ತುಮಕೂರು : ತಾಲೂಕಿನ ಗೂಳೂರಿನಲ್ಲಿ ಕೋವಿಡ್ ಸೋಂಕಿನಿಂದ ಮನೆಯಲ್ಲೇ ಐಸುಲೇಷನ್ ಒಳಗಾಗಿರುವ ಜನರನ್ನು ಭೇಟಿ ಮಾಡಿದ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಹಾಗೂ ಜಿಲ್ಲಾ ಪೊಲೀಸ್ ಅಧಿಕಾರಿ ಡಾ.ಕೋನ ವಂಸಿ ಕೃಷ್ಣ, ಐಪಿಎಸ್ ರವರು ಭೇಟಿ ಮಾಡಿ ಆತ್ಮ ಸ್ಥೈರ್ಯ ತುಂಬಿ,ಯಾವುದೇ ಆತಂಕಕ್ಕೆ ಒಳಗಾಗದೆ ನಿರ್ಬೀತಿಯಿಂದ ಇರುವಂತೆ ಹಾಗೂ ಜಾಗರೂಕತೆ ವಹಿಸುವಂತೆ ಸಲಹೆ ನೀಡಿದರು.
Author: News Desk Benkiyabale
ತುಮಕೂರು: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೊರೋನಾ ನಿಗ್ರಹಕ್ಕೆ ಸದಸ್ಯರೆಲ್ಲರೂ ಹೆಚ್ಚಿನ ಜವಾಬ್ದಾರಿ ಹೊತ್ತು ಕಾರ್ಯ ನಿರ್ವಹಿಸುವ ಮುಖೇನ ನಗರವನ್ನು ಸೋಂಕಿನಿಂದ ಪಾರು ಮಾಡಲು ಸಹಕರಿಸಬೇಕು ಎಂದು ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಕೋವಿಡ್ ನಿಯಂತ್ರಣ ಸಂಬಂಧ ಪಾಲಿಕೆ ಸದಸ್ಯರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಟ್ಟುನಿಟ್ಟಿನ ಕ್ರಮಗಳನ್ನು ಪರಿಣಾಮಕಾರಿಯಾಗಿ ಅನುμÁ್ಠನಗೊಳಿಸಿದ ಪರಿಣಾಮ ಕೆಂಪು ವಲಯದಲ್ಲಿದ್ದ ತುಮಕೂರು ಪ್ರಸ್ತುತ ಪಿಂಕ್ ವಲಯಕ್ಕೆ ಬಂದಿದೆ. ಆದರೂ, ಜಿಲ್ಲೆ ಸಮಾಧಾನದ ಸ್ಥಿತಿಗೆ ತಲುಪಬೇಕೆಂದರೆ ಸಂಪೂರ್ಣ ಕೋವಿಡ್ ನಿಗ್ರಹಕ್ಕೆ ನಾವೆಲ್ಲರೂ ಶ್ರಮಿಸಬೇಕು ಎಂದು ಹೇಳಿದರು. ಸೋಂಕಿತರ ಆರೈಕೆಗಾಗಿ ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿದೆ. ಆದರೆ ಸೆಂಟರ್ ಗೆ ಸೋಂಕಿತರು ಬರಲು ಹಿಂದೇಟು ಹಾಕುತ್ತಿದ್ದಾರೆ. ಇನ್ನು ಮುಂದೆ ಪಾಸಿಟಿವ್ ಬಂದ ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ ಗೆ ಕಳುಹಿಸುವ ವ್ಯವಸ್ಥೆಗೆ ನಿರ್ಣಯ ತೆಗೆದುಕೊಳ್ಳಲಾಗಿದೆ.…
