ತುರುವೇಕೆರೆ : ಕೋವಿಡ್ ಮಾರ್ಗ ಸೂಚಿ ಮರೆತು ಸಾರ್ವಜನಿಕರು ಪಟ್ಟಣದಲ್ಲಿ ಭಾನುವಾರವಾದರೂ ಸಹ ಮುಂಜಾವಿನಿಂದಲೇ ಪಟ್ಟಣದ ಬೀದಿಗಳಲ್ಲಿ ಜನಜಂಗುಳಿ ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದಿದ್ದರು. ಭಾನುವಾರ ಬೆಳಿಗ್ಗೆಯಿಂದಲೇ ಪಟ್ಟಣದಲ್ಲಿ ಜನಜಂಗುಳಿ ಜಾತ್ರೆಯಂತಿತ್ತು. ನಗರದ ಬಾಣಸಂದ್ರ ರಸ್ತೆಯಲ್ಲಿ ಜನತೆ ವಸ್ತುಗಳನ್ನು ಖರೀದಿಸಲು ತಮ್ಮ ವಾಹನಗಳನ್ನು ರಸ್ತೆಯಲ್ಲೇ ನಿಲ್ಲಿಸಿದ್ದರಿಂದ ಕೆಲಕಾಲ ಸಂಚಾರ ದಟ್ಟಣೆ ಹೆಚ್ಚಾಗಿದ್ದರಿಂದ ಸುಗಮ ಸಂಚಾರಕ್ಕೆ ಅಡಚಣೆಯಾಗುತ್ತಿತ್ತು. ಅಂಬೇಡ್ಕರ್ ವೃತ್ತ ಮತ್ತು ಬಿರ್ಲಾ ಕಾರ್ನರ್ ರಸ್ತೆಗಳಲ್ಲಿ ವ್ಯಾಪಾರ-ವಹಿವಾಟು ಜೋರಾಗಿತ್ತು. ಜನ ಸಾಮಾನ್ಯರು ನಿಯಮಾನುಸಾರ ಅಂತರ ಕಾಪಾಡಿಕೊಳ್ಳದೆ, ಸರಿಯಾದ ರೀತಿಯಲ್ಲಿ ಮಾಸ್ಕ್ ಧರಿಸದೇ ವಸ್ತುಗಳ ಖರೀದಿಗೆ ಮುಗಿಬಿದ್ದಿದ್ದರು. ಬಾಣಸಂದ್ರ, ದಬ್ಬೇಘಟ್ಟ ಹಾಗೂ ಮಾಯ ಸಂದ್ರ ರಸ್ತೆ ಬದಿಗಳಲ್ಲಿನ ದಿನಸಿ ಅಂಗಡಿ, ಮಾಂಸದಂಗಡಿ, ಗಿರಣಿ, ಮೆಡಿಕಲ್, ರಸಗೊಬ್ಬರ, ಕಬ್ಬಿಣ ಮತ್ತು ಸಿಮೆಂಟ್ ಅಂಗಡಿ, ಅಕ್ಕಿ ಅಂಗಡಿ, ವಿದ್ಯುತ್ ಉಪಕರಣ, ಬಿಡಿಭಾಗ, ಎಟಿಎಂ, ಗ್ಯಾಸ್, ಪೆಟ್ರೋಲ್ ಬಂಕ್‍ಗಳ ಮುಂದೆ ಜನಸಂದಣಿ…
Author: News Desk Benkiyabale
ಹುಳಿಯಾರು: ಕೊರೊನಾ ತಡೆಗಟ್ಟುವ ನಿಟ್ಟಿನ್ನಲ್ಲಿ ಸರಕಾರ ಜಾರಿಗೆ ತಂದಿರುವ ಲಾಕ್‍ಡೌನ್ ಹಿನ್ನೆಲೆಯಲ್ಲಿ ಪಟ್ಟಣ ಸೇರಿದಂತೆ ಹೋಬಳಿಯ ಎಲ್ಲ ಗಾಡಿಭಾಗದ ಪ್ರದೇಶದಲ್ಲಿ ಹುಳಿಯಾರು ಪಿ.ಎಸ್.ಐ. ಕೆ.ಟಿ.