Author: News Desk Benkiyabale

ಹುಳಿಯಾರು :        ಹುಳಿಯಾರು ಹೋಬಳಿಯು ಕಾಂಗ್ರೆಸ್ ಭದ್ರಕೋಟೆಯಾಗಿದ್ದು ಈ ಬಾರಿಯ ಪಟ್ಟಣ ಪಂಚಾಯ್ತಿ ಚುನಾವಣೆಯಲ್ಲಿ ಬಹುಮತ ಪಡೆದು ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಜಿಪಂ ಸದಸ್ಯ ವೈ.ಸಿ.ಸಿದ್ಧರಾಮಯ್ಯ ಅವರು ಹೇಳಿದರು.       ಹುಳಿಯಾರಿನ ಪಪಂ ಮಾಜಿ ಸದಸ್ಯ ಧನುಷ್ ರಂಗನಾಥ್ ಅವರ ಮನೆಯಲ್ಲಿ ನಡೆದ ಯುವ ಕಾಂಗ್ರಸ್ ನೂತನ ಪದಾಧಿಕಾರಿಗಳಿಗೆ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.       ಟಿ.ಬಿ.ಜಯಚಂದ್ರ ಅವರು ಈ ಕ್ಷೇತ್ರದಿಂದ ಸ್ಪರ್ಧಿಸಿದ್ದ 4 ಬಾರಿಯೂ ಹುಳಿಯಾರು ಹೋಬಳಿ ಲೀಡ್ ಕೊಟ್ಟಿತ್ತು. ಕಳೆದ ಬಾರಿ ಜಯಚಂದ್ರ ಅವರ ಪುತ್ರ ಸಂತೋಷ್ ಸ್ಪರ್ಧಿಸಿದ್ದಾಗಲೂ ಹೆಚ್ಚು ಮತಗಳು ಈ ಹೋಬಳಿಯಿಂದ ಬಂದಿತ್ತು. ಹುಳಿಯಾರು ಗ್ರಾಮ ಪಂಚಾಯ್ತಿಗೂ ಸಹ ಕಾಂಗ್ರೆಸ್ ಬೆಂಬಲಿತರೇ ಹೆಚ್ಚು ಮಂದಿ ಗೆದ್ದು ಅಧಿಕಾರ ಹಿಡಿದಿದ್ದರು ಎಂದು ವಿವರಿಸಿದರು.      ಪಟ್ಟಣ ಪಂಚಾಯ್ತಿಯಾಗಿ ಮೇಲ್ದರ್ಜೆಗೇರಿದ 6 ತಿಂಗಳ ಒಳಗಾಗಿ ಚುನಾವಣೆ ಮಾಡಬೇಕಿದ್ದರೂ ಹುಳಿಯಾರು ಪಂಚಾಯ್ತಿಗೆ ಮೇಲ್ದರ್ಜೆಗೇರಿ ಎರಡ್ಮೂರು ವರ್ಷಗಳು…

