ಕೊರಟಗೆರೆ : ಪಟ್ಟಣದ 4ನೇ ವಾರ್ಡಿನ ಗಿರಿನಗರದಲ್ಲಿ ಮದ್ಯಾಹ್ನ 2 ಗಂಟೆ ಸುಮಾರಿನಲ್ಲಿ ಗುಡಿಸಲುಗಳಿಗೆ ಬೆಂಕಿ ಬಿದ್ದ ಪರಿಣಾಮ ಗುಡಿಸಲು ನಾಲ್ಕು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ನಡೆದ್ದಿದೆ. ಗುಡಿಸಲಲ್ಲಿದ್ದ ದವಸ ಧಾನ್ಯ ಪಡಿತರ ಚೀಟಿ, ಆಧಾರ್ ಕಾರ್ಡ್ ಇನ್ನು ಇತರ ದಾಖಲೆ ಪತ್ರಗಳನ್ನು ಬಟ್ಟೆ ಇತರೆ ವಸ್ತುಗಳು ಸಂಪೂರ್ಣ ಸುಟ್ಟು ಭಸ್ಮವಾಗಿದ್ದು ನಾಲ್ಕು ಗುಡಿಸಲುಗಳು ಸೇರಿ ಸುಮಾರು ಎಂಟು ಲಕ್ಷಕ್ಕೂ ಅಧಿಕ ವಸ್ತುಗಳು ಸುಟ್ಟು ಕರಕಲಾಗಿವೆ ಸುದ್ದಿ ತಿಳಿದ ತಕ್ಷಣ ಪೊಲೀಸ್ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳ ಜತೆ ಸ್ಥಳೀಯರು ಸೇರಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುದ್ದಿ ತಿಳಿದ ತಕ್ಷಣ ತಾಲ್ಲೂಕು ದಂಡಾಧಿಕಾರಿಗಳು ಹಾಗೂ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ಸೇರಿದಂತೆ ಪಟ್ಟಣ ಪಂಚಾಯಿತಿಯ ಸದಸ್ಯರು ಭೇಟಿ ನೀಡಿ ಗುಡಿಸಲುಗಳನ್ನು ಕಳೆದುಕೊಂಡ ನಿರಾಶ್ರಿತರಿಗೆ ಸಮಾಧಾನಪಡಿಸಿ ಅವರಿಗೆ ಬೇಕಾಗುವ ಸೌಕರ್ಯಗಳನ್ನು ಒದಗಿಸುವುದಾಗಿ ಭರವಸೆ ನೀಡಿದರು. ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲಕ್ಷಣ್ ಕುಮಾರ್ ಮಾತನಾಡಿ,…
Author: News Desk Benkiyabale
ಕೊಡಿಗೇನಹಳ್ಳಿ : ಪೂರ್ವಜರ ಕಾಲದಿಂದಲೂ ಇದೇ ರಸ್ತೆಯಲ್ಲಿ ಓಡಾಡುತ್ತಿದ್ದೇವೆ. ಇದೀಗಾ ಪ್ರಭಾವಿಯೊಬ್ಬರು ರಸ್ತೆಗೆ ಟ್ರಂಚ್ ಹೊಡೆಸುತ್ತಿರುವುದರಿಂದ ಅನುಮೋದನೆಯಾಗಿರುವ ಕಾಮಗಾರಿಗಳು ಅರ್ಧಕ್ಕೆ ನಿಂತು ಹಣ ಸುಲಭವಾಗಿ ಗುತ್ತಿಗೆದಾರರ ಜೇಬು ಸೇರುವಂತಾಗಿದೆ ಎಂದು ಆರೋಪಿಸಿದ ಬೂಚೇನಹಳ್ಳಿ, ಗುಟ್ಟೆಜಾಲಿಹಳ್ಳಿ ಹಾಗೂ ಗೌರೆಡ್ಡಿಪಾಳ್ಯದ ನಿವಾಸಿಗಳು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಕೊಡಿಗೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಬೂಚೇನಹಳ್ಳಿ, ಗುಟ್ಟೆಜಾಲಿಹಳ್ಳಿ ಹಾಗೂ ಗೌರೆಡ್ಡಿಪಾಳ್ಯದ ಸುಮಾರು 200 ಕುಟುಂಬಗಳ ಜನರು ಕೊಡಿಗೇನಹಳ್ಳಿಗೆ ಹಾಗೂ ವಿವಿಧ ಶಾಲೆಗಳಿಗೆ ತೆರಳುವ ವಿದ್ಯಾರ್ಥಿಗಳು ಇದೇ ರಸ್ತೆ ಮಾರ್ಗವಾಗಿ ಪ್ರತಿ ದಿನ ಓಡಾಡುತ್ತಿದ್ದಾರೆ. ಈ ಮೂರು ಗ್ರಾಮಗಳ ಜನರಿಗೆ ಸಂಚರಿಸಲು ಪ್ರತ್ಯೇಕ ರಸ್ತೆ ಇಲ್ಲದಿರುವ ಕಾರಣ ನೂರಾರು ವರ್ಷಗಳಿಂದ ಹಳ್ಳ ಹರಿಯುವ ಜಾಗವನ್ನೇ ರಸ್ತೆ ಮಾಡಿಕೊಂಡು ಸಂಚರಿಸುತ್ತಿದ್ದಾರೆ ಎಂದು ತಿಳಿಸಿದರು. ಮೂರು ಗ್ರಾಮಗಳಿಗೆ ಪ್ರತ್ಯೇಕ ರಸ್ತೆ ಇಲ್ಲದ ಕಾರಣ ಹಳ್ಳದ ಜಾಗವನ್ನೇ ರಸ್ತೆ ಮಾಡಿಕೊಂಡು ಸಂಚರಿಸುತ್ತಿದ್ದು ಗುತ್ತಿಗೆದಾರ ರಸ್ತೆ ಎತ್ತರ…
ತಿಪಟೂರು : ಕೂಲಿ ಮತ್ತು ಕಟ್ಟಡ ಕಾರ್ಮಿಕರು ಸೇರಿದಂತೆ ಅಸಂಘಟಿತ ವಲಯಗಳಿಗೆ ಸರ್ಕಾರದ ಸೌಲಭ್ಯಗಳು ಸಿಗಬೇಕೆಂಬ ಉದ್ದೇಶದಿಂದ ಶಾಂತಕುಮಾರ್ ಅಭಿಮಾನಿ ಬಳಗದ ವತಿಯಿಂದ ಉಚಿತ ಸ್ಮಾರ್ಟ್ ಕಾರ್ಡ್‍ಗಳನ್ನು ಮಾಡಿಸಿಕೊಡಲಾಗುವುದು ಎಂದು ತಾಲೂಕು ಕಾಂಗ್ರೆಸ್ ಮುಖಂಡ ಕೆ.ಟಿ. ಶಾಂತಕುಮಾರ್ ತಿಳಿಸಿದರು. ನಗರದ ಖಾಸಗಿ ಹೋಟೆಲ್‍ನಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ಕಾರ್ಮಿಕರಿದ್ದು ಅವರು ಸರ್ಕಾರದ ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ. ಎಷ್ಟೋ ಕಾರ್ಮಿಕರಿಗೆ ಸ್ಮಾರ್ಟ್‍ಕಾರ್ಡ್ ಬಗ್ಗೆ ಮಾಹಿತಿ ಇಲ್ಲದಂತಾಗಿದೆ. ಕಟ್ಟಡಕಾರ್ಮಿಕರು, ಹಮಾಲರು, ಚಿಂದಿ ಆಯುವವರು, ಗೃಹ ಕಾರ್ಮಿಕರು, ಟೈಲರ್, ಕೃಷಿ, ರಸ್ತೆ ಕಾರ್ಮಿಕರು, ಕಮ್ಮಾರರು, ಗಾರ್ಮೆಂಟ್ಸ್ ಸೇರಿದಂತೆ ಕೆಳ ವರ್ಗದ ಕೂಲಿ ಕಾರ್ಮಿಕರಿಗೆ ಸರ್ಕಾರದ ಯಾವುದೇ ಸೌಲಭ್ಯಗಳ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲದೆ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ವರೆಲ್ಲ ನಿತ್ಯ ಕಷ್ಟದ ಜೀವನ ನಡೆಸುತ್ತಿದ್ದು, ಮಕ್ಕಳ ವಿದ್ಯಾಭ್ಯಾಸ, ಆರೋಗ್ಯ, ಕುಟುಂಬ ನಿರ್ವಹಣೆಗೆ ಕಷ್ಟಪಡುವಂತಾಗಿದೆ. ಸರ್ಕಾರವೂ ಸಹ ಇಂತಹ ಅಸಂಘಟಿತ ವಲಯಗಳನ್ನು ಗುರ್ತಿಸಿ ಅಂಬೇಡ್ಕರ್…
ತುಮಕೂರು : ಜಿಲ್ಲೆಯಲ್ಲಿ ತೆಂಗು ಕುರಿತ ಕಾರ್ಯಾಗಾರ/ ಮೇಳವನ್ನು ಆಯೋಜಿಸುವ ಕುರಿತಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತುಮಕೂರು ಜಿಲ್ಲೆಯು ಕೇಂದ್ರ ಸರ್ಕಾರದ ಒಂದು ಜಿಲ್ಲೆ ಒಂದು ಉತ್ಪನ್ನದಡಿ ತೆಂಗು ಆಯ್ಕೆಯಾಗಿದ್ದು, ತೆಂಗು ಬೆಳೆಯುವುದು, ತೆಂಗಿನ ವಿವಿಧ ಉತ್ಪನ್ನಗಳು, ಅಭಿವೃದ್ಧಿ, ಉತ್ಪಾದನೆ, ರೋಗನಿಯಂತ್ರಣ ಸೇರಿದಂತೆ ತೆಂಗುವಿನ ಅನೇಕ ವಿಷಯಗಳ ಬಗ್ಗೆ ತಜ್ಞರಿಂದ ರೈತರಿಗೆ, ಸಾರ್ವಜನಿಕರಿಗೆ ಅರಿವು ಮೂಡಿಸಲು ಈ ಕಾರ್ಯಾಗಾರ ಮೇಳ ಆಯೋಜಿಸಲಾಗುವುದು. ಮೇಳ ಆಯೋಜಿಸುವ ದಿನಾಂಕ, ಸಮಯ, ಸ್ಥಳ, ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ಅಂತಿಮಗೊಳಿಸಲಾಗುವುದು ಎಂದರು. ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳನ್ನೊಳಗೊಂಡಂತೆ ಸ್ವಾಗತ ಸಮಿತಿ, ಪ್ರಚಾರ ಸಮಿತಿ, ಪ್ರದರ್ಶನ ಹಾಗೂ ಮಳಿಗೆ ಸಮಿತಿ, ಹಣಕಾಸು ಸಮಿತಿ ಹೀಗೆ…
