Author: News Desk Benkiyabale

 ತುಮಕೂರು : ಜಿಲ್ಲೆಯಲ್ಲಿ ಕೋವಿಡ್ ಪರಿಸ್ಥಿತಿ ನಿಯಂತ್ರಣಕ್ಕೆ ಬರುವ ಲಕ್ಷಣಗಳು ಗೋಚರಿಸಿದ್ದು, ಮೂರನೇ ಅಲೆಯನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಈಗಿನಿಂದಲೇ ಸಿದ್ಧತೆಗಳನ್ನು ಆರಂಭಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿಂದು ಜಿಲ್ಲೆಯ ಕೋವಿಡ್ ಪರಿಸ್ಥಿತಿಯನ್ನು ಪರಿಶೀಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಸದ್ಯ ಸೋಂಕಿನ ಹರಡುವಿಕೆ ಮತ್ತು ಸಾವಿನ ಪ್ರಮಾಣವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸರಕಾರದ ಸೂಚನೆಗಳನ್ನು ಚಾಚೂ ತಪ್ಪದೆ ಪಾಲಿಸಬೇಕು ಎಂದು ಹೇಳಿದರು. ಜಿಲ್ಲೆಗೆ ನಾಲ್ಕು ಆಕ್ಸಿಜನ್ ಪ್ಲಾಂಟ್ ಅಳವಡಿಸಲು ಆದೇಶಿಸಲಾಗಿತ್ತು. ಉಸ್ತುವಾರಿ ಸಚಿವರು ಹೆಚ್ಚುವರಿಯಾಗಿ ಮಧುಗಿರಿಗೆ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ಅಲ್ಲಿಗೆ ಒಂದು ಸೇರಿ ಒಟ್ಟು ಐದು ಪ್ಲಾಂಟ್ ಕೊಡಲಾಗುವುದು. ಅಲ್ಲದೆ 25 ಆಮ್ಲಜನಕ ಸಾಂದ್ರಕಗಳನ್ನು ನೀಡಲಾಗಿದೆ. ಹೆಚ್ಚುವರಿಯಾಗಿ ಅಗತ್ಯವಿರುವ ಎಲ್ಲಾ ಔಷಧಗಳನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದರು. ಆರಂಭದಲ್ಲೇ ಸೋಂಕು ಪತ್ತೆ ಹಚ್ಚಿ ಚಿಕಿತ್ಸೆ ನೀಡಲು ಕ್ರಮ ಕೈಗೊಂಡರೆ ಹೆಚ್ಚಿನ…

Read More

ತುಮಕೂರು:       ರಾಜ್ಯದ ಎಲ್ಲರಿಗೂ 2021ರ ವರ್ಷದ ಅಂತ್ಯದೊಳಗೆ ಕೋವಿಡ್ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದರು.       ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೋವಿಡ್-19 ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಕೋವಿಡ್ ಪೋರ್ಟಲ್‍ನಲ್ಲಿ ಯಾರು ಎಲ್ಲಿಯಾದರೂ ನೋಂದಣಿ ಮಾಡಿಕೊಂಡು ಲಸಿಕೆ ಪಡೆಯಬಹುದಾದ ವ್ಯವಸ್ಥೆಯಿರುವುದರಿಂದ ಬೆಂಗಳೂರಿಗರು ಅಕ್ಕಪಕ್ಕದ ನೆರೆಯ ಜಿಲ್ಲೆಯಲ್ಲಿ ಲಸಿಕೆ ಪಡೆಯುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಲು ಆಯಾ ಜಿಲ್ಲೆಯ ಜನರು ಜಿಲ್ಲೆಯಲ್ಲಿ ಮಾತ್ರ ಲಸಿಕೆ ಪಡೆಯುವಂತೆ ಮಾಡುವ ಸಲುವಾಗಿ ರಾಜ್ಯಮಟ್ಟದ ಪೋರ್ಟಲ್ ಆರಂಭಕ್ಕೆ ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.       ರಾಜ್ಯದಲ್ಲಿ 2015 ವೈದ್ಯರ ನೇಮಕಾತಿ ಆದೇಶ ಆಗಿದ್ದು, ನೇಮಕಾತಿ ಆದೆ ೀಶ ನೀಡಲಾಗುತ್ತಿದೆ. ತುಮಕೂರು ಜಿಲ್ಲೆಯಲ್ಲಿಯೂ ಖಾಲಿ ಇರುವ ಎಲ್ಲಾ ಹುದ್ದೆಗಳಿಗೆ ವೈದ್ಯರು ನೇಮಕಗೊಳ್ಳಲಿದ್ದಾರೆ. ಸೋಮವಾರದಿಂದ ಬುಧವಾರದೊಳಗೆ ನೇಮಕಗೊಂಡ ವೈದ್ಯರು ಸೇವೆಗೆ ಹಾಜರಾಗಲಿದ್ದಾರೆ. ಇದರಿಂದ ವೈದ್ಯರ ಕೊರತೆ ಸಮಸ್ಯೆ ಬಗೆಹರಿಯಲಿದೆ. ಇದರ ಜೊತೆಗೆ…

