ತುಮಕೂರು : ಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ನಗರ ವ್ಯಾಪ್ತಿಯಲ್ಲಿ ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಸೋಂಕು ಗ್ರಾಮಗಳಿಗೆ ವ್ಯಾಪಿಸದಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಪಿಡಿಒಗಳು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲೆಯ ಎಲ್ಲಾ ಗ್ರಾಮಪಂಚಾಯ್ತಿಗಳ ಅಧ್ಯಕ್ಷರು, ಸದಸ್ಯರು, ಪಿಡಿಒಗಳೊಂದಿಗೆ ವಿಡಿಯೋ ಕಾನ್ಪರೆನ್ಸ್ ನಡೆಸಿ ಮಾತನಾಡಿದ ಅವರು, ಗ್ರಾಪಂ ಅಧ್ಯಕ್ಷರ ಅಧ್ಯಕ್ಷತೆಯಲ್ಲಿನ ಕಾರ್ಯಪಡೆಯು ಗ್ರಾಪಂ ವ್ಯಾಪ್ತಿಯ ಪಿಡಿಒ, ಗ್ರಾಮ ಲೆಕ್ಕಾಧಿಕಾರಿ, ಬಿಲ್ಕಲೆಕ್ಟರ್, ವಾಟರ್ಮೆನ್ ಸೇರಿದಂತೆ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಬಳಸಿಕೊಂಡು ಕೋವಿಡ್-19 ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ, ಗ್ರಾಮಗಳಿಗೆ ಕೊರೊನಾ ಸುಳಿಯದಂತೆ ತಡೆಗಟ್ಟಬೇಕು ಎಂದು ನಿರ್ದೇಶಿದರು. ಅಧಿಕಾರಿಗಳು ಎಲ್ಲಾ ಕೆಲಸಗಳನ್ನು ಬದಿಗೊತ್ತಿ ಕೋವಿಡ್-19 ಹರಡದಂತೆ ತಡೆಗಟ್ಟುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ, ನಿಯಂತ್ರಣಕ್ಕೆ ಮೊದಲ ಆದ್ಯತೆ ಕೊಡಬೇಕು ಎಂದರಲ್ಲದೆ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರನ್ನು ಬಳಸಿಕೊಂಡು ಕೋವಿಡ್…
Author: News Desk Benkiyabale
ತುಮಕೂರು: ಕೋವಿಡ್ ಹಿನ್ನೆಲೆಯಲ್ಲಿ ನಗರದ ಎಂಜಿ ರಸ್ತೆಯಲ್ಲಿಂದು ಜಿಲ್ಲಾಧಿಕಾರಿಗಳಾದ ವೈ.ಎಸ್. ಪಾಟೀಲ ಹಾಗೂ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ.ಕೆ. ವಂಶಿಕೃಷ್ಣ ಅವರು ಮಾಸ್ಕ್ ಹಾಗೂ ಕೋವಿಡ್ ಮಾರ್ಗಸೂಚಿ ಪಾಲನೆ ಕುರಿತು ಪರಿಶೀಲನೆ ನಡೆಸಿದರು. ಮಾಸ್ಕ್ ಹಾಕದವರಿಗೆ ಮತ್ತು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸದೇ ಇದ್ದವರಿಗೆ ದಂಡವಿಧಿಸಿದರೆ ಮತ್ತೆ ಕೆಲವರಿಗೆ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವಂತೆ ಜಾಗೃತಿ ಮೂಡಿಸಿದರು. ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು, ಜಿಲ್ಲೆಯಲ್ಲಿ ಸರ್ಕಾ ರದ ಮಾರ್ಗಸೂಚನೆ ಅನ್ವಯ ಕೋವಿಡ್ ನಿಯಂತ್ರಣಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲಾಗುತ್ತಿದೆ. ತಹಸೀಲ್ದಾರ್ ನೇತೃತ್ವದಲ್ಲಿ ಕಾರ್ಯಪಡೆ ರಚನೆ ಮಾಡಿ ಸರ್ಕಾರದ ಹೊಸ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಸೂಚನೆ ನೀಡಲಾಗಿದೆ ಎಂದರು. ನಗರದಲ್ಲಿ ಕೋವಿಡ್ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೈಕ್ರೋ ಕಂಟೈನ್ಮೆಂಟ್ ಜೋನ್ಗಳನ್ನು ಮಾಡಲು ನಗರ ಪಾಲಿಕೆ ಆಯುಕ್ತರಿಗೆ ಸೂಚನೆ ನೀಡಿದ್ದೇನೆ. ಹೆಚ್ಚು ರ್ಯಾಟ್ ಟೆಸ್ಟ್…
ತುಮಕೂರು : ಕೋವಿಡ್-19 ಎರಡನೇ ಅಲೆ ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ಸರ್ಕಾರದ ಮಾರ್ಗಸೂಚಿನ್ವಯ ಕ್ರಮ ಕೈಗೊಂಡಿದ್ದು, ಸಮರ್ಪಕ ಹಾಸಿಗೆ, ಐಸಿಯು ವ್ಯವಸ್ಥೆ ಮತ್ತು ಲಸಿಕಾ ವಿತರಣೆಯನ್ನು ಮಾಡಲಾಗುತ್ತಿದೆ ಎಂದು ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ. ಮಾಧುಸ್ವಾಮಿ ಅವರು ತಿಳಿಸಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿಂದು ನಡೆದ 2020-21ನೇ ಸಾಲಿನ 4ನೇ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಕೋವಿಡ್ ಲಸಿಕೆಯ ಪೂರೈಕೆ ಸಮರ್ಪಕವಾಗಿದೆ. ಪ್ರಸ್ತುತ ಲಸಿಕೆ, ಹಾಸಿಗೆಗಳ ಕೊರತೆಯಿಲ್ಲ. ಕೋವಿಡ್ ತಡೆಗೆ ಮನೆ-ಮನೆ ಸರ್ವೆ ಕಾರ್ಯವನ್ನೂ ಮಾಡಲಾಗುತ್ತಿದ್ದು, ಲಕ್ಷಣ ಕಂಡುಬಂದಲ್ಲಿ ಅಂತಹವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿ ಕೋವಿಡ್ ಪಾಸಿಟಿವ್ ಬಂದರೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಬೇಕು. ವೈದ್ಯರ ಸಲಹಾ ಚೀಟಿಯಿಲ್ಲದೆ ಮೆಡಿಕಲ್ಗಳಲ್ಲಿ ಔಷಧಗಳನ್ನು ನೀಡಬಾರದು. ವಯಸ್ಸಾದವರನ್ನು ಹೆಚ್ಚು ಪರೀಕ್ಷೆಗೆ ಒಳಪಡಿಸಬೇಕು. ವಿವಿಧ ರೋಗಗಳಿಂದ ಆಸ್ಪತ್ರೆಗೆ ದಾಖಲಾಗುವ ರೋಗಿಗಳನ್ನು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಿ ಬಳಿಕ ದಾಖಲು ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.…