ತುಮಕೂರು : ಮಹಿಳಾ ಅಭಿವೃದ್ಧಿ ನಿಗಮದಿಂದ ಅನುಷ್ಠಾನವಾಗುವ ವಿವಿಧ ಯೋಜನೆಗಳಡಿ ನೀಡುವ ಸಾಲ-ಸಹಾಯಧನ ಸೌಲಭ್ಯಕ್ಕಾಗಿ ಲಾಟರಿ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಲಾಯಿತು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ , ಲಿಂಗತ್ವ ಅಲ್ಪಸಂಖ್ಯಾತರ ಫಲಾನುಭವಿಗಳ ಆಯ್ಕೆ ಸಮಿತಿ, ಧನಶ್ರೀ ಫಲಾನುಭವಿಗಳ ಆಯ್ಕೆ ಸಮಿತಿ ಹಾಗೂ ದಮನಿತ ಫಲಾನುಭವಿಗಳ ಆಯ್ಕೆ ಸಮಿತಿ ಸಭೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿಗಾರ್ ಅವರು ಲಾಟರಿ ಎತ್ತುವ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಿದರು. ಆಯ್ಕೆ ಪ್ರಕ್ರಿಯೆ ನಂತರ ಮಾತನಾಡಿದ ಜಿಲ್ಲಾಧಿಕಾರಿಗಳು, ಸರ್ಕಾರದ ಯಾವುದೇ ಯೋಜನೆಗಳ ಫಲಾನುಭವಿಗಳನ್ನು ಆಯ್ಕೆ ಮಾಡುವಾಗ ಪಾರದರ್ಶಕತೆ ಇರಬೇಕು. ಆಯ್ಕೆ ಪ್ರಕ್ರಿಯೆಯಲ್ಲಿ ಫಲಾನುಭವಿಗಳ ವಿವರ/ದಾಖಲೆಗಳನ್ನು ಡಾಟಾ ಬೇಸ್‍ನಲ್ಲಿ ದಾಖಲಿಸಬೇಕು. ಡಾಟಾ ಬೇಸ್‍ನಲ್ಲಿ ಫಲಾನುಭವಿಗಳ ಆಧಾರ್ ಸಂಖ್ಯೆ ಮತ್ತಿತರ ವಿವರಗಳನ್ನು ದಾಖಲಿಸುವುದರಿಂದ ಫಲಾನುಭವಿಗಳು ಪುನರಾವರ್ತಿತರಾಗುವುದಿಲ್ಲ. ಇಲ್ಲದಿದ್ದರೆ ಯೋಜನೆಯ ಪ್ರಯೋಜನ ಪಡೆದ ಫಲಾನುಭವಿಗಳೇ…
ತುಮಕೂರು: ಸ್ಲಂ ನಿವಾಸಿಗಳ ಕುಂದು ಕೊರತೆ ಸಭೆಯನ್ನು ಅಪರ ಜಿಲ್ಲಾಧಿಕಾರಿಗಳಾದ ಚೆನ್ನಬಸಪ್ಪನವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆಸಲಾಯಿತು ಕಳೆದ ಕೆಲ ದಿನಗಳ ಹಿಂದೆ ನೂತನ ಜಿಲ್ಲಾಧಿಕಾರಿಗಳಿಗೆ ಸ್ಲಂ ನಿವಾಸಿಗಳ ಕುಂದುಕೊರತೆ ಸಭೆ ಕರೆಯಲು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯಿಂದ ಮನವಿ ನೀಡಲಾಗಿತ್ತು ಅದರಂತೆ 5-03-2021ರ ಸಭೆ ಕರೆಯಲಾಗಿತ್ತು. ಸಭೆಯ ಅಧ್ಯಕ್ಷತೆ ವಹಿಸಿದ ಅಪರ ಜಿಲ್ಲಾಧಿಕಾರಿಗಳು ಇಂದು ತುಮಕೂರು ವಿಶ್ವವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು ಪಾಲ್ಗೊಂಡಿದ್ದು ಪೂರ್ವ ನಿಗಧಿತವಾಗಿರುವ ಈ ಸಭೆಯನ್ನು