ತುಮಕೂರು: ನಗರದ ಶ್ರೀದೇವಿ ಪದವಿ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರವು ಕೋವಿಡ್-19 ಹಾಗೂ ಆರೋಗ್ಯ ವೃದ್ಧಿಯ ಕಾಳಜಿಯ ಕುರಿತಾಗಿ ನುರಿತ ತಜ್ಞ ವೈದ್ಯರೊಂದಿಗೆ ಆನ್‍ಲೈನ್ ಸಭೆಯನ್ನು ಏರ್ಪಡಿಸಲಾಗಿತ್ತು. ಈ ಸಭೆಯಲ್ಲಿ ರಾಯಚೂರು ಸರ್ಕಾರಿ ಆಸ್ಪತ್ರೆಯ ಆರೋಗ್ಯಾಧಿಕಾರಿಯಾದ ಡಾ.ಅಜಯ್ ಪವಾರ್, ಕೊರಟಗೆರೆ ಸರ್ಕಾರಿ ಆಸ್ಪತ್ರೆ ಡಾ.ಪುರುಷೋತ್ತಮ್ ಇವರುಗಳ ಮುಖೇನ ನೂರಾರು ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಕೋವಿಡ್-19 ಬಗ್ಗೆ ಉತ್ತಮ ಸಲಹೆಗಳನ್ನು ನೀಡಲಾಯಿತ್ತು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಸಿಬ್ಬಂದಿ, ವಿದ್ಯಾರ್ಥಿಗಳು ಮತ್ತು ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಲಹೆಗಳನ್ನು ಪಡೆಯುವುದರ ಜೊತೆಗೆ ವೈದ್ಯರೊಂದಿಗೆ ಕೋವಿಡ್-19 ಮತ್ತು ವ್ಯಾಕ್ಸಿಲೇಷನ್ ಬಗ್ಗೆ ಚರ್ಚಿಸಿ ತಮ್ಮ ಸಲಹೆಗಳನ್ನು ಪರಿಹರಿಸಿಕೊಂಡರು. ಈ ಪ್ರಪಂಚವನ್ನೇ ನಡುಗಿಸಿದ ಈ ಕೊರೋನ ರೋಗದ ಲಕ್ಷಣಗಳನ್ನು ಸೇರಿದಂತೆ, ಬ್ಯಾಕ್ ಫಂಗಸ್, ಶ್ವಾಸಕೋಶದ ಸಂಬಂಧಿಸಿದ ಪರಿಣಾಮಗಳ ಬಗ್ಗೆ ಮತ್ತು ಮುನ್ನೆಚ್ಚರಿಕಾ ಕ್ರಮಗಳ ಪಾಲನೆಯ ಬಗ್ಗೆ ಡಾ.ಅಜಯ್ ಪನಾರ್‍ರವರು ತಿಳಿಸಿಕೊಟ್ಟರು. ಇದೇ ಸಂದರ್ಭದಲ್ಲಿ ಕೊರಟಗೆರೆ…
Author: News Desk Benkiyabale
ತುಮಕೂರು : ಗ್ರಾಮೀಣ ಪ್ರದೇಶಗಳಲ್ಲಿಯೂ ಹೆಚ್ಚಾಗಿ ಹರಡುತ್ತಿರುವ ಕೋವಿಡ್19 ಎರಡನೇ ಅಲೆ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡುವುದರೊಂದಿಗೆ ಹಳ್ಳಿಗಳ ಕೋವಿಡ್ ನಿರ್ವಹಣೆಗೆ ಗ್ರಾಮ ಪಂಚಾಯ್ತಿ ಕಾರ್ಯಪಡೆಗಳನ್ನು ಮತ್ತಷ್ಟು ಬಲಪಡಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಜಿಲ್ಲಾಡಳಿತಕ್ಕೆ ಸೂಚಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಕೋವಿಡ್-19 ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸೋಂಕಿನ ಪಾಸಿಟಿವ್ ಪ್ರಮಾಣದ ಇಳಿಕೆಗೂ ಸೂಚನೆ ನೀಡಿದರು. ಕೋವಿಡ್ 19 ಎರಡನೇ ಅಲೆ ರಾಜ್ಯವನ್ನು ತೀವ್ರವಾಗಿ ಬಾಧಿಸಿದೆ. ಬೆಂಗಳೂರಿನ ನೆರೆಯ ಜಿಲ್ಲೆಯಾದ ತುಮಕೂರಿನಲ್ಲಿಯೂ ಪರಿಸ್ಥಿತಿ ಗಂಭೀರವಾಗಿತ್ತು. ಸಮರ್ಪಕ ನಿರ್ವಹಣೆಯಿಂದ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದ್ದು, ಸುಧಾರಣೆ ಕಂಡುಬಂದಿದೆ ಎಂದರು. ಜಿಲ್ಲೆಯಲ್ಲಿ ಕಳೆದ ಏಪ್ರಿಲ್ ಮಾಹೆಯಲ್ಲಿ 18,749 ಕೋವಿಡ್ ಪ್ರಕರಣ ದೃಢವಾಗಿದ್ದು, 131 ಮಂದಿ ಮೃತಪಟ್ಟಿದ್ದಾರೆ. ಅದೇ ರೀತಿ ಮೇ ಮಾಹೆಯಲ್ಲಿ 48,643 ಪ್ರಕರಣಗಳು ದೃಢಪಟ್ಟಿದ್ದು, 314 ಮಂದಿ ಮೃತಪಟ್ಟಿರುವುದು ವರದಿಯಾಗಿದೆ. ಏಪ್ರಿಲ್ ತಿಂಗಳಿಗಿಂತಲೂ…
ಹುಳಿಯಾರು : ಲಾಕ್‍ಡೌನ್ ಕಾರಣ ಪಡಿತರ ಪಡೆಯಲು ಫಲಾನುಭವಿಗಳು ಬೆಳ್ಳಂಬೆಳಿಗ್ಗೆ ನ್ಯಾಯಬೆಲೆ ಅಂಗಡಿಗಳ ಮುಂಭಾಗದಲ್ಲಿ ರಸ್ತೆಯುದ್ದಕ್ಕೂ ಮೈಲುದ್ದದ ಸಾಲು ನಿಂತು ಗಂಟೆಗಟ್ಟಲೆ ಕಾದು ಪಡಿತರ ಪಡೆಯುವ ದೃಶ್ಯ ಹುಳಿಯಾರು ಪಟ್ಟಣದಲ್ಲಿ ಸಾಮಾನ್ಯವಾಗಿದೆ. ಬೆಳಗ್ಗೆ 6 ರಿಂದ 10 ಗಂಟೆಯವರೆವಿಗೆ ಲಾಕ್‍ಡೌನ್ ಸಡಿಲಿಕೆ ಇದೆ. ನಂತರ ಓಡಾಡಿದರೆ ಪೊಲೀಸ್ ಲಾಠಿ ರುಚಿ ನಿಶ್ಚಿತ. ಹಾಗಾಗಿ ಹಳ್ಳಿಗಳಿಂದ ಫಲಾನುಭವಿಗಳು ಸೈಕಲ್, ಬೈಕ್ ಮೂಲಕ ಬೆಳ್ಳಂಬೆಳಗ್ಗೆಯೇ ನ್ಯಾಯಬೆಲೆ ಅಂಗಡಿಗಳ ಮುಂದೆ ಬಂದು ಕ್ಯೂ ನಿಲ್ಲುತ್ತಿದ್ದಾರೆ. ಹಳ್ಳಿಗರು ಬರುವುದನ್ನು ನೋಡಿ ಪಟ್ಟಣದವರು ಬಂದು ಸರತಿಯಲ್ಲಿ ಸೇರುತ್ತಿದ್ದಾರೆ. ಹಾಗಾಗಿ ಪ್ರತಿ ನ್ಯಾಯಬೆಲೆ ಅಂಗಡಿಗಳ ಮುಂದೆ ಮೈಲುದ್ದ ಸರತಿ ಇದ್ದೇ ಇರುತ್ತದೆ. ಬಯೋಮೆಟ್ರಿಕ್ ಮೂಲಕ ಪಡಿತರ ವಿತರಿಸುತ್ತಿರುವುದರಿಂದ ಒಬ್ಬೊಬ್ಬರಿಗೆ ಕನಿಷ್ಠ ಎಂದರೂ ಹದಿನೈದಿಪ್ಪತ್ತು ನಿಮಿಷ ಸಮಯ ಹಿಡಿಯುತ್ತಿದೆ. ಹಾಗಾಗಿ ಗಂಟೆಗಟ್ಟಲೆ ಕ್ಯೂ ನಿಲ್ಲುವುದು ಅನಿವಾರ್ಯ. ಅಲ್ಲದೆ ಮೊದಲೆಲ್ಲ ಆಟೊದಲ್ಲಿ ತೆಗೆದು ಕೊಂಡು ಹೋಗುತ್ತಿದ್ದರು. ಈಗ ಆಟೊ ಕೂಡ ಬಿಡುತ್ತಿಲ್ಲವಾದ್ದರಿಂದ ದಿನಸಿ ವಸ್ತುಗಳನ್ನು…
ಹುಳಿಯಾರು: ಹುಳಿಯಾರಿನ ಅಂಬೇಡ್ಕರ್ ಭವನದ ಹಿಂಭಾಗದಲ್ಲಿರುವ ಸರ್ಕಾರಿ ಸಾರ್ವಜನಿಕ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯವು ಈಗ ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತನೆಯಾಗಿದೆ. ಹುಳಿಯಾರು ಪಟ್ಟಣ ಸೇರಿದಂತೆ ಕೆಂಕೆರೆ, ಲಿಂಗಪ್ಪನಪಾಳ್ಯ, ಕೆ.ಸಿ.ಪಾಳ್ಯ, ವಳಗೆರೆಹಳ್ಳಿ ಮುಂತಾದಡೆ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು ತುರ್ತಾಗಿ ಹುಳಿಯಾರಿನಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸುವಂತೆ ಸಚಿವರಾದ ಜೆ.ಸಿ.ಮಾಧುಸ್ವಾಮಿ ಅವರು ಸೂಚಿಸಿದ ಹಿನ್ನೆಲೆಯಲ್ಲಿ ಆರಂಭಿಸಲಾಗಿದೆ. ಮೇ. 20ನೇ ತಾರೀಖಿನಿಂದ ಈಚೆಗೆ ಪಾಸಿಟಿವ್ ಬಂದಿರುವವರು, ಹೋಂ ಕ್ವಾರಂಟೈನ್‍ನಲ್ಲಿರುವವರನ್ನು ಈ ಕೋವಿಡ್ ಕೇರ್ ಸೆಂಟರ್‍ಗೆ ಸ್ಥಳಾಂತರಿಸಲು ನಿರ್ಧರಿಸಲಾಗಿದ್ದು ಆಶಾ, ಅಂಗನವಾಡಿ ಮತ್ತು ಪಪಂ ಸಿಬ್ಬಂದಿಗಳು ಸೋಂಕಿತರನ್ನು ಕೇರ್ ಸೆಂಟರ್‍ಗೆ ಕರೆತರಲಿದ್ದಾರೆ. ಸೋಂಕಿತರು ನಿರಾಕರಿಸಿದರೆ ಪೊಲೀಸ್ ಸಹಕಾರ ಸಹ ಪಡೆಯುವುದಾಗಿ ಪಪಂ ಮುಖ್ಯಾಧಿಕಾರಿ ಮಂಜುನಾಥ್ ತಿಳಿಸಿದ್ದಾರೆ. ಕೋವಿಡ್ ಕೇರ್ ಸೆಂಟರ್‍ನ ನೋಡಲ್ ಅಧಿಕಾರಿಯಾಗಿ ಪಪಂ ಕಿರಿಯ ಅಭಿಯಂತರ ಡಿ.ಮಂಜುನಾಥ್ ಉಸ್ತುವಾರಿ ವಹಿಸಲಿದ್ದು ಪಾಸಿಟಿವ್ ಹೊಂದಿರುವವರಿಗೆ…