ಮಧುಗಿರಿ : ತಾಲೂಕಿನ ಬಡವನಹಳ್ಳಿ ಯಲ್ಲಿ ಕೊರೊನಾ ಸೋಂಕಿತ ಮಹಿಳೆಯೊಬ್ಬರು ಮೃತಪಟ್ಟಿದ್ದು ಅಂತ್ಯ ಸಂಸ್ಕಾರಕ್ಕೆ ಸಂಬಂಧಿಕರು ಯಾರು ಬಾರದ ಕಾರಣ ಪಿಡಿಒ ಮತ್ತು ಗ್ರಾಮಲೆಕ್ಕಾಧಿಕಾರಿ ಜೊತೆಗೆ ಸ್ವಯಂಸೇವಕರೆ ಅಂತ್ಯಸಂಸ್ಕಾರ ನಡೆಸಿದ ಘಟನೆ ನಡೆದಿದೆ. ಬಡವನಹಳ್ಳಿ ಗ್ರಾಮದ ಮಹಿಳೆಯೊಬ್ಬರು ಕೊರೊನಾ ಸೋಂಕಿನಿಂದ ಇಂದು ಮೃತ ಪಟ್ಟಿದ್ದು, ಸಂಬಂಧಿಕರು ಯಾರೂ ಅಂತಿಮ ಸಂಸ್ಕಾರ ನೆರವೇರಿಸಲು ಬರಲಿಲ್ಲ. ಅಲ್ಲದೆ ಇಂದು ರಂಜಾನ್ ಹಬ್ಬವಿದ್ದ ಕಾರಣ ಮಧುಗಿರಿಯಲ್ಲಿನ ಮುಸ್ಲಿಂ ಸಮುದಾಯದ ಸ್ವಯಂ ಸೇವಕರೂ ಸಹ ಬಾರದ ಕಾರಣ ಅದೇ ಗ್ರಾಮದ ಬಾವಿಮನೆ ರಂಗನಾಥ್, ನೂರ್ ಜಾನ್, ರವಿ, ಮೆಹಬೂಬ್ ಪಾಷ, ಇವರುಗಳು ಸ್ವಯಂಪ್ರೇರಿತ ರಾಗಿ ಬಂದು ಪಿಡಿಒ ಶಿಲ್ಪ, ಗ್ರಾಮಲೆಕ್ಕಾಧಿಕಾರಿ ನವೀನ್ ಕುಮಾರ್ ಮತ್ತು ಆರೋಗ್ಯ ಇಲಾಖೆಯ ರವರೊಂದಿಗೆ ಜೊತೆಗೂಡಿ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ. ಕಳೆದ ಭಾನುವಾರ ಇದೇ ಕುಟುಂಬದಲ್ಲಿ ಮೃತ ಪಟ್ಟ ಮಹಿಳೆಯ ಮಗನೂ ಕೂಡ ಮೃತಪಟ್ಟಿದ್ದು ಭಯದಿಂದ ಸಂಬಂಧಿಕರು ಯಾರೂ ಬಂದಿರಲಿಲ್ಲ.…
ತುಮಕೂರು: ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ಈಗಾಗಲೇ 18 ರಿಂದ 44 ವರ್ಷ ವಯೋಮಾನದವರಿಗೆ ನೀಡಲಾಗುತ್ತಿರುವ ಕೋವಿಶೀಲ್ಡ್ ಲಸಿಕಾಕರಣವನ್ನು ಮೇ14 ರಿಂದ ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಆದರೆ ಮೊದಲನೇ ಡೋಸ್ ಪಡೆದ 18 ರಿಂದ 44 ವರ್ಷದ ವಯೋಮಾನದ ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರು 2ನೇ ಡೋಸ್ ಲಸಿಕೆ ಪಡೆಯಲು ಅರ್ಹರಿದ್ದರೆ ಅಂತಹ ಫಲಾನುಭವಿಗಳು 2ನೇ ಡೋಸ್ ಲಸಿಕೆ ಪಡೆಯಬಹುದು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದ್ದಾರೆ. ಎರಡನೇ ಡೋಸ್ ಲಸಿಕೆ ನೀಡುವ ಸಮಯದಲ್ಲಿ ಕೋವಿಶೀಲ್ಡ್ ಮೊದಲನೇ ಡೋಸ್ ಪಡೆದು 8 ವಾರಗಳನ್ನು ಪೂರ್ಣಗೊಳಿಸಿರುವ ಮತ್ತು ಕೋವ್ಯಾಕ್ಸಿನ್ ಮೊದಲನೇ ಡೋಸ್ ಪಡೆದು 6 ವಾರಗಳನ್ನು ಪೂರ್ಣಗೊಳಿಸಿರುವ ಫಲಾನುಭವಿಗಳಿಗೆ ಮೊದಲು ಲಸಿಕೆ ನೀಡಲಾಗುವುದೆಂದು ತಿಳಿಸಿದ್ದಾರೆ.
ತುಮಕೂರು: ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧು ಸ್ವಾಮಿ ಅವರು ಜಿಲ್ಲಾಸ್ಪತ್ರೆ ಹಾಗೂ ಶ್ರೀ ದೇವಿ ವೈದ್ಯಕೀಯ ಮಹಾವಿದ್ಯಾಲಯಕ್ಕೆ ಭೇಟಿ ನೀಡಿ ಕೋವಿಡ್ ಸೋಂಕಿತರಿಗೆ ನೀಡುತ್ತಿರುವ ಚಿಕಿತ್ಸಾ ವಿಧಾನ, ಆರೈಕೆ ಸೇರಿ ದಂತೆ ಔಷಧೋಪಚಾರದ ಬಗ್ಗೆ ಪರಿಶೀಲನೆ ನಡೆಸಿದರು. ಸೋಂಕಿತರಿಗೆ ಯಾವ್ಯಾವ ಆಸ್ಪತ್ರೆಗಳಲ್ಲಿ ಎμÉ್ಟಷ್ಟು ಪ್ರಮಾಣದಲ್ಲಿ ಹಾಸಿಗೆ ನೀಡಲಾಗಿದೆ? ಸೋಂಕಿತರ ಪ್ರಮಾಣ ಎಷ್ಟಿದೆ? ಸಮಸ್ಯೆಯಿಲ್ಲದೆ ಚಿಕಿತ್ಸೆ ನೀಡಲಾಗುತ್ತಿದೆಯಾ? ಎಂಬ ಬಗ್ಗೆಯೂ ಮಾಹಿತಿ ಪಡೆದರು. ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರ ಕಚೇರಿಯಲ್ಲಿ ಸಭೆ ನಡೆಸಿದ ಸಚಿವರು, ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಸಿಗೆಗಳ ಮಾಹಿತಿ ವಾರ್ ರೂಂ ಗೆ ತಲುಪಬೇಕು. ಇದರಿಂದ ಹಾಸಿಗೆ ಅವಶ್ಯಕತೆ ಇರುವವರಿಗೆ ತಕ್ಷಣ ಹಾಸಿಗೆ ವ್ಯವಸ್ಥೆ ಮಾಡಬಹುದು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಕೋವಿಡ್ ಪರೀಕ್ಷೆ ಪ್ರಮಾಣ ಕಡಿಮೆ ಯಾಗಬಾರದು. ನಿಗಧಿಯಂತೆಯೇ ಪರೀಕ್ಷೆಗಳು ಸಕಾಲಕ್ಕೆ ನಡೆಯಬೇಕು. ವರದಿ ಸಮಯಕ್ಕೆ ಸರಿಯಾಗಿ ತಲುಪಬೇಕು. ಹಾಸಿಗೆ ಗಳ ಸಮಸ್ಯೆ, ಔಷಧ…
ತುಮಕೂರು : ಜಿಲ್ಲೆಯಲ್ಲಿ ಕೈಗೊಂಡ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಬರುತ್ತಿದ್ದು, ಶೇಕಡಾವಾರು ಪಾಸಿಟಿವ್ ಪ್ರಕರಣಗಳ ಪ್ರಮಾಣ ಇಳಿಕೆಯಾಗುತ್ತಿದೆ. ಆರಂಭದಲ್ಲಿ ಶೇ.45ರಷ್ಟಿದ್ದ ಪಾಸಿಟಿವ್ ಪ್ರಮಾಣ ಶೇ. 