ತುಮಕೂರು: ಜಿಲ್ಲೆಯಲ್ಲಿನ ಶೈಕ್ಷಣಿಕ ಸಂಸ್ಥೆಗಳು ಹಾಗು ಸರ್ಕಾರಿ ಕಛೇರಿಗಳನ್ನು ತಂಬಾಕು ಮುಕ್ತಮಾಡುವುದರ ಮೂಲಕ ಮೂಲಕ ಆರೋಗ್ಯ ಪೂರ್ಣ ಸಮಾಜ ನಿರ್ಮಾಣ ಮಾಡಬೇಕು ಎಂದು ಜಿಲ್ಲಾಧಿಕಾರಿಗಳಾದ ವೈ.ಎಸ್. ಪಾಟೀಲ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಛೇರಿಯಲ್ಲಿಂದು ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಸಮನ್ವಯ ಸಮಿತಿ (ಕೋಟ್ಪಾ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಶಾಲಾ ಕಾಲೇಜುಗಳ 100 ಗಜಗಳ ಅಂತರದಲ್ಲಿ ತಂಬಾಕು ಮಾರಾಟ ಮಾಡುವವರ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗಿದೆ. ಮಕ್ಕಳು ತಂಬಾಕು ಮುಕ್ತ ಸ್ವಸ್ಥ್ಯ ಜೀವನ ನಡೆಸಲು ನಾವು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಗ್ರಾಮಪಂಚಾಯಿತಿ, ಪಟ್ಟಣಪಂಚಾಯಿತಿ, ನಗರಸಭೆಗಳು, ಪುರಸಭೆಗಳು ಹಾಗೂ ಮಹಾ ನಗರಪಾಲಿಕೆಗಳ ವತಿಯಿಂದ ಅಂತಹ ವರ್ತಕರ ಮೇಲೆ ಕ್ರಮ ತೆಗೆದುಕೊಂಡು, ಉಲ್ಲಂಘನೆಯನ್ನು ಪುನರಾವರ್ತನೆ ಮಾಡಿದ್ದಲ್ಲಿ ಉದ್ದಿಮೆ ಪರವಾನಗಿಯನ್ನು ರದ್ದುಮಾಡಬೇಕು ಎಂದರು. ನಿಯಮಿತವಾಗಿ ಕೋಟ್ಪಾ ಕಾಯಿದೆಯ ಕಾರ್ಯಾಚರಣೆಯನ್ನು ನಡೆಸಬೇಕು. ಜಿಲ್ಲೆಯಲ್ಲಿನ ಪ್ರತೀ ಶೈಕ್ಷಣಿಕ ಸಂಸ್ಥೆಯನ್ನು ತಂಬಾಕುಮುಕ್ತ ಮಾಡಬೇಕಾಗಿದೆ ಎಂದು ತಿಳಿಸಿದರು. ತಂಬಾಕು…
Author: News Desk Benkiyabale
ಮಧುಗಿರಿ : ಪಟ್ಟಣದ ಶಂಕರ ಟಾಕೀಸ್ ಮುಂಭಾಗವಿರುವ ಶೇವಿಂಗ್ ಶಾಪ್ ಮುಂದೆ ಪತ್ರಿಕೆ ಓದುತ್ತಿದ್ದ ಯುವಕನ ಮೇಲೆ ಎರಡು ದ್ವಿಚಕ್ರ ವಾಹನದಲ್ಲಿ ಬಂದ ನಾಲ್ವರು ಯುವಕರ ಗುಂಪೊಂದು ಹಾಡಹಗಲೇ ಭರ್ಜಿ, ಚಾಕು ,ರಾಡು ಗಳಿಂದ ಏಕಾಏಕಿ ದಾಳಿ ನಡೆಸಿ ತಿವಿದು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಶುಕ್ರವಾರ ನಡೆದಿದೆ. ತುಮಕೂರಿನ ಮಂಜುನಾಥ ನಗರದ ವಾಸಿ ವೀರಭದ್ರಯ್ಯ(26) ಕೊಲೆಯಾದ ಯುವಕನಾಗಿದ್ದು, ಈತ ಪತ್ರಿಕೆಯನ್ನು ಓದುತ್ತ ಶೇವಿಂಗ್ ಶಾಪ್ ಮುಂಭಾಗದ ಕಟ್ಟೆಯ ಮೇಲೆ ಕುಳಿತಿದ್ದಾಗ ನಾಲ್ವರು ಯುವಕರು ಪಲ್ಸರ್ ದ್ವಿಚಕ್ರ ವಾಹನದಲ್ಲಿ ಬಂದು ರಾಡ್ ನಿಂದ ಹಲ್ಲೆ ನಡೆಸಿ ಚಾಕುವಿನಿಂದ ಇರಿದು ದರದರನೆ ರಸ್ತೆಯವರೆಗೂ ಎಳೆದುಕೊಂಡು ಹೋಗಿ ಎಸೆದು ಪರಾರಿಯಾಗಿದ್ದಾರೆ. ಶಿವರಾತ್ರಿ ಹಬ್ಬದಂದು ಸಾಯಂಕಾಲ ಶಿರಾ ಗೇಟ್ ಬಳಿ ಎರಡು ಯುವಕರ ಗುಂಪಿನ ನಡುವೆ ನಡೆದ ಘರ್ಷಣೆ ಈ ಗಲಾಟೆಗೆ ಕಾರಣವೆನ್ನಲಾಗುತ್ತಿದೆ. ಗಾಯಳಿಗೆ ಮಧುಗಿರಿ ಸಾರ್ವಜನಿಕ ಆಸ್ಪತ್ರೆ ಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆ…
ಕೊರಟಗೆರೆ: ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರಗಳಲ್ಲಿ ಒಂದಾದ ಗೊರವನಹಳ್ಳಿ ಮಹಾಲಕ್ಷ್ಮಿ ದೇವಾಲಯದಲ್ಲಿನ ದಾಸೋಹ ಕಾರ್ಯಕ್ರಮವನ್ನು ಪುನರಾರಂಭಿಸಲಾಗಿದೆ. ಕೊವಿಡ್ ಹಿನ್ನೆಯಲ್ಲಿ ಕಳೆದ ವರ್ಷ ಮಾರ್ಚ್ 13, 2020 ರಿಂದ ಇಲ್ಲಿನ ಪ್ರಸಾದ ವ್ಯವಸ್ಥೆಯನ್ನು ಸ್ಥಗಿತಗೊಳಿಸಲಾಗಿತ್ತು. ಈಚೆಗೆ ಕೊವಿಡ್ ಪ್ರಕರಣ ಕಡಿಮೆಯಾದ ಕಾರಣದಿಂದಾಗಿ ದೇವಸ್ಥಾನಕ್ಕೆ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ ನಿತ್ಯ ದಾಸೋಹವನ್ನು ಪುನರಾರಂಭಿಸಲಾಗಿದೆ. ದೇವಾಸ್ಥಾನದ ಟ್ರಸ್ಟ್ ಪದಾಧಿಕಾರಿಗಳ ನಡುವೆ ಭಿನ್ನಾಭಿಪ್ರಾಯದ ಹಿನ್ನೆಯಲ್ಲಿ ಕಳೆದ ಆರೂವರೆ ವರ್ಷಗಳ ಹಿಂದೆ ದೇವಸ್ಥಾನದ ಆಡಳಿತವನ್ನು ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಮಧುಗಿರಿ ಉಪವಿಭಾಗಾಧಿಕಾರಿಯನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಿ ಸಂಪೂರ್ಣ ಆಡಳಿತ ಸರ್ಕಾರ ವಹಿಸಿಕೊಂಡಿತ್ತು. ಈ ಘಟನೆ ಇಡೀ ರಾಜ್ಯದ ಗಮನ ಸೆಳೆದಿತ್ತು. ಈ ಹಿನ್ನೆಯಲ್ಲಿ ಟ್ರಸ್ಟ್ ಧರ್ಮದರ್ಶಿಗಳು