ತುಮಕೂರು: ನಗರಕ್ಕೆ ಸಮೀಪವಿರುವ ಬೆಳಗುಂಬ ರೆಡ್‍ಕ್ರಾಸ್ ಕಟ್ಟಡದಲ್ಲಿ ನಡೆಯುತ್ತಿರುವ ಕೋವಿಡ್ ಆರೈಕೆ ಕೇಂದ್ರಕ್ಕೆ ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್, ತಹಶೀಲ್ದಾರ್ ಮೋಹನ್ ಕುಮಾರ್, ತಾಲ್ಲೂಕು ವೈದ್ಯಾಧಿಕಾರಿ ಮೋಹನ್ ಸೇರಿದಂತೆ ಹಲವರು ಗುರುವಾರ ಭೇಟಿ ನೀಡಿ ಸೋಂಕಿತರಿಗೆ ಸಿಗುತ್ತಿರುವ ಸೌಲಭ್ಯಗಳು ಮತ್ತು ಸ್ವಚ್ಚತೆಗೆ ಆಧ್ಯತೆ ನೀಡಿರುವುದನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಿ.ಸಿ.ಗೌರಿಶಂಕರ್ ಬೆಳಗುಂಬ ರೆಡ್ ಕ್ರಾಸ್ ಕಟ್ಟಡದಲ್ಲಿ ವಿವಿಧ ಸಂಘ ಸಂಸ್ಥೆಗಳೊಡಗೂಡಿ ಮುರಳೀಧರ್ ಹಾಲಪ್ಪ ಮತ್ತು ರೆಡ್ ಕ್ರಾಸ್ ಸಂಸ್ಥೆಯ ಛೇರ್ಮೆನ್ ನಾಗಣ್ಣ ಅವರು ಕೋವಿಡ್ ಆರೈಕೆ ಕೇಂದ್ರವನ್ನು ಆರಂಭಿಸಿರುವುದು ಈ ಭಾಗದ ಜನರಿಗೆ ಅಷ್ಟೇ ಅಲ್ಲದೇ ವಿವಿಧೆಡೆಗಳಿಂದ ಬರುವ ಸೋಂಕಿತರಿಗೂ ಅನುಕೂಲವಾಗಿದೆ ಎಂದರು. ಇಲ್ಲಿ ಸ್ವಚ್ಚತೆಗೆ ಹೆಚ್ಚಿನ ಆಧ್ಯತೆ ನೀಡಲಾಗಿದೆ. ಸೋಂಕಿತರಿಗೆ ಔಷಧಿ, ಊಟೋಪಚಾರ, ಹಣ್ಣುಗಳು, ಡ್ರೈಫ್ರೂಟ್ಸ್ ಸೇರಿದಂತೆ ಮನೆಗಿಂತಲೂ ಇಲ್ಲೇ ಹೆಚ್ಚಿನ ಸೌಲಭ್ಯಗಳನ್ನು ಸೋಂಕಿತರು ಪಡೆದುಕೊಂಡು ಗುಣಮುಖರಾಗಿ ಮನೆಗೆ ವಾಪಸ್ಸಾಗುತ್ತಿದ್ದಾರೆ ಎಂದು ಶ್ಲಾಘಿಸಿದರು. …
ತುಮಕೂರು: ಕೋವಿಡ್ ನಿಯಂತ್ರಣದ ಜವಾಬ್ದಾರಿಯ ಜೊತೆಗೆ ನಗರದ ಅಭಿವೃದ್ಧಿ ಕಾರ್ಯಗಳಿಗೂ ಆದ್ಯತೆ ನೀಡಬೇಕು. ಪಾಲಿಕೆಯ ಎಲ್ಲಾ ವಾರ್ಡ್‍ಗಳಿಗೂ ಸಮಾನವಾಗಿ ಅಭಿವೃದ್ಧಿ ಅನುದಾನ ನೀಡಬೇಕು. ಕೋವಿಡ್ ಸಂಕಷ್ಟದಲ್ಲಿರುವ ಬಡ ಕುಟುಂಬಗಳಿಗೆ ನೆರವಾಗಿ ಆಹಾರ ಕಿಟ್ ವಿತರಣೆ ಮಾಡಬೇಕು ಎಂದು ಪಾಲಿಕೆ ಸದಸ್ಯರು ಒಮ್ಮತದಿಂದ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಕೊರೋನಾತಂಕದ ನಡುವೆಯೂ ಇಂದು ಸಾಮಾಜಿಕ ಅಂತರ ಕಾಪಾಡುಕೊಳ್ಳುವಿಕೆಯ ಹಿತದೃಷ್ಟಿಯಿಂದ ಗೂಗಲ್ ಮೀಟ್ ಆ್ಯಪ್ ಮೂಲಕ ನಡೆದ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಪಾಲಿಕೆ ಸದಸ್ಯರು ಮೊದಲಾದ್ಯತೆ ಕೋವಿಡ್ ನಿರ್ಮೂಲನೆಗೆ ಹೆಚ್ಚು ಒತ್ತು ಕೊಡಬೇಕು. ಜೊತೆಯಲ್ಲಿಯೇ ಅಭಿವೃದ್ಧಿಯ ಕಡೆಗೂ ಗಮನಹರಿಸಬೇಕು ಎಂದು ಒತ್ತಾಯಿಸಿದರು. ಸಭೆಯಲ್ಲಿ ಸಂಸದ ಜಿ.