40ಕ್ಕೆ ತಗ್ಗಿದೆ ಎಂದು ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ವ್ಯಾಪಕವಾಗಿ ಹರಡುತ್ತಿದ್ದ ಕೋವಿಡ್-19 ನಿಯಂತ್ರಣಕ್ಕಾಗಿ ಜಿಲ್ಲಾಡಳಿತದಿಂದ ಹಾಸಿಗೆ, ಆಮ್ಲಜನಕ ಹಾಗೂ ವೈದ್ಯಕೀಯ ಚಿಕಿತ್ಸೆ ಸೇರಿದಂತೆ ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ ಎಲ್ಲಾ ರೀತಿಯಲ್ಲಿಯೂ ಕ್ರಮ ಕೈಗೊಂಡ ಪರಿಣಾಮ ಕೋವಿಡ್ ನಿಯಂತ್ರಣದಲ್ಲಿ ಸುಧಾರಣೆ ಕಂಡು ಬಂದಿದೆ. ಸೋಂಕಿತರ ಚೇತರಿಕೆ ಪ್ರಮಾಣವೂ ಏರಿಕೆಯಾಗುತ್ತಿದೆ ಎಂದರು. ಬೆಂಗಳೂರು-ತುಮಕೂರು ಓಡಾಡುವವರ ಸಂಖ್ಯೆ ಹೆಚ್ಚಿದ್ದ ಕಾರಣ ಜಿಲ್ಲೆಯಲ್ಲಿ ಸೋಂಕು ವ್ಯಾಪಕವಾಗಿ ಹರಡಲು ಕಾರಣವಾಗಿತ್ತು. ಆದರೆ, ಸರ್ಕಾರದ ಅನುಮತಿಯಿಲ್ಲದ ಕಾರಣ ಆರಂಭದಲ್ಲಿ ಈ ಸಂಚಾರಕ್ಕೆ ಕಡಿವಾಣ ಹಾಕಲು ಸಾಧ್ಯವಾಗಿರಲಿಲ್ಲ. ಈಗ ಎಲ್ಲಾ ರೀತಿಯಲ್ಲಿಯೂ ಕ್ರಮ ಕೈಗೊಳ್ಳಲಾಗಿದೆ. ಇದರಿಂದ…
ತುಮಕೂರು : ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಜಿಲ್ಲಾಸ್ಪತ್ರೆ ಹಾಗೂ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯಕ್ಕೆ ಇಂದು ಭೇಟಿ ನೀಡಿ ಕೋವಿಡ್ ಸೋಂಕಿತರಿಗೆ ನೀಡುತ್ತಿರುವ ಚಿಕಿತ್ಸಾ ವಿಧಾನ, ಆರೈಕೆ ಸೇರಿದಂತೆ ಔಷಧೋಪಚಾರದ ಬಗ್ಗೆ ಪರಿಶೀಲನೆ ನಡೆಸಿದರು. ಸೋಂಕಿತರಿಗೆ ಯಾವ್ಯಾವ ಆಸ್ಪತ್ರೆಗಳಲ್ಲಿ ಎμÉ್ಟಷ್ಟು ಪ್ರಮಾಣದಲ್ಲಿ ಹಾಸಿಗೆ ನೀಡಲಾಗಿದೆ? ಸೋಂಕಿತರ ಪ್ರಮಾಣ ಎಷ್ಟಿದೆ? ಸಮಸ್ಯೆಯಿಲ್ಲದೆ ಚಿಕಿತ್ಸೆ ನೀಡಲಾಗುತ್ತಿದೆಯಾ? ಎಂಬ ಬಗ್ಗೆಯೂ ಮಾಹಿತಿ ಪಡೆದರು. ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರ ಕಚೇರಿಯಲ್ಲಿ ಸಭೆ ನಡೆಸಿದ ಸಚಿವರು, ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಸಿಗೆಗಳ ಮಾಹಿತಿ ವಾರ್ ರೂಂ ಗೆ ತಲುಪಬೇಕು. ಇದರಿಂದ ಹಾಸಿಗೆ ಅವಶ್ಯಕತೆ ಇರುವವರಿಗೆ ತಕ್ಷಣ ಹಾಸಿಗೆ ವ್ಯವಸ್ಥೆ ಮಾಡಬಹುದು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಕೋವಿಡ್ ಪರೀಕ್ಷೆ ಪ್ರಮಾಣ ಕಡಿಮೆಯಾಗಬಾರದು. ನಿಗಧಿಯಂತೆಯೇ ಪರೀಕ್ಷೆಗಳು ಸಕಾಲಕ್ಕೆ ನಡೆಯಬೇಕು. ವರದಿ ಸಮಯಕ್ಕೆ ಸರಿಯಾಗಿ ತಲುಪಬೇಕು. ಹಾಸಿಗೆಗಳ ಸಮಸ್ಯೆ, ಔಷಧ ಸಮಸ್ಯೆ ಉಂಟಾಗದಂತೆ ನಿಭಾಯಿಸಬೇಕು…
