ಹುಳಿಯಾರು: ಲಾಕ್‍ಡೌನ್ ಪರಿಣಾಮ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಪ್ರಕರಣ ಕ್ಷಿಣಿಸುತ್ತಿದ್ದು ಹದಿನೈದು ದಿನಗಳಲ್ಲಿ ಶೇ.5 ಕ್ಕಿಂತ ಕಡಿಮೆಗೆ ಬರಲಿದೆ. ಆಗ ಯಾವುದಕ್ಕೂ ನಿರ್ಬಂಧವಿಲ್ಲದೆ ಸಹಜ ಸ್ಥಿತಿಗೆ ರಾಜ್ಯ ಬರಲಿದೆ. ಆದರೆ ಕೊರೋನಾ ವೈರಸ್ ಮಾತ್ರ ಇರಲಿದ್ದು ಜನರು ಈಗಿನಂತೆ ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು. ಹುಳಿಯಾರು ಮಾತಾ ಚಾರಿಟಬಲ್ ಟ್ರಸ್ಟ್‍ನ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದ ಅವರು ಹುಳಿಯಾರಿನ 8, 10, 12, 13 ವಾರ್ಡ್‍ಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದಾರೆ. ಕೋವಿಡ್ ಲಕ್ಷಣ ಹೊಂದಿ ಹೋಂ ಐಸೋಲೇಷನ್ ನೆಪದಲ್ಲಿ ಮನೆಯಲ್ಲಿಯೇ ಉಳಿಯುತ್ತಿರುವವರು, ಸರಿಯಾಗಿ ಮಾರ್ಗಸೂಚಿ ಪಾಲಿಸದೆ ಆಚೆಕಡೆ ಸುತ್ತಾಡುತ್ತಿರುವುದರ ಮೂಲಕ ಕೋವಿಡ್ ಹೆಚ್ಚಳಕ್ಕೆ ಕಾರಣರಾಗುತ್ತಿದ್ದಾರೆ. ಹಾಗಾಗಿ ಮೇ. 19 ನೇ ತಾರೀಖಿನಿಂದ ಪಾಸಿಟಿವ್ ಬಂದಿರುವವರನ್ನು ಕೂಡಲೇ ಕೋವಿಡ್ ಕೇರ್ ಸೆಂಟರ್‍ಗೆ ಸ್ಥಳಾಂತರಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ.ಮಾಧುಸ್ವಾಮಿ ಪಟ್ಟಣ ಪಂಚಾಯಿತಿ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.…
Author: News Desk Benkiyabale
ತುಮಕೂರು : ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅವರು ಇಂದು ಮಧುಗಿರಿ ತಾಲ್ಲೂಕಿನ ಬಡವನಹಳ್ಳಿ, ಚಂದ್ರಗಿರಿ, ಸಿದ್ದಾಪುರ, ಮಿಡಿಗೇಶಿ , ಐ.ಡಿ. ಹಳ್ಳಿ ಗ್ರಾಮ ಪಂಚಾಯತ್‍ಗಳ ಗ್ರಾಮಗಳಲ್ಲಿ ಕೋವಿಡ್ 19 ಪ್ರಕರಣಗಳು ಧೃಡಪಟ್ಟ ಸೋಂಕಿತರ ಮನೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿ ಸಾರ್ವಜನಿಕರಲ್ಲಿ ಕೋವಿಡ್ ನಿಯಂತ್ರಿಸುವ ಕ್ರಮಗಳ ಬಗ್ಗೆ ಅರಿವು ಮೂಡಿಸಿದರು. ಈ ಪಂಚಾಯತಿ ವ್ಯಾಪ್ತಿಗಳಲ್ಲಿ ಕೋವಿಡ್-19 ಧನಾತ್ಮಕ ಪ್ರಕರಣಗಳು ಇಳಿಮುಖ ವಾಗುತ್ತಿರುವುದರಿಂದ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿ ಕೋವಿಡ್ ಮುಕ್ತ ಗ್ರಾ.ಪಂ ಆಗಿ ಮಾಡಲು ಪಂಚಾಯತ್ ಅಭಿವೃದ್ದಿ ಅಧಿಕಾರಿಗಳಿಗೆ ಸೂಚಿಸಿದರು. ಚಂದ್ರಗಿರಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಯ ಸಭೆಯನ್ನು ಉದ್ದೇಶಿಸಿ ಕೋವಿಡ್-19 ನಿಯಂತ್ರಣಕ್ಕೆ ಅಗತ್ಯವಾದ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಸಮಿತಿಯ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಣೆ ಮಾಡುವುದರ ಮೂಲಕ ಕೋವಿಡ್ 19 ಸಂಪೂರ್ಣವಾಗಿ ನಿಯಂತ್ರಣ ಮಾಡುವಂತೆ ಮನವಿ ಮಾಡಿದರು.…
ತುಮಕೂರು : ರಾಜ್ಯ ಸರ್ಕಾರ ಕೊರೋನಾ ಸೋಂಕಿನ ನಿಯಂತ್ರಣಾ ಕ್ರಮಗಳನ್ನು ಹಿನ್ನೆಲೆಯಲ್ಲಿ ಸರ್ಕಾರದ ಆದೇಶದಂತೆ ಮೇ 24 ರಿಂದ ಜೂನ್ 7ರವರೆಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿರುವ ಇಂದಿರಾ ಕ್ಯಾಂಟೀನ್‍ಗಳಲ್ಲಿ ಉಚಿತವಾಗಿ ಬೆಳಗಿನ ಉಪಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟಗಳನ್ನು ವಿತರಣೆ ಮಾಡಲು ಅಗತ್ಯ ಕ್ರಮ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದ್ದಾರೆ.
ತುಮಕೂರು: ಕರ್ನಾಟಕ ಸರ್ಕಾರ ಕೋವಿಡ್-19 2ನೇ ಅಲೆಯ ಲಾಕ್‍ಡೌನ್‍ನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಸ್ಲಂ ನಿವಾಸಿಗಳು ನಗರದ ಭಾರತಿ ನಗರದಲ್ಲಿ ಮನೆ ಮುಂದೆ ಪ್ರತಿಭಟನೆ ಮಾಡಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಸ್ಥಳೀಯ ಮುಖಂಡ ಕೆಂಪಣ್ಣ ಮಾತನಾಡಿ ಸರ್ಕಾರ ಲಾಕ್‍ಡೌನ್ ಮಾಡಿದೆ. ಆದರೆ ಯಾವುದೇ ಪರಿಹಾರ ಕೊಡದೆ ಸ್ಲಂಗಳಲ್ಲಿ ದಿನೇ ದಿನೇ ಕೊರೊನಾ ಪಾಸಿಟಿವ್ ಕೇಸ್‍ಗಳು ದಾಖಲಾಗುತ್ತಿದ್ದು, ಸ್ಥಳೀಯ ಆರೋಗ್ಯ ಇಲಾಖೆಯಿಂದ ಕೊರೊನಾ ಬಂದವರನ್ನು ಕೋವಿಡ್ ಕೇರ್ ಸೆಂಟರ್‍ಗೆ ಕರೆದೊಯ್ಯಬೇಕು, ಇಲ್ಲಿ ಅತೀ ಹೆಚ್ಚಾಗಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುವವರೆ ಹೆಚ್ಚಾನಿದ್ದು ಸರ್ಕಾರ 18 ವರ್ಷದಿಂದ 45 ವರ್ಷದೊಳಗಿನ ಎಲ್ಲರಿಗೂ ಆನ್‍ಲೈನ್ ರಿಜಿಸ್ಟರ್ ಮಾಡಿಕೊಂಡು ಉಚಿತ ಲಸಿಕೆ ಪಡೆಯುವಂತೆ ತಿಳಿಸಿದೆ. ಆದರೆ ಸ್ಲಂಗಳಲ್ಲಿ ಹೆಚ್ಚು ಅನಕ್ಷರಸ್ಥರು ಇದ್ದು ವ್ಯಾಕ್ಸಿನೇಷನ್ ಪಡೆಯಲು ತೊಂದರೆಯಾಗುತ್ತಿದೆ. ಆದ್ದ ರಿಂದ ಸ್ಥಳೀಯ ಆರೋಗ್ಯ ಅಧಿಕಾರಿಗಳು ಇಲಾಖೆಯ ಸಿಬ್ಬಂಧಿಗಳನ್ನು ಸ್ಲಂಗಳಿಗೆ ಕಳಿಸಿ ವ್ಯಾಕ್ಸಿನ್ ಹಾಕಿಸಲು ಕ್ರಮ ಕೈಗೊಳ್ಳಬೇಕು. ಎಂದರು. ನಂತರ ಮುನ್ನಿ ಎಂಬ…
ತುರುವೇಕೆರೆ: ಪಟ್ಟಣದ ರೋಟರಿ ಕ್ಲಬ್‍ನ ವತಿಯಿಂದ ಕೋವಿಡ್-19 ರೋಗದ ವಿರುದ್ಧ ಹೋರಾಟ ನಡೆಸುತ್ತಿರುವ ತಾಲ್ಲೂಕಿನ ವಾರಿಯರ್ಸ್‍ಗಳಾದ ಆಶಾಕಾರ್ಯಕರ್ತೆಯರು ಮತ್ತು ಹೋಂಗಾರ್ಡ್ ಹಾಗೂ ಪ.ಪಂಚಾಯ್ತಿ ಸಿಬ್ಬಂದಿಗಳಿಗೆ ಫೇಸ್ ಶೀಲ್ಡ್, ಎನ್-95 ಮಾಸ್ಕ್, ಸ್ಯಾನಿಟೈಸರ್‍ಗಳನ್ನು ಉಚಿತವಾಗಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ರೋಟರಿಕ್ಲಬ್‍ನ ಅಧ್ಯಕ್ಷರು, ಪದಾಧಿಕಾರಿಗಳು, ಪ.ಪಂ ಅಧ್ಯಕ್ಷರು, ಸದಸ್ಯರು, ಪ.ಪಂ ಮುಖ್ಯಾಧಿಕಾರಿ, ಮುಖಂಡರುಗಳೊಂದಿಗೆ ಭಾಗವಹಿಸಿರುವ ಶಾಸಕ ಮಸಾಲ ಜಯರಾಮ್‍ರವರು ತುರುವೇಕೆರೆ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಶೆಟ್ಟಗೊಂಡನಹಳ್ಳಿ, ಮಾಯಸಂದ್ರ, ಮಾಚೇನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಕೋವಿಡ್-19 ಪ್ರಕರಣಗಳ ಮಾಹಿತಿ ಪಡೆದರು. ಪಾಸಿಟಿವ್ ಬಂದಂತಹ ಪ್ರಕರಣಗಳನ್ನು ಕ್ವಾರಂಟೈನ್ ಒಳಪಡಿಸುವಂತೆ, ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಸ್ಯಾನಿಟೈಸರ್ ಸಿಂಪಡಿಸಿ, ಎಲ್ಲರಿಗೂ ಮಹಿತಿ ನೀಡುವಂತೆ ಆಶಾಕಾರ್ಯಕರ್ತೆಯರಿಗೆ ಸೂಚಿಸಲಾಯಿತು. ಶಾಸಕ ಮಸಾಲ ಜಯರಾಮ್‍ರವರು ಕೋವಿಡ್ ರೋಗಕ್ಕೆ ಸಂಬಂಧಿಸಿದಂತೆ ಔಷದಿಗಳು, ಮಾಸ್ಕ್, ಸ್ಯಾನಿಟೈಸರ್‍ಗಳನ್ನು ಉಚಿತವಾಗಿ ವಿತರಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಗ್ರಾ.ಪಂ ಅಧ್ಯಕ್ಷರು, ಸದಸ್ಯರು,…