ರಮೇಶ್ ರವರು ಕಟ್ಟುನಿಟ್ಟಿನ ಬಿಗಿ ಪೊಲೀಸ್ ಬಂದುಬಸ್ತು ಕೈಗೊಂಡಿದ್ದು. ತಾಲೂಕು ಗಡಿ ಭಾಗಗಳಾದ ಕೆಂಕೆರೆ ಪುರದಮಠ, ಯಳನಾಡು ಗಡಿ, ದೊಡ್ಡ ಎಣ್ಣೆಗೆರೆ ಗಡಿಭಾಗದಲ್ಲಿ ಯಾವುದೆ ವಾಹನ ಬಾರದಂತೆ ಬಿಗಿ ಕ್ರಮ ಜರುಗಿಸಲಾಗಿದೆ. ಹುಳಿಯಾರು ಪಟ್ಟಣಕ್ಕೆ ಪ್ರವೇಶಿಸುವ ಮಾರ್ಗಗಳಾದ ಕೆಂಕೆರೆ ರಸ್ತೆ, ತಿಪಟೂರು ಮತ್ತು ಹೊಸದುರ್ಗ ಮಾರ್ಗದ ರಸ್ತೆ, ಗಾಣದಾಳ್, ಹೋಯ್ಸಳಕಟ್ಟೆ ಹಾಗೂ ಚಿಕ್ಕನಾಯಕನಹಳ್ಳಿ ಮಾರ್ಗದ ರಸ್ತೆಗಳಲ್ಲಿ ಪೊಲೀಸ್ ಸಿಬ್ಬಂದಿಗಳನ್ನ ನಿಯೋಜಿಸುವ ಮೂಲಕ ಗುಡ್ಸ ವಾಹನ ಹೊರೆತು ಪಡಿಸಿ ಹುಳಿಯಾರು ಪಟ್ಟಣಕ್ಕೆ ಯಾವುದೆ ಒಂದು ಬೈಕ್, ಕಾರು, ಬಾರದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಅಲ್ಲದೆ ಪಟ್ಟಣದ ಒಳಭಾಗದಲ್ಲಿನ ನಿವಾಸಿಗಳು ಸಹಾ ಅನಾವಶ್ಯಕವಾಗಿ ಬೈಕ್‍ಗಳನ್ನ ರಸ್ತೆಗೆ ತರದಂತೆ ಬಿಗಿಕ್ರಮ ಕೈಗೊಂಡಿದ್ದಾರೆ. ಆದರು…
ಚಿಕನಾಯಕನಹಳ್ಳಿ : ರಂಜಾನ್ ಹಬ್ಬದ ಪ್ರಯುಕ್ತ ಬಡವರಿಗೆ ಉಚಿತ ಆಹಾರ ಕಿಟ್‍ಗಳನ್ನು ಅಜೀಜ್ ಟ್ರಸ್ಟ್‍ವತಿಯಿಂದ ವಿತರಿಸಲಾಯಿತು. ಕಳೆದ 19 ವರ್ಷದಿಂದ ರಂಜಾನ್ ಸಂದರ್ಭದಲ್ಲಿ ಬಡವರಿಗೆ ಆಹಾರ ಕಿಟ್‍ಗಳನ್ನು ಟ್ರಸ್ಟ್ ವತಿಯಿಂದ ವಿತರಸಲಾಗುತ್ತಿತ್ತು, ಕೋರೊನಾ ಹಿನ್ನಲೆಯಲ್ಲಿ ಸಾರ್ವಜನಿಕವಾಗಿ ಒಂದು ಸಾವಿರ ಬಡಕುಟುಂಬಗಳಿಗೆ ಆಹಾರದ ಕಿಟ್‍ಗಳನ್ನು ವಿತರಿಸಲು ತೀರ್ಮಾನಿಸಲಾಗಿತ್ತು. ಇದನ್ನು ಸರ್ಕಾರಿ ಕಾರ್ಯಕ್ರಮದಂತೆ ಆಯೋಜಿಸಲಾಗಿದ್ದು ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಈ ಕಿಟ್‍ವಿತರಣಾ ಕಾರ್ಯಕ್ಕೆ ಸಚಿವ ಜೆ.