Read More

 ತುಮಕೂರು  :       ಜಿಲ್ಲಾಸ್ಪತ್ರೆಯಲ್ಲಿ ಸೋಂಕಿತರಿಗೆ ನೀಡಲಾಗುತ್ತಿರುವ ಚಿಕಿತ್ಸೆ ಮತ್ತು ನಿರ್ವಹಣೆಯ ಕುರಿತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಪರಿಶೀಲನೆ ನಡೆಸಿದರು.         ಜಿಲ್ಲಾಸ್ಪತ್ರೆಗಿಂದು ಭೇಟಿ ನೀಡಿದ ಸಚಿವರು, ಜಿಲ್ಲಾಧಿಕಾರಿ, ಡಿಎಚ್‍ಒ, ಡಿಎಸ್ ಹಾಗೂ ಸಂಬಂಧಿಸಿದ ವೈದ್ಯಾಧಿಕಾರಿಗಳಿಂದ ಕೋವಿಡ್-19 ಸಂಬಂಧದ ಸಂಪೂರ್ಣ ಮಾಹಿತಿ ಪಡೆದು ಬಳಿಕ ಕೆಲವು ಸೂಚನೆ ನೀಡಿದರು. ಈ ವೇಳೆ ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರೂ ಸಚಿವರಿಗೆ ಕೋವಿಡ್ ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ಕೈಗೊಂಡಿರುವ ಸಮರ್ಪಕ ಮಾಹಿತಿ ಹೇಳಿದರು.       ಬಳಿಕ ಮಾತನಾಡಿದ ಸಚಿವ ಡಾ.ಕೆ. ಸುಧಾಕರ್ ಅವರು, ಆಸ್ಪತ್ರೆಯಲ್ಲಿ ಐಸಿಯು, ಆಮ್ಲಜನಕ ಹಾಸಿಗೆಗಳಲ್ಲಿ ಎಷ್ಟು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿಯನ್ನು ಜಿಲ್ಲಾಸ್ಪತ್ರೆ ಮುಂಭಾಗದಲ್ಲಿ ಮಾಹಿತಿ ಫಲಕದಲ್ಲಿ ಪ್ರದರ್ಶಿಸಬೇಕು. ಟ್ರಯಾಜ್ ಗೆ ಮೊದಲ ಆದ್ಯತೆ ಕೊಡಬೇಕು. ಪ್ರತಿ ತಾಲೂಕು ಆಸ್ಪತ್ರೆಗಳಲ್ಲಿಯೂ ಟ್ರಯಾಜ್ ವ್ಯವಸ್ಥೆಯಾಗಬೇಕು ಎಂದು ನಿರ್ದೇಶಿಸಿದರು. ಸಚಿವ ಜೆ.ಸಿ.ಮಾಧುಸ್ವಾಮಿ ಮಾತನಾಡಿ, ನಗರದಲ್ಲಿ ನಸಿರ್ಂಗ್ ಹಾಸ್ಟೆಲ್…

