಾಭಿವೃದ್ಧಿ ಇಲಾಖೆ ವತಿಯಿಂದ ರಾಷ್ಟ್ರಮಟ್ಟದಲ್ಲಿ ಸ್ಮಾಟ್ರ್ಸಿಟಿ ಯೋಜನೆಗಳ 6ನೇ ವಾರ್ಷಿಕೋತ್ಸವ ನಿಮಿತ್ತ ನಡೆದ ಸ್ವರ್ಧೆಗಳಲ್ಲಿ ತುಮಕೂರು ಸ್ಮಾರ್ಟ್ ಸಿಟಿ ಡಿಜಿಟಲ್ ಗ್ರಂಥಾಲಯಕ್ಕೆ 3ನೇ ಸ್ಥಾನ ದೊರಕಿದೆ. ತುಮಕೂರು ಸ್ಮಾರ್ಟ್ ಸಿಟಿ ಯೋಜನೆಗಳಲ್ಲಿ ಒಂದಾದ ಡಿಜಿಟಲ್ ಲೈಬ್ರರಿ ಯೋಜನೆಗೆ “Soಛಿiಚಿಟ ಂsಠಿeಛಿಣs” ವಿಭಾಗದಲ್ಲಿ ಈ ಪ್ರಶಸ್ತಿ ಲಭಿಸಿದೆ. ಜೂನ್ 25ರಂದು ನಡೆದ ಕೇಂದ್ರ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ(MoHUA) 6ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ವಿವಿಧ ವಿಭಾಗಗಳಲ್ಲಿ India Smart Cities Awards Contest 2020 (ISAC 2020) ದೇಶದ 100 ಸ್ಮಾರ್ಟ್ ಸಿಟಿಗಳಲ್ಲಿ ಅನುμÁ್ಠನಗೊಂಡಿರುವ ಉತ್ತಮ ಯೋಜನೆಗಳ ಪೈಕಿ “ಡಿಜಿಟಲ್ ಲೈಬ್ರರಿ”ಯೋಜನೆಗೆ ಪ್ರಶಸ್ತಿ ಲಭಿಸಿದೆ. ಎಲ್ಲಿಂದಲಾದರೂ ಓದು- ಈ ಲೈಬ್ರರಿಯ ವಿಶೇಷತೆ: ಈ ಪ್ರಶಸ್ತಿಯು ವಿಶಿಷ್ಟ ಹಾಗೂ ವಿನೂತನವಾಗಿದ್ದು, ದೇಶದ 100 ಸ್ಮಾರ್ಟ್ ಸಿಟಿಗಳ ಪೈಕಿ ಡಿಜಿಟಲ್ ಲೈಬ್ರರಿ ಯೋಜನೆ…
ಹುಳಿಯಾರು: ಕೊರೊನಾದಿಂದ ಪತಿ-ಪತ್ನಿ ಇಬ್ಬರೂ ಒಂದೇ ದಿನ ಸಾವನ್ನಪ್ಪಿದ ಘಟನೆ ಹುಳಿಯಾರು ಹೋಬಳಿ ಕುರಿಹಟ್ಟಿಯಲ್ಲಿ ನಡೆದಿದೆ. ಕುರಿಹಟ್ಟಿ ಗೊಲ್ಲರಹಟ್ಟಿ ಗ್ರಾಮದ ರಮೇಶ್ (52) ಹಾಗೂ ಪತ್ನಿ ತೊಳಸಮ್ಮ (45) ಇಬ್ಬರು ಸಾವಿನಲ್ಲಿ ಒಂದಾದ ದಂಪತಿಗಳಾಗಿದ್ದಾರೆ. ರಾತ್ರಿ 9 ಗಂಟೆ ಸಮಯಲ್ಲಿ ಪತಿ ಸಾವನ್ನಪ್ಪಿದರೆ, ಪತ್ನಿ ರಾತ್ರಿ 12 ಕ್ಕೆ ಸಾವನ್ನಪ್ಪಿದ್ದಾರೆ. ತೊಳಸಮ್ಮ ಅವರಿಗೆ ಕೊರೊನಾ ದೃಢಪಟ್ಟು ತುಮಕೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಳೆದ 20 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ರಮೇಶ್ ಕೂಡ ಕೊರೊನಾದಿಂದ ತಿಪಟೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಒಂದೇ ರಾತ್ರಿ ಬೇರೆ ಬೇರೆ ಕಡೆ ಸಾವನ್ನಪ್ಪಿದ್ದಾರೆ. ಮೃತರಿಗೆ ತಂದೆ, ತಾಯಿ ಹಾಗೂ ಇಬ್ಬರು ಪುತ್ರರು ಇದ್ದಾರೆ. ಮೃತರ ಸಂಸ್ಕಾರ ಮೃತರ ಜಮೀನಿನಲ್ಲಿ ನಡೆಯಿತು.