ತುಮಕೂರು: ನಗರದ 26ನೇ ವಾರ್ಡಿನ ಕೋವಿಡ್ ನಿರ್ವಹಣಾ ಸಮಿತಿ ಹಾಗೂ ವಾರ್ಡಿನ ವರ್ತಕರು ಸರಕಾರದ ವಿಧಿಸಿರುವ ಲಾಕ್‍ಡೌನ್ ಮುಗಿಯುವವರೆಗೂ ವಾರದಲ್ಲಿ ಮೂರು ದಿನ ಮಾತ್ರ ಅಂಗಡಿ ಮುಂಗಟ್ಟುಗಳನ್ನು ಬೆಳಗ್ಗೆ 6-10ರವರೆಗೆ ಮಾತ್ರ ತೆರೆದಿರಲು ನಿರ್ಧರಿಸಿದ್ದು, ಉಳಿದ ನಾಲ್ಕು ದಿನ ಸಂಪೂರ್ಣ ಲಾಕ್‍ಡೌನ್‍ಗೆ ಅನುಮತಿ ಕೋರಿ ಇಂದು ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದರು. ನಗರದ ಹೃದಯ ಭಾಗವಾದ ಅಶೋಕ ನಗರ, ಎಸ್.ಎಸ್.ಪುರಂ ಮತ್ತು ಎಸ್‍ಐಟಿ ಬಡಾವಣೆಯಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗಿರುವುದಲ್ಲದೆ ಸುಮಾರು 40ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ರೋಗ ಮತ್ತಷ್ಟು ಉಲ್ಬಣಗೊಳ್ಳುವುದನ್ನು ತಡೆಯುವ ನಿಟ್ಟಿನಲ್ಲಿ ವರ್ತಕರು ಹಾಗೂ ಕೋವಿಡ್ ನಿರ್ವಹಣಾ ಸಮಿತಿಯ ಸದಸ್ಯರುಗಳು ಚರ್ಚೆ ನಡೆಸಿ, ವಾರದ ಏಳು ದಿನಗಳಲ್ಲಿ ಸೋಮವಾರ, ಮಂಗಳವಾರ ಮತ್ತು ಬುಧವಾರ ಮಾತ್ರ ಬೆಳಗ್ಗೆ 6 ರಿಂದ 10ವರೆಗೆ ಅಂಗಡಿ ಮುಂಗಟ್ಟುಗಳನ್ನು ತೆರೆದು ದಿನಸಿ, ಹಣ್ಣು, ತರಕಾರಿಗಳನ್ನು ಮಾರಾಟ ಮಾಡಲು ನಿರ್ಧರಿಸಿದ್ದು, ಗುರುವಾರದಿಂದ ಭಾನುವಾರದವರೆಗೆ ಹಾಲಿನ…
ತುಮಕೂರು: ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅವರು ಶಿರಾ ತಾಲ್ಲೂಕಿನ ಹಾಟ್‍ಸ್ಪಾಟ್ ಗ್ರಾಮಗಳಾದ ಹನುಮಂತನಗರ, ಮಾಯಸಂದ್ರ, ಗುಳಿಗೆ ನಹಳ್ಳಿ ಗ್ರಾಮಗಳಲ್ಲಿ ಕೋವಿಡ್ 19 ಪ್ರಕರಣಗಳು ಧೃಡಪಟ್ಟ ವ್ಯಕ್ತಿಗಳ ಮನೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು ಹಾಗೂ ಸಾರ್ವಜನಿಕರಲ್ಲಿ ಕೋವಿಡ್ ನಿಯಂತ್ರಿಸುವ ಕ್ರಮಗಳ ಬಗ್ಗೆ ಅರಿವು ಮೂಡಿಸಿದರು. ಮನೆಯಿಂದ ಹೊರ ಬರುವಾಗ ಎಲ್ಲರೂ ಸಹ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದು, ನಿಯ ಮಿತವಾಗಿ ಸೋಪಿನಿಂದ ತಮ್ಮ ಕೈಗಳನ್ನು ಸ್ವಚ್ಛಗೊಳಿಸಿ ಕೊಳ್ಳುವುದು, ಅನಗತ್ಯವಾಗಿ ಅಕ್ಕಪಕ್ಕದ ಮನೆಗಳಿಗೆ ಹೋಗಿ ಬರುವುದು ಅಥವಾ ಬೇರೆ ಬೇರೆ ಗ್ರಾಮಗಳಿಗೆ ಹೋಗಿ ಬರುವುದು ಮಾಡಬಾರದು. ಅನಗತ್ಯವಾಗಿ ಮನೆಯಿಂದ ಹೊರ ಬಂದು ಓಡಾಡುವುದರಿಂದ ಕೋವಿಡ್-19 ಸೋಂಕಿಗೆ ತಾವು ಸಹ ಒಳಗಾಗುವ ಸಂಭವವಿದೆ. ಆದ್ದರಿಂದ ಕೆಲವು ದಿನಗಳ ಕಾಲ ಸಾರ್ವಜನಿಕರು ಮನೆಯಲ್ಲಿಯೇ ಇದ್ದು ಸುರಕ್ಷಿತವಾಗಿದ್ದುಕೊಂಡು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಅರಿವು ಮೂಡಿಸಿದರು.…
