Author: News Desk Benkiyabale

ತುಮಕೂರು :        ಎರಡನೇ ಹಂತದ ಕೋವಿಡ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಠಿಯಿಂದ ವಾರ್ಡ್ ಹಂತದಲ್ಲಿ ಕೋವಿಡ್ ತಪಾಸಣೆ ಮತ್ತು ಸ್ವ್ಯಾಬ್ ಸಂಗ್ರಹ, ಸೇರಿದಂತೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಮಹಾನಗರಪಾಲಿಕೆ ಹಾಗೂ ಆರೋಗ್ಯ ಇಲಾಖೆ ಜಂಟಿಯಾಗಿ ಹಮ್ಮಿಕೊಳ್ಳಲಾಗಿದೆ.         ನಗರದ ಸಿದ್ಧಗಂಗಾ ಬಡಾವಣೆಯ 9ನೇ ಕ್ರಾಸ್, ಸಿದ್ದಗಂಗಾ ಮಹಿಳಾ ಹಾಸ್ಟೆಲ್, ಸೇರಿದಂತೆ 26ನೇ ವಾರ್ಡ್‍ನಲ್ಲಿ ಸಾರ್ವಜನಿಕರಿಗಾಗಿ ಕೋವಿಡ್ ಪರೀಕ್ಷೆ ಮಾಡಿ ಸ್ವ್ಯಾಬ್ ಸಂಗ್ರಹ ಹಾಗೂ 45 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನೇಷನ್ ಹಾಕುವ ಕಾರ್ಯಕ್ರಮಕ್ಕೆ ಮಹಾಪೌರರಾದ ಕೃಷ್ಣಪ್ಪ ಅವರು ಚಾಲನೆ ನೀಡಿದರು.        ಈ ವೇಳೆ ಮಾತನಾಡಿದ ಪಾಲಿಕೆ ಆಯುಕ್ತೆ ರೇಣುಕಾ, ನಗರದಲ್ಲಿ ಪಾಸಿಟಿವ್ ಕೇಸ್‍ಗಳು ಹೆಚ್ಚಾಗುತ್ತಿದೆ ಪಾಲಿಕೆ ವ್ಯಾಪ್ತಿಯ 7 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಟೆಸ್ಟ್ ಸಂಖ್ಯೆ ಕಡಿಮೆಯಾಗುತ್ತಿದೆ. ಅದ್ದರಿಂದ ವಾರ್ಡ್ ಹಂತದಲ್ಲಿ ಪಾಲಿಕೆ ಮತ್ತು ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಸಾರ್ವಜನಿಕರಿಗೆ ಮೊಬೈಲ್…

Read More

ತುಮಕೂರು:        ಕ್ವಿಟ್ ಇಂಡಿಯಾ ಚಳುವಳಿ ಯಲ್ಲಿ ತುಮಕೂರು ಜಿಲ್ಲೆಯ ಪಾತ್ರ ಮಹತ್ವ ದ್ದಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ತಿಳಿಸಿದರು.       ನಗರದ ಸ್ವಾತಂತ್ರ್ಯ ಚೌಕದಲ್ಲಿಂದು ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಹಾಗೂ ಮಹಾತ್ಮ ಗಾಂಧೀಜಿಯವರ ನೇತೃತ್ವದಲ್ಲಿ ನಡೆದ ಉಪ್ಪಿನ ಸತ್ಯಾಗ್ರಹ ನೆನಪಿನ ಅಂಗವಾಗಿ ಹಮ್ಮಿಕೊಂಡಿದ್ದ ಗಾಂಧೀಜಿಯವರಿಗೆ ‘ನುಡಿನಮನ’ ಕಾರ್ಯಕ್ರಮದಲ್ಲಿ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಉಪ್ಪಿನ ಸತ್ಯಾಗ್ರಹದಲ್ಲಿ ಮುಂದಾಳತ್ವ ವಹಿಸಿದ್ದ ಗಾಂಧೀಜಿ ಅವರಿಗೆ ನಮನ ಸಲ್ಲಿಸುವ ಮೂಲಕ ಸ್ವಾತಂತ್ರ್ಯದ 75ನೇ ವರ್ಷಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ ಎಂದು ಹೇಳಿದರು. ರಾಷ್ಟ್ರಾದ್ಯಂತ 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ಕಾರ್ಯ ಕ್ರಮದ ಭಾಗವಾಗಿ ಪ್ರತಿ ವಾರವೂ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿಯೂ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.       ಈ ವೇಳೆ ಮಹಾನಗರ ಪಾಲಿಕೆ ಮೇಯರ್ ಬಿ.ಜಿ. ಕೃಷ್ಣಪ್ಪ, ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಜಿಲ್ಲಾ ಪೊಲೀಸ್…

Read More

ಹುಳಿಯಾರು :        2020-2021 ನೇ ಸಾಲಿನ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿ ಅವಧಿಯನ್ನು ಏ.30 ರ ವರೆವಿಗೆ ವಿಸ್ತರಿಸಲಾಗಿದೆ ಎಂದು ಖರೀದಿ ಅಧಿಕಾರಿ ಶಿವಶಂಕರ್ ತಿಳಿಸಿದ್ದಾರೆ.       ಈ ಹಿಂದೆ ನೊಂದಣಿ ಅವಧಿಯಲ್ಲಿ 4501 ರೈತರು ನೊಂದಾಯಿಸಿದ್ದರು. ಮಾರ್ಚ್ 31 ರ ವರೆವಿಗೆ 4230 ರೈತರಿಂದ 98,029 ಕ್ವಿಂಟಲ್ ರಾಗಿ ಖರೀದಿಸಲಾಗಿತ್ತು. ನೊಂದಾಯಿಸಿದ್ದವರ ಪೈಕಿ ಇನ್ನೂ 271 ರೈತರಿಂದ ರಾಗಿ ಖರೀದಿ ಬಾಕಿ ಉಳಿದಿದೆ. ಇಂತಹ ರೈತರಿಗೆ ಖರೀದಿ ಅವಧಿ ವಿಸ್ತರಿಸಿರುವುದು ಸುವರ್ಣಾವಕಾಶವಾಗಿದೆ ಎಂದರು.       ಫೆ.23 ರ ವರೆವಿಗೆ ರೈತರಿಂದ ಖರೀದಿ ಮಾಡಿರುವ ರಾಗಿಯ ಬಾಬ್ತು ಹಣವನ್ನು ರೈತರ ಖಾತೆಗೆ ಈಗಾಗಲೇ ಜಮೆ ಮಾಡಲಾಗಿದೆ. ಇದರಲ್ಲಿ ಐವತಕ್ಕೂ ಹೆಚ್ಚು ಮಂದಿಯ ಬ್ಯಾಂಕ್‍ನಲ್ಲಿ ಆಧಾರ್ ಲಿಂಕ್ ಆಗದ ಹಾಗೂ ಹೆಸರು ಮಿಸ್ ಮ್ಯಾಚ್ ಆಗಿರುವ ಕಾರಣದಿಂದ ಹಣ ಪಾವತಿ ತಡೆಹಿಡಿಯಲಾಗಿದೆ. ಅಂತಹವರು ತಕ್ಷಣ ತಮ್ಮ ಸಮಸ್ಯೆಗಳನ್ನು ಸರಿಪಡಿಸಿಕೊಳ್ಳುವಂತೆ…