ನಡೆಸಲು ಜಿಲ್ಲಾಡಳಿತ ತ್ರಿಪಕ್ಷೀಯ ಸಭೆ ಕರೆದಿದ್ದು ವ್ಯಕ್ತಿಗತ ಸಮಸ್ಯೆಗಳಿಗಿಂತ ಸಮುದಾಯ ಸಮಸ್ಯೆಗಳಿಗೆ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಸ್ಲಂ ನಿವಾಸಿಗಳ ಕುಂದುಕೊರತೆ ಸಭೆ ಕರೆಯಲಾಗಿದೆ. ಅದರಂತೆ ಈಗಾಗಲೇ ತುಮಕೂರು ಕೊಳಗೇರಿ ಸಮಿತಿಯಿಂದ 15 ಅಂಶಗಳ ಸಮಸ್ಯೆಗಳನ್ನು ನೀಡಿದ್ದು ಈ ಸಭೆಯಲ್ಲಿ ಚರ್ಚಿಸಿ ಸಂಬಂಧಪಟ್ಟ ಇಲಾಖೆಗಳು ಸಮನ್ವಯತೆಯಲ್ಲಿ ಸಮಸ್ಯೆಗಳನ್ನು ಪರಿಹರಿಸಲು ಕಾಲಮಿತಿಯನ್ನು ನಿಗಧಿಗೊಳಿಸಿ ಅನುಪಾಲನ ಸಭೆಗಳನ್ನು ಹಂತಹಂತವಾಗಿ ಮಾಡುವ…
ತುಮಕೂರು : ಸಮಾಜದಲ್ಲಿ ಅಪರಾಧ ಪ್ರಕರಣಗಳ ನಿಯಂತ್ರಣ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಪೊಲೀಸರ ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿಯಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಅಭಿಪ್ರಾಯ ವ್ಯಕ್ತಪಡಿಸಿದರು. ಶಿಸ್ತು, ಸಂಯಮ, ದಕ್ಷತೆ, ಪ್ರಾಮಾಣಿಕತೆಗೆ ಹೆಸರಾಗಿರುವ ಪೆÇಲೀಸ್ ಇಲಾಖೆಯನ್ನು ಸದಾ ಜನಸಾಮಾನ್ಯರು ಗಮನಿಸುತ್ತಿರುತ್ತಾರೆ. ಹಾಗಾಗಿ ಪೊಲೀಸರು ಪ್ರತಿ ಕ್ಷಣವೂ ಬಹಳ ಎಚ್ಚರಿಕೆಯಿಂದಲೇ ಕಾರ್ಯನಿರ್ವಹಿಸಬೇಕಾಗಿದೆ. ಹೀಗಾಗಿ ಪ್ರತಿ ಕ್ಷಣವೂ ಒತ್ತಡ ಎಂಬುದು ಬೆನ್ನೇರಿರುತ್ತದೆ. ಈ ಎಲ್ಲ ಒತ್ತಡಗಳಿಂದ ಮುಕ್ತರಾಗಲು ಕ್ರೀಡಾಕೂಟಗಳು ಅನಿವಾರ್ಯ ಎಂದರು. ನಗರದ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಮೈದಾನದಲ್ಲಿ ಮೂರು ದಿನಗಳ ಕಾಲ ಏರ್ಪಡಿಸಲಾಗಿರುವ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಬಲೂನ್ ಹಾಗೂ ಪಾರಿವಾಳಗಳನ್ನು ಹಾರಿ ಬಿಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಕ್ರೀಡೆ ಮನುಷ್ಯನ ದೈಹಿಕ ಸದೃಢತೆ ಹಾಗೂ ಮಾನಸಿಕ ಸ್ವಾಸ್ಥ್ಯ ಕಾಪಾಡುತ್ತದೆ. ಆದ್ದರಿಂದ ಪ್ರತಿಯೊಬ್ಬರೂ…
