ಹುಳಿಯಾರು: ಇಲ್ಲಿನ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ಮಕ್ಕಳು, ವೃದ್ದರು, ಜನರು ಭಯದಿಂದ ಸಂಚರಿಸುವಂತಾಗಿದೆ. ಸಂಬಂದಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಕ್ರಮ ತೆಗೆದುಕೊಳ್ಳುವಂತೆ ಸಾರ್ವಜನಿಕರು ಮನವಿ ಮಾಡಿದ್ದಾರೆ. ಹುಳಿಯಾರು ಪಟ್ಟಣದಲ್ಲಿ ಹೆಚ್ಚಿರುವ ಬೀದಿ ನಾಯಿಗಳ ಹಾವಳಿಯಿಂದ ಜನರನ್ನ ರಕ್ಷಿಸುವಂತೆ ಈಗಾಗಲೇ ಸ್ಥಳೀಯ ನಿವಾಸಿಗಳು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗೆ ಮನವಿ ಮಾಡಿದರು. ಯಾವುದೇ ಪ್ರಯೋಜನವಾಗಿಲ್ಲಾ. ಪಟ್ಟಣದ 12ನೇ ವಾರ್ಡ್ ಮಾರುತಿ ನಗರದಲ್ಲಿ 10 ವರ್ಷದ ಬಾಲಕಿ ಶರ್ಮಿತಾಗೆ ಬೀದಿ ನಾಯಿ ಕಡಿತಕ್ಕೆ ತುತ್ತಾಗಿದ್ದಾರೆ. ಹಾಗೂ ಬಾಬಣ್ಣ ಎಂಬುವರಿಗೆ ಸೇರಿದಂತೆ ಸಾಕಷ್ಟು ಜನರು ಒಂದೇ ತಿಂಗಳಲ್ಲಿ ನಾಯಿಗಳ ಕಡಿತಕ್ಕೆ ತುತ್ತಾಗಿದ್ದಾರೆ. ಸರಕಾರಿ ಆಸ್ಪತ್ರೆಯಲ್ಲಿ ಔಷಧಿ ಇಲ್ಲ: ಬೀದಿ ನಾಯಿಗಳ ಕಡಿತಕ್ಕೆ ಸಿಲುಕಿದವರು ಚಿಕಿತ್ಸೆಗೆಂದು ಇಲ್ಲಿನ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬಂದರೆ ನಾಯಿ ಕಡಿತಕ್ಕೆ ಕೊಡುವ ಔಷಧಿ ದೊರೆಯದೆ ತಾಲೂಕು ಆಸ್ಪತ್ರೆಗೆ ಹೋಗುವಂತ ಸ್ಥಿತಿ ನಿರ್ಮಾಣಗೊಂಡಿದೆ.…
Author: News Desk Benkiyabale
ಹುಳಿಯಾರು: ಕಳೆದ 10 ದಿನಗಳ ಹಿಂದಷ್ಟೆ ರಾಗಿ ಖರೀದಿಗಾಗಿ ನೂಕುನುಗ್ಗಲು ಏರ್ಪಟ್ಟು ಗೊಂದಲ ನಿರ್ಮಾಣವಾಗಿದ್ದ ಹುಳಿಯಾರು ರಾಗಿ ಖರೀದಿ ಕೇಂದ್ರದಲ್ಲಿ ಈಗ ರೈತರಿಗಾಗಿಯೇ ಖರೀದಿ ಸಿಬ್ಬಂದಿ ಕಾಯುತ್ತಿರುವ ಸನ್ನಿವೇಶ ನಿರ್ಮಾಣವಾಗಿದೆ. ಹೌದು ಹುಳಿಯಾರು ಎಪಿಎಂಸಿ ಆವರಣದಲ್ಲಿ 3290 ರೂ. ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಗಾಗಿ ಸರ್ಕಾರ ನಫೆಡ್ ಕೇಂದ್ರ ತೆರೆದಿತ್ತು. ಪ್ರಾರಂಭಿಕ ಅಂತವಾದ ನೊಂದಣಿ ಪ್ರಕ್ರಿಯೆಗೆ ರೈತರು ಮುಗಿಬಿದ್ದು ಹದಿನೈದಿಪ್ಪತ್ತು ದಿನಗಳಲ್ಲೇ 4500 ರೈತರು ನೊಂದಣಿ ಮಾಡಿಸಿದರು. ಖರೀದಿ ಪ್ರಕ್ರಿಯೆ ಆರಂಭವಾದ ದಿನದಲ್ಲಿ ರಾಗಿ ಮಾರಲು ರೈತರು ನಾಮುಂದು, ತಾಮುಂದು ಎಂದು ಸಾಗರದಂತೆ ಹರಿದು ಬಂದರು. ಲಾರಿ, ಟ್ರ್ಯಾಕ್ಟರ್, ಟಾಟಾ ಏಸ್, ಎತ್ತಿನಗಾಡಿಗಳಲ್ಲಿ ರಾಗಿ ಚೀಲಗಳನ್ನು ತುಂಬಿಕೊಂಡು ಎಪಿಎಂಸಿ ಮಂದಿ ಜಮಾಯಿಸಿದರು. ಖರೀದಿ ಅಧಿಕಾರಿಗಳು ಬೆಳಗ್ಗೆ 8 ರಿಂದ ಸಂಜೆ 7 ಸಮೀಪಿಸುವ ತನಕ ಖರೀದಿ ಮಾಡುತ್ತಿದ್ದರೂ ಸಹ ರೈತರ ಸರತಿ ಸಾಲು ಕರಗಲಿಲ್ಲ. ರಾತ್ರಿ, ಹಗಲು, ಬಿಸಿಲು,…
ತುಮಕೂರು : ಕೋವಿಡ್-19 ಹಿನ್ನಲೆಯಲ್ಲಿ ಪದವಿ ಪೂರ್ವ ಕಾಲೇಜುಗಳು ಆರಂಭಗೊಳ್ಳಲು ವಿಳಂಬವಾದ ಕಾರಣ ಶಿಕ್ಷಣ ಸಚಿವರ ಸೂಚನೆ ಮೇರೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಕನ್ನಡ ವಿಷಯದಲ್ಲಿ ಪಠ್ಯ ಕಡಿತಗೊಳಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲಾಗಿದ್ದು, ಉಪನ್ಯಾಸಕರು ವಿದ್ಯಾರ್ಥಿಗಳಿಗೆ ಕಡಿತಗೊಂಡ ಪಠ್ಯಕ್ರಮ ಹೊರತು ಪಡಿಸಿ ಪರೀಕ್ಷೆಗೆ ಸಿದ್ಧರಾಗುವಂತೆ ಮಾರ್ಗದರ್ಶನ ನೀಡಬೇಕೆಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಹೆಚ್.ಕೆ.ನರಸಿಂಹಮೂರ್ತಿ ತಿಳಿಸಿದರು. ನಗರದ ಎಂಪ್ರೆಸ್ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ, ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಕನ್ನಡ ಉಪನ್ಯಾಸಕರ ವೇದಿಕೆ ಸಂಯುಕ್ತಾಶ್ರಯದಲ್ಲಿ ಬುಧವಾರ ಆಯೋಜಿಸಲಾಗಿದ್ದ ಪದವಿ ಪೂರ್ವ ಶಿಕ್ಷಣದಲ್ಲಿ ಕನ್ನಡ ವಿಷಯದಲ್ಲಿ ಕಡಿತಗೊಂಡ ಪಠ್ಯಕ್ರಮದ ಬಗ್ಗೆ ವಿಶ್ಲೇಷಣಾ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಪ್ರಥಮ ಪಿಯುಸಿಯಲ್ಲಿ ನಾಲ್ಕು ಪದ್ಯಭಾಗ ಮತ್ತು ಎರಡು ಗದ್ಯಭಾಗಗಳ ವ್ಯಾಕರಣಾಂಶ ತೆಗೆಯಲಾಗಿದ್ದು, ಅದೇ ರೀತಿ ದ್ವಿತೀಯ ಪಿಯುಸಿಯಲ್ಲಿ ಮೂರು ಪದ್ಯಭಾಗ ಮತ್ತು ಎರಡು ಗದ್ಯ ಭಾಗ…