Read More

ತುಮಕೂರು :       ಕೇರಳ ಹಾಗೂ ಮಹಾರಾಷ್ಟ್ರದಿಂದ ಬರುವ ಪ್ಯಾರಾಮೆಡಿಕಲ್/ಫಾರ್ಮಸಿ/ನರ್ಸಿಂಗ್/ಮೆಡಿಕಲ್ ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.       ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕೋವಿಡ್ ನಿಯಂತ್ರಣ ಮುಂಜಾಗ್ರತಾ ಕ್ರಮಗಳ ಕುರಿತಂತೆ ಜಿಲ್ಲೆಯಲ್ಲಿನ ಪ್ಯಾರಾಮೆಡಿಕಲ್ ಹಾಗೂ ನರ್ಸಿಂಗ್ ಕಾಲೇಜು ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.       ಹೊರ ರಾಜ್ಯಗಳಾದ ಕೇರಳ ಹಾಗೂ ಮಹಾರಾಷ್ಟ್ರದಿಂದ ಬರುವ ವಿದ್ಯಾರ್ಥಿಗಳ ಮಾಹಿತಿ ಪಡೆದುಕೊಂಡು ಕಡ್ಡಾಯವಾಗಿ 24 ಗಂಟೆಯೊಳಗೆ ಆರ್‍ಟಿಪಿಸಿಆರ್ ಪರೀಕ್ಷೆ ಮಾಡಿಸಬೇಕು. ನೆಗೆಟಿವ್ ಬಂದವರಿಗೆ ಮಾತ್ರ ಕಾಲೇಜು ಪ್ರವೇಶಾತಿ ನೀಡಬೇಕು. ಪರೀಕ್ಷೆ ಫಲಿತಾಂಶ ಬರುವವರೆಗೂ ಪ್ರತ್ಯೇಕ ಕೊಠಡಿಯಲ್ಲಿ ಐಸೋಲೇಶನ್ ಮಾಡಬೇಕು. ಆಯಾ ಕಾಲೇಜು ಆಡಳಿತವು ಕೇರಳ, ಮಹಾರಾಷ್ಟ್ರದಿಂದ ಬರುವ ವಿದ್ಯಾರ್ಥಿಗಳಿಂದ ಪ್ರಯಾಣದ ಮಾಹಿತಿ ಪಡೆದುಕೊಳ್ಳಬೇಕು. ವಿದ್ಯಾರ್ಥಿಗಳಿಂದ “ನನಗೆ ಯಾವುದೇ ಕೋವಿಡ್ ಲಕ್ಷಣಗಳಿರುವುದಿಲ್ಲ ಮತ್ತು ಯಾವ ವ್ಯಕ್ತಿಯ ಜೊತೆಯು ಬೇರೆಯುವುದಿಲ್ಲ” ಎಂದು ಮುಚ್ಚಳಿಕೆ…

Read More

ತುಮಕೂರು:        ಇಲ್ಲಿನ ಮಹಾನಗರ ಪಾಲಿಕೆಯ ಮಹಾಪೌರರು ಮತ್ತು ಉಪಮಹಾಪೌರರ ಸ್ಥಾನಗಳಿಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಈ ಎರಡೂ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆಯುವ ಮೂಲಕ ಮಹಾನಗರ ಪಾಲಿಕೆ ಆಡಳಿತ ಭಾರತೀಯ ಜನತಾ ಪಕ್ಷದ ವಶವಾಗಿದೆ. ಮಹಾನಗರ ಪಾಲಿಕೆಯ ಮೇಯರ್ ಸ್ಥಾನ ಪರಿಶಿಷ್ಟ ಪಂಗಡಕ್ಕೆ ಹಾಗೂ ಉಪಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಈ ಹಿನ್ನೆಲೆಯಲ್ಲಿ ತುಮಕೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಸದಸ್ಯರೂ ಇಲ್ಲದ ಕಾರಣ ಬಿಜೆಪಿಯ 32ನೇ ವಾರ್ಡ್‍ನ ಸದಸ್ಯರಾದ ಬಿ.ಜಿ. ಕೃಷ್ಣಪ್ಪ ಅವರು ಮೇಯರ್ ಆಗಿ ಅವಿರೋಧವಾಗಿ ಆಯ್ಕೆಯಾದರು.      ಇನ್ನು ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಉಪಮೇಯರ್ ಸ್ಥಾನಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಮಾತುಕತೆ ಮೂಲಕ ಹೊಂದಾಣಿಕೆ ಮಾಡಿಕೊಂಡು ಜೆಡಿಎಸ್‍ನ 29ನೇ ವಾರ್ಡ್‍ನ ನಾಜಿಮಾಬಿ ಇಸ್ಮಾಯಿಲ್ ಅವರನ್ನು ಉಪಮೇಯರ್ ಆಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.            ಪಾಲಿಕೆಯ ಮೇಯರ್…

Read More

ಚಿಕ್ಕನಾಯಕನಹಳ್ಳಿ:       ಗ್ರಾಮ ಪಂಚಾಯಿತಿ ಪಿಡಿಒ ಮೇಲೆ ಜಾತಿ ನಿಂದನೆಮಾಡಿ ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿದವರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ತಾಲ್ಲೂಕು ಗ್ರಾಮ ಪಂಚಾಯಿತಿ ಪಿಡಿಓ ಹಿತರಕ್ಷಣಾ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.          ತಾಲ್ಲುಕಿನ ದೊಡ್ಡೆಣ್ಣೆಗೆರೆ ಗ್ರಾಮ ಪಂಚಾಯಿತಿಯ (ಪ್ರಭಾರ) ಅಭಿವೃದ್ದಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಅಡವೀಶ್‍ಕುಮಾರ್‍ರವರ ಮೇಲೆ ಫೆ.24 ರಂದು ಅಲ್ಲಿನ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎ.ವೈ ರಮ್ಯರವರ ಪತಿ ಮಂಜುನಾಥ್, ಹಾಗೂ ಸದಸ್ಯರಾದ ಡಿ.ಎಸ್. ಪ್ರಶಾಂತ್ ಹಾಗೂ ಡಿ.ಎಂ. ಶಿವಕುಮಾರ್‍ರವರು ಪಿಡಿಓರವರನ್ನು ಅವಾಚ್ಯವಾಗಿ ನಿಂದಿಸಿ, ಕರ್ತವ್ಯದಲ್ಲಿದ್ದ ಅವರನ್ನು ಕಚೇರಿಯಿಂದ ಹೊರಕ್ಕೆ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಪರಿಶಿಷ್ಟ ಜಾತಿಗೆ ಸೇರಿದ ಪಿಡಿಓರವರನ್ನು ಜಾತಿನಿಂದನೆ ಮಾಡಿ ಅವರಿಗೆ ಮಾನಹಾನಿÀ ಮಾಡಿದ್ದಾರೆ. ಈ ಪ್ರಕರಣದಿಂದ ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುವ ಪಿಡಿಒಗಳು, ಕಾರ್ಯದರ್ಶಿಗಳು ಹಾಗೂ ಸಿಬ್ಬಂದಿಗಳಿಗೆ ಮಾನಸಿಕವಾಗಿ ಕುಗ್ಗಿಹೋಗಿದ್ದಾರೆ. ಸದರಿ ಪ್ರಕರಣ ಸಂಬಂಧ ದೂರು ದಾಖಲಾಗಿದೆ.      ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ದ ಕಾನೂನು…

Read More

ತುಮಕೂರು:       ಜಿಲ್ಲೆಯಲ್ಲಿರುವ ಎಲ್ಲಾ ಶಾಲೆ ಹಾಗೂ ಅಂಗನವಾಡಿ ಕಟ್ಟಡಗಳಿಗೆ ಜಲಜೀವನ್ ಮಿಷನ್ ಅಡಿ ಕಡ್ಡಾಯವಾಗಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕೆಂದು ಜಿಲ್ಲಾ ಪಂಚಾಯತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆಂಪಚೌಡಪ್ಪ ಅವರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರರಿಗೆ ಸೂಚನೆ ನೀಡಿದರು.       ಜಿಲ್ಲಾ ಪಂಚಾಯತಿಯಲ್ಲಿ ಗುರುವಾರ ಜರುಗಿದ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಎರಡನೇ ಹಂತದ ಕೋವಿಡ್-19 ಹರಡುವಿಕೆಯನ್ನು ತಡೆಗಟ್ಟಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಬೇಕೆಂದು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದಾಗ, ಉತ್ತರಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ನಾಗೇಂದ್ರಪ್ಪ ಸಭೆಗೆ ಮಾಹಿತಿ ನೀಡುತ್ತಾ, ನಗರ ಪ್ರದೇಶಗಳಲ್ಲಿ ಕೋವಿಡ್-19 ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಸಹಕಾರದಿಂದ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರಲ್ಲದೆ, ಈಗಾಗಲೇ ಈಡಿoಟಿಣ ಐiಟಿe Woಡಿಞeಡಿsಗೆ…

