ಹುಳಿಯಾರು: ಹುಳಿಯಾರು ಪಂಚಾಯ್ತಿ ಚುನಾವಣೆಯ ಇತಿಹಾಸದಲ್ಲಿ ಇಂತಹ ಭ್ರಷ್ಟ ಚುನಾವಣೆ ಹಿಂದೆಂದೂ ನಡೆದಿರಲಿಲ್ಲ. ಮತದಾರರೇ ಭಷ್ಟ್ರರಾಗಿದ್ದಾರೋ ಅಥ ವಾ ಅಭ್ಯರ್ಥಿಗಳೇ ಬಲವಂತದಿಂದ ತಲುಪಿಸುತ್ತಿದ್ದಾರೋ ತಿಳಿಯದಾಗಿದೆ. ಒಟ್ಟಿನಲ್ಲಿ ಇಲ್ಲಿನ ಮನೆಮನೆಗಳಿಗೆ ಗೃಹ ಉಪಯೋಗಿ ವಸ್ತುಗಳು ಬಂದು ಸೇರಿವೆ. ಬಹಳ ವರ್ಷಗಳ ಹಿಂದೇನಲ್ಲ ಹತ್ತನ್ನೆರಡು ವರ್ಷಗಳ ಹಿಂದೆಷ್ಟೆ ಮತದಾನಕ್ಕೆ ಬಂದಾಗ ಟೀ, ತಿಂಡಿ ಕೊಡಿಸಲಾಗುತ್ತಿತ್ತು. ನಂತರದ ದಿನಗಳಲ್ಲಿ ಮನೆಮನೆಗೆ ಕೋಳಿ, ಮದ್ಯ ಸರಬರಾಜು ಮಾಡುತ್ತಿದ್ದರು. ಆದರ ಈಗ ಸ್ಪರ್ಧಿಸಿರುವ ಅಭ್ಯರ್ಥಿಗಳೆಲ್ಲರೂ ತಮ್ಮ ಶಕ್ತಾನುಸಾರ ತಮ್ಮ ವಾರ್ಡ್‍ಗಳ ಮನೆಮನೆಗೆ ಚುನಾವಣಾ ಗಿಫ್ಟ್ ನೀಡುತ್ತಿದ್ದಾರೆ. ಸೀರೆ, ಕುಕ್ಕರ್, ಡ್ರಸ್ ಮೆಟಿರಿಯಲ್, ಬೆಳ್ಳಿ ಬಟ್ಟಲು, ಮಿಕ್ಸಿ, ಫ್ಯಾನ್, ಎಲ್‍ಇಡಿ ಚಾರ್ಜ್ ಲೈಟ್ ಹೀಗೆ ಒಂದೊಂದು ವಾರ್ಡ್‍ಗಳಲ್ಲಿ ಒಂದೊಂದು ಬಗೆಯ ಗೃಹ ಉಪಯೋಗಿ ವಸ್ತುಗಳನ್ನು ನೀಡುತ್ತಿದ್ದಾರೆ. ಅದರಲ್ಲೂ ಕೆಲ ವಾರ್ಡ್‍ಗಳಲ್ಲಿ ಯುಗಾದಿ ಕಿಟ್ ಎಂದು ಅಕ್ಕಿ, ಬೇಳೆ, ಬೆಲ್ಲ, ಮೈದಾ, ಸಕ್ಕರೆ ಸೇರಿದಂತೆ ದಿನಸಿ ಪದಾರ್ಥಗಳನ್ನೂ ಹಂಚುತ್ತಿದ್ದಾರೆ. …
Author: News Desk Benkiyabale
ಚಿಕ್ಕನಾಯಕನಹಳ್ಳಿ: ಸಮೀಪದ ಹೊನ್ನೇಬಾಗಿಯ ಗೊಲ್ಲರಹಳ್ಳಿಬಳಿ ತೋಟವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ತೆಂಗು, ಅಡಿಕೆಮರಗಳು ಹಾಗೂ ಒಂದು ಟ್ರಾಕ್ಟರ್ ಸುಟ್ಟುಹೋಗಿದೆ. ಗೊಲ್ಲರಹಳ್ಳಿ ಸ.ನಂ. 25,26ರಲ್ಲಿ ಗುರುಮೂರ್ತಿ ಹಾಗೂ ಉಮೇಶ್ ಎಂಬುವರಿಗೆ ಸೇರಿದ ತೋಟದ ಬೇಲಿಯಲ್ಲಿ ಶನಿವಾರ ಸಂಜೆ ಬೆಂಕಿ ಕಾಣಿಸಿಕೊಂಡು ನಂತರ ಇಡೀ ತೋಟಕ್ಕೆ ವ್ಯಾಪಿಸಿದೆ, ಜೊತೆಗೆ ತೋಟದಲ್ಲಿ ನಿಲ್ಲಿಸಿದ್ದ ಟ್ಯಾಂಕರ್ ಸಹಿತ ಟ್ರ್ಯಾಕ್ಟರ್‍ಗೂ ಸಹ ಬೆಂಕಿಯ ಕೆನ್ನಾಲಿಗೆ ತಾಗಿದ ಪರಿಣಾಮ ಭಾಗಶಃ ಟ್ರ್ಯಾಕ್ಟರ್ ಸುಟ್ಟುಹೋಗಿದೆ. ಬೆಂಕಿ ಬಿದ್ದ ವಿಷಯ ತಿಳಿದ ಸುತ್ತಮುತ್ತಲಿನ ಜನರು ಬೆಂಕಿ ನಂದಿಸಲು ಪ್ರಯತ್ನಿಸಿದರು. ಕತ್ತಲೆಯಿದ್ದ ಕಾರಣ ಬೆಂಕಿ ನಂದಿಸಲು ಸ್ಥಳೀಯರು ಹೆಣಗಾಡಬೇಕಾಯಿತು. ಕೇವಲ 3 ಕಿ.