ಹೈಕೋರ್ಡ್ ಮೊರೆ ಹೋಗಿದ್ದರು. ಆರೂವರೆ ವರ್ಷಗಳ ನಂತರ ಮತ್ತೆ ದೇವಸ್ಥಾನದ ಆಡಳಿತವನ್ನು ಹೈಕೋರ್ಟ್ ಆದೇಶದ ಮೇರೆಗೆ ಟ್ರಸ್ಟ್ ಆಡಳಿತಕ್ಕೆ ಬಿಟ್ಟುಕೊಡಲಾಗಿದೆ. ಈ ಹಿಂದೆ ಟ್ರಸ್ ಆಡಳಿತದಲ್ಲಿದ್ದ ವೇಳೆ ಸ್ಥಳೀಯವಾಗಿ ಅನೇಕ ಶೈಕ್ಷಣಿಕ, ಸಾಮಾಜಿಕ…
ಹುಳಿಯಾರು : ಪಟ್ಟಣ ಪಂಚಾಯ್ತಿಯಾಗಿ ಮೇಲ್ದರ್ಜೆಗೇರಿದ 6 ತಿಂಗಳ ಒಳಗೆ ಚುನಾವಣೆ ಮಾಡಬೇಕೆನ್ನುವ ನಿಯಮವಿದೆ. ಆದರೆ ಹುಳಿಯಾರು ಗ್ರಾಮ ಪಂಚಾಯ್ತಿ ಪಟ್ಟಣ ಪಂಚಾಯ್ತಿಯಾಗಿ ಮೇಲ್ದರ್ಜೆಗೇರಿ 3 ವರ್ಷಗಳಾಗಿದ್ದರೂ ಚುನಾವಣೆ ಮಾಡಿರಲಿಲ್ಲ. ಆಡಳಿತಾಧಿಕಾರಿಯಾಗಿ ನೇಮಕಗೊಂಡ 6 ತಿಂಗಳೊಳಗೆ ಚುನಾವಣೆ ನಡೆಸಬೇಕೆಂಬ ಕಾನೂನು ಇದೆ. ಆದರೆ ಹುಳಿಯಾರು ಪಂಚಾಯ್ತಿಗೆ ಆಡಳಿತಾಧಿಕಾರಿ ನೇಮಕಗೊಂಡು ವರ್ಷ ಕಳೆದರೂ ಚುನಾವಣೆ ಮಾಡಿರಲಿಲ್ಲ. ಚುನಾಯಿತ ಪ್ರತಿನಿಧಿಗಳಿಲ್ಲದೆ ಇಡೀ ಆಡಳಿತ ವ್ಯವಸ್ಥೆ ಅಧಿಕಾರಿಯ ಕಪಿಮುಷ್ಠಿಗೆ ಸಿಲುಕಿಸಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಟೀಕೆಗೆ ಕಾರಣವಾಗಿತ್ತು. ಹೌದು, ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ರ ಪ್ರಕರಣ 357 (ಖ) ರನ್ವಯ ರಚನೆಯಾದ ಮದ್ಯಕಾಲೀನ ಮುನ್ಸಿಫಲ್ ಕೌನ್ಸಿಲ್‍ನ್ನು ಇದೇ ಅಧಿನಿಯಮ 1964 ಪ್ರಕರಣ 358 ರನ್ವಯ ರಚನೆಯಾದ ದಿನಾಂಕದಿಂದ 6 ತಿಂಗಳುಗಳ ಮೀರದ ಅವಧಿಯೊಳಗೆ ಹೊಸ ಮುನ್ಸಿಪಲ್ ಕೌನ್ಸಿಲರ್‍ಗಳ ರಚನೆಗಾಗಿ ಚುನಾವಣೆ ನಡೆಸಬೇಕಾಗಿರುತ್ತದೆ. ಹಾಗಾಗಿ 2018 ರ ಆಗಸ್ಟ್ ಮಾಹೆಯ ಒಳಗಾಗಿ ಹುಳಿಯಾರು ಪಂಚಾಯ್ತಿಗೆ ಚುನಾವಣೆ ನಡೆಸಬೇಕಿತ್ತು.…
ತುಮಕೂರು : ಲೈಂಗಿಕ ದೌರ್ಜನ್ಯಕ್ಕೊಳಗಾದ ಗರ್ಭಿಣಿ ಬಾಲಕಿಯರ ಪುನರ್ವಸತಿಗಾಗಿ ಪ್ರತ್ಯೇಕ ಸಂಸ್ಥೆಗಳನ್ನು ಪ್ರಾರಂಭಿಸಬೇಕೆಂದು ಕೋರಿ ಸರ್ಕಾರಕ್ಕೆ ಪತ್ರ ಬರೆಯಲಾಗುವುದೆಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಬುಧವಾರ ಜರುಗಿದ ಸಮಗ್ರ ಮಕ್ಕಳ ರಕ್ಷಣಾ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಗರ್ಭಿಣಿಯಾದ ಅಪ್ರಾಪ್ತ ಬಾಲಕಿಯರನ್ನು ಸರ್ಕಾರಿ ಬಾಲಮಂದಿರ ಅಥವಾ ಸ್ವೀಕಾರ ಕೇಂದ್ರಗಳಲ್ಲಿ ಪಾಲನೆ ಮಾಡುವ ಸಂದರ್ಭ ಬಂದಾಗ ಸಂತ್ರಸ್ತ ಬಾಲಕಿ ಹಾಗೂ ಇತರೆ ಮಕ್ಕಳ ಮೇಲೆ ಮಾನಸಿಕವಾಗಿ ದುಷ್ಪರಿಣಾಮಗಳು ಉಂಟಾಗುವ ಸಾಧ್ಯತೆ ಇರುವುದರಿಂದ ಇಂತಹ ಮಕ್ಕಳ ಪುನರ್ವಸತಿಗಾಗಿ ಪ್ರತ್ಯೇಕ ಪಾಲನಾ ಸಂಸ್ಥೆಗಳನ್ನು ಪ್ರಾರಂಭಿಸುವುದು ಅವಶ್ಯಕವಿದೆ ಎಂದು ತಿಳಿಸಿದರು. ಮಕ್ಕಳ ಪಾಲನಾ ಸಂಸ್ಥೆಯ ಜಿಲ್ಲಾ ತನಿಖಾ ಸಮಿತಿ ಸದಸ್ಯ ಕೆ.ಪಿ. ತಿಪ್ಪೇಸ್ವಾಮಿ ಮಾತನಾಡಿ, ಜಿಲ್ಲೆಯ ಕೆಲವು ಶಾಲಾ ಕಟ್ಟಡಗಳ ಮೇಲೆ ವಿದ್ಯುತ್ ತಂತಿ ಹಾದು ಹೋಗಿರುವ ಹಾಗೂ ಶಾಲೆಗಳ ಆವರಣದಲ್ಲಿ ವಿದ್ಯುತ್ ಪರಿವರ್ತಕಗಳನ್ನು ಸ್ಥಾಪಿಸಿರುವ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ…
ತುಮಕೂರು: ದಲಿತರ ಅಭಿವೃದ್ಧಿ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿರುವ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ದಲಿತರ ಹಣಕ್ಕೆ ಕತ್ತರಿ ಹಾಕಿರುವುದು ದುರದೃಷ್ಟಕರ ಎಂದು ತಾಲ್ಲೂಕು ಜೆಡಿಎಸ್ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಬೆಳಗುಂಬ ವೆಂಕಟೇಶ್ ಆಕ್ರೋಶ ವ್ಯಕ್ತಪಡಿಸಿದರು. ತಾಲ್ಲೂಕಿನ ಗೂಳೂರಿನಲ್ಲಿ ಬಜೆಟ್‍ನಲ್ಲಿ ಪರಿಶಿಷ್ಟರ ಅಭಿವೃದ್ಧಿ ಅನುದಾನವನ್ನು ಕಡಿತಗೊಳಿಸಿರುವುದಕ್ಕೆ ವಿರೋಧಿಸಿ ಜೆಡಿಎಸ್ ಪರಿಶಿಷ್ಟ ಜಾತಿ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಒಳ ಮೀಸಲಾತಿ ಸೇರಿದಂತೆ ದಲಿತರ ಅಭಿವೃದ್ಧಿಗೆ ಭರಪೂರ ಭರವಸೆಗಳನ್ನು ನೀಡಿದ್ದ ಬಿಜೆಪಿ ಇಂದು ಅನುದಾನವನ್ನು ನಿಗದಿಪಡಿಸುವುದರಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಮುಂದುವರೆದ ಜಾತಿಗಳಿಗೆ ಒಂದು ಸಾವಿರ ಕೋಟಿ ಅನುದಾನ ನೀಡಿ, ದಲಿತ, ಹಿಂದುಳಿದ, ಅಲ್ಪಸಂಖ್ಯಾತ ವರ್ಗಗಳಿಗೆ ಕೇವಲ 500 ಕೋಟಿ ಅನುದಾನ ನೀಡುವ ಮೂಲಕ ಬಿಎಸ್‍ವೈ ದಲಿತರಿಗೆ ಅನ್ಯಾಯವನ್ನು ಮಾಡಿದ್ದಾರೆ ಎಂದು ದೂರಿದರು. ಈ ಹಿಂದೆ ಇದ್ದ ಸಮ್ಮಿಶ್ರವಾಗಲಿ, ಕಾಂಗ್ರೆಸ್ ಸರ್ಕಾರವಾಗಲಿ ದಲಿತರ…
ತುಮಕೂರು : ಕುಣಿಗಲ್ ತಾಲೂಕು ಎಡೆಯೂರು ಶ್ರೀ ಸಿದ್ಧಲಿಂಗೇಶ್ವರ ಕ್ಷೇತ್ರದಲ್ಲಿ ಏಪ್ರಿಲ್ 12 ರಿಂದ 27 ರವರೆಗೆ ನಡೆಯಲಿರುವ ಶ್ರೀ ಸಿದ್ಧಲಿಂಗೇಶ್ವರಸ್ವಾಮಿ ಜಾತ್ರಾ ಮಹೋತ್ಸವವನ್ನು ಎಲ್ಲಾ ಇಲಾಖೆಗಳು ಸಮನ್ವಯದಿಂದ ತಮ್ಮ ಕಾರ್ಯಗಳನ್ನು ಜವಾಬ್ದಾರಿಯಿಂದ ನಿರ್ವಹಿಸುವ ಮೂಲಕ ಜಾತ್ರೆಯನ್ನು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಎಡೆಯೂರು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಕಾರ್ಯಕ್ರಮಗಳ ಸಿದ್ಧತೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿ, ಸುಸೂತ್ರವಾಗಿ ಜಾತ್ರೆ ನೆರವೇರಿಸಲು ಸಕಲ ಸಿದ್ಧತೆ ಕೈಗೊಳ್ಳಬೇಕು ಎಂದು ತಿಳಿಸಿದರು. ಪ್ರಸಿದ್ಧ ಎಡೆಯೂರು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಭಕ್ತರು ಪಾಲ್ಗೊಳ್ಳುವುದರಿಂದ ಕೋವಿಡ್-19 ನಿಯಮಾವಳಿಗಳು ಕಡ್ಡಾಯವಾಗಿ ಪಾಲನೆಯಾಗಬೇಕು. ಜಾತ್ರೆಗೆ ಬರುವ ಭಕ್ತಾಧಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಸ್ಯಾನಿಟೈಸರ್ ವ್ಯವಸ್ಥೆ ಮಾಡಬೇಕು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದರು. ಜಾತ್ರೆ ಸಂದರ್ಭದಲ್ಲಿ ಭಕ್ತರಿಗೆ ವಿತರಣೆ ಮಾಡುವ…