Read More

ತುಮಕೂರು:      ತುಮಕೂರು ನಗರಕ್ಕೆ ಸಮೀಪದ ಹೊನ್ನೇನಹಳ್ಳಿಯಲ್ಲಿ ವಿಜಯನಗರ ಸಾಮ್ರಾಜ್ಯವನ್ನು ಆಳಿದ ಕೃಷ್ಣದೇವರಾಯ ಕಾಲಮಾನವಾದ ನಿಖರವಾದ ದಿನಾಂಕವನ್ನು ಸ್ಪಷ್ಟಪಡಿಸುವ ಶಾಸನವೊಂದು ಪತ್ತೆಯಾಗಿದೆ.        ಕ್ರಿಸ್ತಶಕ 1336ರಲ್ಲಿ ಹಕ್ಕ,ಬುಕ್ಕರಿಂದ ಆರಂಭವಾದ ವಿಜಯನಗರ ಸಾಮ್ರಾಜ್ಯದ ಶ್ರೀಕೃಷ್ಣ ದೇವರಾಯನ ಸಾವಿನ ಕುರಿತಾದ ನಿಖರತೆ ಇದುವರೆಗೂ ಇತಿಹಾಸಕಾರರಿಗೆ ಲಭ್ಯವಾಗಿರಲಿಲ್ಲ.ಹೊನ್ನೇನಹಳ್ಳಿಯಲ್ಲಿ ದೊರೆತ್ತಿರುವ ಈ ಶಾಸನದಲ್ಲಿ ಶಾಲಿವಾಹನ ಶಕ ವಿರೋಧಿ ನಾಮ ಸಂವತ್ಸರ 1452ರ ಕಾರ್ತಿಕ ಶುದ್ದ15 ಎಂದರೆ ಕ್ರಿಸ್ತಶಕ 1529ರ ಅಕ್ಟೋಬರ್ 17 ರಂದು ಶ್ರೀಕೃಷದೇವರಾಯರು ಆಸ್ತಮರಾಗಿರುತ್ತಾರೆ ಎಂದು ನಮೂದಿಸಿದ್ದು,ಈ ಸಂಬಂಧ ತುಮಕೂರು ಸೀಮೆಯ ತಿಮ್ಮಣ್ಣ ನಾಯಕರಿಗೆ ತುಮಕೂರು ವೀರಪ್ರಸನ್ನ ಹನುಮಂತ ದೇವರ ಪೂಜೆಗಾಗಿ ಧಾರೆ ಎರೆದು ಕೊಟ್ಟಿರುವುದಾಗಿದೆ.        15 ಸಾಲುಗಳನ್ನು ಒಳಗೊಂಡಿರುವ ಶಾಸನದಲ್ಲಿ ಪ್ರಮುಖವಾಗಿ ಚರ್ಚಿಸಲಾಗಿರುವ ಅಂಶವೆನೆಂದರೆ, ಶುಭಮಸ್ತು, ಸ್ವಸ್ತಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕವರುಷ 1452ನೇ ವಿರೋಧಿ ಸಂವತ್ಸರದ ಕಾರ್ತೀಕ ಶು 15ಲೂ ಶ್ರೀ ಶ್ರೀ ಶ್ರೀಮಂನ್ಮಹಾರಾಜಾಧಿರಾಜ, ರಾಜಪರಮೇಶ್ವರ ಶ್ರೀವೀರಪ್ರತಾಪ ಶ್ರೀ ವೀರಕೃಷ್ಣ ಮಹಾರಾಯರು ಯೀ ತಥಾ ತಿಥಿಯಲು…

Read More

ತುಮಕೂರು :        ಖಾಸಗಿ ಶಾಲೆಗಳಲ್ಲಿ ಆರ್.ಟಿ.ಇ. ಮೂಲಕ ದಾಖಲಾದ ಮಕ್ಕಳನ್ನು ಬೇಧ-ಭಾವದಿಂದ ಕಾಣುತ್ತಿರುವುದು ಆತಂಕಕಾರಿ ವಿಷಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿಗಾರ್ ಅಭಿಪ್ರಾಯಪಟ್ಟರು. ನಗರದ ಎಂಪ್ರೆಸ್ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಸರ್ಕಾರಿ/ ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳ ಮುಖ್ಯಸ್ಥರು, ಸಮಾಲೋಚಕರು, ಸಾಂತ್ವಾನ ಕೇಂದ್ರಗಳ ಮುಖ್ಯಸ್ಥರು, ಸಮಾಲೋಚಕರುಗಳಿಗೆ ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ಸ್ವಯಂ ಸೇವಾ ಸಂಸ್ಥೆಗಳ ಪಾತ್ರ ಹಾಗೂ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಒದಗಿಸಬೇಕಾದ ಸೌಲಭ್ಯಗಳ ಕುರಿತು ಇತ್ತೀಚೆಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಖಾಸಗಿ ಶಾಲೆಗಳಲ್ಲಿ ಆರ್.ಟಿ.ಇ. ಮುಖಾಂತರ ಮಕ್ಕಳನ್ನು ದಾಖಲು ಮಾಡಿಕೊಳ್ಳುವಲ್ಲಿ ಆಗುತ್ತಿರುವ ತೊಂದರೆ ಹಾಗೂ ಆರ್.ಟಿ.ಇ ಕಾಯ್ದೆಯಡಿ ದಾಖಲಾದ ಮಕ್ಕಳಿಗೆ ಭೇದ-ಭಾವ ಮಾಡುತ್ತಿರುವುದು ನನ್ನ…