ತುಮಕೂರು: ಕೊರೊನಾ ಹಿನ್ನೆಲೆ ಸುಪ್ರಸಿದ್ದ ಯಡಿಯೂರು ಸಿದ್ದಲಿಂಗೇಶ್ವರ ಜಾತ್ರಾ ಮಹೋತ್ಸವವನ್ನ ರದ್ದು ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಏಪ್ರಿಲ್ 19ರಂದು ನಡೆಯಬೇಕಿದ್ದ ಜಿಲ್ಲೆಯ ಯಡಿಯೂರಿನಲ್ಲಿ ಸಿದ್ದಲಿಂಗೇಶ್ವರ ಸ್ವಾಮಿ ಜಾತ್ರೆ ನಡೆಸಲು ತಯಾರಿ ನಡೆಸಲಾಗಿತ್ತು. ಆದರೆ, ಸಧ್ಯ ಕೊರೊನಾ ತೀವ್ರ ಸ್ವರೂಪ ಪಡೆಯುತ್ತಿರುವ ಹಿನ್ನೆಲೆಯಲ್ಲಿ ವಿಂಜೃಭಣೆಯ ಜಾತ್ರೆಯನ್ನ ರದ್ದು ಪಡೆಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ತುಮಕೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ತಾಂತ್ರಿಕ ಸಹಾಯಕ, ಭದ್ರತಾ ರಕ್ಷಕ, ಚಾಲಕ ಮತ್ತು ಚಾಲಕ-ಕಂ-ನಿರ್ವಾಹಕ ಹುದ್ದೆಗಳ ನೇರ ನೇಮಕಾತಿ ಪ್ರಕ್ರಿಯೆಯನ್ನು ಕೋವಿಡ್-19 ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಸ್ಥಗಿತಗೊಳಿಸಲಾಗಿದ್ದು, ಪ್ರಸ್ತುತ ನಿಗಮದ ಯಾವುದೇ ನೇಮಕಾತಿ ಆದೇಶವನ್ನು ನೀಡುತ್ತಿಲ್ಲ. ಆದರೂ ವಂಚಕರು ಕೆಲವು ಉದ್ಯೋಗಾಕಾಂಕ್ಷಿಗಳಿಗೆ ನಕಲಿ ನೇಮಕಾತಿ ಆದೇಶಗಳನ್ನು ನೀಡುತ್ತಿರುವುದು ನಿಗಮದ ಗಮನಕ್ಕೆ ಬಂದಿದೆ. ಉದ್ಯೋಗಾಂಕಾಕ್ಷಿಗಳು ವಂಚಕರು ನೀಡುವ ನಕಲಿ ನೇಮಕಾತಿ ಆದೇಶದ ಆಮಿಷಗೊಳಗಾಗಬಾರದು. ನೇಮಕಾತಿ ಸಂಬಂಧಿತ ವಿಷಯಗಳ ಬಗ್ಗೆ ನಿಗಮದ ಅಧಿಕೃತ ವೆಬ್ಸೈಟ್ www.ksrtcjobs.karnataka.gov.in ನಲ್ಲಿ ನೋಡಬಹುದು. ಇಂತಹ ಆಮಿಷಗಳು ಕಂಡುಬಂದಲ್ಲಿ ಹತ್ತಿರದ ಪೆÇಲೀಸ್ ಠಾಣೆಗೆ ದೂರು ದಾಖಲಿಸಬೇಕು ಎಂದು ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತುಮಕೂರು: ದೆಹಲಿಯಲ್ಲಿ ದೇಶದ ಅನ್ನದಾತರು ನಡೆಸುತ್ತಿರುವ ಪ್ರತಿಭಟನೆ ಬೆಂಬಲಿಸಿ ರಾಜ್ಯದ ಜಿಯೋಸ್ಟೇಷಿಯಲ್ ಇಂಜಿನಿಯರಿಂಗ್ನಲ್ಲಿ ಎಂ.