ಸಿ. ಮಾಧುಸ್ವಾಮಿ ಚಾಲನೆ ನೀಡಿದರು. ನಂತರ ಅವರು ಮಾತನಾಡಿ ಪ್ರತಿವರ್ಷದಂತೆ ರಂಜಾನ್ ಸಂದರ್ಭದಲ್ಲಿ ಬಡವರಿಗೆ ಆಹಾರ ಕಿಟ್‍ಗಳನ್ನು ವಿತರಿಸುತ್ತಿದ್ದ ಈ ಕುಟುಂಬ, 1000 ಕಿಟ್‍ಗಳನ್ನು ವಿತರಿಸಲು ಮುಂದಾಗಿರುವುದು ಶ್ಲಾಘನೀಯ, ಇಲ್ಲಿ ಎಲ್ಲಾ ವರ್ಗದ ಬಡವರಿಗೂ ಹಂಚಿಕೆ ಮಾಡಲಾಗುತ್ತಿದೆ, ಕೊರೊನಾ ಸಂದರ್ಭದಲ್ಲಿ ಇಂತಹ ಕಾರ್ಯಕ್ಕೆ ಮುಂದಾಗಿರುವುದು ಅವರ ದೊಡ್ಡತನವೆನಿಸಿದೆ ಎಂದರು. ಟ್ರಸ್ಟ್ ನ ಮುಖ್ಯಸ್ಥರಾದ ಮಹಮದ್ ಜಿಯಾವುಲ್ಲ ಮತ್ತು ಅಮಹಮದ್ ಅಫೀಸ್‍ಉಲ್ಲಾ ಮಾತನಾಡಿ ನಮ್ಮ ತಂದೆಯ ಹೆಸರಿನಲ್ಲಿ ಬಡಕುಟುಂಬಗಳಿಗೆ ನೀಡಲಾಗುವ ಈ…
ಹುಳಿಯಾರು : ಮುಕ್ತಿಧಾಮದಲ್ಲಿ ವಿದ್ಯುತ್ ಸಂಪರ್ಕವಿಲ್ಲದ ಪರಿಣಾಮ ಮೃತ ಸಂಬಂಧಿಕರ ಕಾರ್ ಹೆಡ್ ಲೈಟ್‍ನಲ್ಲಿ ಅಂತ್ಯಕ್ರಿಯೆ ನಡೆಸಿದ ಘಟನೆ ಹುಳಿಯಾರಿನ ಮುಕ್ತಿಧಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಹುಳಿಯಾರಿನ ರಂಗಲಕ್ಷ್ಮಮ್ಮ ಅವರು ಶುಕ್ರವಾರ ಮಧ್ಯಾಹ್ನ ಚಿಕ್ಕನಾಯಕನಹಳ್ಳಿ ಆಸ್ಪತ್ರೆಯಲ್ಲಿ ನಿಧನರಾದರು. ಆಸ್ಪತ್ರೆಯ ಪ್ರೊಸಿಜರ್‍ಗಳನ್ನು ಮುಗಿಸಿ ಮೃತ ದೇಹ ತರುವಷ್ಟರಲ್ಲಿ ಶುಕ್ರವಾರ ರಾತ್ರಿಯಾಗಿತ್ತು. ಚಿಕ್ಕನಾಯಕನಹಳ್ಳಿಯ ಪೌರಕಾರ್ಮಿಕರು ಮೃತದೇಹವನ್ನು ಹುಳಿಯಾರಿಗೆ ತಂದಾಗ ಮುಕ್ತಿಧಾಮದಲ್ಲಿ ಮಾತ್ರ ವಿದ್ಯುತ್ ಇಲ್ಲದೆ ಕಾರ್ಗತ್ತಲಾಗಿತ್ತು. ಮುಕ್ತಿಧಾಮದ ಪರಿಚಯ ಇಲ್ಲದ ಚಿಕ್ಕನಾಯಕನಹಳ್ಳಿ ಪೌರಕಾರ್ಮಿಕರು ಕತ್ತಲಲ್ಲಿ ಅಂತ್ಯಕ್ರಿಯೆ ಮಾಡಲು ಅಕ್ಷರಶಃ ಪರದಾಡಿದರು. ಆಂಬ್ಯೂಲೆನ್ಸ್ ಬೆಳಕಲ್ಲಿ ಚಿತಾಗಾರ ಹುಡುಕಿದರು. ಅಲ್ಲಿಗೆ ಮೃತದೇಹ ಸಾಗಿಸುವಷ್ಟರಲ್ಲಿ ಮೃತರ ಸಂಬಂಧಿಕರು ತಮ್ಮ ಕಾರು ತಂದು ಹೆಡ್‍ಲೈಟ್ ಹಾಕಿ ಮತ್ತೊಷ್ಟು ಬೆಳಕಿನ ವ್ಯವಸ್ಥೆ ಮಾಡಿದರು. ಚಿತಾಗಾರದ ಮೇಲೆ ಮೃತದೇಹವಿಟ್ಟು ಅದರ ಮೇಲೆ ಸೌದೆ ಜೋಡಿಸಿ ಎಣ್ಣೆ ಸುರಿಯುವ ಅಷ್ಟೂ ಕೆಲಸವನ್ನೂ ಪೌರಕಾರ್ಮಿಕರು ಕತ್ತಲೆಯಲ್ಲಿ ತಡವರಿಸುತ್ತ…