ಹುಳಿಯಾರು : ಹುಳಿಯಾರು ಪಟ್ಟಣ ಪಂಚಾಯ್ತಿಗೆ ಸರ್ಕಾರದಿಂದ ಐವರು ನಾಮನಿರ್ದೇಶಿತ ಸದಸ್ಯರ ನೇಮಕಕ್ಕೆ ಸಿದ್ಧತೆ ನಡೆದಿದೆ. ಈ ಐವರೂ ಸಹ ಜಿಲ್ಲಾ ಉಸ್ತುವಾರಿ ಸಚಿವರ ಬೆಂಬಲಿಗರಾಗಿದ್ದಾರೆ. ಇವರಲ್ಲಿ ಮೂವರು ಮಾಜಿ ಸದಸ್ಯರಾಗಿದ್ದು ಇಬ್ಬರು ಹೊಸ ಸದಸ್ಯರಾಗಿದ್ದಾರೆ. 16 ಚುನಾಯಿತ ಸದಸ್ಯರ ಸಂಖ್ಯಾ ಬಲವುಳ್ಳ ಪಂಚಾಯ್ತಿಗೆ ಸರ್ಕಾರ ಐವರನ್ನು ನಾಮ ನಿರ್ದೇಶನ ಮಾಡಲು ಮುಂದಾಗಿದೆ. ಸಚಿವ ಜೆ.ಸಿ.ಮಾಧುಸ್ವಾಮಿ ಅವರ ಶಿಫಾರಸ್ಸಿನಂತೆ ಪಪಂ ಮಾಜಿ ಸದಸ್ಯರುಗಳಾದ ಬಡ್ಡಿಪುಟ್ಟರಾಜು, ಗೀತಾಬಾಬು, ಗ್ರಾಪಂ ಮಾಜಿ ಸದಸ್ಯ ಕಾರ್ಪೆಂಟರ್ ದುರ್ಗಯ್ಯ ಹಾಗೂ ಬಳೆದಾಸಪ್ಪ, ಅಲ್ಲಾಭಕಶ್ ನಾಮ ನಿರ್ದೇಶನಗೊಳ್ಳಲಿದ್ದಾರೆ. ಈ ಸಂಬಂಧ ಈಗಾಗಲೇ ಮುಖ್ಯಮಂತ್ರಿಗಳ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್ ಅವರು ನಾಗರಾಭಿವೃದ್ಧಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದು ಈ ಐವರ ಮಾಹಿತಿ ಸಂಗ್ರಹಿಸಲು ನಿರ್ದೇಶನ ನೀಡಿದ್ದಾರೆ. ಅಲ್ಲದೆ ಸರ್ಕಾರದ ಕಾರ್ಯದರ್ಶಿ ಎ.ವಿಜಯ್‍ಕುಮಾರ್ ಅವರು ಹುಳಿಯಾರು ಪಟ್ಟಣ ಪಂಚಾಯ್ತಿಗೆ ಪತ್ರ ಬರೆದು ಐವರ ಅಗತ್ಯ ದಾಖಲಾತಿಗಳನ್ನು ಸಂಗ್ರಹಿಸಿ ಕೊಡಲು ಸೂಚನೆ ನೀಡಿದ್ದಾರೆ. …
ತುಮಕೂರು : ನಗರದಲ್ಲಿ ಪಾಲಿಕೆ, ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಸ್ಮಾರ್ಟ್‍ಸಿಟಿ ವತಿಯಿಂದ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ವಿಳಂಬ ಮಾಡದೆ ಕಾಲಮಿತಿಯೊಳಗೆ ಪೂರ್ಣಗೊಳಿಸಿ, ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕೆಂದು ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ನಗರದಲ್ಲಿ ನಡೆಯುತ್ತಿರುವ ಮಹಾತ್ಮ ಗಾಂಧಿ ಕ್ರೀಡಾಂಗಣ, ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ, ಎಂಪ್ರೆಸ್ ಕಾಲೇಜು ಸೇರಿದಂತೆ ಗ್ರಂಥಾಲಯ ಕಾಮಗಾರಿಗಳ ವೀಕ್ಷಣೆ ಮಾಡಿದ ಸಚಿವರು, ಗುಣಮಟ್ಟ ಕಾಯ್ದುಕೊಂಡು ಕಾಮಗಾರಿಗಳನ್ನು ಮುಗಿಸುವಂತೆ ನಿರ್ದೇಶಿಸಿದರು. ವೀಕ್ಷಣೆ ವೇಳೆ ಸ್ಥಳದಲ್ಲೇ ಅಧಿಕಾರಿಗಳಿಂದ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದ ಸಚಿವರು, ವಿಳಂಬಕ್ಕೆ ಆಸ್ಪದ ಕೊಡದೆ ಸಮನ್ವಯ ಸಾಧಿಸಿಕೊಂಡು ಹಗಲು ಮತ್ತು ರಾತ್ರಿ ಪಾಳಿಯಲ್ಲಿ ಕಾಮಗಾರಿಗಳನ್ನು ಶೀಘ್ರ ಮುಗಿಸಬೇಕು ಎಂದು ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಸೂಚಿಸಿದರು. ಇದೇ ವೇಳೆ ಎಂಪ್ರೆಸ್ ಕಾಲೇಜಿನಲ್ಲಿ ನಡೆಯುತ್ತಿದ್ದ ಲಸಿಕಾಕರಣ ಕಾರ್ಯವನ್ನೂ ವೀಕ್ಷಿಸಿ, ಲಸಿಕಾಕರಣ ಯಶಸ್ವಿಯಾಗಿ ನಡೆಸುವಂತೆಯೂ ನಿರ್ದೇಶಿಸಿದರು. ಕೋವಿಡ್‍ನಿಂದ ಕಾಮಗಾರಿಗಳಲ್ಲಿ ವಿಳಂಬ: ಕಾಮಗಾರಿಗಳ…
ತುಮಕೂರು : ಕಾಂಗ್ರೆಸ್ ಪಕ್ಷದಲ್ಲಿ ಚುನಾವಣೆಗೂ ಮುನ್ನವೇ ನಾಯಕರುಗಳು ಮುಖ್ಯಮಂತ್ರಿ ಸ್ಥಾನ ಅಲಂಕರಿಸುವ ತಿರುಕನ ಕನಸು ಕಾಣುತ್ತಿದ್ದಾರೆ. ಆದರೆ ಕೇಂದ್ರ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಇನ್ನು 20 ವರ್ಷ ಕಳೆದರೂ ಅಧಿಕಾರಕ್ಕೆ ಬರುವುದಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು. ದೇಶದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರೇ ಇಲ್ಲ. ರಾಹುಲ್‍ಗಾಂಧಿಯ ಹೆಸರೇಳಿಕೊಂಡು ಚುನಾವಣೆಗೆ ಹೋದರೆ ಕೇವಲ ನಾಲ್ಕು ವೋಟು ಸಹ ಬೀಳುವುದಿಲ್ಲ ಎಂದು ಟೀಕಿಸಿದರು. ಕೊರಟಗೆರೆಯಲ್ಲಿ ಉಪನೋಂದಣಾಧಿಕಾರಿಗಳ ಕಚೇರಿ ಲೋಕಾರ್ಪಣೆಗೊಳಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಚುನಾವಣೆಗೂ ಮುನ್ನವೇ ಮುಖ್ಯಮಂತ್ರಿ ಕನಸು ಕಾಣಲಾಗುತ್ತಿದೆ. ಇದು ಕಾಂಗ್ರೆಸ್ ನಾಯಕರ ತಿರುಕನ ಕನಸು ಎನ್ನದೇ ಮತ್ತೇನು ಹೇಳಬೇಕು ಎಂದು ಪ್ರಶ್ನಿಸಿದರು. ಚುನಾವಣೆಗೆ ಇನ್ನು ಎರಡು ವರ್ಷ ಬಾಕಿ ಇದೆ. ಆದರೆ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ 6 ಜನ ಟವಲ್ ಹಾಕಿದ್ದಾರೆ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಡಾ. ಜಿ. ಪರಮೇಶ್ವರ್, ಮಲ್ಲಿಕಾರ್ಜಿನ…
ತುಮಕೂರು: ಕೋವಿಡ್ 3ನೇ ಅಲೆಯಲ್ಲಿ ಮಕ್ಕಳಿಗೆ ಸೋಂಕು ತಗಲುವ ಸಂಭವವಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಸ್ಪತ್ರೆಯಲ್ಲಿ ಪ್ರಾಯೋಗಿಕವಾಗಿ ಮಕ್ಕಳ ಆಸ್ಪತ್ರೆ ತೆರೆಯಬೇಕೆಂದು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ಕೊರಟಗೆರೆಯಲ್ಲಿ ಉಪನೋಂದಣಿ ಕಛೇರಿಯ ನೂತನ ಕಟ್ಟಡವನ್ನು ಉದ್ಘಾಟಿಸಿದ ನಂತರ ಪ್ರವಾಸಿ ಮಂದಿರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ 3ನೇ ಅಲೆಯಲ್ಲಿ ಹೆಚ್ಚಾಗಿ ಮಕ್ಕಳಿಗೆ ಸೋಂಕು ತಗಲುವ ಸಂಭವವಿದೆ ಎಂದು ತಜ್ಞವೈದ್ಯರು ಅಭಿಪ್ರಾಯ ಪಟ್ಟಿರುವುದರಿಂದ ಪ್ರಾಯೋಗಿಕವಾಗಿ ಜಿಲ್ಲಾಸ್ಪತ್ರೆಯಲ್ಲಿ ಮಕ್ಕಳ ಆಸ್ಪತ್ರೆಯನ್ನು ಹಾಗೂ ನಂತರ ಎಲ್ಲಾ ತಾಲ್ಲೂಕುಗಳಲ್ಲಿಯೂ ತೆರೆಯಲು ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯಲ್ಲಿ 65 ಮಂದಿ ಮಕ್ಕಳ ತಜ್ಞವೈದ್ಯರಿದ್ದಾರೆಂದು ಮಾಹಿತಿಯಿದ್ದು, ಮುಂದಿನ 10 ದಿನಗಳೊಳಗಾಗಿ ಮಕ್ಕಳ ವೈದ್ಯರು ಸೇರಿದಂತೆ ಎಲ್ಲಾ ವೈದ್ಯರಿಗೂ ಕೋವಿಡ್ ಸೋಂಕು ಸಂದರ್ಭದಲ್ಲಿ ಮಕ್ಕಳ ಆರೈಕೆ, ಔಷಧೋಪಚಾರ, ಚಿಕಿತ್ಸೆ ನೀಡುವ ಬಗ್ಗೆ ಸೂಕ್ತ ತರಬೇತಿ ಹಮ್ಮಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು. ಮಕ್ಕಳ ಆಸ್ಪತ್ರೆ ತೆರೆಯಲು ಔಷಧಿ, ಐಸಿಯು, ಆಮ್ಲಜನಕ ಹಾಸಿಗೆ,…