ಎಸ್. ಬಸವರಾಜು ಮಾತನಾಡಿ, ನಗರದಲ್ಲಿ ಕೋವಿಡ್ ನಿರ್ವಹಣೆ ಮತ್ತಷ್ಟು ಸಮರ್ಪಕವಾಗಿ ನಡೆಯಬೇಕು. ಕನಿಷ್ಠ ಮೂರು ವಾರ್ಡ್ ಗಳಿಗೆ ಒಂದರಂತೆ ಕೊರೋನಾ ಆರೈಕೆ ಕೇಂದ್ರ ಆರಂಭಿಸಿ ಸೋಂಕಿತರಿಗೆ ಆರೈಕೆ ಕೇಂದ್ರಲ್ಲಿಯೇ ಚಿಕಿತ್ಸೆ ನೀಡಬೇಕು. ಬಡವರ ಹಸಿವು…
ತುಮಕೂರು: ಜಿಲ್ಲೆಗೆ ನಿಗಧಿಪಡಿಸಿರುವ ಪ್ರಮಾಣದಂತೆ ಬಿತ್ತನೆ ಬೀಜ, ರಸಗೊಬ್ಬರ ವಿತರಣೆ ಮಾಡುವಂತೆ ರಸಗೊಬ್ಬರ ಹಾಗೂ ಬಿತ್ತನೆ ಬೀಜ ಸರಬರಾಜು ಮತ್ತು ವಿತರಕರಿಗೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ಕೃಷಿ ಚಟುವಟಿಕೆ ಆರಂಭದ ಹಿನ್ನೆಲೆಯಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರ ಸಿದ್ಧತೆ ಕುರಿತು ಗೂಗಲ್ ಮೀಟ್ ಮೂಲಕ ಇತ್ತೀಚೆಗೆ ಬಿತ್ತನೆ ಬೀಜ ಮತ್ತು ರಸಗೊಬ್ಬರ ಸರಬರಾಜುದಾರರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ರೈತರಿಗೆ ಬೀಜ ಮತ್ತು ರಸಗೊಬ್ಬರ ವಿತರಣೆ ಸಂದರ್ಭದಲ್ಲಿ ಕೊರೋನಾ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ಕೋವಿಡ್ ತಡೆಗಟ್ಟಲು ಮುಂಜಾಗ್ರತೆಯಾಗಿ ಸ್ಯಾನಿಟೈಜರ್‍ಗಳನ್ನು ಬಳಸಬೇಕು. ಒಬ್ಬ ರೈತರಿಂದ ಮತ್ತೊಬ್ಬ ರೈತರ ನಡುವೆ ಅಂತರ ಕಾಪಾಡುವಂತೆ ಮತ್ತು ಮಾಸ್ಕ್ ಬಳಸುವಂತೆ ಸೂಚಿಸಬೇಕು ಎಂದರಲ್ಲದೆ ಸ್ವಚ್ಛತೆ ಕಾಪಾಡಲು ರೈತರಿಗೆ ಸಾಬೂನು ಮತ್ತು ನೀರಿನ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಗೆ ನಿಗಧಿಪಡಿಸಿರುವ ಕಾಪು ದಾಸ್ತಾನನ್ನು ಶೀಘ್ರವಾಗಿ ದಾಸ್ತಾನು ಮಾಡಬೇಕು ಎಂದು ಕರ್ನಾಟಕ ರಾಜ್ಯ ಬೀಜ ನಿಗಮ ಮತ್ತು…
