ಮಧುಗಿರಿ: ಇತ್ತೀಚಿಗೆ ಕೋವಿಡ್ ಪಾಸಿಟಿವ್ ಬಂದಂತಹವರನ್ನು ಕೋವಿಡ್ ಕೇರ್ ಸೆಂಟರ್‍ಗೆ ಸೇರಿಸಿ ಆರೈಕೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು. ನಿರೀಕ್ಷಣಾ ಮಂದಿರದಲ್ಲಿ ಅಧಿಕಾರಿಗಳೊಂದಿಗೆ ತಾಲೂಕಿನಲ್ಲಿ ಕೊರೋನ ಹರಡದಂತೆ ತೆಗೆದುಕೊಂಡಿರುವ ಮುಂಜಾ ಗ್ರತಾ ಕ್ರಮಗಳ ಬಗ್ಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ತಾಲೂಕಿನಲ್ಲಿ ನಾಲ್ಕು ಗ್ರಾಮ ಪಂಚಾಯತಿ ಮತ್ತು ಪಟ್ಟಣದ ಪುರಸಭಾ ವ್ಯಾಪ್ತಿಯಲ್ಲಿ ಅಧಿಕ ಸೋಂಕಿತರು ಪತ್ತೆಯಾಗಿರುವುದರಿಂದ ಹಾಟ್ ಸ್ಪಾಟ್ ಗಳೆಂದು ಗುರುತಿಸಲಾಗಿದೆ. ಮಧುಗಿರಿ ಪುರಸಭಾ ವ್ಯಾಪ್ತಿಯ ಶ್ರೀನಿವಾಸ ಬಡಾವಣೆ ಮಧುಗಿರಿ ಪುರಸಭಾ ವ್ಯಾಪ್ತಿಯ ಶ್ರೀನಿವಾಸ ಬಡಾವಣೆ, ಕೆ.ಆರ್ ಬಡಾವಣೆ, ರಾಘವೇಂದ್ರ ಕಾಲೋನಿ, ಮತ್ತು ತಾಲೂಕಿನ ಮಿಡಿಗೇಶಿ ಬ್ಯಾಲ್ಯಾ , ದೊಡ್ಡೇರಿ , ಚಂದ್ರಗಿರಿ, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹೆಚ್ಚು ಸೋಂಕಿತರು ಕಂಡು ಬಂದಿರುವುದರಿಂದ ಹಾಟ್‍ಸ್ಪಾಟ್‍ಗಳಾಗಿ ಘೋಷಿಸಲಾಗಿದ್ದು, ಗ್ರಾಮಾಂತರ ಭಾಗದಲ್ಲಿರುವ ಹಾಟ್ ಸ್ಪಾಟ್‍ನಲ್ಲಿರುವ ಸೋಂಕಿತರನ್ನು ತಕ್ಷಣವೇ ಕೋವಿಡ್ ಕೇರ್ ಸೆಂಟರ್‍ನಲ್ಲಿ ಚಿಕಿತ್ಸೆ ಗಾಗಿ ದಾಖಲಿಸಿ ಮತ್ತು ಸೋಂಕಿತ ವ್ಯಕ್ತಿಗೆ ಸಂಬಂಧಿಸಿದ…
Author: News Desk Benkiyabale
ಹುಳಿಯಾರು: ಕೊರೊನಾ ಸೋಂಕಿನ ಆತಂಕ ಇಡೀ ಜಗತ್ತನ್ನೇ ತಲ್ಲಣಗೊಳಿಸಿದೆ. ಜನರಲ್ಲಿ ಪ್ರಾಣಭಯ ಹುಟ್ಟಿಸಿದ್ದು ಸೂಕ್ತ ಚಿಕಿತ್ಸೆಗಾಗಿ ಸರ್ಕಾರದ ಮುಂದೆ ಕೈಚಾಚಿ ಕೂತಿದ್ದಾರೆ. ಆದರೂ ಸರ್ಕಾರ ಮಾತ್ರ ಈ ವಿಚಾರವನ್ನು ಇನ್ನೂ ಗಂಭೀರವಾಗಿ ಪರಿಗಣಿಸದೆ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ. ಇದಕ್ಕೆ ಚಿಕ್ಕನಾಯಕನಹಳ್ಳಿ ತಾಲೂಕಿನ ದೊಡ್ಡಎಣ್ಣೇಗೆರೆಯಲ್ಲಿ ಶನಿವಾರ ನಡೆದ ಘಟನೆ ಸ್ಪಷ್ಟ ನಿದರ್ಶನವಾಗಿದೆ. ಹೌದು, ದೊಡ್ಡಎಣ್ಣೇಗೆರೆ ಗ್ರಾಮ ಪಂಚಾಯ್ತಿಯ ಹುಲ್ಲೇನಹಳ್ಳಿಯ ನೀರುಘಂಟಿ ಲಕ್ಕಪ್ಪ ಅವರಿಗೆ ಸಿಕ್ಕಾಪಟ್ಟೆ ಜ್ವರ ಬಂದಿದೆ. ಪರಿಣಾಮ ಇಲ್ಲಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ಶನಿವಾರ ಮಧ್ಯಾಹ್ನ ಆಗಮಿಸಿದ್ದಾರೆ. ಆದರೆ ಮಧ್ಯಾಹ್ನಕ್ಕೆ ಆಸ್ಪತ್ರೆಯ ಬೀಗ ಜಡಿದು ಸಿಬ್ಬಂದಿಗಳೆಲ್ಲರೂ ತೆರಳಿದ್ದಾರೆ. ಚಿಕಿತ್ಸೆ ಸಿ ಗದೆ ಬೀಗ ಜಡಿದ ಬಾಗಿಲ ಬಳಿಯೇ ಜ್ವರ ಪೀಡಿತ ಲಕ್ಕಪ್ಪ ನರಳಾಡಿದ್ದಾರೆ. ಈತನ ನರಳಾಟ ಗಮನಿಸಿದ ಮತ್ತೊಬ್ಬ ವಾಟರ್ ಮ್ಯಾನ್ ಕುಮಾರ್ ಓಡೋಡಿ ಬಂದು ಮೆಡಿಕಲ್ ಸ್ಟೋರ್‍ನಲ್ಲಿ ಮಾತ್ರೆ ತಂದು ನುಂಗಿಸಿದ್ದಾನೆ. ಅಲ್ಲದೆ ತಕ್ಷಣ ಗ್ರಾಪಂ…
ತುಮಕೂರು: ಜಿಲ್ಲೆಯಲ್ಲಿ ಕೋವಿಡ್- 19 2ನೇ ಅಲೆಯಿಂದಾಗಿ ಜನರು ತತ್ತರಿಸುತ್ತಿದ್ದು, ಆಕ್ಸಿಜನ್‍ಗಾಗಿ ಸೋಂಕಿತರು ಪರದಾಡುತ್ತಿದ್ದು, ಶಿರಾ ಶಾಸಕ ಡಾ.ಸಿ.ಎಂ.ರಾಜೇಶ್‍ಗೌಡ ಅವರು ಶಿರಾ ಕೋವಿಡ್ ಆಸ್ಪತ್ರೆಗೆ ಹೆಚ್ಚುವರಿಯಾಗಿ 50 ಆಕ್ಸಿಜನ್ ಹಾಸಿಗೆಯನ್ನು ಸ್ವಂತ ಹಣದಲ್ಲಿ ಅಳವಡಿಸಲು ಮುಂದಾಗಿದ್ದಾರೆ. ತುಮಕೂರು ನಗರವನ್ನು ಹೊರತುಪಡಿಸಿದರೆ ಶಿರಾ ತಾಲ್ಲೂಕಿನ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಶಿರಾ ತಾಲ್ಲೂಕು ಆಸ್ಪತ್ರೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಮೀಸಲಿರಿಸಲಾಗಿದ್ದು, ಸರ್ಕಾರದಿಂದ 50 ಆಕ್ಸಿಜನ್ ಹಾಸಿಗೆಗಳ ವ್ಯವಸ್ಥೆಯನ್ನು ಮಾಡಿದ್ದು, ಸೋಂಕಿತರಿಗೆ ಸಮಸ್ಯೆಯಾಗಬಾರದು ಎನ್ನುವ ಮುಂದಾಲೋಚನೆಯಿಂದ ಶಾಸಕರು ಹೆಚ್ಚುವರಿಯಾಗಿ 50 ಆಕ್ಸಿಜನ್ ಹಾಸಿಗೆ ಅಳವಡಿಸಲು ಬೆಂಗಳೂರಿನ ಸಂಸ್ಥೆಯೊಂದಿಗೆ ಮಾತುಕತೆ ನಡೆಸಿ, ಹಾಸಿಗೆ ಅಳವಡಿಸಲು ಸಂಸ್ಥೆಯವರೊಂದಿಗೆ ಪರಿಶೀಲಿಸಿದರು. ಈ ವೇಳೆ ಮಾತನಾಡಿದ ಶಾಸಕ ರಾಜೇಶ್‍ಗೌಡ, ಕೋವಿಡ್ 2ನೇ ಅಲೆಯಿಂದಾಗಿ ಸಾಮಾನ್ಯ ಜನರು ಕಷ್ಟವನ್ನು ಎದುರಿಸುತ್ತಿದ್ದು, ಮಹಾಮಾರಿಯಿಂದ ಸಂದ್ಧಿಗ್ನ ಪರಿಸ್ಥಿತಿ ಉಂಟಾಗಿದ್ದು ಆಕ್ಸಿಜನ್ ಕೊರತೆ ಉಂಟಾಗದಂತೆ ಬೆಂಗಳೂರಿನ ಬೆನಕ…
ತುಮಕೂರು : ಕೋವಿಡ್- 19 ವ್ಯಾಪಕವಾಗಿ ಹರಡುತ್ತಿರುವುದನ್ನು ನಿಯಂತ್ರಿಸಲು ಹಾಗೂ ಸರಪಳಿಯನ್ನು ಮುರಿಯುವ ನಿಟ್ಟಿನಲ್ಲಿ ನಗರದಲ್ಲಿ ಅತಿ ಹೆಚ್ಚು ಕೊರೋನಾ ಪ್ರಕರಣಗಳಿರುವ ಪ್ರದೇಶಗಳನ್ನು ಹಾಟ್ ಸ್ಪಾಟ್‍ಗಳಾಗಿ ಗುರುತಿಸಿ ಹೆಚ್ಚು ಎಚ್ಚರಿಕೆಯ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಡಿಯೋ ಕಾನ್ಪರೆನ್ಸ್‍ನಲ್ಲಿ ಅವರು ಮಾತನಾಡಿದರು. ನಗರದ ಗೌಡರ ಬೀದಿ, ಗಾಂಧೀ ನಗರ, ಎಸ್‍ಐಟಿ ಲೇಔಟ್, ಎಸ್.ಎಸ್.ಪುರಂ, ವಿದ್ಯಾನಗರ, ವಿವೇಕಾನಂದ ನಗರ, ಪಿ.ಎಚ್. ಕಾಲೋನಿ, ಎಸ್‍ಐಟಿ(ಅಶೋಕ್ ನಗರ), ಪಿ.ಎನ್.ಆರ್.ಪಾಳ್ಯ, ಹೌಸಿಂಗ್ ಬೋರ್ಡ್, ಅರಳೀಮರದ ಪಾಳ್ಯ, ಬನಶಂಕರಿ ರಾಘವೇಂದ್ರ ನಗರ, ಮರಳೂರು ದಿಣ್ಣೆ, ರಾಜೀವ್ ಗಾಂಧಿನಗರ ಜೈಪುರ, ಗೋಕುಲ ಬಡಾವಣೆ, ಮಾರುತಿ ನಗರ, ನೃಪತುಂಗ ಬಡಾವಣೆ, ಜಯನಗರ ಸೌತ್, ಉಪ್ಪಾರಹಳ್ಳಿ ಮಸೀದಿ ರಸ್ತೆ ಹತ್ತಿರ, ಶ್ರೀರಾಮ್ ನಗರ, ಆದರ್ಶ ನಗರಗಳನ್ನು ಹಾಟ್ ಸ್ಪಾಟ್ ಪ್ರದೇಶವೆಂದು ಗುರುತಿಸಿ ಹೆಚ್ಚು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು. ನಗರದಲ್ಲಿ ಗುರುತಿಸಿದಂತೆ ಉಳಿದ ತಾಲೂಕುಗಳ ಪಟ್ಟಣ ಪ್ರದೇಶಗಳಲ್ಲಿಯೂ ಹೆಚ್ಚು…