ತುಮಕೂರು : ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಮುದ್ದೇನಹಳ್ಳಿಯ ಇಂದಿರಾಗಾಂಧಿ ಫ್ರೌಢ ಶಾಲೆ ಮಾನ್ಯತಾ ನವೀಕರಣವಾಗಿಲ್ಲದಿರುವುದರಿಂದ ಈ ಶಾಲೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಮಕ್ಕಳನ್ನು ನೋಂದಣಿ ಮಾಡಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಿ.ನಂಜಯ್ಯ ಪೋಷಕರಿಗೆ ಮನವಿ ಮಾಡಿದ್ದಾರೆ. ಇಂದಿರಾಗಾಂಧಿ ಫ್ರೌಢ ಶಾಲೆ 2020-21ನೇ ಸಾಲಿನಲ್ಲಿ ನಡೆದಿರುವುದಿಲ್ಲ ಹಾಗೂ ಮಾನ್ಯತೆ ನವೀಕರಣ ಆಗಿರುವುದಿಲ್ಲ. ಇದಲ್ಲದೆ ಇಲಾಖೆಯ ಗಮನಕ್ಕೆ ತರದೇ ಕನಿಷ್ಠ ದಾಖಲಾತಿ ಮಾಡಿಕೊಳ್ಳದೆ ಹೊರ ಜಿಲ್ಲೆ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ನೋಂದಣಿ ಮಾಡಲಾಗಿದೆ. ಶಾಲೆಯ ಮಾನ್ಯತೆಗಾಗಿ ಇಲ್ಲಿಯವರೆಗೂ ಇಲಾಖೆಗೆ ಯಾವುದೇ ಪ್ರಸ್ತಾವನೆ ಸಲ್ಲಿಸಿಲ್ಲ ಎಂದು ತಿಳಿಸಿದ್ದಾರೆ. ಇಲಾಖೆಯ ನಿಯಮದಡಿ ಶಾಲೆಯ ಮಾನ್ಯತೆಯಿಲ್ಲದೇ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ನೋಂದಾಯಿಸಲು ಅವಕಾಶವಿಲ್ಲ. ನೋಂದಾಯಿತ ವಿದ್ಯಾರ್ಥಿಗಳನ್ನು ಅಧಿಕೃತ ಶಾಲೆಯ ಸಂಕೇತದಡಿ ಪರೀಕ್ಷೆಗೆ ನೋಂದಾಯಿಸುವಂತೆ ಪತ್ರ ನೀಡಿದ್ದರೂ ಆಡಳಿತ ಮಂಡಳಿ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ ಕಚೇರಿಯ ಪತ್ರಗಳನ್ನು ಸ್ವೀಕರಿಸುವುದಿಲ್ಲ ಹಾಗಾಗಿ ಪೋಷಕರು ಈ ಶಾಲೆಯಲ್ಲಿನ ವಿದ್ಯಾರ್ಥಿಗಳನ್ನು ತಕ್ಷಣವೇ ಅಧಿಕೃತ ಶಾಲೆಯ ಮೂಲಕ ಪರೀಕ್ಷೆಗೆ…
ತುಮಕೂರು : ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕು ಹುಳಿಯಾರು ಪಟ್ಟಣ ಪಂಚಾಯತಿಯ 16 ವಾರ್ಡುಗಳಿಗೆ ಸಾರ್ವತ್ರಿಕ ಚುನಾವಣೆ ಮತ್ತು ತಿಪಟೂರು ನಗರಸಭೆಯ 31 ನೇ ವಾರ್ಡ್ ಹಾಗೂ ಕೊರಟಗೆರೆ ಪಟ್ಟಣ ಪಂಚಾಯಿತಿಯ 4ನೇ ವಾರ್ಡ್‍ಗೆ ಮಾರ್ಚ್ 29ರಂದು ಉಪಚುನಾವಣೆ ನಡೆಸಲು ಜಿಲ್ಲಾಧಿಕಾರಿ ವೈ. ಎಸ್. ಪಾಟೀಲ ಅವರು ಚುನಾವಣಾ ವೇಳಾಪಟ್ಟಿ ಹೊರಡಿಸಿದ್ದಾರೆ. ಚುನಾವಣಾ ವೇಳಾಪಟ್ಟಿಯಂತೆ ಚುನಾವಣಾಧಿಕಾರಿಗಳು