Read More

      ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹರಡದಂತೆ ತಡೆಯಲು ಅಧಿಕಾರಿಗಳು ಹೆಚ್ಚು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಸೋಂಕು ಮತ್ತು ಸಂಪರ್ಕಿತರ ಪತ್ತೆ, ಕೋವಿಡ್ ಪರೀಕ್ಷೆ, ಕೋವಿಡ್ ಕೇರ್ ನಿರ್ವಹಣೆ ಮತ್ತು ಸೋಂಕಿತರನ್ನು ಕೇರ್‍ಗೆ ಸ್ಥಳಾಂತರಿಸುವುದು, ತ್ವರಿತ ಚಿಕಿತ್ಸೆ, ಜನಜಾಗೃತಿ ಕಾರ್ಯವನ್ನು ಕಟ್ಟುನಿಟ್ಟಾಗಿ ಮಾಡಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಸೂಚಿಸಿದರು.       ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ವೀಡಿಯೋ ಕಾನ್ಫರೆನ್ಸ್ ಮೂಲಕ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಪ್ರತಿ ಗ್ರಾಮಗಳಲ್ಲೂ ಪರಿಣಾಮಕಾರಿಯಾಗಿ ಮಾರ್ಗಸೂಚಿಗಳನ್ನು ಅನುμÁ್ಠನಗೊಳಿಸುವುದರೊಂದಿಗೆ ಸೋಂಕನ್ನು ನಿಯಂತ್ರಣಕ್ಕೆ ತರಬೇಕು ಎಂದು ನಿರ್ದೇಶಿಸಿದರು.        ಈವರೆಗೆ ಗ್ರಾಮ ಪಂಚಾಯತ್ ಗಳನ್ನು ಹಾಟ್ ಸ್ಪಾಟ್ ಎಂದು ಗುರುತಿಸಲಾಗುತ್ತಿತ್ತು. ಇನ್ನು ಮುಂದೆ ಗ್ರಾಮಗಳನ್ನೂ ಹಾಟ್ ಸ್ಪಾಟ್ ಪ್ರದೇಶಗಳೆಂದು ಗುರುತಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. 20ಕ್ಕಿಂತ ಹೆಚ್ಚು ಪ್ರಕರಣಗಳಿರುವ ಗ್ರಾಮವನ್ನು ರೆಡ್ ಝೋನ್, 10ಕ್ಕಿಂತ ಹೆಚ್ಚು ಪ್ರಕರಣಗಳಿರುವ ಹಳ್ಳಿಗಳನ್ನು ಹಾಟ್ ಸ್ಪಾಟ್ ಪ್ರದೇಶಗಳೆಂದು ಹಾಗೂ 10ಕ್ಕಿಂತ…