Read More

ತುಮಕೂರು :        ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಯಲ್ಲಿನ ಜಿಲ್ಲಾಧ್ಯಕ್ಷರ ಸ್ಥಾನಕ್ಕೆ ಡಾ. ಬಿ.ಸಿ.ಶೈಲಾನಾಗರಾಜ್‍ರವರು ತಮ್ಮ ಅಪಾರ ಸ್ನೇಹಿತರ ಬಳಗದೊಂದಿಗೆ ನಾಮಪತ್ರವನ್ನು ಚುನಾವಣಾಧಿಕಾರಿಗಳಿಗೆ ಸಲ್ಲಿಸಿ ಮಾದ್ಯಮದೊಂದಿಗೆ ಮಾತನಾಡಿದರು.       ತಾವು ನಾಡು, ನುಡಿ ಸೇವೆ ಮಾಡಲು ಈ ಚುನಾವಣೆಗೆ ಸ್ಪರ್ಧಿಸಿದ್ದು, ತಾವು ತುಮಕೂರು ಜಿಲ್ಲೆಯ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಅಗಮ್ಯ ಸೇವೆ ಸಲ್ಲಿಸಿರುವುದಾಗಿ ತಿಳಿಸಿದರಲ್ಲದೇ, ಇದುವರೆವಿಗೂ 4 ಕವನ ಸಂಕಲನಗಳು, 5 ಮಹಿಳಾ ಅಧ್ಯಯನ ಪುಸ್ತಕಗಳು, 6 ವಿಚಾರ ಕೃತಿಗಳು, 5 ವ್ಯಕ್ತಿ ಚಿತ್ರಗಳನ್ನು ಹೊರತಂದಿದ್ದು, ತಾವು ನಿರಂತರವಾಗಿ ಸಲ್ಲಿಸುತ್ತಿರುವ ಸೇವೆಗೆ ವಿವಿಧ 9 ಪ್ರಶಸ್ತಿಗಳು ತಮಗೆ ಲಭಿಸಿರುವುದಾಗಿ ತಿಳಿಸಿದರು. ಅಲ್ಲದೇ ತುಮಕೂರು ತಾಲ್ಲೂಕು & ಹೋಬಳಿ ಮಟ್ಟಡದ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ನಡೆಸಿ ಯಶಸ್ವಿಯಾಗಿದ್ದು, ವಿವಿಧ ಮತ್ತು ವಿಶಿಷ್ಠ ಕಾರ್ಯಕ್ರಮಗಳನ್ನು ಆಯೋಜಿಸಿರುವ ಅನುಭವವನ್ನು ಹೊಂದಿರುವುದಾಗಿ ತಿಳಿಸಿದರು.       ಹಲವಾರು ಕವಿಗೋಷ್ಠಿ, ಯುವ ಪ್ರತಿಭೆಗಳನ್ನು ಗುರತಿಸುವಲ್ಲಿ ಭಾಗಿಗಳಾಗಿರುವುದು ಅಲ್ಲದೇ ತಾವು ನಿರಂತರವಾಗಿ…

Read More

ಶಿರಾ:        ಮದುವೆಗೆ ಒಪ್ಪಲಿಲ್ಲವೆಂಬ ಕಾರಣಕ್ಕಾಗಿ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಶಿರಾ ತಾಲ್ಲೂಕಿನ ದೊಡ್ಡಗುಲಾ ಸಮೀಪದ ರತ್ನಸಂದ್ರ ಗೊಲ್ಲರಹಟ್ಟಿಯ ನಿವಾಸಿ 17 ವರ್ಷದ ಕಾವ್ಯ ಎಂಬಾಕೆಯನ್ನು ಅದೇ ಗ್ರಾಮದ ಯುವಕ ಈರಣ್ಣ ಬರ್ಬರವಾಗಿ ಹತ್ಯೆಗೈದಿದ್ದಾನೆ ಎನ್ನಲಾಗಿದೆ.        ಕಾವ್ಯಳನ್ನು ಪ್ರೀತಿಸುವಂತೆ ಪ್ರತಿನಿತ್ಯ ಬೆಂಬಿಡದೇ ಕಾಡುತ್ತಿದ್ದು ಆಕೆಯನ್ನು ಹಿಂಬಾಲಿಸುತ್ತಿದ್ದು ತನ್ನನ್ನೇ ಪ್ರೀತಿಸುವಂತೆ ಬಲವಂತ ಮಾಡುತ್ತಿದ್ದ ಈರಣ್ಣ ಯುವತಿ ಕಾಲೇಜಿಗೆ ಹೋಗುವ ಸಂದರ್ಭದಲ್ಲಿ ಹಿಂದೆ ಬಿದ್ದು ತನ್ನನ್ನೇ ಪ್ರೀತಿಸು, ನಾನು ನಿನ್ನನ್ನು ಬಿಟ್ಟು ಬೇರೆ ಯಾರನ್ನೂ ಪ್ರೀತಿಸಲಾರೆ, ನಿನ್ನನ್ನು ಮನಸಾರೆ ಇಷ್ಟ ಪಟ್ಟಿದ್ದೇನೆ, ಮದುವೆಯಾದರೆ ನಿನ್ನನ್ನು ಮಾತ್ರ ಎಂದು ಸಾಕಷ್ಟು ಬಾರಿ ಯುವತಿ ಎದುರು ಗೋಗರೆದಿದ್ದ ಎನ್ನಲಾಗಿದೆ.       ಆದರೆ ಯುವತಿ ಈರಣ್ಣ ನ ಪ್ರೀತಿಯನ್ನು ಒಪ್ಪಿಕೊಳ್ಳಲಾರದೆ ತಿರಸ್ಕರಿಸಲಾರದೇ ತನ್ನ ಸ್ನೇಹಿತರು ಮತ್ತು ಪೋಷಕರಿಗೆ ಈರಣ್ಣನ ಬೇಡಿಕೆಗಳ ವಿಚಾರ ಹೇಳಿಕೊಂಡಿದ್ದಳು ಎನ್ನಲಾಗುತ್ತಿದೆ. ಯುವತಿಯನ್ನು ಮನಸಾರೆ ಇಷ್ಟಪಟ್ಟು, ಅವಳೇ ತನ್ನ ಸರ್ವಸ್ವ ಎಂಬ ರೀತಿಯಲ್ಲಿ ಹೇಳಿಕೊಂಡು…