ಮಾರ್ಚ್ 10 ಚುನಾವಣಾ ನೋಟೀಸನ್ನು ಹೊರಡಿಸಲಿದ್ದು, ಮಾರ್ಚ್ 17 ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿರುತ್ತದೆ. ಮಾರ್ಚ್ 18 ನಾಮಪತ್ರ ಪರಿಶೀಲನೆ ನಡೆಯಲಿದ್ದು, ಮಾರ್ಚ್ 20 ಉಮೇದುವಾರಿಕೆ ಹಿಂಪಡೆಯಲು ಕೊನೆ ದಿನವಾಗಿರುತ್ತದೆ. ಮತದಾನ ಅವಶ್ಯವಿದ್ದರೆ ಮಾರ್ಚ್ 29ರಂದು ಬೆಳಗ್ಗೆ 7ರಿಂದ ಸಂಜೆ 5 ಗಂಟೆಯವರೆಗೆ ಚುನಾವಣಾ ಮತದಾನ ನಡೆಯಲಿದೆ. ಮರು ಮತದಾನವಿದ್ದಲ್ಲಿ ಮಾರ್ಚ್ 30ರಂದು ನಡೆಯಲಿದ್ದು, ಮತ ಎಣಿಕೆಯು ಮಾರ್ಚ್ 31ರಂದು ತಾಲೂಕು ಕೇಂದ್ರಗಳಲ್ಲಿ ನಡೆಯಲಿದೆ. ಚುನಾವಣೆ ನಡೆಯುವ ನಗರ ಸ್ಥಳೀಯ ಸಂಸ್ಥೆಗಳ…
ತುಮಕೂರು : ನಗರದ ಜಿಲ್ಲಾಸ್ಪತ್ರೆಯಲ್ಲಿಂದು ಮಾಜಿ ಶಾಸಕ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್. ರಾಜಣ್ಣನವರು ಕೋವಿಡ್-19 ಲಸಿಕೆಯನ್ನು ಪಡೆದರು. ಕೋವಿಡ್ ಲಸಿಕೆಯನ್ನು ಪಡೆದ ನಂತರ ಮಾತನಾಡಿದ ಅವರು, ನಾನು ನಾಳೆ ಬಾಂಬೆ ಹೋಗುತ್ತಿದ್ದೇನೆ. ಈ ಹಿನ್ನೆಲೆಯಲ್ಲಿ ಬಾಂಬೆಯಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವುದರಿಂದ ಲಸಿಕೆ ಪಡೆಯುವಂತೆ ಕೆಲ ಹಿರಿಯರು ಸಲಹೆ ಮಾಡಿದರು. ಹಾಗಾಗಿ ಇಂದು ಕೋವಿಡ್ ಲಸಿಕೆಯನ್ನು ತೆಗೆದುಕೊಂಡಿದ್ದೇನೆ ಎಂದರು. ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳು ಕೋವಿಡ್ ಲಸಿಕೆ ಪಡೆಯಲು ಬರುವ ಎಲ್ಲ ಫಲಾನುಭವಿಗಳಿಗೆ ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ. ಲಸಿಕೆ ಪಡೆದವರು ಸಂತೃಪ್ತಿಯಿಂದ ಹಿಂದಿರುಗುತ್ತಿದ್ದಾರೆ. ನನಗೂ ಸಹ ಸಮಾಧಾನ ತಂದಿದೆ ಎಂದರು. ಕೋವಿಡ್ ಲಸಿಕೆ ನೀಡಿಕೆಯಲ್ಲಿ ನಮ್ಮ ದೇಶ ಪ್ರಪಂಚಕ್ಕೆ ಮಾದರಿಯಾಗಿದೆ. ಈ ವಿಚಾರದಲ್ಲಿ ನಮ್ಮ ದೇಶದ ಹಿರಿಮೆ ಗರಿಮೆ ನಮಗೆ ಹೆಮ್ಮೆ ತಂದಿದೆ ಎಂದು ಅವರು ಹೇಳಿದರು. ಈ…