ಮೀ. ಸಮೀಪದಲ್ಲಿರುವ ಅಗ್ನಿ ಶಾಮಕ ಠಾಣೆಯಿಂದ ವಾಹನ ಇಲ್ಲಿಗೆ ಬರುವಷ್ಟರಲ್ಲಿ ಸ್ಥಳೀಯರೇ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದರು. ಈ ಘಟನೆಯಲ್ಲಿ ಸುಮಾರು 50 ತೆಂಗಿನ ಮರ ಹಾಗೂ ಅಡಿಕೆಮರಗಳು ಸುಟ್ಟು ಹೋಗಿವೆ. ಸ್ಥಳಕ್ಕೆ ಚಿಕ್ಕನಾಯಕನಹಳ್ಳಿ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು. …
ಮಧುಗಿರಿ : ಸರ್ಕಾರದ ಆದೇಶದಂತೆ ಮತ್ತು ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ತಾಲೂಕು ವ್ಯಾಪ್ತಿಯಲ್ಲಿ ನಡೆಯುವ ಜಾತ್ರೆಗಳನ್ನು ರದ್ದು ಮಾಡಲಾಗಿದೆ ಎಂದು ಉಪವಿಭಾಗಾಧಿಕಾರಿ ಸೋಮಪ್ಪ ಕಡಕೋಳ ತಿಳಿಸಿದ್ದಾರೆ. ಶುಕ್ರವಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುವ ಅವರು ಕೋವಿಡ್ -19 ಹರಡದಂತೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಎಲ್ಲಾ ಜಾತ್ರೆ, ಸಭೆ, ಸಮಾರಂಭ ರದ್ದು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ನಡೆಯುವ ಯುಗಾದಿ, ಹೋಳಿ, ಗುಡ್ ಫ್ರೈಡೆ ಇನ್ನಿತರ ಹಬ್ಬಗಳಲ್ಲಿ ಸಾರ್ವ ಜನಿಕರು ಸೇರುವುದನ್ನು, ರಾಜಕೀಯ ಕಾರ್ಯಕ್ರಮಗಳನ್ನು, ಗುಂಪು ಸೇರುವುದನ್ನು ಕಡ್ಡಾಯವಾಗಿ ನಿಷೇದಿಸಿದೆ. ಸಾಮಾಜಿಕ ಅಂತರ ಮಾಸ್ಕ್ ಧರಿಸುವುದು ಕಡ್ಡಾಯವಾಗಿದ್ದು, ತಪ್ಪಿದಲ್ಲಿ ಸರ್ಕಾರದ ಆದೇಶದಂತೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ. ಮಧುಗಿರಿ ಪಟ್ಟಣದಲ್ಲಿ ನಡೆಯುತ್ತಿರುವ ಜಾತ್ರೆಯನ್ನು ರದ್ದು ಮಾಡಿದ್ದು, ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸಿ ದೇವರ ದರ್ಶನ ಪಡೆಯಬಹುದು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಗುಬ್ಬಿ: ಆಸ್ತಿ ವಿಚಾರದಲ್ಲಿ ಉಂಟಾದ ಘರ್ಷಣೆ ಮಗನಿಂದಲೇ ತಂದೆ ಹತ್ಯೆಯಾಗುವ ಮೂಲಕ ಅಂತ್ಯಗೊಂಡ ದುರ್ಘಟನೆ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಹಿಂಬದಿಯ ಬಡಾವಣೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ತಾಲ್ಲೂಕಿನ ಕಸಬ ಹೋಬಳಿ ಗೋಳೇನಹಳ್ಳಿ ಗ್ರಾಮದ ಮೂಲದ ನರಸೇಗೌಡ(54) ಹತ್ಯೆಯಾದ ವ್ಯಕ್ತಿ. ಎಲ್‍ಐಸಿ ಏಜಂಟ್ ಆಗಿದ್ದ ಮೃತ ನರಸೇಗೌಡ ಕಳೆದ ಮೂರ್ನಾಲ್ಕು ವರ್ಷದಿಂದ ಕುಟುಂಬದಿಂದ ಬೇರ್ಪಟ್ಟು ಬಾಡಿಗೆ ರೂಮ್‍ನಲ್ಲಿ ವಾಸವಾಗಿದ್ದರು. ಪತ್ನಿ ಮತ್ತು ಮಕ್ಕಳು ತುಮಕೂರು ನಗರದಲ್ಲಿ ವಾಸವಿದ್ದರು. ಕೌಟುಂಬಿಕ ಕಲಹದಿಂದ ದೂರವಿದ್ದ ಮೃತರೊಟ್ಟಿಗೆ ಆಸ್ತಿ ವಿವಾದ ಮಕ್ಕಳ ಮನಸ್ತಾಪಕ್ಕೆ ಕಾರಣವಾಗಿತ್ತು. ಕೆಲ ತಿಂಗಳಿಂದ ಆಸ್ತಿ ವಿಚಾರದಲ್ಲಿ ಉಂಟಾದ ಗಲಾಟೆ ತಾರಕಕ್ಕೇರಿ ಮಗ ಮುನಿಸ್ವಾಮಿ(23) ತನ್ನ ತಂದೆ ನರಸೇಗೌಡ ಅವರ ರೂಂಗೆ ಬಂದು ಮಚ್ಚಿನಿಂದ ಮನಬಂದಂತೆ ಹಲ್ಲೆ ನಡೆಸಿ ಬರ್ಬರ ಹತ್ಯೆವೆಸಗಿದ್ದಾನೆ. ನಂತರ ಪೊಲೀಸರಿಗೆ ಪೋನ್ ಕರೆ ಮಾಡಿ ತಾನು ಕೊಲೆ ಮಾಡಿರುವ ವಿಚಾರ ತಿಳಿಸಿದ್ದಾನೆ ಎನ್ನಲಾಗಿದೆ. ಕೂಡಲೇ ಕಾರ್ಯಪ್ರವೃತ್ತರಾದ ಸಿಪಿಐ ರಾಮಕೃಷ್ಣಯ್ಯ ಅವರ ತಂಡ ಪಟ್ಟಣದ ಹೊರವಲಯದಲ್ಲಿ…
ತುಮಕೂರು : ನಗರದ ಕೋತಿತೋಪು-ಬೆಳಗುಂಬ ರಸ್ತೆಯಲ್ಲಿ ಬೆಳ್ಳಂಬೆಳ್ಳಿಗೆ ಜೆಸಿಬಿ ಯಂತ್ರಗಳು ಸದ್ದು ಮಾಡಿದ್ದು, ಅನಧಿಕೃತವಾಗಿ ರಸ್ತೆ ಒತ್ತುವರಿಯಾಗಿದ್ದ ಸರ್ಕಾರಿ ಜಾಗವನ್ನು ಪಾಲಿಕೆ ವತಿಯಿಂದ ಪೆÇಲೀಸ್ ಬಂದೋಬಸ್ತ್‍ನೊಂದಿಗೆ ತೆರವುಗೊಳಿಸುವ ಕಾರ್ಯಾಚರಣೆ ನಡೆಸಲಾಯಿತು. ಕೋತಿತೋಪು ರಸ್ತೆಯ ಇಕ್ಕೆಲಗಳಲ್ಲಿ ಅನಧಿಕೃತವಾಗಿ ತಲೆಯೆತ್ತಿದ್ದ ಪೆಟ್ಟಿಗೆ ಅಂಗಡಿಗಳು, ಕಾಪೌಂಡ್‍ಗಳನ್ನು ಮಹಾನಗರ ಪಾಲಿಕೆ ಅಧಿಕಾರಿಗಳು ಜೆಸಿಬಿ ಯಂತ್ರದ ಮೂಲಕ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ನಗರದಲ್ಲಿ ಸ್ಮಾರ್ಟ್‍ಸಿಟಿ ಸೇರಿದಂತೆ ವಿವಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ನಗರದ ವಿವಿಧ ವಾರ್ಡ್‍ಗಳು, ಬಡಾವಣೆಗಳಲ್ಲಿ ರಸ್ತೆ ಅಗಲೀಕರಣ ಮಾಡುವ ಉದ್ದೇಶದಿಂದ ಒತ್ತುವರಿ ತೆರವು ಕಾರ್ಯಾಚರಣೆಗೆ ಮಹಾನಗರ ಪಾಲಿಕೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಕೋತಿತೋಪು-ಬೆಳಗುಂಬ ರಸ್ತೆಯಲ್ಲಿ ಪಾಲಿಕೆ ಅಧಿಕಾರಿಗಳು ರಸ್ತೆಯ ಎರಡೂ ಬದಿಯಲ್ಲಿ ಒತ್ತುವರಿಯಾಗಿರುವ ಜಾಗವನ್ನು ಜೆಸಿಬಿ ಯಂತ್ರಗಳ ಮೂಲಕ ತೆರವು ಕಾರ್ಯಾಚರಣೆ ನಡೆಸಿದರು. ಪಾಲಿಕೆ ಆಯುಕ್ತೆ ರೇಣುಕಾ ಮಾತನಾಡಿ, ಈ ರಸ್ತೆ ರಾಷ್ಟ್ರೀಯ ಹೆದ್ದಾರಿ-4ಕ್ಕೆ ಸಂಪರ್ಕ ಹೊಂದಿರುವುದರಿಂದ ಸ್ಮಾರ್ಟ್‍ಸಿಟಿ ವತಿಯಿಂದ…
ತುಮಕೂರು : ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿನ ಎಲ್ಲಾ ಯೋಜನೆಗಳನ್ನು ಸಮರ್ಪಕವಾಗಿ ಕಾರ್ಯಗತಗೊಳಿಸಿ ಶೇ.100ರಷ್ಟು ಗುರಿ ಸಾಧಿಸಬೇಕು. ಇಲ್ಲದಿದ್ದರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಂಸದ ಜಿ.ಎಸ್. ಬಸವರಾಜು ಎಚ್ಚರಿಕೆ ನೀಡಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿಂದು ನಡೆದ ದಿಶಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಕೃಷಿ, ತೋಟಗಾರಿಕೆ, ರೇμÉ್ಮ, ಅರಣ್ಯ ಇಲಾಖೆ ಸೇರಿದಂತೆ ಇತರೆ ಇಲಾಖೆಗಳು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಕೂಲಿಕಾರರು ಲಭ್ಯವಿಲ್ಲ ಎಂಬ ಕಾರಣವೊಡ್ಡಿ ಕಾರ್ಯಪ್ರಗತಿಯಲ್ಲಿ ವಿಫಲತೆ ತೋರಬಾರದರು. ವೈಯಕ್ತಿಕ ಕಾಮಗಾರಿಗೆ ಒತ್ತು ಕೊಟ್ಟು ಪ್ರಗತಿ ಸಾಧಿಸಬೇಕು. ಕುಣಿಗಲ್ ತಾಲೂಕಿನಲ್ಲಿ ಕಡಿಮೆ ಸಾಧನೆಯಾಗಿದ್ದು, ಈ ತಾಲೂಕಿನಲ್ಲಿ ನರೇಗಾ ಯೋಜನೆಗೆ ಹೆಚ್ಚು ಆದ್ಯತೆ ನೀಡಬೇಕು ಎಂದು ಸೂಚಿಸಿದರು. ಸಾಮಾಜಿಕ ಅರಣ್ಯ ಇಲಾಖೆಯ ಸಾಧನೆ ಸಮಾಧಾನಕರವಾಗಿಲ್ಲ. ನರ್ಸರಿಯಲ್ಲಿ ಹುಣಸೆ, ಮಾವು, ಜಂಬುನೇರಳೆ ಗಿಡಗಳನ್ನು ಹೆಚ್ಚು ಬೆಳೆಸಿ ರೈತರಿಗೆ ವಿತರಣೆ ಮಾಡಬೇಕು. ವಿತರಣೆಯಾದ ಸಸಿಗಳು ಬೆಳೆದು…
ತುಮಕೂರು : ನಗರದ ಯಲ್ಲಾಪುರದಲ್ಲಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು ಬಂಧಿತ ವ್ಯಕ್ತಿಯಿಂದ ಒಂದು ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಕೊರಟಗೆರೆ ತಾಲ್ಲೂಕು, ಭೋವಿ ಕಾಲೋನಿ ಗ್ರಾಮದ ಚಿನ್ನ ರಾಮಾಂಜಿ 34. ಎಂಬಾತ ತುಮಕೂರು ನಗರದ ಯಲ್ಲಾಪುರದಲ್ಲಿ ಗಾಂಜಾ ಸಾಗಿಸುತ್ತಿದ್ದ ಸಂದರ್ಭದಲ್ಲಿ ಪೊಲೀಸರು ಒಂದು ಕೆಜಿ ಗಾಂಜಾ ವಶಪಡಿಸಿಕೊಂಡು, ವ್ಯಕ್ತಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ವಿಚಾರಣೆಯ ಬಳಿಕ ಮತ್ತೊಬ್ಬ ಹೆಂಗಸು ಗಾಂಜಾ ಮಾರಾಟ ಮಾಡುತ್ತಿರುವ ವಿಷಯ ತಿಳಿದು ಬಂದಿದೆ. ಚಿಕ್ಕಬಳ್ಳಾಪುರ ಜಿಲ್ಲೆ, ಬಾಗೇಪಲ್ಲಿ ತಾಲ್ಲೂಕು ಮುದ್ದಿನಪಲ್ಲಿ ಗ್ರಾಮದಲ್ಲಿ ದೇವಮ್ಮ 34. ಗಾಂಜಾವನ್ನು ಆಂಧ್ರ ಪ್ರದೇಶದ ವಿಶಾಖ ಪಟ್ಟಣದ ಬಳಿ ನ್ಯೂನಿ ಎಂಬಲ್ಲಿಂದ ತಂದು ರಾಮಾಂಜಿ ಮೂಲಕ ಮಾರಾಟ ಮಾಡಿಸುತ್ತಿದ್ದಳು. ದೇವಮ್ಮನನ್ನು ಮಾ.25 ರಂದು ಬಂಧಿಸಿರುವ ಪೊಲೀಸರು ಆಕೆಯಿಂದ 11 ಕೆಜಿ ಗಾಂಜಾವನ್ನು ವಶಪಡಿಸಿಕೊಂಡು ಬಂಧಿಸಿದ್ದಾರೆ. ಚಿನ್ನ ರಾಮಾಂಜಿ ಮೇಲೆ 2020 ರಲ್ಲಿ ಕೋರ ಪೊಲೀಸ್ ಠಾಣೆಯಲ್ಲಿ ಗಾಂಜಾ…
ತುಮಕೂರು : ಜ್ವರ, ಕೆಮ್ಮು, ನೆಗಡಿಯಂತಹ ರೋಗ ಲಕ್ಷಣಗಳಿರುವವರು ಯಾವುದೇ ಸರ್ಕಾರಿ/ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ಬಂದಾಗ ಮತ್ತು ಸಮುದಾಯದಲ್ಲಿ ಇಂತಹ ರೋಗ ಲಕ್ಷಣಗಳಿರುವವರು ಕಂಡು ಬಂದಲ್ಲಿ ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೊಳಪಡಿಸಬೇಕೆಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಸೂಚನೆ ನೀಡಿದರು. ಜಿಲ್ಲೆಯ ಕೋವಿಡ್-19 ನಿಯಂತ್ರಣ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡೀಯೋ ಕಾನ್ಫರೆನ್ಸ್ ಹಾಲ್‍ನಲ್ಲಿಂದು ವಿವಿಧ ತಾಲೂಕಿನ ತಹಶೀಲ್ದಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿಗಳು, ಪೊಲೀಸ್ ಇಲಾಖೆ ಅಧಿಕಾರಿಗಳೊಂದಿಗೆ ವಿಡೀಯೋ ಕಾನ್ಫರೆನ್ಸ್ ನಡೆಸಿ ಮಾತನಾಡಿದ ಅವರು, ಜ್ವರ, ನೆಗಡಿಯಂತಹ ರೋಗ ಲಕ್ಷಣಗಳು ಕಂಡು ಬಂದವರಲ್ಲದೆ ಕೋವಿಡ್ ಸೋಂಕಿತರೆಂದು ಧೃಡಪಟ್ಟವರೊಂದಿಗೆ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದವರನ್ನೂ ಸಹ ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೊಳಪಡಿಸಬೇಕೆಂದರು. ಮುನ್ನಚ್ಚರಿಕಾ ಕ್ರಮವಾಗಿ ಈ ಹಿಂದೆ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ತೆರೆಯಲಾಗಿದ್ದ ಎಲ್ಲಾ ತಾಲೂಕಿನ ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದರಲ್ಲದೇ ಏಪ್ರಿಲ್ 1ರ ನಂತರ…
ತುಮಕೂರು : ಜಿಲ್ಲಾದ್ಯಂತ ಕೊರೋನಾ ವೈರಸ್ ಸೋಂಕು ಹರಡದಂತೆ ತಡೆಯುವ ಸಲುವಾಗಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಧಾರ್ಮಿಕ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಜಾತ್ರೆ, ಸಭೆ, ಸಮಾರಂಭ ಹಾಗೂ ಆಚರಣೆಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೈ.ಎಸ್.ಪಾಟೀಲ ಅವರು ಆದೇಶಿಸಿದ್ದಾರೆ. ಈ ಆದೇಶದನ್ವಯ ಮುಂಬರುವ ಧಾರ್ಮಿಕ ಹಬ್ಬಗಳಾದ ಯುಗಾದಿ, ಹೋಳಿಹಬ್ಬ, ಷಬ್-ಎ-ಬರಾತ್, ಗುಡ್ ಫ್ರೈಡೇ ಹಬ್ಬಗಳ ಸಂದರ್ಭಗಳಲ್ಲಿ ಜಿಲ್ಲಾ ವ್ಯಾಪ್ತಿಯ ಯಾವುದೇ ಸಾರ್ವಜನಿಕ ಸ್ಥಳಗಳಾದ ಮೈದಾನ, ಉದ್ಯಾನವನ, ಮಾರುಕಟ್ಟೆ ಹಾಗೂ ಧಾರ್ಮಿಕ ಪ್ರದೇಶಗಳಲ್ಲಿ ಸಾರ್ವಜನಿಕ ಸಮಾರಂಭ, ಸಭೆಗಳನ್ನು ನಿಷೇಧಿಸಲಾಗಿದೆ. ಸಾಮಾಜಿಕ, ರಾಜಕೀಯ, ಕ್ರೀಡಾ ಚಟುವಟಿಕೆ, ಮನರಂಜನೆ, ಶೈಕ್ಷಣಿಕ, ಸಾಂಸ್ಕøತಿಕ ಕಾರ್ಯಕ್ರಮಗಳ ಆಯೋಜನೆಯನ್ನು ಹಾಗೂ ಗುಂಪು ಸೇರುವುದನ್ನು ನಿರ್ಬಂಧಿಸಲಾಗಿದೆ. ಧಾರ್ಮಿಕ ಕಾರ್ಯಗಳನ್ನು ಸಾಂಕೇತಿಕವಾಗಿ ಆಚರಣೆ ಮಾಡಬೇಕು. ಗುಂಪು-ಗುಂಪಾಗಿ ಪ್ರತಿಭಟನೆ, ಮುಷ್ಕರ ನಡೆಸುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಸಾರ್ವಜನಿಕರು ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ…
ತುಮಕೂರು : ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿಯ ಕಾಡಶೆಟ್ಟಿಹಳ್ಳಿಯಲ್ಲಿ ಶನಿವಾರ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಗ್ರಾಮ ವಾಸ್ತವ್ಯ ಮಾಡಿದರು. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಆವರಣದಲ್ಲಿ ಗಿಡ ನೆಟ್ಟು, ನಂತರ ಗ್ರಾಮದಲ್ಲಿನ ಶ್ರೀ ಮಲ್ಲಿಕಾರ್ಜುನ ಸ್ವಾಮಿಗೆ ಪೂಜೆ ಸಲ್ಲಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಕಾರ್ಯಕ್ರಮದ ಅಂಗವಾಗಿ ವಿವಿಧ ಇಲಾಖೆಗಳಿಂದ ಆಯೋಜಿಸಲಾಗಿದ್ದ ಪ್ರಾತ್ಯಕ್ಷತೆಗಳನ್ನು ವೀಕ್ಷಿಸಿ ಮಾಹಿತಿ ಪಡೆದರು. ನಂತರ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ, ಕಾರ್ಯಕ್ರಮಕ್ಕೆ ಆಗಮಿಸಿ ಗ್ರಾಮದ ಜನರ ಸಮಸ್ಯೆ ಆಲಿಸಿದರು. ಅನಂತರ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಮಾತನಾಡಿ, ಸರ್ಕಾರದ ನಿರ್ದೇಶನದಂತೆ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದಡಿ ಎಲ್ಲಾ ತಾಲೂಕುಗಳಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಾಮಾನ್ಯ ಜನರ ಸಮಸ್ಯೆ ಆಲಿಸಿ, ಸಮಸ್ಯೆ ಬಗೆಹರಿಸುವುದು…