Read More

ಹುಳಿಯಾರು:        ಸ್ಪಷ್ಟ ಬಹುಮತ ಯಾವ ಪಕ್ಷಕ್ಕೂ ಸಿಗದೆ ಅತಂತ್ರವಾಗಿದ್ದ ಹುಳಿಯಾರು ಪಟ್ಟಣ ಪಂಚಾಯ್ತಿಯ ಗಾದಿ ಇಬ್ಬರೂ ಪಕ್ಷೇತರರು ಬಿಜೆಪಿಗೆ ಸೇರುವ ಮೂಲಕ ಬಿಜೆಪಿಗೆ ಮತ್ತೊಷ್ಟು ಸನ್ನಿಹಿತವಾಗಿದೆ.       ಪಟ್ಟಣ ಪಂಚಾಯ್ತಿ ಚುನಾವಣೆಯಲ್ಲಿ ಬಿಜೆಪಿ 6, ಕಾಂಗ್ರೆಸ್ 5, ಜೆಡಿಎಸ್ 3 ಹಾಗೂ ಪಕ್ಷೇತರರು ಇಬ್ಬರು ಗೆದ್ದಿದ್ದರು. ಪಂಚಾಯ್ತಿ ಗಾದಿ ಹಿಡಿಯಲು 9 ಸದಸ್ಯರ ಸಂಖ್ಯಾಬಲ ಅತ್ಯಗತ್ಯ. ಹಾಗಾಗಿ ಪಕ್ಷೇತರರನ್ನು ಸೆಳೆದು ಅಧಿಕಾರ ಹಿಡಿಯಲು ಮೂರು ಪಕ್ಷಗಳೂ ತೆರೆಮರೆಯ ಕಸರತ್ತು ನಡೆಸುತ್ತಿದ್ದವು.       ಆದರೆ ಇತ್ತೀಚೆಗಷ್ಟೆ ಪಕ್ಷೇತರ ಸದಸ್ಯೆ ಶೃತಿಸನತ್ ಅವರು ಜೆಸಿಎಂ ಸಮ್ಮುಖದಲ್ಲಿ ಬಿಜೆಪಿ ಸೇರಿ ಬಿಜೆಪಿ ಗದ್ದುಗೆ ಹಿಡಿಯುವ ದಾರಿ ತರೆದರು. ಈಗ ಮತ್ತೊಬ್ಬ ಪಕ್ಷೇತರ ಸದಸ್ಯ ಸೈಯದ್ ಜಹೀರ್ ಸಾಬ್ ಅವರು ಬಿಜೆಪಿ ಸೇರಿ ಅಧಿಕಾರಿ ಹಿಡಿಯುವ ದಾರಿ ಸುಗಮವಾಗಿಸಿದರು.        ಪಕ್ಷೇತರರ ಸೇರ್ಪಡೆಯಿಂದ ಬಿಜೆಪಿ 8 ಸಂಖ್ಯಾಬಲ ಹೆಚ್ಚಿಸಿಕೊಂಡಿದ್ದು ಎಂಎಲ್‍ಎ ಹಾಗೂ ಎಂಪಿ ಮತಗಳು…