ತುಮಕೂರು : ಜಿಲ್ಲೆಯ ಕೊರಟಗೆರೆ ತಾಲೂಕಿನ ಜಂಪೇನಹಳ್ಳಿ ಕ್ರಾಸ್‍ನಲ್ಲಿ ಮಗುವಿನ ಶವವನ್ನು ಗುಂಡಿಯಿಂದ ಹೊರತೆಗೆಸಿ ಬೇರೆಡೆ ಶವ ಸಂಸ್ಕಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಸದಸ್ಯ ಹಾಗೂ ಕಾರ್ಯದರ್ಶಿ ವೆಂಕಟೇಶ್ ದೊಡ್ಡೇರಿ ಅವರು ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಸಾಂತ್ವಾನ ಹೇಳಿ ಪರಿಹಾರ ವಿತರಿಸಿದರು. ಮೊದಲು ಮಗುವಿನ ಶವ ಹೊರತೆಗೆದ ಜಾಗಕ್ಕೆ ಭೇಟಿ ನೀಡಿದ ಅವರು, ಬಳಿಕ ಬೇರೆ ಕಡೆ ಶವಸಂಸ್ಕಾರ ಮಾಡಿದ್ದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಸ್ಥಳದಲ್ಲೇ ಅಧಿಕಾರಿಗಳಿಗೆ ಈ ಸ್ಥಳದ ಸರ್ವೆ ವರದಿಯನ್ನು ತಕ್ಷಣವೇ ನೀಡಬೇಕು ಎಂದು ಅವರು ಸೂಚಿಸಿದರು. ಬಳಿಕ ಶವಸಂಸ್ಕಾರದ ಮಗುವಿನ ಶವ ಹೊರತೆಗೆಸಿ ಬೇರೆಡೆ ಶವಸಂಸ್ಕಾರ ನಡೆಸಿದ ಘಟನೆಗೆ ವಿಷಾದ ವ್ಯಕ್ತಪಡಿಸಿ ನೊಂದ ಕುಟುಂಬಕ್ಕೆ ಸಾಂತ್ವಾನ ಹೇಳಿ, ಕುಟುಂಬಕ್ಕೆ ಮನೆ ಇಲ್ಲದಿರುವುದನ್ನು ಕಂಡು ಮನೆ ಮಂಜೂರಾತಿ ಪತ್ರ ಕೊಡಿಸಿದರು. ಬಳಿಕ ಎತ್ತಿನಹೊಳೆ…
ಹುಳಿಯಾರು : ವಿದ್ಯುತ್ ಶಾರ್ಟ್‍ನಿಂದಾಗಿ ರಾಗಿಹುಲ್ಲಿನ 2 ಬಣವೆಗಳು ಸುಟ್ಟು ಭಸ್ಮವಾದ ಘಟನೆ ಹುಳಿಯಾರು ಹೋಬಳಿ ಕೆಂಕೆರೆ ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ ಜರುಗಿದೆ. ಕೆಂಕೆರೆಗೆ ಗ್ರಾಮದ ಸಿದ್ಧಭೈರಪ್ಪ ಅವರಿಗೆ ಸೇರಿದ 4 ಟ್ರ್ಯಾಕ್ಟರ್ ಲೋಡ್ ರಾಗಿ ಹುಲ್ಲಿನ ಬಣವೆ ಹಾಗೂ ಕರಿಯಪ್ಪ ಅವರಿಗೆ ಸೇರಿದ 3 ಟ್ರ್ಯಾಕ್ಟರ್ ಲೋಡ್ ರಾಗಿ ಹುಲ್ಲಿನ ಬಣವೆಗಳು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿವೆ. ಇವರಿಬ್ಬರೂ ಹೈನುಗಾರಿಕೆ ಮಾಡುತ್ತಿದ್ದು ರಾಸುಗಳಿಗಾಗಿ ತಮ್ಮ ಹುಲ್ಲಿನ ಜೊತೆಗೆ ಬೇರೆಯವರಿಂದ ಕೊಂಡು ದಾಸ್ತಾನು ಮಾಡಿದ್ದರು ಎನ್ನಲಾಗಿದೆ. ಬಣವೆಯ ಮೇಲಿದ್ದ 11 ಕೆವಿ ವಿದ್ಯುತ್ ಲೈನ್ ಶಾರ್ಟ್ ಆಗಿ ಬೆಂಕಿಯ ಕಿಡಿ ಬಣವೆಯ ಮೇಲೆ ಬಿದ್ದು ಈ ಅಗ್ನಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಚಿಕ್ಕನಾಯಕನಹಳ್ಳಿ ಅಗ್ನಿಶಾಮಕ ದಳದವರು ಬಂದು ಬೆಂಕಿ ನಂದಿಸಿದರಾದರೂ ಅಷ್ಟರಲ್ಲಾಗಲೇ ಬಣವೆಗಳ ಅಷ್ಟೂ ಹುಲ್ಲು ಸುಟ್ಟು ಭಸ್ಮವಾಗಿತ್ತು.
ತುಮಕೂರು: ನಗರದ ಸಿದ್ದಗಂಗಾ ಮಠದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿಂದು ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರು ಕೋವಿಡ್-19 ಲಸಿಕೆ ಪಡೆದರು. ಕೋವಿಡ್ ಲಸಿಕೆ ಪಡೆದ ನಂತರ ಮಾತನಾಡಿದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಕಳೆದ ಒಂದು ವರ್ಷದ ಹಿಂದೆ ಕೋವಿಡ್ ಮಹಾಮಾರಿ ಇಡೀ ವಿಶ್ವಕ್ಕೆ ವ್ಯಾಪಿಸಿದ್ದು, ಬಹಳ ಪ್ರಯತ್ನ ಮಾಡಿ ನಮ್ಮ ವಿಜ್ಞಾನಿಗಳು ಕೋವ್ಯಾಕ್ಸಿನ್ ಔಷಧಿಯನ್ನು ಕಂಡು ಹಿಡಿದಿದ್ದಾರೆ. ಕೋವಿಡ್‍ಶೀಲ್ಡ್ ಮತ್ತು ಕೋವ್ಯಾಕ್ಸಿನ್‍ನ್ನು ಒಂದು ತಿಂಗಳಿಂದ ನೀಡುತ್ತಿದ್ದು, ಇದೀಗ ಸಾರ್ವಜನಿಕರಿಗೂ ಲಸಿಕೆ ನೀಡಲಾಗುತ್ತಿದೆ ಎಂದರು. ಈಗ 2ನೇ ಹಂತದ ಅಲೆ ಬರುತ್ತಿದೆ ಎಂಬ ಸುದ್ದಿಗಳು ಬರುತ್ತಿದ್ದು, ಸೋಂಕಿತರ ಸಂಖ್ಯೆಯೂ ಹೆಚ್ಚಾಗುತ್ತಿದೆ. ನಾವು ಕೋವಿಡ್ ವ್ಯಾಕ್ಸಿನ್ ಪಡೆಯುವುದು ಒಳ್ಳೆಯದು. ನಮ್ಮ ದೇಹದಲ್ಲಿ ಕೋವಿಡ್ ಅಂಶ ಇದ್ದರೆ ಅದನ್ನು ನಿರ್ಮೂಲನೆ ಮಾಡಲು ಸಹಕಾರಿಯಾ ಗುತ್ತದೆ. ಜತೆಗೆ ರೋಗ ನಿರೋಧಕ ಶಕ್ತಿಯೂ ಹೆಚ್ಚಾಗುತ್ತದೆ ಎಂದ ಅವರು, ಇದರಿಂದ ಪಾರಾಗಲು ನಮ್ಮ ಸುತ್ತಮುಲಿನ ಪರಿಸರದ ಸ್ವಚ್ಚತೆಯನ್ನು ಕಾಪಾಡಿಕೊಳ್ಳಬೇಕು ಎಂದರು. …
ತುಮಕೂರು : ನಗರದ ಜಿಲ್ಲಾಸ್ಪತ್ರೆಯಲ್ಲಿನ ಪೌಷ್ಟಿಕ ಪುನರ್‍ವಸತಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಪೌಷ್ಟಿಕ ಪುನರ್‍ವಸತಿ ಕೇಂದ್ರದಲ್ಲಿ ದಾಖಲಾಗಿದ್ದ ಮೂರು ಮಕ್ಕಳು ಮಕ್ಕಳ ವಾರ್ಡ್‍ನ ಹೊರಾಂಗಣದಲ್ಲಿ ಮಲಗಿರುವುದನ್ನು ಕಂಡು ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆ ಜಿಲ್ಲಾ ಸರ್ಜನ್ ಡಾ. ಸುರೇಶ್ ಬಾಬು ಪ್ರತಿಕ್ರಿಯಿಸಿ ವಾರ್ಡ್‍ಗಳ ಕೊರತೆಯಿದೆ ಎಂದು ತಿಳಿಸಿದಾಗ, ಮಕ್ಕಳ ಹಿತದೃಷ್ಠಿಯಿಂದ ಸುಸಜ್ಜಿತ ವಾರ್ಡ್ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು. ಬಳಿಕ ಜಿಲ್ಲಾ ಅಂಗವಿಕಲರ ಪುನರ್ ವಸತಿ ಕೇಂದ್ರದ ಹಳೆ ಕಟ್ಟಡ ಪರಿಶೀಲಿಸಿ ಕಟ್ಟಡದ ದುರಸ್ಥಿಗೆ ಅಗತ್ಯವಿರುವ ಅನುದಾನವನ್ನು ಮಹಾನಗರ ಪಾಲಿಕೆಯಿಂದ ಪಡೆಯುವಂತೆ ಕ್ರಮ ಕೈಗೊಳ್ಳಲು ಅಂಗವಿಕಲರ ಕಲ್ಯಾಣಾಧಿಕಾರಿ ರಮೇಶ್ ಅವರಿಗೆ ನಿರ್ದೇಶಿಸಿ, ಜಿಲ್ಲಾಸ್ಪತ್ರೆ ಮೇಲ್ಭಾಗದಲ್ಲಿ ನಿರ್ಮಾಣವಾಗುತ್ತಿರುವ ಸಖಿ(ಒಎಸ್‍ಸಿ) ಕಟ್ಟಡ ಕಾಮಗಾರಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್.…
ತುಮಕೂರು : ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿಯ ಕಾಡಶೆಟ್ಟಿಹಳ್ಳಿಯಲ್ಲಿ ಶನಿವಾರ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಗ್ರಾಮ ವಾಸ್ತವ್ಯ ಮಾಡಿದರು. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಆವರಣದಲ್ಲಿ ಗಿಡ ನೆಟ್ಟು, ನಂತರ ಗ್ರಾಮದಲ್ಲಿನ ಶ್ರೀ ಮಲ್ಲಿಕಾರ್ಜುನ ಸ್ವಾಮಿಗೆ ಪೂಜೆ ಸಲ್ಲಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಕಾರ್ಯಕ್ರಮದ ಅಂಗವಾಗಿ ವಿವಿಧ ಇಲಾಖೆಗಳಿಂದ ಆಯೋಜಿಸಲಾಗಿದ್ದ ಪ್ರಾತ್ಯಕ್ಷತೆಗಳನ್ನು ವೀಕ್ಷಿಸಿ ಮಾಹಿತಿ ಪಡೆದರು. ನಂತರ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ, ಕಾರ್ಯಕ್ರಮಕ್ಕೆ ಆಗಮಿಸಿ ಗ್ರಾಮದ ಜನರ ಸಮಸ್ಯೆ ಆಲಿಸಿದರು. ಅನಂತರ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಮಾತನಾಡಿ, ಸರ್ಕಾರದ ನಿರ್ದೇಶನದಂತೆ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದಡಿ ಎಲ್ಲಾ ತಾಲೂಕುಗಳಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಾಮಾನ್ಯ ಜನರ ಸಮಸ್ಯೆ ಆಲಿಸಿ, ಸಮಸ್ಯೆ ಬಗೆಹರಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದರು. ನ್ಯಾಯಾಲಯಕ್ಕೆ…
ತುಮಕೂರು : ತಮ್ಮ ಸೇವಾ ಅವಧಿಯಲ್ಲಿ ಮೂಲ ಆದಾಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಆಸ್ತಿ ಹೊಂದಿರುವ ಆರೋಪದ ಮೇಲೆ ತುಮಕೂರಿನ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿವೈಎಸ್‍ಪಿ ಟಿ.ಆರ್.ಕೃಷ್ಣಮೂರ್ತಿ ಅವರಿಗೆ ಗೌರವಾನ್ವಿತ 7ನೇ ಅಧಿಕ ಜಿಲ್ಲಾ ಸತ್ರ ನ್ಯಾಯಾಧೀಶರಾದ ಎಸ್.ಸುಧೀಂದ್ರನಾಥ್ ಅವರು ಮಾರ್ಚ್ 20ರಂದು 4 ವರ್ಷ ಸಾದಾ ಸಜೆ ಮತ್ತು 17 ಲಕ್ಷ ರೂ.ಗಳ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಆರೋಪಿ ಡಿವೈಎಸ್‍ಪಿ ಟಿ.ಆರ್.ಕೃಷ್ಣಮೂರ್ತಿ ಅವರು ಮೂಲ ಆದಾಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಆಸ್ತಿಯನ್ನು ಹೊಂದಿರುವ ಬಗ್ಗೆ 2008ರಲ್ಲಿ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿತ್ತು. ತನಿಖೆ ಕೈಗೊಂಡು ಆರೋಪಿಯ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಲಾಗಿತ್ತು. ಆರೋಪಿ ಕೃಷ್ಣಮೂರ್ತಿ ಮೂಲ ಆದಾಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಆಸ್ತಿ ಹೊಂದಿರುವುದು ದೀರ್ಘಕಾಲದ ವಿಚಾರಣೆಯಿಂದ ಸಾಬೀತಾಗಿರುವುದರಿಂದ ಆರೋಪಿತನಿಗೆ ಕಲಂ 248(2) ಸಿಆರ್‍ಪಿಸಿ ಅಡಿ 4 ವರ್ಷಗಳ ಸಾದಾ ಸಜೆ ಮತ್ತು 17 ಲಕ್ಷ ರೂ.ಗಳ…
ತುಮಕೂರು : ಮಕ್ಕಳ ಸಾಧನೆಗೆ ಶಿಕ್ಷಣ ಮತ್ತು ಪೌಷ್ಠಿಕತೆ ಅತ್ಯಾವಶ್ಯಕವೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತುಮಕೂರು ನಗರ ಮತ್ತು ಗ್ರಾಮಾಂತರದ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಸಂಯುಕ್ತಾಶ್ರದಲ್ಲಿ ನಗರದ ಜಿಲ್ಲಾ ಬಾಲ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪೋಷಣ್ ಅಭಿಯಾನ್ ಯೋಜನೆಯ “ಪೋಷಣ್ ಪಕ್ವಾಡ್’’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಯಾವುದೇ ಮಗು ಮತ್ತು ತಾಯಿ ಮಾನಸಿಕವಾಗಿ, ದೈಹಿಕವಾಗಿ ಸದೃಢವಾಗಿರಬೇಕೆಂದರೆ ಪೌಷ್ಠಿಕ ಆಹಾರ ಬಹಳ ಮುಖ್ಯ. ಪೌಷ್ಠಿಕ ಆಹಾರದ ಕೊರತೆಯಿಂದ ಮಗುವಿನ ಬುದ್ಧಿ ಬೆಳವಣಿಗೆಯಲ್ಲಿ ಹಿನ್ನೆಡೆಯಾಗುವ ಸಾಧ್ಯತೆ ಇರುತ್ತದೆ. ಈ ನಿಟ್ಟಿನಲ್ಲಿ ಸರ್ಕಾರವು ತಾಯಿ ಹಾಗೂ ಮಗುವಿನಲ್ಲಿ ಪೌಷ್ಠಿಕತೆ ಹೆಚ್ಚಿಸಲು ಅಂಗನವಾಡಿಗಳ ಮೂಲಕ ಪೌಷ್ಠಿಕ ಆಹಾರವನ್ನು ವಿತರಿಸಲಾಗುತ್ತಿದೆ. ಹೆಚ್ಚಿನ ಸಂಖ್ಯೆಯ ಬಡ ತಾಯಂದಿರು ಮತ್ತು ಮಕ್ಕಳಿಗೆ ಈ ಯೋಜನೆಯು…