ಟೆಕ್ ಪೂರೈಸಿರುವ ಟೆಕ್ಕಿಯೊಬ್ಬರು ಮಲೆಮ ಹದೇಶ್ವರ ಬೆಟ್ಟದಿಂದ ದೆಹಲಿವರೆಗೆ 6 ಸಾವಿರ ಕಿ.ಮೀ. ಪಾದಯಾತ್ರೆ ಕೈಗೊಂಡಿದ್ದಾರೆ. ರೈತರ ಹೋರಾಟವನ್ನು ಬೆಂಬಲಿಸಿ ಮಲೆಮಹದೇಶ್ವರ ಬೆಟ್ಟದಿಂದ ಪಾದಯಾತ್ರೆ ಕೈಗೊಂಡಿರುವ ಬಾಗಲಕೋಟೆ ಮೂಲದ ನಾಗರಾಜ್ ಕಲಗುಟಕರ್ ಅವರು ತಾಲ್ಲೂ ಕಿನ ಹೊನ್ನುಡಿಕೆಗೆ ಆಗಮಿಸಿದಾಗ ರೈತ ಸಂಘ ಹಾಗೂ ಸಹಜ ಬೇಸಾಯ ಶಾಲೆ ವತಿಯಿಂದ ಆತ್ಮೀಯವಾಗಿ ಬರ ಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪಾದಯಾತ್ರಿ ನಾಗರಾಜ್ ಕುಲಗುಟಕರ್, ನಾನು 2015 ರಿಂದಲೂ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಕೊಂಡಿದ್ದು, ಭ್ರಷ್ಟಾಚಾರ, ಅಕ್ರಮ ಮರಳು ಸಾಗಣೆ ವಿರುದ್ಧ ಹೋರಾಟ ನಡೆಸುತ್ತಾ ಬಂದಿದ್ದೇನೆ. ಪ್ರಸ್ತುತ 4 ತಿಂಗಳಿಂದಲೂ ದೆಹಲಿಯಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೆಲ ಕಾಯ್ದೆಗಳ ವಾಪಸ್ಸಾತಿಗೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ ಪಾದಯಾತ್ರೆ ಕೈಗೊಂಡಿರುವುದಾಗಿ ಹೇಳಿದರು. ಫೆ. 11 ರಿಂದ ಪಾದಯಾತ್ರೆ ಕೈಗೊಂಡಿದ್ದು, ಪ್ರತಿ…
ಗುಬ್ಬಿ: ಅಪರೂಪದ ಬಾವಲಿ ಹಕ್ಕಿ ಸಂಕುಲ ಉಳಿಸಲು ಅವುಗಳ ವಾಸಸ್ಥಾನವಾದ ಎರಡು ಬೃಹತ್ ಮರಗಳನ್ನು ಕಡಿಯದಂತೆ ನ್ಯಾಯಾಲಯದ ಆದೇಶವಿದ್ದರೂ ಹಠಕ್ಕೆ ಬಿದ್ದಂತೆ ಹೆದ್ದಾರಿ ಪ್ರಾದಿಕಾರ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಮರ ಕಡಿಯುವ ಸಲುವಾಗಿ ಸರ್ವೆ ಮಾಡುವ ನೆಪದಲ್ಲಿ ಗ್ರಾಮಸ್ಥರಲ್ಲಿ ಗುಂಪು ಹುಟ್ಟುಹಾಕುತ್ತಿರುವ ಕಾರಣ ದಿಢೀರ್ ಪ್ರತಿಭಟನೆ ನಡೆಸಿ ಮರ ಕಡಿಯದಂತೆ ಒತ್ತಾಯಿಸಿದ ಘಟನೆ ತಾಲ್ಲೂಕಿನ ನಿಟ್ಟೂರು ಹೋಬಳಿ ಸೋಪನಹಳ್ಳಿ ಬಳಿ ನಡೆಯಿತು. ಹೆದ್ದಾರಿ ರಸ್ತೆ ಅಗಲೀಕರಣ ಮಾಡುವ ಸಂದರ್ಭದಲ್ಲಿ ಸೋಪನಹಳ್ಳಿ ಬಳಿಯ ಎರಡು ಬೃಹತ್ ಮರಗಳು ಸುಮಾರು ಐದು ಸಾವಿರ ಬಾವಲಿ ಹಕ್ಕಿಗಳ ವಾಸಸ್ಥಳವಾಗಿರುವ ಬಗ್ಗೆ ಅಧಿಕಾರಿಗಳಿಗೆ ಮನವರಿಕೆ ಮಾಡಲಾಗಿತ್ತು. ಅರಣ್ಯ ಇಲಾಖೆಗೂ ಸಹ ಈ ಅಪರೂಪದ ಸಂಕುಲ ಉಳಿಸಲು ಮನವಿ ಮಾಡಿದ್ದ ಗ್ರಾಮಸ್ಥರು ಇಲ್ಲಿನ ಈ ಮರಗಳನ್ನು ಪೂಜೆ ಮಾಡುವ ತಮ್ಮ ಧಾರ್ಮಿಕ ಭಾವನೆಯನ್ನೂ ಸಹ ಹಂಚಿಕೊಂಡಿದ್ದರು. ಆ ಸಮಯದಲ್ಲಿ ಈ ಮರಗಳನ್ನು ಉಳಿಸುವ ಮಾತುಗಳಾಡಿದ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳು ಕಳೆದ ಆರು ತಿಂಗಳ ಹಿಂದೆ…
ಹುಳಿಯಾರು: ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಿಂದ ನಿರ್ಮಾಣವಾಗುತ್ತಿರುವ ಹುಳಿಯಾರು ಹೋಬಳಿಯ ತಮ್ಮಡಿಹಳ್ಳಿಯಿಂದ ಎನ್.ಹೆಚ್.150 ಎ ಗೆ ಸೇರುವ ರಸ್ತೆ ಕಾಮಗಾರಿ ಆಮೆವೇಗದಲ್ಲಿ ನಡೆಯುತ್ತಿದ್ದು ಇದರಿಂದ ಸಾರ್ವಜನಿಕರ ಓಡಾಟಕ್ಕೆ ತೀರ್ವ ತೊಂದರೆಯಾಗಿದೆ ಎಂದು ಆರೋಪಿಸಿದ್ದಾರೆ. ಸುಮಾರು 3.23 ಕಿ.ಮೀ ಉದ್ದರ ಬರದಲೇಪಾಳ್ಯ, ಯಾಕುಬ್ ಸಾಬ್ ಪಾಳ್ಯ ಸೇರಿದಂತೆ ಇತರೆ ಹಳ್ಳಿಗಳಿಗೆ ರಸ್ತೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದೆ. ಈ ರಸ್ತೆಗೆ ಸಚಿವರಾದ ಜೆ.ಸಿ.ಮಾಧುಸ್ವಾಮಿ ಅವರು ಜೂನ್ 2020 ರಲ್ಲಿ ಶಂಕುಸ್ಥಾಪನೆ ಮಾಡಿದ್ದು ಇದೂವರೆವಿಗೂ ಅಂದರೆ 11 ತಿಂಗಳು ಕಳೆದಿದ್ದರೂ ಇನ್ನೂ ಪೂರ್ಣಗೊಳ್ಳದ ಪರಿಣಾಮ ಸಂಚಾರ ಅಸ್ತವ್ಯಸ್ತವಾಗಿದೆ. ಅಲ್ಲದೆ ತಮ್ಮಡಿಹಳ್ಳಿ ಗ್ರಾಮದಲ್ಲಿ ಕೆರೆ ಏರಿಯ ಮೇಲೆ ಒಂದು ಭಾಗದಲ್ಲಿ ರಸ್ತೆ ಮಾಡುತ್ತೇವೆಂದು ಕೆರೆ ಏರಿಯನ್ನು ಬಗೆದು ಅರ್ಧಕ್ಕೆ ಬಿಟ್ಟು ಹೋಗಿದ್ದಾರೆ. ಕೆರೆ ಏರಿಯ ಮೇಲೆ ಒಂದು ಕಡೆಯಿಂದ ನಾಲ್ಕು ಚಕ್ರದ ವಾಹನ ಬಂದರೆ ಇನ್ನೊಂದು ಕಡೆಯಿಂದ ದ್ವಿಚಕ್ರ ವಾಹನ ಹೋಗಲು ಪರದಾಡುವಂತಾಗಿದೆ.…
ತುಮಕೂರು: ನಗರದ ಹೊರವಲಯದ ಅಗಳಕೋಟೆಯಲ್ಲಿರುವ ಸಿದ್ದಾರ್ಥ ಮೆಡಿಕಲ್ ಕಾಲೇಜಿನ ಆಸ್ಪತ್ರೆಯಲ್ಲಿಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ. ಜಿ. ಪರಮೇಶ್ವರ್ ಅವರು ಕೋವಿಡ್-19 ಲಸಿಕೆ ಪಡೆದರು. ಕೊರೊನಾ ಲಸಿಕೆ ಪಡೆದ ನಂತರ ಮಾತನಾಡಿದ ಡಾ. ಜಿ. ಪರಮೇಶ್ವರ್ ಅವರು, ದೇಶದಲ್ಲಿ ಇತ್ತೀಚೆಗೆ ಕೊರೊನಾ 2ನೇ ಆರ್ಭಟ ಜಾಸ್ತಿಯಾಗುತ್ತಿದೆ. ಹೀಗಾಗಿ ಸೋಂಕಿತರ ಸಂಖ್ಯೆಯೂ ಗಣನೀಯವಾಗಿ ಏರಿಕೆಯಾಗುತ್ತಿದೆ. ಇದರಿಂದ ಪಾರಾಗಲು 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಕೊರೊನಾ ಲಸಿಕೆ ಪಡೆದುಕೊಳ್ಳಬೇಕು ಎಂದು ಸಲಹೆ ಮಾಡಿದರು. ಮುಂಜಾಗ್ರತಾ ಕ್ರಮವಾಗಿ ಕೋವಿಡ್ ಲಸಿಕೆ ಪಡೆದರೆ ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಜಾಸ್ತಿಯಾಗಿ ಸೋಂಕಿನಿಂದ ಪಾರಾಗಬಹುದು. ಯಾರೂ ಸಹ ಹೆದರದೆ ಧೈರ್ಯವಾಗಿ ಕೋವಿಡ್ ಲಸಿಕೆ ಹಾಕಿಸಿಕೊಳ್ಳಬಹುದು. ಇದರಿಂದ ಯಾವುದೇ ರೀತಿಯ ಅಡ್ಡ ಪರಿಣಾಮಗಳಿಲ್ಲ ಎಂದರು. ಕೊರೊನಾ ಮಹಾಮಾರಿಯ ಆರ್ಭಟ ರಾಜ್ಯ ಮತ್ತು ದೇಶದಲ್ಲಿ ಆರಂಭವಾದಾಗಿನಿಂದಲೂ ನಾನು ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿದ್ದೆ. ಅಲ್ಲದೆ…
ತುಮಕೂರು : ಪ್ರವಾಸೋದ್ಯಮ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ನಡೆದ ಪ್ರವಾಸೋದ್ಯಮ ಇಲಾಖೆ ಯೋಜನೆ ಹಾಗೂ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ವಿಶೇಷ ಅಭಿವೃದ್ಧಿ ಯೋಜನೆಯಡಿ ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಅನುಷ್ಠಾನಗೊಳಿಸುತ್ತಿರುವ 69 ಕಾಮಗಾರಿಗಳ ಪೈಕಿ 12 ಕಾಮಗಾರಿಗಳು ಪೂರ್ಣಗೊಂಡಿದ್ದು, ಪ್ರಗತಿಯಲ್ಲಿರುವ 46 ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು ಹಾಗೂ ಪ್ರಾರಂಭಿಸದೇ ಇರುವ 11 ಕಾಮಗಾರಿಗಳನ್ನು ಆದಷ್ಟು ಬೇಗ ಕೈಗೆತ್ತಿಕೊಳ್ಳಬೇಕು ಎಂದು ನಿರ್ದೇಶಿಸಿದರು. ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿ ದಂತೆ ಸಣ್ಣ-ಪುಟ್ಟ ಕಾಮಗಾರಿಗಳ ಅನುದಾನ ಬಿಡುಗಡೆಗಾಗಿ ಕೇಂದ್ರ ಕಚೇರಿಗಳಿಗೆ ಪತ್ರ ಬರೆದು ಕಾಯುವುದು ಬೇಡ. ಅಂತಹ ಕಾಮಗಾರಿಗಳ ಬಗ್ಗೆ ತಮ್ಮ ಗಮನಕ್ಕೆ ತಂದು, ಆಡಳಿತಾತ್ಮಕ ಮಂಜೂರಾತಿಯನ್ನು ಪಡೆದು ಕಾಮಗಾರಿಗಳನ್ನು ಪ್ರಾರಂಭಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ತುರುವೇಕೆರೆ ತಾಲೂಕಿನಲ್ಲಿ ಐತಿಹಾಸಿಕ ಪ್ರವಾಸಿತಾಣಗಳಿದ್ದು, ಈ ಪೈಕಿ…