ಮಧುಗಿರಿ: ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಶಾಪಗ್ರಸ್ಥ ಸರ್ಕಾರಗಳು ಎಂದು ಮಾಜಿ ಶಾಸಕ ಕೆ.ಎನ್. ರಾಜಣ್ಣ ಟೀಕೆ ವ್ಯಕ್ತಪಡಿಸಿದರು. ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದ ಬಳಿ ಇರುವ ಕಾಂಗ್ರೆಸ್ ಸಮಿತಿ ಕಚೇರಿ ಮುಂಭಾಗ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆ-ಪೆÇಲೀಸ್ ಇಲಾಖೆ -ಕಂದಾಯ ಇಲಾಖೆ ಮತ್ತು ಆರೋಗ್ಯ ಇಲಾಖೆಯವರಿಗೆ ಕೊರೋನ ಎದುರಿಸಲು ಬೇಕಾಗಿರುವ ಸಲಕರಣೆಗಳು ಮತ್ತು 2 ಆಂಬ್ಯುಲೆನ್ಸ್ ಗಳನ್ನು ತಾಲ್ಲೂಕು ಆಡಳಿತಕ್ಕೆ ವಿತರಿಸಿ ನಂತರ ನಿರೀಕ್ಷಣಾ ಮಂದಿರದಲ್ಲಿ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು ಸಿಎಂ ಬಿಎಸ್ ಯಡಿಯೂರಪ್ಪ ತಮ್ಮ ಇಳಿವಯಸ್ಸಿನಲ್ಲಿ ನಿರಂತರ ಸಭೆಗಳನ್ನು ನಡೆಸುತ್ತಿದ್ದಾರೆ. ಅವರನ್ನು ಟೀಕಿಸುವುದಿಲ್ಲ ಆದರೆ ಅವರಿಗೆ ಆಡಳಿತದ ಮೇಲೆ ಹಿಡಿತ ಇಲ್ಲದಂತೆ ಕಾಣುತ್ತಿದೆ, ದಿಕ್ಕುದೆಸೆಯಿಲ್ಲದ ಇಂತಹ ಸರ್ಕಾರ ಕೊನೆಗಾಣಬೇಕು. ಬಿಎಸ್ ವೈರವರು ಅಸಹಾಯಕತೆಗೆ ಅವರು ಅಣ್ಣಮ್ಮ ದೇವಿಯ ಮೊರೆ ಹೋಗಿರುವುದು ಸಾಕ್ಷಿ ಎಂದರು. ಮಾಜಿ ಸಿಎಂ ಸಿದ್ದರಾಮಯ್ಯ ಅವರು ಜಾರಿಗೆ ತಂದ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕಡಿಮೆ ಮಾಡಿದ್ದು, ಇಂಥ ಕೋವಿಡ್…