ಹುಳಿಯಾರು : ಹುಳಿಯಾರು ಹೋಬಳಿಯ ಕೆಂಕೆರೆ ಗ್ರಾಮ ಪಂಚಾಯ್ತಿಯಿಂದ ಕೆಂಕೆರೆ ಗ್ರಾಮದ ಮೀನು ಪಾಚುವಾರು ಹರಾಜು ಪ್ರಕ್ರಿಯೆಯು ಗುರುವಾರ ನಡೆಯಿತು. ಗ್ರಾಪಂ ಅಧ್ಯಕ್ಷ ಕೆ.ಸಿ.ವಿಕಾಸ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಹರಾಜಿನಲ್ಲಿ ನಾಲ್ವರು ಭಾಗವಹಿಸಿದ್ದು ಕೆಂಕೆರೆಯ ಕೆ.ಜಿ.ಶರತ್ ಅವರಿಗೆ ವರ್ಷಕ್ಕೆ 35,500 ರೂ.ಗಳಂತೆ ವರ್ಷಿಕ ಶೇ.10 ರೂ. ಹೆಚ್ಚಳ ಮಾಡಿ 2021 ಮಾರ್ಚ್ 4 ರಿಂದ 2024 ಮಾರ್ಚ್ 31 ರ ವರೆವಿಗೆ 3 ವರ್ಷದ ಅವಧಿಗೆ ಹರಾಜು ನಿಂತಿತು. ಗ್ರಾಪಂ ಅಭಿವೃದ್ಧಿ ಅಧಿಕಾರಿ ಕೆ.ಸಿ.ಬಲರಾಮಯ್ಯ ಸೇರಿದಂತೆ ಗ್ರಾಪಂ ಕಾರ್ಯದರ್ಶಿ ಜ್ಞಾನಮೂರ್ತಿ ಹಾಗೂ ಗ್ರಾಪಂ ಸದಸ್ಯರುಗಳು ಭಾಗವಹಿಸಿದ್ದರು.
ಹುಳಿಯಾರು : ಹುಳಿಯಾರು ಎಪಿಎಂಸಿಯಲ್ಲಿನ ಶುದ್ಧ ಕುಡಿಯುವ ನೀರಿನ ಘಟಕ ಸೇರಿದಂತೆ ಪಟ್ಟಣದಲ್ಲಿ ಕೆಟ್ಟಿರುವ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ತಕ್ಷಣ ದುರಸ್ತಿ ಮಾಡಿಸುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಅವರು ಪಪಂ ಮುಖ್ಯಾಧಿಕಾರಿ ಮಂಜುನಾಥ್ ಅವರಿಗೆ ಸೂಚನೆ ನೀಡಿದರು. ಹುಳಿಯಾರು ಎಪಿಎಂಸಿಯಲ್ಲಿನ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿಗಳು ಭೇಟಿ ನೀಡಿದ ಸಂದರ್ಭದಲ್ಲಿ ಹುಳಿಯಾರಿನ ಶುದ್ಧ ಕುಡಿಯುವ ನೀರಿನ ಘಟಕಗಳು ಕೆಟ್ಟು ವರ್ಷಗಳೇ ಕಳೆದಿದ್ದರೂ ಸಹ ದುರಸ್ತಿ ಮಾಡದ ಪರಿಣಾಮ ಹೆಚ್ಚು ಹಣ ಕೊಟ್ಟು ಖಾಸಗಿಯವರಿಂದ ನೀರು ಖರೀದಿಸಿ ಕುಡಿಯುವಂತ್ತಾಗಿದೆ ಎಂದು ಸಾರ್ವಜನಿಕರು