ತುಮಕೂರು: ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆಯಿಲ್ಲ ಅಗತ್ಯಕ್ಕಿಂತ ಹೆಚ್ಚಿನ ಆಮ್ಲಜನಕ ಲಭ್ಯವಿದ್ದು ಯಾರು ಭೀತಿ ಪಡುವ ಅಗತ್ಯವಿಲ್ಲ ಎಂದು ಸಂಸದ ಜಿ.ಎಸ್.ಬಸವರಾಜು ತಿಳಿಸಿದರು. ನಗರದ ಪಾಲಿಕೆ ಆವರಣದಲ್ಲಿ ಪಾಲಿಕೆ ವತಿಯಿಂದ ಪೌರ ಕಾರ್ಮಿಕರಿಗೆ ಮೆಡಿಕಲ್ ಕಿಟ್ ವಿತರಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿರುವ ಎಲ್ಲ ಪಿಎಚ್‍ಸಿಗಳಿಗೂ ಆಮ್ಲಜನಕದ ವ್ಯವಸ್ಥೆಯನ್ನು ಮಾಡಲಾಗಿತ್ತು, ಆದರೆ ಅದನ್ನು ನಿರ್ವಹಿಸುವ ತಂತ್ರಜ್ಞರ ಕೊರತೆ ಇರುವುದರಿಂದ ಅವುಗಳನ್ನು ಜಿಲ್ಲಾಸ್ಪತ್ರೆಯಲ್ಲಿ ಬಳಸಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 450 ಪೌರ ಕಾರ್ಮಿಕರು ಹಾಗೂ ಅವರ ಕುಟುಂಬದ ಸದಸ್ಯರಿಗೂ ಉಚಿತವಾಗಿ ಮೆಡಿಕಲ್ ಕಿಟ್ ವಿತರಿಸುವಂತೆ ಪಾಲಿಕೆ ಆಯುಕ್ತೆ ರೇಣುಕಮ್ಮ ಅವರಿಗೆ ಸೂಚಿಸಿದ ಅವರು, ಲಾಕ್‍ಡೌನ್‍ನಿಂದ ಊಟಕ್ಕೆ ತೊಂದರೆ ಆಗಬಾರದು ಎನ್ನುವ ಉದ್ದೇಶದಿಂದ ಸರ್ಕಾರ ಇಂದಿರಾ ಕ್ಯಾಂಟೀನ್ ಮೂಲಕ ಉಚಿತ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದರು. ಜಿಲ್ಲೆಗೆ ಲಸಿಕೆ ವಿತರಣೆ ತಡವಾಗಿದ್ದು, ಕೆಲವೇ ದಿನಗಳಲ್ಲಿ ಲಸಿಕೆ ಜಿಲ್ಲೆಗೆ…
ತುಮಕೂರು : ಕೋವಿಡ್-19 ಎರಡನೇ ಅಲೆ ವ್ಯಾಪಿಸಿರುವ ಕಾರಣ ಪಡಿತರ ಚೀಟಿದಾರರು ಮತ್ತು ನ್ಯಾಯಬೆಲೆ ಅಂಗಡಿ ಮಾಲೀಕರ ಆರೋಗ್ಯದ ಹಿತದೃಷ್ಟಿಯಿಂದ 2021ರ ಮೇ ಮಾಹೆಯ ಪಡಿತರವನ್ನು ನ್ಯಾಯಬೆಲೆ ಅಂಗಡಿ ಮಾಲೀಕರು ಆಧಾರ್ ಓಟಿಪಿ ಮೂಲಕ ವಿತರಿಸುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಸೂಚಿಸಿದ್ದಾರೆ. ಪಡಿತರ ಚೀಟಿದಾರರನ್ನು ಬಯೋ ದೃಢೀಕರಣಕ್ಕಾಗಿ ಒತ್ತಾಯಿಸಬಾರದು. ಬಯೋ ದೃಢೀಕರಣಕ್ಕಾಗಿ ಒತ್ತಾಯಿಸಿದಲ್ಲಿ ಗ್ರಾಹಕರು ಅವರ ವಿರುದ್ಧ ಆಯಾ ತಾಲೂಕಿನ ತಹಸೀಲ್ದಾರ್/ಆಹಾರ ಶಿರಸ್ತೇದಾರ್/ಆಹಾರ ನಿರೀಕ್ಷಕರಿಗೆ ದೂರು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಧುಗಿರಿ: ಕೊರೋನ ಲಾಕ್ ಡೌನ್ ನಿಂದಾಗಿ ಮಧುಗಿರಿಯಲ್ಲಿ ಅನವಶ್ಯಕವಾಗಿ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ಸವಾರರಿಗೆ ದಂಡವಿಲ್ಲ, ಲಾಠಿ ರುಚಿ ಇಲ್ಲದೆ ಸರಳವಾಗಿ ಪೆÇಲೀಸ್ ಠಾಣಾ ಆವರಣದಲ್ಲಿ ಕುಳ್ಳರಿಸಿ ಅವರುಗಳಿಗೆ ಊಟವನ್ನು ನೀಡಿ ಮಾನವೀಯತೆಯನ್ನು ಮೆರೆದ ಡಿವೈಎಸ್ಪಿ ಕೆ.ಜಿ. ರಾಮಕೃಷ್ಣ ಅವರ ಕ್ರಮಕ್ಕೆ ಜನ ಮೆಚ್ಚುಗೆ ವ್ಯಕ್ತವಾಗಿದೆ. ಕಳೆದೆರಡು ದಿನಗಳಿಂದ ಮಧುಗಿರಿ ಪೆÇೀಲಿಸರು ದ್ವಿಚಕ್ರವಾಹನಗಳನ್ನು ವಶ ಪಡಿಸಿಕೊಂಡು ಜಾಗೃತಿ ಮೂಡಿಸಲು ಯತ್ನಿಸಿದ್ದಾರೆ. ಆದರೆ ವಾಹನ ವಶಪಡಿಸಿಕೊಂಡ ತಕ್ಷಣವೇ ಶಾಸಕರು, ಮಾಜಿ ಶಾಸಕರು ಪ್ರಭಾವಿ ವ್ಯಕ್ತಿಗಳಿಂದ ವಾಹನ ಬಿಡಿಸಿಕೊಳ್ಳಲು ಇನ್ಫ್ಲೂಯೆನ್ಸ್ ಮಾಡಿಸುತ್ತಿದ್ದ ಸರ್ವಸಾಮಾನ್ಯವಾಗಿತ್ತು. ಒತ್ತಡಕ್ಕೆ ಸಿಲುಕಿದ ಪೆÇಲೀಸರಿಗೆ ಇಂಥ ಕ್ರಮದಿಂದ ರಿಲೀಫ್ ಸಿಕ್ಕಿದಂತಾಗಿದೆ. ಡಿವೈಎಸ್ ಪಿ ಕೆ. ಜಿ .ರಾಮಕೃಷ್ಣ ರವರು ವಿಭಿನ್ನವಾಗಿ ತಮ್ಮ ಕಚೇರಿ ಮುಂಭಾಗದಲ್ಲಿ ವಾಹನಗಳನ್ನು ವಶಪಡಿಸಿಕೊಂಡು ಸವಾರರನ್ನು ಆವರಣದಲ್ಲಿ ಕುಳ್ಳರಿಸಿ ನೂರು ರೂ ದಂಡ ಹಾಕಿದರೆ ಕಟ್ಟುತ್ತಾರೆ ,ಐನೂರು ರೂ ದಂಡ ಹಾಕಿದರೆ ಹೊರೆಯಾಗುತ್ತದೆ. ಇದ್ಯಾವುದೂ ಬೇಡ ಸಂಜೆಯವರೆಗೂ ಆವರಣದಲ್ಲೇ ಸವಾರರನ್ನು ಕುಳ್ಳಿರಿಸಿ ಮಧ್ಯಾಹ್ನದ ಊಟದ…