Read More

ಕೊರಟಗೆರೆ:       ಕೊರೋನಾ ರೋಗಿಗಳಿಗೆ ಚಿಕಿತ್ಸೆ ಯೊಂದಿಗೆ ಮಾನಸಿಕ ಧೈರ್ಯ ತುಂಬುವ ಕೆಲಸ ಮಾಡಿ ಎಂದು ಶಾಸಕ ಡಾ.ಜಿ.ಪರಮೇಶ್ವರ್ ವೈದ್ಯರುಗಳಿಗೆ ಸಲಹೆ ನೀಡಿದರು.       ಕೋವಿಡ್ ರೋಗಕ್ಕೆ ಸಂಬಂಧಿಸಿದಂತೆ, ತಹಶೀಲ್ದಾರ್, ತಾಲ್ಲೂಕು ವೈದ್ಯಾದಿಕಾರಿ, ಪಿಹೆಚ್‍ಸಿ ವೈದ್ಯರುಗಳು, ಅಧಿಕಾರಿಗಳ ವೈಯಕ್ತಿಕ ಸಂಭಾಷಣೆಯನ್ನು ವೀಡಿಯೋ ಸಂವಾದದ ಮುಖಾಂತರ ಮಾಹಿತಿ ಪಡೆದು ಆದೇಶಿಸಿದರು. ತಾಲ್ಲೂಕಿನಲ್ಲಿ ಸೋಂಕಿಗೆ ಒಳಗಾಗುವುದನ್ನು ತಪ್ಪಿಸಲು ಕಾನೂನು ಮುಖಾಂತರ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಿ, ಕೊರೋನಾ ರೋಗಿಗಳು ಸಾವಿನಿಂದ ತಪ್ಪಿಸಲು ಸಾಕಷ್ಟು ಮುಂಜಾಗ್ರತಾ ಕ್ರಮ ಮತ್ತು ಅಗತ್ಯ ಚಿಕಿತ್ಸೆಯನ್ನು ನೀಡುವಂತೆ ರೋಗಿಗಳ ಬಗ್ಗೆ ನಿರಂತರ ನಿಗಾ ಇಡುವಂತೆ ಆದೇಶಿಸಿದರು.       ವೈದ್ಯರು ಕೊರೋನಾ ರೋಗಿಗಳಿಗೆ ಚಿಕಿತ್ಸೆಯೊಂದಿಗೆ ಮಾನಸಿಕ ಧೈರ್ಯ ತುಂಬುವ ಕೆಲಸ ಮಾಡಲೇ ಬೇಕಿದ್ದು ಇದರಿಂದಾಗಿ ಸೋಂಕಿತರು ಅರ್ಧಗುಣವಾದಂತೆ ಆಗುತ್ತದೆ ಎಂದು ಸಲಹೆ ನೀಡಿದ್ದಾರೆ. ಪ್ರಸ್ತುತ ಆಸ್ಪತ್ರೆಗಳಲ್ಲಿ ಆಮ್ಲಜನಕದ ದಾಸ್ತಾನು ಬಗ್ಗೆ ಮಾಹಿತಿ ಪಡೆದು ಇದರ ಕೊರತೆಯಾಗದಂತೆ ನೋಡಿಕೊಳ್ಳಬೇಕು. ದಿನಕ್ಕೆ ಎರಡು ಭಾರಿ ನನಗೆ ಇದರ…

Read More

ತುಮಕೂರು:        ಜಿಲ್ಲೆಯಲ್ಲಿ ವ್ಯಾಕ್ಸಿನ್ ಮತ್ತು ಅಕ್ಸಿಜನ್ ಕೊರತೆಯಿದ್ದು, ಇದರ ಬಗ್ಗೆ ಗಮನಹರಿಸಲು ಸಂಬಂಧಪಟ್ಟ ಇಲಾಖೆಯ ಸಚಿವರಿಗೆ ಸೂಚಿಸುವಂತೆ ಸಂಸದ ಜಿ.ಎಸ್.ಬಸವರಾಜು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಮನವಿ ಮಾಡಿದ್ದಾರೆ.       ತಮ್ಮ ಗೃಹ ಕಚೇರಿಯಲ್ಲಿ ಜೆ.ಪಿ.ನಡ್ಡಾ ಅವರೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು ಬೆಳಗಾವಿ ನಂತರದ ಎರಡನೇ ಅತಿ ದೊಡ್ಡ ಜಿಲ್ಲೆ ತುಮಕೂರು, 11 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದೆ. ಬೆಂಗಳೂರು ನಗರಕ್ಕೆ ಹತ್ತಿರವಿದ್ದು, ಸರಕಾರ ಲಾಕ್‍ಡೌನ್ ಘೋಷಣೆ ಮಾಡಿದ್ದರಿಂದ ಬಹುತೇಕರು ಜಿಲ್ಲೆಗೆ ವಾಪಸ್ಸಾಗಿದ್ದೇ ಕೋವಿಡ್ ಪ್ರಕರಣ ಹೆಚ್ಚಾಗಲು ಕಾರಣವಾಗಿದೆ. ಜಿಲ್ಲಾಡಳಿತ ನಿರಂತರ ಶ್ರಮಪಟ್ಟು ಕೋವಿಡ್ ಹರಡದಂತೆ ಪ್ರಯತ್ನ ನಡೆಸುತ್ತಿದೆ. ಈಗಾಗಲೇ ತುಮಕೂರು ನಗರವೂ ಸೇರಿದಂತೆ ಜಿಲ್ಲೆಯಲ್ಲಿ 6ಕ್ಕೂ ಹೆಚ್ಚು ಕೋವಿಡ್ ಕೇರ್ ಸೆಂಟರ್‍ಗಳನ್ನು ತೆರೆಯಲಾಗಿದೆ. ರೋಗಲಕ್ಷಣಗಳಿಲ್ಲದ ಕೋವಿಡ್ ಸೋಂಕಿತರಿಗೆ ಇಲ್ಲಿ ಆರೈಕೆ ಮಾಡಲಾಗುತ್ತಿದೆ.ಉಳಿದಂತೆ ಶಾಸ್ವಕೋಶಕ್ಕೆ ರೋಗ ತಲುಗಿದ ವ್ಯಕ್ತಿಗಳನ್ನು ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 8ಕ್ಕೂ ಹೆಚ್ಚು ಖಾಸಗಿ ಆಸ್ಪತ್ರೆಗಳನ್ನು ಸರಕಾರದ ವಶಕ್ಕೆ…