Read More

ತುಮಕೂರು :        ರಾಷ್ಟ್ರದಾದ್ಯಂತ ಆತಂಕದ ಅಲೆ ಸೃಷ್ಟಿಸಿರುವ ಕೋವಿಡ್-19 ಎರಡನೇ ಅಲೆಯನ್ನು ಸಮರ್ಪಕವಾಗಿ ತಡೆಯುವ ನಿಟ್ಟಿನಲ್ಲಿ 45 ವರ್ಷ ಮೇಲ್ಮಟ್ಟ ಪ್ರತಿಯೊಬ್ಬರು ಕೋವ್ಯಾಕ್ಸಿನ್ ಲಸಿಕೆ ಪಡೆದುಕೊಳ್ಳುವಂತೆ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶ್ರೀಮತಿ ಶಾರದ ನರಸಿಂಹಮೂರ್ತಿ ಮನವಿ ಮಾಡಿದ್ದಾರೆ.     45 ವರ್ಷ ತುಂಬಿದ ಎಲ್ಲರೂ ಲಸಿಕೆಯನ್ನು ಸ್ವಯಂ ಪ್ರೇರಿತವಾಗಿ ಪಡೆದುಕೊಂಡು ಕೋವಿಡ್ ಮಹಾಮಾರಿಯನ್ನು ದೇಶದಿಂದ ತೊಲಗಿಸಿ, ದೇಶವನ್ನು ಅಭಿವೃದ್ದಿ ಪಥದತ್ತ ತೆಗೆದುಕೊಂಡು ಹೋಗಲು ಸಹಕರಿಸುವಂತೆ ಮನವಿ ಮಾಡಿದರು.       ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗೇಂದ್ರಪ್ಪ ಮಾತನಾಡಿ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಶ್ರೀಮತಿ ಶಾರದ ನರಸಿಂಹಮೂರ್ತಿ ಹಾಗೂ ಗೂಳೂರು ಜಿ.ಪಂ ಕ್ಷೇತ್ರದ ಸದಸ್ಯ ಶಿವಕುಮಾರ್ ಲಸಿಕೆ ಪಡೆಯುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಸರಕಾರದ ತೀರ್ಮಾನದಂತೆ ಶೇ.25ರಷ್ಟು ಜನರಿಗೆ ಲಸಿಕೆ ನೀಡಬೇಕೆಂಬ ಅಭಿಯಾನಕ್ಕೆ ಪುಷ್ಠಿ ದೊರೆತಂತಾಗಿದೆ. ಇದೇ ಮಾದರಿಯಲ್ಲಿ 45 ವರ್ಷ ತುಂಬಿದ ಪ್ರತಿಯೊಬ್ಬ ನಾಗರಿಕರು ಸ್ವಯಂ ಪ್ರೇರಣೆಯಿಂದ ಲಸಿಕೆ ತೆಗೆದುಕೊಳ್ಳುವ ಮೂಲಕ ಸರಕಾರದ…

Read More

ತುಮಕೂರು :        ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಅನರ್ಹರು ಹೊಂದಿರುವ ಅಂತ್ಯೋದಯ, ಆದ್ಯತಾ ಪಡಿತರ ಚೀಟಿ (ಬಿಪಿಎಲ್) ಗಳನ್ನು ಹಿಂದಿರುಗಿಸಬೇಕೆಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಮನವಿ ಮಾಡಿದ್ದಾರೆ.        ವೇತನವನ್ನು ಗಣನೆಗೆ ತೆಗೆದುಕೊಳ್ಳದೇ ಎಲ್ಲಾ ಖಾಯಂ ನೌಕರರು ಅಂದರೆ ಸರ್ಕಾರದ ಅಥವಾ ಸರ್ಕಾರದಿಂದ ಅನುದಾನ ಪಡೆಯುತ್ತಿರುವ ಸಂಸ್ಥೆಗಳು, ಸರ್ಕಾರಿ ಪ್ರಾಯೋಜಿತ, ಸರ್ಕಾರಿ ಸ್ವಾಮ್ಯದ ಸಂಸ್ಥೆ, ಮಂಡಳಿ, ನಿಗಮ, ಸ್ವಾಯತ್ತ ಸಂಸ್ಥೆಗಳು ಒಳಗೊಂಡಂತೆ ಆದಾಯ ತೆರಿಗೆ, ಸೇವಾ ತೆರಿಗೆ, ವ್ಯಾಟ್, ವೃತ್ತಿ ತೆರಿಗೆಯನ್ನು ಪಾವತಿಸುವ ಕುಟುಂಬಗಳು, ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್‍ಗಿಂತ ಹೆಚ್ಚಿನ ಒಣ ಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶ ಹೊರತುಪಡಿಸಿ ನಗರ ಪ್ರದೇಶದಲ್ಲಿ 1000 ಚದರ ಅಡಿಗಿಂತ ಹೆಚ್ಚು ವಿಸ್ತೀರ್ಣದ ಸ್ವಂತ ಮನೆ ಹೊಂದಿರುವ ಕುಟುಂಬಗಳು, ಜೀವನೋಪಾಯಕ್ಕಾಗಿ ಸ್ವಂತ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ, ಹೊಂದಿರುವ ಕುಟುಂಬವನ್ನು…