ದೂರಿದರು. ಜಿಲ್ಲಾಧಿಕಾರಿಗಳು ತಕ್ಷಣ ಪಪಂ ಮುಖ್ಯಾಧಿಕಾರಿಗಳನ್ನು ಕರೆಸಿ ದುರಸ್ತಿ ಮಾಡಿಸದೆ ನಿರ್ಲಕ್ಷ್ಯಿಸಿರುವ ಬಗ್ಗೆ ಪ್ರಶ್ನಿಸಿದರು. ಶುದ್ಧ ಕುಡಿಯುವ ನೀರಿನ ಘಟಕಗಳೆಲ್ಲವೂ ಆರ್‍ಡಿಪಿಆರ್ ವ್ಯಾಪ್ತಿಯಲ್ಲಿದ್ದು ನಮಗೆ ಇದೂವರೆವಿಗೂ ಹಸ್ತಾಂತರಿಸಿರುವುದಿಲ್ಲ. ಅವರು ಹಸ್ತಾಂತರಿಸಿದರೆ ದುರಸ್ತಿ ಮಾಡಿಸುವುದಾಗಿ ತಿಳಿಸಿದರು. ಅಲ್ಲದೆ 70 ಸಾವಿರಕ್ಕೂ ಹೆಚ್ಚು ಹಣ ದುರಸ್ತಿಗೆ ಬೇಕಾಗುತ್ತದೆ ನಮ್ಮಲ್ಲಿ ಕಂದಾಯ ವಸೂಲಿಯಾಗದಿರುವುದರಿಂದ…
ತುಮಕೂರು : ತುಮಕೂರು ವಿಶ್ವವಿದ್ಯಾನಿಲಯದ 14ನೇ ವಾರ್ಷಿಕ ಘಟಿಕೋತ್ಸವದಲ್ಲಿ 73 ವಿದ್ಯಾರ್ಥಿಗಳಿಗೆ ಒಟ್ಟು 92 ಚಿನ್ನದ ಪದಕ, ಆರು ನಗದು ಬಹುಮಾನ ಹಾಗೂ 147 ಪಿಎಚ್‍ಡಿ ಪದವಿ ಹಾಗೂ 3 ಡಿಲಿಟ್ ಪದವಿ ಪ್ರದಾನ ಮಾಡಲಾಯಿತು. ತುಮಕೂರು ನಗರದ ವಿಶ್ವವಿದ್ಯಾನಿಲಯದ ಶ್ರೀ ಶ್ರೀ ಶ್ರೀ ಶಿವಕುಮಾರ ಸಭಾಂಗಣದಲ್ಲಿ ನಡೆದ ಘಟಿಕೋತ್ಸವದಲ್ಲಿ ಘನತೆವೆತ್ತ ರಾಜ್ಯಪಾಲ ಹಾಗೂ ವಿಶ್ವವಿದ್ಯಾನಿಲಯದ ಕುಲಾಧಿಪತಿಗಳಾದ ವಾಜುಭಾಯಿ ವಾಲಾ ಅವರು, 73 ವಿದ್ಯಾರ್ಥಿಗಳಿಗೆ ಚಿನ್ನದ ಪದಕ, 147 ಪಿಎಚ್‍ಡಿ ಅಭ್ಯರ್ಥಿಗಳಿಗೆ ಮತ್ತು 3 ಡಿಲಿಟ್ ಪದವಿ ಪ್ರದಾನ ಹಾಗೂ ಸಾಮಾಜಿಕ ಸೇವಾ ಕ್ಷೇತ್ರದಲ್ಲಿನ ಕೊಡುಗೆಗಾಗಿ ಐ.ಎಸ್. ಪ್ರಸಾದ್ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದರು. ಉದಾರ ಶಿಕ್ಷಣ ಪರಿಕಲ್ಪನೆಯಲ್ಲಿ ತುಮಕೂರು ವಿವಿಗೆ ವಿಶಿಷ್ಟ ಸ್ಥಾನ: ತುಮಕೂರು ವಿಶ್ವವಿದ್ಯಾಲಯವು ರಾಷ್ಟ್ರೀಯ ಶಿಕ್ಷಣ ನೀತಿಯ ಉದಾರ ಶಿಕ್ಷಣ ಪರಿಕಲ್ಪನೆಯನ್ನು ಅನುಷ್ಠಾನಗೊಳಿಸುವಲ್ಲಿ ವಿಶಿಷ್ಟ ಸ್ಥಾನ ಹೊಂದಿದೆ ಎಂದು ರಾಜಸ್ಥಾನ ಕೇಂದ್ರೀಯ ವಿಶ್ವವಿದ್ಯಾನಿಲಯದ ಕುಲಾಧಿಪತಿ, ಇಸ್ರೋ ಭಾರತ ಸರ್ಕಾರ…