Read More

ತುಮಕೂರು:      ಜಿಲ್ಲೆಯಲ್ಲಿ ಆಮ್ಲಜನಕ ಹಾಸಿಗೆ ನಿರ್ವಹಣೆ ಮತ್ತು ಆಮ್ಲಜನಕ ಆಮದು ಮಾಡಿಕೊಳ್ಳುವ ಬಗ್ಗೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ನವೀನ್ ದಾಸ್ ಸಿಂಗ್ ಅವರಿಗೆ ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಸರ್ಕಾರದ ಅದೇಶದನ್ವಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಆಮ್ಲಕನಕ ಹಾಸಿಗೆಗಳ ನಿರ್ವಹಣೆ ಮಾಡಲಾಗುತ್ತಿದೆ.       ಜಿಲ್ಲೆಯಲ್ಲಿ ಆಮ್ಲಜನಕ ಸರಬರಾಜು ಮತ್ತು ರೀಫಿಲ್ ಮಾಡುವಾಗ ಏರ್ ವಾಟರ್ ನಂತಹ ತಾಂತ್ರಿಕ ಸಮಸ್ಯೆಗಳು ಕಾಣಬರುತ್ತಿವೆ. ಬಳ್ಳಾರಿಯಿಂದ ಆಮ್ಲಜನಕವನ್ನು ತುಂಬಿಸಿಕೊಳ್ಳಲಾಗುತ್ತಿದೆ. ಜಿಲ್ಲೆಗೆ ನೀಡಲಾಗಿರುವ ಆಮ್ಲಜನಕ ಸರಬರಾಜು ವಾಹನ ಸಾಲುತ್ತಿಲ್ಲ ಎಂದು ಅವರು ತಿಳಿಸಿದಾಗ ಇದಕ್ಕೆ ಪ್ರತಿಕ್ರಿಯಿಸಿದ ಪ್ರಾದೇಶಿಕ ಆಯುಕ್ತರು ಸಮಸ್ಯೆಗಳನ್ನು ಅವಲೋಕಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಸದ್ಯಕ್ಕೆ ಇರುವ ವ್ಯವಸ್ಥೆಯಲ್ಲಿ ಕಾರ್ಯ ನಿರ್ವಹಿಸಿ ಎಂದು ಅವರು ಜಿಲ್ಲಾಧಿಕಾರಿಗಳಿಗೆ ನಿರ್ದೇಶಿಸಿದರು.      ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕೆ. ಚೆನ್ನಬಸಪ್ಪ, ತುಮಕೂರು ಉಪ ವಿಭಾಗಧಿಕಾರಿ ಅಜಯ್, ಸೇರಿದಂತೆ ಜಿಲ್ಲಾ ಮಟ್ಟದ ಇತರೆ…