ತುಮಕೂರು : ಜಿಲ್ಲೆಯಲ್ಲಿ 45 ವರ್ಷ ಮೇಲ್ಪಟ್ಟ ಎಲ್ಲಾ ವಿಕಲಚೇತನರು ಹಿರಿಯ ನಾಗರೀಕರು ತಮ್ಮ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ತೆರಳಿ ಉಚಿತವಾಗಿ ಕೋವಿಡ್ ಲಸಿಕೆ ಪಡೆಯಬೇಕು ಎಂದು ಜಿಲ್ಲಾ ವಿಕಲಚೇತನ ಹಾಗೂ ಹಿರಿಯನಾಗರೀಕರ ಕಲ್ಯಾಣಾಧಿಕಾರಿ ರಮೇಶ್.ಎಮ್. ಮನವಿ ಮಾಡಿದ್ದಾರೆ. ಅಲ್ಲದೇ, 18 ವರ್ಷ ಪೂರ್ಣಗೊಂಡ ವಿಕಲಚೇತನರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಾಲತಾಣ <https://www.cowin.gov.in/home> ನಲ್ಲಿ ತಮ್ಮ ವಿವರಗಳನ್ನು ನೋಂದಾಯಿಸಿ ಕೋವಿಡ್ ಲಸಿಕೆ ಪಡೆಯುವಂತೆ ತಿಳಿಸಿದ್ದಾರೆ.
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಿನೇ ದಿನೇ ವ್ಯಾಪಕವಾಗಿ ಹರಡುತ್ತಿರುವ ಕೋವಿಡ್-19 ಎರಡನೇ ಅಲೆಯ ಸಾಂಕ್ರಾಮಿಕ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಪಾಲಿಕೆ ವತಿಯಿಂದ ಹಲವಾರು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮೇಯರ್ ಬಿ.ಜಿ. ಕೃಷ್ಣಪ್ಪ ತಿಳಿಸಿದ್ದಾರೆ. ಕೋವಿಡ್-19 ಸೋಂಕು ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪಾಲಿಕೆಯ ಎಲ್ಲಾ ಅಧಿಕಾರಿ/ ಸಿಬ್ಬಂದಿ ಹಾಗೂ ಪೌರಕಾರ್ಮಿಕರು ಸೇರಿ ಒಟ್ಟು 851 ಮಂದಿಗೆ ಕೋವಿಡ್‍ಶೀಲ್ಡ್ ಲಸಿಕೆ ಹಾಕಿಸಲಾಗಿದೆ. ನಗರ ವ್ಯಾಪ್ತಿಯಲ್ಲಿ 45 ವಯಸ್ಸು ಮೀರಿದ 44,000 ಸಾರ್ವಜನಿಕರಿಗೆ ಲಸಿಕೆ ಹಾಕಿಸುವ ಕಾರ್ಯ ಕೈಗೊಳ್ಳಲಾಗಿದೆ. ಪಾಲಿಕೆ ವ್ಯಾಪ್ತಿ 35 ವಾರ್ಡ್‍ಗಳಲ್ಲಿ ಹೋಂ ಐಸೋಲೇಷನ್‍ನಲ್ಲಿ ಇರುವ ಕೋವಿಡ್ ಸೋಂಕಿತರ ಪ್ರದೇಶಗಳ ಬಳಿ ಕೋವಿಡ್-19 ಎಚ್ಚರಿಕೆ ಬ್ಯಾನರ್‍ಗಳನ್ನು ಅಳವಡಿಸಲಾಗಿದೆ. ಕೋವಿಡ್-19 2ನೇ ಅಲೆಯ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಪಾಲಿಕೆ ಅಧಿಕಾರಿ ಮತ್ತು ಸಿಬ್ಬಂದಿ ತಂಡ ರಚಿಸಿ ಮಾರ್ಚ್ ಮಾಹೆಯಿಂದ ಈವರೆಗೆ ಮಾಸ್ಕ್ ಧರಿಸದೇ ಇರುವ ಸಾರ್ವಜನಿಕರಿಗೆ 1,33,000/- ರೂ. ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಇರುವ…
ತುಮಕೂರು: ಕೋವಿಡ್ ಎರಡನೇ ಅಲೆ ನಿಯಂತ್ರಣದ ಹಿನ್ನೆಲೆಯಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳ ಆದೇಶದಂತೆ ಮಾರುಕಟ್ಟೆಯಲ್ಲಿ ಉಂಟಾಗುತ್ತಿರುವ ಜನಸಂದಣಿ, ನೂಕುನುಗ್ಗಲು ತಪ್ಪಿಸಲು ಮೇ 5 ರಿಂದ ಅನ್ವಯವಾಗುವಂತೆ ಜಿಲ್ಲೆಯಲ್ಲಿ ಎಲ್ಲಾ ರೀತಿಯ ಸಂತೆ, ವಾರದ ಸಂತೆಗಳನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಆದೇ ಶಿಸಿದ್ದಾರೆ. ಸಂತೆಗಳ ಬದಲಿಗೆ ಪ್ರತಿದಿನ ಬೆಳಿಗ್ಗೆ 6ರಿಂದ ಸಂಜೆ 6 ಗಂಟೆಯವರೆಗೆ ಹಾಪ್‍ಕಾಮ್ಸ್, ಎಲ್ಲಾ ರೀತಿಯ ಹಾಲಿನ ಬೂತ್‍ಗಳು, ತಳ್ಳುವ ಗಾಡಿ ಮೂಲಕ ಹಣ್ಣು ತರಕಾರಿಗಳನ್ನು ಮಾರುಕಟ್ಟೆಯ ಬೆಲೆಗೆ ಅನುಗುಣವಾಗಿ ಮಾರಾಟ ಮಾಡಲು ಸೂಚಿಸಿದ್ದಾರೆ. ಅಲ್ಲದೆ, ಕೊರೋನಾ ನಿಯಮಗಳನ್ನು ಪಾಲಿಸುವುದರ ಜೊತೆಗೆ ಎಪಿಎಂಸಿ ಮತ್ತು ದಿನಸಿ ಅಂಗಡಿಗಳನ್ನು ಪ್ರತಿ ದಿನ ಬೆಳಿಗ್ಗೆ 6ರಿಂದ ಮಧ್ಯಾಹ್ನ 12 ಗಂಟೆಯವರೆಗೆ ತೆರೆಯಲು ಅವಕಾಶ ನೀಡಲಾಗಿದೆ ಕಳಪೆ ಗುಣಮಟ್ಟದ ವಸ್ತುಗಳ ಮಾರಾಟಗಾರರ ವಿರುದ್ಧ ಕ್ರಮ: ಜನತಾ ಕಫ್ರ್ಯೂ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಕಳಪೆ ಗುಣಮಟ್ಟದ ವಸ್ತುಗಳನ್ನು ಮಾರಾಟ ಮಾಡಿದರೆ…