ತುಮಕೂರು: ಕೊರೋನಾ ಸೋಂಕು ಪತ್ತೆಗೆ ಸಿ.ಟಿ ಸ್ಕ್ಯಾನಿಂಗ್ ಮಾಡಲಾಗುತ್ತಿದ್ದು, ಸರ್ಕಾರ ನಿಗದಿಪಡಿಸಿದ ಶುಲ್ಕಕ್ಕಿಂತ ಹೆಚ್ಚು ಹಣ ಪಡೆದಿರುವ ಆಸ್ಪತ್ರೆಗಳ ಪರವಾನಗಿ ರದ್ದುಪಡಿಸುವಂತೆ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, 4 ಆಸ್ಪತ್ರೆಗಳಿಗೆ ನೋಟಿಸ್ ನೀಡಲಾಗಿದೆ. ಸಿ.ಟಿ ಸ್ಕ್ಯಾನಿಂಗ್ ಮಾಡಲು ಸರ್ಕಾರ ನಿಗದಿಪಡಿಸಿದ ಶುಲ್ಕಕ್ಕಿಂತ ಹೆಚ್ಚು ಹಣ ಪಡೆಯಲಾಗುತ್ತಿದೆ. ಅಂತಹ ಆಸ್ಪತ್ರೆಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಸುಧಾಕರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಒತ್ತಾಯಿಸಿದ್ದರು. ಇದಕ್ಕೆ ಸ್ಪಂದಿಸಿದ ಆರೋಗ್ಯ ಸಚಿವರು, ಈವರೆಗೂ ಕ್ರಮ ಕೈಗೊಳ್ಳದಿರುವುದಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳ ವಿರುದ್ಧವೇ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದರು. ದುಬಾರಿ ಶುಲ್ಕ ವಸೂಲಿ ಮಾಡಿದ ಆಸ್ಪತ್ರೆಗಳ ಪರವಾನಗಿ ರದ್ದುಪಡಿಸಿ, ಅಗತ್ಯ ಕ್ರಮ ಕೈಗೊಂಡು ನನಗೆ ವರದಿ ಮಾಡಬೇಕು ಎಂದು ಸೂಚಿಸಿದ್ದರು. ಈಗಾಗಲೇ ನೋಟಿಸ್ ನೀಡಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದರು. ಆದರೆ ಈಗ ಮತ್ತೆ ನೋಟಿಸ್ ಕೊಟ್ಟಿದ್ದಾರೆ. ಈಗಾಗಲೇ ನೋಟಿಸ್‍ಗೆ ಕೊಟ್ಟಿರುವ ವಿವರಣೆಯನ್ನು…
ತುಮಕೂರು: ಕೋವಿಡ್ ಸೋಂಕು ಪ್ರಕರಣ ಪ್ರಮಾಣದಲ್ಲಿ ಕೆಂಪುವಲಯದಲ್ಲಿದ್ದ ಜಿಲ್ಲೆಯು ಕಿತ್ತಲೆ ವಲಯಕ್ಕೆ ಬಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ನಡೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಎಲ್ಲಾ ಜಿಲ್ಲೆಗಳ ಪರಿಶೀಲನೆ ಕೈಗೊಂಡ ಸಂದರ್ಭದಲ್ಲಿ ಜಿಲ್ಲೆಯಲ್ಲಿ 27,000 ಇದ್ದ ಸೋಂಕು ಪ್ರಕರಣಗಳ ಸಂಖ್ಯೆ ಪ್ರಸ್ತುತ 17,000 