Read More

ತುಮಕೂರು :      ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಅಧ್ಯಕ್ಷರು ಹಾಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರು ಸ್ಮಾರ್ಟ್ ಸಿಟಿ ಕಚೇರಿಯಲ್ಲಿಂದು ಮಂಡಳಿ ನಿರ್ದೇಶಕರ ಸಭೆ ನಡೆಸಿ ಸ್ಮಾರ್ಟ್ ಸಿಟಿ ಯೋಜನೆಯ ಪ್ರಗತಿ ಪರಿಶೀಲಿಸಿದರು.       ಈ ಸಭೆಗೆ ಪಾಲಿಕೆಯ ಮಹಾಪೌರರು, ಉಪ ಮಹಾಪೌರರು, ಆಯುಕ್ತರು ಹಾಗೂ ಮಂಡಳಿಯ ನಿರ್ದೇಶಕರು ವಿಡಿಯೋ ಸಂವಾದದ ಮುಖಾಂತರ ಪಾಲ್ಗೊಂಡಿದ್ದರು.

Read More

ಹುಳಿಯಾರು:      ಪ್ರಧಾನ ಮಂತ್ರಿ ಗ್ರಾಮಸಡಕ್ ಯೋಜನೆಯಡಿ ನಿರ್ಮಿಸಲಾದ ರಸ್ತೆ ಬದಿಯ ಮಣ್ಣು ಸುರಿದ ಭಾರಿ ಮಳೆಗೆ ತೋಟಕ್ಕೆ ನುಗ್ಗುತ್ತಿದ್ದು ಗುಣಮಟ್ಟದ ಕಾಮಕಾರಿ ಮಾಡುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.       ತಿಮ್ಲಾಪುರ ಗೇಟ್‍ನಿಂದ ಹೊಸಹಳ್ಳಿ, ಹೊಸಹಳ್ಳಿಪಾಳ್ಯದ ಮೂಲಕ ಬಾಣಾವರ-ಹುಳಿಯಾರಿನ ರಾಷ್ಟ್ರೀಯ ಹೆದ್ದಾರಿಗೆ ಸೇರುವ ರಸ್ತೆ ಬಹಳ ವರ್ಷಗಳಿಂದ ಗುಂಡಿಗಳು ಬಿದ್ದು ಓಡಾಡಲು ತೀರ್ವ ತೊಂದರೆಯಾಗಿತ್ತು. ಈ ರಸ್ತೆಯ ಅವ್ಯವಸ್ಥೆ ಅರಿತು ಸಚಿವರಾದ ಜೆ.ಸಿ.ಮಾಧುಸ್ವಾಮಿ ಅವರು ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಗೆ ಸೇರಿಸಿ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿದರು.       ಐದಾರು ತಿಂಗಳಿಂದ ನಡೆಯುತ್ತಿದ್ದ ರಸ್ತೆ ಕಾಮಗಾರಿ ಸ್ಥಗಿತಗೊಂಡಿದೆ. ಹಿಂದೆ ರಸ್ತೆ ಬದಿಯಲ್ಲಿ ಮಣ್ಣು ಹಾಕುವ ಕಾಮಗಾರಿ ಅವೈಜ್ಞಾನಿಕವಾಗಿದ್ದು, ಸಮಸ್ಯೆ ಸೃಷ್ಠಿಗೆ ಕಾರಣ ಎನ್ನಲಾಗಿದೆ. ಹೊಸಹಳ್ಳಿಯಿಂದ ರಾಷ್ಟ್ರೀಯ ಹೆದ್ದಾರಿಗೆ ಸೇರುವ 1 ಕಿ.ಮೀ.ಭಾಗದ ರಸ್ತೆಯ ಪಕ್ಕದಲ್ಲಿ ಮಣ್ಣು ಹಾಕಿದ್ದು ಈ ಮಣ್ಣು ಬಿದ್ದ ಒಂದೇ ಒಂದು ಮಳೆಗೆ ಏಳೆಂಟು ಕಡೆ ಕುಸಿದು ಪಕ್ಕದ ತೋಟಕ್ಕೆ ನುಗ್ಗಿದೆ.…