ಹುಳಿಯಾರು : ಒಂದೇ ಕಡೆ ಕುಳಿತು ವ್ಯಾಪಾರ ಮಾಡುವುದರಿಂದ ಕೊರೋನಾ ಸೋಂಕು ಹರಡುವ ಸಾಧ್ಯತೆ ಹೆಚ್ಚಿದೆ. ಹಾಗಾಗಿ ತಳ್ಳುವಗಾಡಿ ಮಾಡಿಕೊಂಡು ಬೀದಿಗಳಲ್ಲಿ ಓಡಾಡುತ್ತಾ ವ್ಯಾಪಾರ ಮಾಡಿ ಎಂದು ಹುಳಿಯಾರು ಪಪಂ ಮುಖ್ಯಾಧಿಕಾರಿ ಮಂಜುನಾಥ್ ವ್ಯಾಪಾರಸ್ಥರಿಗೆ ಕಿವಿಮಾತು ಹೇಳಿದರು. ಹುಳಿಯಾರು ಪಟ್ಟಣದ ಶಿಲ್ಪಾಸ್ಟೋರ್ ಬಳಿ ಸೊಪ್ಪು, ತರಕಾರಿ, ಹೂವು, ಹಣ್ಣುಗಳ ವ್ಯಾಪಾರ ನಡೆಯುತ್ತಿತ್ತು. ಎಂದಿನಂತೆ ಬೆಳಗ್ಗೆ 10 ಗಂಟೆಗೆ ವ್ಯಾಪಾರ ವಹಿವಾಟು ಮುಗಿಸುವ ಸಲುವಾಗಿ ಸೊಪ್ಪಿನ ವ್ಯಾಪಾರಿಯೊಬ್ಬರು ಉಳಿದ ಸೊಪ್ಪನ್ನು ಚೀಲಕ್ಕೆ ತುಂಬುತ್ತಿದ್ದನ್ನು ಗಮನಿಸಿ ಈ ಕಿವಿ ಮಾತು ಹೇಳಿದರು. ಹಣ್ಣುಗಳನ್ನು ಹತ್ತು-ಹದಿನೈದು ದಿನಗಳ ಕಾಲ ಇಡಬಹುದು. ತರಕಾರಿಯನ್ನು ವಾರಗಟ್ಟಲೆ ಇಡಬಹುದು. ಆದರೆ ಸೊಪ್ಪು ಮತ್ತು ಹೂವನ್ನು ಬಹಳ ದಿನಗಳ ಕಾಲ ಇಟ್ಟು ವ್ಯಾಪಾರ ಮಾಡಲಾಗುವುದಿಲ್ಲ. ಒಳ್ಳೆಯ ವ್ಯಾಪಾರವಾಗುತ್ತದೆಂದು ನೀವು ಬಂಡವಾಳ ಹಾಕಿ ಇಷ್ಟೊಂದು ಸೊಪ್ಪು ತಂದಿದ್ದೀರಿ. ದುರಾದುಷ್ಟವಶಾತ್ ಅರ್ಧಕರ್ಧ ಉಳಿದಿದೆ. ಇದನ್ನು ನಾಳೆ ಮಾರಲು ಬರುವುದಿಲ್ಲ. ಹಾಗಾಗಿ ಒಂದು…
ತುಮಕೂರು: ಕೊರೋನಾ ವೈರಸ್ ಹಾವಳಿಯಿಂದಾಗಿ ಮೃತರ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯ ಚಿತಾಗಾರದಲ್ಲಿ ಶವ ಸಂಸ್ಕಾರಕ್ಕೆ ತೀವ್ರ ತೊಂದರೆಯಾಗುತ್ತಿತ್ತು. ಇದನ್ನು ಗಮನಿಸಿ ಮಾನ್ಯ ಮಾಜಿ ಸಚಿವರಾದ ಸೊಗಡು ಶಿವಣ್ಣನವರು ಹಾಗೂ ಕೈಗಾರಿಕೋದ್ಯಮಿಗಳು ಟಿಎಂಸಿಸಿ ಬ್ಯಾಂಕ್ ಅಧ್ಯಕ್ಷರಾದ ಎನ್.ಎಸ್. ಜಯಕುಮಾರ್ ರವರು ತಕ್ಷಣ ಕಾರ್ಯಪ್ರವೃತ್ತರಾಗಿ ಕೆಲವೇ ದಿನಗಳಲ್ಲಿ ಸಮಸ್ಯೆಯನ್ನು ಬಗೆಹರಿಸಿದ್ದಾರೆ. ಇಂದು ಚಿತಾಗಾರದಲ್ಲಿ 2 ಹೆಚ್ಚುವರಿ ಒಲೆಗಳನ್ನು ಅಳವಡಿಸಲಾಗುತ್ತಿದೆ.