Read More

ತುಮಕೂರು :       ದೇಶದಲ್ಲಿ ಪ್ರತಿನಿತ್ಯ ಏರಿಕೆಯಾಗುತ್ತಿರುವ ಪೆಟ್ರೋಲ್-ಡೀಸೆಲ್ ದರ ಏರಿಕೆ ಸಂಬಂಧ ಪ್ರಧಾನ ಮಂತ್ರಿ ಹಾಗೂ ಕೇಂದ್ರದ ವಿತ್ತ ಸಚಿವರು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಸೂಕ್ತ ಸಮಯದಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ವಸತಿ ಸಚಿವ ವಿ. ಸೋಮಣ್ಣ ಇಂದಿಲ್ಲಿ ತಿಳಿಸಿದರು. ದೇಶದ ಪ್ರಧಾನ ಮಂತ್ರಿಗಳು ಹಾಗೂ ಕೇಂದ್ರದ ಆರ್ಥಿಕ ಮಂತ್ರಿಗಳಿಗೆ ದೂರದೃಷ್ಠಿ ಚಿಂತನೆ ಇದೆ. ಹಾಗಾಗಿ ಅವರು ಎಲ್ಲದರ ಬಗ್ಗೆಯೂ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಜನಸಾಮಾನ್ಯರಿಗೆ ತೊಂದರೆಯಾಗದ ರೀತಿಯಲ್ಲಿ ಕ್ರಮ ಕೈಗೊಳ್ಳಲಿದ್ದಾರೆ ಎಂದರು. ನಗರದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.      ಪೆಟ್ರೋಲ್-ಡೀಸೆಲ್ ದರ ಏರಿಕೆಗೆ ರಾಜ್ಯ ಸರ್ಕಾರವಾದರೂ ತನ್ನ ವ್ಯಾಪ್ತಿಯಲ್ಲಿ ಕಡಿಮೆ ಮಾಡಬಹುದಲ್ಲವಾ ಎಂಬ ಪತ್ರಕರ್ತರ ಪ್ರಶ್ನೆಗೆ ಮುಖ್ಯಮಂತ್ರಿಗಳು ಈಗಾಗಲೇ ದರ ಏರಿಕೆ ಬಗ್ಗೆ ಗಮನ ಹರಿಸಿದ್ದು, ಎಲ್ಲ ಸಂಘ ಸಂಸ್ಥೆಗಳನ್ನು ಕರೆದು ಮಾತನಾಡಿದ್ದಾರೆ. ಮುಖ್ಯಮಂತ್ರಿಗಳಿಗೆ…

Read More

ಕೊರಟಗೆರೆ :      ಗ್ರಾಮೀಣ ಪ್ರದೇಶದ ರೈತರ ಬದುಕು ಉತ್ತಮವಾಗಿ ಆರ್ಥಿವಾಗಿ ಅಭಿವೃದ್ದಿ ಹೊಂದಬೇಕಾದರೆ ಸರ್ಕಾರದ ಸವಲತ್ತು ಪಡೆದು ಆದುನಿಕ ತಂತ್ರಜ್ಞಾನ ಅಳವಡಿಸಿಕೊಂಡು ಸಿಲ್ಕ್ ಮತ್ತು ಮಿಲ್ಕ್ ಉತ್ಪದನೆಮಾಡುವ ಮೂಲಕ ಪ್ರಗತಿ ಸಾಧಿಸುವಂತೆ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು.       ಅವರು ಕೊರಟಗೆರೆ ಪಟ್ಟಣದ ಹಿಂದೂ ಸಾದರ ಸಮುದಾಯ ಭವನದಲ್ಲಿ ತಾಲೂಕು ರೇಷ್ಮೆ ಇಲಾಖೆ ಏರ್ಪಡಿಸಿದ್ದ ತಾಲೂಕು ಮಟ್ಟದ ರೇಷ್ಮೆ ಕೃಷಿ ಕಾರ್ಯಾಗಾರ ಹಾಗೂ ವಿಚಾರ ಸಂಕಿರಣ ಮತ್ತು ರೈತರಿಗೆ ಸರ್ಕಾರಿ ಸವಲತ್ತು ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿ ರೈತರು ಹೈನುಗಾರಿಕೆ ಹಾಗೂ ದ್ವಿತಳಿ ರೇಷ್ಮೆ ಕೈಷಿಯನ್ನು ಅವಲಂಬಿಸುವ ಮೂಲಕ ರೈತರು ಆರ್ಥಿಕವಾಗಿ ಅಭಿವೃದ್ದಿ ಹೊಂದಬೇಕು, ನಮ್ಮ ರೈತರು ಬೆಳೆಯುವ ರೇಷ್ಮೆ ಪ್ರಪಂಚದಲ್ಲೆ ಉತ್ತಮ ವಾದ ರೇಷ್ಮೆಯಾಗಿದ್ದು ಬೇಡಿಕೆ ಯೊಂದಿಗೆ ಹೆಚ್ಚು ಬೆಲೆಇದೆ ಎಂದ ಅವರು ನಮ್ಮ ರೈತರು ಚೀನಾ ರೇಷ್ಮೆಗೆ ಕಡಿವಾಣ ಹಾಕಲು ಮಿಶ್ರತಳಿಯ ರೇಷ್ಮೆ ಕೃಷಿಯ ಪದ್ದತಿಯ ಕೃಷಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ದ್ವಿತಳಿಯ…