ತುಮಕೂರು: ಕೋವಿಡ್-19 ನಿರ್ವಹಣೆ ದೃಷ್ಟಿಯಿಂದ ಕ್ವಾರಿ, ಕ್ರಷರ್, ರೈಸ್ ಮಿಲ್ ಮಾಲೀಕರು ಸುಮಾರು 300 ಆಮ್ಲಜನಕ ಸಾಂದ್ರಕಗಳ ನೆರವು ನೀಡಿದ್ದು, ಇದರಿಂದ ಪ್ರಸ್ತುತ ಜಿಲ್ಲೆಯಲ್ಲಿ ಸುಮಾರು 600 ಆಮ್ಲಜನಕ ಹಾಸಿಗೆಗಳ ವ್ಯವಸ್ಥೆಯಾದಂತಾಗಿದೆ ಎಂದು ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಂದು ತುಮಕೂರು ಮಚೆರ್ಂಟ್ ಕ್ರೆಡಿಟ್ ಕೋ-ಆಪರೇಟಿವ್, ಜಿಲ್ಲಾ ಜಲ್ಲಿ ಕ್ರಷರ್ ಆಸೋಸಿಯೇಷನ್, ಜಿಲ್ಲಾ ರೈಸ್ ಮಿಲ್ ಆಸೋಸಿಯೇಷನ್ ಹಾಗೂ ಮತ್ತಿತರ ಕೈಗಾರಿಕೆ ಮತ್ತು ಸಂಘ ಸಂಸ್ಥೆಗಳ ವತಿಯಿಂದ ನೀಡಿದ್ದ 300 ಆಮ್ಲಜನಕ ಸಾಂದ್ರಕಗಳನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿ ಮಾತನಾಡಿದ ಅವರು, ಆಮ್ಲಜನಕ ಸಾಂದ್ರಕಗಳ ನೆರವಿನಿಂದಾಗಿ ಕೋವಿಡ್ ನಿರ್ವಹಣೆಗೆ ಹೆಚ್ಚು ಸಹಕಾರಿಯಾಗಿದೆ ಎಂದು ತಿಳಿಸಿದರು. ಕೊರೋನಾ ನಿಯಂತ್ರಣದ ಹಿನ್ನೆಲೆಯಲ್ಲಿ ಜಿಲ್ಲಾಡಳಿತಕ್ಕೆ ದೊಡ್ಡ ಮಟ್ಟದ ಸಹಕಾರ ದಾನಿಗಳಿಂದ ಬರುತ್ತಿದ್ದು, ಇದಕ್ಕೆ ನಾನು ಅಭಾರಿಯಾಗಿದ್ದೇನೆ ಎಂದ ಸಚಿವರು ಜಿಲ್ಲೆಯ ಪರವಾಗಿ, ಸರ್ಕಾರದ ಪರವಾಗಿ ಹೃದಯ ಪೂರ್ವಕ ಅಭಿನಂದನೆ ಸಲ್ಲಿಸಿದರು. ದುಡಿದ ಹಣದಿಂದ ಸಾರ್ವಜನಿಕ ವಲಯಕ್ಕೆ…
ತುಮಕೂರು: ಕೋವಿಡ್-19 ಸಂದರ್ಭವನ್ನು ದುರುಪಯೋಗ ಪಡಿಸಿಕೊಂಡಿ ಯಾರೂ ಬಾಲ್ಯವಿವಾಹಕ್ಕೆ ಮುಂದಾಗಬಾರದು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಪೋಷಕರಲ್ಲಿ ಮನವಿ ಮಾಡಿದ್ದಾರೆ. ಕೊರೋನಾ ಲಾಕ್‍ಡೌನ್, ಕಫ್ರ್ಯೂ ಸಂದರ್ಭದಲ್ಲಿ ಬಹುತೇಕ ವಿವಾಹಗಳನ್ನು ಮನೆಯ ಹತ್ತಿರ ಮಾಡಲಾಗುತ್ತಿದೆ. ಕೆಲವರು ಈ ವೇಳೆ ಯಾರಿಗೂ ತಿಳಿಯದಂತೆ ಬಾಲ್ಯ ವಿವಾಹವನ್ನು ಮಾಡುತ್ತಿದ್ದಾರೆ. ಇದರಿಂದ ಮಕ್ಕಳ ಸುಖ ಜೀವನ ಹಾಳಾಗುತ್ತದೆ. ಆದ್ದರಿಂದ ಗಂಡಿಗೆ 21 ಹಾಗೂ ಹೆಣ್ಣಿಗೆ 18 ವರ್ಷ ತುಂಬುವವರೆಗೂ ವಿವಾಹ ಮಾಡಬಾರದು. ಬಾಲ್ಯವಿವಾಹದಿಂದ ಮಕ್ಕಳ ದೈಹಿಕ, ಮಾನಸಿಕ ಬೆಳವಣಿಗೆ ಮೇಲೆ ದುಷ್ಪರಿಣಾಮ ಬೀರುತ್ತದೆ. ಅವರ ಜೀವನ ನರಕವಾಗುತ್ತದೆ ಎಂದು ತಿಳಿಸಿದ್ದಾರೆ. ಇದು ಮುಂದೆ ಹುಟ್ಟುವ ಮಕ್ಕಳ ಮೇಲೆ ಸಾಕಷ್ಟು ದುಷ್ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಈ ರೀತಿ ಕ್ರಮ ಕೈಗೊಳ್ಳಲಾಗಿದೆ. ಪೋಷಕರು ಕೋವಿಡ್-19 ಸಂದರ್ಭವನ್ನು ದುರುಪಯೋಗ ಪಡಿಸಿಕೊಂಡು ತಮ್ಮ ಮಕ್ಕಳಿಗೆ ಬಾಲ್ಯ ವಿವಾಹ ಮಾಡಲು ಮುಂದಾಗಬಾರದು. ಬಾಲ್ಯವಿವಾಹ ಮಾಡುವುದು ಅಪರಾಧ. ಅಪ್ರಾಪ್ತ ಹುಡುಗಿಯನ್ನು ಮದುವೆಯಾಗುವ ಹುಡುಗ, ಪೋಷಕರು ಹಾಗೂ ಪುರೋಹಿತರನ್ನು ಒಳಗೊಂಡಂತೆ ದೂರು ದಾಖಲಿಸಲಾಗುವುದು.ಬಾಲ್ಯವಿವಾಹ ಮಾಡುವವರ ವಿರುದ್ಧ…
ತುಮಕೂರು: ನಗರದ ಹನುಮಂತಪುರ ಶ್ರೀ ಕೊಲ್ಲಾಪುರದಮ್ಮ ಸಮುದಾಯ ಭವನದ ಆವರಣದಲ್ಲಿ ಉಚಿತ ಉಪಹಾರ ವಿತರಣೆ ಹಾಗೂ 45 ವರ್ಷ ಮೇಲ್ಪಟ್ಟವರಿಗೆ ಉಚಿತ ಮೊದಲನೇ ಲಸಿಕಾ ಕಾರ್ಯಕ್ರಮಕ್ಕೆ ಮಹಾನಗರ ಪಾಲಿಕೆ ಮೇಯರ್ ಬಿ.ಜಿ.ಕೃಷ್ಣಪ್ಪ, ಉಪಮೇಯರ್ ನಾಜೀಮಾಬೀ, ಆಯುಕ್ತರಾದ ರೇಣುಕಾ, ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ನಯಾಜ್, ನಗರ ಯೋಜನಾ ಸ್ಥಾಯಿ ಸಮಿತಿ ಅಧ್ಯಕ್ಷ ಧರಣೇಂದ್ರಕುಮಾರ್, ಸದಸ್ಯರಾದ ಟಿ.ಜಿ.ನರಸಿಂಹಮೂರ್ತಿ, ಎ.ಶ್ರೀನಿವಾಸ್, ಶ್ರೀನಿವಾಸಮೂರ್ತಿ ಮುಂತಾದವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯ ಟಿ.ಜಿ.ನರಸಿಂಹಮೂರ್ತಿ ಮಾತನಾಡಿ, ಲಾಕ್‍ಡೌನ್‍ನಿಂದ ನಗರದ ಹನುಮಂತಪುರ ಹಾಗೂ ಸುತ್ತಮುತ್ತಲಿರುವ ಬಡವರು, ನಿರ್ಗತಿಕರು ಊಟದ ಸಮಸ್ಯೆ ಎದುರಿಸುತ್ತಿರುವ ಹಿನ್ನಲೆಯಲ್ಲಿ ಶ್ರೀ ಕೊಲ್ಲಾಪುರದಮ್ಮ ಸಮುದಾಯ ಭವನ ಸಮಿತಿ ವತಿಯಿಂದ ಬೆಳಗಿನ ಉಚಿತ ಉಪಹಾರದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದರು. ಶ್ರೀ ಕೊಲ್ಲಾಪುರದಮ್ಮ ಸಮುದಾಯ ಭವನದ ವತಿಯಿಂದ ಈ ಹಿಂದೆ ಹಲವಾರು ಸಾಮಾಜಿಕ ಸೇವಾ ಕಾರ್ಯಗಳನ್ನು ಮಾಡುತ್ತಾ ಬಂದಿದ್ದು, ಪ್ರಸ್ತುತ ಕೊರೋನ ಸಂಕಷ್ಟದಲ್ಲಿ ಹನುಮಂತಪುರ ಸೇರಿದಂತೆ ನಗರದ 20,…