Read More

 ತುಮಕೂರು  :        ತುಮಕೂರು ಜಿಲ್ಲಾ ಪಂಚಾಯತಿಯ ನೂತನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ವಿದ್ಯಾಕುಮಾರಿ ಕೆ. ಅವರು ಗುರುವಾರ ಅಧಿಕಾರ ವಹಿಸಿಕೊಂಡರು.       ನಿಕಟಪೂರ್ವ ಸಿಇಓ ಜಿ.ಎಂ.ಗಂಗಾಧರಸ್ವಾಮಿ ಅವರಿಂದ ನೂತನ ಸಿಇಓ ವಿದ್ಯಾಕುಮಾರಿ.ಕೆ ಅವರು ಅಧಿಕಾರ ಸ್ವೀಕರಿಸಿದರು.

Read More

ತುಮಕೂರು :         ಬಡ ಮಕ್ಕಳಿಗೆ ಅನ್ನ, ಆಶ್ರಯ ನೀಡಿ ಬದುಕಿಗೆ ಬೆಳಕಾಗಿದ್ದ ತ್ರಿವಿಧ ದಾಸೋಹಿ, ನಡೆದಾಡುವ ದೇವರೆಂದೇ ನಾಡಿನ ಉದ್ದಗಲಕ್ಕೂ ಹೆಸರುವಾಸಿಯಾಗಿದ್ದ ಸಿದ್ದಗಂಗಾ ಮಠದ ಶಿವೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ 114ನೇ ಜನ್ಮ ಜಯಂತಿಯನ್ನು ಯಾವುದೇ ಅದ್ದೂರಿ, ಆಡಂಬರ ಇಲ್ಲದೆ ಅತ್ಯಂತ ಸರಳವಾಗಿ ಎಂದಿನಂತೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಆಚರಿಸಲಾಯಿತು.       ಮಹಾಮಾರಿ ಕೊರೊನಾ 2ನೇ ಅಲೆ ಹರಡದಂತೆ ಸರ್ಕಾರ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಸಭೆ, ಸಮಾರಂಭಗಳನ್ನು ನಿಷೇಧಿಸಿರುವ ಹಿನ್ನೆಲೆಯಲ್ಲಿ ಶ್ರೀಮಠದಲ್ಲಿ ಲಿಂಗೈಕ್ಯ ಶ್ರೀಗಳ 114ನೇ ಜನ್ಮ ಜಯಂತಿ ಅದ್ದೂರಿ ಆಚರಣೆ ಇಲ್ಲದೆ ಎಂದಿನಂತೆ ಶ್ರೀಗಳ ಗದ್ದುಗೆಗೆ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ನೇತೃತ್ವದಲ್ಲಿ ಹರಗುರುಚರಮೂರ್ತಿಗಳ ಸಮ್ಮುಖದಲ್ಲಿ ರುದ್ರಾಭಿಷೇಕ ಹಾಗೂ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಮುಂಜಾನೆಯೇ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರು ಇಷ್ಟಲಿಂಗ ಪೂಜೆ ನೆರವೇರಿಸಿ ಶ್ರೀಗಳ ಗದ್ದುಗೆಗೆ ಪೂಜೆ ನೆರವೇರಿಸಿ ಆಶೀರ್ವಾದ ಪಡೆದರು.       ಶ್ರೀಮಠದ ರುದ್ರಾಕ್ಷಿ ಮಂಟಪದಲ್ಲಿದ್ದ…

Read More