Read More

ತುಮಕೂರು :       ಸಮಾಜದ ಎಲ್ಲಾ ವರ್ಗದ ಜನರಿಗೆ ಸಕಲ ಮೂಲಭೂತ ಸೌಕರ್ಯಗಳು ಸರಿಯಾದ ಸಮಯಕ್ಕೆ ಲಭ್ಯವಾದರೆ ಅದೇ ರಾಮರಾಜ್ಯವಾಗಿ ನಿರ್ಮಾಣವಾಗುವುದೆಂದು ತುಮಕೂರು ಲೋಕಸಭಾ ಸದಸ್ಯ ಜಿ.ಬಿ.ಬಸವರಾಜು ಅವರು ತಿಳಿಸಿದರು.       ಜಿಲ್ಲೆಯ ಗುಬ್ಬಿ ತಾಲ್ಲೂಕು ಕಡಬ ಹೋಬಳಿಯ ಮಾರಶೆಟ್ಟಿಹಳ್ಳಿ ಗ್ರಾಮ ಪಂಚಾಯ್ತಿಯನ್ನು ಲೋಕಸಭಾ ಕ್ಷೇತ್ರ ಸಂಸದರ ಆದರ್ಶ ಗ್ರಾಮ ಪಂಚಾಯ್ತಿಯ ವಿಡಿಪಿ(ವೀಲೇಜ್ ಡೆವೆಲಪ್ ಮೇಂಟ್ ಪ್ಲಾನ್ ) ತಯಾರಿಕ ಸಭೆಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿಯವರು 2014 ರಲ್ಲಿ ಪ್ರತಿ ಲೋಕಸಭಾ ಸದಸ್ಯರು ಗ್ರಾಮಗಳನ್ನು ಅಥವಾ ಪಂಚಾಯ್ತಿಗಳನ್ನು ದತ್ತು ತೆಗೆದುಕೊಂಡು ಆದರ್ಶ (ಮಾದರಿ) ಗ್ರಾಮಗಳನ್ನಾಗಿ ಮಾಡಿದರೆ ಗ್ರಾಮಿಣ ಭಾಗ ಅನೇಕ ಜ್ವಲಂತ ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳುವ ನಿಟ್ಟಿನಲ್ಲಿ ಈ ಆದರ್ಶ ಗ್ರಾಮ ಅಭಿವೃದ್ಧಿಯ ಯೋಜನೆಯನ್ನು ರೂಪಿಸಿರುವುದು ಶ್ಲಾಘನೀಯ ನನಗೆ 5 ಗ್ರಾಮ ಪಂಚಾಯ್ತಿಗಳನ್ನು ಆದರ್ಶ ಗ್ರಾಮ ಪಂಚಾಯ್ತಿಗಳನ್ನಾಗಿ ಮಾಡಲು ಮಂಜೂರು ಮಾಡಿದ್ದಾರೆ ಎಂದು ತಿಳಿಸಿದರು.       ಎಲ್ಲರಿಗೂ ಉತ್ತಮವಾದ…

Read More