Read More

ತುಮಕೂರು:       ಕೋವಿಡ್ ಎರಡನೇ ಅಲೆ ಶಿಕ್ಷಣರಂಗಕ್ಕೆ ಒಡ್ಡಿರುವ ಸವಾಲುಗಳ ನಡುವೆಯೂ ತುಮಕೂರು ವಿಶ್ವವಿದ್ಯಾ ನಿಲಯವು ಯಶಸ್ವಿ ಆನ್ಲೈನ್ ತರಗತಿಗಳನ್ನು ನಡೆಸುವ ಮೂಲಕ ಪರ್ಯಾಯ ಮಾದರಿಯೊಂದನ್ನು ರೂಪಿಸಿಕೊಟ್ಟಿದೆ.       ವಿಶ್ವವಿದ್ಯಾನಿಲಯದ ಪರೀಕ್ಷೆಗಳ ಕೊನೆಯ ಹಂತದಲ್ಲಿ ಲಾಕ್ಡೌನ್ ಘೋಷಣೆ ಯಾಗಿ ಒಂದೆರಡು ಪರೀಕ್ಷೆಗಳು ಉಳಿದುಕೊಂಡರೂ, ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗದಂತೆ ಹೊಸ ಸೆಮಿಸ್ಟರಿನ ಪಾಠಪ್ರವಚನಗಳನ್ನು ಆನ್ಲೈನ್ ವಿಧಾನದಲ್ಲಿ ವ್ಯವಸ್ಥಿತವಾಗಿ ಆರಂಭಿಸಲಾಗಿದೆ.       ಮೇ 3ರಿಂದ ಸ್ನಾತಕೋತ್ತರ ತರಗತಿಗಳನ್ನೂ, ಮೇ 5ರಿಂದ ಪದವಿ ತರಗತಿಗಳನ್ನೂ ಆನ್ಲೈನ್ ಮುಖಾಂತರ ಆರಂಭಿಸಿದ್ದೇವೆ. ಪದವಿಯಲ್ಲಿ ಎರಡು, ನಾಲ್ಕು ಹಾಗೂ ಆರನೇ ಸೆಮಿಸ್ಟರ್‍ಗಳು ಮತ್ತು ಸ್ನಾತಕೋತ್ತರ ಹಂತದಲ್ಲಿ ಎರಡನೇ ಹಾಗೂ ನಾಲ್ಕನೇ ಸೆಮಿಸ್ಟರ್‍ಗಳು ನಡೆಯುತ್ತಿವೆ. ಕಳೆದೆರಡು ವಾರಗಳಿಂದ ಪಾಠಪ್ರವಚನಗಳು ಯಶಸ್ವಿಯಾಗಿ ನಡೆಯುತ್ತಿವೆ ಎಂದು ಕುಲಪತಿ ಕರ್ನಲ್ (ಪ್ರೊ.) ವೈ. ಎಸ್. ಸಿದ್ದೇಗೌಡ ಹೇಳಿದ್ದಾರೆ.       ಸ್ನಾತಕೋತ್ತರ ವಿಭಾಗಗಳು ಹಾಗೂ ಸಂಯೋಜಿತ ಕಾಲೇಜುಗಳ ಪ್ರತಿದಿನದ ಪಾಠ ಪ್ರವಚನಗಳ ಮಾಹಿತಿಗಾಗಿ ವಿಶ್ವವಿದ್ಯಾನಿಲಯವು ಗೂಗಲ್…

Read More