ಕ್ಕೆ ಇಳಿದಿದೆ ಎಂದರು. ಜಿಲ್ಲಾಡಳಿತ ಮತ್ತು ಅಧಿಕಾರಿಗಳ ಉತ್ತಮ ಕಾರ್ಯ ನಿರ್ವಹಣೆಯಿಂದಾಗಿ ಕೊರೋನಾ ಅಬ್ಬರ ದಿನೇ ದಿನೇ ತಗ್ಗಿ ಕಿತ್ತಲೆ ವಲಯಕ್ಕೆ ಬಂದಿರುವುದು ಒಳ್ಳೆಯ ಸೂಚನೆ ಎಂದು ತಿಳಿಸಿದರಲ್ಲದೆ ಮೇ 15 ರಿಂದ ವರದಿಯಾಗಿರುವ ಕೋವಿಡ್ ಸೋಂಕು ಪ್ರಕರಣಗಳನ್ನು ಅವಲೋಕಿಸಿದಾಗ ಪಾಸಿಟಿವ್ ಪ್ರಕರಣಗಳು ಇಳಿಮುಖವಾಗುತ್ತಿವೆ. ಕಳೆದ ಮೇ 15 ರಂದು 42.29%ರಷ್ಟಿದ್ದ ಸೋಂಕಿತರ ಸಂಖ್ಯೆ ಮೇ 23ರಂದು 31.66%ಕ್ಕೆ ಇಳಿದಿದೆ ಎಂದರು. ಗ್ರಾಮಗಳಲ್ಲಿ ಹರಡುತ್ತಿರುವ ಕೊರೋನಾ ಸೋಂಕಿನ ಪ್ರಸರಣ ತಡೆಗೆ ಜಿಲ್ಲಾಡಳಿತದ ಜೊತೆಗೆ ಜನರ ಸಹಕಾರ ಅಗತ್ಯ.…
ತುಮಕೂರು : ಕೋವಿಡ್ ಟೆಸ್ಟ್‍ಗಳನ್ನು ಹೆಚ್ಚುಗೊಳಿಸಿ ಅಗತ್ಯ ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಪಾಸಿಟಿವಿಟಿ ಪ್ರಮಾಣ ಇಳಿಕೆಗೆ ಕ್ರಮವಹಿಸುವಂತೆ ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಕೋವಿಡ್ ನಿಯಂತ್ರಣ ಸಂಬಂಧ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಸಚಿವರು, ಸರ್ಕಾರ ಜಿಲ್ಲೆಯಲ್ಲಿ ನಿತ್ಯ 5,400 ಕೋವಿಡ್ ಪರೀಕ್ಷೆಗಳನ್ನು ನಡೆಸುವಂತೆ ಗುರಿ ನಿಗಧಿಪಡಿಸಿದೆ. ಆದರೆ ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ 7000 ಕೋವಿಡ್ ಟೆಸ್ಟ್‍ಗಳನ್ನು ಕಡ್ಡಾಯವಾಗಿ ಮಾಡಬೇಕು ಎಂದು ಸೂಚನೆ ನೀಡಿದರು. ಖಾಸಗಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರಿದ್ದರೆ ಅವರನ್ನು ಜಿಲ್ಲಾಸ್ಪತ್ರೆಗೆ ನಿಯೋಜಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರಿಗೆ ಸೂಚಿಸಿದರು. ಕೊರೋನಾ ಸೋಂಕಿತರ ಆರೈಕೆ ಕೇಂದ್ರಗಳಲ್ಲಿನ ಆಹಾರ ವಿತರಣೆ ಬಗ್ಗೆ ಪರಿಶೀಲನೆ ನಡೆಸಿದ ಸಚಿವರು, ಪ್ರತಿ ಕೋವಿಡ್ ಆರೈಕೆ ಕೇಂದ್ರಕ್ಕೆ ವೈದ್ಯರು ಮತ್ತು ಪೊಲೀಸರನ್ನು ನಿಯೋಜಿಸಬೇಕು. ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಕೇಂದ್ರಕ್ಕೆ ಸ್ಥಳಾಂತರಿಸಬೇಕು. ಸ್ವಚ್ಛತೆಯನ್ನು ಕಾಪಾಡಬೇಕು…