ತುಮಕೂರು : ಕೋವಿಡ್-19 ವ್ಯಾಪಕವಾಗಿ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಆದೇಶಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಹಾಗೂ ಪಾನ್ ಮಸಾಲ, ಜರ್ದಾ, ಖೈನಿ ಇತ್ಯಾದಿ ಬಳಕೆ ಮಾಡಿ ಉಗುಳುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುವುದರ ಜೊತೆಗೆ ಸಾಂಕ್ರಾಮಿಕ ರೋಗಗಳಾದ ಕ್ಷಯರೋಗ, ನ್ಯುಮೋನಿಯ ಮತ್ತು ಕೋವಿಡ್-19 ವೈರಸ್ ಒಬ್ಬರಿಂದ ಮತ್ತೊಬ್ಬರಿಗೆ ಹರಡಲು ಕಾರಣವಾಗಬಹುದು. ಬೀಡಿ, ಸಿಗರೇಟ್ ಸೇದುವುದರಿಂದ ಕೈಯಿಂದ ಬಾಯಿಗೆ ವೈರಸ್‍ಗಳು ದೇಹವನ್ನು ಪ್ರವೇಶಿಸುವ ಸಾಧ್ಯತೆ ಇದ್ದು, ಸೋಂಕು ದೇಹದ ಇತರೆ ಭಾಗಗಳಿಗೆ ಹರಡಿ ಶ್ವಾಸಕೋಶ, ಹೃದಯ ಸಂಬಂಧಿತ ಕಾಯಿಲೆಗಳು ಬರಬಹುದು. ಈ ಹಿನ್ನೆಲೆಯಲ್ಲಿ ಕೋವಿಡ್-19 ಸೋಂಕಿತರು ಪಾನ್‍ಮಸಾಲ, ತಂಬಾಕು ಉತ್ಪನ್ನಗಳನ್ನು ಜಿಗಿದು ಉಗುಳುವುದರಿಂದ ಕೋವಿಡ್-19 ಮತ್ತೊಬ್ಬರಿಗೆ ಹರಡುವ ಸಾಧ್ಯತೆಯಿದೆ. ಆದ್ದರಿಂದ ಸಾರ್ವಜನಿಕ ಆರೋಗ್ಯ ಹಿತದೃಷ್ಠಿಯಿಂದ ಮುಂದಿನ ಆದೇಶದವರೆಗೂ ತಂಬಾಕು ಉತ್ಪನ್ನಗಳು ಹಾಗೂ ಪಾನ್‍ಮಸಾಲ, ಜರ್ದಾ, ಖೈನಿ ಉತ್ಪನ್ನಗಳನ್ನು…
ಹುಳಿಯಾರು : ಲಾಕ್‍ಡೌನ್ ನಿಯಮ ಪಾಲನೆ ಅನ್ವಯ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಗಡಿ ಭಾಗವಾದ ಹುಳಿಯಾರು ಹೋಬಳಿಯ ಯಳನಾಡು, ಕೆಂಕೆರೆ ಹಾಗೂ ಹಂದನಕೆರೆ ಹೋಬಳಿಯ ದೊಡ್ಡಎಣ್ಣೇಗೆರೆಯಲ್ಲಿ ಪೊಲೀಸ್ ಚೆಕ್ ಪೋಸ್ಟ್ ತೆರೆಯಲಾಗಿದೆ. ಚಿತ್ರದುರ್ಗ, ಹಾಸನ, ಚಿಕ್ಕಮಗಳೂರು, ಬಳ್ಳಾರಿ ಜಿಲ್ಲೆಯಿಂದ ಬರುವ ಎಲ್ಲ ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ. ಅನಗತ್ಯವಾಗಿ ಓಡಾಡುವವರನ್ನು ಎಚ್ಚರಿಸಿ ಕಳುಹಿಸಲಾಗುತ್ತಿದೆ. ಪೊಲೀಸ್, ಕಂದಾಯ, ಗ್ರಾಮೀಣಾಭಿವೃದ್ಧಿ ಇಲಾಖೆಯ ಸಿಬ್ಬಂದಿಗಳು ಇಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪ್ರತಿ 8 ಗಂಟೆಗೆ ಒಂದು ಬ್ಯಾಚ್‍ನಂತೆ ಪಾಳಿಯ ಪ್ರಕಾರ ಈ ಚೆಕ್ ಪೋಸ್ಟ್‍ನಲ್ಲಿ ಕೆಲಸ ಮಾಡಲಿದ್ದಾರೆ. ಬೆಳಿಗ್ಗೆ 10 ಗಂಟೆ ವರೆವಿಗೂ ವಾಹನಗಳ ಓಡಾಟಕ್ಕೆ ಅವಕಾಶವಿದ್ದು ನಂತರ ಬರುವ ವಾಹನಗಳನ್ನು ತಡೆಹಿಡಿಯಲಾಗುತ್ತದೆ. ಹಾಲು, ಹಣ್ಣು, ಧಾನ್ಯ, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ವಾಹನಗಳಿಗೆ ವಿನಾಯಿತಿ ಇದೆ. ತಾಲೂಕಿನ ನಿವಾಸಿಗಳ ಬೈಕ್ ಸಂಚಾರಕ್ಕೆ ಮಾತ್ರ ಅವಕಾಶವಿದ್ದು ಬೇರೆ ತಾಲೂಕಿನ ಬೈಕ್‍ಗಳಿಗೂ ಓಡಾಟಕ್ಕೆ ನಿಷೇಧ ಇದೆ. …
ಹುಳಿಯಾರು: ಏ.29 ರ ಗುರುವಾರ ನಡೆಯಬೇಕಿದ್ದ ಹುಳಿಯಾರು ಪಟ್ಟಣ ಪಂಚಾಯ್ತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯನ್ನು ಕೊರೊನಾ ನೆಪವೊಡ್ಡಿ ಸರ್ಕಾರ ಅನಿರ್ದಿಷ್ಟಾವದಿಗೆ ಮುಂದೂಡಿದೆ. ಆದರೆ ರಾಜ್ಯದಲ್ಲಿ ನಗರಸಭೆಗಳ ಸಾರ್ವತ್ರಿಕ ಚುನಾವಣೆ ನಡೆಸಿರುವ ಸರ್ಕಾರ ಪಪಂ ಅಧ್ಯಕ್ಷರ ಚುನಾವಣೆ ಮುಂದೂಡಿರುವುದು ಸಾರ್ವಜನಿಕರ ಟೀಕೆ ಹಾಗೂ ಪಪಂ ನೂತನ ಸದಸ್ಯರ ಆಕ್ಷೇಪಕ್ಕೆ ಕಾರಣವಾಗಿದೆ. ಹುಳಿಯಾರು ಗ್ರಾಮ ಪಂಚಾಯ್ತಿಯು ಪಟ್ಟಣ ಪಂಚಾಯ್ತಿಯಾಗಿ 3 ವರ್ಷಗಳ ನಂತರ ಚುನಾವಣೆ ನಡೆದಿತ್ತು. ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಬಾರದೆ ಅತಂತ್ರವಾಗಿತ್ತು. ಪರಿಣಾಮ ಯಾವಯಾವ ಪಕ್ಷ ಕೂಡಿಕೆ ಮಾಡಿಕೊಂಡು ಅಧಿಕಾರ ಹಿಡಿಯುವುದೋ ಎನ್ನುವ ಕುತೂಹಲ ಪಟ್ಟಣ ನಿವಾಸಿಗಳಲ್ಲಿ ಮನೆಮಾಡಿತ್ತು. ಮೊದಲು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಧಿಕಾರ ಹಿಡಿಯುವ ಬಗ್ಗೆ ಸಚಿವ ಜೆ.ಸಿ.ಮಾಧುಸ್ವಾಮಿ ಅವರ ಒಲವು ತೋರಿದ್ದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಅವರೊಂದಿಗಾಗಲೇ ಮೈತ್ರಿ ಪ್ರಸ್ತಾಪ ಮಾಡಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ನಂತರ ಪಕ್ಷೇತರ ಸದಸ್ಯರುಗಳಾದ…
ತುಮಕೂರು: ಜಿಲ್ಲೆಗೆ ನಿಗಧಿಪಡಿಸಿದ ರಸಗೊಬ್ಬರವನ್ನು ಜಿಲ್ಲಾ ವ್ಯಾಪ್ತಿಯ ಚಿಲ್ಲರೆ ಮಾರಾಟಗಾರರಿಗೆ ಮಾತ್ರ ನೀಡಬೇಕು. ಯಾವುದೇ ಕಾರಣಕ್ಕೂ ಹೊರ ಜಿಲ್ಲೆಗೆ ವಿತರಣೆ ಮಾಡಬಾರದು ಎಂದು ಜಿಲ್ಲಾ ಜಂಟಿ ಕೃಷಿ ನಿರ್ದೇಶಕಿ ರಾಜಸುಲೋಚನಾ ಸೂಚಿಸಿದರು. ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಮುಂಗಾರು ಹಂಗಾಮಿನ ಕೃಷಿ ಪರಿಕರಗಳ ಪೂರ್ವ ಸಿದ್ಧತೆ ಕುರಿತು ಕೃಷಿ ಪರಿಕರಗಳ ಸರಬರಾಜುದಾರರ ಸಭೆ ನಡೆಸಿ ಮಾತನಾಡಿದರು. ಹಳೆಯ ರಸಗೊಬ್ಬರಗಳು (ಮಾರ್ಚ್ 21ರ ಹಿಂದಿನ ದಾಸ್ತನು) ದಾಸ್ತನು ಇದ್ದಲ್ಲಿ ಅದನ್ನು ಹಳೆಯ ದರದಲ್ಲಿ ಮಾರಾಟ ಮಾಡಬೇಕು. ಎಲ್ಲಾ ಸರಬರಾಜು ದಾರರು ಪಾಯಿಂಟ್ ಆಫ್ ಸೇಲ್ (ಪಿಓಎಸ್) ಉಪಕರಣ ಹೊಂದಿರಬೇಕು. ಪ್ರತಿ ವಹಿವಾಟನ್ನು ಪಾಯಿಂಟ್ ಆಫ್ ಸೇಲ್ (ಪಿಓಎಸ್) ಉಪಕರಣ ಮೂಲಕವೇ ನಿರ್ವಹಿಸಬೇಕು. ರೈತರಿಗೆ ಕಡ್ಡಾಯವಾಗಿ ರಶೀದಿ ನೀಡಬೇಕು. ಯಾವುದೇ ರೀತಿಯ ಕಾನೂನು ಉಲ್ಲಂಘನೆ ಕಂಡುಬಂದಲ್ಲಿ ರಸ ಗೊಬ್ಬರ ನಿಯಂತ್ರಣ ಕಾಯ್ದೆ 1985 ರ ಆದೇಶದ್ವನಯ ಅಗತ್ಯ ವಸ್ತುಗಳ ಕಾಯಿದೆಯಡಿ ಸೂಕ್ತ…
ತುಮಕೂರು: ಕೋವಿಡ್-19 ಸಂಬಂಧ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಡೆಸಿದ ವಿಡಿಯೋ ಕಾನ್ಪರೆನ್ಸ್ ಸಭೆಗೆ ತುಮಕೂರು ಜಿಲ್ಲಾಧಿಕಾರಿ ಕಚೇರಿಯ ವಿಡಿಯೋ ಕಾನ್ಪರೆನ್ಸ್ ಮೂಲಕ ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಭಾಗವಹಿಸಿದ್ದರು. ವಿಡಿಯೋ ಕಾನ್ಪರೆನ್ಸ್ ಸಭೆಯಲ್ಲಿ ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ. ಮಾಧುಸ್ವಾಮಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು, ಕೋವಿಡ್ ನಿಯಂತ್ರಣಕ್ಕೆ ಅಗತ್ಯ ನಿರ್ಧಾರ ತೆಗೆದುಕೊಳ್ಳಲು ಜಿಲ್ಲಾಡಳಿತಕ್ಕೆ ಸಂಪೂರ್ಣ ಸ್ವಾತಂತ್ರ್ಯ ನೀಡಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು. ಬೆಂಗಳೂರಿನಿಂದ ಜಿಲ್ಲೆಗೆ ಬರುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಇದರಿಂದ ಹಳ್ಳಿಗಳಲ್ಲಿ ಸೋಂಕು ಹರಡದಂತೆ ಕ್ರಮಕೈಗೊಳ್ಳಲು ಚೆಕ್‍ಪೆÇೀಸ್ಟ್ ಸ್ಥಾಪಿಸಲು ಅನುಮತಿ ನೀಡಬೇಕೆಂದು ಕೋರಿದರು. ಕಳೆದ ಬಾರಿಯಂತೆ ಈ ಬಾರಿಯೂ ಜಿಲ್ಲಾ ಆಸ್ಪತ್ರೆಯನ್ನು ಸಂಪೂರ್ಣವಾಗಿ ಕೋವಿಡ್ ಆಸ್ಪತ್ರೆಯನ್ನಾಗಿ ಮಾರ್ಪಾಡು ಮಾಡಿ, ಶ್ರೀದೇವಿ ವೈದ್ಯಕೀಯ ಕಾಲೇಜನ್ನು ತಾತ್ಕಾಲಿಕವಾಗಿ ಸರ್ಕಾರಿ…
ತುಮಕೂರು : ಕೋವಿಡ್ ಎರಡನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಜಾರಿಗೊಳಿಸಿರುವ ಮಾರ್ಗಸೂಚಿಗಳನ್ವಯ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಿರುವ ಕಫ್ರ್ಯೂ ಕುರಿತು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಹಾಗೂ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ. ಕೆ.ವಂಶಿಕೃಷ್ಣ ಅವರು ತುಮಕೂರು ನಗರದಲ್ಲಿ ಪರಿಶೀಲನೆ ನಡೆಸಿದರು. ನಗರದ ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತ ಸೇರಿದಂತೆ ನಗರದ ವಿವಿಧೆಡೆ ಸಂಚರಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳು ಪರಿಶೀಲನೆ ನಡೆಸಿ, ವಾಹನಗಳ ತಪಾಸಣೆ ಮಾಡಿದರು. ಇದಕ್ಕೂ ಮುನ್ನ ಕಫ್ರ್ಯೂ ಸಮಯದಲ್ಲಿ ಜನರು ಹಾಗೂ ವಾಹನಗಳ ಸಂಚಾರದ ಮೇಲೆ ನಿಗಾವಹಿಸಲು ಡ್ರೋನ್ ಕ್ಯಾಮರಾಕ್ಕೆ ಚಾಲನೆ ನೀಡಿದರು.











